ಬೆಳ್ತಂಗಡಿ : ಗಲಾಟೆಯ ವೇಳೆ ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಿ ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಎಂಬಾತನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಬಿಜೆಪಿ ಮುಖಂಡನ ವಿರುದ್ಧ ಮಾನಭಂಗ ಯತ್ನ, ಅವ್ಯಾಚ ಶಬ್ದಗಳಿಂದ ನಿಂದನೆ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆಯ ಮೇಲೆ ಮಾನಭಂಗಕ್ಕೆ ಯತ್ನ ಪ್ರಕರಣ ಸಂಬಂಧ ಆರೋಪಿ ರಾಜೇಶ್ ಎಮ್.ಕೆ ವಿರುದ್ಧ ಜೂ.5ರಂದು ಮಾನಭಂಗ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Author: main-admin
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬಿಜೆಪಿ ಮುಖಂಡ ಹಾಗೂ ಎಸ್‌ಟಿ ಯುವ ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ (33) ಎಂಬವರ ಮೇಲೆ ಜೂ.4ರಂದು ರಾತ್ರಿ ತಲವಾರು ದಾಳಿ ನಡೆಸಿ ಕೊಲೆ ಯತ್ನ ನಡೆಸಿದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.ಕಳೆಂಜ ನಿವಾಸಿ ಕುಶಲಪ್ಪ ಗೌಡ (48) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ರಾಜೇಶ್ ಮೇಲೆ ಕುಶಲಪ್ಪ ಗೌಡ ಕ್ಷುಲ್ಲಕ ಕಾರಣಕ್ಕೆ ಜಾತಿ ನಿಂದನೆ ಮಾಡಿ, ಮರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಚಿನ್ನ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕುಶಲಪ್ಪ ಗೌಡ ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಮಂಗಳೂರು ಸೆಷನ್ಸ್ ಕೋರ್ಟ್ ನ್ಯಾಯಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಇದೀಗ ರಾಜ್ಯದಲ್ಲಿ 15ರಿಂದ 20 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲುವ ನಿರೀಕ್ಷೆ ಹೊಂದಿದ್ದೆವು. ಆದರೆ, ಒಂದು ಸ್ಥಾನದಿಂದ 9 ಸ್ಥಾನ ಗೆಲ್ಲುವ ಮೂಲಕ ಪಕ್ಷ ಉತ್ತಮ ಸಾಧನೆಯನ್ನೇ ಮಾಡಿದೆ. ಅಲ್ಲದೆ, 2019ಕ್ಕಿಂತ ಈ ಬಾರಿ ಶೇ.14ರಷ್ಟು ಮತ ಗಳಿಕೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದೀಗ ಗ್ಯಾರಂಟಿ ಯೋಜನೆಗಳಿಗೆ ಜನ ಮನ್ನಣೆ ದೊರಕಿಲ್ಲ ಅನ್ನೋ ಕಾರಣಕ್ಕೆ ಕಾಂಗ್ರೆಸ್‌ನ ಕೆಲ ನಾಯಕರು ಅನೌಪಚಾರಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಗ್ಯಾರಂಟಿ ಯಯೋಜನೆಗಳ ಕುರಿತಂತೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಗ್ಯಾರಂಟಿ ಯೋಜನೆ ಬಗ್ಗೆ ಪುನರ್ ಪರಿಶೀಲನೆ ನಡೆಯಬೇಕು ಎಂಬ ಅಭಿಪ್ರಾಯವನ್ನು ಬಹುತೇಕ ಶಾಸಕರು ಹೊಂದಿದ್ದಾರೆ ಎಂದು ಮುಖ್ಯಮಂತ್ರಿಯವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಇನ್ನು ಇದಕ್ಕೆ ಒಪ್ಪದ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲಾಗದು ಎಂದು ಈ ನಾಯಕರಿಗೆ ತಿಳಿಸಿದರು ಎಂದು ಮೂಲಗಳು ಹೇಳಿವೆ. ರಾಜ್ಯದ ಎಲ್ಲ ಆರ್ಥಿಕ ಸಂಪನ್ಮಲಗಳನ್ನು ಸರ್ಕಾರ ಗ್ಯಾರಂಟಿ ಯೋಜನೆ…
ಉಳ್ಳಾಲ: ಬಜರಂಗದಳ ಕಾರ್ಯಕರ್ತನಿಗೆ ಸ್ಥಳೀಯ ಸಂಘದ ಸದಸ್ಯರೊಬ್ಬರು ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ.ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ಟಿ (39) ಎಂಬವರ ಮೇಲೆ ಹಲ್ಲೆ ನಡೆದಿದೆ. ಇವರಿಗೆ ಸ್ಥಳೀಯ ಕೇಸರಿ ಮಿತ್ರ ವೃಂದದ ಗೌತಮ್ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಜೂ. 4 ರಂದು ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಹಾಗೂ ಕೇಸರಿ ಮಿತ್ರ ವೃಂದದ ಸದಸ್ಯರ ನಡುವೆ ವಾಗ್ವಾದ ನಡೆದಿತ್ತು. ಈ ಸಂಬಂಧ ಕೆಲಸದಿಂದ ವಾಪಸ್ಸಾಗುತ್ತಿದ್ದ ಪ್ರವೀಣ್ ಪೂಜಾರಿ ಅವರನ್ನು ಅಡ್ಡಗಟ್ಟಿದ ಗೌತಮ್ ಹಲ್ಲೆ ನಡೆಸಿ ದೂಡಿದ್ದು, ಪರಿಣಾಮ ಚರಂಡಿಗೆ ಬಿದ್ದ ಪ್ರವೀಣ್ ತಲೆಗೆ ಗಾಯವಾಗಿದೆ. ಗಾಯಾಳುವನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗಡ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಗೌತಮ್ ಕಾಂಗ್ರೆಸ್ ಕಾರ್ಯಕರ್ತನಾಗಿದ್ದು, ಇದರಿಂದ ಪಟಾಕಿ ಸಿಡಿಸಿದ ದ್ವೇಷಕ್ಕೆ ಹಲ್ಲೆ ನಡೆಸಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ವೈರಲ್ ಆಗಿದೆ ಉಳ್ಳಾಲ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ನವದೆಹಲಿ: ಇಂದು ಎನ್ ಡಿಎ ಸಂಸದ ಸಭೆ ನರೇಂದ್ರ ಮೋದಿಯವರ ನಿವಾಸದಲ್ಲಿ ನಡೆಯಿತು. ಈ ಸಭೆಯಲ್ಲಿ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು, ಶಿಂಧೆ ಬಣದಿಂದಲೂ ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ರಚಿಸೋದಕ್ಕೆ ಬೆಂಬಲ ನೀಡಿ, ಅಧಿಕೃತ ಪತ್ರ ನೀಡಿದ್ದಾವೆ. ಹೀಗಾಗಿ ಇಂದು ಸಂಜೆ 7.30ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಲಿರುವಂತ ಮೋದಿ, ಸರ್ಕಾರ ರಚಿಸೋದಕ್ಕೆ ಹಕ್ಕು ಮಂಡನೆ ಮಾಡಲಿದ್ದಾರೆ. ನವದೆಹಲಿಯ ಮೋದಿ ನಿವಾಸದಲ್ಲಿ ಇಂದು ಎನ್ ಡಿಎ ಮೈತ್ರಿಕೂಟಗಳ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್, ಶಿಂಧೆ ಸೇರಿದಂತೆ ವಿವಿಧ ನಾಯಕರು ಭಾಗಿಯಾಗಿದ್ದರು. ಅಮಿತ್ ಶಾ ಸೇರಿದಂತೆ ವಿವಿಧ ಬಿಜೆಪಿ ಸಂಸದರು ಭಾಗಿಯಾಗಿದ್ದರು. ಈ ಸಭೆಯಲ್ಲಿ ಎನ್ ಡಿಎ ಪಕ್ಷದಿಂದ ಕೇಂದ್ರದಲ್ಲಿ ಸರ್ಕಾರ ರಚಿಸೋದಕ್ಕೆ ಬೆಂಬಲಿಸಿ ಪತ್ರವನ್ನು ಮಿತ್ರ ಪಕ್ಷಗಳಿಂದ ನೀಡಲಾಗಿದೆ. ಮಿತ್ರ ಪಕ್ಷಗಳು ಬಿಜೆಪಿಗೆ ಬೆಂಬಲಿಸಿದಂತ ಪತ್ರ ಮೋದಿಯವರ ಕೈ ಸೇರಿದೆ. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅಲ್ಲದೇ ಶಿಂಧೆ ಬಣದಿಂದಲೂ ಎನ್ ಡಿಎಗೆ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಜೂನ್ 8 ರ ಶನಿವಾರ ಸಂಜೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ. ಈ ಮೂಲಕ ನರೇಂದ್ರ ಮೋದಿಯವರು 3 ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಇಂದು ಸಂಜೆ ರಾಷ್ಟ್ರಪತಿಗಳಿಗೆ ಎನ್‌ಡಿಎ ಮೈತ್ರಿಕೂಟದ ಬೆಂಬಲ ಪತ್ರ ನೀಡುವ ಸಾಧ್ಯತೆ ಇದೆ. ಪ್ರಧಾನಿ ಮೋದಿ ಕೊನೆಯದಾಗಿ ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಸಿದರು. ಇಂದಿಗೆ 17 ನೇ ಲೋಕಸಭೆ (17th Lok Sabha) ವಿಸರ್ಜನೆ ಮಾಡಲಾಗಿದೆ. ಜೂನ್ 7 ರ ಶುಕ್ರವಾರ ಮಧ್ಯಾಹ್ನ 2.30 ಕ್ಕೆ ಸಂಸತ್ ಭವನದಲ್ಲಿ ಎನ್‌ಡಿಎ ಸಂಸದರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮತ್ತು ವಿವಿಧ ಪಕ್ಷಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಮರುದಿನ ಅಂದರೆ ಜೂನ್ 8 ರಂದು ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಪ್ರಮಾಣ ವಚನ ಕಾರ್ಯಕ್ರಮ ಸಂಜೆ 7 ರಿಂದ 8…
ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ ವ್ಯಕ್ತಿಯೋರ್ವರಿಗೆ 48.36 ಲ.ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯೋರ್ವರು ಫೇಸ್‌ಬುಕ್‌ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆಗೆ ಸಂಬಂಧಿಸಿದ ಜಾಹೀರಾತು ನೋಡಿ ಅದರಲ್ಲಿ ಕೇಳಿದ ಮಾಹಿತಿಯನ್ನು ಜಾಹೀರಾತುದಾರರೊಂದಿಗೆ ಹಂಚಿಕೊಂಡಿದ್ದರು. ಅನಂತರ ಅವರನ್ನು ವಾಟ್ಸ್ ಆ್ಯಪ್ ಗ್ರೂಪ್‌ವೊಂದಕ್ಕೆ ಸೇರ್ಪಡೆಗೊಳಿಸಲಾಯಿತು. ಅದರಲ್ಲಿ ಹೂಡಿಕೆಯ ಬಗ್ಗೆ ಗ್ರೂಪ್ ಅಡ್ಮಿನ್‌ಗಳು ಮಾಹಿತಿ ಹಂಚಿಕೊಳ್ಳುತ್ತಿದ್ದರು. ಬಳಿಕ ಲಿಂಕ್ ಕಳುಹಿಸಿದ್ದರು. ಇದನ್ನು ನಂಬಿದ ದೂರುದಾರರು ಖಾತೆ ತೆರೆದಿದ್ದರು. ಆ ಬಳಿಕ ಷೇರುಗಳ ಖರೀದಿಗಾಗಿ ಮೇ 11ರಿಂದ ಮೇ 29ರ ಅವಧಿಯಲ್ಲಿ ಒಟ್ಟು 48.36 ಲ.ರೂ.ಗಳನ್ನು ವರ್ಗಾಯಿಸಿದ್ದರು. ಅವರು ಇನ್‌ಸ್ಟಾಲ್ ಮಾಡಿಕೊಂಡ ಆ್ಯಪ್‌ನಲ್ಲಿ ನೋಡಿದಾಗ ಅವರ ಖಾತೆಯಲ್ಲಿ 2.01 ಕೋ.ರೂ. ಜಮೆಯಾಗಿರುವುದು ತೋರಿಸುತ್ತಿತ್ತು. ಆದರೆ ಅದನ್ನು ಪಡೆಯಲು ಪ್ರಯತ್ನಿಸಿದಾಗ ಅವರು ಇನ್ನಷ್ಟು ಹಣ ಹೂಡಿಕೆ ಮಾಡುವಂತೆ ಒತ್ತಾಯಿಸಲಾಯಿತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬೆಳ್ತಂಗಡಿ: ಯುವ ಉದ್ಯಮಿ, ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ(33) ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ. ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ ನಡೆಸಿದವರು ಎಂದು ಆರೋಪಿಸಲಾಗಿದೆ.ಸಂಜೆ ತನ್ನ ಅಂಗಡಿ ಮುಚ್ಚಿ ಮನೆಗೆ ಹೊರಟಿದ್ದ ರಾಜೇಶ್ ಮೇಲೆ ದಾಳಿ ನಡೆಸಲಾಗಿದೆ. ತಕ್ಷಣ ಅವರನ್ನು ಉಜಿರೆಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಆಸ್ಪತ್ರೆಗೆ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ವಸಂತ್ ಅಚಾರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹೊರತುಪಡಿಸಿ ನೋಟಾಗೆ ಅತೀ ಹೆಚ್ಚು ಮತ ಚಲಾವಣೆಯಾಗಿದೆ. ಈ ಮೂಲಕ ಉಭಯ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಮತ ಗಳಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ನೋಟಾ ಮೂರನೇ ಸ್ಥಾನ ಪಡೆದುಕೊಂಡಿದೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನೋಟಾಗೆ 23,576 ಮತಗಳು ಚಲಾವಣೆಯಾಗಿದೆ. ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ನೋಟಾಗೆ 11,269 ಮತಗಳು ಬಿದ್ದಿದೆ. ದಕ್ಷಿಣ ಕನ್ನಡ ಕ್ಷೇತ್ರದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಮತಗಳು ನೋಟಾಕ್ಕೆ ಚಲಾವಣೆಯಾಗಿವೆ. ಬೆಳ್ತಂಗಡಿಯಲ್ಲಿ 7,691 ಮತ, ಮೂಡುಬಿದಿರೆ 2,166, ಮಂಗಳೂರು ನಗರ ಉತ್ತರ 2,019, ಮಂಗಳೂರು ನಗರ ದಕ್ಷಿಣ 1,551, ಮಂಗಳೂರು 892, ಬಂಟ್ವಾಳ 2,353, ಪುತ್ತೂರು 2302, ಸುಳ್ಯ 4,541 ಮತಗಳು ನೋಟಾಕ್ಕೆ ಬಿದ್ದಿದೆ. ಅಂಚೆ ಮತದಾನದಲ್ಲೂ 61 ಮತಗಳು ನೋಟಾಕ್ಕೆ ಬಂದಿದೆ.ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕುಂದಾಪುರ 1,578, ಉಡುಪಿ 1,778, ಕಾಪು 1,523, ಕಾರ್ಕಳ 2,780, ಶೃಂಗೇರಿ 943, ಮೂಡಿಗೆರೆ…
ಮಂಗಳೂರು : ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮುಲ್ಲೈ ಮುಗಿಲನ್ ಎಂಪಿ ಅವರು ಬಿಜೆಪಿ ಪಕ್ಷದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಚುನಾವಣಾ ವೀಕ್ಷಕರಾದ ಆಕಾಂಕ್ಷ ರಂಜನ್, ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಪುತ್ತೂರು ಉಪ ವಿಭಾಗ ಅಧಿಕಾರಿ ಜುಬಿನ್ ಮೋಹ ಪಾತ್ರ, ಪ್ರೊಬೆಷನರಿ ಐಎಎಸ್ ಅಧಿಕಾರಿ ಪಿ. ಶ್ರವಣ್ ಕುಮಾರ್ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.










