Author: main-admin

ಬೆಳ್ತಂಗಡಿ: ಅಪರೂಪದ ಸಾರಿಬಳ ಹಾವೊಂದು ಕೋಳಿ ಮರಿಯನ್ನು ನುಂಗಲು ಪ್ರಯತ್ನಿಸಿದ ಗಟನೆ ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅರಂತೊಟ್ಟು ಎಂಬಲ್ಲಿ ನಡೆದಿದ್ದು, ಇದನ್ನು ಉರಗ ಪ್ರೇಮಿ ಸ್ನೇಕ್ ಅಶೋಕ್‌ ಸುರಕ್ಷಿತವಾಗಿ ಹಿಡಿದು, ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಕೊಯ್ಯೂರು ಗ್ರಾಮದ ಅರಂತೊಟ್ಟು ನಿವಾಸಿ ದೀಪಕ್ ಎಂಬುವರ ಮನೆಯಲ್ಲಿ ಸುಮಾರು 5 ಅಡಿ ಉದ್ದದ ಸಾರಿಬಳ ಹಾವು ಕೋಳಿಮರಿಯನ್ನು ನುಂಗುತ್ತಿದ್ದ ಸಮಯ ಅದನ್ನು ಕಂಡ ಮನೆಯವರು ಉರಗಮಿತ್ರ ಸ್ನೇಕ್ ಅಶೋಕ್ ಲಾಯಿಲ ಅವರಿಗೆ ಮಾಹಿತಿ ನೀಡಿದ್ದಾರೆ. ಅವರು ತಕ್ಷಣ ಅವರು ಆಗಮಿಸಿ ರಕ್ಷಿಸಿದ್ದಾರೆ. ಫೋರೆಸ್ಟನ್ಸ್ ಬೆಕ್ಕು ಹಾವು ಅಥವಾ ಸಾರಿಬಳ ಎಂದೇ ಕರೆಯಲ್ಪಡುವ ಈ ಹಾವು ಹೆಚ್ಚಾಗಿ ಗುಜರಾತ್, ಕೇರಳ ಹಾಗೂ ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶದ ಕಾಡುಗಳಲ್ಲಿ ಕಂಡು ಬರುತ್ತದೆ. ಇವು ಜನವಸತಿ ಪ್ರದೇಶದಲ್ಲಿ ಕಂಡುಬರುವುದು ತೀರಾ ವಿರಳ. ಕೊಯ್ಯೂರಿನಲ್ಲಿ ಈ ಪ್ರಭೇದದ ಹಾವು ಕಂಡುಬಂದಿದೆ. ತನ್ನ 11 ವರ್ಷಗಳ ಹಾವು ಹಿಡಿಯುವ ಸೇವೆಯಲ್ಲಿ ಇದುವರೆಗೆ ಬೂದು ಬಣ್ಣದ ಸಾರಿಬಾಳ ಎರಡು ಬಾರಿ ಹಾಗೂ ತಿಳಿ…

Read More

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಹಳ ವರ್ಷದಿಂದ ಗಡಿ ವಿವಾದ ಮಾಡಿಕೊಂಡು ಬಂದಿದ್ದಾರೆ. ಕರ್ನಾಟಕ- ಮಾಹಾರಾಷ್ಟ್ರ ಜನರ ನಡುವೆ ಸಾಮರಸ್ಯ ಇದೆ. ಸುಪ್ರೀಂಕೋರ್ಟ್‌ ನಲ್ಲೂ ನಮ್ಮ ಪರ ತೀರ್ಪು ಬರುವ ವಿಶ್ವಾಸವಿದೆ. ಜನರ ರಕ್ಷಣೆಗೆ ನಾವು ಬದ್ಧವಾಗಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇನ್ನು ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದಲ್ಲಿ ಮತ್ತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರದ ಎಂ.ಇ.ಎಸ್. ಮಹಾರಾಷ್ಟ್ರ ರಾಜಕಾರಣಿಗಳ ವಿರುದ್ಧ ಕರವೇ ಕಿಡಿಕಾರಿದ್ದು, ಇಂದು ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಬಹಿರಂಗ ಸಭೆ ನಡೆಸಲಿದೆ. ಇಂದು ಕರ್ನಾಟಕ ರಕ್ಷಣಾ ವೇದಿಕೆ ಬಹಿರಂಗ ಸಭೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಾದ್ಯಂತ ಪೊಲೀಸ್ ಬಿಗ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಡಿಸಿಪಿ, ನಾಲ್ವರು ಸಿಪಿಐ, 10 ಪಿಎಸ್ ಐ, 12…

Read More

ಉಡುಪಿ : ಜಿಲ್ಲೆಯಲ್ಲೂ ಧರ್ಮ ಸಂಘರ್ಷ ಶುರುವಾಗಿದ್ದು, ಕುಂದಾಪುರ ತಾಲೂಕಿನಲ್ಲಿ ಎರಡು ಮಹತ್ವದ ಜಾತ್ರೆಗಳಲ್ಲಿ ಅನ್ಯ ಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ನೀಡಬಾರದೆಂದು ಹಿಂದೂ ಸಂಘಟನೆಗಳು ಆಗ್ರಹಿಸಿದ್ದಾರೆ. ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಭಯೋತ್ಪಾದನೆ, ಲವ್ ಜಿಹಾದ್ ನಂತಹ ಪ್ರಕರಣ ಹೆಚ್ಚಿರುವ ಕಾರಣಕ್ಕೆ ಹಿಂದೂ ಸಂಘಟನೆಗಳು ಈ ರೀತಿಯ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ ಸಂಘಟನೆಗಳ ಬೇಡಿಕೆಗೆ ವ್ಯವಸ್ಥಾಪನಾ ಸಮಿತಿ ಸಮ್ಮತಿಸುವ ಸಾಧ್ಯತೆಯಿದೆ ಹಾಗಾಗಿ ಜಿಲ್ಲೆಯ ಪ್ರಸಿದ್ದ ಕೋಟೇಶ್ವರದ ಕೋಡಿ ಹಬ್ಬ & ಉಪ್ಪಂದ ಜಾತ್ರೆಗಳು ಡಿಸೆಂಬರ್ 8 -9 ರಂದು ಶುರುವಾಗಲಿದ್ದು, ಈ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಹಿಂದೂ ಪರ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್, ಭಜರಂಗದಳ ಮನವಿ ಮಾಡಲಾಗಿದೆ. ಇನ್ನು ಉಪ್ಪುಂದದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಧರ್ಮ ಸಂಘರ್ಷ ಶುರುವಾಗಿದೆ. ಡಿಸೆಂಬರ್​ 9.10. 11ರಂದು ನೆರವೇರಲಿರುವ ಜಾತ್ರೆಯಲ್ಲಿ ದೇವಸ್ಥಾನದ ಆವರಣದಲ್ಲಿ ಅನ್ಯಧರ್ಮೀಯರ ವ್ಯಾಪಾರಕ್ಕೆ ಅವಕಾಶವಿಲ್ಲ.ಭಜರಂಗದಳ, ವಿಶ್ವ ಹಿಂದೂ ಪರಿಷತ್​, ಹಿಂದೂ ಜಾಗರಣ ವೇದಿಕೆಯ ಒತ್ತಾಯದ ಮೇರೆಗೆ ಹಿಂದೂ ವ್ಯಾಪಾರಿಗಳಿಗೆ ಮಾತ್ರ…

Read More

ಪುತ್ತೂರು: ನಗರದ ಹಳೆ ತಾಲೂಕು ಕಚೇರಿ ರಸ್ತೆಯಲ್ಲಿರುವ ಜನಸೇವಾ ಕೇಂದ್ರದಲ್ಲಿ ಮತದಾರರ ಗುರುತಿನ ಚೀಟಿಗಳನ್ನು ಅನಧಿಕೃತವಾಗಿ ವಿತರಿಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತ ಗಿರೀಶ್‌ ನಂದನ್‌, ತಹಶೀಲ್ದಾರ್‌ ನಿಸರ್ಗ ಪ್ರಿಯ ನೇತೃತ್ವದ ಅಧಿಕಾರಿಗಳ ತಂಡ ಸೋಮವಾರ ದಾಳಿ ಮಾಡಿ ಬೀಗ ಜಡಿದಿದೆ. ಗುರುತಿನ ಚೀಟಿ ಕಳೆದುಹೋಗಿದ್ದ ಪುತ್ತೂರಿನ ನಿವಾಸಿಯೋರ್ವರು ಜನಸೇವಾ ಕೇಂದ್ರಕ್ಕೆ ಬಂದು ಮಾಹಿತಿ ನೀಡಿದ್ದರು. ಅಲ್ಲಿನ ಸಿಬಂದಿ ತಾವು ತಯಾರಿಸಿ ಕೊಡುವುದಾಗಿ ಹೇಳಿ ಗುರುತು ಚೀಟಿ ನೀಡಿದ್ದರು. ಆದರೂ ಗುರುತಿನ ಚೀಟಿಯ ಮೇಲೆ ಅನುಮಾನ ಬಂದ ಕಾರಣ ತಾಲೂಕು ಕಚೇರಿಯ ಚುನಾವಣ ಶಾಖೆಗೆ ತೆರಳಿ ತೋರಿಸಿದರು. ಅಧಿಕಾರಿಗಳು ತಪಾಸಣೆ ನಡೆಸಿದಾಗ ಅನುಮತಿ ರಹಿತವಾಗಿ ಗುರುತುಚೀಟಿ ನೀಡಿರುವುದು ಪತ್ತೆಯಾಗಿದೆ. ಮತದಾರರ ಗುರುತಿನ ಚೀಟಿ ವಿತರಿಸುವ ಅಧಿಕಾರವನ್ನು ಯಾವುದೇ ಬಾಹ್ಯ ಕೇಂದ್ರಗಳಿಗೆ ಕೊಟ್ಟಿಲ್ಲ ಎಂದು ಎಸಿ ತಿಳಿಸಿದ್ದಾರೆ. ನಮ್ಮ ಜನಸೇವಾ ಕೇಂದ್ರದಲ್ಲಿ ನಿರ್ದಿಷ್ಟ ವೆಬ್‌ಸೈಟ್‌ ತೆರೆದುಕೊಂಡ ಕಾರಣ ಲಾಗಿನ್‌ ಆಗಿ ಅರ್ಜಿ ಪ್ರಕ್ರಿಯೆ ನಡೆಸಿ ಕಾರ್ಡ್‌ ಮುದ್ರಿಸಿಕೊಟ್ಟಿದ್ದೇವೆ. ಇದರ ಪೂರ್ಣ ಮಾಹಿತಿಯನ್ನು ಅಧಿಕಾರಿಗಳಿಗೆ ಪ್ರಾಯೋಗಿಕ…

Read More

ಬೆಳ್ತಂಗಡಿ: ನಗರದ ಸಂತೆ ಕಟ್ಟೆಯಲ್ಲಿ ಮಾನಸಿಕ ಅಸ್ವಸ್ಥನೊಬ್ವ ಕಂಡಕಂಡವರ ಮೇಲೆ ಹಲ್ಲೆ ನಡೆಸಿದ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಯಾವುದೇ ಕಾರಣವಿಲ್ಲಧ ದಾರಿ ಹೋಕರ ಮೇಲೆ ಈತ ಏಕಾ ಏಕಿ ಹಲ್ಲೆ ನಡೆಸಿದ್ದು ಹಲವರು ಈತನಿಂದ ಹಲ್ಲೆಗೆ ಒಳಗಾದರು. ಕೂಡಲೇ ಸ್ಥಳೀಯರು ಈತನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಈತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸುವ ಕಾರ್ಯ ಮಾಡಿದ್ದಾರೆ. ಈತ ತನ್ನ ವಿಳಾಸವನ್ನು ಆಗಾಗ ಬೇರೆ ಬೇರೆಯಾಗಿ ಹೇಳುತ್ತಿದ್ದು ಇದರಿಂದಾಗಿ ಈತನ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಸಾಧ್ಯವಾಗಿಲ್ಲ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Read More

ವಿಟ್ಲ. ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕೈಂತಿಲ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಸಬಾ ಗ್ರಾಮದ ಕೈಂತಿಲ ನಿವಾಸಿ ಗಿರಿಯಪ್ಪ ಗೌಡರ ಪತ್ನಿ ಸವಿತ ಯಾನೆ ಸೇಸಮ್ಮ (50) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು, ಮನೆ ಸಮೀಪದ ತೋಟದಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಕೂಡಲೇ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಮೃತರ ಸಹೋದರ ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಬಂಟ್ವಾಳ : ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ತುಂಬೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾ ತಲಪಾಡಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ಘಟನೆಯಲ್ಲಿ ಚಾಲಕ ಹಾಗೂ ಪ್ರಯಾಣಿಕ ಇಬ್ಬರೇ ಇದ್ದ ಬಗ್ಗೆ ಸ್ಥಳೀಯರು ತಿಳಿಸಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದರೆ ಪ್ರಯಾಣಿಕನಿಗೂ ಗಾಯವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಬೆಳ್ತಂಗಡಿ: ಕಕ್ಕಿಂಜೆಯ ಖಾಸಗಿ ಆಸ್ಪತ್ರೆಗೆ ಸೇರಿದ ಆ್ಯಂಬುಲೆನ್ಸ್ ಬೆಳ್ತಂಗಡಿ ಸೇತುವೆ ಬಳಿ ಪಲ್ಟಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ. ಅಪಘಾತದಿಂದಾಗಿ ಆ್ಯಂಬುಲೆನ್ಸ್ ನಲ್ಲಿದ್ದ ಓರ್ವ ವೈದ್ಯ ಸೇರಿ ಒಟ್ಟು ಮೂವರಿಗೆ ಗಾಯಗಳಾಗಿವೆ. ಈ ಪೈಕಿ ವೈದ್ಯ ಡಾ.‌‌ನಿತಿನ್ ಅವರಿಗೆ ಕೈಯಲ್ಲಿ ಮೂಳೆ‌ ಮುರಿತಕ್ಕೊಳಗಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನಿಬ್ಬರು ಗಾಯಾಳುಗಳಾದ ಆಸ್ಪತ್ರೆಯ ಸಿಬ್ಬಂದಿಗಳಾದ ರಿತೇಶ್ ಮತ್ತು ಹುಝೈರ್ ಎಂಬವರಾಗಿದ್ದಾರೆ. ಇವರಿಬ್ಬರಿಗೂ ಸಣ್ಣ ಗಾಯಗಳಾಗಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ವೇಳೆ ಆ್ಯಂಬುಲೆನ್ಸ್ ನಲ್ಲಿ ರೋಗಿಗಳು ಇರಲಿಲ್ಲ ಎಂದು ತಿಳಿದು ಬಂದಿದೆ. ಮೆಡಿಸಿನ್ ಪಾರ್ಸೆಲ್ ವಿಚಾರವಾಗಿ ಆಂಬುಲೆನ್ಸ್ ನಲ್ಲಿ ಬೆಳ್ತಂಗಡಿಗೆ ಬಂದಿದ್ದರು ಎಂದು ಗೊತ್ತಾಗಿದೆ. ಅಪಘಾತದಿಂದಾಗಿ ಬೊಲೆರೋ ಆ್ಯಂಬುಲೆನ್ಸ್ ವಾಹನ ಬಹುತೇಕ ನುಜ್ಜುಗುಜ್ಜಾಗಿದೆ. ಘಟನೆಯಿಂದ ಸುಮಾರು ಅರ್ಧ ತಾಸು ಟ್ರಾಫಿಕ್ ಜಾಮ್ ಕೂಡ ಉಂಟಾಯಿತು. ತಕ್ಷಣ ಸ್ಪಂದಿಸಿದ ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ನಾಗರಿಕರ ಸಹಕಾರದಿಂದ ವಾಹನ ಸಂಚಾರ ಸುಗಮಗೊಳಿಸಿದರು.

Read More

ಹುಬ್ಬಳ್ಳಿ : ಸಂಸಾರದ ಗುಟ್ಟು ವ್ಯಾದಿ ರಟ್ಟು ಎಂಬ ಮಾತು ಕೇಳಿದ್ದಿರಿ. ಆದರೆ ಇಲ್ಲಿ ಮಾತ್ರ ವ್ಯಾದಿ ರಟ್ಟು ಅಷ್ಟೇ ಅಲ್ಲ ಸೀದಾ ರಾಷ್ಟ್ರಪತಿ ಭವನ ತಲುಪಿದೆ. ಇದು ಮದುವೆಯಾಗಿ ಸುಖ ಸಂಸಾರ ನಡೆಸುತ್ತಿದ್ದರೂ, ಪುನಃ ಎರಡನೇ ಮದುವೆಯಾಗಿ ಸಂಕಷ್ಟ ಎದುರಿಸುತ್ತಿರುವವರ ವಿಚಿತ್ರ ತ್ರಿಕೋನ ಸ್ಟೋರಿ. ಒಂದು ಕಡೆ ಮೊದಲ ಗಂಡ ಬಿಟ್ಟು ಹೋದ, ಎರಡನೇ ಗಂಡನ ಜೊತೆಗೆ ಜೀವನ ಮಾಡಲು ಆತನ ಮೊದಲನೆ ಹೆಂಡತಿ ಬಿಡುತ್ತಿಲ್ಲ. ಹೀಗಾಗಿ, ರೂಪಮಾಲಾ ಎಂಬ ಗೃಹಿಣಿ ದಯಾಮರಣ ಕೋರಿ ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಿದ್ದಾರೆ. ನನ್ನ ಮೊದಲ ಗಂಡ ಬಿಟ್ಟು ಹೋದ, ಎರಡನೇ ಗಂಡನ ಜೊತೆಗೆ ಜೀವನ ಮಾಡಲು ಆತನ ಮೊದಲನೆ ಹೆಂಡತಿ ಬಿಡುತ್ತಿಲ್ಲ. ನನಗೆ ಮಾನಸಿಕ ಹಿಂಸೆಯಾಗುತ್ತಿದೆ ನಾನು ಗರ್ಭಿಣಿ. ಆತ್ಮಹತ್ಯೆ ಸಹ ಮಾಡಿಕೊಳ್ಳಲು ಆಗುತ್ತಿಲ್ಲ. ದಯವಿಟ್ಟು ನನಗೆ ದಯಾಮರಣ ಕರುಣಿಸಿ ಅಂತ ರಾಷ್ಟ್ರಪತಿಗೆ ಮಹಿಳೆಯೊಬ್ಬಳು ಪತ್ರ ಬರೆದಿದ್ದಾರೆ. ಈಗಾಗಲೇ ಮದುವೆಯಾಗಿ ಸುಖ ಸಂಸಾರ ನಡೆಸಿದ್ದಾರೆ. ಎದೆಮಟ್ಟಕ್ಕೆ ಬೆಳೆದು ನಿಂತ ಮಕ್ಕಳಿವೆ. ಇದನ್ನ ಲೆಕ್ಕಿಸಿದೆ…

Read More

ಆಹಾರ ಮತ್ತು ಪಾನೀಯ ಸೇವನೆಯಲ್ಲಿನ ವ್ಯತ್ಯಾಸ ಕೆಲವೊಮ್ಮೆ ಫಜೀತಿ ಉಂಟು ಮಾಡುತ್ತದೆ. ಮಲಬದ್ಧತೆಯೂ ಅವುಗಳಲ್ಲೊಂದು. ಈ ಸಮಸ್ಯೆಯಿಂದ ಹೊಟ್ಟೆ ಉಬ್ಬರಿಸಿದಂತಾಗಿ ಏನು ತಿಂದರೂ ರುಚಿಸದ ಸ್ಥಿತಿ ಒದಗುತ್ತದೆ. ಬ್ರೊಕೋಲಿ ಸೇವನೆಯಿಂದ ಈ ಸಮಸ್ಯೆ ಬಗೆಹರಿಸಬಹುದು. ಹೆಚ್ಚಿನ ಸಮಯ ಕುಳಿತಲ್ಲೇ ಕಳೆಯುವುದು, ವ್ಯಾಯಾಮದ ಕೊರತೆ, ಜಂಕ್ ಫುಡ್ ತಿನ್ನುವುದು ಮತ್ತಿತರ ಕಾರಣಗಳಿಂದ ಮಲಬದ್ಧತೆ ಸಮಸ್ಯೆ ಬರುತ್ತದೆ. ಬ್ರೊಕೋಲಿಯಲ್ಲಿ ಅನೇಕ ಪೋಷಕಾಂಶಗಳಿದ್ದು, ಅವು ಆರೋಗ್ಯಕರವಾಗಿವೆ, ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತವೆ. ಇದರಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಫೈಟೊಕೆಮಿಕಲ್ ಗುಣವಿದ್ದು, ಎಲ್ಲ ರೀತಿಯ ಸೋಂಕು ಮತ್ತು ರೋಗಗಳನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಕಡಿಮೆ ಕ್ಯಾಲೊರಿ ಇರುವ ಈ ತರಕಾರಿ ಅತ್ಯಧಿಕ ಅಂಟಿ ಆಕ್ಸಿಡೆಂಟ್ ಗಳು ಮತ್ತು ಅಗತ್ಯ ಖನಿಜಗಳಿಂದ ತುಂಬಿದೆ. ವಿಟಮಿನ್ ಸಿ ಧಾರಾಳವಾಗಿರುವ ಬ್ರೊಕೋಲಿಯನ್ನು ಸ್ಯಾಂಡ್ ವಿಚ್, ಸೂಪ್, ಸಲಾಡ್ ರೂಪದಲ್ಲಿ ಸೇವಿಸಿ ನಿಮ್ಮ ಮಲಬದ್ಧತೆಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.

Read More