ನವದೆಹಲಿ: ಬೋಳು ತಲೆಯಿದ್ದವರು ಕೂದಲನ್ನು ಬೆಳೆಸಲು ಔಷಧಿಗಳ ಮೊರೆ ಹೋಗುವುದು ಸಾಮಾನ್ಯ. ಇತ್ತೀಚಿನ ದಿನಗಳಲ್ಲಿ ಜನರು ಕೂದಲ ಕಸಿ ಮಾಡಿಸುವಲ್ಲಿಗೆ ವಾಲುತ್ತಿದ್ದಾರೆ. ಆದರೆ ಕೂದಲ ಕಸಿ ಮಾಡಿಸಿಕೊಳ್ಳಲು ಹೋದವರೊಬ್ಬರು ವೈದ್ಯರ ಯಡವಟ್ಟಿನಿಂದ ಜೀವವನ್ನೇ ಕಳೆದುಕೊಂಡಿರುವ ಆಘಾತಕಾರಿ ಘಟನೆಯೊಂದು ನಡೆದಿದೆ. ದೆಹಲಿಯ ವ್ಯಕ್ತಿ ಅಥರ್ ರಶೀದ್ (30) ಕೂದಲ ಕಸಿ ಮಾಡಿಸಿಕೊಳ್ಳಲು ಕ್ಲಿನಿಕ್‌ಗೆ ಹೋಗಿದ್ದರು. ಆದರೆ ಕೂದಲ ಕಸಿ ಮಾಡಿಸಿಕೊಂಡ ಬಳಿಕ ಅವರು ತೀವ್ರವಾದ ನೋವಿನಿಂದ ಬಳಲುತ್ತಿದ್ದು, ಬಹು ಅಂಗಾಂಗ ವೈಫಲ್ಯ ಉಂಟಾಗಿ ಸಾವನ್ನಪ್ಪಿದ್ದಾರೆ. ರಶೀದ್ ತಮ್ಮ ಮನೆಯಲ್ಲಿ ಒಬ್ಬರೇ ದುಡಿಯುತ್ತಿದ್ದ ವ್ಯಕ್ತಿಯಾಗಿದ್ದು, ತಮ್ಮ ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಕೂದಲ ಶಸ್ತ್ರಚಿಕಿತ್ಸೆಯ ಬಳಿಕ ನನ್ನ ಮಗ ತುಂಬಾ ನೋವಿನಿಂದ ಬಳಲುತ್ತಿದ್ದ ಆತನ ಮೈಮೇಲೆ ಗುಳ್ಳೆಗಳಾಗಿದ್ದವು ಎಂದು ರಶೀದ್ ತಾಯಿ ಆಸಿಯಾ ಬೇಗಂ ತಿಳಿಸಿದ್ದಾರೆ. ಘಟನೆಯ ಬಳಿಕ ರಶೀದ್ ಕುಟುಂಬದ ಸದಸ್ಯರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಶಸ್ತ್ರಚಿಕಿತ್ಸೆ ನಡೆಸಿದ ಇಬ್ಬರು ವೈದ್ಯರು ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
Author: main-admin
ಚಿಕ್ಕಮಗಳೂರು : ವಿವಾದಿತ ದತ್ತಪೀಠಕ್ಕೆ ಇಬ್ಬರು ಹಿಂದೂ ಅರ್ಚಕರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಡಳಿತ ಮಂಡಳಿಯ ಶಿಫಾರಸ್ಸಿನ ಮೇರೆಗೆ ಶೃಂಗೇರಿ ಮೂಲದ ಶ್ರೀಕಾಂತ್ ಹಾಗೂ ಚಿಕ್ಕಬಳ್ಳಾಪುರ ಮೂಲದ ಸಂದೀಪ್ ಎಂಬ ಇಬ್ಬರು ಹಿಂದೂ ಅರ್ಚಕರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅರ್ಚಕರ ನೇಮಕ ಸಂಬಂಧ ರಾಜ್ಯಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿತ್ತು. ಈ ಆಡಳಿತ ಮಂಡಳಿಯಲ್ಲಿ ಓರ್ವ ಮುಸ್ಲಿಂ ಸದಸ್ಯ ಸೇರಿ 8 ಜನರು ಇದ್ದರು. ಅರ್ಚಕರ ನೇಮಿಸುವ ಅಧಿಕಾರ ಆಡಳಿತ ಮಂಡಳಿಗೆ ಇದೆ ಎಂದು ರಾಜ್ಯ ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿತ್ತು, ಅಂತೆಯೇ ಆಡಳಿತ ಮಂಡಳಿ ಇಬ್ಬರು ಅರ್ಚಕರನ್ನು ನೇಮಿಸಿ ಆದೇಶ ಹೊರಡಿಸಿದೆ. ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯ ವಿವಾದಾತ್ಮಕ ದತ್ತ ಪೀಠದಲ್ಲಿ ಡಿಸೆಂಬರ್ 6, 7, 8 ರಂದು ದತ್ತ ಜಯಂತಿಗೆ ಹೈಕೋರ್ಟ್ ಅನುಮತಿ ಮಂಜೂರಾಗಿದೆ. ತೀವ್ರ ಕುತೂಹಲ ಕೆರಳಿಸಿದ್ದ ಪ್ರಕರಣದಲ್ಲಿ ಅನುಮತಿ ನೀಡಲಾಗಿದೆ.ಇನ್ನೂ, ದತ್ತಪೀಠದಲ್ಲಿ ದತ್ತಜಯಂತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗಿರಿಧಾಮಕ್ಕೆ ಭೇಟಿ…
ಉಡುಪಿ: ಜನರ ತೀವ್ರ ವಿರೋಧದ ನಡುವೆಯೂ ಸದ್ದಿಲ್ಲದೇ ಹೆಜಮಾಡಿ ಟೋಲ್‌ನಲ್ಲಿ ವಾಹನಗಳಿಂದ ಹೆಚ್ಚುವರಿ ಶುಲ್ಕ ವಸೂಲಿಗೆ ಮುಂದಾಗಿರುವುದು ಜನಾಕ್ರೋಶಕ್ಕೆ ಕಾರಣ ವಾಗಿದೆ. ಸಾರ್ವಜನಿಕರು ಮತ್ತೆ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ. ಜಿಲ್ಲೆಯ ಶಾಸಕರು, ಸಚಿವರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳೂ ಸುರತ್ಕಲ್ ಟೋಲ್‌ನ ದರವನ್ನು ಹೆಜಮಾಡಿಯಲ್ಲಿ ಸಂಗ್ರಹಿಸಲು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಇದಾವುದಕ್ಕೂ ಟೋಲ್ ಗುತ್ತಿಗೆಯ ಕಂಪೆನಿಯಾಗಲೀ ಅಥವಾ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಾಗಲೀ ಬೆಲೆಯೇ ಕೊಡದಿರುವುದೂ ಜನಾಕ್ರೋಶವನ್ನು ಹೆಚ್ಚಿಸಿದೆ. ಹೆಜಮಾಡಿ ಟೋಲ್ ದರ ಪರಿಷ್ಕರಣೆ ವಿಷಯವಾಗಿ ಡಿ. 5ರಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯ ಸಚಿವ ನಿತಿನ್ ಗಡ್ಕರಿಯವರು ವಿಶೇಷ ಸಭೆ ನಡೆಸುವುದಾಗಿ ಶಾಸಕ ಕೆ. ರಘುಪತಿ ಭಟ್ ಅವರಿಗೆ ಭರವಸೆ ನೀಡಿದ್ದರು. ಹಾಗೆಯೇ ಡಿ. 3ರಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಇಂಧನ ಸಚಿವ ಸುನಿಲ್ ಕುಮಾರ್ ಸಹಿತ ಜಿಲ್ಲೆಯ ಶಾಸಕರು ಹಾಗೂ ಜನಪ್ರತಿನಿಧಿಗಳ ಸಭೆ ನಡೆದಿತ್ತು. ಈ ಸಭೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು…
ಮಂಗಳೂರು: ಕರ್ತವ್ಯ ನಿರತ ಪೊಲೀಸರ ಮೇಲೆ ಚಾಲಕನೊಬ್ಬ ಆಟೋ ರಿಕ್ಷಾ ನುಗ್ಗಿಸಿ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಹೈವೇ ಪಟ್ರೋಲ್ ವಾಹನಕ್ಕೆ ಢಿಕ್ಕಿ ಹೊಡೆಸುವ ರೀತಿಯಲ್ಲಿ ಚಲಾಯಿಸಿ, ಬಳಿಕ ಪರಾರಿಯಾದ ಘಟನೆ ಗುರುವಾರ ರಾತ್ರಿ ಪಂಪ್‌ವೆಲ್ ಚೆಕ್‌ಪಾಯಿಂಟ್‌ನಲ್ಲಿ ನಡೆದಿದೆ. ಮಂಗಳೂರು ಸಂಚಾರಿ ದಕ್ಷಿಣ ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕ ಸುಗುಮಾರನ್ ಅವರು ಸಿಬಂದಿ ಎಎಚ್‌ಸಿ ಮಹೇಶ್, ಎಎಸ್‌ಐ ಸಂತೋಷ್ ಪಡೀಲ್, ಸಿಎಚ್‌ಸಿ ರಾಜೇಶ್ ಮತ್ತು ಸಿಪಿಸಿ ಸುರೇಶ್ ಮತ್ತು ವೀರೇಶ್ ಅವರೊಂದಿಗೆ ವಾಹನ ತಪಾಸಣೆ ಕರ್ತವ್ಯದಲ್ಲಿದ್ದರು.ಈ ರಾತ್ರಿ ಸುಮಾರು 9.45ರ ವೇಳೆಗೆ ಕಂಕನಾಡಿ ಹಳೇ ರಸ್ತೆ ಕಡೆಯಿಂದ ಪಂಪ್‌ವೆಲ್‌ಗೆ ವೇಗವಾಗಿ ಆಟೋ ರಿಕ್ಷಾ ಬರುತ್ತಿರುವುದನ್ನು ಗಮನಿಸಿದ ಪೊಲೀಸ್ ಸಿಬಂದಿ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಈ ವೇಳೆ ಚಾಲಕ ದುಡುಕುತನ ಹಾಗೂ ನಿರ್ಲಕ್ಷತನದಿಂದ ಜೀವಕ್ಕೆ ಅಪಾಯಕಾರಿಯಾಗುವ ರೀತಿಯಲ್ಲಿ ಯದ್ವಾತದ್ವಾ ಚಲಾಯಿಸಿ ಆಟೋವನ್ನು ಒಮ್ಮೆಲೇ ಪೊಲೀಸರತ್ತ ನುಗ್ಗಿಸಿಕೊಂಡು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಇಲಾಖಾ ಹೈವೇ ಪಟ್ರೋಲ್ ವಾಹನಕ್ಕೆ ಢಿಕ್ಕಿಪಡಿಸುವ ರೀತಿಯಲ್ಲಿ ಚಲಾಯಿಸಿ ಬಿ.ಸಿ. ರೋಡ್ ಕಡೆಗೆ ಪರಾರಿಯಾಗಿದ್ದಾನೆ…
ಕಾರ್ಕಳ: ಕಾಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಶನಿವಾರ ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಚೇತನಹಳ್ಳಿಯ ಕೀರ್ತನಾ(19) ಎಂಬವಳು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಆದರೆ ಆಕೆಯ ಅಣ್ಣ ಬೆಳಗ್ಗೆ ಬೈದು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಈ ಕೃತ್ಯ ಎಸಗಿದ್ದಾಳೆ ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಪೊಲೀಸ್ ತನಿಖೆಯಿಂದ ಬಯಲಾಗಬೇಕಿದೆ.
ಬೆಳ್ತಂಗಡಿ : ಶ್ರೀಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಬಯಲಾಟಕ್ಕೆ ಹಾಕಿದ್ದ ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಮರೋಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪೊಸರಡ್ಕ ಗರಡಿ ವಠಾರದಲ್ಲಿ ಬುಧವಾರದಂದು ನಡೆದಿದ್ದ ಯಕ್ಷಗಾನ ಬಯಲಾಟಕ್ಕೆ ಶುಭ ಕೋರಲು ಅನೇಕ ಬ್ಯಾನರ್ಗಳನ್ನು ಅಳವಡಿಸಲಾಗಿತ್ತು. ಕೆಲವು ಕಿಡಿಗೇಡಿಗಳು ಏಕಾ ಏಕಿ ನಿನ್ನೆ ರಾತ್ರಿ ಬ್ಯಾನರ್ ನ್ನು ಹರಿದು ಕಿತ್ತೆಸೆದ ಘಟನೆ ವರದಿಯಾಗಿದೆ. ಪೊಸರಡ್ಕ ವಠಾರದಲ್ಲೂ ಗರಡಿಯಿದ್ದು ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನವೂ ಸಾವಿರಾರು ಭಕ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು. ಆದರೆ ಇದನ್ನು ಸಹಿಸಿದ ಕಿಡಿಗೇಡಿಗಳ ಗುಂಪು ಬ್ಯಾನರ್ ತೆರವುಗೊಳಿಸುವ ಮುನ್ನವೇ ಅದನ್ನು ಹರಿದು ಕ್ಷೇತ್ರಕ್ಕೆ ಅಪಮಾನವೇಸೆಗಿದ್ದಾರೆ. ಈ ವಿಕೃತಿ ಮೆರೆದವರು ಯಾರೆ ಇದ್ದರು ತಪ್ಪೋಪ್ಪಿಕೊಳ್ಳದೆ ಹೋದರೆ ದೈವಗಳ ಮೊರೆ ಹೋಗುವುದಾಗಿ ಯಕ್ಷಗಾನ ಆಯೋಜಕರು ತಿಳಿಸಿದ್ದಾರೆ.
ಮಂಗಳೂರು: ಮಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 2023ರ ಹೊಸ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ, ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ನಿರ್ದೇಶಿಸಿದ್ದಾರೆ. ಹೊಸ ವರ್ಷಾಚರಣೆಯ ಸಂತೋಷ ಕೂಟಗಳನ್ನು ನಡೆಸುವ ನಗರದ ಎಲ್ಲಾ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳ ಮಾಲಕರು, ವ್ಯವಸ್ಥಾಪಕರು, ಆಡಳಿತ ವರ್ಗದವರು ಈ ಬಗ್ಗೆ ಕಡ್ಡಾಯವಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಅರ್ಜಿ ಸಲ್ಲಿಸಿ ಪೂರ್ವಾನುಮತಿ ಪಡೆದುಕೊಳ್ಳಬೇಕು. ಡಿಸೆಂಬರ್ 31ರ ರಾತ್ರಿ ಆರಂಭವಾಗುವ ಹೊಸ ವರ್ಷಾಚರಣೆಯ ಸಂತೋಷ ಕೂಟಗಳನ್ನು ನಡೆಸಲು ಡಿಸೆಂಬರ್ 15ರ ಸಂಜೆ 5ಗಂಟೆಯೊಳಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ವರ್ಷಾಚರಣೆ ಆಚರಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕಾರ್ಯಕ್ರಮಗಳ ಧ್ವನಿವರ್ಧಕವನ್ನು ರಾತ್ರಿ 10 ಗಂಟೆಯೊಳಗೆ ಒಳಾವರಣದಲ್ಲಿ ಮಾತ್ರ ಮುಕ್ತಾಯಗೊಳಿಸಬೇಕು ಎಂದು ತಿಳಿಸಿದ್ದಾರೆ. ಅಲ್ಲದೆ ಮದ್ಯವಿತರಣೆಗೆ ಅಬಕಾರಿಯಿಂದ ಅನುಮತಿ, ವಿದ್ಯಾರ್ಥಿಗಳಿಗೆ ಮದ್ಯಪಾನ ನಿಷೇಧ,…
ಚೆನ್ನೈ: ತಮಿಳುನಾಡಿನಾದ್ಯಂತದ ದೇವಾಲಯಗಳಲ್ಲಿ ಮೊಬೈಲ್ ಫೋನ್ ಗಳನ್ನು ಮದ್ರಾಸ್ ಹೈಕೋರ್ಟ್ ನಿಷೇಧಿಸಿದೆ. ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಕ್ರಮವು ಪೂಜಾ ಸ್ಥಳಗಳ ಪರಿಶುದ್ಧತೆ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವುದು ಎಂದು ನ್ಯಾಯಾಲಯ ಹೇಳಿದೆ. ಜನರಿಗೆ ಅನಾನುಕೂಲವಾಗುವುದನ್ನು ತಪ್ಪಿಸಲು, ದೇವಾಲಯಗಳಲ್ಲಿ ಫೋನ್ ಡೆಪಾಸಿಟ್ ಲಾಕರ್ ಗಳನ್ನು ಸ್ಥಾಪಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಈ ಆದೇಶದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಸಿಬ್ಬಂದಿಯನ್ನು ಸಹ ನೇಮಕ ಮಾಡಬೇಕು ಎನ್ನಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್.ಮಹದೇವನ್ ಮತ್ತು ಜೆ.ಸತ್ಯ ನಾರಾಯಣ ಪ್ರಸಾದ್ ಅವರು, ಭಕ್ತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದರ ಜೊತೆಗೆ ದೇವಾಲಯದ ಪಾವಿತ್ರ್ಯವನ್ನು ಕಾಪಾಡಲು ದೇವಾಲಯದ ಆವರಣದಲ್ಲಿ ಸೆಲ್ ಫೋನ್ ಬಳಕೆಯನ್ನು ನಿಷೇಧಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಫೋನ್ ಗಳು ಮತ್ತು ಕ್ಯಾಮೆರಾಗಳ ಬಳಕೆಯು ಭಕ್ತರ ಗಮನವನ್ನು ಬೇರೆಡೆಗೆ ಸೆಳೆಯುತ್ತದೆ ಅಂತ ಹೇಳಿದೆ. ದೇಶಾದ್ಯಂತದ ದೇವಾಲಯಗಳಲ್ಲಿ (ಉದಾಹರಣೆಗೆ: ಗುರುವಾಯೂರಿನ ಶ್ರೀ ಕೃಷ್ಣ ದೇವಾಲಯ, ತಿರುಪತಿಯ ಶ್ರೀ ವೆಂಕಟೇಶ್ವರ ದೇವಾಲಯ) ಮೊಬೈಲ್ ಫೋನ್ಗಳ ಮೇಲಿನ ನಿಷೇಧವನ್ನು…
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಆಗಮಿಸಿದ ಹತ್ತು ಪುರುಷ ಪ್ರಯಾಣಿಕರಿಂದ ನ.1 ರಿಂದ 30 ರ ನಡುವೆ 10 ಮಂದಿ ಪ್ರಯಾಣಿಕರಿಂದ 4,01,18,280ರೂ. ಮೌಲ್ಯದ 7 ಕೆಜಿ 692 ಗ್ರಾಂ ಅಕ್ರಮ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಎಲ್ ಇಡಿ ಬಲ್ಬ್, ರಿಸ್ಟ್ ವಾಚ್, ಮೊಬೈಲ್ ಫೋನ್ ಗಳ ಕೀಪ್ಯಾಡ್, ಟ್ರಾಲಿ ಬ್ಯಾಗ್ ಗಳ ಬೀಡಿಂಗ್, ಕಾರ್ಟನ್ ಬಾಕ್ಸ್ ಗಳಲ್ಲಿ ಪೇಸ್ಟ್ ಮತ್ತು ಪೌಡರ್ ರೂಪದಲ್ಲಿ, ಬೆಳ್ಳಿಯ ಕೋಟಿಂಗ್ ಮಾಡಿ ಮರೆಮಾಚಿ ವಿವಿಧ ವಿಧಾನಗಳ ಮೂಲಕ ಚಿನ್ನವನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು. ಒಳ ಉಡುಪು ಮತ್ತು ಗುದನಾಳದ ಒಳಗೆ ಘನ ಗಮ್‌ನೊಂದಿಗೆ ಪೇಸ್ಟ್ ಅಥವಾ ಪುಡಿ ರೂಪದಲ್ಲಿ ಮರೆಮಾಚಿರುವುದು ಸೇರಿ ವಿವಿಧ ವಿಧಾನಗಳ ಮೂಲಕ ಚಿನ್ನವನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು.
ಮಂಗಳೂರು: ನಮ್ಮ ಜಿಲ್ಲೆಯಲ್ಲಿ ಇರುವ ಮರಳು ನಮ್ಮ ಜಿಲ್ಲೆಯ ಉಪಯೋಗಕ್ಕೆ ಬಳಕೆ ಮಾಡಬೇಕು. ಸದ್ಯಕ್ಕೆ ನನಗಿರುವ ಮಾಹಿತಿ ಪ್ರಕಾರ ನಮ್ಮ ಜಿಲ್ಲೆಯ ಮರಳು ರಾತ್ರಿಯ ವೇಳೆಗೆ ಕೇರಳದ ಕಡೆಗೆ ಹೋಗುತ್ತಿದೆ ಅನ್ನುವ ಮಾಹಿತಿ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದರು. ಮರಳು ಹೊರ ರಾಜ್ಯಗಳಿಗೆ ಅಕ್ರಮವಾಗಿ ಸಾಗಾಟವಾಗುತ್ತಿದೆ ಎನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಸುದ್ದಿಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಕಳೆದ ಒಂದು ವಾರದ ಹಿಂದೆ ರಾತ್ರಿ 11 ಗಂಟೆಯ ಸಮಯದಲ್ಲಿ ಕೇರಳ ಭಾಗಕ್ಕೆ ನಮ್ಮ ಕಡೆಯಿಂದ ಎಷ್ಟು ಮರಳು ತುಂಬಿದ ಲಾರಿಗಳು ಬರುತ್ತವೆ ಅನ್ನುವುದನ್ನು ನೋಡುವುದಕ್ಕೆ ಹೋಗಿದ್ದೆ. ಆಗ ಸುಮಾರು 2 ರಿಂದ 3 ಮರಳು ಲಾರಿಗಳು ನಮ್ಮ ಕಡೆಯಿಂದ ಕೇರಳ ಕಡೆಗೆ ಬಂದು ನಿಂತಿದ್ದನ್ನು ನಾನು ಗಮನಿಸಿದ್ದೇನೆ. ಆದ್ರೆ ಇವುಗಳು ನಿಯಮಗಳನ್ನು ಪಾಲನೇ ಮಾಡಿದೆಯೋ ಅಥವಾ ಮಾಡಿಲ್ಲವೋ ಅನ್ನುವುದನ್ನು ಪರಿಶೀಲನೆ ಮಾಡುವುದಕ್ಕೆ ಹೋಗಿಲ್ಲ. ಈ ಹಿಂದೆ ಇಲ್ಲಿ ಮರಳು ಸಾಗಾಟಕ್ಕೆ ಅಧಿಕೃತವಾಗಿ…