ಮಂಗಳೂರು: ಜುಲೈ 22 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ಪ್ರತಿ ದಿನವು ಸಂಚರಿಸಲಿದೆ. ಮಂಗಳೂರಿನಿಂದ ಅಬುಧಾಬಿಗೆ ಸಂಚರಿಸುವ ವಿಮಾನಗಳ ಸಂಖ್ಯೆಯಲ್ಲಿ ಏರಿಕೆ ಮಾಡಲು ಏರ್ ಇಂಡಿಯಾ ಎಕ್ಸ್ಪ್ರೆಸ್ ನಿರ್ಧಾರ ಮಾಡಿದೆ. ಈ ನಿರ್ಧಾರದ ಅನುಸಾರ ಪ್ರಸ್ತುತ ವಾರದಲ್ಲಿ ನಾಲ್ಕು ದಿನಗಳು ಮಾತ್ರ ಮಂಗಳೂರಿನಿಂ ದ ಅಬುಧಾಬಿಗೆ ಸಂಚರಿಸುತ್ತಿದ್ದ ವಿಮಾನಗಳು, ಜುಲೈ 22ರಿಂದ ದಿನನಿತ್ಯವೂ ಸಂಚರಿಸಲಿವೆ. ಪ್ರಸ್ತುತ ಇಂಡಿಗೋ 4 ಮತ್ತು ಏರ್ ಇಂಡಿಯಾ ಎಕ್ಸ್ಪ್ರೆಸ್ 1 ವಿಮಾನ ಸೇರಿ ಒಟ್ಟು 5 ವಿಮಾನಗಳು ಬೆಂಗಳೂರು-ಮಂಗಳೂರು ನಡುವೆ ಸಂಚರಿಸುತ್ತಿದೆ. ಜುಲೈ 8 ರಿಂದ, ಈ ವಲಯದಲ್ಲಿ ದಿನನಿತ್ಯ ಒಟ್ಟು 6 ವಿಮಾನಗಳು ಸಂಚರಿಸಲಿದೆ. ಅಂದಿನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ತನ್ನ ಎರಡನೇ ದೈನಂದಿನ ಸಂಚಾರವನ್ನು ಬೆಂಗಳೂರಿನಿಂದ ಮಂಗಳೂರಿಗೆ ಪುನರಾರಂಭಿಸಲಿದೆ. ಈ ಸಂಖ್ಯೆಯು ಜುಲೈ 22 ರಿಂದ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು 7 ಕ್ಕೆ ಏರಿಕೆಯಾಗಲಿದೆ ಎಂದು ತಿಳಿದುಬಂದಿದೆ. ಸದ್ಯ ಬೆಂಗಳೂರು ಹಾಗೂ ಮಂಗಳೂರು ನಡುವೆ…
Author: main-admin
ಉಡುಪಿ : ಕಾಪು ತಾಲೂಕು ಬಡಾ ಎರ್ಮಾಳು ಗ್ರಾಮದ ನಿವಾಸಿ ವರ್ಷ (24) ಎಂಬ ಮಹಿಳೆಯು ಜೂನ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 0820- 2555452, ಮೊ.ನಂ: 9480805450, ಕಾಪು ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ:9480805431 ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ಕಳೆದ ರವಿವಾರ ರಾತ್ರಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಿಯಾರಿನಲ್ಲಿ ವಿಜಯೋತ್ಸವ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದ ಘಟನೆಗೆ ಪ್ರಚೋದನಾಕಾರಿ ಘೋಷಣೆ ಮುಖ್ಯ ಕಾರಣವಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ. ಮೆರವಣಿಗೆ ಮುಗಿಸಿ ಭಾರತ್ ಮಾತಾ ಕಿ ಜೈ ಘೋಷಣೆ ಮಾಡಿರುವುದು ಹೌದು. ಆದರೆ ಇದರಿಂದ ಪ್ರಚೋದನೆಗೊಂಡಿಲ್ಲ. ಬದಲಾಗಿ ಇದಕ್ಕೂ ಮೊದಲು ಮೆರವಣಿಗೆಯಲ್ಲಿ ಆಟೋ ನಿಲ್ದಾಣದ ಸಮೀಪ ಪಾಕಿಸ್ತಾನಕ್ಕೆ ಸಂಬಂಧ ಕಲ್ಪಿಸಿ ಆಕ್ಷೇಪಾರ್ಹ ಘೋಷಣೆಯನ್ನು ಕೂಗಿದ್ದಾರೆ. ಇದು ಸೋಶಿಯಲ್ ಮೀಡಿಯಾದ ಮೂಲಕ ಸಮುದಾಯದವರಿಗೆ ಗೊತ್ತಾಗಿದೆ. ಇದರಿಂದ ಕೆಲವರು ಪ್ರಚೋದನೆಗೊಂಡು ಕೃತ್ಯ ನಡೆಸಿದ್ದಾರೆ ಎಂದು ಪೊಲೀಸ್ ಆಯುಕ್ತರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಚೂರಿ ಇರಿದ ಪ್ರಕರಣದಲ್ಲಿಒಟ್ಟು 20 ಮಂದಿ ಆರೋಪಿಗಳ ಪೈಕಿ 6 ಮಂದಿಯನ್ನು ಬಂಧಿಸಲಾಗಿದೆ. ಚೂರಿ ಇರಿದವರಲ್ಲಿ ಓರ್ವ ರೌಡಿಶೀಟರ್ ಕೂಡ ಸೇರಿದ್ದಾನೆ. ಪ್ರಚೋದನಾಕಾರಿ ಘೋಷಣೆ ಕೂಗಿದವರ ವಿರುದ್ದವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಶಾಂತಿ ಸುವ್ಯವಸ್ಥೆಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ನಾಳೆಯಿಂದ…
ಮಂಗಳೂರು: ಖಾಸಗಿ ಬ್ಯಾಂಕ್‌ವೊಂದರ ಮ್ಯಾನೇಜರ್ ಇನ್ನೊಬ್ಬನ ಜೊತೆ ಸೇರಿಕೊಂಡು ವ್ಯವಹಾರದಲ್ಲಿ 65 ಲಕ್ಷ ರೂ. ಹೂಡಿಕೆ ಮಾಡಿಸಿ ಬಳಿಕ ವಂಚಿಸಿರುವ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕಂಪಾಡಿ ಕುಕ್ಕಾಡಿ ಕಾಂಪ್ಲೆಕ್ಸ್ ನಲ್ಲಿ ಮಳಿಗೆ ಹೊಂದಿರುವ ಶರೀಫ್ ಮತ್ತು ಸುರತ್ಕಲ್ ಖಾಸಗಿ ಬ್ಯಾಂಕ್ ಶಾಖೆಯ ಮ್ಯಾನೇಜರ್ ರಾಘವೇಂದ್ರ ಶೇಟ್ ಪ್ರಕರಣದ ಆರೋಪಿಗಳು. ತಾನು ತನ್ನ ಪತ್ನಿಯ ಜೊತೆ ಸೇರಿ ಸುರತ್ಕಲ್ ಖಾಸಗಿ ಬ್ಯಾಂಕ್ ಶಾಖೆಯಲ್ಲಿ ಖಾತೆ ತೆರೆದಿದ್ದೆ. ಅದೇ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿದ್ದ ತನ್ನ ಪರಿಚಿತ ರಾಘವೇಂದ್ರ ಶೇಟ್ ಕುಕ್ಕಾಡಿಯ ಕಾಂಪ್ಲೆಕ್ಸ್‌ವೊಂದರ ಮಾಲಕ ಶರೀಫ್‌ನ ಪರಿಚಯ ಮಾಡಿಕೊಟ್ಟಿದ್ದರು. ಹಾಗೇ ಬ್ಯಾಂಕ್‌ನಲ್ಲಿ ಠೇವಣಿ ಇಡುವ ಬದಲು ಶರೀಫ್ ಜತೆ ಕೋಕ್ ಸರಬರಾಜು ವ್ಯವಹಾರದಲ್ಲಿ ಪಾಲುದಾರನಾಗಲು ಸೂಚಿಸಿದ್ದರು. ಅದರಂತೆ ತಾನು ಇನ್ನೊಂದು ಬ್ಯಾಂಕ್ ಖಾತೆಯಿಂದ 2022ರ ಜೂ.6ರಂದು 50 ಲಕ್ಷ ರೂ. ಗಳನ್ನು ಶರೀಫ್ ಖಾತೆಗೆ ವರ್ಗಾಯಿಸಿದ್ದೆ. ಹಣದ ಭದ್ರತೆಗಾಗಿ ಅಬ್ದುಲ್ ಬಶೀರ್ ಎಂಬಾತನ ಹೆಸರಿನಲ್ಲಿರುವ ಸ್ಥಿರಾಸ್ತಿಯನ್ನು ಸಾಲ ವ್ಯವಹಾರಕ್ಕಾಗಿ ಕರಾರು ಮಾಡಿಸಲಾಗಿತ್ತು.…
ಉಳ್ಳಾಲ: ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರಪ್ರದೇಶ ಮೂಲದ ನಾಲ್ವರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸಾವನ್ನಪ್ಪಿದ ಮಹಿಳೆ ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್ ಪ್ರಸನ್ನ ಎಂಬವರ ಪತ್ನಿ ಪರಿಮೀ ರತ್ನ ಕುಮಾರಿ (57) ಎಂದು ಗುರುತಿಸಲಾಗಿದೆ. ಉಳ್ಳಾಲ ಬೀಚ್ ಸಮುದ್ರದಲ್ಲಿ ವಿಹರಿಸುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿ ನಾಲ್ವರು ಮಹಿಳೆಯರನ್ನು ಎಳೆದೊಯ್ದಿತ್ತು. ಸ್ಥಳೀಯರು ತಕ್ಷಣ ನಾಲ್ವರನ್ನು ಸಮುದ್ರದಿಂದ ಹೊರಗೆಳೆದು ರಕ್ಷಿಸಿದ್ದಾರೆ. ಈ ಪೈಕಿ ಪರಿಮೀ ರತ್ನ ಕುಮಾರಿ ಪ್ರಜ್ಞೆ ತಪ್ಪಿದ್ದ ಹಿನ್ನೆಲೆಯಲ್ಲಿ ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿ ಸಾವನ್ನಪ್ಪಿದ್ದಾರೆ. ಹೈದರಾಬಾದ್ ನಿಂದ 5 ಮಂದಿ ಮಹಿಳೆಯರ ತಂಡ ಜೂ.6 ಕ್ಕೆ ಮೈಸೂರಿಗೆ ವಿಮಾನದ ಮೂಲಕ ಬಂದಿಳಿದಿದ್ದರು. ಅಲ್ಲಿ ಪ್ರವಾಸ ಮುಗಿಸಿದ ತಂಡ ಇನೋವಾ ಕಾರಿನ ಮೂಲಕ ಜೂ.7 ಕ್ಕೆ ಕೊಡಗಿಗೆ ತಲುಪಿತ್ತು. ಜೂ.9 ಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಸಂದರ್ಶನ ನಡೆಸಿ, ನಿನ್ನೆಯಷ್ಟೇ ಧರ್ಮಸ್ಥಳ ಸಂದರ್ಶನ ನಡೆಸಿ ಉಳ್ಳಾಲ ಸಮುದ್ರ ತೀರ ವಿಹಾರಕ್ಕೆ ಬಂದಿದ್ದರು.
ಬೆಂಗಳೂರು: ಚಿತ್ರುದರ್ಗದ ರೇಣುಕಾ ಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕಣ ಸಂಬಂಧ ನಟ ದರ್ಶನ್ ಸೇರಿದಂತೆ ಹತ್ತು ಜನರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ಪವಿತ್ರಗೌಡನಿಗೆ ಆಶ್ಲೀಲ ಮೇಸೆಜ್ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿದಂತೆ ಹತ್ತು ಜನರನ್ನು ಬಂಧಿಸಲಾಗಿದೆ.
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1,500 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಸರ್ಕಾರವು ಪೊಲೀಸ್ ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದ್ದು, ಪೊಲೀಸ್ ಇಲಾಖೆಯ ಕೆಎಸ್ಆರ್ಪಿ (KSRP), ʻಆರ್ಪಿಸಿ (RPC) ವಿಭಾಗದಲ್ಲಿ ಖಾಲಿ ಇರುವ 1,500 ಹುದ್ದೆಗಳ ನೇರ ನೇಮಕಾತಿ ನಡೆಯಲಿದೆ. ಕೆಎಸ್ಆರ್ಪಿ, ಆರ್ಪಿಸಿ (ಪುರುಷ, ಮಹಿಳೆ) 1500 ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಹುದ್ದೆಗಳ ಪೈಕಿ ಕ್ರೀಡಾ ಪಟುಗಳಿಗೆ ಶೇ. 2, ಕಲ್ಯಾಣ ಕರ್ನಾಟಕೇತರ ಒಟ್ಟು 30 ಹುದ್ದೆಗಳು ಮೀಸಲಿಡಲಾಗಿದೆ, ಸಿಆರ್ಪಿಸಿ (CRPC) ಕಲ್ಯಾಣ ಕರ್ನಾಟಕ 614 ಹುದ್ದೆಗಳಲ್ಲಿ ಕ್ರೀಡಾಪಟುಗಳಿಗೆ ಶೇ.2 ರಷ್ಟು ಮೀಸಲಾತಿಯಂತೆ 12 ಹುದ್ದೆಗಳು ಮೀಸಲಿಡಲಾಗಿದೆ.
ಮಂಗಳೂರು ಸಮೀಪ ವ್ಯಕ್ತಿಯೋರ್ವ ಆಟೋ ರಿಕ್ಷಾದಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ, ಮಾದಕ ವಸ್ತು ಸೇರಿದಂತೆ ಅಟೋ ರಿಕ್ಷಾವನ್ನು ವಶಪಡಿಸಿಕೊಂಡ ಘಟನೆ ಕೈರಂಗಳದಲ್ಲಿ ಸಂಭವಿಸಿದೆ. ಬಂಧಿತ ಆರೋಪಿಯನ್ನು ಮಂಜನಾಡಿ ಕಲ್ಕಟ್ಟ ನಿವಾಸಿ ನಝೀರ್ (43) ಎಂದು ಗುರುತಿಸಲಾಗಿದೆ. ಕೈರಂಗಳ ನವಗ್ರಾಮ ಸೈಟ್ ಕ್ರಾಸ್ ರಸ್ತೆಯಲ್ಲಿ ಆರೋಪಿಯು ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿ, ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ.
ಪುತ್ತೂರು ಸಮೀಪ ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಲೆಯಾದ ಮಹಿಳೆಯನ್ನು ಬೆಳ್ಳಾರೆ ಗ್ರಾಮದ ನಳಿನಿ ಪಾಟಾಜೆ ಎಂದು ತಿಳಿಯಲಾಗಿದೆ ಮಹಿಳೆಯ ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತಲೆ ಒಡೆದು ರಕ್ತ ಹರಿದುಹೋಗಿದೆ. ಸ್ಥಳದಲ್ಲಿ ಕೆಂಪು ಕಲ್ಲಿದ್ದು, ಅದನ್ನೇ ತಲೆಗೆ ಎತ್ತಿಹಾಕಿ ಕೊಲೆ ಮಾಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ಈ ಘಟನೆ ಸ್ಥಳಕ್ಕೆ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಮತ್ತು ಬೆಳ್ಳಾರೆ ಎಸ್ ಐ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಉಳ್ಳಾಲದ ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕೆಟ್ ನಲ್ಲಿ ನಡೆದಿದೆ. ಸೋಮವಾರ ಮುಂಜಾನೆ 4 ಗಂಟೆ ವೇಳೆಗೆ ನಡದಿರುವ ಬಗ್ಗೆ ವರದಿಯಾಗಿದೆ. ಮಾರುಕಟ್ಟೆ ಮೇಲೆ ಹಾಕಲಾಗಿದ್ದ ಶೀಟು, ಅಂಗಡಿಗಳಲ್ಲಿ ಆಹಾರ ಸಾಮಗ್ರಿ ಶೇಖರಣೆ ಮಾಡಿಕೊಡುವ ಕಪಾಟು, ಟೇಬಲ್ ಫ್ರೂಟ್ಸ್, ನಗದು ಸಹಿತ ಇತರ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.










