Author: main-admin

ಬೆಂಗಳೂರು : ಬೆಂಗಳೂರು ಕುಂದಲಹಳ್ಳಿ ಗೇಟ್ ಬಳಿ ಬೇಕರಿಯೊಂದಕ್ಕೆ ನುಗ್ಗಿ ಬೈಂದೂರು ಮೂಲದ ಹುಡುಗರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪುಡಿರೌಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಡೆಲಿವರಿ ಬಾಯ್ ಕಾರ್ತಿಕ್(20), ಅಲ್ಯೂಮಿನಿಯಂ ವರ್ಕ್ ಮಾಡುವ ಸಲ್ಮಾನ್(20) ಖಾಸಗಿ ಹೊಟೇಲ್ ಮ್ಯಾನೇಜರ್ ಕಾರ್ತಿಕ್(23) ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ವೈಟ್‌ಫೀಲ್ಡ್ ಡಿಸಿಪಿ ಗಿರೀಶ್ ತಿಳಿಸಿದ್ದಾರೆ. ಉಡುಪಿಯ ಬೈಂದೂರು ಮೂಲದ ನವೀನ್ ಕುಮಾರ್ ಹಾಗೂ ಪ್ರಜ್ವಲ್ ಶೆಟ್ಟಿ, ನಿತೀನ್ ಶೆಟ್ಟಿ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಈ ಘಟನೆ ಅಂಗಡಿಯಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಡಿ.8 ರಾತ್ರಿ 11.30 ರ ಸಮಯದಲ್ಲಿ 7-8 ಜನರ ರೌಡಿಗಳ ಗುಂಪು ಕುಂದಲಹಳ್ಳಿ ಗೇಟ್ ಬಳಿಯಿರುವ ಬ್ರಹ್ಮಲಿಂಗೇಶ್ವರ ಬೇಕರಿಗೆ ಟೀ ಕುಡಿಯಲು ಮತ್ತು ಸಿಗರೇಟ್ ಸೇದಲು ಹೋಗಿದ್ದಾರೆ. ಬೇಕರಿಯವರು ಸಿಗರೇಟ್ ನೀಡಿ ಹಣ ಕೇಳಿದ್ದಾರೆ. ಹಣ ಕೇಳಿದ್ದಕ್ಕೆ ಬೇಕರಿ ಹುಡುಗರಿಗೆ ಪುಡಿ ರೌಡಿಗಳು ಅವ್ಯಾಚ್ಯ…

Read More

ಉಡುಪಿ : ಉಡುಪಿಯಲ್ಲಿ ಜಾತ್ರಾ ಮಹೋತ್ಸವದಲ್ಲಿ ಧರ್ಮದಂಗಲ್ ಮುಂದುವರೆದಿದ್ದು, ಕೊಟೇಶ್ವರ ಹಬ್ಬದ ಬಳಿಕ ಇದೀಗ ಬೈಂದೂರಿನ ಉಪ್ಪುಂದ ದುರ್ಗಾಪರಮೇಶ್ವರಿ ವಾರ್ಷಿಕ ಜಾತ್ರೆಯಲ್ಲಿ ಧರ್ಮದಂಗಲ್ ಮುಂದುವರೆದಿದೆ. ದೇವಸ್ಥಾನ ವ್ಯಾಪ್ತಿಯಲ್ಲಿ ಅಂಗಡಿಯಿಟ್ಟು ಹಿಂದೂಗಳು ವ್ಯಾಪಾರ ಮಾಡುತ್ತಿದ್ದು, ಹಿಂದೂಗಳ ಅಂಗಡಿಗಳಿಗೆ ಕೇಸರಿ ಬಾವುಟವನ್ನು ಹಿಂದೂ ಸಂಘಟನೆಗಳು ಹಾಕಿದ್ದು, ದೇವಸ್ಥಾನದ ವ್ಯಾಪ್ತಿಯಿಂದ ಹೊರಗೆ ಮುಸಲ್ಮಾನರಿಂದ ವ್ಯಾಪಾರ ವಹಿವಾಟು ನಡೆಯುತ್ತಿದೆ. ದೇವಸ್ಥಾನದ ಹೊರಗೆ ಇರುವ ಖಾಸಗಿ ಜಮೀನಿನಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ನಡೆಸುತ್ತಿದ್ದಾರೆ. ಮುಂದಿನ ವರ್ಷದಿಂದ ರಥ ಸಂಚರಿಸುವ ವ್ಯಾಪ್ತಿಯಲ್ಲಿ ಎಲ್ಲೂ ಮುಸಲ್ಮಾನರಿಗೆ ಅವಕಾಶ ಕೊಡಬಾರದು, ಮುಂದಿನ ವರ್ಷದಿಂದ ಕಟ್ಟುನಿಟ್ಟಿನ ನಿಯಮ ಜಾರಿಗೆ ಬರಬೇಕು, ಹಿಂದುಗಳ ಜಾತ್ರೆಯಲ್ಲಿ ಹಿಂದೂಯೇತರರಿಗೆ ಅವಕಾಶ ಕೊಡಬಾರದು ಎಂದು ಹಿಂದೂ ಸಂಘಟನೆಯ ಮುಖಂಡ ನವೀನ್ ಚಂದ್ರ ಉಪ್ಪುಂದ ಹೇಳಿಕೆ ನೀಡಿದ್ದಾರೆ.

Read More

ಉಡುಪಿ: ಖಾಸಗಿ ಬಸ್ -ಕಾರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನಲ್ಲಿ ನೆಲ್ಲಿಕಾರು ಗ್ರಾಮದ ಸಮೀಪ ನಡೆದಿದೆ. ನಾಗರಾಜು(40), ಪ್ರತ್ಯುಷಾ(32) ಹಾಗೂ ಎರಡು ವರ್ಷದ ಮಗು ಸಾವನ್ನಪ್ಪಿದವರು ಎಂದು ಹೇಳಲಾಗಿದೆ. ಧರ್ಮಸ್ಥಳದಿಂದ ಶೃಂಗೇರಿಗೆ ತೆರಳುತ್ತಿದ್ದಾಗ ಮಾರ್ಗಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಡುಪಿಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಕಾಸರಗೋಡು: ಮಂಗಳೂರಿನಲ್ಲಿ ಕುಕ್ಕರ್‌ ಪ್ರಕರಣದ ಆರೋಪಿ ಶಾರೀಕ್‌ ಕೊಚ್ಚಿಯಲ್ಲಿ ವಿದೇಶಿಗ ಸಹಿತ ನಾಲ್ವರ ಸಂಪರ್ಕದಲ್ಲಿದ್ದನೆಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌.ಐ.ಎ.) ಅವರ ಗುರುತು ಪತ್ತೆಹಚ್ಚಿದ್ದು ಯಾವುದೇ ಮಾಹಿತಿ ನೀಡಲು ನಿರಾಕರಿಸಿದೆ. ಸ್ಫೋಟದ ಮುನ್ನ ಕೊಚ್ಚಿಗೆ ಹೋಗಿದ್ದು, ಅಲ್ಲಿ ವ್ಯವಹಾರ ನಡೆಸಿದವರ ಪೈಕಿ ನಾಲ್ವರ ಮಾಹಿತಿ ಲಭಿಸಿದೆ. ಇವರಲ್ಲಿ ಓರ್ವ ವಿದೇಶಿಗ, ಇಬ್ಬರು ಕೇರಳೀಯರು ಮತ್ತು ತಮಿಳುನಾಡು ನಿವಾಸಿಯಾಗಿದ್ದಾನೆ. ಇವರ ಮಾಹಿತಿಯನ್ನು ಬಹಿರಂಗ ಮಾಡಿಲ್ಲ. ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಹಸ್ತಾಂತರಿಸ ಲಾಗಿದ್ದರೂ ಕರ್ನಾಟಕ ವಿಶೇಷ ತನಿಖಾ ತಂಡ ಈಗಲೂ ತನಿಖೆಯನ್ನು ಮುಂದುವರಿಸುತ್ತಿದೆ. ಕೇರಳದಲ್ಲಿ ನಡೆಸುತ್ತಿರುವ ತನಿಖೆಗೆ ಕೇರಳ ಪೊಲೀಸರು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ತನಿಖಾತಂಡ ಕಳೆದ 2 ವಾರಗಳಿಂದ ಕೊಚ್ಚಿಯಲ್ಲೇ ಠಿಕಾಣಿ ಹೂಡಿದ್ದು, ಅಗತ್ಯದ ಪುರಾವೆ, ಮಾಹಿತಿ ಗಳನ್ನು ಕಲೆ ಹಾಕುತ್ತಿದೆ. ತನಿಖಾ ತಂಡಕ್ಕೆ ಕೇರಳ ಪೊಲೀಸ್‌ ವಿಭಾಗಗಳ ಓರ್ವ ಡಿವೈಎಸ್‌ಪಿ ಮತ್ತು ಇಬ್ಬರು ಎಸ್‌ಐಗಳು ನೆರವು ಹಾಗೂ ಸಹಕಾರ ನೀಡುತ್ತಿದ್ದಾರೆ. ಶಾರೀಕ್‌ ಸಂಪರ್ಕ ದಲ್ಲಿದ್ದವರ ಪೈಕಿ ಕೇರಳೀಯರಾದ ಇಬ್ಬರು ದೀರ್ಘ‌ ಕಾಲದಿಂದ…

Read More

ಬೆಂಗಳೂರು‌ : ಸಿಲಿಕಾನ್‌ ಸಿಟಿಯ ವಾಹನ ಸವಾರರೇ ಎಚ್ಚರ.! ಇನ್ಮುಂದೆ ವಾಹನಗಳ ಮೇಲೆ ದಂಡ ಬಾಕಿಯಿದ್ರೆ ಸಿಗಲ್ಲ ಇನ್ಶೂರೆನ್ಸ್ ಕ್ಯಾನ್ಸಲ್ ಆಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಒಂದೆಡೆ ದಿನದಿಂದ ದಿನಕ್ಕೆ ವಾಹನ ಸಂಖ್ಯೆ ಹೆಚ್ಚಾಗ್ತಿದ್ದಂತೆ ನಿಯಮ ಉಲ್ಲಂಘನೆ ಕೇಸ್ ಹೆಚ್ಚಾಗುತ್ತಿದೆ ಈ ಬೆಂಗಳೂರಿನಲ್ಲಿ ಪ್ರತಿದಿನ ಸುಮಾರು 30 ಸಾವಿರಕ್ಕೂ ಹೆಚ್ಚು ಟ್ರಾಫಿಕ್ ಕೇಸ್‌ಗಳು ದಾಖಲಾಗುತ್ತಿವೆ. ಕಳೆದ 11 ತಿಂಗಳಲ್ಲಿ ಬೆಂಗಳೂರಿನಲ್ಲಿ 96 ಲಕ್ಷ ಸಂಚಾರ ನಿಯಮ ಉಲ್ಲಂಘನೆ ಕೇಸ್ ದಾಖಲಾಗಿದೆ. 11 ತಿಂಗಳಲ್ಲಿ ಬರೋಬ್ಬರಿ 164 ಕೋಟಿ ರೂ. ದಂಡದ ಮೊತ್ತ ವಸೂಲಿ ಮಾಡಲಾಗಿದೆ. ವರ್ಷಾಂತ್ಯಕ್ಕೆ ಒಂದು ಕೋಟಿ ಕೇಸ್ ಆಗುತ್ತದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ದೇಶದ ಯಾವ ನಗರದಲ್ಲೂ 1 ಕೋಟಿ ಕೇಸ್ ಹಾಕಿದ ಉದಾಹರಣೆ ಇಲ್ವಂತೆ. ಬೆಂಗಳೂರು ನಗರ ಒಂದರಲ್ಲೇ ಇಷ್ಟು ಕೇಸ್ ದಾಖಲಾಗುತ್ತಿದೆ. ಸಂಚಾರ ದಟ್ಟಣೆಯಲ್ಲಿ ಹೆಸರುವಾಸಿಯಾಗಿದ್ದ ಸಿಲಿಕಾನ್ ಸಿಟಿ ಈಗ ಸಂಚಾರ ನಿಯಮ ಉಲ್ಲಂಘನೆ ಹಾಗೂ ದಂಡ ಕಟ್ಟುವಲ್ಲೂ ರೆಕಾರ್ಡ್ ಮಾಡುತ್ತಿದೆ. ಇದರಿಂದಾಗಿ ವಾಹನ ಸಂಖ್ಯೆ…

Read More

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ವಿಟ್ಲದ ಖಾಸಗಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವೊಂದರಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾಂತಾರ ಚಿತ್ರದ ದೈವಾರಾಧನೆಯ ಸನ್ನಿವೇಶವನ್ನು ಛದ್ಮವೇಶದ ಮೂಲಕ ಪ್ರದರ್ಶಿಸಿದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಿಷಬ್‌ ಶೆಟ್ಟಿ ಅಭಿನಯದ ಕಾಂತಾರ ಚಲನಚಿತ್ರ ಇನ್ನಿಲ್ಲದಂತೆ ಯಶಸ್ವಿ ಕಂಡ ಬಳಿಕ ಎಲ್ಲೆಡೆ ದೈವಾರಾಧನೆ, ಭೂತಾರಾಧನೆ ಬಗ್ಗೆ ಜನತೆಗೆ ಒಲವು ಜಾಸ್ತಿಯಾಗಿದೆ. ಇದೇ ವೇಳೆ ಕೆಲವರು ಭೂತಾರಾಧನೆಯ ವೇಷ ಹಾಕಿಕೊಂಡು ವೇದಿಕೆಗೆ ಏರಿ ದೈವಕ್ಕೆ ಅಪಚಾರ ಎಸಗುವ ಕೆಲಸ ಮಾಡುತ್ತಿದ್ದಾರೆ.ಟಿವಿಗಳಲ್ಲಿನ ರಿಯಾಲಿಟಿ ಶೋಗಳಲ್ಲಿ ಕಾಂತಾರ ಚಲನಚಿತ್ರದಲ್ಲಿ ಕಾಣುವ ಪಂಜುರ್ಲಿಯಂತೆ ವೇಷಧರಿಸಿ ಹಾಡು ಹಾಕಿ ಕುಣಿದು ಚಪ್ಪಾಳೆ ಗಿಟಿಸುವುದಕ್ಕೆ ದೈವಾರಾಧಕರು ಹಾಗೂ ತುಳುನಾಡಿನ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಖಾಸಗಿ ಶಾಲೆಯ ಬಾಲಕನೊಬ್ಬ ಕೈಯಲ್ಲಿ ದೈವದ ಆಯುಧವನ್ನು ಹಿಡಿದುಕೊಂಡು ನರ್ತಿಸುವ ಸನ್ನಿವೇಶವನ್ನು ನೆರೆದ ಪುಟ್ಟ ಮಕ್ಕಳು ಹಾಗೂ ಶಿಕ್ಷಕರು ಕೈಚಪ್ಪಾಳೆ ತಟ್ಟಿ ಪ್ರೋತ್ಸಾಹಿಸುತ್ತಿರುವುದು ಕೂಡಾ ಕಂಡು ಬಂದಿದೆ. ಒಟ್ಟಿನಲ್ಲಿ ಪೂಜ್ಯ ಭಾವನೆಯಿಂದ ಕಾಣಬೇಕಾದ ದೈವದ ನರ್ತನವನ್ನು ಶಾಲಾ ಕಾಲೇಜಿನ ವೇದಿಕೆಗಳಲ್ಲೂ ತಂದಿರುವುದಕ್ಕೆ ಕೆಲವರು ಆಕ್ರೋಶ…

Read More

ಮಂಗಳೂರು: ಮಂಗಳೂರು ನಗರದ ಕೊಟ್ಟಾರ ಚೌಕಿಯಲ್ಲಿ ಡಿ.3ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಗುರುವಾರ ಮೃತಪಟ್ಟಿದ್ದಾರೆ. ಬೆಂಗಳೂರಿನ ಕಂಪೆನಿಯೊಂದರಲ್ಲಿ ಇಂಜಿನಿಯರ್ ಆಗಿರುವ ಮೆಗಾ ರಂಜಿತ್ ಪೈ (34) ಮೃತಪಟ್ಟ ದುರ್ದೈವಿ. ಡಿ.3ರಂದು ಸಂಜೆ 6.35ಕ್ಕೆ ಕೊಟ್ಟಾರ ಚೌಕಿಯ ಬಳಿ ರಸ್ತೆ ದಾಟುತ್ತಿದ್ದಾಗ ಬಸ್ ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದ ಮೆಗಾ ರಂಜಿತ್ ಪೈ ಅವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇವರು ಸಾವನ್ನಪ್ಪಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ ಇವರು ಮಂಗಳೂರಿನಲ್ಲಿರುವ ತನ್ನ ತಾಯಿಯನ್ನು ನೋಡಲು ಬಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಸಂಚಾರ ಪಶ್ಚಿಮ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು: ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ಹಲವು ಕಡೆ ಐಟಿ ದಾಳಿ ನಡೆಸಿದೆ ಅಂತ ತಿಳಿದು ಬಂದಿದೆ. ಸಂಜಯನಗರ, ಹೆಬ್ಬಾಳ, ಚಿಕ್ಕಬಳ್ಳಾಪುರ, ರಾಮನಗರ ಹಾಗೂ ಬಿಡದಿಯಲ್ಲಿರುವ ಉದ್ಯಮಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಹಲವು ಮಹತ್ವದ ಮಾಹಿತಿಗಳನ್ನು, ದಾಖಲೆಗಳನ್ನು ಕಲೆ ಹಾಕಿದ್ದಾರೆ ಎನ್ನಲಾಗಿದೆ.

Read More

ಬೆಂಗಳೂರು : 42 ಕೈದಿಗಳ ಬಿಡುಗಡೆಗೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡುವ ಕುರಿತು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಕಾನೂನು ಸಚಿವ ಜೆ,ಸಿ ಮಾಧುಸ್ವಾಮಿ ಮಾತನಾಡಿದ್ದು, ಗಣರಾಜ್ಯೋತ್ಸವದ ಹಿನ್ನೆಲೆ ಸನ್ನಡತೆ ಆಧಾರದ ಮೇಲೆ 42 ಕೈದಿಗಳ ಬಿಡುಗಡೆಗೆ ರಾಜ್ಯಪಾಲರ ಶಿಫಾರಸ್ಸು ಮಾಡಲು ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿಸಿದ್ದಾರೆ. ಈ ಮೂಲಕ ರಾಜ್ಯದ 42 ಕೈದಿಗಳಿಗೆ ಬಿಡುಗಡೆ ಭಾಗ್ಯ ಸಿಗಲಿದೆ. ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗ ಒಲಂಪಿಕ್ಸ್, ಕಾಮನ್ ವೆಲ್ತ್, ಏಷ್ಯನ್ ಗೇಮ್ಸ್ ಪದಕವಿಜೇತರಿಗೆ ಸರ್ಕಾರಿ ಹುದ್ದೆ ನೀಡುವ ತೀರ್ಮಾನಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಲಂಪಿಕ್ಸ್, ಕಾಮನ್ ವೆಲ್ತ್, ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸರ್ಕಾರಿ ಹುದ್ದೆ ನೀಡುವ ನಿರ್ಧಾರಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಎಬಿಸಿ ಗ್ರೂಪ್ ನಡಿ ಹುದ್ದೆ ನೀಡಲಾಗುತ್ತದೆ ಎಂದು ಸಚಿವ ಕಾನೂನು ಸಚಿವ…

Read More

ಧಾರವಾಡ : ಯುವಕ ಯುವತಿ ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಘಟನೆ ನವಲಗುಂದ ಪಟ್ಟಣದಲ್ಲಿ ನಿನ್ನೆ ನಡೆದಿದ್ದು, ಕಾರಣ ನಿಗೂಢವಾಗಿದೆ. ಬಸವರಾಜ ತಳವಾರ ಎಂಬ ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದ ಯುವಕ ತನ್ನ ಪ್ರೇಮಿ ( ಗರ್ಲ್ ಫ್ರೆಂಡ್) ಜೊತೆ ನಿನ್ನೆ ಲಾಡ್ಜ್ ಗೆ ತೆರಳಿದ್ದರು. ನಂತರ ಸಂಜೆ ವೇಳೆ ಇಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತು ಮಾಹಿತಿ ಕಲೆಹಾಕಿದ್ದಾರೆ. ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದ್ದು, ತನಿಖೆ ನಡೆಯುತ್ತಿದೆ.

Read More