ನವದೆಹಲಿ: ಆತ ಓದಿದ್ದು 8ನೇ ತರಗತಿ. ಆದರೆ ಆತ ಪರಿಚಯ ಮಾಡಿಕೊಡುವುದು ತಾನೊಬ್ಬ ಪೊಲೀಸ್ ಅಧಿಕಾರಿ ಎಂದು. ಪೊಲೀಸ್ ಅಧಿಕಾರಿಯಂತೆ ನಟಿಸಿ ಮಹಿಳೆಯರಿಂದ ಹಣ ಲೂಟಿ ಮಾಡಿ ಮೋಸ ಮಾಡುವ ವಂಚಕ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈತನ ಮೂಲ ಹೆಸರು ವಿಕಾಸ್ ಗೌತಮ್. ಫೇಸ್ ಬುಕ್ , ಇನ್ಸ್ಟಾಗ್ರಾಮ್ ಹಾಗೂ ಟ್ವಿಟರ್ ನಲ್ಲಿ ಐಪಿಎಸ್ ವಿಕಾಸ್ ಯಾದವ್ ಎಂದು ಹೆಸರನ್ನು ಬರೆದುಕೊಂಡಿದ್ದಾನೆ. ಘಟನೆ ಹಿನ್ನೆಲೆ: ವಿಕಾಸ್ ಗೌತಮ್ ತನ್ನ ಸಾಮಾಜಿಕ ಜಾಲತಾಣದಲ್ಲಿ ಐಪಿಎಸ್ ವಿಕಾಸ್ ಯಾದವ್‌ಎಂದು ಹೆಸರನ್ನು ಪ್ರೊಫೈಲ್ ನಲ್ಲಿ ಹಾಕಿದ್ದಾನೆ. ಮಹಿಳೆಯರನ್ನು ಪರಿಚಯ ಮಾಡಿಕೊಳ್ಳುವುದು ಹಾಗೂ ಅವರಿಂದ ಹಣ ಪಡೆದುಕೊಂಡು ವಂಚಿಸುವುದು ಈತನ ಕೆಲಸ. ಪೊಲೀಸ್ ಅಧಿಕಾರಿಯಂತೆ ನಟಿಸುವುದು ಮಾತ್ರವಲ್ಲದೆ, ಪೊಲೀಸ್ ವಾಹನದ ಮುಂದೆ ನಿಂತು ಫೋಟೋ ತೆಗೆದುಕೊಂಡ ಫೋಟೋಗಳನ್ನು ಕೂಡ ಈತ ಸೋಶಿಯಲ್ ಮೀಡಿಯಾದಲ್ಲಿ ಆಪ್ಲೋಡ್ ಮಾಡುತ್ತಿದ್ದ. ಸಿಕ್ಕಿಬಿದ್ದದ್ದು ಹೇಗೆ: ಇತ್ತೀಚೆಗೆ ವಿಕಾಸ್ ದಿಲ್ಲಿ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡಿದ್ದ ವೈದ್ಯೆ ಒಬ್ಬರ ಪರಿಚಯವನ್ನು ಮಾಡಿಕೊಂಡಿದ್ದ. ಆನ್ಲೈನ್ ನಲ್ಲಿ ಚಾಟಿಂಗ್ ಮಾಡುತ್ತಾ ಇಬ್ಬರು ಆತ್ಮೀಯವಾಗಿದ್ದರು.…
Author: main-admin
ಮಂಗಳೂರು: ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹ ಭರ್ಜರಿಯಾಗಿ ಏರಿಕೆ ಕಾಣುತ್ತಿದ್ದು, ಕೋವಿಡ್ ಬಳಿಕ ನಿರಂತರವಾಗಿ ಉತ್ತಮ ಪ್ರಗತಿ ದಾಖಲಿಸಿದೆ. ದ.ಕ., ಉಡುಪಿ, ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿ ಹೊಂದಿರುವ ಮಂಗಳೂರು ಕೇಂದ್ರೀಯ ತೆರಿಗೆಗಳ ಆಯುಕ್ತಾಲಯದ ಮಾಹಿತಿಯ ಪ್ರಕಾರ 2021-22ನೇ ಸಾಲಿನಲ್ಲಿ ಗುರಿ ಮೀರಿದ ಸಾಧನೆಯಾಗಿದೆ. 2022-23ರಲ್ಲೂ ಎಪ್ರಿಲ್-ನವೆಂಬರ್ ಅವಧಿಯಲ್ಲಿ ಭರ್ಜರಿ ತೆರಿಗೆ ಸಂಗ್ರಹಿಸಿದೆ. 2021-22ರಲ್ಲಿ 2,629 ಕೋಟಿ ರೂ. ಗುರಿಯಿದ್ದರೆ 2,897.21 ಕೋಟಿ ರೂ. ಸಂಗ್ರಹಿಸಲಾಗಿತ್ತು. 2022-23ನೇ ಸಾಲಿಗೆ 3,539 ಕೋಟಿ ರೂ. ಗುರಿ ಇದ್ದರೆ ನವೆಂಬರ್ ಅಂತ್ಯದ ವೇಳೆಗೆ 2,326.59 ಕೋಟಿ ರೂ. ಸಂಗ್ರಹವಾಗಿದೆ. ಎಪ್ರಿಲ್‌ನಿಂದ ನವೆಂಬರ್‌ವರೆಗೆ ಸಂಗ್ರಹವಾದ ಜಿಎಸ್‌ಟಿ ಯನ್ನೇ ವಿಶ್ಲೇಷಿಸಿದರೆ ಗುರಿಗಿಂತ ಹೆಚ್ಚು ಸಂಗ್ರಹವಾಗಿದೆ. ಎಪ್ರಿಲ್-ನವೆಂಬರ್ ವಿವರ ನೋಡಿದಾಗ, 2020-21ರಲ್ಲಿ 1,167.02 ಕೋಟಿ ರೂ. ಗುರಿಯಿದ್ದರೆ 1,200.35 ಕೋಟಿ ರೂ. ಸಂಗ್ರಹ ವಾಗಿತ್ತು. 2021-22ನೇ ಸಾಲಿನಲ್ಲಿ 1,596.25 ಕೋಟಿ ರೂ. ಗುರಿಯಿದ್ದು, 1,745.45 ಕೋಟಿ ರೂ. ಸಂಗ್ರಹವಾಗಿತ್ತು. ಈ ವರ್ಷವೂ ನವೆಂಬರ್ ವರೆಗಿನ ಗುರಿ…
ಬೆಂಗಳೂರು: ಮೋಟಾರು ವಾಹನ ಅಪಘಾತದಂತ ಪ್ರಕರಣದಲ್ಲಿ ವಿವಾಹೇತರ ಸಂಬಂಧ ಹೊಂದಿದ್ದಂತ ಮಹಿಳೆಗೆ ಪರಿಹಾರದ ಹಕ್ಕಿಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ. 2012ರಲ್ಲಿ ಮೋಟಾರು ವಾಹನ ಅಪಘಾತದಲ್ಲಿ ಮಲ್ಲಿಕಾರ್ಜುನ ಎಂಬುವರು ಮೃತಪಟ್ಟಿದ್ದರು. ಪರಿಹಾರ ನೀಡದ ವಿಮಾ ಕಂಪನಿಯಿಂದ ಪರಿಹಾರ ಕೋರಿ ಹೈಕೋರ್ಟ್ ಗೆ ಮೃತನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಂತ ಮಹಿಳೆ, ಪುತ್ರ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ ನ್ಯಾಯಮೂರ್ತಿ ಹೆಚ್ ಪಿ ಸಂದೇಶ್ ಅವರಿದ್ದ ನ್ಯಾಯಪೀಠವು, ವಿವಾಹೇತರ ಸಂಬಂಧ ಹೊಂದಿದ್ದಂತ ಮಹಿಳೆಗೆ ಪರಿಹಾರದಲ್ಲಿ ಹಕ್ಕಿಲ್ಲ. ಆದ್ರೇ ಆ ಸಂಬಂಧಕ್ಕೆ ಹುಟ್ಟಿದ ಪುತ್ರನಿಗೆ ಪರಿಹಾರದಲ್ಲಿ ಹಕ್ಕಿದೆ ಎಂದು ಅಭಿಪ್ರಾಯ ಪಟ್ಟರು. ಇನ್ನೂ ಮೃತ ತಂದೆ-ತಾಯಿಗೆ ಪರಿಹಾರದಲ್ಲಿ ತಲಾ ಶೇ.30ರಷ್ಟು ನೀಡಬೇಕು. ಮೃತ ಪುತ್ರನಿಗೆ ಪರಿಹಾರದಲ್ಲಿ ಶೇ.40ರಷ್ಟು ನೀಡಬೇಕು ಎಂಬುದಾಗಿ ವಿಮಾ ಕಂಪನಿಗೆ ಹೈಕೋರ್ಟ್ ಏಕ ಸದಸ್ಯ ಪೀಠವು ನಿರ್ದೇಶನ ನೀಡಿತು.
ಉಳ್ಳಾಲ: ಬೆಂಗಳೂರಿಂದ ಮಂಗಳೂರಿನ ನರಿಂಗಾನ ಗ್ರಾಮದ ತೌಡುಗೋಳಿಗೆ ಕಾರಲ್ಲಿ ಸಾಗಿಸಲಾಗುತ್ತಿದ್ದ 2 ಲಕ್ಷ ಮೌಲ್ಯದ ಎಮ್ ಡಿಎಮ್ ಎ ಮತ್ತು ಗಾಂಜಾವನ್ನು ಕೊಣಾಜೆ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದು, ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ಬೆಂಗಳೂರಿಂದ ನರಿಂಗಾನ ಗ್ರಾಮದ ತೌಡುಗೋಳಿಗೆ ಗಾಂಜಾ ಮತ್ತು ಎಮ್ ಡಿಎಮ್ ಎ ಮಾದಕ ವಸ್ತುವನ್ನ ತರುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪಿಎಸ್‌ಐ ಶರಣಪ್ಪ ತಂಡವು ನಿನ್ನೆ ರಾತ್ರಿ ಬೊಳಿಯಾರ್ ನಲ್ಲಿ ದಾಳಿ ನಡೆಸಿ ನಿಷೇದಿತ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮಾರುತಿ ಅಲ್ಟೊ ಕಾರ್ ಸಮೇತ ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ನರಿಂಗಾನ ಗ್ರಾಮದ ನಿವಾಸಿಗಳಾದ ಮೊಯ್ದಿನ್ ಹಫೀಜ್ (36) ಮಹಮ್ಮದ್ ಸಿರಾಜ್ (43 ) ಅಡ್ಯಾರ್ ಕಟ್ಟೆ,ವಳಚ್ಚಿಲ್ ನಿವಾಸಿ ಇಕ್ಬಾಲ್ (30) ಕೋಡಿಕಲ್ ,ಅಶೋಕ ನಗರ ನಿವಾಸಿ ಮಹಮದ್ ಅಝೀಜ್ (33) ಬಂಧಿತ ಆರೋಪಿಗಳು. ಬಂಧಿತರಿಂದ 2,10,000 ಮೌಲ್ಯದ ನಿಷೇದಿತ 4 ಕೆ.ಜಿ ಗಾಂಜಾ, 40 ಗ್ರಾಂ.ಎಮ್ ಡಿಎಮ್ ಎ ಮತ್ತು 2…
ಬೆಂಗಳೂರು: ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಕೆಲಸಮಾಡಿವ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ರಿಯಾಯಿತಿಯನ್ನು ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಮಹಾತ್ಮಾಗಾಂಧಇ ನರೇಗಾ ಯೋಜನೆಯಡಿ ವಿಶೇಷ ಚೇತನರು ಮತ್ತು ಹಿರಿಯ ನಾಗರೀಕರಿಗೆ ದಿನ ಒಂದಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50ರಷ್ಟು ರಿಯಾಯಿತಿ ಇರುತ್ತದೆ ಎಂದಿದ್ದಾರೆ. ಇನ್ನೂ ಪ್ರಸ್ತುತ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಪ್ರಮಾಣವು ಶೇ.51ರಷ್ಟು ಇದ್ದು, ಇದನ್ನು ಶೇ.60ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಯೋಜನೆಯ ಕಾಮಗಾರಿಗಳನ್ನು ಹೆಚ್ಚಿನ ಸಂಖ್ಯೆಲ್ಲಿ ಮಹಿಳೆಯರು ಭಾಗವಹಿಸುವಂತೆ ಮಾಡಲು ಈಗಾಗಲೇ ಶೇ.60ಕ್ಕಿಂತ ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಳ್ತಂಗಡಿ: ವ್ಯಕ್ತಿಯೋರ್ವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶಿಬಾಜೆ ಗ್ರಾಮದ ಗುತ್ತುಮನೆ ಎಂಬಲ್ಲಿ ನಡೆದಿದೆ. ರಾತ್ರಿ ಶೆಡ್‌ನಲ್ಲಿ ಮಲಗಿದ್ದ ಶ್ರೀದರ್ ಮೃತದೇಹವು ಇಂದು ಬೆಳಗ್ಗೆ ತೋಟದ ಬದಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶ್ರೀಧರರಿಗೆ ಶನಿವಾರ ಸಂಜೆ ಮೂವರು ಸ್ಥಳೀಯರು ಹಲ್ಲೆ ನಡೆಸಿರುವುದನ್ನು ಸ್ಥಳೀಯರು ನೋಡಿದ್ದಾರೆ ಎನ್ನಲಾಗಿದೆ. ಬಳಿಕ ಶ್ರೀಧರ್ ತಾನು ಕೆಲಸ ಮಾಡುವ ಶೆಡ್‌ಗೆ ತೆರಳಿ ಮಲಗಿದ್ದು,ಆದರೆ ಬೆಳಗ್ಗೆ ಶ್ರೀಧರ ಶೆಡ್‌ನಲ್ಲಿ ಇಲ್ಲದಿರುವುದನ್ನು ಕಂಡು ಹುಡುಕಾಟ ನಡೆಸಿದಾಗ ತೋಟದ ಬದಿಯಲ್ಲಿ ಶ್ರೀಧರನ ಮೃತದೇಹ ಪತ್ತೆಯಗಿತ್ತು. ತೋಟದ ಬೇಲಿ ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಕಂಡು ಬಂದಿದ್ದು, ಹಲ್ಲೆ ನಡೆಸಿದ ತಂಡವೇ ರಾತ್ರಿ ಅಕ್ರಮವಾಗಿ ಶೆಡ್‌ಗೆ ಪ್ರವೇಶಿಸಿ ಶ್ರೀಧರ್ ಗೆ ಕೊಲೆ ಮಾಡಿರುವ ಶಂಕೆ ಇದೆ. ಇದಲ್ಲದೆ ಶ್ರೀಧರ್ ಬಳಿಯಿದ್ದ 9500 ರೂ.ಗಳನ್ನು ದೋಚಿರುವುದಾಗಿ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬೆಳಗಾವಿ : ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇದಕ್ಕೂ ಮುನ್ನ ಸಾವರ್ಕರ್ ಸೇರಿದಂತೆ 7 ಮಹನೀರ ಭಾವಚಿತ್ರಗಳನ್ನು ರಾಜ್ಯ ಸರ್ಕಾರ ಅನಾವರಣ ಮಾಡಿದೆ. ವಿರೋಧದ ನಡುವೆಯೂ ಸುವರ್ಣಸೌಧದಲ್ಲಿ ಇಂದು ವೀರ ಸಾವರ್ಕರ್, ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಡಾ.ಬಿ.ಅರ್. ಅಂಬೇಸ್ಕರ್, ಬಸವಣ್ಣ, ಮಹಾತ್ಮ ಗಾಂಧೀಜಿ, ಸರ್ದರ್ ವಲ್ಲಭಬಾಯಿ ಪಟೇಲರ ಭಾವಚಿತ್ರಗಳನ್ನು ಅನಾವರಣ ಮಾಡಲಾಗಿದೆ. ಸ್ಪೀಕರ್ ವಿಶ್ವೇಶರ ಹೆಗಡೆ, ಸಿಎಂ ಬೊಮ್ಮಾಯಿ, ಸಚಿವ ಮಾಧುಸ್ವಾಮಿ ಅವರು ವೀರ ಸಾವರ್ಕರ್, ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಡಾ.ಬಿ.ಆರ್. ಅಂಬೇಡ್ಕರ್, ಬಸವಣ್ಣ, ಮಹಾತ್ಮ ಗಾಂಧೀಜಿ, ಸರ್ದರ್ ವಲ್ಲಭಬಾಯಿ ಪಟೇಲರ ಭಾವಚಿತ್ರಗಳನ್ನು ಅನಾವರಣ ಮಾಡಿದ್ದಾರೆ. ಸುವರ್ಣ ಸೌಧದಲ್ಲಿ ಸಾರ್ವಕರ್ ಫೋಟೋ ಅಳವಡಿಕೆಗೆ ನಮ್ಮ ವಿರೋಧವಿದೆ. ಬ್ರಿಟಿಷರ ಬಳಿ ಕ್ಷಮಾಪಣೆ ಕೇಳಿದ ವ್ಯಕ್ತಿಯ ಫೋಟೋವನ್ನು ಸುವರ್ಣಸೌಧದಲ್ಲಿ ಅಳವಡಿಕೆಗೆ ನಮ್ಮ ವಿರೋಧವಿದೆ ಎಂದು ಕಾಂಗ್ರೆಸ್ ನಾಯಕರು ಧರಣಿ ನಡೆಸುತ್ತಿದ್ದಾರೆ. ಸುವರ್ಣಸೌಧದ ಮೆಟ್ಟಿಲುಗಳ ಮೇಲೆ ಕಾಂಗ್ರೆಸ್ ನಾಯಕರು ಮಹರ್ಷಿ ವಾಲ್ಮೀಕಿ, ಬಸವಣ್ಣ, ಶಿಶುನಾಳ ಷರೀಫ, ಜವಹಾರ್ ಲಾಲ್…
ಮಂಗಳೂರು: ನಗರದ ಹೊರವಲಯದ ಮೂಲ್ಕಿ ಕೆರೆಕಾಡು ಎಂಬಲ್ಲಿ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ತೀವ್ರವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. ಕೆರೆಕಾಡು ಕೆಂಚನಕೆರೆ ನಿವಾಸಿಗಳಾದ ದಿವೇಶ್ ದೇವಾಡಿಗ(38), ರಾಜೇಶ್ ಹಾಗೂ ಯೋಗೇಶ್ ಕುಮಾರ್(46) ಬಂಧಿತ ಆರೋಪಿಗಳು. ಅವರನ್ನು ಬಂಧಿಸಿರುವ ಮುಲ್ಕಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಎಲ್ಲಾ ಮೂವರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ನಡುವೆ ಹಲ್ಲೆಗೊಳಗಾದ ಹಳೆಯಂಗಡಿ ದಾವೂದ್ ಹಕೀಂ(33) ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿದ್ದು, ಆತನನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಾವೂದ್ ಹಕೀಂ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ಐವರ ತಂಡವು ಶನಿವಾರ ಕಂಬಕ್ಕೆ ಕಟ್ಟಿ ಹಾಕಿ ತೀವ್ರ ಹಲ್ಲೆ ನಡೆಸಿತ್ತು. ಬಳಿಕ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಹೊಯ್ಸಳ ಪೊಲೀಸರು, ದಾವೂದ್‌ನನ್ನು ವಶಕ್ಕೆ ಪಡೆದು ಮುಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ…
ಮಂಗಳೂರು: ಈಗಿನ ಜನತೆಗೆ ಹೊಸ ವರ್ಷ ಎಂದರೇ ಮೋಜು, ಮಸ್ತಿ, ಪಾರ್ಟಿ.! ಕ್ಯಾಲೆಂಡರ್ ವರ್ಷ ಅಂತ್ಯಗೊಳ್ಳುತ್ತಿದ್ದು ಯುವಕ ಯುವತಿರು ಮೋಜು ಮಸ್ತಿಗೆ ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಿರುತ್ತಾರೆ.. ಆದರೆ ಇಂತಹ ಅಶ್ಲೀಲ ನೃತ್ಯ ಮತ್ತು ಮಾದಕ ದ್ರವ್ಯಗಳ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದಾಗಿ ವಿಶ್ವ ಹಿಂದೂ ಪರಿಷತ್ ಮಂಗಳೂರು ಆಗ್ರಹ ಮಾಡಿದೆ. ಹೊಸ ವರುಷದ ಹೆಸರಿನಲ್ಲಿ ತಾರೀಕು 31 ಡಿಸೆಂಬರ್ ನಂದು ಹಲವು ಹೋಟೆಲ್, ಪಬ್ ಗಳು ಮತ್ತು ಕೆಲವು ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ, ಅಶ್ಲೀಲ ನೃತ್ಯ ಮತ್ತು ಮಾದಕ ದ್ರವ್ಯಗಳ ಪಾನ ಪಾರ್ಟಿಗಳನ್ನು ಆಯೋಜನೆ ಮಾಡಿದ್ದಾರೆ. ಹೊಸ ವರುಷದ ಹೆಸರಿನಲ್ಲಿ ನಡೆಯುವ ಕಾರ್ಯ ಕ್ರಮಗಳು ಪಾಶ್ಚಾತ್ಯ ಸಂಸ್ಕೃತಿಯಿಂದ ಕೂಡಿದೆ ಎಂದು ಜರಂಗದಳ ತೀವ್ರವಾಗಿ ವಿರೋಧಿಸಿದೆ. ಈಗಾಗಲೇ ಲವ್ ಜಿಹಾದ್ ಹೆಸರಿನಲ್ಲಿ ಮುಗ್ಧ ಹೆಣ್ಣುಮಕಳನ್ನು ಮೊಸಗೊಳಿಸಿ ಅವರನ್ನು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಚೋದನೆ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈಗಾಗಲೇ ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕೆಲವೊಂದು ಯುವಕರು ಇಂತಹ ಕೃತ್ಯಗಳಲ್ಲಿ ಸಕ್ರೀಯರಾಗಿದ್ದು,…
ವಿಯೆಟ್ನಾಂ: ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪತಿಯ ಕೃತ್ಯದಿಂದ ಬೇಸತ್ತ ಪತ್ನಿ ಆತನ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ವಿಯೆಟ್ನಾಂನಲ್ಲಿ ನಡೆದಿದೆ. ಹಾ ಥಿ ನ್ಗುಯೆನ್ ಎಂದು ಗುರುತಿಸಲ್ಪಟ್ಟ ಮಹಿಳೆ ತನ್ನ 29 ವರ್ಷದ ಪತಿ ನ್ಗುಯೆನ್ ವ್ಯಾನ್ ಹೆಚ್ ಅವನ ಮರ್ಮಾಂಗವನ್ನು ಕತ್ತರಿಸಿದ್ದಾಳೆ. ವ್ಯಾನ್ ಹೆಚ್ ತನ್ನ ಮೊದಲ ಪತ್ನಿಯ 15 ವರ್ಷದ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಬಾಲಕಿ ಹಲವು ಬಾರಿ ಹಾ ಥಿಗೆ ದೂರು ನೀಡಿದ್ದಳು. ಆದ್ರೆ, ಇದನ್ನು ಪತಿ ನಿರಾಕರಿಸಿದ್ದ. ಆದ್ರೆ, ಒಂದು ದಿನ ವ್ಯಾನ್ ಹೆಚ್ ಸಿಕ್ಕಿ ಬಿದ್ದಿದ್ದಾನೆ. ಈ ವೇಳೆ ಕೋಪಗೊಂಡ ಮಹಿಳೆ ಚಾಕುವಿನಿಂದ ಮರ್ಮಾಂಗವನ್ನೇ ಕತ್ತರಿಸಿ ಎಸೆದಿದ್ದಾಳೆ. ನಂತ್ರ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಈ ಘಟನೆಯು ಮಾರ್ಚ್ 2022 ರಲ್ಲಿ ವಾಯುವ್ಯ ವಿಯೆಟ್ನಾಂನ ಸೋನ್ ಲಾ ಪ್ರಾಂತ್ಯದಲ್ಲಿ ಸಂಭವಿಸಿದೆ.