Author: main-admin

ವಿಟ್ಲ: ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಟಿಪ್ಪರ್ ಲಾರಿಯ ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಧರ್ಮಸ್ಥಳ ಪರಿಸರದ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ. ಅಕ್ರಮ ಎನ್ನಲಾದ ಬಾಕ್ಸೖಟ್ ದಂಧೆ ನಡೆಯುವ ಸ್ಥಳಕ್ಕೆ ತೆರಳಿದ್ದ ಲಾರಿಯಲ್ಲಿ ತಾಂತ್ರಿಕ ವೈಫಲ್ಯ ಕಾಣಿಸಿಕೊಂಡಿತ್ತು. ಇದನ್ನು ಸರಿಪಡಿಸಲು ಚಾಲಕ ಮಹೇಶ್ ಅವರು ಲಾರಿಯ ಕೆಳಗೆ ಹೋಗಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಏಕಾಏಕಿ ಲಾರಿ ಮುನ್ನಡೆದಿದ್ದರಿಂದ, ಅವರು ಲಾರಿಯ ಚಕ್ರಗಳ ಅಡಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯ ಕಾರ್ಮಿಕರು ಹಾಗೂ ಕನ್ಯಾನದ ಸದ್ಗುರು ಅಂಬ್ಯುಲೆನ್ಸ್ ಚಾಲಕರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಲಾರಿಯ ಅಡಿಯಿಂದ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಬಳಿಕ ಮೃತದೇಹವನ್ನು ವಿಟ್ಲದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಕಾನೂನು ಪ್ರಕ್ರಿಯೆ ಮುಂದುವರೆದಿದೆ.

Read More

ಮಂಗಳೂರು : ಬೆಳ್ತಂಗಡಿ ತಾಲ್ಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ ಕಿ.ಮೀ.1.10 ರಲ್ಲಿ ಬರುವ ಅಂಬಡಬೆಟ್ಟು ಎಂಬಲ್ಲಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿಯ ಸಂಬಂಧ ಸೇತುವೆಯಲ್ಲಿ ಜೂನ್ 9 ರಿಂದ 2027 ರ ಜನವರಿ 6 ರವರೆಗೆ ಎಲ್ಲಾ ವಾಹನಗಳ ಸಂಚಾರವನ್ನು ನಿರ್ಬಂಧಿಸಿ, ಮಾರ್ಗ ಬದಲಾವಣೆ ಮಾಡಿ ಸಂಚರಿಸಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.ಬದಲಿ ಮಾರ್ಗಗಳು: ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ದ್ವಾರದಿಂದ – ಸೂರ್ಯ ದೇವಸ್ಥಾನ ಮಾರ್ಗವಾಗಿ – ಕೇಳ್ತಜೆ ಮುಖಾಂತರ ಸಂಚರಿಸಬೇಕು. ಬೆಳ್ತಂಗಡಿ – ಕಿಲ್ಲೂರು ಕಾಜೂರು ರಸ್ತೆಯ ಇಂದಬೆಟ್ಟು ಗ್ರಾಮದಿಂದ ನೇತ್ರಾವತಿ ಎಸ್.ಟಿ ಕಾಲೊನಿ ಮಾರ್ಗವಾಗಿ ಬೆಳ್ಳೂರು ಕ್ರಾಸ್ ರಸ್ತೆಯಾಗಿ ರಾಜ್ಯ ಹೆದ್ದಾರಿ 276ರ ರಸ್ತೆಯಾದ ಸುಳ್ಯ ಪೈಚಾರು ಬೆಳ್ಳಾರೆ ಸವಣೂರು ಕುದ್ಮಾರು ಅಲಂಕಾರು ಸುರುಳಿ ಮಾದೇರಿ ಪಟ್ರಮೆ ಧರ್ಮಸ್ಥಳ ಮುಂಡಾಜೆ ದಿಡುಪೆ ರಸ್ತೆಯನ್ನು ಸಂಪರ್ಕಿಸಬೇಕು.

Read More

ಉಪ್ಪಿನಂಗಡಿ: ಅಕ್ರಮವಾಗಿ ಹಾಗೂ ಹಿಂಸಾತ್ಮಕವಾಗಿ ಈಚರ್ ಲಾರಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿರು ವುದನ್ನು ಉಪ್ಪಿನಂಗಡಿ ಪೊಲೀಸರು 34 ನೆಕ್ಕಿಲಾಡಿಯ ಆನೆಬೈಲ್ ಎಂಬಲ್ಲಿ ಪತ್ತೆ ಹಚ್ಚಿದ್ದು, ಇಬ್ಬರನ್ನು ಬಂಧಿಸಿ ದ್ದಾರೆ. ಈ ವೇಳೆ ಲಾರಿಯಲ್ಲಿದ್ದ ಓರ್ವ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣದ ಪ್ರಮುಖ ಆರೋಪಿ ಲಾರಿ ಚಾಲಕ ಕಡೂರು ನಿವಾಸಿ ಪರ್ದಿನ್ ಖಾನ್, ಲಾರಿಯಲ್ಲಿದ್ದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಜಾವೀದ್ ಪಾಷಾ ಬಂಧಿತರು. ಲಾರಿಯಲ್ಲಿದ್ದ ಇನ್ನೋರ್ವ ಆರೋಪಿ ರೆಹಮಾನ್ ಹೊಸೂರು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ಸುತೇಶ್ ಕೆ.ಪಿ. ಅವರು ಸಿಬ್ಬಂದಿಗಳೊಂದಿಗೆ ಉಪ್ಪಿನಂಗಡಿ, ಮಠ ಹಾಗೂ ನೆಕ್ಕಿಲಾಡಿ ವ್ಯಾಪ್ತಿಯಲ್ಲಿ ಜೂ.17ರ ನಸುಕಿನ ಜಾವ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಹಾಸನ ಕಡೆಯಿಂದ ಬರುತ್ತಿದ್ದ ಈಚರ್ ಲಾರಿಯನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಅದರೊಳಗೆ 16 ಜಾನುವಾರುಗಳನ್ನು ಯಾವುದೇ ದಾಖಲಾತಿಗಳಿಲ್ಲದೆ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು. ಜಾನುವಾರು ಹಾಗೂ ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಹಾಸನ ಸಂತೆಯಿಂದ ಜಾನುವಾರುಗಳನ್ನು ಖರೀದಿಸಿ ಕೇರಳ…

Read More

ಮೈಸೂರು: ಮೈಸೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಭೀತಿ ಆವರಿಸಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಬರೋಬ್ಬರಿ 11 ಮಂದಿ ರೋಗಿಗಳು ಕಳೆದ 24 ಗಂಟೆಗಳ ಅವಧಿಯಲ್ಲಿ ದಿಢೀರ್ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.ಆಸ್ಪತ್ರೆಯ ಮೂಲಗಳ ಪ್ರಕಾರ, ಮೃತಪಟ್ಟವರೆಲ್ಲರೂ ತೀವ್ರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಒಟ್ಟಾರೆಯಾಗಿ ಕಳೆದ 24 ಗಂಟೆಗಳಲ್ಲಿ 11 ಮಂದಿ ಸಾವನ್ನಪ್ಪಿರುವುದು ಆಸ್ಪತ್ರೆಯ ಇತರ ರೋಗಿಗಳು ಮತ್ತು ಅವರ ಸಂಬಂಧಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.ರೋಗಿಗಳ ಸರಣಿ ಸಾವಿನ ಬೆನ್ನಲ್ಲೇ ಮೃತರ ಸಂಬಂಧಿಕರು ಆಸ್ಪತ್ರೆ ಮಂಡಳಿ ಮತ್ತು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಕಣ್ಮುಂದೆಯೇ 5 ರಿಂದ 6 ಜನ ಸತ್ತಿದ್ದಾರೆ. ರಾತ್ರಿಯಿಂದ ಬೆಳಗ್ಗೆವರೆಗೂ ಸಾವುಗಳು ಸಂಭವಿಸುತ್ತಿದ್ದರೂ ಯಾರೂ ಇದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಎಮರ್ಜೆನ್ಸಿ ಟೈಮ್‌ನಲ್ಲಿ ವೈದ್ಯರೇ ಇರುವುದಿಲ್ಲ ಎಂದರೆ ಹೇಗೆ? ಎಂದು ರೋಗಿಯೊಬ್ಬರ ಸಂಬಂಧಿ ಪ್ರಶ್ನಿಸಿದ್ದಾರೆ.ಅಲ್ಲದೆ, ವೈದ್ಯರ ಫೋನ್ ನಂಬರ್ ಕೇಳಿದರೆ ಕೊಡುತ್ತಿಲ್ಲ. ಚಿಕಿತ್ಸೆಯಲ್ಲಿ ಏನಾಗುತ್ತಿದೆ ಎಂಬ ಸರಿಯಾದ…

Read More

ಕಾಸರಗೋಡು: ಆಪರೇಷನ್ ತೂಫಾನ್’ ಅಂಗವಾಗಿ ಪೊಲೀಸ್ ನಡೆಸಿದ ದಾಳಿಯಲ್ಲಿ ಮಧೂರು ಪಟ್ಲದಿಂದ ಭಾರಿ ಪ್ರಮಾಣದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನಲ್ಲಿ ಸಾಗಿಸುತ್ತಿದ್ದ 21,873 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನ ಸಹಿತ ಓರ್ವನನ್ನು ಬಂಧಿಸಲಾಗಿದೆ. ಮಧೂರು ಪಟ್ಲ ದ ಕೆ. ಇಬ್ರಾಹಿಂ ಬಾತ್ಷಾ (36) ಬಂಧಿತ ಆರೋಪಿ.ನಿಷೇಧಿತ ಪಾನ್ ಮಸಾಲ, ಸಾಗಾಟಕ್ಕೆ ಬಳಸಿದ್ದ ಕಾರು ಮತ್ತು ಮಾರಾಟದಿಂದ ಬಂದ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಟ್ಲ ಶಾಲೆಯ ಸಮೀಪ ರಸ್ತೆ ಬದಿಯಲ್ಲಿ ಅನುಮಾನಾಸ್ಪದವಾಗಿ ನಿಲ್ಲಿಸಲಾಗಿದ್ದ ಕಾರು ಪೊಲೀಸರ ಗಮನಕ್ಕೆ ಬಂದಿದೆ. ಕಾರಿನ ಗ್ಲಾಸ್ ಗಮನಿಸಿದಾಗ ಪ್ಲಾಸ್ಟಿಕ್ ಚೀಲಗಳು ಇರುವುದು ಕಂಡುಬಂದಿದ್ದು, ಸಂಶಯ ಗೊಂಡ ಪೊಲೀಸರು ಪರಿಶೀಲನೆ ನಡೆಸಿದಾಗನಿಷೇಧಿತ ತಂಬಾಕು ಉತ್ಪನ್ನಗಳು ಪತ್ತೆಯಾಗಿವೆ. ‘ಆಪರೇಷನ್ ತೂಫಾನ್’ ವಿಶೇಷ ಕಾರ್ಯಾಚರಣೆಯಂಗವಾಗಿ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ತಂಬಾಕು ಉತ್ಪನ್ನ ಪತ್ತೆಯಾಗಿದೆ.

Read More

ಉಡುಪಿ: ಡೆಬಿಟ್ ಕಾರ್ಡ್ ಮೂಲಕ ವಂಚನೆ ನಡೆಸಿರುವ ಖದೀಮರು ವ್ಯಕ್ತಿಯೋರ್ವರ ಖಾತೆಯಿಂದ ಬರೋಬ್ಬರಿ 2 ಲಕ್ಷ ರೂಪಾಯಿ ಹಣ ದೋಚಿರುವ ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.ದೂರುದಾರರು ಜೂನ್ 3ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ತಮ್ಮ ಡೆಬಿಟ್ ಕಾರ್ಡ್ ಬಳಸಿ ಆಸ್ಪತ್ರೆ ಬಿಲ್ ಪಾವತಿಸಿದ್ದರು. ಬಳಿಕ ಅವರು ಯಾವುದೇ ಹಣಕಾಸು ವ್ಯವಹಾರ ನಡೆಸಿರಲಿಲ್ಲ. ಹೀಗಿದ್ದರೂ ಜೂನ್ 8ರಂದು ಅವರ ಬ್ಯಾಂಕ್ ಖಾತೆಯಿಂದ ಹಣ ಡೆಬಿಟ್ ಆಗಿರುವ ಕುರಿತು ಎಸ್‌ಎಂಎಸ್ ಸಂದೇಶ ಬಂದಿದ್ದು, ಇದರಿಂದ ಅನುಮಾನಗೊಂಡ ಅವರು ಬ್ಯಾಂಕ್‌ಗೆ ತೆರಳಿ ವ್ಯವಹಾರಗಳ ವಿವರ ಪರಿಶೀಲಿಸಿದಾಗ ವಂಚನೆ ನಡೆದಿರೋದು ಬೆಳಕಿಗೆ ಬಂದಿದೆ.ಪರಿಶೀಲನೆ ವೇಳೆ ಜೂನ್ 5ರಿಂದ 8ರ ನಡುವಿನ ಅವಧಿಯಲ್ಲಿ, ಅವರ ಅರಿವಿಲ್ಲದೆ 2.12 ಲಕ್ಷವನ್ನು ಅಪರಿಚಿತ ಖಾತೆಗೆ ವರ್ಗಾವಣೆ ಮಾಡಿರುವುದು ಗೊತ್ತಾಗಿದೆ. ಹೀಗಾಗಿ ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಗೆ ಸಂತ್ರಸ್ತ ವ್ಯಕ್ತಿ ದೂರು ನೀಡಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66(D) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Read More

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ವಿವಾದಿತ ಶವ ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾರ್ಮಾಡಿ ಘಾಟಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ.ಅಪಘಾತದಲ್ಲಿ ಎಸ್‌ಐಟಿ ಎಸ್‌ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಪೊಲೀಸ್ ಸಿಬ್ಬಂದಿ (ಪಿಸಿ) ಮಂಜುನಾಥ್ ಹಾಗೂ ಕಾರಿನ ಚಾಲಕ ಸೇರಿದಂತೆ ಒಟ್ಟು ನಾಲ್ವರು ಗಾಯಗೊಂಡಿದ್ದಾರೆ.ಧರ್ಮಸ್ಥಳದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಯಿಂದ ಅಧಿಕಾರಿಗಳ ತಂಡವು ಚಿಕ್ಕಮಗಳೂರಿಗೆ ಹೊರಟಿತ್ತು. ಚಿಕ್ಕಮಗಳೂರು ಜಿಲ್ಲಾ ಎಸ್‌ಪಿ ಹಾಗೂ ಎಸ್‌ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಿ, ತನಿಖೆಯ ಪ್ರಗತಿ ಕುರಿತು ಚರ್ಚಿಸಲು ಅಧಿಕಾರಿಗಳು ತೆರಳುತ್ತಿದ್ದರು ಎನ್ನಲಾಗಿದೆ.ಈ ವೇಳೆ ಚಾರ್ಮಾಡಿ ಘಾಟ್ ರಸ್ತೆಯ ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಇನೋವಾ ಕಾರು ರಸ್ತೆಯಲ್ಲೇ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ತಲೆಕೆಳಗಾಗಿದ್ದು, ಒಳಗಿದ್ದ ಅಧಿಕಾರಿಗಳಿಗೆ ಗಾಯಗಳಾಗಿವೆ. ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಇತರ ವಾಹನ ಸವಾರರು ತಕ್ಷಣವೇ ಧಾವಿಸಿ ಬಂದು,…

Read More

ಕೋಝಿಕ್ಕೋಡ್: ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಮಾಲೀಕರಿಗೆ ನೂರು-ಇನ್ನೂರು ರೂಪಾಯಿ ದೊಡ್ಡ ಮೊತ್ತವೇ ಅಲ್ಲ. ಆದರೆ, ರಾಷ್ಟ್ರೀಯ ಹೆದ್ದಾರಿ 66 ರ ಪಂಥೀರಂಕಾವು ಟೋಲ್ ಪ್ಲಾಜಾದಲ್ಲಿ ಜೂನ್ 4 ರಂದು ನಡೆದಿರುವ ಘಟನೆ ಮಾತ್ರ ಅಧಿಕಾರಿಗಳನ್ನೇ ಆಘಾತಕ್ಕೀಡು ಮಾಡಿದೆ. ಬರೋಬ್ಬರಿ 9 ಕೋಟಿ ರೂಪಾಯಿ ಮೌಲ್ಯದ ರೋಲ್ಸ್ ರಾಯ್ಸ್ ಘೋಸ್ಟ್ ಕಾರಿನ ಚಾಲಕನೊಬ್ಬ ಕೇವಲ 130 ರೂಪಾಯಿ ಟೋಲ್ ಶುಲ್ಕವನ್ನು ಪಾವತಿಸದೆ ಜಾಣತನದಿಂದ ವೇಗವಾಗಿ ಕಾರು ಚಲಾಯಿಸಿ ಪರಾರಿಯಾಗಿದ್ದಾನೆ.ಜೂನ್ 4ರ ಸಂಜೆ ಈ ಘಟನೆ ನಡೆದಿದ್ದು, ಕಪ್ಪು ಬಣ್ಣದ ಐಷಾರಾಮಿ ರೋಲ್ಸ್ ರಾಯ್ಸ್ ಕಾರು ಟೋಲ್ ಕೌಂಟರ್‌ನಲ್ಲಿ ಕಾಯುತ್ತಿದ್ದ ಮತ್ತೊಂದು ವಾಹನವನ್ನು ಹತ್ತಿರದಿಂದ ಹಿಂಬಾಲಿಸುತ್ತಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ. ಮುಂಭಾಗದ ವಾಹನವು ಟೋಲ್ ಪಾವತಿಸಿ ಬೂಮ್ ಬ್ಯಾರಿಯರ್ (ತಡೆಗೋಡೆ) ಮೇಲಕ್ಕೆದ್ದ ತಕ್ಷಣ, ರೋಲ್ಸ್ ರಾಯ್ಸ್ ಚಾಲಕ ಬ್ಯಾರಿಯರ್ ಮುಚ್ಚುವ ಮೊದಲೇ ಅತ್ಯಂತ ವೇಗವಾಗಿ ಲೇನ್ ಮೂಲಕ ಕಾರನ್ನು ನುಗ್ಗಿಸಿ ಟೋಲ್ ವಂಚಿಸಿದ್ದಾನೆ.ಟೋಲ್ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಅದು ಹರಿಯಾಣ ನೋಂದಣಿಯ…

Read More

ನಾಗ್ಪುರ: ಐಎಎಫ್ ಅಧಿಕಾರಿಯ ಪತ್ನಿ ಮೇಲೆ ಅತ್ಯಾಚಾರ ಮಾಡಿ, ಮತಾಂತರಕ್ಕೆ ಯತ್ನಿಸಿರುವದಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.ಮಾದಕ ದ್ರವ್ಯ ಸೇವಿಸಿದ ಮೂವರು ತನನ್ನು ಅತ್ಯಾಚಾರ, ಬೆದರಿಕೆ ಹಾಕುವ ಮೂಲಕ ಬಲವಂತದಿಂದ ಮತಾಂತರಕ್ಕೆ ಯತ್ನಿಸಿದ್ದಾರೆ ಎಂದು ಭಾರತೀಯ ವಾಯುಪಡೆಯ ಅಧಿಕಾರಿಯ ಪತ್ನಿ ಆರೋಪಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಸದ್ಯ ವೈರಲ್ ಆಗಿರುವ ವಿಡಿಯೋದಲ್ಲಿ ಆರೋಪಿಯು ಮಹಿಳೆಯ ಕೈಗಳನ್ನು ಬಲವಂತವಾಗಿ ಹಿಡಿದುಕೊಂಡು ಧಾರ್ಮಿಕ ಶ್ಲೋಕಗಳನ್ನು ಪಠಿಸುತ್ತಾ ಆಕೆಯ ಮುಖಕ್ಕೆ ಊದುತ್ತಿರುವುದು ಮತ್ತು ಮಹಿಳೆಯು ತಡೆಯಲಾರದೆ ‘ನನ್ನನ್ನು ಬಿಟ್ಟುಬಿಡಿ’ ಎಂದು ಜೋರಾಗಿ ಅಳುತ್ತಿರುವುದನ್ನು ಕಾಣಬಹುದಾಗಿದೆ.ಮತಾಂತರ ಪ್ರಕ್ರಿಯೆ ಮುಗಿದ ನಂತರ ತನ್ನ ಮೇಲೆ ಮತ್ತೊಮ್ಮೆ ಅತ್ಯಾಚಾರ ಮಾಡಲು ಯತ್ನಿಸಲಾಗಿತ್ತು. ಆರೋಪಿಯು ತನ್ನ ಒಪ್ಪಿಗೆಯಿಲ್ಲದೆ ತನ್ನನ್ನು ಧಾರ್ಮಿಕ ವಿಧಿವಿಧಾನಗಳಿಗೆ ಒಳಪಡಿಸಿದ್ದು, ಮತಾಂತರಕ್ಕೆ ಯತ್ನಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.ಕಳೆದ ವರ್ಷದ ಫೆಬ್ರವರಿಯಲ್ಲಿ ಆಸ್ತಿ ಖರೀದಿಸುವ ನೆಪದಲ್ಲಿ ಆಕೆಯನ್ನು ಸಂಪರ್ಕಿಸಿದ ಆರೋಪಿಯು, ವಾರ್ದಾ ರಸ್ತೆಯಲ್ಲಿನ ಹೋಟೆಲ್ ವೊಂದಕ್ಕೆ ಕರೆದೊಯ್ದಿದ್ದು, ಅಲ್ಲಿ ಜ್ಯೂಸ್‌ನಲ್ಲಿ…

Read More

ಬೆಂಗಳೂರು: ಮಾದಕ ದ್ರವ್ಯ ಜಾಲದ ವಿರುದ್ಧ ಬೆಂಗಳೂರು ಪೊಲೀಸರು ಮತ್ತು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 5.67 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಕೊಕೇನ್ ಜಪ್ತಿಯಾಗಿದೆ. ಈ ಸಂಬಂಧ ಉಗಾಂಡಾ ಮೂಲದ ಮಹಿಳಾ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.ನಗರದ ವಿವಿಧ ಭಾಗಗಳಲ್ಲಿ ನಡೆದ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಡ್ರಗ್ಸ್ ಸಾಗಾಟ ಮತ್ತು ಮಾರಾಟ ಜಾಲವನ್ನು ಪತ್ತೆಹಚ್ಚಿರುವ ಅಧಿಕಾರಿಗಳು, ಅಂತರರಾಜ್ಯ ಹಾಗೂ ಅಂತರರಾಷ್ಟ್ರೀಯ ಸಂಪರ್ಕಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಹೈಡ್ರೋ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಮ್ರಾನ್ ಪಾಷಾ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ 3 ಕೆಜಿ 180 ಗ್ರಾಂ ತೂಕದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು 2.20 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಈ ಮಾದಕ ವಸ್ತುವನ್ನು ಮಹಾರಾಷ್ಟ್ರದ ನಾಸಿಕ್‌ನಿಂದ ಬೆಂಗಳೂರಿಗೆ ತರಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಇಮ್ರಾನ್…

Read More