ಮಂಗಳೂರು : ಬೇರೊಬ್ಬರನ್ನು ಮದುವೆಯಾಗಲು ಮುಂದಾಗಿದ್ದ ಪ್ರೇಯಸಿಯ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿ ಮಂಗಳೂರು ನ್ಯಾಯಾಲಯ ತೀರ್ಪು ನೀಡಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನಕೊಟ್ಟಿ ತಾಂಡಾದ ಸಂದೀಪ್ ರಾಥೋಡ್ (23) ಶಿಕ್ಷೆಗೊಳಗಾದ ಅಪರಾಧಿಯಾಗಿದ್ದು ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಶಿಕ್ಷೆಯ ಜೊತೆ ಮತ್ತು 25 ಸಾವಿರ ರೂ ದಂಡ ವಿಧಿಸಿದೆ.ಪ್ರಕರಣದಲ್ಲಿ ಒಟ್ಟು 45 ಸಾಕ್ಷಿದಾರರನ್ನು ವಿಚಾರಿಸಲಾಗಿತ್ತು. ಒಟ್ಟು 100 ದಾಖಲೆಗಳನ್ನು ಗುರುತಿಸಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ರವೀಂದ್ರ ಎಮ್ ಜೋಶಿ ಯವರು ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು 25,000/- ರೂಪಾಯಿ ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 3 ತಿಂಗಳ ಸಾದಾ ಸಜೆ ಮತ್ತು ಭಾ.ದಂ.ಸಂ ಕಲಂ 380 ಅಪರಾದದಲ್ಲಿ 3 ತಿಂಗಳ ಸಜೆ ಮತ್ತು 1,000/- ರೂಪಾಯಿ ದಂಡ ದಂಡ ತೆರಲು ತಪ್ಪಿದ್ದಲ್ಲಿ 15 ದಿನಗಳ ಸಾದಾ ಸಜೆ, ಭಾ.ದಂ.ಸಂ ಕಲಂ 403 ಅಪರಾಧಕ್ಕೆ 3 ತಿಂಗಳ…
Author: main-admin
ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ. ಸುರಕ್ಷತಾ ಕ್ರಮಗಳು * ಗಣೇಶ ಹಬ್ಬಕ್ಕೆ ತೋರಣ, ಪೆಂಡಾಲ್, ಸೀರಿಯಲ್ ಲೈಟ್‌ಗಳನ್ನು ಹಾಕುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ. * ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ. * ಸೀರಿಯಲ್ ಲೈಟ್, ದೀಪಗಳನ್ನು ಹಾಕುವಾಗ ವಿದ್ಯುತ್ ಕಂಬದಿಂದ ಸಂಪರ್ಕ ಪಡೆಯದಿರಿ. * ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನಗಳನ್ನು ಕಟ್ಟದಿರಿ. * ಗಣೇಶ ಮೆರವಣಿಗೆ ವೇಳೆ ರಸ್ತೆ ಬದಿಯ ವಿದ್ಯುತ್ ಮಾರ್ಗಗಳ ಬಗ್ಗೆ ಎಚ್ಚರ, ವಿದ್ಯುತ್ ತಂತಿಗಳನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡದಿರಿ. ಮೆರವಣಿಗೆ ಮಾರ್ಗವನ್ನು ಮುಂಚಿತವಾಗಿ ಉಪವಿಭಾಗಾಧಿಕಾರಿಗಳ ಗಮನಕ್ಕೆ…
ಕೋಟ: ಬೇಳೂರು ಗ್ರಾಮದ ಕಲ್ಮಂಡೆ ಎಂಬಲ್ಲಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ 10 ಮಂದಿ ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಹಂಸ ಬ್ಯಾರಿ, ಮಧುಕರ, ಚೇತನ್, ಜಯ ಪ್ರಕಾಶ್, ಶ್ರೀರಾಜ್, ಮಂಜುನಾಥ, ಸುಬ್ಬಣ್ಣ ಅಶೋಕ, ಬಿ.ನರಸಿಂಹ, ಸೂರ ಬಂಧಿತ ಆರೋಪಿಗಳು. ಇವರೆಲ್ಲ ಕಲ್ಮಂಡೆ ನಿವಾಸಿ ಪ್ರತಾಪ್ ಶೆಟ್ಟಿ ಎಂಬವರ ಮನೆಯ ಹಿಂಬದಿ ಶೆಡ್‌ನಲ್ಲಿ ಅಕ್ರಮವಾಗಿ ಇಸ್ಪೀಟ್ ಜುಗಾರಿ ಆಡುತ್ತಿದ್ದು ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಹಾಗೂ 23,700 ರೂ., 10 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲವೇ ದಿನಗಳಲ್ಲಿ ಮದುವೆ ನಿಶ್ಚಿತಾರ್ಥವಾಗಬೇಕಿದ್ದ ಬೆಳ್ತಂಗಡಿಯ ಟೆಕ್ಕಿಯೊಬ್ಬ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದ ಟೆಕ್ಕಿ ಸುಬ್ರಮಣ್ಯ ಶಾಸ್ತ್ರಿ ಬಂಧಿತ ಆರೋಪಿ. ಈತ ಹೊಂಗಸಂದ್ರದ ಮನೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಗೆ ಗ್ರಾಹಕನಾಗಿ ತೆರಳಿದ್ದಾಗ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಶಾಸ್ತ್ರಿಯ ನಿಜಬಣ್ಣ ಬಯಲಾಗುತ್ತಿದ್ದಂತೆ ಶೀಘ್ರ ನಡೆಯಬೇಕಿದ್ದ ಈತನ ನಿಶ್ಚಿತಾರ್ಥ ರದ್ದುಗೊಂಡಿದೆ. ಪೊಲೀಸರು ಬಾಂಗ್ಲಾ ಮೂಲದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ.
ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸಲಿದೆ ಎಂದು ಹೇಳಲಾಗಿದೆ.
ಮೂಡುಬಿದಿರೆ: ದ್ವಿಚಕ್ರದಲ್ಲಿ ವಾಹನದಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಸರ ಎಗರಿಸಿ ಪರಾರಿಯಾಗಿರುವ ಘಟನೆ ಮಾರ್ನಾಡುವಿನಲ್ಲಿ ನಡೆದಿದೆ. ಮೂರು ಮಾರ್ನಾಡು ನಿವಾಸಿ ಪ್ರೇಮಾ (82) ಎಂಬವರು ಪೇಟೆಗೆ ಹೋಗುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ದುಷ್ಕರ್ಮಿಗಳು ಮಹಿಳೆಯ ಕತ್ತಿನಲ್ಲಿದ್ದ 24 ಗ್ರಾಂ ತೂಕದ ಸುಮಾರು 1.5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ. ಘಟನೆಯಿಂದ ಪ್ರೇಮಾರ ಕತ್ತಿನಲ್ಲಿ ಸಣ್ಣ ಗಾಯವಾಗಿದ್ದು, ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು : ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಸಾವನಪ್ಪಿದ ಘಟನೆ ಬಜ್ಪೆಯ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ.ಮೃತ ಯುವಕನನ್ನು ಪ್ರದೀಪ್ ಪೂಜಾರಿ (31) ಎಂದು ಗುರುತಿಸಲಾಗಿದೆ.ಭಾನುವಾರ ಸಂಜೆ ಪ್ರದೀಪ್ ಕ್ರಿಕೆಟ್ ಆಡುವಾಗ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕೈಕಂಬ ಖಾಸಗಿ ಆಸ್ಪತ್ರೆ ಕರೆದೊಯ್ಯಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಆಯಂಬ್ಯುಲೆನ್ಸ್ ನಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಮಂಗಳೂರು:ಚಪ್ಪಲಿ ಹೊಲಿಯುವ ಅಂಗಡಿಗೂ ಕಳ್ಳನೊಬ್ಬ ನುಗ್ಗಿ ಕಳ್ಳತನ ಮಾಡಿದ ಘಟನೆ ನಗರದ ಬಂಟ್ಸ್ ಹಾಸ್ಟೆಲ್ ಬಳಿ ರಾಮಕೃಷ್ಣ ಕಾಲೇಜಿನ ಪಕ್ಕದಲ್ಲಿ ನಡೆದಿದೆ. ಚರ್ಮ ಕುಟೀರದ ಪೆಟ್ಟಿಗೆ ಅಂಗಡಿಯಿಂದ ಛತ್ರಿ, ಚಪ್ಪಲಿ ಹಾಗೂ ₹ 40 ಸಾವಿರ ನಗದು ಸೇರಿ ₹ 1.35 ಲಕ್ಷ ಮೌಲ್ಯದ ಸ್ವತ್ತು ಕಳವಾದ ಬಗ್ಗೆ ನಗರ ಪೂರ್ವ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಅಗಸ್ಟ್ 30 ಸಂಜೆ 7.30 ಗಂಟೆಗೆ ಅಂಗಡಿ ಮುಚ್ಚಿದ್ದೆ. ಮರುದಿನ ಬೆಳಿಗ್ಗೆ 9ಕ್ಕೆ ಬಂದು ನೋಡಿದಾಗ ಅಂಗಡಿಯ ಬಾಗಿಲು ತೆರೆದಿತ್ತು. ಅಂಗಡಿಯಲ್ಲಿಟ್ಟಿದ್ದ, ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ನಗದೀಕರಿಸಿದ್ದ ₹40 ಸಾವಿರ ನಗದು, 30 ಛತ್ರಿಗಳು ಹಾಗೂ 50 ಜೊತೆ ಚಪ್ಪಲಿಗಳು ಕಳುವಾಗಿದ್ದವು. ಕಳುವಾದ ಛತ್ರಿ ಮತ್ತು ಚಪ್ಪಲಿಗಳ ಅಂದಾಜು ಮೌಲ್ಯ ₹ 95ಸಾವಿರ’ ಎಂದು ಅಂಗಡಿ ಮಾಲೀಕ ರಾಮ ಎಸ್.ಅವರು ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾರ್ಕಳ : ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯ ಮನೆಯೊಂದರ ಬೀಗ ಮುರಿದು ಚಿನ್ನ ಕಳ್ಳತನ ಮಾಡಿದ ಆರೋಪಿಯನ್ನು ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾಳ ಗ್ರಾಮದ ನಿವಾಸಿ ತಂಗಚ್ಚನ್ ಮಗ ಸಂತೋಷ್ ಟಿ. ಬಂಧಿತ ಆರೋಪಿಯಾಗಿದ್ದು ಈತ ಆ. 30 ರಂದು ಗುರ್ಗಾಲ್ ಗುಡ್ಡೆಯ ಮನೆಯೊಂದರ ಬಾಗಿಲು ಮುರಿದು ಬೆಡ್ ರೂಂನ ಲಾಕರ್ ನಲ್ಲಿದ್ದ 33 ಪವನ್ ಮೌಲ್ಯದ ವಿವಿಧ ರೀತಿಯ ಚಿನ್ನಾಭರಣ ಕಳ್ಳತನ ಮಾಡಿದ್ದ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು 33 ಪವನ್ ಚಿನ್ನಾಭರಣ ಸಹಿತ ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಠಾಣಾ ಪಿಎಸ್‌ಐ ದಿಲೀಪ್ ಜಿ. ಆರ್., ತನಿಖಾ ವಿಭಾಗದ ಪಿ.ಎಸ್.ಐ. ಸುಂದರ ಹಾಗೂ ಸಿಬ್ಬಂದಿ ಮಹಾಂತೇಶ್, ಪ್ರಶಾಂತ್ ಕೆ., ವಿಶ್ವನಾಥ, ಶಶಿಕುಮಾರ್, ನಾಗರಾಜ, ಗೋವಿಂದ ಆಚಾರಿ ರಾಘವೇಂದ್ರ, ಅಶೋಕ ಭಾಗಿಯಾಗಿದ್ದರು.
ಮಂಗಳೂರು: ಗಣೇಶೋತ್ಸವ ಹಾಗೂ ಮೀಲಾದುನ್ನಬಿ ಆಚರಣೆಯ ಪ್ರಯುಕ್ತ ನಗರದಲ್ಲಿ ಶಾಂತಿ ಕಾಪಾಡಬೇಕು ಮತ್ತು ಎಲ್ಲಾ ಧರ್ಮದ ಮುಖಂಡರು ಇದಕ್ಕೆ ಸಹಕರಿಸಬೇಕೆಂದು ಮಂಗಳೂರು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ. ತನ್ನ ಕಚೇರಿಯಲ್ಲಿ ಸೋಮವಾರ ಶಾಂತಿ ಸಭೆ ನಡೆಸಿ ಧಾರ್ಮಿಕ ಮತ್ತು ಸಮಾಜದ ಮುಖಂಡರಿಗೆ ಕೆಲವೊಂದು ಸೂಚನೆಗಳನ್ನು ಆಯುಕ್ತರು ನೀಡಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಸೆ.6ರಿಂದ ಸೆ.17ರವರೆಗೆ 165 ಕಡೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಮಾಡಲಾಗುತ್ತದೆ. ಈ ಪೈಕಿ 22 ಅತೀ ಸೂಕ್ಷ್ಮ, 64 ಸೂಕ್ಷ್ಮ, 79 ಸಾಮಾನ್ಯ ಗಣೇಶ ಪ್ರತಿಷ್ಠಾಪನಾ ಮೆರವಣಿಗೆಗಳಿವೆ. ಅದಲ್ಲದೆ ಸೆ.15/16ರಂದು ಮೀಲಾದುನ್ನಬಿ ಆಚರಣೆ ನಡೆಯಲಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಸೆ.6ರಿಂದ ಸೆ.17ರವರೆಗೆ 165 ಕಡೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಮಾಡಲಾಗುತ್ತದೆ. ಈ ಪೈಕಿ 22 ಅತೀ ಸೂಕ್ಷ್ಮ, 64 ಸೂಕ್ಷ್ಮ, 79 ಸಾಮಾನ್ಯ ಗಣೇಶ ಪ್ರತಿಷ್ಠಾಪನಾ ಮೆರವಣಿಗೆಗಳಿವೆ. ಅದಲ್ಲದೆ ಸೆ.15/16ರಂದು ಮೀಲಾದುನ್ನಬಿ ಆಚರಣೆ ನಡೆಯಲಿದೆ. ಹಾಗಾಗಿ ಎಲ್ಲಾ ಧರ್ಮದ…