ಮಂಗಳೂರು: ಅಪ್ರಾಪ್ತ ವಯಸ್ಸಿನ ಸೊಸೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 32 ವರ್ಷದ ವ್ಯಕ್ತಿಗೆ 15 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಹಾಗೂ 50,000 ರೂಪಾಯಿ ದಂಡವನ್ನು ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಎಫ್‌ಟಿಎಸ್‌ಸಿ-ಐಐ (ಪೋಕೊ) ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ತೀರ್ಪು ನೀಡಿದ್ದಾರೆ. ಮಾತ್ರ ವ ಲ್ಲದೇ ಸಂತ್ರಸ್ತೆಗೆ 5 ಲಕ್ಷ ರೂಪಾಯಿ ಪರಿಹಾರವನ್ನೂ ನ್ಯಾಯಾಲಯ ಘೋಷಿಸಿದೆ. 2021 ರ ಆ. 9ರಂದು ಈ ಘಟನೆ ನಡೆದಿತ್ತು. ಆ. 15ರಂದು ಆರೋಪಿಯನ್ನು ಬಂಧಿಸಲಾಗಿತ್ತು. ಇನ್‌ಸ್ಪೆಕ್ಟರ್ ದಿನೇಶ್ ಕುಮಾರ್ ತನಿಖಾಧಿಕಾರಿಯಾಗಿದ್ದರು ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌ವೆಂಕಟರಮಣ ಸ್ವಾಮಿ ಮಾಹಿತಿ ನೀಡಿದ್ದಾರೆ. ಕ್ರಿಮಿನಲ್ ಬೆದರಿಕೆಗಾಗಿ ನ್ಯಾಯಾಲಯವು ಆರೋಪಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು ಒಂದು ತಿಂಗಳು ಶಿಕ್ಷೆ ಕೂಡ ವಿಧಿಸಿದೆ.
Author: main-admin
ಉಳ್ಳಾಲ: ಮಂಗಳೂರು ವಿಶ್ವವಿದ್ಯಾನಿಲಯವು ಎನ್ಇಪಿ ಮೊದಲ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು ಡಿಸೆಂಬರ್ 24, 2022 ರಂದು ಯುಯುಸಿಎಂಎಸ್ ಪೋರ್ಟಲ್‌ನಲ್ಲಿ ಪ್ರಕಟಿಸಿದೆ. ಸಮಸ್ಯೆಯಿರುವ ಉಳಿಕೆಯಾದ ಫಲಿತಾಂಶವನ್ನು ಡಿಸೆಂಬರ್ 29 ರಂದು ಪ್ರಕಟಿಸಲಾಗುವುದು. ಮೌಲ್ಯಮಾಪನ ಕಾರ್ಯವು ಹಂತಹಂತವಾಗಿ ಪೂರ್ಣಗೊಳ್ಳುತ್ತಿದ್ದು ಈಗಾಗಲೇ ಸ್ನಾತಕ ಪದವಿಯ ಆರನೇ ಸೆಮಿಸ್ಟರ್ನ ಫಲಿತಾಂಶ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅನುಕೂಲ ಮಾಡಿಕೊಡಲಾಗಿದೆ. ತರಗತಿಗಳ ನಡುವೆಯೇ ಎರಡನೇ ಹಾಗೂ ನಾಲ್ಕನೇ ಸೆಮಿಸ್ಟರ್ನ ಮೌಲ್ಯಮಾಪನ ಕಾರ್ಯ ನಡೆಸಲಾಗುತ್ತಿದ್ದು ಸದರಿ ಸೆಮಿಸ್ಟರ್ಗಳ ಫಲಿತಾಂಶವನ್ನು ಜನವರಿ 20, 2023 ರ ಒಳಗೆ ಪ್ರಕಟಿಸಲಾಗುವುದು, ಎಂದು ಕುಲಸಚಿವರ (ಪರೀಕ್ಷಾಂಗ) ಪ್ರಕಟಣೆ ತಿಳಿಸಿದೆ.
ಕೊಣಾಜೆ:ರಸ್ತೆ ಬದಿ ನಿಂತಿದ್ದ ಶಾಲಾ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇದೀಗ ನಡೆದಿದೆ. ಬೋಳಿಯಾರು ಭಟ್ರಬೈಲು ನಿವಾಸಿ 8ನೇ ತರಗತಿ ವಿದ್ಯಾರ್ಥಿ ಕಾರ್ತಿಕ್ (14) ಮೃತ ಬಾಲಕ. ಕಾರ್ತಿಕ್ ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆಬದಿಯಲ್ಲಿ ನಿಂತಿದ್ದ ವೇಳೆ ಮುಡಿಪು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಸ್ಥಳಕ್ಕೆ ಮಂಗಳೂರು ಸಂಚಾರಿ ಠಾಣೆ ಪೊಲೀಸರು ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳ್ತಂಗಡಿ; ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ಮಕ್ಕಳ ಪ್ರವಾಸದ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಹಲವರು ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಸಿಂದನೂರಿನ ಶಾಲಾ ಮಕ್ಕಳ ಪ್ರವಾಸದ ಬಸ್ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಸರಕಾರಿ ಬಸ್ ಎದುರು ಬದುರಾಗಿ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ಎರಡೂ ಬಸ್ಸಿನ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಾಹನದಲ್ಲಿದ್ದ ಮಕ್ಕಳು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಶೌರ್ಯ ತಂಡದವರ ನೇತೃತ್ವದಲ್ಲಿ ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ
ಹಾಸನ: ಡಿಟಿಡಿಸಿ ಕೊರಿಯರ್ ಶಾಪ್ ನಲ್ಲಿ ಮಿಕ್ಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು, ತಜ್ಞರ ತಂಡ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ಲಾಸ್ಟ್ ಆದ ಸುತ್ತಮುತ್ತಲಿನ ಪೊಲೀಸರು ಅಂಗಡಿ ಬಂದ್ ಮಾಡಿಸಿದ್ದಾರೆ.ಅಲ್ಲಿಗೆ ಯಾರು ಪ್ರವೇಶಿಸದಂತೆ ಬ್ಯಾರಿಕೇಡ್ ಪೊಲೀಸರು ಅಳವಡಿಸಿದ್ದಾರೆ.ಕೊರಿಯರ್ ಶಾಪ್ವೊಂದರಲ್ಲಿ ಮಿಕ್ಸಿ ಬ್ಲಾಸ್ಟ್ ಆಗಿ ಮಾಲೀಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಇಂದು ಸಂಜೆ 7:30ರ ಸಂದರ್ಭದಲ್ಲಿ ಘಟನೆ ನಡೆದಿದೆ. ಕೊರಿಯರ್ನಲ್ಲಿ ಬಂದಿದ್ದ ಮಿಕ್ಸಿಯನ್ನು ತರೆಯುವ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ನಗರದ ಕೆ ಆರ್ ಪುರಂ ಬಡಾವಣೆಯಲ್ಲಿರುವ ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಬ್ಲಾಸ್ಸ್ ಆಗಿದೆ. ಕಚೇರಿ ಮಾಲೀಕ ಶಶಿ ಎಂಬುವರ ಬಲಗೈ ಐದು ಬೆರಳುಗಳು ಸಂಪೂರ್ಣ ತುಂಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸುಳ್ಯ ಕುರುಂಜಿಭಾಗ್ ಸಮೀಪ ಇರುವ ಬಿಸಿಎಂ ಹಾಸ್ಟೆಲ್ ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಳ್ಯ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸೋನಿಯಾ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಬೆಂಗಳೂರು ರಾಮನಾಥ ಪುರದ, ಕೋರಮಂಗಲ ತಾಲೂಕಿನ ಮಾರ್ಲಮಂಗಲ ಗ್ರಾಮದ ಪುರುಷೋತ್ತಮ ಎಂಬವರ ಪುತ್ರಿ. ಸೋನಿಯಾ ಇಂದು ಕಾಲೇಜಿಗೆ ಹೋಗದೇ ಹಾಸ್ಟೇಲ್ ನಲ್ಲಿ ಉಳಿದುಕೊಂಡಿದ್ದಳು. ಮದ್ಯಾಹ್ನ ಆಕೆಯ ರೂಂ ನಲ್ಲಿದ್ದ ಇನ್ನೊಬ್ಬಳು ವಿದ್ಯಾರ್ಥಿನಿ ಊಟದ ತಟ್ಟೆ ತರಲೆಂದು ರೂಂ ಗೆ ಹೋದಾಗ ಬಾಗಿಲು ಹಾಕಿತ್ತು. ಬಾಗಿಲು ತಟ್ಟಿದ್ದರೂ ಬಾಗಿಲು ತೆರೆದಿರಲಿಲ್ಲ, ಆಕೆ ಮಲಗಿರಬಹುದು ಎಂದು ಭಾವಿಸಿ ಗೆಳತಿಯ ತಟ್ಟೆಯಲ್ಲಿ ಊಟ ಮುಗಿಸಿ ಮತ್ತೆ ರೂಮಿಗೆ ಬಂದಾಗಲೂ ಬಾಗಿಲು ತೆರೆಯದೇ ಇದ್ದ ಕಾರಣ ಸಂಶಯಗೊಂಡ ವಿದ್ಯಾರ್ಥಿನಿ ವಾರ್ಡನ್ ಗೆ ಮಾಹಿತಿ ನೀಡಿದ್ದು, ಇಲಾಖೆಯ ಸಿಬ್ಬಂದಿಗಳು ಬಂದು ಬಾಗಿಲು ಒಡೆದು ನೋಡಿದಾಗ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ, ಸ್ಥಳಕ್ಕೆ…
ಸುರತ್ಕಲ್;ಜಲೀಲ್ ಹತ್ಯೆ ಪ್ರಕರಣದ ಹಿನ್ನೆಲೆ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಡಿಸೆಂಬರ್ 29ರವರೆಗೆ ವಿಸ್ತರಿಸಿ ಮಂಗಳೂರು ನಗರ ಪೊಲೀಸರು ಆದೇಶಿಸಿದ್ದಾರೆ. ಸುರತ್ಕಲ್,ಕಾವೂರು,ಬಜಪೆ ಮತ್ತು ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿಸೆಂಬರ್ 27ರ ಬೆಳಗ್ಗೆ 6 ಗಂಟೆಯಿಂದ ಡಿಸೆಂಬರ್ 29ರ ಬೆಳಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ಮುಂದುವರಿಯಲಿದೆ. ಸುರತ್ಕಲ್,ಬಜಪೆ,ಕಾವೂರು ಹಾಗೂ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ,ದಾಸ್ತಾನು,ಸಾಗಾಣಿಕೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಡಿಸೆಂಬರ್ 29ರ ಬೆಳಗ್ಗೆ 10 ಗಂಟೆಯವರೆಗೆ ವಿಸ್ತರಿಸಲಾಗಿದೆ.
ಮಂಗಳೂರು;ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ. ಬಂಧಿತರಲ್ಲಿ ಇಬ್ಬರು ನೇರ ಭಾಗಿಯಾಗಿದ್ದು, ಓರ್ವ ಅವರನ್ನು ಬೈಕ್ ನಲ್ಲಿ ತಂದು ಬಿಟ್ಟಿದ್ದ ಎಂದು ತಿಳಿದು ಬಂದಿದೆ. ಗುರುತು ಪತ್ತೆ ಆಗುವವರೆಗೆ ಆರೋಪಿಗಳ ಮಾಹಿತಿ ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ. ನಿನ್ನೆ ರಾತ್ರಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಕೊಲೆಗೆ ಕಾರಣ ಏನು ಎಂಬುವುದನ್ನು ಪೂರ್ಣ ತನಿಖೆ ಬಳಿಕ ಹೇಳಲಾಗುವುದು ಎಂದು ಕಮಿಷನರ್ ಹೇಳಿದರು. ಮೂವರಲ್ಲಿ ಇಬ್ಬರು ಈ ಹಿಂದೆ ನಡೆದ ಹಲವು ಪ್ರಕರಣಗಳ ಆರೋಪಿಗಳು ಎಂದು ಹೇಳಿದ್ದಾರೆ. ಜಲೀಲ್ ಕೇಸ್ ನಲ್ಲಿ ಮಹಿಳೆಯರೂ ಸೇರಿ 10-12 ಜನರನ್ನು ವಶಕ್ಕೆ ಪಡೆದಿದ್ದೆವು. ಜಲೀಲ್ ಕುಟುಂಬಸ್ಥರು ಸೇರಿ ಕೆಲವರ ವಿಚಾರಣೆ ನಡೆದಿದೆ. ಆದರೆ ಸದ್ಯ ಒಟ್ಟು 3 ಜನರನ್ನು ಮಾತ್ರ ಬಂಧನ ಮಾಡಲಾಗಿದೆ ಎಂದು ಕಮಿಷನರ್ ಹೇಳಿದ್ದಾರೆ.
ಕಾಸರಗೋಡು:ದುಬೈಯಿಂದ ಒಳ ಉಡುಪಿನಲ್ಲಿ ಬಚ್ಚಿಟ್ಟು ಒಂದು ಕೋಟಿ ರೂ.ಮೌಲ್ಯದ ಚಿನ್ನಾಭರಣವನ್ನು ಸಾಗಾಟ ಮಾಡುತ್ತಿದ್ದ ಯುವತಿಯನ್ನು ಕಲ್ಲಿಕೋಟೆ ಕರಿಪ್ಪೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡಿನ ಶಹಲಾ (19) ಬಂಧಿತ ಯುವತಿ.ಈಕೆ 1 ಕೋಟಿ ಮೌಲ್ಯದ ಚಿನ್ನಾಭರಣವನ್ನು ಮೂರು ಪ್ಯಾಕೇಟ್ ಮಾಡಿ ಒಳ ಉಡುಪಿನಲ್ಲಿ ಇಟ್ಟು ಸಾಗಾಟಕ್ಕೆ ಯತ್ನಿಸಿದ್ದರು. ಭಾನುವಾರ ರಾತ್ರಿ ದುಬೈಯಿಂದ ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಬಂದಿದ್ದ ಈಕೆ ಕಸ್ಟಮ್ಸ್ ತಪಾಸಣೆ ಬಳಿಕ ರಾತ್ರಿ 11 ಗಂಟೆಗೆ ವಿಮಾನ ನಿಲ್ದಾಣದಿಂದ ಹೊರ ಬಂದಿದ್ದರು. ಪೊಲೀಸರು ಲಭಿಸಿದ ಖಚಿತ ಮಾಹಿತಿಯಂತೆ ಯುವತಿಯನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನಾಭರಣ ಸಾಗಾಟ ಪತ್ತೆಯಾಗಿದೆ.
ಮಂಗಳೂರು: ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮಹಿಳೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಜಲೀಲ್ ಹತ್ಯೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಈ ನಡುವೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ವಿಚಾರಣೆ ನಡೆಸಿದ್ದಾರೆ. ಆದರೆ ಅವರಿಗೆ ಗಾಂಜಾ ಮಾಫಿಯಾ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆ ಹಿನ್ನೆಲೆ;ಶನಿವಾರ ಸಂಜೆ ಜಲೀಲ್ ಅಂಗಡಿಯಲ್ಲಿದ್ದ. ಆಗಾ ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಜಲೀಲ್ ಜೊತೆ ಕೆಲ ಕಾಲ ಮಾತಿನ ಚಕಮಕಿ ನಡೆಸಿದ ಬಳಿಕ ಏಕಾಏಕಿ ಚೂರಿಯಿಂದ ಇರಿದು ಪರಾರಿಯಾಗಿದ್ದರು. ಈ ಬಗ್ಗೆ ಅಲ್ಲೇ ಇದ್ದ ಪ್ರತ್ಯಕ್ಷದರ್ಶಿಗಳು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಆದರೆ ಆರೋಪಿಗಳು ಯಾರು ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟ ಸುಳಿವು ಪೊಲೀಸರಿಗೆ ಸಿಕ್ಕಿಲ್ಲ.ಅನುಮಾನ ಇದ್ದ ಹಲವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ನಡುವೆ ಸುರತ್ಕಲ್ ಠಾಣೆಗೆ ಇಬ್ಬರು ಮಹಿಳೆಯರನ್ನು ಕರೆಸಿಕೊಂಡ ಪೊಲೀಸರು ಸಾಕಷ್ಟು ವಿಚಾರಣೆ ನಡೆಸಿದ್ದಾರೆ.