ದೋಹಾ: ಡಿಸೆಂಬರ್ 18 ರಂದು ನಡೆಯುವ ಫಿಫಾ ವಿಶ್ವಕಪ್ 2022 ರ ಫೈನಲ್ ಪಂದ್ಯ ತನ್ನ ಕೊನೆಯ ಆಟ ಎಂದು ಅರ್ಜೆಂಟಿನಾ ತಂಡದ ನಾಯಕ ಹಾಗೂ ಖ್ಯಾತ ಫುಟ್‌ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ತಿಳಿಸಿದ್ದಾರೆ. ಆ ಮೂಲಕ ತಮ್ಮ ನಿವೃತ್ತಿಯನ್ನು ಖಚಿತಪಡಿಸಿದ್ದಾರೆ. ಫೈನಲ್‌ನಲ್ಲಿ ನನ್ನ ಕೊನೆಯ ಪಂದ್ಯವನ್ನು ಆಡುವ ಮೂಲಕ ವಿಶ್ವಕಪ್ ಪ್ರಯಾಣವನ್ನು ಪೂರ್ಣಗೊಳಿಸಲು ಇಚ್ಛಿಸಿದ್ದೇನೆ ಎಂದು ಮೆಸ್ಸಿ ತಿಳಿಸಿದ್ದಾರೆ. ಹಲವು ವರ್ಷಗಳ ನಂತರ ಮುಂದಿನ ವಿಶ್ವಕಪ್ ಪಂದ್ಯ ನಡೆಯುತ್ತದೆ. ಅಲ್ಲಿ ಇಂಥಹ ಸಾಧನೆ ಮಾಡಲು ಆಗುವುದಿಲ್ಲ ಎಂದು ನನಗೆ ಎನ್ನಿಸುತ್ತಿದೆ. ಹೀಗಾಗಿ ವಿದಾಯ ಹೇಳುವುದು ಉತ್ತಮ ಎನಿಸುತ್ತಿದೆ ಎಂದು ಮೆಸ್ಸಿ ಸ್ಪಷ್ಟಪಡಿಸಿದ್ದಾರೆ. 35 ವರ್ಷ ವಯಸ್ಸಿ ಮೆಸ್ಸಿ ಈ ಬಾರಿ ತಮ್ಮ ಐದನೇ ವಿಶ್ವಕಪ್‌ನಲ್ಲಿ ಆಡುತ್ತಿದ್ದಾರೆ.
Author: main-admin
ಮಂಗಳೂರು: ಡಿ.16ರವರೆಗೆ ಮ್ಯಾಂಡಸ್ ಚಂಡಮಾರುತದಿಂದ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗಿರುತ್ತದೆ, ಈ ವೇಳೆ ಸಂಭವಿಸುವ ಅನಾಹುತವನ್ನು ತಡೆಗಟ್ಟಲು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಂಗಳೂರು ಕೋಸ್ಟ್‍ಗಾರ್ಡ್ ನೀಡಿರುವ ಹವಾಮಾನ ಮುನ್ಸೂಚನೆ ಆಧರಿಸಿ ಅವರು ಎಚ್ಚರಿಸಿದ್ದಾರೆ
ಮಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಶಾರೀಕ್ ಆರೋಗ್ಯದಲ್ಲಿ ಶೇ. 80ರಷ್ಟು ಚೇತರಿಕೆ ಕಂಡಿದೆ. ಮಂಗಳೂರಿನ ಕಮಕನಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ರೂವಾರಿ ಉಗ್ರ ಶಾರೀಕ್ ಚಿಕಿತ್ಸೆ ಪಡೆಯುತ್ತಿದ್ದು, ನಡೆಯುವ ಸ್ಥಿತಿಗೆ ತಲುಪಿದ್ದಾನೆ. ಈ ಹಿನ್ನೆಲೆಯಲ್ಲಿ ಎನ್‍ಐಎ ಅಧಿಕಾರಿಗಳು ಇಂದು ವೈದ್ಯರ ಸಮ್ಮತಿಯ ಮೇರೆಗೆ ಶಾರೀಕ್‍ನನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೇ ಪೊಲೀಸ್ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ರಿಕ್ಷಾದಲ್ಲಿ ಸ್ಫೋಟಗೊಂಡು ಸಿಡಿದ ಕುಕ್ಕರ್ ಮುಚ್ಚಳ ಶಾರೀಕ್ ಕುತ್ತಿಗೆಗೆ ಬಡಿದಿತ್ತು. ಇದರಿಂದಾಗಿ ಶಾರೀಕ್‌ನ ಕೈ, ದೇಹಕ್ಕೆ ಬೆಂಕಿ ಬಿದ್ದರಿಂದ ಯಾವುದೇ ಕ್ಷಣದಲ್ಲಿ ಸೋಂಕು ತಗುಲಿ ಆರೋಗ್ಯ ಏರುಪೇರಾಗುವ ಸಾಧ್ಯತೆಯಿತ್ತು.
ಬೆಳ್ತಂಗಡಿ : ಕಾಶಿಪಟ್ಣ ಗ್ರಾಮದಲ್ಲಿ ಆಟೋ ಮತ್ತು ಸ್ಕೂಟರ್ ನಡುವೆ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ನಾರಾವಿ ಗ್ರಾಮದ ನಿವಾಸಿ, ನಿತ್ಯಾನಂದ ಪೂಜಾರಿ (48) ಮೃತಪಟ್ಟಿದ್ದಾರೆ. ಕೊಕ್ರಾಡಿ– ಶಿರ್ತಾಡಿ ರಸ್ತೆಯ ಪೆರಂದಡ್ಕ ಎಂಬಲ್ಲಿ ನಿತ್ಯಾನಂದ ಪೂಜಾರಿ ಅವರು ಸ್ಕೂಟರ್‌ನಲ್ಲಿ ಬರುತ್ತಿದ್ದ ವೇಳೆ. ವಿರುದ್ಧ ದಿಕ್ಕಿನಿಂದ ಬಂದ ಆಟೋ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ನಿತ್ಯಾನಂದ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ವೇಣೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ವ್ಯಾಪಾರಿಯೊಬ್ಬರ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನುಮಾನಾಸ್ಪದ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಂಗಳೂರು:ಪಂಪ್ ವೆಲ್ ಬಳಿಯ ಲಾಡ್ಜ್ ವೊಂದರಲ್ಲಿ ಕಾಸರಗೋಡಿನ ವ್ಯಕ್ತಿಯೊಬ್ಬರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಕಾಸರಗೋಡು ಪೈವಳಿಕೆ ನಿವಾಸಿ ಅಬ್ದುಲ್ ಕರೀಂ (55)ಮೃತರು.ಮೃತದೇಹದ ಬಳಿ ಇದ್ದ ಲೈಸನ್ಸ್ ಆಧಾರದಲ್ಲಿ ಗುರುತು ಪತ್ತೆ ಹಚ್ಚಲಾಗಿದೆ.ಮೃತರನ್ನು ಮೂಲತಃ ಕುಂಬಳೆ ನಿವಾಸಿ ಅಬ್ದುಲ್ ಕರೀಂ ಎಂದು ಗುರುತಿಸಲಾಗಿದೆ. ನಗರದಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದ ಇವರು ಸೋಮವಾರ ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ರೂಮ್ ಪಡೆದಿದ್ದರು. ಅವರ ರೂಮ್ ನಿಂದ ಮೊಬೈಲ್ ಪೋನ್ ನಿರಂತರವಾಗಿ ರಿಂಗ್ ಆಗುತ್ತಿರುವುದನ್ನು ಗಮನಿಸಿದ ಲಾಡ್ಜ್ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಈ ಘಟನೆ ಬೆಳಕಿಗೆ ಬಂದಿದೆ ಎಂದು ಸ್ಥಳಕ್ಕೆ ಭೇಟಿ ಪರಿಶೀಲಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಸಿಸಿಟಿವಿಯಲ್ಲಿ ರೂಂ ಗೆ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಬಂದಿರುವುದು ದಾಖಲಾಗಿದೆ. ಸಾವಿಗೆ ನಿಖರ…
ಕೊಣಾಜೆ: ಏಳನೇ ತರಗತಿ ವಿದ್ಯಾರ್ಥಿನಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಶೀರ್(28) ಎಂಬಾತ ಆರೋಪಿತ ವ್ಯಕ್ತಿ. ತೆಂಗಿನಕಾಯಿ ಕೀಳುವ ಕೆಲಸ ಮಾಡುವ ಈತ ಬಾಲಕಿಯ ಮನೆಮಂದಿಗೆ ಪರಿಚಿತನಾಗಿದ್ದ. ರವಿವಾರ ಮಧ್ಯಾಹ್ನ ಮನೆಯಲ್ಲಿ ಬಾಲಕಿ ಒಂಟಿಯಾಗಿದ್ದ ವೇಳೆ ತೆಂಗಿನಕಾಯಿ ಕೀಳಲೆಂದು ಈತ ಬಂದಿದ್ದ. ಈ ವೇಳೆ ಬಾಲಕಿ ಒಂಟಿಯಾಗಿರುವುದನ್ನು ಕಂಡು ಆಕೆಯ ಕೈ ಹಿಡಿದು ಹೊರಗೆ ಎಳೆದಿದ್ದಾನೆ ಎಂದು ಆರೋಪಿಸಲಾಗಿದೆ. ಕೈ ಹಿಡಿದೆಳೆದ ವೇಳೆ ಬಾಲಕಿ ಕಿರುಚಾಡಲು ಆರಂಭಿಸಿದ್ದು, ಮಾಹಿತಿ ಪಡೆದ ಸ್ಥಳೀಯರು ಮನೆಯತ್ತ ಆಗಮಿಸುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು: ಕಳ್ಳತನಕ್ಕೆ ಬಂದಿದ್ದ ಕಳ್ಳನ ಮೇಲೆ ಮನೆ ಮಾಲೀಕ ಗುಂಡು ಹಾರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಕಳ್ಳನೊಬ್ಬ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ಇಂದು ಬೆಳಗಿನ ಜಾವ 2:30ರ ಸುಮಾರಿಗೆ ಈ ಘಟನೆ ನಡೆದಿದೆ. ಮನೆ ಮಾಲೀಕ ಕಳ್ಳನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕಳ್ಳ ಗುಂಡೇಟಿನಿಂದ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗಲಕೋಟೆ ಮೂಲದ ಲಕ್ಷ್ಮಣ ಗುಂಡೇಟು ತಗುಲಿ ಗಾಯಗೊಂಡಿರುವ ಆರೋಪಿ. ಸ್ಥಳಕ್ಕೆ ಸಂಪಿಗೆಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಳ್ಳಾಲ: ಮಂಗಳೂರು ಹೊರವಲಯದ ಕುತ್ತಾರು ಸಮೀಪದ ಮದಕ ಕ್ವಾಟ್ರಗುತ್ತು ಬಳಿ ಸೋಮವಾರ ತಡರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಸಾವನ್ನಪ್ಪಿ, ಸಹಸವಾರ ಗಾಯಗೊಂಡಿದ್ದಾರೆ. ಬೆಂಗಳೂರು ಯಶವಂತಪುರ ನಿವಾಸಿ ಶಿಕ್ಷಕ ಸಿದ್ದರಾಜು ಎಂಬವರ ಪುತ್ರ ನಿಶಾಂತ್ ( 22) ಮೃತರು. ಸಹಸವಾರ ಬೀದರ್ ನಿವಾಸಿ ಶಕೀಬ್ ಗಾಯಗೊಂಡವರು. ಇಬ್ಬರೂ ನಾಟೆಕಲ್ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ದ್ವಿತೀಯ ವರ್ಷದ ಇಂಟರ್ನ್‌ಷಿಪ್ ನಡೆಸುತ್ತಿದ್ದರು. ಕುತ್ತಾರು ಸಿಲಿಕೋನಿಯಾ ಫ್ಲ್ಯಾಟ್‌ನಲ್ಲಿ ವಾಸಿಸುತ್ತಿದ್ದ ಇಬ್ಬರೂ ರಾತ್ರಿ 250 ಸಿಸಿ ಇರುವ ಬೈಕಿನಲ್ಲಿ ರೈಡ್ ತೆರಳುವಾಗ ರಸ್ತೆಯಲ್ಲಿದ್ದ ಹಂಪ್ ಗಮನಕ್ಕೆ ಬಾರದೇ ಅಪಘಾತ ಸಂಭವಿಸಿದೆ. ಹಂಪ್‌ನಿಂದ ಹಾರಿದ ಬೈಕ್ ಸುಮಾರು ದೂರ ಹೋಗಿ ಬಿದ್ದಿದೆ. ಇಬ್ಬರೂ ಎಸೆಯಲ್ಪಟ್ಟು ಸವಾರ ನಿಶಾಂತ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಚ್ಚು ವಾಹನ ಸಂಚಾರವಿಲ್ಲದ ರಸ್ತೆಯಾಗಿದ್ದರಿಂದ ರಾತ್ರಿ 12.15 ರ ವೇಳೆಗೆ ಅಪಘಾತ ಸಂಭವಿಸಿದ್ದರೂ ಸ್ವಲ್ಪ ಹೊತ್ತಿನ ಬಳಿಕ ಸ್ಥಳೀಯರ ಗಮನಕ್ಕೆ ಬಂದು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್…
ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇಲ್ತಾಜೆ ಸಮೀಪ ಮೃತದೇಹವೊಂದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಕೇಲ್ತಾಜೆ ಸಮೀಪ ರಬ್ಬರ್ ತೋಟದ ಚರಂಡಿಯಲ್ಲಿ ಸುಟ್ಟ ಮೃತದೇಹ ಪತ್ತೆಯಾಗಿದೆ. ಮೃತದೇಹ ಸಂಪೂರ್ಣವಾಗಿ ಕೊಳೆತ ಹೋಗಿದ್ದು, ಯಾವುದೇ ಗುರುತು ಸಿಗದ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ತಜ್ಞರು ಭೇಟಿ ನೀಡುವ ನಿರೀಕ್ಷೆಯಿದೆ. ಕಟ್ಟಿಗೆ ಹಾಕಿ ಸುಟ್ಟ ರೀತಿಯಲ್ಲಿ ಮೃತದೇಹವಿದ್ದು ವಾಸನೆ ಬಂದಾಗ ಹತ್ತಿರದ ಮನೆಯವರು ಬಂದು ನೋಡಿದಾಗ ಮೃತದೇಹ ಕಂಡು ಬಂದಿದೆ.
ಪಡುಬಿದ್ರಿ: ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು, 7 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಉಚ್ಚಿಲದಲ್ಲಿ ಸೋಮವಾರ ನಡೆದಿರುವುದಾಗಿ ವರದಿಯಾಗಿದೆ. ಉಚ್ಚಿಲದ ನಿವಾಸಿ ವಿಮಲಾ ಸಿ.ಪುತ್ರನ್ ಮಾಲಕತ್ವದ ಶ್ರೀಗಿರಿಜಾ ದೋಣಿಯು ಸಮುದ್ರದಲ್ಲಿ ಮುಳುಗಿದ್ದು, ದೋಣಿಯಲ್ಲಿದ್ದ ಬಲೆ ಹಾಗೂ ಹೈಸ್ಪೀಡ್ ಇಂಜಿನ್ ಸಮುದ್ರ ಪಾಲಾಗಿದೆ. ದೋಣಿಗೆ ಹಾನಿ ಉಂಟಾಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ. ಸೋಮವಾರ ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ಉಚ್ಚಿಲದ ಶ್ರೀ ಗಿರಿಜಾ ದೋಣಿಯಲ್ಲಿ ೭ ಮಂದಿ ಮೀನುಗಾರಿಕೆಗೆ ತೆರಳಿದ್ದರು. ಚಂಡಮಾರುತದ ಪ್ರಭಾವದಿಂದಾಗಿ ಸಮುದ್ರ ಪ್ರಕ್ಷುಬ್ದಗೊಂಡು ದೋಣಿ ಮುಳುಗಿದೆ. ಮೀನುಗಾರಿಕೆ ನಡೆಸುತ್ತಿದ್ದ ದೋಣಿಗಳಲ್ಲಿ 7 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಘಟನೆಯಲ್ಲಿ ಸುಮಾರು ಆರೂವರೆ ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಮಾಲಕರು ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕಾಪು ಶಾಸಕ ಲಾಲಾಜಿ ಮೆಂಡನ್ ರವರು ಭೇಟಿ ನೀಡಿ ಪರಿಹಾರ ದೊರಕಿಸುವ ಭರವಸೆ ನೀಡಿದ್ದಾರೆ