Author: main-admin

ಉಳ್ಳಾಲ: ಶೋಕಿ ಜೀವನಕ್ಕಾಗಿ ಮನೆಯ ಕಪಾಟಿನಲ್ಲಿದ್ದ ಹದಿನೈದು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನ ಮನೆ ಮಕ್ಕಳೇ ಎಗರಿಸಿರುವ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿ ಐದು ಮಂದಿಯನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆದರೆ, ಈ ಬಗ್ಗೆ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಮಾತ್ರ ಮಾಧ್ಯಮಗಳಿಗೆ ಮಾಹಿತಿ ಕೊಡದೆ ಮುಚ್ಚಿಟ್ಟಿದ್ದಾರೆ. ಜೂನ್ 8ರ ಬೆಳಗ್ಗೆ 8 ಗಂಟೆಯಿಂದ 16ರ ಮಧ್ಯಾಹ್ನ 12 ಗಂಟೆಯ ನಡುವೆ ಚಿನ್ನಾಭರಣ ಕಳವಾಗಿರುವ ಬಗ್ಗೆ ಉಳ್ಳಾಲ ಠಾಣೆಗೆ ಉಳ್ಳಾಲ ಬೈಲಿನ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಮನೆಯ ಬೆಡ್ ರೂಮಿನ ಕಪಾಟಿನಲ್ಲಿರಿಸಿದ್ದ ಸ್ವೀಲಿನ ಡಬ್ಬದಲ್ಲಿ ಇಟ್ಟಿದ್ದ ಚಿನ್ನದ ಕರಿಮಣಿ ಸರ, ನೆಕ್ಲಸ್, ಚೈನ್, ಬ್ರಾಸ್ ಲೈಟ್, ಉಂಗುರಗಳು, ಕಿವಿ ಓಲೆಗಳು, ಕೈಬಳೆಗಳು ಸೇರಿದಂತೆ ಅಂದಾಜು 15 ಲಕ್ಷಕ್ಕೂ ಹೆಚ್ಚು ಮೌಲ್ಯದ 32 ಪವನ್ ಗಿಂತಲೂ ಹೆಚ್ಚು ತೂಕದ ಚಿನ್ನದ ಆಭರಣಗಳನ್ನ ಕಳವುಗೈದ ಬಗ್ಗೆ ದೂರಿನಲ್ಲಿ ತಿಳಿಸಿದ್ದರು. ಪ್ರಕರಣದ ಜಾಡು ಹಿಡಿದ ಉಳ್ಳಾಲ ಪೊಲೀಸರಿಗೆ…

Read More

ಮೊಬೈಲ್ ಚಾರ್ಜ್ ಹಾಕುವಾಗ ಕರೆಂಟ್ ಶಾಕ್ ನಿಂದ ಯುವಕ ಸಾವನ್ನಪ್ಪಿದ್ದಾರೆ. ಬೀದರ್ ಮೂಲದ ಶ್ರೀನಿವಾಸ(24) ಮೃತಪಟ್ಟವರು. ಬೆಂಗಳೂರಿನಲ್ಲಿ ಸಾಫ್ಟ್ವೇರ್ ಕೋರ್ಸ್ ಮಾಡುತ್ತಿದ್ದ ಶ್ರೀನಿವಾಸ ಮೊಬೈಲ್ ಚಾರ್ಜಿಂಗ್ ವೈರ್ ನಿಂದ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ. ಚಾರ್ಜಿಂಗ್ ವೇಳೆ ಮೊಬೈಲ್ ಚಾರ್ಜರ್ ವೈರ್ ಕೂಡ ಸ್ವಲ್ಪ ಡ್ಯಾಮೇಜ್ ಆಗಿತ್ತು. ಕರೆಂಟ್ ಶಾಕ್ ನಿಂದ ಶ್ರೀನಿವಾಸ ರೂಮ್ ನಲ್ಲಿ ಬಿದ್ದಿದ್ದ. ಆತನನ್ನು ಊಟಕ್ಕೆ ಕರೆಯಲು ಬಂದಿದ್ದ ಮತ್ತೊಬ್ಬ ವಿದ್ಯಾರ್ಥಿಗೂ ವಿದ್ಯುತ್ ಪ್ರವಹಿಸಿದೆ, ಅದೃಷ್ಟವಶಾತ್ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತಕ್ಷಣ ಬಸವೇಶ್ವರನಗರ ಠಾಣೆ ಪೋಲೀಸರಿಗೆ ಪಿಜಿ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಿಡಿ ವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ತನಿಖೆ ಕೈಗೊಂಡಿದ್ದಾರೆ.ಬಸವೇಶ್ವರ ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ಮಂಗಳೂರು: ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶನಿವಾರ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಜೂನ್‌ 6ರಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಭಾರೀ ಮಳೆ ಆಗುತ್ತಿರುವ ಕಾರಣ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ತರಗತಿಗಳಿಗೆ ಶನಿವಾರ ರಜೆ ಘೋಷಣೆ ಮಾಡಲಾಗಿದೆ.

Read More

ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಅವರು ಶುಕ್ರವಾರ ಹೃದಯಘಾತದಿಂದ ನಿಧನ ಹೊಂದಿದರು. ಇರಾ (ಕುಂಡಾವು), ಕೂಡ್ಲು, ಮೂಲ್ಕಿ, ಕರ್ನಾಟಕ ಮೇಳ ಮತ್ತು ಧರ್ಮಸ್ಥಳ ಮೇಳದಲ್ಲಿ ಯಕ್ಷ ವ್ಯವಸಾಯ ಮಾಡಿದವರು ಕುಂಬಳೆ ಶ್ರೀಧರ್ ರಾವ್ ಅವರು. ತೆಂಕುತಿಟ್ಟಿನ ಅಪ್ರತಿಮ ಸ್ತ್ರೀವೇಷಧಾರಿಯಾಗಿ ಕಲಾಸೇವೆ ಮಾಡಿರುವ ಅವರು ದಮಯಂತಿ, ದಾಕ್ಷಾಯಿಣಿ, ಅಮ್ಮು ಬಲ್ಲಾಳ್ತಿ, ಲಕ್ಷ್ಮಿ, ಸುಭದ್ರೆ, ಸತ್ಯಭಾಮೆ ಅಲ್ಲದೆ ಪ್ರಮೀಳೆ, ಶಶಿಪ್ರಭೆ ಮುಂತಾದ ಪಾತ್ರಗಳಿಂದ ದೊಡ್ಡ ಹೆಸರು ಮಾಡಿದವರು. ಮಾಲಿಂಗ ಮುಕಾರಿ ಮತ್ತು ಕಾವೇರಿ ದಂಪತಿಗಳಿಗೆ ಪುತ್ರನಾಗಿ ಶ್ರೀಧರ ರಾಯರು 1948ರ ಜುಲೈ 23ರಂದು ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ನಾಯ್ಕಾಪುವಿನಲ್ಲಿ ಜನಿಸಿದರು. 1962ರಲ್ಲಿ ಕಲ್ಲಾಡಿ ಕೊರಗ ಶೆಟ್ಟರ ಯಜಮಾನಿಕೆಯ ಕುಂಡಾವು ಮೇಳಕ್ಕೆ ಶ್ರೀಧರ ರಾಯರು ಬಾಲಕಲಾವಿದನಾಗಿ ಸೇರ್ಪಡೆಗೊಂಡರು. ಬಳಿಕ ಕೂಡ್ಲು, ಮೂಲ್ಕಿ, ಕರ್ನಾಟಕ ಮೇಳ ಮತ್ತು ಧರ್ಮಸ್ಥಳ ಮೇಳಗಳಲ್ಲಿ ಕುಂಬಳೆ ಶ್ರೀಧರ ರಾಯರು ಕಲಾಸೇವೆ ಮಾಡಿದವರು. ಧರ್ಮಸ್ಥಳ ಮೇಳದಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ತಿರುಗಾಟ ಮಾಡಿದ್ದರು.

Read More

ಮಂಗಳೂರು: ವ್ಯಕ್ತಿಯೋರ್ವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿದ್ದಾಗ ಆತನ ಸ್ನೇಹಿತನಾದ ವಕೀಲ ಇತರರೊಂದಿಗೆ ಸೇರಿಕೊಂಡು ಜಾಗ ಮಾರಾಟ ಮಾಡಿ 88.35 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ವಕೀಲ ಗಂಗಾಧರ ಎಚ್., ಕುಸುಮ ಕೆ. ಸುವರ್ಣ, ನೀರಜಾಕ್ಷಿ ಅಗಾಲ್ ಮತ್ತು ಇತರ 11 ಮಂದಿ ಎಂದು ಗುರುತಿಸಲಾಗಿದೆ. ಸುರತ್ಕಲ್ ಮುಂಚೂರಿನ ಕೆ.ರುಕ್ಕಯ್ಯ ಶೆಟ್ಟಿ ನೀಡಿದ ದೂರಿನಂತೆ, ಕೆ.ರುಕ್ಕಯ್ಯ ಶೆಟ್ಟಿ ಕಟ್ಟಡ ನಿರ್ಮಾಣ ಮತ್ತು ಜಾಗದ ವ್ಯವಹಾರ ಮಾಡುತ್ತಿದ್ದರು. ಈ ಜಾಗದ ವ್ಯವಹಾರವನ್ನು ಆಪ್ತಸ್ನೇಹಿತನಾದ ಗಂಗಾಧರ ಎಚ್. ಮೂಲಕ ಮಾಡಿಸುತ್ತಿದ್ದರು. ರುಕ್ಕಯ್ಯ ಶೆಟ್ಟಿ 2018ರಲ್ಲಿ ಕುಸುಮ, ವಾರಿಜಾ (ಈಗ ಮೃತರು) ಮತ್ತು ಆಕೆಯ ಪುತ್ರಿ ನೀರಜಾಕ್ಷಿ ಅಗರ್‌ವಾಲ್ ಅವರಿಂದ ಹೊಸಬೆಟ್ಟು ಗ್ರಾಮದಲ್ಲಿ 60.45 ಲಕ್ಷ ರೂ.ಗಳಿಗೆ ಜಾಗ ಖರೀದಿಸುವ ಬಗ್ಗೆ ಒಪ್ಪಂದ ಮಾಡಿಕೊಂಡು 20 ಲಕ್ಷ ರೂ ಮುಂಗಡ ಹಣ ಪಾವತಿಸಿದ್ದರು. ಆ ಜಾಗದಲ್ಲಿ ಕೆಲವು ಸೆಂಟ್‌ಗಳನ್ನು ನವೀನ್ ಸಾಲ್ಯಾನ್ ಮತ್ತು ಕೇತನ್ ಕುಮಾರ್ ಅವರಿಗೆ ಮಾರಾಟ…

Read More

ಮಂಗಳೂರು: ಬಜಪೆಯ ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸ್ ಒಂದಕ್ಕೆ ಮೂವರು ಅಪರಿಚಿತ ವ್ಯಕ್ತಿಗಳು ಗುರುವಾರ ದಿಢೀರ್ ನುಗ್ಗಿ ಕ್ಲೋರೋಫಾರ್ಮ್ ಬಳಸಿ ದರೋಡೆಗೆ ಯತ್ನಿಸಿ ಪರಾರಿಯಾಗಿರುವ ಕುರಿತು ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.ಆಕ್ಟಿವಾದಲ್ಲಿ ಆಗಮಿಸಿದ ಆರೋಪಿಗಳು ಬಜಪೆಯ ಮಸೀದಿ ಕಡೆಯಿಂದ ಆಗಮಿಸಿ ಹೂವಿನ ಮಾರುಕಟ್ಟೆ ಬಳಿಗೆ ಹೋಗಿ ವಾಪಾಸ್ಸು ಬಂದು ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸ್ ಗೆ ನುಗ್ಗಿದ್ದಾರೆ. ಆರೋಪಿಗಳು ಚಿಕ್ಕ ಆಸಿಡ್ ತುಂಬಿದಡಬ್ಬವೊಂದರ ಮುಚ್ಚಳ ತೆಗೆದು ಟೇಬಲ್ ಮೇಲಿಟ್ಟು ಕ್ಯಾಶ್‌ಗೆ ಬಲಾತ್ಕಾರವಾಗಿ ಕೈ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ತಡೆಯಲು ಯತ್ನಿಸಿದ ಫೈನಾನ್ಸ್ನ ಇಬ್ಬರು ಮಹಿಳಾ ಸಿಬ್ಬಂದಿಗಳನ್ನು ದೂಡಿ ಹಾಕಿದ್ದು, ಮಹಿಳಾ ಸಿಬ್ಬಂದಿ ಜೋರಾಗಿ ಕಿರುಚಿದ ಸಂದರ್ಭ ಆರೋಪಿಗಳು ಪರಾರಿಯಾಗಿರುತ್ತಾರೆ.ಮೂವರು ಆರೋಪಿಗಳ ಪೈಕಿ ಒಬ್ಬ ಹೆಲೈಟ್ ಧಾರಿ ಸ್ಕೂಟರನ್ನು ಸ್ಟಾರ್ಟಿಂಗ್‌ನಲ್ಲಿಯೇ ನಿಲ್ಲಿಸಿ ಕಾಯುತ್ತಿದ್ದು, ಇನ್ನಿಬ್ಬರ ಪೈಕಿ ಒಬ್ಬ ಬುರ್ಖಾಧಾರಿಯಾಗಿದ್ದು ಸವಾರನ ಹಿಂಬದಿಯಲ್ಲಿ ಕುಳಿತಿದ್ದ ಚಲನವಲನಗಳನ್ನು ಪ್ರತ್ಯಕ್ಷದರ್ಶಿಗಳು ಗಮನಿಸಿರುತ್ತಾರೆ. ಈತ ಬುರ್ಖಾ ಧರಿಸಿದ್ದರೂ ಗಂಡಸ್ಸೇ ಕುಳಿತಿದ್ದುದು ಹಲವರ ಗಮನಕ್ಕೆ ಬಂದಿದೆ.ಫೈನಾನ್ಸ್ಗೆ ನುಗ್ಗಿದ ಇಬ್ಬರಲ್ಲಿ…

Read More

ಮಂಗಳೂರು: ನಗರದ ಬಲ್ಮಠ ಬಳಿ ನಿರ್ಮಾಣ ಹಂತದ ಕಟ್ಟಡದ ಬಳಿ ಬುಧವಾರ ಸಂಭವಿಸಿರುವ ಮಣ್ಣು ಕುಸಿತಗೊಂಡು ನಡೆದ ದುರಂತಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಕಟ್ಟಡ ಕಾಮಗಾರಿಯ ಗುತ್ತಿಗೆದಾರ ವೇಣುಗೋಪಾಲ್, ಸೂಪರ್‌ವೈಸ‌ರ್ ಸಹಿತ ಮೂವರ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಘಟನೆಯಲ್ಲಿ ಉತ್ತರಪ್ರದೇಶ ಮೂಲದ ಕಾರ್ಮಿಕ ಚಂದನ್ ಕುಮಾರ್ ಮೃತಪಟ್ಟಿದ್ದಾದೆ. ಬಿಹಾರ ಮೂಲದ ಕಾರ್ಮಿಕ ರಾಜ್‌ಕುಮಾರ್‌ನನ್ನು ರಕ್ಷಿಸಲಾಗಿತ್ತು.

Read More

ಮಂಗಳೂರು : ಮನಪಾ ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ತಕ್ಷಣ ಜಾರಿಗೆ ಬರುವಂತೆ ಆದೇಶಿಸಿದೆ. ಈವರೆಗೆ ಮಂಗಳೂರು ಮನಪಾ ಆಯುಕ್ತರಾಗಿದ್ದ ಸಿ.ಎಲ್.ಆನಂದ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ. ಅವರಿಂದ ತೆರವಾಗಿರುವ ಸ್ಥಾನಕ್ಕೆ ಶಿವಮೊಗ್ಗ ಜಿಲ್ಲೆಯ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ, ಹಿರಿಯ ಕೆಎಎಸ್ ಅಧಿಕಾರಿ ರವಿಚಂದ್ರ ನಾಯಕ್‌ರನ್ನು ನೇಮಕ ಮಾಡಿದೆ.

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಪಾಲಾಗಿರುವಂತ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳಿಗೆ ಕೋರ್ಟ್ ಜುಲೈ.18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಇಂದು ರೇಣುಕಾಸ್ವಾಮಿ ಕೊಲೆ ಕೇಸ್‌ ಆರೋಪಿಗಳಾದ ನಟ ದರ್ಶನ್‌ ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಪೀಠವು, ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಈ ಹಿಂದೆ ವಿಧಿಸಿದ್ದ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಜುಲೈ 4 ಕ್ಕೆ ಮುಕ್ತಾಯವಾಗಿತ್ತು. ಈ ಹಿನ್ನೆಲೆ ಬೆಂಗಳೂರಿನ ಕೋರ್ಟ್‌ನಲ್ಲಿ ಗುರುವಾರ ಕೇಸ್‌ ವಿಚಾರಣೆ ನಡೆದಿದ್ದು, ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನ ವಿಸ್ತರಣೆ ಮಾಡಲಾಗಿದೆ. ಅಂದರೆ, ಜುಲೈ 18 ವರೆಗೂ ನಟ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಜೈಲೇ ಗತಿ ಆದಂತೆ ಆಗಿದೆ.

Read More

ಬಾರ್ಬಡೋಸ್‌ನಲ್ಲಿ ಟಿ20 ವಿಶ್ವಕಪ್‌ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದ ಟೀಮ್ ಇಂಡಿಯಾ, ನಾಲ್ಕು ದಿನಗಳ ಬಳಿಕ ತವರಿಗೆ ಮರಳಿದೆ. ಚಾಂಪಿಯನ್‌ ತಂಡಕ್ಕೆ ಏರ್‌ ಪೋರ್ಟ್‌ನಲ್ಲಿ ಹೃದಯ ಸ್ವರ್ಪಿ ಸ್ವಾಗತ ನೀಡಲಾಗಿದೆ. ಟೀಮ್ ಇಂಡಿಯಾ ಆಟಗಾರರು ಅಭಿಮಾನಿಗಳತ್ತ ಕೈ ಬಿಸಿ, ನವದೆಹಲಿಯ ಮೌರ್ಯ ಹೊಟೇಲ್‌ಗೆ ತೆರಳಿದೆ. ಮೌರ್ಯದಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ ವಿಶೇಷ ಸ್ವಾಗತವನ್ನು ನೀಡಲಾಯಿತು. ಈ ವೇಳೆ ಹೊಟೇಲ್‌ ವಿಶೇಷ ರೀತಿಯಲ್ಲಿ ಕೇಕ್‌ ಅನ್ನು ಸಿದ್ಧ ಪಡಿಸಿತ್ತು. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೇಕ್‌ ಕತ್ತರಿಸಿ ಖುಷಿ ಪಟ್ಟರು. ಹೊಟೇಲ್‌ನಲ್ಲಿ ಕೆಲ ಕಾಲ ವಿಶ್ರಮಿಸಿದ ಬಳಿಕ ರೋಹಿತ್‌ ಪಡೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಪ್ರಯಾಣ ಬೆಳೆಸಿತು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ನಿವಾಸಕ್ಕೆ ತಲುಪಿತು. ಈ ಸಭೆ ಮುಗಿದ ನಂತರ ಮುಂಬೈನಲ್ಲಿ ನಡೆಯಲಿರುವ ವಿಜಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲು ಭಾರತ ತಂಡದ ಆಟಗಾರರು ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ.

Read More