Author: main-admin

ಉಡುಪಿ: ಎಂಟು ವರ್ಷಗಳ ಹಿಂದೆ ಕೊಲೆ ಪ್ರಕರಣದ ಸಾಕ್ಷಿಗೆ ಹಲ್ಲೆಗೈದು, ಮಾನಭಂಗ ನಡೆಸಿದ ಆರೋಪಿಗೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂರು ವರ್ಷ ಜೈಲುಶಿಕ್ಷೆ ವಿಧಿಸಿ ಆದೇಶ ನೀಡಿದೆ. ಧನಂಜಯ್ (35) ಶಿಕ್ಷೆಗೆ ಗುರಿಯಾದ ಆರೋಪಿ. 2013ರ ನ.27ರಂದು ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯೋಗೀಶ್ ಎಂಬಾತ ರಂಜಿತಾ ಎಂಬವರನ್ನು ಕಡೆಕಾರು ಗ್ರಾಮದ ಪಟೇಲರ ತೋಟ ಎಂಬಲ್ಲಿ ಕೊಲೆ ಮಾಡಿದ್ದ. ಈ ಬಗ್ಗೆ ರಂಜಿತಾ ಅವರ ಸಂಬಂಧಿ ಹಾಗೂ ನೆರೆಮನೆಯ ಅಶ್ವಿನಿ ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿ ಪ್ರಮುಖ ಸಾಕ್ಷಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಕೊಲೆ ಪ್ರಕರಣದ ಆರೋಪಿ ಯೋಗೀಶ್‌ನ ಸಂಬಂಧಿ ಧನಂಜಯ್ ಎಂಬಾತ 2014ರ ಸೆ.10ರಂದು ಅಶ್ವಿನಿ ಅವರ ಮನೆಗೆ ಅಕ್ರಮವಾಗಿ ಪ್ರವೇಶಿಸಿ, ಕೈಯಿಂದ ಹಲ್ಲೆ ನಡೆಸಿ ಬಟ್ಟೆಯನ್ನು ಹರಿದು ಮಾನಕ್ಕೆ ಕುಂದು ಉಂಟು ಮಾಡಿದ್ದನು. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು ರಂಜಿತಾಳ ಕೊಲೆ ಪ್ರಕರಣದಲ್ಲಿ ಸಾಕ್ಷಿ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು.…

Read More

ಬೆಂಗಳೂರು : ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಚಿತ್ರವು ಇಡೀ ವಿಶ್ವವೇ ಮೆಚ್ಚಿಕೊಂಡು ರೆಕಾರ್ಡ್​ ಮಾಡುತ್ತಿದೆ. ‘ಕಾಂತಾರ ಸಿನಿಮಾ ‘ತುಳುನಾಡಿನ ಸಂಸ್ಕೃತಿಯನ್ನು ಪ್ರಪಂಚದಾದ್ಯಂತ ಪಸರಿಸಿದ ಹೆಮ್ಮೆಯಾಗಿದ್ದು. ಕನ್ನಡ, ಹಿಂದಿ ಸೇರಿದಂತೆ ಬಹುಭಾಷೆಗಳಲ್ಲಿ ತೆರೆಕಂಡಿರುವ ಕಾಂತಾರ ಸಿನಿಮಾ ಇನ್ನೂ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಕರ್ನಾಟಕ ಬಾಕ್ಸ್ ಆಫೀಸ್​ನಲ್ಲಿ ಅತಿ ಹೆಚ್ಚು ಕಲೆಕ್ಷನ್​ ಕೂಡ ಮಾಡಿದೆ. ಇದರ ಬೆನ್ನಲ್ಲೇ ಕಾಂತಾರ ಸಿನಿಮಾ ತುಳು ಭಾಷೆಯಲ್ಲಿ ತೆರೆಕಾಣುತ್ತಿರುವ ಸಂದರ್ಭದಲ್ಲಿ ಮಾತನಾಡಿದ ಸ್ಯಾಂಡಲ್​ವುಡ್ ಖ್ಯಾತ ನಟ ರಿಷಬ್ ಶೆಟ್ಟಿ ಸಿನಿಮಾದ ಗೆಲ್ಲಿಸಿದ ಅಭಿಮಾನಿಗಳಿಗೆ ಧನ್ಯವಾದ. ದೈವಾರಾಧನೆಯನ್ನ ರೀಲ್ಸ್ ಮಾಡೋದು, ಕಾಂತಾರ ಸಿನಿಮಾದ ಪಾತ್ರವನ್ನ ಅನುಕರಣೆ ಮಾಡೋದು ಸರಿಯಲ್ಲ.ಇದು ಎಷ್ಟೋ ಜನರ ನಂಬಿಕೆ ಹೀಗೆ ಮಾಡಬೇಡಿ. ದೈವಾರಧನೆ ನಮ್ಮ ನಂಬಿಕೆ. ನಂಬೋರು ನಂಬಬಹುದು. ನಂಬದಿದ್ದರೆ ನಂಬದೇ ಇರಬಹುದು. ಅದು ಅವರವರ ನಂಬಿಕೆ. ಆದರೆ ದೈವಾರಧನೆಯ ಬಗ್ಗೆ ತಪ್ಪು ತಪ್ಪು ಮಾತನಾಡೋರು ಸುಳ್ಳು ಎಂದು ವಾದ ಮಾಡೋದು ಸರಿಯಲ್ಲ. ನಂಬದಿದ್ದರೆ ಪರವಾಗಿಲ್ಲ. ಆದ್ರೆ ಬೇರೆಯವರ ನಂಬಿಕೆಗೆ ಧಕ್ಕೆ ಮಾಡಬೇಡಿ…

Read More

ಮಣಿಪಾಲ : ಕೇಂದ್ರ ಸರಕಾರದ ಗೆಜೆಟ್‌ ನೋಟಿಫಿಕೇಶನ್‌ ಪ್ರಕಾರ ಸುರತ್ಕಲ್‌ನಲ್ಲಿದ್ದ ಟೋಲ್‌ ಅನ್ನು ಹೆಜಮಾಡಿ ಟೋಲ್‌ನೊಂದಿಗೆ ವಿಲೀನಗೊಳಿಸಲಾಗಿದೆ. ಪರಿಷ್ಕೃತ ದರ ಪಡೆಯುವ ದಿನಾಂಕ ಇನ್ನೂ ನಿರ್ಧಾರವಾಗಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕೋರಿಕೆಯಂತೆ ಹೆಜಮಾಡಿ ಗೇಟ್‌ಗೆ ಸೂಕ್ತ ಭದ್ರತೆ ಕಲ್ಪಿಸಲಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಟೋಲ್‌ ದರ ಹೆಚ್ಚಳಕ್ಕೆ ಜನಪ್ರತಿನಿಧಿ ಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲಿಯೇ ಅವರ ಸಭೆ ಕರೆಯಲಾಗುತ್ತದೆ. ಸಾರ್ವಜನಿಕರು ಅಥವಾ ಯಾವುದೇ ಸಂಘಟನೆಗಳಿಂದ ಈ ಸಂಬಂಧ ದೂರು ಅಥವಾ ಆಕ್ಷೇಪಣೆಗಳು ಬಂದಿಲ್ಲ. ಬಂದಲ್ಲಿ ಪರಿಶೀಲಿಸಲಾಗುವುದು. ಪರಿಷ್ಕೃತ ದರ ಸಂಗ್ರಹ ಆರಂಭಿ ಸುವ ಮೊದಲು ಹೆದ್ದಾರಿ ಪ್ರಾಧಿಕಾರವು ಸ್ಥಳೀಯವಾಗಿಯೂ ಜಿಲ್ಲಾಡಳಿತಕ್ಕೂ ಮಾಹಿತಿ ನೀಡಲಿದೆ. ಕೇಂದ್ರ ಸರಕಾರದ ಸೂಚನೆಯನ್ನು ಪಾಲಿಸುತ್ತೇವೆ ಎಂದರು.

Read More

ಮಂಗಳೂರು: ನಗರದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರೀಖ್ ಮತ್ತು ಅವನಿಗೆ ಸಹಕರಿಸಿದ ಆರೋಪಿಗಳ ಪರ ಮಾನ್ಯ ನ್ಯಾಯಾಲಯದಲ್ಲಿ ಯಾವ ವಕೀಲರು ಕೂಡ ವಕಾಲತ್ತು ನಡೆಸಬಾರದಾಗಿ ಆಗ್ರಹಿಸಿ ಬಜರಂಗದಳ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಿಗೆ ಮನವಿ ನೀಡಿದೆ. ಬಜರಂಗದಳ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ನೇತೃತ್ವದ ನಿಯೋಗ ವಕೀಲರ ಸಂಘದ ಅಧ್ಯಕ್ಷರನ್ನು ಭೇಟಿ ಮಾಡಿ ಈ ಮನವಿ ಸಲ್ಲಿಸಿದೆ. ಮೊಹಮ್ಮದ್ ಶಾರೀಕ್ ಎಂಬಾತ ನಗರದಲ್ಲಿ ಕಳೆದ ವಾರ ನಡೆಸಿದ ಬಾಂಬ್‌ ಬ್ಲಾಸ್ಟ್ ನ ಕೃತ್ಯದಿಂದ ಮಂಗಳೂರಿನ ಜನತೆ ಹೆದರಿಕೆಯಿಂದ ಸಮಾಜದಲ್ಲಿ ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಹಲವು ಮೂಲಗಳಿಂದ ಮತ್ತು ಪತ್ರಿಕೆಗಳಲ್ಲಿನ ಮಾಹಿತಿಯಿಂದ ಶಾರೀಕ್ ಐಸಿಸ್ ನಂತಹ ಉಗ್ರ ಸಂಘಟನೆಯೊಂದಿಗೆ ಸಂಪರ್ಕವನ್ನು ಹೊಂದಿದ್ದನು ಎಂಬ ವಿಚಾರವು ನಮ್ಮ ಗಮನಕ್ಕೆ ಬಂದಿರುತ್ತದೆ.ಇಂತಹ ಸನ್ನಿವೇಶಗಳಿಂದ ನಮ್ಮ ನಾಗರಿಕರಿಗೆ ಅಭದ್ರತೆಯ ಕೊರತೆ ಎದ್ದುಕಾಣುತ್ತಿದೆ.ಹಾಗೆಯೆ ಸಮಾಜದಲ್ಲಿನ ಶಾಂತಿಯನ್ನು ಹಾಳುಮಾಡುವ ಉದ್ದೇಶ ಮತ್ತು ಈ ನೆಲದ, ಈ ದೇಶದ ಕಾನೂನನ್ನು ಗೌರವಿಸದೆ ಇರುವುದು ಇಂತಹ ಕೃತ್ಯಗಳು ಮರುಕಳಿಸುವಂತಾಗಿದೆ.…

Read More

ಕಾಸರಗೋಡು : ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದ ಘಟನೆ ಇಂದು ಸಂಜೆ ಮಂಜೇಶ್ವರ ಸಮೀಪದ ಪೊಸೊಟ್ ನಲ್ಲಿ ನಡೆದಿದೆ. ಅಪಘಾತದಿಂದ 15 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೇರಳ ಮಲಬಾರ್ ಬಸ್ಸು ಪೊಸೋಟ್ ಪೆಟ್ರೋಲ್ ಪಂಪ್ ಬಳಿ ಪಲ್ಟಿ ಹೊಡೆದಿದೆ. ಬಸ್ಸಿನಲ್ಲಿ 40 ಕ್ಕೂಅಧಿಕ ಪ್ರಯಾಣಿಕರಿದ್ದರು. ಬಸ್ಸಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ನಾಗರಿಕರು, ಪೊಲೀಸರು ಹೊರತೆಗೆದು ಆಸ್ಪತ್ರೆಗೆ ತಲುಪಿಸಿದರು. 15 ಮಂದಿಯನ್ನು ವಿವಿಧ ಅಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ಸುರತ್ಕಲ್: ಇಲ್ಲಿಗೆ ಸಮೀಪದ ಎನ್ಐಟಿಕೆ ಟೋಲ್ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಸ್ಥಳೀಯರು ಕಾರ್ಯಪ್ರವೃತ್ತರಾಗಿ ನೀರಿನ ಟ್ಯಾಂಕರ್ ನಿಂದ ನೀರು ಹಾಯಿಸಿ ಕಾರ್ ನಲ್ಲಿದ್ದ ನಾಲ್ವರನ್ನು ರಕ್ಷಿಸಿದ್ದಾರೆ. ಕಾರು ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದು, ಎನ್ ಐ ಟಿ ಕೆ ಟೋಲ್ ಬಳಿ ಕಾರಿನಲ್ಲಿ ಆಕಸ್ಮಿಕ ಬೆಂಕಿ ತಗಲಿದೆ ಎನ್ನಲಾಗಿದೆ. ಕೂಡಲೇ ಕಾರಿನಲ್ಲಿದ್ದ ಚಾಲಕ ಸೇರಿ ಗಾಬರಿಯಾಗಿ ಕಾರನ್ನು ನಿಲ್ಲಿಸಿದ್ದಾರೆ. ಕ್ಷಣಾರ್ಧದಲ್ಲಿ ಹಿಂದಿನಿಂದ ಬಂದ ನೀರಿನ ಟ್ಯಾಂಕರ್ ಚಾಲಕ ಕಾರ್ಯಪ್ರವೃತ್ತರಾಗಿ ಬೆಂಕಿ ಕಾಣಿಸಿಕೊಂಡ ಕಾರಿಗೆ ನೀರು ಹಾಯಿಸಿ ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ.

Read More

ಬೆಳ್ತಂಗಡಿ: ರಿಕ್ಷಾ ಚಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಹೊಸ ತಿರುವು ಲಭಿಸಿದ್ದು ತನ್ನ ಪತಿಯ ಸಾವಿನ ಬಗ್ಗೆ ಹಲವಾರು ಅನುಮಾನಗಳಿದ್ದು ಈ ಬಗ್ಗೆ ತನಿಖೆ ನಡೆಸುವಂತೆ ಮೃತ ಪ್ರವೀಣ್ ಪಿಂಟೋ ಅವರ ಪತ್ನಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರವೀಣ್ ಪತ್ನಿ ನೀಡಿರುವ ದೂರಿನಲ್ಲಿ ಏನಿದೆ? ಗುರುವಾಯನಕೆರೆಯಲ್ಲಿ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿರುವ ಪ್ರವೀಣ್ ಪಿಂಟೋ ಅವರು ಮಂಗಳವಾರ ರಾತ್ರಿ ಮನೆಯಿಂದ ಓಡಿಲ್ನಾಳ ಗ್ರಾಮದ ಅಮರ್ ಜಾಲ್ ಎಂಬಲ್ಲಿಗೆ ಮೆಹಂದಿ ಕಾರ್ಯಕ್ರಮಕ್ಕೆಂದು ಹೋಗಿದ್ದ. ಆತ ಮನೆಗೆ ಬಾರದಿದ್ದಾಗ ಪತ್ನಿ ಕರೆಮಾಡಿದಾಗ ರಾತ್ರಿ 1:39ಕ್ಕೆ ತಾನು ಮನೆಗೆ ಬರುತ್ತೇನೆ ಎಂದು ತಿಳಿಸಿದ್ದರು. ಆದರೆ ಮನೆಗೆ ಹಿಂದಿರುಗಿರಲಿಲ್ಲ ಬಳಿಕ ಬುಧವಾರ ಬೆಳಿಗ್ಗೆ ಪ್ರವೀಣನ ಡ್ರೈವಿಂಗ್ ಲೈಸನ್ಸ್ ಹಾಗೂ ದಾಖಲೆಗಳು ಕೆರೆಯ ಸಮೀಪ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ ಎಂದು ಅವರ ಪತ್ನಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಮೆಹಂದಿ ಮನೆಯಲ್ಲಿ ಪ್ರವೀಣ್ ಹಾಗೂ ಪ್ರದೀಪ್ ಶೆಟ್ಟಿ ಎಂಬವರ…

Read More

ಮಂಗಳೂರು: ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿ ದರೋಡೆಗೆ ಯತ್ನಿಸಿದ್ದ ಕುಖ್ಯಾತ ಅಂತಾರಾಜ್ಯ ಸಾಹೇಬ್ ಗಂಜ್ ದರೋಡೆ ಗ್ಯಾಂಗ್‌ನ 9 ಮಂದಿ ಖದೀಮರನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗುಜರಾತ್ ನಿವಾಸಿ ಭಾಸ್ಕರ ಬೆಳ್ಚಪಾಡ(65), ನೇಪಾಲ ದೇಶದ ದಿನೇಶ್ ರಾವಲ್(38)‌ ಬಿಸ್ತ ರೂಪ್ ಸಿಂಗ್ (34),ಕೃಷ್ಣ ಬಹದ್ದೂರ್ ಬೋಗಟಿ (41), ಜಾರ್ಖಂಡ್ ನ ಮೊಹಮ್ಮದ್ ಜಾಮೀಲ್ ಶೇಖ್(29), ಇಂಜಮಾಮ್ ಉಲ್ ಹಕ್(27), ಇಮ್ದದುಲ್ ರಝಾಕ್ ಶೇಖ್, (32),ಬಿವುಲ್ ಶೇಖ್ (31) ಇಮ್ರಾನ್ ಶೇಖ್ (30) ಬಂಧಿತ ದರೋಡೆಕೋರರು. ನಗರದ ತೊಕ್ಕೊಟ್ಟು ಮಂಚಿಲದಲ್ಲಿನ ಮನೆಯೊಂದರಲ್ಲಿ ಉತ್ತರ ಭಾರತದ ಕುಖ್ಯಾತ “ ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ” ನ ವ್ಯಕ್ತಿಗಳು ವಾಸವಿತ್ತು. ಈ ಗ್ಯಾಂಗ್ ತೊಕ್ಕೊಟ್ಟಿನ ಜ್ಯುವೆಲ್ಲರಿ ಅಂಗಡಿಯನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸಿದೆ ಎಂಬ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸ್ ತಂಡ ದಾಳಿ ನಡೆಸಿ 9 ಮಂದಿಯನ್ನು ಬಂಧಿಸಿದ್ದಾರೆ. ಸೂಪರ್ ಗೋಲ್ಡ್ & ಡೈಮಂಡ್ಸ್ ಜ್ಯುವೆಲ್ಲರಿಯನ್ನು…

Read More

ಮಂಗಳೂರು: ಕುಕ್ಕರ್‌ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಮಹಮ್ಮದ್‌ ಶಾರೀಕ್‌ನನ್ನು ಬುಧವಾರ ಕೂಡ ಪೊಲೀಸರು ವಿಚಾರಣೆಗೊಳಪಡಿಸಿದ್ದು ಆತನ ಖಾತೆಗಳಿಗೆ ವಿದೇಶಗಳಿಂದ ಹಣ ವರ್ಗಾವಣೆ ಯಾಗಿರುವುದು ಗೊತ್ತಾಗಿದೆ. ಡಾರ್ಕ್‌ವೆಬ್‌ ಮೂಲಕ ಶಾರೀಕ್‌ ಖಾತೆ ತೆರೆದಿದ್ದ. ವಿದೇಶಗಳಿಂದ ವರ್ಗಾವಣೆಯಾಗುತ್ತಿದ್ದ ಹಣವನ್ನು ರೂಪಾಯಿಗೆ ಪರಿವರ್ತಿಸಿ ಹಲವಾರು ಖಾತೆಗಳಿಗೆ ವರ್ಗಾವಣೆ ಮಾಡುತ್ತಿದ್ದ. ಮೈಸೂರಿನಲ್ಲಿ ಹಲವರ ಬ್ಯಾಂಕ್‌ ಖಾತೆಗೆ ಹಣ ಹಾಕಿಸಿದ್ದ ಎಂಬ ಮಾಹಿತಿ ಲಭಿಸಿದ್ದು ಅದರಂತೆ ಪೊಲೀಸರು ಮೈಸೂರಿನಲ್ಲಿ 40ಕ್ಕೂ ಅಧಿಕ ಮಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

Read More

ಬೆಳ್ತಂಗಡಿ: ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಗೆಳೆಯರಿಗೆ ಹೇಳಿ ಬೆಳಿಗ್ಗೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಗುರುವಾಯನಕೆರೆಯ ಕೆರೆಯಲ್ಲಿ ಪತ್ತೆಯಾಗಿದೆ. ರಿಕ್ಷಾ ಡ್ರೈವರ್ ಪ್ರವೀಣ್ ಮೃತದೇಹ ಪತ್ತೆಯಾಗಿದೆ. ಬೆಳ್ತಂಗಡಿಯಲ್ಲಿ ರಿಕ್ಷಾ ಚಾಲಕನಾಗಿದ್ದ ಪ್ರವೀಣ್ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ತನ್ನ ಸ್ನೇಹಿತರೊಬ್ಬರಿಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದ ಎನ್ನುವುದು ಪ್ರಚಾರ.ಆದರೆ ಪತ್ನಿಯ ಜೊತೆ ಕಾರ್ಯಕ್ರಮಕ್ಕೆ ಹೋಗುತ್ತೇನೆಂದು ಹೇಳಿ ಹೋದವನಿಗೆ ದಿಡೀರ್ ಏನಾಯಿತು ಎನ್ನುವುದು ಇದೀಗ ಗುಸು ಗುಸು ಮಾತುಗಳು ಕೇಳಿ ಬರುತ್ತಿದೆ. ಪ್ರವೀಣ್ ಆತ್ಮಹತ್ಯೆ ಮಾಡಿದ್ದಾನೆಂದು ಕೆರೆಯ ಬಳಿ ಬಂದು ನೋಡಿದಾಗ ಚಪ್ಪಲಿ, ಆಧಾರ್ ಕಾರ್ಡ್ ಪತ್ತೆಯಾಗಿತ್ತು.ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ, ಬೆಳಾಲು ವಿಪತ್ತು ನಿರ್ವಹಣಾ ತಂಡ ಹಾಗೂ ಸ್ಥಳೀಯರು ಕೆರೆಯಲ್ಲಿ ಶೋಧ ಕಾರ್ಯ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಪ್ರವೀಣ್ ಪಿಂಟೋ ಸಾವು ಹಲವು‌ ಅನುಮಾನಗಳಿಗೆ ಕಾರಣವಾಗಿದೆ.ಇದು ಆತ್ಮಹತ್ಯೆಯೋ ಅಥವಾ ಇನ್ನೇನದರೂ ನಡೆದಿದೆಯಾ ಎಂಬ ಬಗ್ಗೆ ಕೂಡ ಸ್ಥಳೀಯರು ಗುಸು ಗುಸು‌…

Read More