Author: main-admin

ಮಂಗಳೂರು: ಮಂಗಳೂರು ನಗರದಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ), ಹಾಸ್ಟೆಲ್, ಹೋಮ್ ಸ್ಟೇ ಇತ್ಯಾದಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಆದೇಶ ಹೊರಡಿಸಿದ್ದಾರೆ. ಹಾಸ್ಟೆಲ್, ಹೋಂ ಸ್ಟೇ, ಪೇಯಿಂಗ್ ಗೆಸ್ಟ್, ಸರ್ವಿಸ್ ಅಪಾರ್ಟ್‌ಮೆಂಟ್, ವಾಣಿಜ್ಯ ಉದ್ದೇಶದ ಗೆಸ್ಟ್ ಹೌಸ್, ಶಿಕ್ಷಣ ಸಂಸ್ಥೆಗಳು ನಡೆಸುತ್ತಿರುವ ವಸತಿ ಗೃಹಗಳ ಮಾಲಕರು/ಪಾಲುದಾರರು, ಆಡಳಿತ ಮಂಡಳಿಯ ಮುಖ್ಯಸ್ಥರು ಸಂಬಂಧಿಸಿದ ಇಲಾಖೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಮಾಲಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಗುರುತಿನ ಚೀಟಿಯನ್ನು ಹಾಗೂ ಸಂಸ್ಥೆಯ ರಿಜಿಸ್ಟರ್ ಪುಸ್ತಕವನ್ನು ಕಡ್ಡಾಯವಾಗಿ ಪ್ರತೀ ವರ್ಷ ಪೊಲೀಸ್ ಆಯುಕ್ತರ ಕಚೇರಿಗೆ ಹಾಜರುಪಡಿಸಬೇಕು. ಅಲ್ಲದೆ ಮಾಲಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಗುರುತಿನ ಚೀಟಿಯನ್ನು ವ್ಯಾಪ್ತಿಯ ಪೊಲೀಸ್ ಠಾಣೆಗೆ ನೀಡಬೇಕು. ವಿದೇಶಿ ವಿದ್ಯಾರ್ಥಿಗಳು ವಾಸ್ತವ್ಯ ಹೂಡಿದ 24 ಗಂಟೆಗಳೊಳಗೆ ಅವರ ಪೂರ್ಣ ಮಾಹಿತಿಯನ್ನು ಪಾಸ್‌ಪೋರ್ಟ್, ವೀಸಾದ ವಿವರ ಸಹಿತವಾಗಿ ನೀಡಬೇಕು. ಅವರು ವಾಸ್ತವ್ಯ ತೆರವುಗೊಳಿಸಿದಾಗಲೂ ಮಾಹಿತಿ ನೀಡಬೇಕು ಎಂದು ಸೂಚಿಸಿದ್ದಾರೆ. ಉತ್ತಮ ಗುಣಮಟ್ಟದ ಸಿಸಿ ಕೆಮರಾಗಳನ್ನು…

Read More

ಹಾಸನ : ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದ ಅಂಗನವಾಡಿ ಕೇಂದ್ರದ ಆವರಣದಲ್ಲಿ ʻಹಾವು ಕಚ್ಚಿ ಬಾಲಕ ʼಸಾವನ್ನಪ್ಪಿದ ದುರಂತ ಘಟನೆ ಬೆಳಕಿಗೆ ಬಂದಿದೆ ದೊಡ್ಡಕಲ್ಲೂರು ಗ್ರಾಮದ ಯಶವಂತ್-ಗೌರಿ ಎಂಬುವವರ ಪುತ್ರ ರೋಷನ್‍ ಎಂಬ ಪುಟ್ಟ ಬಾಲಕನಿಗೆ ಹಾವು ಕಚ್ಚಿದೆ ಎಂದು ಗುರುತಿಸಲಾಗಿದೆ. ಅಂಗನವಾಡಿ ಸಹಾಯಕಿ ಮಕ್ಕಳನ್ನು ಕರೆ ತರಲು ಮನೆಗಳಿಗೆ ಹೋದಾಗ ಈ ಘಟನೆ ನಡೆದಿದೆ. ಕೂಡಲೇ ಕುಟುಂಬಸ್ಥರು ಬಾಲಕನನ್ನು ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೈಕ್‍ನಲ್ಲಿ ಕರೆ ತಂದಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಸಕಲೇಶಪುರ ಪಟ್ಟಣ್ಣದ ಆಸ್ಪತ್ರೆಗೆ ತೆರಳುವಂತೆ ತಿಳಿಸಿದ್ದಾರೆ. ಈ ಬಳಿಕ ಅಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ. ಸರಿಯಾದ ಸಮಯಕ್ಕೆ ಅಂಬುಲೆನ್ಸ್‌ ಬಂದಿಲ್ಲ ಅಷ್ಟರಲ್ಲೇ ಮಗುವಿನ ಪ್ರಾಣ ಪಕ್ಷಿ ಹಾರಿಹೋಗಿತ್ತು ಎಂದು ಮಾಹಿತಿ ಲಭ್ಯವಾಗಿದೆ

Read More

ಮಾದಕ ನಿದ್ರಾಜನಕ ವಸ್ತುವಾದ ಎಂ.ಡಿ.ಎಂ.ಎ. ಸಾಗಾಟ ಮಾಡುತ್ತಿದ್ದ ಪ್ರಕರಣವೊಂದರಲ್ಲಿ ಗುರುವಾರ ಬಂಟ್ವಾಳ ನಗರ ಠಾಣಾ ಪೊಲೀಸರು ಇಬ್ಬರನ್ನು ಬಿ.ಸಿ.ರೋಡ್ ರೈಲ್ವೆ ನಿಲ್ದಾಣದ ಬಳಿ ಗೂಡಿನಬಳಿಗೆ ಹೋಗುವ ರಸ್ತೆಯಲ್ಲಿ ಬಂಧಿಸಿದ್ದಾರೆ. ಬಿಕಸ್ಟಾ ಗ್ರಾಮದ ಬಾರೆಕಾಡು ನಿವಾಸಿ ಇರ್ಷಾದ್ (25) ಮತ್ತು ಕಾಸರಗೋಡು ಮಂಜೇಶ್ವರ ತಾಲೂಕಿನ ದೀಕ್ಷಿತ್ ಯಾನೆ ಅಪ್ಪೂಸ್ (19) ಎಂಬಿಬ್ಬರು ಬಂಧಿತರು. ಬಂಟ್ವಾಳ ನಗರ ಠಾಣಾಧಿಕಾರಿ ಅವಿನಾಶ್ ಅವರು ಸಿಬ್ಬಂದಿ ಜೊತೆ ಗಸ್ತಿನಲ್ಲಿದ್ದ ವೇಳೆ ಸಂಜೆ ಸುಮಾರು ಸಂಜೆ 5 ಗಂಟೆಯ ವೇಳೆಗೆ ಬಿ,ಮೂಡ ಗ್ರಾಮದ ಗೂಡಿನಬಳಿಗೆ ಹೋಗುವ ರಸ್ತೆಯಲ್ಲಿ ವಾಹನಗಳನ್ನು ತಪಾಸಣೆ ಮಾಡಿಕೊಂಡಿರುವಾಗ ನಾರಾಯಣಗುರು ವೃತ್ತದ ಕಡೆಯಿಂದ ಬಂದ ಆರೋಪಿಗಳಿಬ್ಬರು ಪ್ರಯಾಣಿಸುತ್ತಿದ್ದ ಆಟೋರಿಕ್ಷಾವನ್ನು ನಿಲ್ಲಿಸಲು ಸೂಚಿಸಿ ದಾಖಲಾತಿ ಕೇಳಿದಾಗ ಚಾಲಕನ ವರ್ತನೆಯಲ್ಲಿ ಅನುಮಾನ ಕಂಡು ವಿಚಾರಣೆ ನಡೆಸಿದ್ದಾರೆ. ಈ ಸಂದರ್ಭ ಎಂಡಿಎಂಎ ನಿದ್ರಾಜನಕ ಸೊತ್ತನ್ನು ಸೇವಿಸಿರುವುದು ಗಮನಕ್ಕೆ ಬಂದಿದೆ. ಇರ್ಷಾದ್ ಬಳಿಯಿಂದ 4 ಗ್ರಾಮ್ ತೂಕ ಹಾಗೂ ದೀಕ್ಷಿತ್ ಬೆಳೆಯಿಂದ 5 ಗ್ರಾಮ್ ತೂಕದ ನಿದ್ರಾಜನಕ ಸೊತ್ತಾದ ಎಂಡಿಎಂಎ ಮಾತ್ರೆ…

Read More

ಬೆಂಗಳೂರು: ಚೀನಾ ಸೇರಿ ಹಲವು ದೇಶಗಳಲ್ಲಿ ಕೊರೊನಾ ಏರಿಕೆ ಹಿನ್ನೆಲೆ ಕರ್ನಾಟಕಕ್ಕೆ ಕೊರೊನಾ ಭೀತಿ ಶುರುವಾಗಿದೆ. ಈಗಾಗಲೇ ನಗರದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಕೋವಿಡ್ ಮುನ್ನೆಚ್ಚರಿಕೆ ಹಿನ್ನೆಲೆ ನಗರದಲ್ಲಿ ಪೊಲೀಸ್ ಆಯುಕ್ತರು ಸಭೆ ನಡೆಸಿದ್ದು, ಇದೀಗ ಸಭೆ ಮುಕ್ತಾಯವಾಗಿದೆ. ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು, ಇಂದು ಸಂಜೆ ಪೊಲೀಸ್ ಸಿಬ್ಬಂದಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪಬ್, ಕ್ಲಬ್ ಹೋಟೆಲ್, ಮಾಲೀಕರ ಜೊತೆ ಪೊಲೀಸರು ಇಂದು ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಇಂದು ಸಂಜೆಯೊಳಗೆ ಸಭೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬ್ರಿಗೇಡ್ ರೋಡ್, ಎಂಜಿ ರೋಡ್ ನಲ್ಲಿ ಹೊಸ ವರ್ಷ ಆಚರಣೆ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಕೂಡ ಚರ್ಚೆ ನಡೆಸಲಾಯಿತು. ಕೊವಿಡ್ ಮಾರ್ಗಸೂಚಿ ಪಾಲಿಸುವಂತೆ ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆದಿದೆ. . ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮೀಟಿಂಗ್ ನಡೆಯುತ್ತಿದೆ.…

Read More

ಬಂಟ್ವಾಳ: ಒಬ್ಬಂಟಿಯಾಗಿ ಮನೆಯಲ್ಲಿದ್ದ ವೇಳೆ ಮಹಿಳೆಯೊರ್ವಳನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಬಳಿಕ ದರೋಡೆ ಮಾಡಿದ ಘಟನೆ ತಾಲೂಕಿನ ಬರಿಮಾರು ಗ್ರಾಮದ ಕಾಗೆಕಾನದಲ್ಲಿ ಡಿ.22 ರಂದು ಗುರುವಾರ ಸಂಜೆ ಸುಮಾರು 7 ಗಂಟೆ ವೇಳೆಗೆ ನಡೆದಿದೆ. ಬರಿಮಾರು ಗ್ರಾಮದ ಕಡೆಕನ ನಿವಾಸಿ ರೋಹಿತ್ ಎಂಬವರ ಪತ್ನಿ ಪವಿತ್ರ ಎಂಬಾಕೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಮನೆಯಿಂದ ರಾಬರಿ ಮಾಡಲಾಗಿದೆ ಎಂಬ ದೂರು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದಾಖಲಾಗಿದೆ. ಘಟನೆ ವಿವರ:ರೋಹಿತ್ ಕುಮಾರ್ ಅವರು ಐಸ್ ಕ್ರೀಂ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು, ಕೆಲಸಕ್ಕೆ ಹೋಗಿದ್ದರು. ಪತ್ನಿ ಪವಿತ್ರ ಮನೆಯಲ್ಲಿರುತ್ತಿದ್ದರು. ಮಕ್ಕಳಿಬ್ಬರು ಗುರುವಾರ ಮೂಡಬಿದಿರೆಯಲ್ಲಿ ನಡೆಯುವ ಜಾಂಬೂರಿ ಕಾರ್ಯಕ್ರಮಕ್ಕೆ ತೆರಳಿದ್ದರು. ಸಂಜೆ ಸುಮಾರು 6.30 ರ ವೇಳೆ ಪವಿತ್ರ ಅವರು ಮನೆಯ ಬಾತ್ ರೂಮ್ ನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮನೆಯ ಮಾಡಿಗೆ ಕಲ್ಲು ಹೊಡೆದ ಶಬ್ದವಾಯಿತು, ಆ ಬಳಿಕ ಮನೆಯ ಕಿಟಕಿ ಬಾಗಿಲಿನ ಗಾಜಿಗೆ ಕಲ್ಲು ಎಸೆಯಲಾಗಿತ್ತು. ಸ್ನಾನ ಮಾಡಿ ಹೊರಬಂದು…

Read More

ಉಡುಪಿ: ಎಲೆಕ್ಟ್ರಿಕಲ್‌ ಮತ್ತು ಅನಿಲ ಚಾಲಿತ ವಾಹನಗಳು ಇತ್ತೀಚೆಗೆ ಬೆಂಕಿಗಾಹುತಿಯಾಗುತ್ತಿರುವುದು ಸಾಮಾನ್ಯವಾಗಿದೆ. ಆದರೆ, ಕಾರ್ಕಳ ತಾಲೂಕಿನ ಎಣ್ಣೆಹೊಳೆಯಲ್ಲಿ ಪೆಟ್ರೋಲ್‌ ಚಾಲಿತ ಸ್ಕೂಟರ್ ಬೆಂಕಿಗೆ ಆಹುತಿಯಾಗಿದೆ. ರಸ್ತೆಯಲ್ಲಿ ಸಾಗುತ್ತಿದ್ದಾಗಲೇ ಒಮ್ಮೆಗೇ ಆಫ್‌ ಆದ ಸ್ಕೂಟಿಯಲ್ಲಿ ಒಮ್ಮಿಂದೊಮ್ಮೆಗೇ ಬೆಂಕಿ ಕಾಣಿಸಿಕೊಂಡು ಧಗಧಗಿಸಿತು. ಕಾರ್ಕಳ ಮೂಲದ ವ್ಯಕ್ತಿಯೊಬ್ಬರು ಎಣ್ಣೆಹೊಳೆ ಸೇತುವೆ ಬಳಿ ಬರುತ್ತಿದ್ದಾಗ ವಾಹನ ಸಡನ್ ಆಗಿ ಆಫ್ ಆಗಿದೆ. ಏನಾಗಿದೆ ಎಂದು ಇಳಿದು ನೋಡುವಾಗಲೇ ಬೆಂಕಿ ತಗುಲಿ ಅನಾಹುತ ಸಂಭವಿಸಿದೆ. ಕ್ಷಣಾರ್ಧದಲ್ಲಿ ಬೆಂಕಿ ಧಗಧಗಿಸಿತ್ತು ಸ್ಕೂಟಿ ಸುಟ್ಟು ಕರಕಲಾಗಿದೆ. ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ಕೆಲವು ವಿದ್ಯುತ್‌ ಚಾಲಿತ ವಾಹನಗಳು ಬ್ಯಾಟರಿ ಸಮಸ್ಯೆಯಿಂದ ಬೆಂಕಿಗಾಹುತಿ ಆಗುವ ಸಮಸ್ಯೆ ಕಂಡುಬರುತ್ತಿತ್ತು. ಇದೊಂದು ವಿಶೇಷ ಪ್ರಕರಣವಾಗಿದೆ.

Read More

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಅವರು ಗುರುವಾರ ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭ ರಂಗಸ್ಥಳದಲ್ಲೇ ಹೃದಯಾಘಾತದಿಂದ ನಿಧನ ಹೊಂದಿದರು. ಸರಸ್ವತೀ ಸದನದಲ್ಲಿ ಕಟೀಲು ನಾಲ್ಕನೇ ಮೇಳದ ಯಕ್ಷಗಾನ ಬಯಲಾಟ ನಡೆಯುತ್ತಿತ್ತು. ತ್ರಿಜನ್ಮ ಮೋಕ್ಷ ಪ್ರಸಂಗ. ಬಾಯಾರು ಅವರು ಶಿಶುಪಾಲನ ಪಾತ್ರ ನಿರ್ವಹಿಸಿದ್ದರು. ಪ್ರಸಂಗದ ಕೊನೆಯ ಭಾಗ ಪ್ರದರ್ಶನಗೊಳ್ಳುತ್ತಿತ್ತು. ರಂಗಸ್ಥಳದಲ್ಲಿ ನಿಂತಿದ್ದ ಗುರುವಪ್ಪ ಬಾಯಾರು ಅವರು ರಂಗಸ್ಥಳದಿಂದ ಕೆಳಗಡೆ ಬಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ನಿಧನರಾದರೆಂದು ಘೋಷಿಸಲಾಯಿತು. ಅಷ್ಟಮಂಗಲ ಪ್ರಸಂಗವನ್ನೂ ಬರೆದಿದ್ದ ಅವರು ಕಳೆದ ಮಳೆಗಾಲದಲ್ಲಿ ಮಂಗಳೂರು ಪುರಭವನದಲ್ಲಿ ಯಕ್ಷಗಾನವನ್ನು ಆಡಿಸಿದ್ದರು. ನಾನಾ ಮೇಳಗಳಲ್ಲಿ ತಿರುಗಾಟ ನಡೆಸಿದ್ದ ಅವರು 2013ರಲ್ಲಿ ಕಟೀಲು ಮೇಳಕ್ಕೆ ಸೇರಿದ್ದರು. ಮಧುಕೈಟಭ, ಮುಂತಾದ ಕಿರೀಟ ವೇಷಗಳನ್ನು ಮಾಡುತ್ತಿದ್ದ ಅವರಿಗೆ ಅನೇಕ ಕಡೆ ಸಂಮಾನಗಳು ಸಂದಿವೆ.

Read More

ಬೆಳಗಾವಿ: ಬೇರೆ ದೇಶಗಳಲ್ಲಿ ಕೋವಿಡ್‌ ಪ್ರಕರಣ ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಾಣು ಕಂಡುಬಂದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಐಎಲ್‌ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ, ಕೋವಿಡ್‌ ನಿರ್ವಹಣೆ ಕುರಿತು ಸಭೆ ನಡೆದ ಬಳಿಕ ಮಾತನಾಡಿದ ಅವರು, ಚೀನಾ ಸೇರಿದಂತೆ ಬೇರೆ ದೇಶಗಳಲ್ಲಿ ಕೋವಿಡ್‌ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಚರ್ಚಿಸಲಾಗಿದೆ. ಈಗಾಗಲೇ 2-3 ಸಾವಿರ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ಇದರ ಜೊತೆಗೆ, ರಾಜ್ಯದಲ್ಲಿ ಐಎಲ್‌ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಒಳಾಂಗಣ ಸ್ಥಳ, ಎಸಿ ಇರುವ ಕಡೆಗಳಲ್ಲಿ ಮಾಸ್ಕ್‌ ಧರಿಸಬೇಕು ಎಂದು ಸೂಚನೆ ನೀಡಲಾಗುವುದು. ವಿದೇಶದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬರುವ ಪ್ರಯಾಣಿಕರಿಗೆ ಪರೀಕ್ಷೆ ಮಾಡಲು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು.…

Read More

ಪೆರೋಲ್ ಮೇಲೆ ಬಂದು ತಲೆಮರೆಸಿಕೊಂಡಿದ್ದ ಅಸಾಮಿಯನ್ನು ಬೆಂಗಳೂರಿನ ಮಡಿವಾಳ ಪೊಲೀಸರು 15 ವರ್ಷಗಳ ಬಳಿಕ ಇದೀಗ ಬೆಳ್ತಂಗಡಿಯಲ್ಲಿ ಬಂಧಿಸಿದ ಘಟನೆ ನಡೆದಿದೆ. ಸುಹೇಲ್ ಅಲಿಯಾಸ್ ಮೊಹಮ್ಮದ್ ಅಯಾಜ್ ಬಂಧಿತ ಆರೋಪಿಯಾಗಿದ್ದಾನೆ. 2007 ರಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಪೆರೋಲ್ ಮೇಲೆ ತೆರಳಿದ್ದ ಅಸಾಮಿ, 30 ದಿನಗಳ ಪೆರೋಲ್ ಮೇಲೆ ಹೋಗಿದ್ದ ಬಳಿಕ ಬೆಳ್ತಂಗಡಿಯಲ್ಲಿ ತಲೆಮರೆಸಿಕೊಂಡಿದ್ದ ಬೆಳ್ತಂಗಡಿಯಲ್ಲಿ ಮಹಮ್ಮದ್ ಅಯಾಜ್ ಎಂದು ಹೆಸರು ಬದಲಿಸಿಕೊಂಡು ವಾಸಿಸುತ್ತಿದ್ದ ಈತ, ಆಯುರ್ವೇದಿಕ್ ಮೆಡಿಸಿನ್ ಬಿಜಿನೆಸ್ ಮಾಡಿಕೊಂಡಿದ್ದ. ಸುಹೇಲ್ ಕೊಲೆ, ಕಳವು, ಸುಲಿಗೆ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ.  ಇದೀಗ ಆರೋಪಿಯನ್ನು ಮತ್ತೆ ಬಂಧಿಸಿದ  ಮಡಿವಾಳ ಪೊಲೀಸರು ಜೈಲಿಗೆ ಅಟ್ಟಿದ್ದಾರೆ.

Read More

ಮಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಹೊಸವರ್ಷ ಬರಲಿದ್ದು, ಇದೀಗ ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದವರ ಮೇಲೆ ಹಿಂದೂ ಸಂಘಟನೆಗಳ ಕಣ್ಣು ಬಿದ್ದಿದ್ದು, ಹೊಸ ವರ್ಷದ ಪಾರ್ಟಿಗಳನ್ನು ನಿಲ್ಲಿಸಲು ಮಂಗಳೂರು ಪೊಲೀಸರಿಗೆ ಭಜರಂಗದಳ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ. ಹೊಸ ವರ್ಷದ ಹೆಸರಲ್ಲಿ ಪಬ್, ಹೊಟೇಲ್, ಸಾರ್ವಜನಿಕ ಸ್ಥಳಗಳಲ್ಲಿ ಆಯೋಜಿಸುವ ಪಾರ್ಟಿಗಳಲ್ಲಿ ಲವ್‌ ಜಿಹಾದ್‌ ಬಗ್ಗೆ ಭಜರಂಗದಳ ಕಿಡಿಕಾರಿದೆ. ಡ್ರಗ್ಸ್‌ ಮತ್ತು ಸೆಕ್ಸ್ ಮಾಫಿಯಾಗಳಲ್ಲಿ ಕೇರಳದ ಅನ್ಯಕೋಮಿನ ಯುವಕರ ಭಾಗಿಯಾಗುತ್ತಾರೆ ಎಂಬ ಆರೋಪ ಕೇಳಿಬಂದಿದ್ದು, ನ್ಯೂ ಇಯರ್‌ ಪಾರ್ಟಿಗಳಿಗೆ ನಿರ್ಬಂಧ ಹೇರುವಂತೆ ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ. ಹೊಸ ವರ್ಷಾಚರಣೆಗೆ ನೈತಿಕ ಪೊಲೀಸ್‌ಗಿರಿಯ ಕರಿನೆರಳು ಬೀಳುವ ಸುಳಿವಿನ ಬೆನಲ್ಲೇ ಮಂಗಳೂರು ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಸಿಆರ್‌ಪಿಸಿ 107 ಅಸ್ತ್ರ ಪ್ರಯೋಗಿಸಿದ್ದಾರೆ. ಭಜರಂಗದಳ ಸೇರಿ ಹಿಂದೂ ಪರ ಸಂಘಟನೆಗಳ ಪ್ರಮುಖರಿಗೆ ನೋಟಿಸ್ ನೀಡಿದ್ದಾರೆ. ಭಜರಂಗದಳ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಸೇರಿ ಕೆಲ ನಾಯಕರು ಹಾಗೂ ಕಾರ್ಯಕರ್ತರಿಗೆ ಪೊಲೀಸರು ನೋಟಿಸ್ ನೀಡಿದ್ದು, ಸಿಆರ್‌ಪಿಸಿ 107ರ…

Read More