ಉಡುಪಿ: ಖಾದ್ಯ ತೈಲ ಸಾಗಿಸುತ್ತಿದ್ದ ಟ್ಯಾಂಕರ್ ರಸ್ತೆ ಬದಿಗೆ ಉರುಳಿಬಿದ್ದ ಘಟನೆ ನಗರದ ಸಂತೆಕಟ್ಟೆ ಬಳಿ ಸಂಭವಿಸಿದೆ. ಟ್ಯಾಂಕರ್ ಸಂತೆಕಟ್ಟೆ ನಿರ್ಮಾಣ ಹಂತದ ಕೆಳಸೇತುವೆ ಪ್ರದೇಶವನ್ನು ಹಾಡುಹೋದ ನಂತರ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಜೂನ್ 08 ರಂದು ಶನಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಟ್ಯಾಂಕರ್ ಚಾಲಕ ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಮುಚ್ಚಿದ ಸರ್ವಿಸ್ ರಸ್ತೆಯನ್ನು ಮೀರಿದ್ದು, ಕೆಸರು ರಸ್ತೆಯಿಂದಾಗಿ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟ್ಯಾಂಕರ್ ಪಲ್ಟಿಯಾಗಿ ನಿರ್ಮಾಣ ಹಂತದಲ್ಲಿರುವ ಅಂಡರ್‌ಪಾಸ್ ನಿರ್ಮಾಣ ಪ್ರದೇಶಕ್ಕೆ ಬಿದ್ದಿದೆ.ಘಟನೆಯಲ್ಲಿ ಚಾಲಕ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾನೆ ಎನ್ನಲಾಗಿದೆ.
Author: main-admin
ಮಂಗಳೂರು: ನಗರದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅಪರಿಚಿತ ಯುವಕನೋರ್ವ ಕಿರುಕುಳ ನೀಡಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಪೆನಿಯೊಂದರ ಪ್ರಾಡಕ್ಟ್ ಸೇಲ್ ಕೆಲಸ ಮಾಡಿಕೊಂಡಿರುವ ತಾನು ಶುಕ್ರವಾರ ಬೆಳಗ್ಗೆ ಕಚೇರಿಗೆ ಹೋಗಿ ಪ್ರಾಡಕ್ಟ್‌ಗಳನ್ನು ತೆಗೆದುಕೊಂಡೆ. ಅವುಗಳನ್ನು ಮಾರಾಟ ಮಾಡಲು ಬಜ್ಜೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದೆ. ಆವಾಗ ತನ್ನನ್ನು ಹಿಂಬಾಲಿಸಿಕೊಂಡು ಬಂದಿದ್ದ ಸುಮಾರು 27-28 ವರ್ಷ ವಯಸ್ಸಿನ ಯುವಕ ತನ್ನ ಹಿಂಬದಿಯ ಸೀಟಿನಲ್ಲಿ ಕುಳಿತು ಕಿರುಕುಳ ನೀಡಿದ್ದಾನೆ ಎಂದು 19 ವರ್ಷದ ಯುವತಿ ದೂರು ನೀಡಿದ್ದಾರೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬಾಲಕಿಯರ ಹಾಸ್ಟೇಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಬಿ.ಹೆಚ್ ರಸ್ತೆಯಲ್ಲಿರುವ ಸಮಾಜಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ವಿದ್ಯಾರ್ಥಿನಿಯರು ಅಪಾಯದಿಂದ ಪಾರಾಗಿದ್ದಾರೆ. ಹಾಸ್ಟೇಲ್ ನಲ್ಲಿ 250ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಇದ್ದರು. ಹಾಸ್ಟೇಲ್ ನಲ್ಲಿ ಬೆಂಕಿ ಹೊತ್ತಿ ಉರಿದಿದ್ದು, ವಿದ್ಯಾರ್ಥಿನಿಯರು ಹಾಸ್ಟೇಲ್ ನಿಂದ ಹೊರಗೋಡಿಬಂದು ಜೀವ ಉಳಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕಾಗಮಿಸಿದ ಅಗ್ನಿಶಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಕೇರಳದಲ್ಲಿ ಸಾರಿಗೆ ಬಸ್ ನಲ್ಲಿ ನಡೆದ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಂಡಕ್ಟರ್ ನ ಕ್ವಿಕ್ ರಿಯಾಕ್ಷನ್ ಗೆ ಯುವಕನ ಜೀವ ಉಳಿದಿದೆ.ವೀಡಿಯೋದಲ್ಲಿ ಕಾಣಿಸುವಂತೆ ಬಸ್ ಹಿಂಭಾಗಿನ ಸಮೀಪದ ಸೀಟಿಗೆ ಒತ್ತಿ ನಿಂತುಕೊಂಡು ಬಸ್ ಕಂಡಕ್ಟರ್ ಟಿಕೆಟ್ ನೀಡುತ್ತಿರುವ ವೇಳೆ ಬಸ್ ಸಡನ್ ಬ್ರೇಕ್ ಹಾಕಿದೆ. ಈ ವೇಳೆ ಬಾಗಿಲ ಬಳಿ ನಿಂತಿದ್ದ ಯುವಕನೋರ್ವ ಮುಗ್ಗರಿಸಿ ಇನ್ನೇನು ತೆರೆದಿದ್ದ ಬಾಗಿಲಿನಲ್ಲಿ ಕೆಳಗೆ ಬೀಳಬೇಕು ಅನ್ನುವಷ್ಟರಲ್ಲಿ ಕಂಡಕ್ಟರ್ ತನ್ನ ಒಂದೇ ಕೈನಿಂದ ಆತನನ್ನು ತಾನು ನಿಂತಲಿಂದ ಒಂದು ಚೂರು ಅತ್ತಿತ್ತ ಅಲುಗದಂತೆ ಹಿಡಿದು ಆತನ ಪ್ರಾಣ ಕಾಪಾಡಿದ್ದಾನೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಒಂದು ವೇಳೆ ಕಂಡಕ್ಟರ್ ಆತನ ಕೈ ಹಿಡಿಯದೇ ಹೋದರೆ ಆತ ತೆರೆದ ಬಾಗಿಲಿನ ಮೂಲಕ ಬಸ್ಸಿನಿಂದ ಕೆಳಗೆ ಬಿದ್ದು ಅವಾಂತರ ಸೃಷ್ಟಿಯಾಗುತ್ತಿದ್ದುದ್ದಂತು ಪಕ್ಕ. ಆದರೆ ಇಲ್ಲಿ ಕಂಡಕ್ಟರ್‌ನ ಸಮಯ ಪ್ರಜ್ಞೆಯಿಂದ ಯಾವುದೇ ಅನಾಹುತವಾಗದಂತೆ ಆತ ಪಾರಾಗಿದ್ದಾನೆ.
ಕಾಪು ಬೀಚ್‌ನಲ್ಲಿ ಯುವಕನೋರ್ವ ದ್ವಿಚಕ್ರ ವಾಹನ, ಮೊಬೈಲ್ ಜೊತೆಗೆ ಬೆಲೆಬಾಳುವ ವಸ್ತುಗಳನ್ನು ಬಿಟ್ಟು ನಾಪತ್ತೆಯಾಗಿದ್ದು, ನಿನ್ನೆಯಿಂದ ಅವನಿಗಾಗಿ ಬೀಚ್‌ನುದ್ದಕ್ಕೂ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ನಾಪತ್ತೆಯಾಗಿರುವ ಯುವಕನನ್ನು ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್ ಎಂಬವರ ಪುತ್ರ 20ರ ಹರೆಯದ ಕರಣ್ ಸಾಲ್ಯಾನ್ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿಯಿಂದ ಕರಣ್ ನಾಪತ್ತೆಯಾಗಿದ್ದು, ಶುಕ್ರವಾರ ಬೆಳಗ್ಗೆ ಹುಡುಕಿದಾಗ ಕಾಪು ಬೀಚ್‌ನಲ್ಲಿ ಅವನ ಮೊಬೈಲ್ ಮತ್ತು ಮೊಬೈಲ್, ಪರ್ಸ್ ಅನಾಥ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕರಣ್ ಸಾಲ್ಯಾನ್ ರವರ ತಾಯಿ ತುಳಸಿ ಸಾಲ್ಯಾನ್ ನೀಡಿದ ದೂರಿನ ಪ್ರಕಾರ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ.
ಚಂಡೀಗಢ: ಸಂಸದೆ ಕಂಗನಾ ರಣಾತವತ್‌ಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಸಿಂಗ್ ಕೌರ್ ಅವರನ್ನು ಮೇಲಾಧಿಕಾರಿಗಳು ಅಮಾನತು ಮಾಡಿ ಆದೇಶಿಸಿದ್ದಾರೆ. ಅಮಾನತು ಆದೇಶದ ನಂತರ ಕುಲ್ವಿಂದರ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಸಂಸದೆಯ ಕೆನ್ನೆಗೆ ಹೊಡೆದ ಬಗ್ಗೆ ಅವರ ವಿರುದ್ಧ ಪ್ರಕರಣವೂ ದಾಖಲಾಗಿದೆ. ರೈತ ಸಮುದಾಯ ದೆಹಲಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ 100ರೂಪಾಯಿ ಕೊಟ್ಟರೆ ರೈತರು ಪ್ರತಿಭಟನೆಗೆ ಭಾಗವಹಿಸುತ್ತಾರೆ ಎಂದು ಈಗ ಸಂಸದೆಯಾಗಿ ಆಯ್ಕೆಯಾಗಿರುವ ನಟಿ ಕಂಗನಾ ಹೇಳಿದ್ದರು. ಈ ಹೇಳಿಕೆ ವಿರೋಧಿಸಿ ನಾನು ಕಂಗನಾಗೆ ಕಪಾಳಮೋಕ್ಷ ಮಾಡಿದ್ದೇನೆ ಎಂದು ಘಟನೆ ನಂತರ ಮಹಿಳಾ ಕಾನ್ಸ್‌ಟೇಬಲ್ ಕುಲ್ವಿಂದರ್ ಕೌರ್ ಹೇಳಿದ್ದರು.
ಬೆಂಗಳೂರು : ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಜಾಮೀನು ಮಂಜೂರಾಗಿದೆ. 2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಶೇಕಡಾ 40 ಕಮಿಷನ್ ಮಾಡಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಮುಂದೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದರು. ಬಿಜೆಪಿ ವಿರುದ್ಧ ಕಮಿಷನ್ ಪಡೆದ ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದ್ದು ಇದರ ವಿಚಾರಣೆ ಈಗ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪ್ರಕರಣದ ವಿಚಾರಣೆಗೆ ಕಳೆದ ವಾರ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಜಾಮೀನು ಸಿಕ್ಕಿದನ್ನು ಸ್ಮರಿಸಬಹುದಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಬಜಪೆ ಗ್ರಾಮದ ಶಾಂತಿಗುಡ್ಡೆ ಚೆಕ್ ಪೋಸ್ಟ್ ಬಳಿ ಬಜಪೆ ಕಡೆಯಿಂದ ಇಬ್ಬರು ವ್ಯಕ್ತಿಗಳು ದನಗಳನ್ನು ಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಬಿಳಿ ಬಣ್ಣದ ಗೂಡ್ಸ್ ವಾಹನದಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಬಜಪೆ ಪೊಲೀಸರು ಬೆನ್ನಟ್ಟಿ 7 ದನ, 2 ಕೋಣ, ಹಾಗೂ ಮಿನಿ ಗೂಡ್ಸ್ ವಾಹನವನ್ನು ಜೂ. 5ರಂದು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ವಶಕ್ಕೆ ಪಡೆದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 8 ಲಕ್ಷ ರೂಪಾಯಿ. ದನ ಹಾಗೂ ಕೋಣಗಳನ್ನು ಎಲ್ಲಿಂದಲೋ ಕಳವು ಮಾಡಿ, ಅವುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಮಿನಿ ಗೂಡ್ಸ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜಪೆ ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್ ಆದೇಶದ ಅನ್ವಯ ಜೂನ್ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ. 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು. ರಾಜ್ಯದಲ್ಲಿ ಇಲ್ಲಿಯವರೆಗೆ ಸುಮಾರು 45 ಲಕ್ಷ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡಿದ್ದು, 1.55 ಕೋಟಿ ವಾಹನಗಳು ಇನ್ನೂ ಅಳವಡಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದೆ. ಏಪ್ರಿಲ್.1, 2019ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯವಾಗಿದೆ. ವಾಹನ ಮಾಲೀಕರಾದಂತ ನೀವು ನಿಮ್ಮ ಹಳೆಯ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಹೇಗೆ ಎಳವಡಿಸಬೇಕು ಅನ್ನೋ ಬಗ್ಗೆ ಮುಂದೆ ಓದಿ. ಈ ವಿಧಾನ ಅನುಸರಿಸಿ, ನಿಮ್ಮ ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿ • https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ,…
ಮಂಗಳೂರು: ಷೇರು ಹೂಡಿಕೆ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 19.50 ಲಕ್ಷ ರೂ. ವಂಚಿಸಿದ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಆಕಾಶ್ ವರ್ನಭಾನಿ ಎಂಬಾತ ಕಳುಹಿಸಿದ ಲಿಂಕ್ ಮೂಲಕ ತಾನು ಎ.7ರಂದು ವಾಟ್ಸ್ಆ್ಯಪ್ ಗ್ರೂಪ್ ಗೆ ಸೇರ್ಪಡೆಗೊಂಡಿದ್ದೆ. ಬಳಿಕ ಆ ಗ್ರೂಪ್ ನಲ್ಲಿ ಸಿಂಗ್ ಎಂಬಾತ ಹಣವನ್ನು ಕಂಪೆನಿಗಳ ಷೇರುಗಳಲ್ಲಿ ಹೂಡಿಕೆ ಮಾಡುವ ವಿಚಾರ ತಿಳಿಸಿದ. ಅದರಂತೆ ತಾನು ಎ.29ರಂದು 1 ಲಕ್ಷ ರೂ.ವರ್ಗಾವಣೆ ಮಾಡಿದ್ದೆ. ಮೇ 3ರಂದು 3 ಲಕ್ಷ ರೂ., ಮೇ 10ರಂದು 1.50 ಲಕ್ಷರೂ., ಮೇ 17ರಂದು 4 ಲಕ್ಷ ರೂ. ಹೀಗೆ ಹಂತ ಹಂತವಾಗಿ 19.50 ಲಕ್ಷ ರೂ. ವರ್ಗಾಯಿಸಿದ್ದೆ. ನಂತರ ಹೂಡಿಕೆ ಮೊತ್ತವನ್ನು ವಾಪಸ್ ನೀಡುವಂತೆ ಕೇಳಿದಾಗ ಆರೋಪಿ ಅನೂಜ್ ಗುಪ್ತಾ ಎಂಬಾತ ಹೆಚ್ಚುವರಿಯಾಗಿ 7.88 ಲಕ್ಷ ರೂ. ಪಾವತಿಸುವಂತೆ ಸೂಚಿಸಿದ. ಆಗ ತಾನು ಮೋಸ ಹೋಗಿರುವುದು ಗೊತ್ತಾಯಿತು ಎಂದು ವಂಚನೆಗೊಳಗಾದ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.










