ಮಂಗಳೂರು: ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳ (ಇ-ಆಟೋ) ಪ್ರದೇಶ ನಿರ್ಬಂಧಗಳಿಲ್ಲದೆ ಸಂಚರಿಸಲು ಅನುಮತಿ ನೀಡಿ ಜುಲೈ 26ರಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಆಟೋ-ರಿಕ್ಷಾ ಮಾಲೀಕರು ಮತ್ತು ಚಾಲಕರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ಮಾರ್ಗಸೂಚಿಗಳು ಮತ್ತು ಹೈಕೋರ್ಟ್ ನ ನಿರ್ದೇಶನದ ಮೇರೆಗೆ ಈ ಆದೇಶವನ್ನು ಕಾನೂನು ಚೌಕಟ್ಟಿನಲ್ಲಿ ಹೊರಡಿಸಲಾಗಿದೆ. ಸಂಬಂಧಪಟ್ಟವರು ಮೇಲ್ಮನವಿಯ ಮೂಲಕ ಹೆಚ್ಚಿನ ಸ್ಪಷ್ಟೀಕರಣವನ್ನು ಪಡೆಯಬಹುದು’ ಎಂದಿದ್ದಾರೆ. ‘ಯಾವುದೇ ನಗರ (ವಲಯ-1) ಅಥವಾ ಗ್ರಾಮಾಂತರ (ವಲಯ-2) ನಿರ್ಬಂಧಗಳಿಲ್ಲದೆ ಇ-ಆಟೋಗಳು ಕಾರ್ಯನಿರ್ವಹಿಸಲು ಕೇಂದ್ರ ಸರ್ಕಾರವು ಉಚಿತ ಪರವಾನಗಿಗಳನ್ನು ನೀಡಿದೆ. ಇದನ್ನು ಮಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಜಾರಿಗೆ ತರಲಾಗುತ್ತಿದೆ. ಆದರೆ, ತಮಿಳುನಾಡಿನಲ್ಲಿ ನಿರ್ಬಂಧ ಹೇರಲಾಗಿದೆ. ಇಲ್ಲಿ ಅಂತಹ ನಿರ್ಬಂಧಗಳು ಜಾರಿಯಾಗಬೇಕಾದರೆ ರಾಜ್ಯ ಮಟ್ಟದಲ್ಲಿ ಜಾರಿಯಾಗಬೇಕು. ಚಿಕ್ಕಮಗಳೂರಿನ ಆಟೋ ರಿಕ್ಷಾ ಚಾಲಕರು ಈಗಾಗಲೇ ತಮಿಳುನಾಡಿನಲ್ಲಿರುವಂತಹ ನಿರ್ಬಂಧಗಳು ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ’ ಎಂದು ಹೇಳಿದರು.
Author: main-admin
ಮಂಗಳೂರು ನಗರದ ಯೆಯ್ಯಾಡಿ ಏರ್ಪೋರ್ಟ್ ರೋಡಲ್ಲಿ ತಡ ರಾತ್ರಿ ಬೈಕೊಂದು ಸ್ಕಿಡ್ ಆಗಿ ಇಬ್ಬರು ಸವಾರರೂ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಗುರುವಾರ ತಡರಾತ್ರಿ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಈ ಅವಘಡ ಸಂಭವಿಸಿದ್ದು ಕೋಡಿಕಲ್ ನಿವಾಸಿ ಕಾಶೀನಾಥ್(17) ಮತ್ತು ಉಪ್ಪಿನಂಗಡಿಯ ಚೇತನ್(24) ಮೃತ ದುರ್ದೈವಿಗಳಾಗಿದ್ದಾರೆ.ಇವರಿಬ್ಬರಿದ್ದ ಬೈಕ್ ಲಾರಿಯೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಉರುಳಿಬಿದ್ದಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ.
ಉಳ್ಳಾಲ : ಇಬ್ಬರು ಸಿಟಿ ಬಸ್ ಕಂಡೆಕಟ್ಟರ್ ಗಳು ಸಾರ್ವಜನಿಕರ ಎದುರೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ತಲಪಾಡಿ – ಮಂಗಳೂರು ನಡುವೆ ಸಂಚರಿಸುವ ಪದ್ಮ ಟ್ರಾವೆಲ್ಸ್ ಬಸ್ ಮತ್ತು ಹೊಸಂಗಡಿ ಜಂಕ್ಷನ್ ನಿಂದ ಮಂಗಳೂರು ನಡುವೆ ಸಂಚರಿಸುವ ಅಸರ್ ಟ್ರಾವೆಲ್ಸ್ ಬಸ್ ನಿರ್ವಾಹಕರ ನಡುವೆ ಜಗಳ ನಡೆದಿದ್ದು, ಇದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಸ್ ನಿರ್ವಾಹಕರಾದ ಅಜಯ್ ಮತ್ತು ವಿಷ್ಣು ಎಂಬವರು ಪರಸ್ಪರ ಹೊಡೆದಾಡಿಕೊಂಡಿದ್ದು,ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಸಂಜೆ ವೇಳೆ ತೊಕ್ಕೊಟ್ಟು ಸಮೀಪ ಈ ಘಟನೆ ನಡೆದಿದೆ. ತಲಪಾಡಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ಸನ್ನು ಬೆನ್ನಟ್ಟಿದ ಇನ್ನೊಂದು ಬಸ್ಸು ಚಾಲಕ ಓವರ್ ಬ್ರಿಡ್ಜ್ ಬಸ್ಸು ನಿಲ್ದಾಣದಲ್ಲಿ ಅಡ್ಡಲಾಗಿ ಇಟ್ಟಿದ್ದ. ಈ ವೇಳೆ ಎರಡು ಬಸ್ಸು ನಿರ್ವಾಹಕರ ನಡುವೆ ಮಾತಿನ ಚಕಮಕಿ ನಡೆದು ಹೊಯ್ ಕೈಯಾಗಿ ಬೀದಿ ಕಾಳಗ ಆಗಿದೆ ಎಂದು ತಿಳಿದುಬಂದಿದೆ. ಈ ವೇಳೆ ಓವರ್ ಬ್ರಿಡ್ಜ್ ಆಟೋ ರಿಕ್ಷಾ…
ಉಡುಪಿ : ಕರ್ನಾಟಕ ಸರ್ಕಾರದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ವೀಕ್ಷಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಒಬ್ಬ ಖಾಸಗಿ ಲಾಡ್ಜ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಕುಂದಾಪುರದ ಜೆಕೆ ಟವರ್ಸ್ ಎಂಬಲ್ಲಿ ನಡೆದಿದೆ. ಸಾವನ್ನಪ್ಪಿದ ವ್ಯಕ್ತಿಯನ್ನು ಕುಂದಾಪುರ ತಾಲೂಕಿನ ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಿವಮೊಗ್ಗ ಮೂಲದ ಪ್ರಶಾಂತ್ (37) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಮೂಲದ ಪ್ರಶಾಂತ್ ವಿವಾಹಿತನಾಗಿದ್ದು, ಒಂದು ಪುಟ್ಟ ಮಗುವಿದೆ. ಈತನಿಗೆ ಕುಡಿತದ ಚಟವಿತ್ತು ಎನ್ನಲಾಗಿದೆ. 2010ರಲ್ಲಿ ಆರೋಗ್ಯ ಇಲಾಖೆಗೆ ಸೇರಿದ್ದ ಪ್ರಶಾಂತ್ ಕಾರ್ಕಳದಲ್ಲಿ ಸೇವೆಗೆ ಸೇರಿದ್ದರು. ಬಳಿಕ ಕುಂದಾಪುರ ತಾಲೂಕಿನ ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಆರೋಗ್ಯ ಶಿಕ್ಷಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ. ಬಳಿಕ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಯಾಗಿದ್ದ ಎಂದು ತಿಳಿದುಬಂದಿದೆ. ಮಾನಸಿಕವಾಗಿ ನೊಂದಿದ್ದು ತನ್ನ ಸ್ನೇಹಿತರ ಜೊತೆಗೆ ಜೀವನದಲ್ಲಿ ಜಿಗುಪ್ಸೆ ಉಂಟಾಗಿದೆ ಎಂದು ಆಗಾಗ ಹೇಳಿಕೊಳ್ಳುತ್ತಿದ್ದ ಎನ್ನಲಾಗಿದೆ. ಸ್ನೇಹಿತರು ಆತನಿಗೆ ಬುದ್ಧಿ ಹೇಳಿ ಸಮಾಧಾನಿಸುತ್ತಿದ್ದರು. ಆದರೆ…
ಮಣಿಪಾಲ : ಜಲ್ಲಿಕಲ್ಲು ಸಾಗಾಟಕ್ಕೆ ಸಂಬಂಧಿಸಿ ನಕಲಿ ಪರವಾನಿಗೆ ಸೃಷ್ಟಿಸಿದ ಕ್ರಷರ್ ಮಾಲಕಿಯ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಜುಲೈ 6ರಂದು ವಾಹನವೊಂದರಲ್ಲಿ ಜಿಪಿಎಸ್ ಷರತ್ತು ಉಲ್ಲಂಘನೆ ಮಾಡಿ ಜಲ್ಲಿಕಲ್ಲು ಸಾಗಾಟ ಮಾಡುತ್ತಿದ್ದು ಈ ಬಗ್ಗೆ ವಾಹನ ಮಾಲಕ ಸುಂದರ ಎಂಬವರಲ್ಲಿ ಉಡುಪಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ಹಾಜಿರಾ ಸಜನಿ ವಿಚಾರಿಸಿದಾಗ ಉಪ ಖನಿಜ ಸಾಗಾಣಿಕೆಯ ಪರವಾನಿಗೆಯನ್ನು ಪಡೆದು ಸಾಗಾಟ ಮಾಡುತ್ತಿರುವುದಾಗಿ ತಿಳಿಸಿದ್ದರು. ಅದರಂತೆ ಮಣಿಪಾಲ ಪೊಲೀಸರು ಪರವಾನಿಗೆ ಮತ್ತು ಬಾರ್ ಕೋಡ್ ಗಳನ್ನು ಪರಿಶೀಲಿಸಿದಾಗ ಐಎಲ್‌ಎಂಎಸ್ ತಂತ್ರಾಂಶದಲ್ಲಿ ಉಪಖನಿಜ ಸಾಗಾಣಿಕಾ ಪರವಾನಿಗೆಗಳನ್ನು ನೀಡಿರುವುದು ಕಂಡುಬಂದಿಲ್ಲ. ಇವುಗಳನ್ನು ಕ್ರಷರ್ ಮಾಲಕಿ ಕೆ. ರಾಧಿಕಾ ಹಿರೇಬೆಟ್ಟು ನಕಲಿ ಮಾಡಿ ಉಪಯೋಗಿಸಿ ರುವುದಾಗಿ ಉಡುಪಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ಹಾಜಿರಾ ಸಜನಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಇದೇ ರೀತಿಯ ನಕಲಿ ಪರವಾನಿಗೆ ಸೃಷ್ಟಿಸಿ ಕ್ರಷರ್ ಮಾಲೀಕರು, ಮರಳು ದಕ್ಕೆ,…
ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ನರ್ಸ್ ಒಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಗಂಡಿಬಾಗಿಲಿನ ದೇವಗಿರಿಯ ಬೈಕಾಟ್ ನಿವಾಸಿ ಜೋಸ್- ಮೆಡ್ಲಿ ದಂಪತಿ ಪುತ್ರಿ ಟಿನು(27) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ನರ್ಸ್ ಆಗಿದ್ದ ಟಿನು ಅವರಿಗೆ ಶಿವಮೊಗ್ಗ ಜಿಲ್ಲೆಯ ಸಾಗರದ ಸೋಬಿಟ್ ಅವರೊಂದಿಗೆ ಎರಡೂವರೆ ವರ್ಷಗಳ ಹಿಂದೆ ವಿವಾಹವಾಗಿತ್ತು. ಒಂದು ವಾರದಿಂದ ಅಸ್ವಸ್ಥಗೊಂಡಿದ್ದ ಅವರನ್ನು ಬೆಂಗಳೂರಿನ ಸೈಂಟ್ ಜೋನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೃತದೇಹವನ್ನು ಪತಿಯ ಮನೆಗೆ ಕೊಂಡೊಯ್ಯಲಾಗುವುದು ಎಂದು ಮನೆಯವರು ತಿಳಿಸಿದ್ದಾರೆ. ಅವರು ತಂದೆ-ತಾಯಿ, ಪತಿ, ಸಹೋದರಿಯನ್ನು ಅಗಲಿದ್ದಾರೆ.
ಸುರತ್ಕಲ್: ಹಠಾತ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಸಂಚಾರದಲ್ಲಿದ್ದ ಐಷಾರಾಮಿ ಕಾರು ಸುಟ್ಟು ಕರಕಲಾದ ಘಟನೆ ಸುರತ್ಕಲ್ ಎನ್ಐಟಿಕೆ ಹಳೆ ಟೋಲ್ ಗೇಟ್ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಸುಟ್ಟು ಕರಕಲಾಗಿದ್ದು ಬಿಎಂಡಬ್ಲ್ಯೂ ಕಾರೆಂದು ಹೇಳಲಾಗುತ್ತಿದ್ದು, ಕಾರು ಉಡುಪಿಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ. ಎನ್ಐಟಿಕೆ ಬಳಿ ಬರುತ್ತಿದ್ದಾಗ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎನ್ನಲಾಗಿದೆ. ಬೆಂಕಿ ಅವಘಡದಲ್ಲಿ ಸಾವು ನೋವು ಸಂಭವಿಸಿರುವ ಮಾಹಿತಿ ಲಭ್ಯವಾಗಿಲ್ಲ. ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆಯ ಪೊಲಿಸರು ಸ್ಥಳಕ್ಕೆ ದೌಡಾಯಿಸಿದ್ದು, ಅಗ್ನಿ ಶಾಮಕ ದಳಕ್ಕೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಮಂಗಳೂರು : ಬೇರೊಬ್ಬನನ್ನು ಮದುವೆಯಾಗಲು ಸಿದ್ದಳಾಗಿದ್ದ ಪ್ರಿಯತಮೆಯನ್ನು ಹತ್ಯೆಗೈದಿರುವ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನಕೊಟ್ಟಿ ತಾಂಡಾದ ಸಂದೀಪ್ ರಾಥೋಡ್ (23) ಎಂಬಾತನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಆರೋಪಿ ಸಂದೀಪ್ ರಾಥೋಡ್ ಮತ್ತು ಮೃತ ಅಂಜನಾ ವಸಿಷ್ಠಾ ಫೇಸ್‌ಬುಕ್‌ನಲ್ಲಿ ಪರಿಚಿತರಾಗಿ ಪ್ರೀತಿಯಲ್ಲಿದ್ದರು. ಇಬ್ಬರೂ ಪರಸ್ಪರ ಉದ್ಯೋಗ ಪಡೆದ ಬಳಿಕ ಮದುವೆಯಾಗಲು ನಿರ್ಧರಿಸಿದ್ದರು. ಸಂದೀಪ್ ರಾಥೋಡ್ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗೆ ಲಿಖಿತ ಪರೀಕ್ಷೆ ತಯಾರಿಗೆ ಮಂಗಳೂರಿನ ಕೋಚಿಂಗ್ ಸೆಂಟರ್‌ಗೆ ಪ್ರವೇಶ ಪಡೆದಿದ್ದನು. ಈ ವೇಳೆ ಅಂಜನಾ ವಸಿಷ್ಠಾ ಕೂಡಾ ಮಂಗಳೂರಿಗೆ ಬಂದಿದ್ದು, ತಾವಿಬ್ಬರೂ ಪತಿ-ಪತ್ನಿಯೆಂದು ಬಾಡಿಗೆ ಕೊಠಡಿ ಪಡೆದಿದ್ದರು. ಬಳಿಕ ಅಂಜನಾ ವಸಿಷ್ಠಾ ಊರಿಗೆ ಹೋಗಿದ್ದ ಸಂದರ್ಭ ಮನೆಯವರು ಆಕೆಗೆ ಬೇರೊಬ್ಬ ಹುಡುಗನೊಂದಿಗೆ ಮದುವೆ ನಿರ್ಧರಿಸಿದ್ದರು. ಆಕೆಯೂ ಮದುವೆಗೆ ಒಪ್ಪಿಗೆ ಸೂಚಿಸಿದ್ದಳು. ಇದನ್ನು ಸಂದೀಪ್‌ಗೆ ತಿಳಿಸಿ ತನ್ನನ್ನು ಮರೆತುಬಿಡುವಂತೆ ತಿಳಿಸಿದ್ದಳು. ಇದರಿಂದ ಸಿಟ್ಟುಗೊಂಡ ಆತ…
ಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡಿ ನಾಗರಿಕರಿಗೆ ಸುರಕ್ಷತೆಯನ್ನು ಒದಗಿಸುವ ಉದ್ದೇಶದಿಂದ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಿಂದ ಮಂಗಳೂರು ನಗರ ಪೊಲೀಸರಿಗೆ ಅತ್ಯಾಧುನಿಕವಾದ ‘ಐಡಿಯಾ ಫೋರ್ಜ್‌ಡ್ ಕ್ಯು 6’ ಡ್ರೋನ್ ನನ್ನು ಮಂಗಳವಾರದಂದು ನೀಡಲಾಯಿತು. ಈ ಡ್ರೋನ್ ಅನ್ನು ನಗರದಲ್ಲಿ ಕಾನೂನು ಸುವ್ಯವಸ್ಥೆ, ಸಂಚಾರ ವ್ಯವಸ್ಥೆಯ ಮೇಲೆ ನಿಗಾ ಇಡಲು, ಪ್ರತಿಭಟನೆ, ವಿವಿಧ ರೀತಿಯ ಆಚರಣೆಗಳ ಸಂದರ್ಭ ಬಳಸಲಾಗುವುದು. ಇದಕ್ಕೆ ಸಂಬಂಧಿಸಿದಂತೆ 7 ಮಂದಿ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ.
ಮಂಗಳೂರು : ಬೇರೊಬ್ಬರನ್ನು ಮದುವೆಯಾಗಲು ಮುಂದಾಗಿದ್ದ ಪ್ರೇಯಸಿಯ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿ ಮಂಗಳೂರು ನ್ಯಾಯಾಲಯ ತೀರ್ಪು ನೀಡಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನಕೊಟ್ಟಿ ತಾಂಡಾದ ಸಂದೀಪ್ ರಾಥೋಡ್ (23) ಶಿಕ್ಷೆಗೊಳಗಾದ ಅಪರಾಧಿಯಾಗಿದ್ದು ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಶಿಕ್ಷೆಯ ಜೊತೆ ಮತ್ತು 25 ಸಾವಿರ ರೂ ದಂಡ ವಿಧಿಸಿದೆ.ಪ್ರಕರಣದಲ್ಲಿ ಒಟ್ಟು 45 ಸಾಕ್ಷಿದಾರರನ್ನು ವಿಚಾರಿಸಲಾಗಿತ್ತು. ಒಟ್ಟು 100 ದಾಖಲೆಗಳನ್ನು ಗುರುತಿಸಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ರವೀಂದ್ರ ಎಮ್ ಜೋಶಿ ಯವರು ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು 25,000/- ರೂಪಾಯಿ ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 3 ತಿಂಗಳ ಸಾದಾ ಸಜೆ ಮತ್ತು ಭಾ.ದಂ.ಸಂ ಕಲಂ 380 ಅಪರಾದದಲ್ಲಿ 3 ತಿಂಗಳ ಸಜೆ ಮತ್ತು 1,000/- ರೂಪಾಯಿ ದಂಡ ದಂಡ ತೆರಲು ತಪ್ಪಿದ್ದಲ್ಲಿ 15 ದಿನಗಳ ಸಾದಾ ಸಜೆ, ಭಾ.ದಂ.ಸಂ ಕಲಂ 403 ಅಪರಾಧಕ್ಕೆ 3 ತಿಂಗಳ…