ಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಉಳ್ಳಾಲದ ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕೆಟ್ ನಲ್ಲಿ ನಡೆದಿದೆ. ಸೋಮವಾರ ಮುಂಜಾನೆ 4 ಗಂಟೆ ವೇಳೆಗೆ ನಡದಿರುವ ಬಗ್ಗೆ ವರದಿಯಾಗಿದೆ. ಮಾರುಕಟ್ಟೆ ಮೇಲೆ ಹಾಕಲಾಗಿದ್ದ ಶೀಟು, ಅಂಗಡಿಗಳಲ್ಲಿ ಆಹಾರ ಸಾಮಗ್ರಿ ಶೇಖರಣೆ ಮಾಡಿಕೊಡುವ ಕಪಾಟು, ಟೇಬಲ್ ಫ್ರೂಟ್ಸ್, ನಗದು ಸಹಿತ ಇತರ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
Author: main-admin
ಮಂಗಳೂರು: ಉಳ್ಳಾಲದ ಮುಕ್ಕಚ್ಚೇರಿ ಪರಿಸರದಲ್ಲಿ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಿಗಳನ್ನು ಟಾರ್ಗೆಟ್ ಮಾಡಿ ದರೋಡೆ ಮಾಡಲು ಸಂಚು ರೂಪಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಮುಕ್ಕಚ್ಚೇರಿಯ ಸಮೀರ್ ಅಲಿ ಯಾನೆ ಕಡಪರ ಸಮೀರ್(33), ಬೋಳಿಯಾರ್‌ನ ಮನ್ಸೂರ್ ಯಾನೆ ಬೋಳಿಯಾರು ಮನ್ಸೂರು(30), ಕೋಣಾಜೆ ಮಲಾರ್‌ನ ನೌಷಾದ್(30) ಎಂದು ಗುರುತಿಸಲಾಗಿದೆ. ಈ ಮೂವರು ಬಂಧಿತ ಆರೋಪಿಗಳಿಂದ ತಲವಾರು, ಚೂರಿ, ಮೊಬೈಲ್ ಫೋನುಗಳು ಹಾಗೂ ಜೀಪ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 25.90 ಲಕ್ಷ ರೂ. ಎಂದು ಅಂದಾಜಿಸಲಾಗಿದೆ ಬಂಧಿತ ಆರೋಪಿಗಳು ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ಪ್ರಧಾನಿ ಮೋದಿಯವರ ಪದಗ್ರಹಣದ ಹಿನ್ನಲೆಯಲ್ಲಿ ನಡೆದ ವಿಜಯೋತ್ಸವದ ಬಳಿಕ 20-25 ಮಂದಿಯ ತಂಡವೊಂದು ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ರವಿವಾರ ರಾತ್ರಿ ಚೂರಿ ಇರಿದ ಘಟನೆ ಮಂಗಳೂರು ನಗರದ ಮುಡಿಪು ಸಮೀಪದ ಬೋಳಿಯಾರು ಎಂಬಲ್ಲಿ ನಡೆದಿದೆ. ಇನ್ನೋಳಿ ನಿವಾಸಿಗಳಾದ ಹರೀಶ್ (41) ಹಾಗೂ ನಂದಕುಮಾರ್ (24 ವರ್ಷ) ಚೂರಿ ಇರಿತಕ್ಕೆ ಒಳಗಾದವರು. ಇನ್ನೋಳಿ ನಿವಾಸಿ ಕೃಷ್ಣ ಕುಮಾರ್ ಎಂಬವರು ಹಲ್ಲೆಗೊಳಗಾಗಿದ್ದಾರೆ. ನಿನ್ನೆ ಮೋದಿಯವರು ಪ್ರಧಾನಿಯಾಗಿ ಮೂರನೇ ಬಾರಿ ಪದಗ್ರಹಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬೋಳಿಯಾರುವಿನಲ್ಲಿ ವಿಜಯೋತ್ಸವ ನಡೆದಿತ್ತು. ಈ ವೇಳೆ ಮೂವರು ಬಿಜೆಪಿ ಕಾರ್ಯಕರ್ತರು ಬೊಳಿಯಾರು ಮಸೀದಿಯ ಮುಂಭಾಗ ಘೋಷಣೆಗಳನ್ನು ಕೂಗಿದ್ದರು ಎನ್ನಲಾಗಿದೆ. ವಿಜಯೋತ್ಸವದ ಬಳಿಕ ಕೆಲ ಬೈಕ್‌ಗಳಲ್ಲಿ 20-25 ಅನ್ಯಕೋಮಿನ ಯುವಕರ ತಂಡ ಅವರನ್ನು ಹಿಂಬಾಲಿಸಿದೆ. ಈ ವೇಳೆ ಎರಡೂ ತಂಡಗಳ ನಡುವೆ ವಾಗ್ವಾದ ನಡೆದಿದೆ. ಅಲ್ಲಿ ಅನ್ಯಕೋಮಿನ ಯುವಕರ ತಂಡ ಮೂವರನ್ನು ಥಳಿಸಿ, ಇಬ್ಬರಿಗೆ ಚೂರಿಯಿಂದ ಇರಿದಿದೆ. ಇವರಲ್ಲಿ ಒಬ್ಬರು ಅಪಾಯದಿಂದ ಪಾರಾಗಿದ್ದು, ಮತ್ತೊಬ್ಬರು ಕೆ.ಎಸ್.ಹೆಗಡೆ ಆಸ್ಪತ್ರೆಯಲ್ಲಿ…
ರಾಷ್ಟ್ರಪತಿ ಭವನದಲ್ಲಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನವನ್ನು ಸ್ವೀಕಾರ ಮಾಡಿದರು ರಾಷ್ಟ್ರಪತಿ ದೌಪ್ರದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರತಿಜ್ಞಾ ವಿಧಿ ಬೋಧಿದರು. ಇಂದಿನಿಂದ ದೇಶದಲ್ಲಿ ಶುರುವಾಯ್ತು ನವೋದಯ.. ತ್ರಿವಿಕ್ರಮನಂತೆ ಮೂರನೇ ಬಾರಿಗೆ ಚುಕ್ಕಾಣಿ ಹಿಡಿದ ನರೇಂದ್ರ ಮೋದಿ . ಇನ್ನು ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಕ್ಯಾಬಿನೆಟ್ ಮಂತ್ರಿಯಾಗಿ ರಾಜನಾಥ್ ಸಿಂಗ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಈಶ್ವರನ ಹೆಸರಿನಲ್ಲಿ ರಾಜನಾಥ್ ಸಿಂಗ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಬಂಟ್ವಾಳ: ರಸ್ತೆ ದಾಟುತ್ತಿದ್ದ ವೃದ್ದರೋರ್ವರಿಗೆ ಬಸ್ ಢಿಕ್ಕಿಯಾಗಿ ಮೃತಪಟ್ಟ ಘಟನೆ ಭಾನುವಾರ(ಜೂನ್. 9 ರಂದು) ಬೆಳಿಗ್ಗೆ ತುಂಬೆಯಲ್ಲಿ ನಡೆದಿದೆ. ತುಂಬೆ ಸಮೀಪದ ಮುದಲ್ಮೆಪಡ್ಪು ನಿವಾಸಿ ಸೇಸಪ್ಪ ಪೂಜಾರಿ (89) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮನೆಗೆ ಸಾಮಾಗ್ರಿಗಳನ್ನು ತರುವ ಉದ್ದೇಶದಿಂದ ತುಂಬೆ ಪೇಟೆಗೆ ಹೋಗುತ್ತಿದ್ದ ಸೇಸಪ್ಪ ಅವರು ವೈಶಾಲಿ ಹೋಟೆಲ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಸರಕಾರಿ ಬಸ್ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ತಲೆ ಹಾಗೂ ಮುಖಕ್ಕೆ ಗಂಭೀರವಾಗಿ ಗಾಯವಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅದಾಗಲೇ ಅವರು ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಹಾಗೂ ಸಿಬ್ಬಂದಿಗಳು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನವದೆಹಲಿ: ಬಿಜೆಪಿ ನಾಯಕ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಭವ್ಯ ಕಾರ್ಯಕ್ರಮದಲ್ಲಿ ನೆರೆಯ ದೇಶಗಳ ನಾಯಕರು ಮತ್ತು ಗಣ್ಯರು ಸೇರಿದಂತೆ 9,000 ಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಈ ನಡುವೆ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಎನ್ ಡಿಎ ನಾಯಕರಿಗೆ ತಮ್ಮ ನಿವಾಸದಲ್ಲಿ ಚಹಾ ಕೂಟ ಏರ್ಪಡಿಸಿದ್ದಾರೆ. ಈ ಚಹಾಕೂಟದಲಿ ಅಮಿತ್ ಶಾ, ರಾಜನಾಥ್ ಸಿಂಗ್, ನಿತೀಶ್ ಕುಮಾರ್, ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ. ಎನ್ಡಿಎ ಮಿತ್ರಪಕ್ಷಗಳ ಬೆಂಬಲದೊಂದಿಗೆ ರಚನೆಯಾಗಲಿರುವ ಮೋದಿ ಕ್ಯಾಬಿನೆಟ್ 3.0 ರಲ್ಲಿ, ತೆಲುಗು ದೇಶಂ ಪಕ್ಷದ ನಾಯಕರಿಗೆ ಎರಡು ಸ್ಥಾನಗಳು, ಎನ್ಸಿಪಿ (ಅಜಿತ್ ಪವಾರ್) ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ತಲಾ ಒಂದು ಸ್ಥಾನ ಸಿಗಲಿದೆ. ಇದಲ್ಲದೆ, ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಅವರ ಹೆಸರುಗಳು ಕ್ಯಾಬಿನೆಟ್ನಲ್ಲಿ ಸಚಿವ ಸ್ಥಾನಕ್ಕೆ ದೃಢಪಟ್ಟಿವೆ. ಅವರು ತಮ್ಮ ಖಾತೆಗಳನ್ನು ಉಳಿಸಿಕೊಳ್ಳುವ…
ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಶನಿವಾರ ನಡೆದಿದೆ.ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತೆ.ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು ಮಕ್ಕಳೊಂದಿಗೆ ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ರಾಮ್ ಶರಣ್ ಅವರ ಎರಡನೇ ಮಗಳಾದ ರಬೀನ ನೇಪಾಳದಲ್ಲಿ ಎಂಟನೇ ತರಗತಿ ಓದುತ್ತಿದ್ದು, ಆಕೆಯನ್ನು ಮಂಗಳೂರಿನಲ್ಲೆ ಓದಿಸುವ ಸಲುವಾಗಿ ತಿಂಗಳ ಹಿಂದೆ ಪೋಷಕರು ತೊಕ್ಕೊಟ್ಟಿಗೆ ಕರೆ ತಂದಿದ್ದರು. ಆದರೆ ರಬೀನ ತಾನು ನೇಪಾಳದಲ್ಲೇ ಓದು ಮುಂದುವರಿಸುವುದಾಗಿ ಹಠ ಹಿಡಿದಿದ್ದು ಈ ಬಗ್ಗೆ ಪೋಷಕರಲ್ಲಿ ಗಲಾಟೆ ನಡೆಸುತ್ತಿದ್ದರೆಂದು ತಿಳಿದುಬಂದಿದೆ.ಶನಿವಾರ ಮದ್ಯಾಹ್ನ ರಬೀನಳ ತಾಯಿ ರಮೀಲ ಅವರು ಚಿಕ್ಕ ಮಕ್ಕಳನ್ನ ಶಾಲೆಯಿಂದ ಮನೆಗೆ ಕರಕೊಂಡು ಬರುವ ವೇಳೆ ರಬೀನ ಮನೆಯ ಶೌಚಾಲಯದ ಕಬ್ಬಿಣದ ಸಲಾಕೆಗೆ ಚೂಡಿದಾರದ ಶಾಲಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.…
ಮಂಗಳೂರು: ಕೆನಡಾದ ವೀಸಾ ಕೊಡಿಸುವುದಾಗಿ ನಂಬಿಸಿ 15 ಲಕ್ಷ ರೂ. ವಂಚಿಸಿರುವ ಬಗ್ಗೆ ಕಾವೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಕುವೈತ್ ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿರುವ ಡೊಮಿನಿಕ್ ಕಿಶೋರ್ ಡಿ’ಸೋಜಾ ಅವರಿಗೆ ಕೆನಡಾದ ವಿಸಾ ಕೊಡಿಸುವುದಾಗಿ ಅವರ ಸ್ನೇಹಿತ ರೋಶನ್ ನವೀನ್ ಕ್ರಾಸ್ಟೋ ಗೆ ಅವರಿಗೆ ಪರಿಚಯವಿರುವ ಜೇಮ್ಸ್ ಡಿ’ಸೋಜ ಹೇಳಿದ್ದರು. ಅದರಂತೆ ಡೊಮಿನಿಕ್ ಅವರಿಗೆ ಜೇಮ್ಸ್ ಡಿಸೋಜನನ್ನು ಪರಿಚಯಿಸಲಾಗಿತ್ತು. 30 ಲಕ್ಷ ರೂ. ಹಣ ನೀಡಿದರೆ ಡೊಮಿನಿಕ್ ಹಾಗೂ ಅವರ ಹೆಂಡತಿಗೆ ವೀಸಾ ಮಾಡಿಕೊಡುವುದಾಗಿ ಜೇಮ್ಸ್ ತಿಳಿಸಿದ್ದನು. ಅದರಲ್ಲಿ 15 ಲಕ್ಷ ರೂ. ಹಣವನ್ನು ವೀಸಾ ಮಾಡುವ ಮೊದಲು ಹಾಗೂ ಉಳಿದ 15 ಲಕ್ಷ ರೂ. ಹಣವನ್ನು ಕೆನಡಾ ದೇಶಕ್ಕೆ ಹೊದ ಬಳಿಕ ನೀಡಬೇಕೆಂದು ತಿಳಿಸಿದ್ದನು. ಅದರಂತೆ ಸುಮಾರು 9 ಕಂತುಗಳಲ್ಲಿ 15 ಲಕ್ಷ ರೂ. ಪಾವತಿಸಲಾಗಿತ್ತು. ಅದರಲ್ಲಿ 5 ಲಕ್ಷ ರೂ. ಹಣವನ್ನು ಅವರ ಸಂಬಂಧಿ ಅರುಣ್ ಡೆರಿಕ್ ಮೊಂತೇರೊರವರ ಬ್ಯಾಂಕ್ ಖಾತೆ ಮೂಲಕ ಜೇಮ್ಸ್ ತಿಳಿಸಿದ ಖಾತೆಗೆ…
ಮಂಗಳೂರು: ಪಾಕಿಸ್ಥಾನದೊಂದಿಗೆ ಹೊರ ದೇಶ ಗಳಲ್ಲೂ ಭಾರತ ಕ್ರಿಕೆಟ್ ಪಂದ್ಯವಾಡುವುದು ಸರಿಯಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ. ಜೂ. 9ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಪಂದ್ಯಾವಳಿಯ ಭಾರತ-ಪಾಕ್ ಕಾದಾಟದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಪಾಕಿಸ್ಥಾನದವರು ಕ್ರಿಕೆಟ್ ಆಟವಾ ಡಲು ಬಂದ ವೇಳೆ ನಮ್ಮಲ್ಲಿ ಪಿಚ್ ಅಗೆದಿದ್ದಾರೆ. ಎಲ್ಲಿಯವರೆಗೆ ಅವರು ನಮಗೆ ತೊಂದರೆ ಕೊಡುತ್ತಾರೋ ಅಲ್ಲಿಯವರೆಗೆ ಅವರೊಂದಿಗೆ ಆಟವಾಡಬಾರದು ಎಂದರು. ಎರಡೂ ದೇಶಗಳ ನಡುವೆ ಸಂಚಾರ ಮಾಡುವುದನ್ನೂ ನಿಲ್ಲಿಸಲಾಗಿದೆ. ಅಲ್ಲದೆ ಅವರು ನಮ್ಮಲ್ಲಿಗೆ ಬಂದು ಆಡುವುದನ್ನೂ ನಿಲ್ಲಿಸಲಾಗಿದೆ. ಇಷ್ಟಾದ ಮೇಲೆ ಪಾಕಿಸ್ಥಾನದ ಆಟಗಾರರನ್ನು ದುಬಾೖ, ನ್ಯೂಯಾರ್ಕ್‌ಗೆ ಕರೆದೊಯ್ದು ಅಲ್ಲಿ ಅವ ರೊಂದಿಗೆ ಭಾರತದ ಆಟಗಾರರು ಆಡುವುದು ಯಾಕೆ? ಅವರೊಂದಿಗೆ ಆಡದಿದ್ದರೆ ಏನಾಗುತ್ತದೆ ಎಂದು ಪ್ರಶ್ನಿಸಿದರು. ನಾನೂ ಕ್ರಿಕೆಟ್ ಅಭಿಮಾನಿ, ಆಟಗಾರನೂ ಹೌದು. ಏನೇ ನಾಳೆ ನಡೆಯುವ ಪಾಕ್ ಜತೆಗಿನ ಪಂದ್ಯದಲ್ಲಿ ಭಾರತದ ತಂಡ ಗೆಲುವು ಸಾಧಿಸುವುದು ಮಾತ್ರವಲ್ಲ, ಇಡೀ ದೇಶಕ್ಕೆ ಗೌರವದ ಗೆಲುವನ್ನು ತರಬೇಕು ಎಂದು ಹಾರೈಸುವುದಾಗಿಯೂ ತಿಳಿಸಿದರು.
ಮಂಗಳೂರು: ಖಾಸಗಿ ಬಸ್ ನಲ್ಲಿ ಯುವಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಕಾಮುಕನನ್ನು ಹಿಡಿದ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ಬಲ್ಲಾಳ್ ಬಾಗ್ ಎಂಬಲ್ಲಿ ನಡೆದಿದೆ. ಯುವತಿ ನಾಗನೂರಿನಿಂದ ಬಸ್ ಹತ್ತಿ ಸ್ಟೇಟ್ ಬ್ಯಾಂಕ್ ಬಳಿ ಇಳಿದು ಬಳಿಕ ಮರೋಳಿ ಎಂಬ ಹೆಸರಿನ ಬಸ್ ನಲ್ಲಿ ಬಜಪೆ ಕಡೆ ತೆರಳುತ್ತಿದ್ದಳು. ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಯುವಕ, ಯುವತಿ ಕುಳಿತಿದ್ದ ಹಿಂಬದಿಯ ಸೀಟಿನಲ್ಲಿ ಕುಳಿತುಕೊಂಡಿದ್ದ. ಅಲ್ಲದೇ ಯುವತಿಯ ಸೊಂಟಕ್ಕೆ ಕೈ ಹಾಕಿ ಕಿರುಕುಳ ನೀಡುತ್ತಿದ್ದ. ಯುವತಿ ಈ ವಿಷಯವನ್ನು ತನ್ನ ಸಂಬಂಧಿಕರಿಗೆ ತಿಳಿಸಿದ್ದಾಳೆ. ತಕ್ಷಣ ಬಲ್ಲಾಳ್ ಬಾಗ್ ಎಂಬಲ್ಲಿ ಬಸ್ ತಡೆದ ಸಾರ್ವಜನಿಕರು ಹಾಗೂ ಯುವತಿ ಸಂಬಂಧಿಕರು ಯುವಕನನ್ನು ಬಸ್ ನಿಂದ ಕೆಳಗಿಳಿಸಿದ್ದಾರೆ. ಬಳಿಕ ಧರ್ಮದೇಟು ನೀಡಿದ್ದಾರೆ. ಪಾಂಡವೇಶ್ವರ ಠಾಣೆ ಪೊಲೀಸರಿಗೆ ಯುವಕನನ್ನು ಒಪ್ಪಿಸಿದ್ದಾರೆ.










