ಉಳ್ಳಾಲ: ಕುತ್ತಾರು ದೆಕ್ಕಾಡಿನ ಶ್ರೀ ಕೊರಗಜ್ಜ ದೈವದ ಆದಿ ಸ್ಥಳಗಳ ಆಡಳಿತ ಮಂಡಳಿಯ ಸುಪರ್ದಿಯಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳು ಭಕ್ತರ ಸಮ್ಮುಖದಲ್ಲಿ ನಡೆಯುತ್ತಿದ್ದು ಇದರ ವಿರುದ್ಧ “ಡಿವೋಟಿಸ್ ಆಫ್ ಕುತ್ತಾರು ಕೊರಗಜ್ಜ’ ಎಂಬ ಶಿರೋನಾಮೆಯಲ್ಲಿ ಖಾತೆ ತೆರೆದು ಸಾರ್ವಜನಿಕರಿಂದ ದೇಣಿಗೆಯನ್ನು ಸಂಗ್ರಹಿಸುತ್ತಿರುವ ಸಂಸ್ಥೆಯ ವಿರುದ್ಧ ಸೈಬರ್ ಎಕಾನಾಮಿಕ್ ಎಂಡ್ ನಾರ್ಕೊಟಿಕ್ (ಸೆನ್) ಪೊಲೀಸ್ ಠಾಣೆಗೆ ಕುತ್ತಾರು ಆಡಳಿತ ಮಂಡಳಿ ದೂರು ನೀಡಿದೆ. ಕೊರಗಜ್ಜನ ಆಡಳಿತ ಮಂಡಳಿಯು ಯಾವುದೇ ಉದ್ದೇಶಕ್ಕಾಗಿ ಆನ್‌ಲೈನ್ ಮುಖಾಂತರ ಸಾರ್ವಜನಿಕರಿಂದ ದೇಣಿಗೆಯನ್ನು ಸಂಗ್ರಹಿಸುತ್ತಿಲ್ಲ. ಕೊರಗಜ್ಜ ದೈವದ ಮೇಲೆ ಸಾರ್ವಜನಿಕರಿಗೆ ಇರುವ ಭಕ್ತಿಯನ್ನೇ ಪ್ರಧಾನವಾಗಿರಿಸಿಕೊಂಡು “ಡಿವೋಟಿಸ್ ಆಫ್ ಕುತ್ತಾರು ಕೊರಗಜ್ಜ’ ಎಂಬ ಫೇಸ್‌ಬುಕ್ ಖಾತೆಯಲ್ಲಿ ಸಾರ್ವಜನಿಕರಿಂದ ದೇಣಿಗೆಯನ್ನು ಸಂಗ್ರಹಿಸಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಶ್ರೀ ಕ್ಷೇತ್ರದ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುವುದು ಕೂಡ ಕಾನೂನು ಬಾಹಿರವಾಗಿದ್ದು, ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ. ಸೆನ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Author: main-admin
ಕಾಸರಗೋಡು: ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ. ಉಪ್ಪಳ ಐಲ ಕುದುಪುಳು ವಿನ ಹರಿಣಾಕ್ಷಿ ಸುರೇಶ್ ರವರ ಪುತ್ರಿ ಧನ್ಯಶ್ರೀ ( 19) ಮೃತಪಟ್ಟವರು. ಮಂಗಳೂರು ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು.ಹನ್ನೆರಡು ದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ತಪಾಸಣೆ ನಡೆಸಿದಾಗ ವಿಷ ಸೇವನೆ ಮಾಡಿರುವ ಬಗ್ಗೆ ತಿಳಿದುಬಂದಿತ್ತು . ಗಂಭೀರ ಸ್ಥಿತಿಗೆ ತಲಪಿದ್ದ ಧನ್ಯಶ್ರೀಳನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದ ಹಿನ್ನಲೆಯಲ್ಲಿ ವೈದ್ಯರ ಸಲಹೆಯಂತೆ ಕಾಸರಗೋಡಿಗೆ ಕರೆದುಕೊಂಡು ಬಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪೊಲೀಸರು ಮಹಜರು ನಡೆಸಿ ಮೃತದೇಹ ವನ್ನು ಸಂಬಂಧಿಕರಿಗೆ ಬಿಟ್ಟುಕೊಡಲಾಗಿದೆ.ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ
ಬೆಂಗಳೂರು : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಇದೀಗ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ ಬೆಂಗಳೂರಿನ ಒಂದನೇ ತ್ವರಿತಗತಿ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್ ತಿಂಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಫೆಬ್ರವರಿಯಲ್ಲಿ ಮಗಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದರು. ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ಧ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದರು. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದ ಸಂದರ್ಭದಲ್ಲೇ ಪ್ರಕರಣ ಸದ್ದುಮಾಡಿತ್ತು.
ಮಂಗಳೂರು : ಹಾರ್ಡ್‌ವೇರ್ ಅಂಗಡಿಯಿಂದ ವಸ್ತುಗಳನ್ನು ಪಡೆದು ಹಣ ಪಾವತಿಸದೆ 12.70 ಲಕ್ಷ ರೂ. ವಂಚಿಸಿರುವುದಾಗಿ ಆರೋಪಿಸಿ ಎರಡು ಅಂಗಡಿಗಳ ಮಾಲಕರ ವಿರುದ್ದ ಪೊಲೀಸರಿಗೆ ದೂರು ನೀಡಿರುವ ಘಟನೆ ವರದಿಯಾಗಿದೆ. ಪ್ರಕರಣದಲ್ಲಿ ನಗರದ ಅಝೀಝುದ್ದೀನ್ ರಸ್ತೆಯಲ್ಲಿರುವ ಬಾಲಾಜಿ ಹಾರ್ಡ್‌ವೇರ್‌ನ ಮಾಲಕ ವಿಕ್ರಮ್ ಪಿ. ಮಾಲಿ ಎಂಬವರು, ವಿಠಲ್ ಕುಲಾಲ್ ಕೊಣಾಜೆ ಮತ್ತು ವಿನುತಾ ಬಿ. ಎಂಬವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ವಿಠಲ್ ಕುಲಾಲ್ ಕೊಣಾಜೆ ಮನಿಸ್ಕ್ ಎಂಟರ್ ಪ್ರೈಸಸ್ ಹಾಗೂ ವಿನುತಾ ಬಿ.ವಿ.ಕೆ. ಸೋಫಾ ಮೇಕರ್ಸ್ ನ ಮಾಲಕರಾಗಿದ್ದು, ಕಳೆದ ಸುಮಾರು ವರ್ಷಗಳಿಂದ ವಿಕ್ರಮ್ ಪಿ ಮಾಲಿ ಅವರ ಗ್ರಾಹಕರಾಗಿದ್ದಾರೆ. ಇವರು ಸಾಲದ ರೂಪದಲ್ಲಿ ವಸ್ತುಗಳನ್ನು ಖರೀದಿಸುತ್ತಿದ್ದು, ನಂತರ ಚೆಕ್ ಮುಖಾಂತರ ಹಣ ಪಾವತಿಸುತ್ತಿದ್ದರು. ವಿಕ್ರಮ್ ಅವರು ಆರೋಪಿತರ ಮನಿಸ್ಕ್ ಎಂಟರ್ಪ್ರೈಸಸ್ 2019ರಿಂದ 31-03-2023 ರವರೆಗೆ 40,93,570.43 ರೂ ಹಾಗೂ ಬಿ.ವಿ.ಕೆ. ಸೋಫಾ ಮೇಕರ್ಸ್ ಗೆ 16-04-2018 ರಿಂದ 19-03-2023 ರ ವರೆಗೆ 3,98,058 ರೂ. ಗಳ ವಸ್ತುಗಳನ್ನು ಮಾರಾಟ…
ಉಡುಪಿ: 2023ರ ಜುಲೈ ತಿಂಗಳಲ್ಲಿ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೊ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೊಕ್ಸೋ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಇಂದು ಆದೇಶ ನೀಡಿದೆ. ಬೈಂದೂರು ನಿವಾಸಿ ಮಧುಕರ ಮರಾಠಿ(24) ಶಿಕ್ಷೆಗೆ ಗುರಿಯಾದ ಆರೋಪಿ. ನೊಂದ ಬಾಲಕಿಯು ಆರೋಪಿಯ ಸಂಬಂಧಿಕನಾಗಿದ್ದು, ತನ್ನ ಮನೆಗೆ ಬಂದ ನೊಂದ ಬಾಲಕಿಯನ್ನು ಮಧುಕರ ಮರಾಠಿ ಬೆದರಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ವಿಚಾರ ಬೇರೆಯವರಲ್ಲಿ ಹೇಳಿದರೆ ನಿನ್ನ ಬಗ್ಗೆ ಅಪ್ರಚಾರ ಮಾಡುವುದಾಗಿ ಆತ ಬಾಲಕಿಗೆ ಬೆದರಿಕೆಯೊಡ್ಡಿದ್ದನು. ನಂತರ ಮಧುಕರ, ಯಾರು ಇಲ್ಲದ ಸಮಯ ಆಕೆಯ ಮನೆಗೆ ಹೋಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ವಿಚಾರವನ್ನು ಯಾರಲ್ಲಿಯೂ ಕೂಡ ಹೇಳದಂತೆ ಬೆದರಿಕೆಯೊಡ್ಡಿದ್ದನು ಎಂದು ದೂರಲಾಗಿದೆ. ನಂತರ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಮನೆಯವರು ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಆಕೆ ಗರ್ಭಿಣಿ ಆಗಿದ್ದಾಳೆ ಎನ್ನುವುದು…
ಬೆಂಗಳೂರು: ವಾಹನ ಸವಾರರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಸೆಪ್ಟೆಂಬರ್ ವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸೋದಕ್ಕೆ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದಕ್ಕೆ ಸೆಪ್ಟೆಂಬರ್ ವರೆಗೆ ಗಡುವು ವಿಸ್ತರಣೆಯಾದಂತೆ ಆಗಿದೆ. ಬಿಎನ್ ಡಿ ಎನರ್ಜಿ ಲಿಮಿಟೆಡ್ ಮತ್ತಿತರರು ಹೈಕೋರ್ಟ್ ಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು, ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ ಅವರನ್ನೊಳಗೊಂಡಂತ ನ್ಯಾಯಪೀಠವು ವಿಚಾರಣೆ ನಡೆಸಿತು. ಈ ಅರ್ಜಿಯ ವಿಚಾರಣೆಯ ಬಳಿಕ ಹೈಕೋರ್ಟ್ ನ್ಯಾಯಪೀಠವು, ಮೇ 21ರಂದು ಎಚ್‌ಎಸ್‌ಆರ್‌ಪಿ ಅಳವಡಿಸದಿರುವುದಕ್ಕೆ ಅರ್ಜಿದಾರರ ವಿರುದ್ಧ ಯಾವುದೇ ದುರುದ್ದೇಶಿತ ಕ್ರಮಕೈಗೊಳ್ಳಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಈಗ ರಾಜ್ಯ ಸರ್ಕಾರವು ಆಗಸ್ಟ್-ಸೆಪ್ಟೆಂಬರ್‌ವರೆಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ವಿಸ್ತರಿಸಲಾಗುವುದು ಎಂದು ತಿಳಿಸಿದೆ. ಹೀಗಾಗಿ, ಮೇ 21ರ ಆದೇಶದಲ್ಲಿ…
ಮಂಗಳೂರು: ನಗರದ ಬೋಳಿಯಾರುವಿನಲ್ಲಿ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬುಧವಾರ ಏಳು ಮಂದಿಯನ್ನು ಬಂಧಿಸಿದ್ದಾರೆ. ಇಮ್ರಾನ್, ಕೋಲಿ ಇರ್ಷಾದ್, ತಾಜುದ್ದೀನ್ ಸಿದ್ದೀಕ್, ಸರ್ವನ್, ಮುಬಾರಕ್, ಅಶ್ರರಫ್, ತಲ್ಲತ್ ಬಂಧಿತ ಆರೋಪಿಗಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಆರುಮಂದಿಯನ್ನು ಬಂಧಿಸಿದ್ದಾರೆ. ಈ ಮೂಲಕ ಈವರೆಗೆ ಒಟ್ಟು 13 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಇನ್ನಷ್ಟು ಮಂದಿ ಇದ್ದು ಅವರ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನರೇಂದ್ರ ಮೋದಿಯವರು ಮೂರನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಮಾಡಿರುವ ಹಿನ್ನೆಲೆಯಲ್ಲಿ ರವಿವಾರ ಸಂಜೆ ವಿಜಯೋತ್ಸವ ನಡೆದಿತ್ತು. ಅದರಂತೆ ಅಲ್ಲಿಯೇ ಇದ್ದ ಮಸೀದಿ ಮುಂಭಾಗದಿಂದ ವಿಜಯೋತ್ಸವದ ಮೆರವಣಿಗೆ ಸಾಗಿತ್ತು. ವಿಜಯೋತ್ಸವದ ಬಳಿಕ ಮಸೀದಿಯ ಬಳಿ ಬೈಕ್ ನಲ್ಲಿ ಬಂದ ಮೂವರು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದರು. ಈವೇಳೆ ಮಸೀದಿ ಮುಂಭಾಗದಲ್ಲಿದ್ದ ಯುವಕರು ಅವರನ್ನು ಅಟ್ಟಾಡಿಸಿಕೊಂಡು ಹೋಗಿ ಅಲ್ಲಿಯೇ ಅನತಿ ದೂರವಿರುವ ಬಾರ್ ಮುಂಭಾಗ ದಾಂಧಲೆ…
ಸುರತ್ಕಲ್: ಪೊಲೀಸ್ ಅಧಿಕಾರಿಗಳೆಂದು ಹೇಳಿ ವಿದ್ಯಾರ್ಥಿಗಳ ಹೆತ್ತವರಿಗೆಗೆ ಕರೆ ಮಾಡಿ ಹಣ ಪೀಕಿಸುವ ತಂಡದಿಂದ ಸುರತ್ಕಲ್‌ನಲ್ಲಿ ಹಲವರಿಗೆ ಕರೆ ಬಂದಿದೆ. ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ನಿಮ್ಮ ಮಕ್ಕಳು (ಮಗ) ಸಿಕ್ಕಿ ಹಾಕಿಕೊಂಡಿದ್ದಾರೆ. ಅವರನ್ನು ಬಿಡುಗಡೆ ಮಾಡ ಬೇಕಾದರೆ 5 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಸುರತ್ಕಲ್‌ನ ವಿದ್ಯಾರ್ಥಿಗಳ ಕೆಲವು ಪೋಷಕರಿಗೆ ಈ ಕರೆ ಬಂದಿದ್ದು ಕೂಡಲೇ ಪೋಷಕರು ಕಾಲೇಜಿಗೆ ಕರೆ ಮಾಡಿ ತಮ್ಮ ಮಕ್ಕಳ ಬಗ್ಗೆ ವಿಚಾರಿಸಿದ್ದಾರೆ. ಆ ಸಂದರ್ಭ ವಿದ್ಯಾರ್ಥಿಗಳು ಕಾಲೇಜಿನಲ್ಲೇ ಇದ್ದ ಕಾರಣ. ಇದು ನಕಲಿ ಕರೆ ಎಂದು ಮನದಟ್ಟಾಗಿದೆ. ಈ ರೀತಿ ಸುರತ್ಕಲ್‌ನಲ್ಲಿ ಮೂರು ನಾಲ್ಕು ಜನರಿಗೆ ಕರೆ ಬಂದಿದೆ ಎನ್ನಲಾಗಿದೆ. 923354533015 ನಂಬರ್‌ನಿಂದ ಕರೆ ಬಂದಿದ್ದು ಟ್ರೂ ಕಾಲರ್‌ನಲ್ಲಿ ಚೆಕ್ ಮಾಡುವಾಗ ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯೊಬ್ಬರ ಫೋಟೋ ಇದರಲ್ಲಿ ಇದೆ. ಈ ಬಗ್ಗೆ ಅಧಿಕೃತವಾಗಿ ದೂರು ದಾಖಲಾಗದಿದ್ದರೂ ಸಾರ್ವಜನಿಕರು ಜಾಗೃತರಾಗಬೇಕಾಗಿದೆ. ನಕಲಿ ಅಧಿಕಾರಿಗಳು ಕರೆ ಮಾಡಿ ಬೆದರಿಸಿರುವ ಬಗ್ಗೆ ಕೆಲವರು ದೂರಿದ್ದಾರೆ. ಪ್ರಕರಣ…
ಸುಳ್ಯ: ಮಹಿಳೆಯೋರ್ವರ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಜೂನ್ 11ರಂದು ಬಂಧಿಸಿದ್ದಾರೆ. ಜೋಗಿಯಡ್ಕದ ಜಯರಾಮ ನಾಯ್ಕ ಬಂಧಿತ ಆರೋಪಿ.ಬೆಳ್ಳಾರೆಯ ಪಾಟಾಜೆ ನಿವಾಸಿ ನಳಿನಿ(55) ಮೃತ ಮಹಿಳೆಯಾಗಿದ್ದು, ನಳಿನಿ ಅವರ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ರವಿವಾರ ರಾತ್ರಿ ನಡೆದಿತ್ತು. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಂಟ್ವಾಳ: ಹಾಸನ ಮೂಲದ ವ್ಯಕ್ಯಿಯೋರ್ವನಿಂದ ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಕೊಲೆ ಬೆದರಿಕೆ ಹಾಕಿದ ಘಟನೆ ಜೂನ್ 11 ರಂದು ಕಲ್ಲಡ್ಕದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಾಸನ ಮೂಲದ ಬೇಲೂರು ನಿವಾಸಿ ರಿಕ್ಷಾ ಚಾಲಕ ಪ್ರಮೋದ್ ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕಲ್ಲಡ್ಕ ಸಮೀಪದ ಬೊಂಡಾಲ ಎಂಬಲ್ಲಿನ ಸಂತ್ರಸ್ತ ಮಹಿಳೆ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆಯ ಸ್ವಂತ ಊರು ಹಾಸನ ತಾಲೂಕಿನ ಬೇಲೂರು ಆಗಿದ್ದು, ಕಲ್ಲಡ್ಕದ ಅಮ್ಟೂರು ಎಂಬಲ್ಲಿಗೆ ಮದುವೆ ಮಾಡಿ ಕೊಡಲಾಗಿದೆ. ಮಹಿಳೆಯ ಊರು ಹಾಸನದಲ್ಲಿ ಪ್ರಮೋದ್ ರಿಕ್ಷಾ ಚಾಲಕನಾಗಿದ್ದ. ಒಂದೆರೆಡು ಬಾರಿ ತಾಯಿ ಮನೆಗೆ ಈತನ ರಿಕ್ಷಾದಲ್ಲಿ ಬಾಡಿಗೆ ಮಾಡಿಕೊಂಡು ಹೋಗಿರುವಾಗ ಸಂತ್ರಸ್ತ ಮಹಿಳೆಗೆ ಈತ ಪರಿಚಯಸ್ಥನಾಗಿದ್ದು, ಮೊಬೈಲ್ ನಂ.ನ್ನು ಆತ ಪಡೆದುಕೊಂಡಿದ್ದ ಎನ್ನಲಾಗಿದೆ. ಮೊಬೈಲ್ ಮೂಲಕ ಈತನ ಸಂಪರ್ಕ ಅತಿಯಾಗಿ ಕಳೆದ ಕೆಲ ಸಮಯದ ಹಿಂದೆ ಗಂಡನ ಮನೆ ಕಲ್ಲಡ್ಕಕ್ಕೆ ಬಂದಿದ್ದ. ಮನೆಗೆ ಬಂದ ಈತ…









