ಬೆಂಗಳೂರು: ನಗರದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್‌ವೊಬ್ಬರ ಮೇಲೆಯೇ ದರೋಡೆ ಆರೋಪ ಕೇಳಿಬಂದಿದೆ. ಖಾಸಗಿ ಹೋಟೆಲ್‌ಗೆ ನುಗ್ಗಿ 20 ಲಕ್ಷ ಹಣ ಕಸಿದು ಪೊಲೀಸ್ ಜೀಪ್ ಸಮೇತ ಎಸ್ಕೇಪ್ ಆಗಿದ್ದಾರೆ ಎಂದು ಆರೋಪ ಹೊರಿಸಲಾಗಿದೆ.ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಸಿಲ್ಕ್ ಬೋರ್ಡ್ ಸಿಗ್ನಲ್ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಇಂಥದೊಂದು ಘಟನೆ ನಡೆದಿದೆ. ಕೇರಳದ ಯುವಕರು ಸಾಕಷ್ಟು ಹಣದೊಂದಿಗೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಹೋಟೆಲ್‌ಗೆ ಬಂದಿದ್ದರು. ವಿಚಾರ ತಿಳಿದ ಸಿಐಡಿ ಇನ್‌ಸ್ಪೆಕ್ಟರ್‌ವೊಬ್ಬರು, ತನ್ನ ಪೊಲೀಸ್ ಜೀಪ್‌ನಲ್ಲೇ ಕೆಲ ಯುವಕರ ಜೊತೆಗೆ ಅಲ್ಲಿಗೆ ಹೋಗಿದ್ದರು.ಇನ್‌ಸ್ಪೆಕ್ಟರ್ ಸೂಚನೆಯಂತೆ ಕುಪೇಂದ್ರ, ಎಂಬವರು ಹೋಟೆಲ್ ರೂಮ್‌ಗೆ ನುಗ್ಗಿದ್ದಾರೆ. ನಾವು ಪೊಲೀಸರು, ನೀವು ಮನಿ ಟ್ರೇಡಿಂಗ್ ಕಳ್ಳದಂಧೆ ಮಾಡ್ತಿದ್ದೀರಾ ಎಂದು ಹೆದರಿಸಿ, ಐಡಿ ಕಾರ್ಡ್ ತೋರಿಸಿ ಅರೆಸ್ಟ್ ಮಾಡುವುದಾಗಿ ಹೇಳಿದ್ದಾರೆ. ನಿಮ್ಮನ್ನು ಸುಮ್ಮನೆ ಬಿಡಬೇಕು ಅಂದ್ರೆ ಹಣ ಕೊಡಬೇಕು ಎಂದು ಬೆದರಿಕೆ ಹಾಕಿದ್ದಾರೆ.ಯುವಕರು ಹಣ ನೀಡಲು ನಿರಾಕರಿಸಿದಾಗ ಅವರ ಮೇಲೆ ಹಲ್ಲೆ ನಡೆಸಿ ಬರೋಬ್ಬರಿ 20 ಲಕ್ಷ ರೂಪಾಯಿಯನ್ನು ದರೋಡೆ…
Author: main-admin
ಮಂಗಳೂರು: ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಪಡೆಯಲು ಸಾರ್ವಜನಿಕರು ಸಲ್ಲಿಸಿದ್ದ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (PCC) ಅರ್ಜಿಗಳನ್ನು ಠಾಣಾ ಇನ್‌ಸ್ಪೆಕ್ಟರ್ ಗಮನಕ್ಕೆ ತಾರದೆ, ಅವರ ಕೆಜಿಐಡಿ ಮತ್ತು ಪಾಸ್‌ವರ್ಡ್ ಬಳಸಿ ಅಕ್ರಮವಾಗಿ ವಿಲೇವಾರಿ ಮಾಡಿದ ಬಜಪೆ ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೇಬಲ್‌ಗಳನ್ನು ಅಮಾನತುಗೊಳಿಸಲಾಗಿದೆ. ಬಜಪೆ ಠಾಣೆಯ ಕಾನ್‌ಸ್ಟೇಬಲ್‌ಗಳಾದ ಮಂಜುನಾಥ್ ಮತ್ತು ಆಶಾ ಅಮಾನತುಗೊಂಡ ಸಿಬ್ಬಂದಿಯಾಗಿದ್ದಾರೆ. ಈ ದಂಧೆಗೆ ಸಹಕರಿಸಿದ ಎಕ್ಕಾರಿನ ಭರತ್ ಎಂಬ ಏಜೆಂಟ್‌ನನ್ನು ಪೊಲೀಸರು ಬಂಧಿಸಿದ್ದಾರೆ.ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಪಡೆಯುವ ನಿಟ್ಟಿನಲ್ಲಿ ಒಟ್ಟು 33 ಮಂದಿ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್‌ಗಾಗಿ ಅರ್ಜಿ ಸಲ್ಲಿಸಿದ್ದರು. ನಿಯಮದ ಪ್ರಕಾರ ಅರ್ಜಿದಾರರ ಮನೆಗೆ ತೆರಳಿ ನೈಜ ಸ್ಥಳ ಪರಿಶೀಲನೆ (Verification) ನಡೆಸಬೇಕಾಗಿದ್ದ ಕಾನ್‌ಸ್ಟೇಬಲ್‌ಗಳಾದ ಮಂಜುನಾಥ್ ಹಾಗೂ ಆಶಾ, ಯಾವುದೇ ತನಿಖೆ ನಡೆಸದೆ ನೇರವಾಗಿ ಇನ್‌ಸ್ಪೆಕ್ಟರ್ ಅವರ ಕೆಜಿಐಡಿ (KGID) ಹಾಗೂ ಪಾಸ್‌ವರ್ಡ್ ಅನ್ನು ದುರ್ಬಳಕೆ ಮಾಡಿಕೊಂಡು ಅರ್ಜಿಗಳನ್ನು ಅಪ್ರೂವ್ ಮಾಡಿದ್ದರು. ಈ ಬಗ್ಗೆ ಬಜಪೆ ಠಾಣೆಯ ಇನ್‌ಸ್ಪೆಕ್ಟರ್ ಮತ್ತು ಠಾಣಾ ಬರಹಗಾರರು (Station Writer) ರೀ-ವೆರಿಫಿಕೇಶನ್…
ಬೆಂಗಳೂರು: ಬೆಂಗಳೂರಿನಲ್ಲಿ ರಕ್ಷಕರೇ ಭಕ್ಷಕರಾದ ಆಘಾತಕಾರಿ ಘಟನೆಯೊಂದು ನಡೆದಿದೆ. ಸಿಐಡಿ ವಿಭಾಗದ ಇನ್ಸ್‌ಪೆಕ್ಟರ್ ಒಬ್ಬರು ಸ್ವತಃ ತಾವೇ ಗ್ಯಾಂಗ್ ಕಟ್ಟಿಕೊಂಡು, ಮಡಿವಾಳದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಕೇರಳ ಮೂಲದ ವ್ಯಕ್ತಿಗಳನ್ನು ಬೆದರಿಸಿ ಬರೋಬ್ಬರಿ 20 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಸಿಐಡಿ ಇನ್ಸ್‌ಪೆಕ್ಟರ್ ದರೋಡೆಯ ಮಾಸ್ಟರ್ ಮೈಂಡ್ ಆಗಿದ್ದು, ಸದ್ಯ ಪೊಲೀಸರ ಕಾರ್ಯಾಚರಣೆ ತೀವ್ರಗೊಳ್ಳುತ್ತಿದ್ದಂತೆಯೇ ಎಸ್ಕೇಪ್ ಆಗಿದ್ದಾರೆ. ಈ ಕುರಿತು ನಗರ ಪೊಲೀಸ್ ಆಯುಕ್ತ (CP) ಸಿಮಂತ್ ಕುಮಾರ್ ಅವರು ಅಧಿಕೃತ ಹೇಳಿಕೆ ನೀಡಿದ್ದು, ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ಪಾತ್ರ ಇರುವುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಟ್ರೇಡಿಂಗ್ (ವ್ಯಾಪಾರ) ಉದ್ದೇಶಗಳಿಗಾಗಿ ಹಣ ಹಿಡಿದುಕೊಂಡು ಕೇರಳದ ಉದ್ಯಮಿಗಳು ಮಡಿವಾಳದ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಈ ಬಗ್ಗೆ ನಿಖರ ಮಾಹಿತಿ ಪಡೆದಿದ್ದ ಇನ್ಸ್‌ಪೆಕ್ಟರ್, ಹ್ಯಾರಿಸ್, ಕುಪೇಂದ್ರ, ಶಪಿ ಮತ್ತು ಶಾನಿ ಎಂಬ ನಾಲ್ವರೊಂದಿಗೆ ಸೇರಿ ದರೋಡೆಗೆ ಪ್ಲಾನ್ ಮಾಡಿದ್ದರು. ಯೋಜನೆಯಂತೆ ಹೋಟೆಲ್ ಮುಂಭಾಗ ಅಧಿಕೃತ ಸಿಐಡಿ ಪೊಲೀಸ್ ಜೀಪ್ ನಿಲ್ಲಿಸಿ ಇನ್ಸ್‌ಪೆಕ್ಟರ್ ಒಳಗೇ ಕುಳಿತಿದ್ದರು. ಅವರ ಗ್ಯಾಂಗ್‌ನ…
ಲೋನಾವಾಲಾ: ಮಹಾರಾಷ್ಟ್ರದ ಲೋನಾವಾಲಾದ ಪ್ರಸಿದ್ಧ ಲೋಹಗಢ ಕೋಟೆಯಲ್ಲಿ ತನ್ನ ಹುಟ್ಟುಹಬ್ಬವನ್ನು ಆಚರಿಸಲು ಸ್ನೇಹಿತರ ಜತೆ ಟ್ರೆಕ್ಕಿಂಗ್ಗೆ ಹೋಗಿದ್ದ ಯುವಕನೊಬ್ಬ ಆಳವಾದ ಕಂದಕಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಗಾಹುಂಜೆಯ ಲೋಧಾ ಬೆಲ್ಮಂಡೋ ಸೊಸೈಟಿಯ ನಿವಾಸಿ ಕೇತನ್ ವಿಶಾಲ್ ಅಗರ್ವಾಲ್ (24) ಎಂದು ಗುರುತಿಸಲಾಗಿದೆ. ಕೇತನ್ ಅಗರ್ವಾಲ್ ತನ್ನ ಜನ್ಮದಿನದ ಅಂಗವಾಗಿ ಸ್ನೇಹಿತರೊಂದಿಗೆ ಲೋಹಗಢ ಕೋಟೆಗೆ ಚಾರಣ ಕೈಗೊಂಡಿದ್ದ. ಆದರೆ, ಕೋಟೆಯ ಮೇಲ್ಭಾಗದಲ್ಲಿ ತೇವ ಹಾಗೂ ಜಾರು ಮೇಲ್ಮೈ ಇದ್ದ ಕಾರಣ, ಆತ ಆಕಸ್ಮಿಕವಾಗಿ ಸಮತೋಲನ ಕಳೆದುಕೊಂಡು ಆಳವಾದ ಕಂದಕಕ್ಕೆ ಬಿದ್ದಿದ್ದಾನೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಕಂದಕವು ಅತ್ಯಂತ ಆಳ ಹಾಗೂ ಕಡಿದಾಗಿದ್ದರಿಂದ ರಕ್ಷಣಾ ಕಾರ್ಯಾಚರಣೆ ತೀವ್ರ ಸವಾಲಿನಿಂದ ಕೂಡಿತ್ತು. ಆದರೂ ರಕ್ಷಣಾ ತಂಡದ ಸದಸ್ಯರು ಹಗ್ಗಗಳ ಸಹಾಯದಿಂದ ಕಂದಕಕ್ಕೆ ಇಳಿದು, ಸಾಗರ್ ಅವರ ಮೃತದೇಹವನ್ನು ಮೇಲಕ್ಕೆ ತಂದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮಳೆಗಾಲದ ಸಮಯದಲ್ಲಿ ಕೋಟೆಗಳ ಮೇಲ್ಭಾಗದಲ್ಲಿ ಪಾಚಿ ಹಾಗೂ ಜಾರು ಇರುವುದರಿಂದ ಇಂತಹ ಚಾರಣದ ವೇಳೆ ಪ್ರವಾಸಿಗರು ತೀವ್ರ ಜಾಗರೂಕತೆ…
ಉಡುಪಿ: ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66 ರ ಸಾಯಿ ಸರ್ವಿಸ್ ಸ್ಟೇಷನ್ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.ವರದಿಗಳ ಪ್ರಕಾರ, ಕಾಪು ಸರ್ವಿಸ್ ರಸ್ತೆ ಮತ್ತು ಹೆದ್ದಾರಿಯ ಜಂಕ್ಷನ್‌ನಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಎಕ್ಸ್‌ಪ್ರೆಸ್ ಬಸ್, ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಚಲಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.ಗಾಯಗೊಂಡ ಸ್ಕೂಟಿ ಸವಾರನನ್ನು ಮಂಗಳೂರಿನ ಸಸಿಹಿತ್ಲು ಮೂಲದ ಗಣೇಶ್ ಪಾತ್ರಿ ಎಂದು ಗುರುತಿಸಲಾಗಿದ್ದು, ಪ್ರಸ್ತುತ ಕಾಪುವಿನಲ್ಲಿ ವಾಸಿಸುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸವಾರನನ್ನು ಸ್ಥಳೀಯ ನಿವಾಸಿಗಳು ಆಂಬ್ಯುಲೆನ್ಸ್ ಮೂಲಕ ಉಡುಪಿಯ ಆಸ್ಪತ್ರೆಗೆ ಸಾಗಿಸಿದರು.ಸ್ಕೂಟಿಗೆ ಡಿಕ್ಕಿ ಹೊಡೆದ ನಂತರ, ಬಸ್ ಡಿವೈಡರ್ ಮೇಲೆ ಹೋಗಿ ನಿಂತಿದ್ದು, ದೊಡ್ಡ ಅನಾಹುತವೊಂದನ್ನು ಸ್ವಲ್ಪದರಲ್ಲೇ ತಪ್ಪಿದಂತಾಗಿದೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪುಣೆ: ತಾನು ದೇವರ ಅವತಾರ ಎಂದು ನಂಬಿಸಿ, ಮಹಿಳೆಯೊಬ್ಬಳ ಮೇಲೆ ವರ್ಷಗಳ ಕಾಲ ಅಮಾನುಷವಾಗಿ ಲೈಂಗಿಕ ದೌರ್ಜನ್ಯ ಎಸಗಿ, ವಿದ್ಯುತ್ ಶಾಕ್ ನೀಡಿ, ಕಳ್ಳತನಕ್ಕೆ ಪ್ರಚೋದಿಸಿ ಹಾಗೂ ತನ್ನದೇ ಮೂತ್ರವನ್ನು ಕುಡಿಯುವಂತೆ ಒತ್ತಾಯಿಸಿ ನರಕಯಾತನೆ ನೀಡಿದ್ದ ಸ್ವಯಂ ಘೋಷಿತ ದೇವಮಾನವ ಮತ್ತು ಆತನ ಏಳು ಮಂದಿ ಸಹಚರರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.ರಾಧೇಶ್ಯಾಮ್ ಮಿಶ್ರಾ ಅಲಿಯಾಸ್ ರಾಧಾಮೋಹನ್ ಮಿಶ್ರಾ ಬಂಧಿತ ಪ್ರಮುಖ ಆರೋಪಿ ‘ಬಾಬಾ’. ಈತ ಪುಣೆಯ ವಾಘೋಲಿಯ ಉಬಾಲೆ ನಗರ ಪ್ರದೇಶದಲ್ಲಿ ‘ಆಧುನಿಕ ಗುರುಕುಲ’ ಎಂಬ ಹೆಸರಿನಲ್ಲಿ ಆಶ್ರಮ ನಡೆಸುತ್ತಾ ದಂಧೆ ನಡೆಸುತ್ತಿದ್ದನು.ಪೊಲೀಸರ ಮಾಹಿತಿ ಪ್ರಕಾರ, ಸಂತ್ರಸ್ತ ಮಹಿಳೆ 2010 ರಲ್ಲಿ ಈತನ ಸಂಪರ್ಕಕ್ಕೆ ಬಂದಿದ್ದಳು. ಅಂದಿನಿಂದ ಆಕೆಯನ್ನು ಪತಿಯಿಂದ ಪ್ರತ್ಯೇಕಿಸಿ, ವಿಚ್ಛೇದನ ಕೊಡಿಸಿದ್ದ ಈ ವಿಕೃತ ಬಾಬಾ, 2010 ರಿಂದ 2016 ರ ನಡುವೆ ಸತತವಾಗಿ ಲೈಂಗಿಕವಾಗಿ ಶೋಷಿಸಿದ್ದಾನೆ. ಅಷ್ಟೇ ಅಲ್ಲದೆ, ಆಕೆಯ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡಿದ್ದಲ್ಲದೆ, ಆಶ್ರಮವನ್ನು ಶ್ರೀಮಂತಗೊಳಿಸಲು ಆಕೆಯಿಂದಲೇ ಕಳ್ಳತನ ಮಾಡಿಸಿದ್ದಾನೆ. ತಾನು…
ಥಾಣೆ (ಮುಂಬೈ): ವಿವಾಹವಾದ ಕೇವಲ ನಲವತ್ತೆಂಟು ದಿನಗಳಲ್ಲಿ, ಅತ್ತೆ-ಮಾವ ಹಾಗೂ ವೈದ್ಯ ಪತಿಯ ನಿರಂತರ ದೈಹಿಕ ಮತ್ತು ಮಾನಸಿಕ ಕಿರುಕುಳ ತಾಳಲಾರದೆ ನವವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈ ಸಮೀಪದ ಥಾಣೆಯ ಅಂಬರ್ನಾಥ್‌ನಲ್ಲಿ ನಡೆದಿದೆ. ವಿಶಾಖಾ ತಿಲ್ಕರ್ (26) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಮೃತಳ ಪತಿ, ವೈದ್ಯ ನಿತಿನ್ ತಿಲ್ಕರ್‌ನನ್ನು ಪೊಲೀಸರು ಬಂಧಿಸಿದ್ದಾರೆ.ಕಳೆದ ಏಪ್ರಿಲ್ 30 ರಂದು ವಿಶಾಖಾ ಮತ್ತು ನಿತಿನ್ ತಿಲ್ಕರ್ ಅವರ ವಿವಾಹ ನಡೆದಿತ್ತು. ಮದುವೆಯಾದ ಕೆಲವೇ ದಿನಗಳಲ್ಲಿ ವರದಕ್ಷಿಣೆಗಾಗಿ ಅತ್ತೆ-ಮಾವಂದಿರು ಕಿರುಕುಳ ನೀಡಲು ಆರಂಭಿಸಿದ್ದರು. ಪತಿ ನಿತಿನ್ ತಿಲ್ಕರ್ ಅಂಬರ್ನಾಥ್‌ನಲ್ಲಿರುವ ತನ್ನ ಮನೆಯ ಒಳಗೆ ಮತ್ತು ಹೊರಗೆ ಸಿಸಿಟಿವಿ (CCTV) ಕ್ಯಾಮೆರಾಗಳನ್ನು ಅಳವಡಿಸಿ, ಪತ್ನಿಯ ಪ್ರತಿಯೊಂದು ಚಲನವಲನಗಳ ಮೇಲೆ ನಿಗಾ ಇಡುತ್ತಿದ್ದನು. ಆಕೆಯ ಗೌಪ್ಯತೆಯ ಸಂಪೂರ್ಣ ಹಕ್ಕನ್ನು ಕಸಿದುಕೊಂಡು, ಡಿಜಿಟಲ್ ಜೈಲಿನಲ್ಲಿ ಇಟ್ಟಂತೆ ನಡೆಸಿಕೊಳ್ಳುತ್ತಿದ್ದನು ಎಂದು ವಿಶಾಖಾ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.ವಿವಾಹದ ಸಮಯದಲ್ಲಿ ಹೆಣ್ಣಿನ ಕಡೆಯವರಿಂದ ಆಭರಣ ಹಾಗೂ ಹಣ ಕಡಿಮೆ ಬಂದಿದೆ…
ಬೆಂಗಳೂರು: ರಾಜಧಾನಿಯ ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ನೆರೆಮನೆಯ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್ ಬಿದ್ದ ಪರಿಣಾಮ 5 ವರ್ಷದ ಪುಟಾಣಿ ಮಗು ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಮೃತಪಟ್ಟ ದುರ್ದೈವಿ ಮಗುವನ್ನು ಯಾದಗಿರಿ ಮೂಲದ ದಾವಲ್ ಸಾಬ್ ಅವರ ಪುತ್ರ ಅಫೀನ್ (5) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕ್ಯಾಬ್ ಚಾಲಕರಾಗಿರುವ ದಾವಲ್ ಸಾಬ್ ಅವರು ಬೆಂಗಳೂರಿನಲ್ಲಿ ಹೊಸ ಕೆಲಸದ ಹುಡುಕಾಟದಲ್ಲಿದ್ದರು. ಅವರ ಪತ್ನಿ ಹಾಗೂ ಮಗು ಅಫೀನ್ ಕೇವಲ ಐದು ದಿನಗಳ ಹಿಂದಷ್ಟೇ ಬಾಗಲೂರು ವ್ಯಾಪ್ತಿಯ ಬಂಡಿಕೊಡಿಗೇಹಳ್ಳಿಯಲ್ಲಿರುವ ತಮ್ಮ ತಂಗಿಯ ಮನೆಗೆ ಬಂದಿದ್ದರು. ಬುಧವಾರ ಸಂಜೆ ಸುಮಾರು 6:30ರ ವೇಳೆಗೆ, ಅಫೀನ್ ಪಕ್ಕದ ಮನೆಯ ಮಕ್ಕಳಾದ ಸಮನ್ವಿ ಹಾಗೂ ಮತ್ತೊಂದು ಮಗುವಿನೊಂದಿಗೆ ಬಿ.ಸಿ. ನರಸಪ್ಪ ಎಂಬುವರ ಮನೆಯ ಕಾಂಪೌಂಡ್ ಗೇಟ್ ಬಳಿ ಆಟವಾಡುತ್ತಿದ್ದನು. ಮಕ್ಕಳು ಆಟದ ಭರದಲ್ಲಿ ಕಬ್ಬಿಣದ ಗೇಟ್ ಹಿಡಿದು ಜೀಕಾಡುತ್ತಿದ್ದಾಗ, ಗೇಟ್‌ನ ಭಾರ…
ಬಂಟ್ವಾಳ: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪಾದೆಕಲ್ಲು ಎಂಬಲ್ಲಿ ಟಿಪ್ಪರ್ ಹರಿದು ಅದರ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಧರ್ಮಸ್ಥಳ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ.ಪಾದೆಕಲ್ಲು ಎನ್ನುವ ಪ್ರದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಬಾಕ್ಸೈಟ್ ದಂಧೆ ನಡೆಯುತ್ತಿದ್ದು, ಹಲವಾರು ಟಿಪ್ಪರ್ ಲಾರಿಗಳು ಈ ಭಾಗದಲ್ಲಿ ಓಡಾಟ ನಡೆಸುತ್ತಿವೆ. ಟಿಪ್ಪರ್ ಚಾಲಕ ತನ್ನ ಟಿಪ್ಪರ್ ಸ್ಟಾರ್ಟ್ ಆಗುತ್ತಿಲ್ಲ ಎಂದು ಟಿಪ್ಪರ್ ಅಡಿಭಾಗಕ್ಕೆ ಬಂದು ಪರಿಶೀಲನೆ ನಡೆಸುವ ಸಮಯದಲ್ಲಿ ಟಿಪ್ಪರ್ ತನ್ನಿಂದ ತಾನೇ ಮುಂದೆ ಚಲಿಸಿ ಅಡಿಭಾಗದಲ್ಲಿದ್ದ ಚಾಲಕನ ಮೇಲೆ ಹರಿದಿದೆ. ಇದರಿಂದಾಗಿ ಚಾಲಕ ಸ್ಥಳದಲ್ಲೇ ಸಾವನಪ್ಪಿದ್ದಾನೆ. ವಿಟ್ಲ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಂಟ್ವಾಳ: ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಐದು ವರ್ಷದ ಬಾಲಕಿ ಜೂನ್ 16 ರಂದು ನಿಧನ ಹೊಂದಿದರು. ಮೃತಳನ್ನು ಅಲ್ಲಿಪಾದೆಯ ಅನೇಜಾ ನಿವಾಸಿ ಹಾಗೂ ಎಸ್‌ವಿಎಸ್ ದೇವಳದ ಶಾಲೆಯ ಯುಕೆಜಿ ವಿದ್ಯಾರ್ಥಿನಿ ಹರ್ನಿಕಾ (5) ಎಂದು ಗುರುತಿಸಲಾಗಿದೆ.ಕುಟುಂಬ ಸದಸ್ಯರ ಪ್ರಕಾರ, ಹರ್ನಿಕಾ ಶುಕ್ರವಾರ ಶಾಲೆಗೆ ಹಾಜರಾಗಿದ್ದರು ಮತ್ತು ಶಾಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಶನಿವಾರ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ವೈದ್ಯಕೀಯ ಸಲಹೆಯ ಮೇರೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಮಗು ಮಂಗಳವಾರ ಮೃತಪಟ್ಟಿದ್ದಾಳೆ. ಪ್ರಜ್ವಲ್ ಮತ್ತು ಛಾಯಾ ದಂಪತಿಯ ಏಕೈಕ ಪುತ್ರಿ ಹರ್ನಿಕಾ. ಕುಟುಂಬವು ಇತ್ತೀಚೆಗೆ ಬಂಟ್ವಾಳದಲ್ಲಿ ವಾಸಿಸುತ್ತಿತ್ತು, ಆದರೆ ಮಗು ಅಲ್ಲಿಪಾದೆಯಲ್ಲಿರುವ ತನ್ನ ಅಜ್ಜಿಯ ಮನೆಯಿಂದ ಶಾಲೆಗೆ ಹೋಗುತ್ತಿತ್ತು. ಈ ವರ್ಷದ ಜನವರಿಯಲ್ಲಿ, ಅಲ್ಲಿಪಾದೆಯಿಂದ ಶಾಲೆಗೆ ಪ್ರಯಾಣಿಸುತ್ತಿದ್ದ ವೇಳೆ ಆಟೋರಿಕ್ಷಾ ಪಲ್ಟಿಯಾಗಿ ಹರ್ನಿಕಾ ಗಾಯಗೊಂಡಿದ್ದರು. ಅವರು ಚಿಕಿತ್ಸೆಗೆ ಒಳಗಾಗಿ ಆ ಗಾಯಗಳಿಂದ ಚೇತರಿಸಿಕೊಂಡಿದ್ದರು.










