ಮಂಗಳೂರು: ಮನೆಯ ಬೀಗ ಮುರಿದು ಚಿನ್ನಾಭರಣ ಕಳವು ಮಾಡಿರುವ ಘಟನೆ ನಗರದ ಹೊರವಲಯದ ಕುಲಶೇಖರ ಜ್ಯೋತಿ ನಗರದಲ್ಲಿ ನಡೆದಿದೆ. ಮನೆಯವರು ಮೇ 17ರಂದು ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದರು. ಮೇ 20ರಂದು ಬಂದು ನೋಡಿದಾಗ ಎದುರು ಬಾಗಿಲಿನ ಬೀಗ ಮುರಿದಿತ್ತು. ಒಳಗೆ ಹೋದಾಗ ಯಾರೋ ಕಳ್ಳರು ಕಪಾಟಿನ ಬಾಗಿಲನ್ನು ಮುರಿದು ಅದರೊಳಗಿದ್ದ 1.3 ಗ್ರಾಂ ತೂಕದ ಚಿನ್ನದ ಒಂದು ಪೆಂಡೆಂಟ್, 5 ಗ್ರಾಂ ತೂಕದ ಚಿನ್ನದ ಬ್ರಾಸ್ಲೆಟ್, 3 ಸಣ್ಣ ಉಂಗುರಗಳು, ಬೆಳ್ಳಿಯ ಪೆಂಡೆಂಟ್, ಕಾಲುಗೆಜ್ಜೆ, 3 ಬೆಳ್ಳಿಯ ಉಂಗುರಗಳು, ವಾಚ್ ಸೇರಿದಂತೆ ಅಂದಾಜು 66,000 ರೂ. ಮೌಲ್ಯದ ಚಿನ್ನಾಭರಣಗಳು ಹಾಗೂ ಅಂದಾಜು 1,000 ರೂ. ಮೌಲ್ಯದ ಬೆಳ್ಳಿಯ ಆಭರಣಗಳು ಕಳವು ಮಾಡಿರುವುದು ಗೊತ್ತಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: main-admin
ಮಂಗಳೂರು : ಇಡೀ ದೇಶವನ್ನೇ ಬೆಚ್ಚಿಬಿಳಿಸಿದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ 14 ವರ್ಷ ಸಂದಿದೆ. ಈ ದುರಂತದಲ್ಲಿ ಮಡಿದವರಿಗೆ ದಕ್ಷಿಣಕನ್ನಡ ಜಿಲ್ಲಾಡಳಿತ ಶೃದ್ದಾಂಜಲಿ ಸಲ್ಲಿಸಿತು. ವಿಮಾನ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಗುರುತು ಹಿಡಿಯಲಾಗದ 12 ಮಂದಿಯ ಮೃತದೇಹಗಳನ್ನು ಕುಳೂರಿನ ನದಿ ಕಿನಾರೆಯಲ್ಲಿ ಸಮಾಧಿ ಮಾಡಲಾಗಿತ್ತು. ಅದೇ ಜಾಗದಲ್ಲಿ ದುರಂತದಲ್ಲಿ ಮಡಿದವರ ನೆನಪಿಗಾಗಿ ಪಾರ್ಕ್ ನಿರ್ಮಾಣ ಮಾಡಲಾಗಿದ್ದು. ವಿಮಾನ ದುರಂತದಲ್ಲಿ ಮಡಿದ 158 ಮಂದಿಯ ನೆನಪಿಗಾಗಿ ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ನಿರ್ಮಿಸಲಾದ ಪಾರ್ಕ್‌ನಲ್ಲಿ ಪ್ರತಿ ವರ್ಷ ಜಿಲ್ಲಾಡಳಿತದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಲಾಗುತ್ತದೆ. ಇಂದು ಜಿಲ್ಲಾಧಿಕಾರಿ ಹಾಗೂ ವಿಮಾನ ದುರಂತದಲ್ಲಿ ಮಡಿದವರ ಕುಟುಂಬದವರು ಶೃದ್ದಾಂಜಲಿ ಸಲ್ಲಿಸಿದರು. ಮೇ 22ರಂದು ಬೆಳಗ್ಗೆ 6:20ಕ್ಕೆ ದುಬೈನಿಂದ ಆಗಮಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಹಂತದಲ್ಲಿ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ 166 ಮಂದಿಯ ಪೈಕಿ 158 ಮಂದಿ ಮೃತಪಟ್ಟಿದ್ದರು.…
ಹಾಸನ: ಜನಸಾಮಾನ್ಯರು ಆನ್‌ಲೈನ್ ವಂಚಕರ ಬಲೆಗೆ ಬಿದ್ದು ಬ್ಯಾಂಕ್ ಖಾತೆಯಲ್ಲಿನ ಹಣ ಕಳೆದುಕೊಂಡು ಪೊಲೀಸರ ಮೊರೆ ಹೋಗುವುದನ್ನು ದಿನನಿತ್ಯ ಕೇಳುತ್ತೇವೆ. ಆದರೆ ಇಲ್ಲಿ ಖದೀಮರು ಡಿವೈಎಸ್‌ಪಿ ದರ್ಜೆಯ ಅಧಿಕಾರಿಯ ಖಾತೆಗೆ ಕನ್ನ ಹಾಕಿ 16 ಲಕ್ಷ ರೂ. ಎಗರಿಸಿದ್ದಾರೆ! ಹೌದು, ಹಾಸನ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಬ್ಯಾಂಕ್ ಖಾತೆಗಳಿಂದ ಅಪರಿಚಿತ ಖದೀಮರು ತಮ್ಮ ಬ್ಯಾಂಕ್ ಖಾತೆಗಳಿಗೆ 15,98,761 ರೂ. ಹಣವನ್ನು ವರ್ಗಾವಣೆ ಮಾಡಿಕೊಂಡು ವಂಚನೆ ಮಾಡಿದ್ದಾರೆ. ಈ ಸಂಬಂಧ ಡಿವೈಎಸ್ಪಿ ಪಿ.ಕೆ.ಮುರಳೀಧರ್ ಅವರು ನಗರದ ಸಿಇಎನ್ ಠಾಣೆಗೆ ನಿನ್ನೆ ದೂರು ನೀಡಿದ್ದಾರೆ. ಅವರು, ಕೆನರಾಬ್ಯಾಂಕ್ ನ ಮಡಿಕೇರಿ ಮುಖ್ಯ ಶಾಖೆ ಹಾಗೂ ಭಾಗಮಂಡಲ ಶಾಖೆಯಲ್ಲಿ ಖಾತೆಗಳನ್ನು ಹೊಂದಿದ್ದಾರೆ. ಮೇ 20 ರಂದು ಮಧ್ಯಾಹ್ನ 1.30ಕ್ಕೆ ಅವರ ಮೊಬೈಲ್ ಗೆ ಬಂದ ಬ್ಯಾಂಕ್ ಎಸ್ಸೆಮ್ಮೆಸ್ ಗಳಿಂದ ಅವರ ಖಾತೆಯಿಂದ ಹಣ ವರ್ಗಾವಣೆಯಾಗಿರುವ ವಿಷಯ ಗೊತ್ತಾಗಿದೆ. ಬೆಳಗ್ಗೆ 10.28 ರಿಂದ ಮಧ್ಯಾಹ್ನ 12.56ರವರೆಗೆ 10 ವರ್ಗಾವಣೆಗಳ ಮೂಲಕ ಹಣ ಅಪರಿಚಿತ ವಂಚಕರ ಬೇರೆ…
ಮಂಗಳೂರು: ಭಾರೀ ಗಾತ್ರದ ಮರದ ಕೊಂಬೆ ಮುರಿದು ಬಿದ್ದು ಪಾರ್ಕ್ ಮಾಡಿರುವ ಎರಡು ಕಾರುಗಳು ಜಖಂಗೊಂಡ ಘಟನೆ ನಗರದ ಕರಂಗಲಪಾಡಿ ಬಳಿಯ ಕೋರ್ಟ್ ಸಂಪರ್ಕ ರಸ್ತೆಯ ಬಳಿ ನಡೆದಿದೆ. ಈ ಘಟನೆ ಮಂಗಳವಾರ ರಾತ್ರಿ 9.30ವೇಳೆಗೆ ನಡೆದಿದೆ. ಕರಂಗಲಪಾಡಿಯಿಂದ ಕೋರ್ಟ್ ಸಂಪರ್ಕ ರಸ್ತೆಯ ಬುಡದಲ್ಲಿಯೇ ಆಮ್ಲೇಟ್ ಅಂಗಡಿಯಿದ್ದು, ಈ ವೇಳೆ ಅಲ್ಲಿ ಹೆಚ್ಚಿನ ಗ್ರಾಹಕರೂ ಇದ್ದರು. ಅಲ್ಲಿಯೇ ಪಕ್ಕದಲ್ಲಿರುವ ಭಾರೀ ಗಾತ್ರದ ಆಲದ ಮರದ ಕೊಂಬೆ ಮುರಿದುಬಿದ್ದಿದೆ. ವಾಹನಗಳನ್ನು ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದು, ವಾಹನಗಳ ಒಳಗಡೆ ಯಾರೂ ಇರಲಿಲ್ಲ. ಆದ್ದರಿಂದ ಯಾವುದೇ ಸಾವು-ನೋವು ಸಂಭವಿಸಿಲ್ಲ. ಅಲ್ಲದೆ ಕೊಂಬೆ ಮುರಿದುಬೀಳುವ ವೇಳೆಗೆ ರಸ್ತೆಯಲ್ಲಿ ಯಾವುದೇ ವಾಹನಗಳು ಸಂಚರಿಸದ ಪರಿಣಾಮ ಭಾರೀ ಅನಾಹುತ ತಪ್ಪಿದಂತಾಗಿದೆ. ತಕ್ಷಣ ಸ್ಥಳಕ್ಕೆ ಹೊಯ್ಸಳ ವಾಹನ ದೌಡಾಯಿಸಿದೆ. ಅಲ್ಲದೆ ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿ ಮರವನ್ನು ತೆರವುಗೊಳಿಸಿದ್ದಾರೆ. ಘಟನೆಯಿಂದ ಎರಡು ಕಾರುಗಳು ಜಖಂಗೊಂಡಿದೆ.
ಬೆಂಗಳೂರು: ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರು ಸದ್ಯಕ್ಕೆ ಬೀಸುವ ದೊಣ್ಣೆಯಿಂದ ಪಾರಾಗಲಿದ್ದಾರೆ. ಹೆಚ್‌ಎಸ್‌ಆರ್‌ಪಿ ಅಳವಡಿಸದವರ ವಿರುದ್ಧ ಜೂನ್ 12ರ ವರೆಗೂ ಯಾವುದೇ ಕಠಿಣ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಂಗಳವಾರ ತಿಳಿಸಿದೆ. ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಸಿದ್ದಪಡಿಸುವ ಕಂಪನಿಗಳಲ್ಲಿ ಒಂದಾದ ಬಿಎನ್‌ಡಿ ಎನಾರ್ಜಿ ಲಿಮಿಟೆಡ್ ನಂಬರ್ ಫಲಕ ಅಳವಡಿಸಲು ವಿಧಿಸಿರುವ ಮೇ 31ರ ಗಡುವು ವಿಸ್ತರಿಸಬೇಕು ಎಂದು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ನ್ಯಾಯಮೂರ್ತಿ ಎಂಜೆಎಸ್ ಕಮಲ್ ಅವರಿದ್ದ ರಜಾಕಾಲದ ನ್ಯಾಯಪೀಠ ವಿಚಾರಣೆ ನಡೆಸಿತು. ಜೂ.11ರಂದು ವಿಚಾರಣೆ: ಸರ್ಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ರೋಬಿನ್ ಜೇಕಬ್, ಅರ್ಜಿ ವಿಚಾರಣೆ ಜೂನ್ 11ರಂದು ಪಟ್ಟಿಯಾಗಿದೆ. ಹೀಗಾಗಿ ಈ ಸಂಬಂಧ ಯಾವುದೇ ಆದೇಶ ಹೊರಡಿಸಬಾರದು ಎಂದು ಮನವಿ ಮಾಡಿದರು. ಈ ವೇಳೆ ನ್ಯಾಯಪೀಠ, ಅಲ್ಲಿಯವರೆಗೂ ಕಾಲಾವಕಾಶ ನೀಡಬಹುದೇ? ಎಂದು ಪ್ರಶ್ನಿಸಿದರು. ಇದಕ್ಕೆ ಸರ್ಕಾರಿ ವಕೀಲರು, ಜೂನ್ 12ರ ವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು…
ಬಂಟ್ವಾಳ: ಬಾರಿ ಗಾಳಿ ಮಳೆಗೆ ರಸ್ತೆ ಬದಿಯಲ್ಲಿದ್ದ ದೊಡ್ಡ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಇಬ್ಬರು ಗಾಯಗೊಂಡ ಘಟನೆ ಮಾಣಿ ಮೈಸೂರು ರಸ್ತೆಯ ಮಿತ್ತೂರು ಸಮೀಪದ ಕುಕ್ಕರಬೆಟ್ಟು ಎಂಬಲ್ಲಿ ಇದೀಗ ನಡೆದಿದೆ. ಮಂಗಳೂರು ಹಂಪನಕಟ್ಟೆ ನಿವಾಸಿಗಳು ಎಂದು ಹೇಳಲಾಗಿದ್ದು, ಇವರ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.ಕಾರಿನಲ್ಲಿ ಒಟ್ಟು ನಾಲ್ಕು ಜನಪ್ರಯಾಣಿಕರಿದ್ದು, ಮೈಸೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ.ಚಲಿಸುತ್ತಿದ್ದಾಗಲೇ ಮರ ಮುರಿದು ಬಿದ್ದ ಕಾರಣ ಕಾರು ಜಖಂಗೊಂಡಿದೆ. ಘಟನೆಯಿಂದ ಕೆಲಹೊತ್ತು ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ.ಮರ ವಿದ್ಯುತ್ ಕಂಬದ ಮೇಲೆ ಬಿದ್ದು ಕಂಬ ಮುರಿದು ಬಿದ್ದಿದೆ,ಹಾಗೂ ವಿದ್ಯುತ್ ತಂತಿಗಳು ಕಡಿದು ನಷ್ಟವುಂಟಾಗಿದೆ.ಸ್ಥಳೀಯರು ಕೂಡಲೇ ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ, ಮತ್ತು ಸಂಚಾರಕ್ಕೆ ಅಡಚಣೆಯಾಗಿದ್ದ ಮರವನ್ನು ತೆರವುಮಾಡಿದ್ದಾರೆ.
ಮಂಗಳೂರು: ಮೊಬೈಲ್ ಹಾಗೂ ಹಣ ಕದ್ದಿರುವ ಶಂಕೆಯಲ್ಲಿ ಯುವಕನೋರ್ವನಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದೆ. ಬಂಟ್ವಾಳ ಪುಣಚದ ಸಚಿನ್ (31) ಗಾಯಗೊಂಡ ಯುವಕ. ಕೇರಳ ಕೊಲ್ಲಂನ ನೌಫಾಲ್ ಆರೋಪಿ. ನೌಫಾಲ್ ಮತ್ತು ಆತನ ಸ್ನೇಹಿತ ಅನಾಸ್ ಕೇರಳದಿಂದ ಮಂಗಳೂರಿಗೆ ಬಂದಿದ್ದರು. ಅಲ್ಲಿ ಸಚಿನ್ ನೊಂದಿಗೆ ಸೇರಿ ಊಟ ಮಾಡಿ ರೈಲು ನಿಲ್ದಾಣದ ಬಳಿ ಮಲಗಿದ್ದರು. ಸೋಮವಾರ ಬೆಳಗ್ಗೆ ನೌಫಾಲ್ ಆತನ ಮೊಬೈಲ್ ಮತ್ತು ಒಂದು ಸಾವಿರ ನಗದನ್ನು ಸಚಿನ್ ಕದ್ದಿದ್ದಾನೆ ಎಂದು ಆರೋಪಿಸಿದ್ದಾನೆ. ಪರಿಣಾಮ ಇಬ್ಬರ ನಡುವೆ ವಾಗ್ವಾದ ನಡೆದು ನೌಫಾಲ್, ಸಚಿನ್‌ಗೆ ಹೊಟ್ಟೆಗೆ ಚೂರಿಯಿಂದ ಇರಿದಿದ್ದಾನೆ. ಸದ್ಯ ಸಚಿನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾ ಪಾಯದಿಂದ ಪಾರಾಗಿದ್ದಾನೆ. ಆರೋಪಿ ನೌಫಾಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಕಂಟೈನರ್ ಲಾರಿ ಮತ್ತು ಇನ್ನೋವಾ ಕಾರು ಢಿಕ್ಕಿಯಾಗಿ ತಾಯಿ-ಮಗ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಘಾಟ್ ನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಪಾಣೆಮಂಗಳೂರು ಸಮೀಪದ ಬೊಂಡಾಲ ನಿವಾಸಿ ಶಬೀರ್ ಎಂಬವರ ಪತ್ನಿ ಸಫಿಯಾ(50) ಮತ್ತು ಪುತ್ರ ಮುಹಮ್ಮದ್ ಶಫೀಕ್(20) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೈನರ್ ಲಾರಿ ಶಿರಾಡಿ ಘಾಟ್ ನ ಕೆಂಪುಹೊಳೆ ಸಮೀಪ ಢಿಕ್ಕಿ ಹೊಡೆದಿದೆ. ಅನಾರೋಗ್ಯ (ಕ್ಯಾನ್ಸರ್)ದಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಬೀರ್ ಅವರನ್ನು ಸಂದರ್ಶಿಸಿ, ಸಂಬಂಧಿಕರೋರ್ವರ ಮದುವೆ ಔತಣಕೂಟದಲ್ಲಿ ಭಾಗವಹಿಸಿ, ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಮಕ್ಕಳ ಸಹಿತ ಇತರರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಮೃತದೇಹವನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಉಳ್ಳಾಲ : ಶಾಲೆಯ ಆವರಣಗೋಡೆ ಕುಸಿದ ಪರಿಣಾಮ ಶಾಲೆಯ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿದ ಘಟನೆ ಹರೇಕಳದ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಮೃತರನ್ನು ನ್ಯೂಪಡ್ಪು ನಿವಾಸಿ ಸಿದ್ದೀಕ್– ಜಮೀಲಾ ದಂಪತಿಯ ಪುತ್ರಿ ಶಾಜಿಯಾ (7) ಎಂದು ಗುರುತಿಸಲಾಗಿದೆ. ಈ ಶಾಲೆಯಲ್ಲಿ ಮುಡಿಪು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್) ಶಿಬಿರ ನಡೆಯುತ್ತಿತ್ತು. ನ್ಯೂಪಡ್ಪು ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಶಾಜಿಯಾ ಶಿಬಿರ ನಡೆಯುತ್ತಿದ್ದ ಸ್ಥಳಕ್ಕೆ ಹೋಗಿದ್ದಳು. ಬಾಲಕಿಯು ಗೇಟಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಆವರಣ ಗೋಡೆಯು ಆಕೆಯ ಮೇಲೆ ಕುಸಿದು ಬಿದ್ದಿತ್ತು. ಮಳೆಯಿಂದಾಗಿ ಆವರಣಗೋಡೆ ಒದ್ದೆಯಾಗಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ದುರ್ಘಟನೆ ಸಂಭವಿಸಿದ ಸ್ಥಳದಲ್ಲಿ ಜನ ಗುಂಪುಗೂಡಿದ್ದರು.
ಮಂಗಳೂರು: ಅಕ್ರಮ ಪಿಸ್ತೂಲು ಹೊಂದಿದ್ದ ಆರೋಪದಲ್ಲಿ ಇಬ್ಬರು ವ್ಯಕ್ತಿಗಳನ್ನು ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಬಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಮೂಲದ ಮುಹಮ್ಮದ್ ಅಸ್ಗರ್ ಮತ್ತು ನಿಸಾರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಕಾರಿನಲ್ಲಿ ತಲಪಾಡಿ ಕಡೆ ಬಂದಿದ್ದರು ಎಂದು ತಿಳಿದು ಬಂದಿದೆ. ಬಂಧಿತರಿಂದ ಒಂದು ಪಿಸ್ತೂಲು, ಎರಡು ಮೊಬೈಲ್ ಪೋನ್, ಕೇರಳ ನೋಂದಣಿಯ ಕಾರನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ










