Author: main-admin

ಬೆಂಗಳೂರು : ಪರವಾನಗಿ ನವೀಕರಿಸಿದ ಆರೋಪ ಎದುರಿಸುತ್ತಿರುವ ಹಿನ್ನೆಲೆ ಪವರ್ ಟಿ.ವಿ ಕನ್ನಡ ಚಾನೆಲ್ ತಕ್ಷಣದಿಂದಲೇ ಎಲ್ಲಾ ಕಾರ್ಯಕ್ರಮಗಳನ್ನು ಸ್ಥಗಿತ ಗೊಳಿಸುವಂತೆ ಹೈ ಕೋರ್ಟ್ ಆದೇಶ ಹೊರಡಿಸಿದೆ. ಮಂಗಳವಾರ ಏಕಸದಸ್ಯ ನ್ಯಾಯ ಪೀಠದಲ್ಲಿ ಜೆಡಿಎಸ್ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಎಂ. ರಮೇಶ್ ಗೌಡ, ಡಾ. ಎ ರಮ್ಯಾ ರಮೇಶ್ ಹಾಗೂ ಐಪಿಎಸ್ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ಸಲ್ಲಿಸಿದ ರಿಟ್ ಅರ್ಜಿಗಳನ್ನು ವಿಚಾರಣೆ ನಡೆಸಿ, ವಾದ ಮಂಡಿಸಿದ ಹೈಕೋರ್ಟ್ ಹಿರಿಯ ವಕೀಲ ಪ್ರಭುಲಿಂಗ ಪ್ರತಿವಾದಿ ರಾಕೇಶ್ ಶೆಟ್ಟಿ, ಅರ್ಜಿದಾರರ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಬಿತ್ತರಿಸುತ್ತಿದ್ದರೆ, ವಾಸ್ತವದಲ್ಲಿ ಇವರ ಚಾನೆಲ್ ಕಾನೂನುಬಾಹಿರವಾಗಿ ನಡೆಯುತ್ತಿದೆ. 2021ರಿಂದಲೂ ಚಾನೆಲ್ ನ ಪರವಾನಗಿ ನವೀಕರಿಸಿಲ್ಲ ಎಂಬ ಅಂಶಗಳನ್ನು ನ್ಯಾಯಪೀಠದ ಗಮನಕ್ಕೆ ತಂದರು. ಬಳಿಕ ಈ ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿ ರಾಕೇಶ್ ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ಗಳ ಕಾಯ್ದೆ 1995ದ ಆದೇಶವನ್ನು ಉಲ್ಲಂಘಿಸಿರುವ ಕಾರಣ ತಕ್ಷಣದಿಂದಲೇ ತಮ್ಮ ಚಾನೆಲ್ ನಲ್ಲಿ ಪ್ರಸಾರವಾಗುವ ಸುದ್ದಿಗಳನ್ನು ಜುಲೈ 8ರ ವರೆಗೂ…

Read More

ಬೆಂಗಳೂರು : ಪೆಟ್ರೋಲ್, ಡೀಸೆಲ್ ಬಳಿಕ ಇದೀಗ ಕೆಎಂಎಫ್ ಹಾಲಿನ ದರ ಏರಿಕೆ ಮಾಡಿದ್ದು, ಇಂದು ಮಧ್ಯಾಹ್ನದಿಂದಲೇ ಪ್ರತಿ ಪ್ಯಾಕೆಟ್ನ ಬೆಲೆ ರೂ.2 ಏರಿಕೆಯಾಗಲಿದೆ ಎಂದು ಕೆಎಂಎಫ್ ಮಾಹಿತಿ ನೀಡಿದೆ. ಹೌದು ಹೊಸ ಹಾಲಿನ ಪ್ಯಾಕೆಟ್ ನಿಂದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಗುಲಿದೆ. ಆದರೆ ರಾತ್ರಿ ಬಂದಿರುವಂತಹ ಸ್ಟಾಕ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಸದ್ಯ ಹಳೆಯ ದರದಲ್ಲಿ ಹಾಲಿನ ಪ್ಯಾಕೆಟ್ ಗಳನ್ನು ಮಾರಾಟ ಮಾಡಲಾಗುತ್ತಿದೆ. ಮಧ್ಯಾಹ್ನದ ನಂತರ ಹೊಸ ದರದಲ್ಲಿ ಹಾಲು ಮಾರಾಟ ಮಾಡಲಾಗುತ್ತದೆ. ಮಧ್ಯಾಹ್ನದಿಂದ ನಂದಿನಿ ಹಾಲಿನ ದರ ಹೆಚ್ಚಾಗಲಿದೆ ಹಾಗಾಗಿ ಸದ್ಯ ಸಾಮಾನ್ಯ ದರದಲ್ಲಿ ಹಾಲಿನ ಪ್ಯಾಕೆಟ್ ಗಳನ್ನು ಮಾರಾಟ ಮಾಡಲಾಗುತ್ತಿದೆ. ಇವಾಗ ಇರುವುದು ರಾತ್ರಿ ಬಂದಿರುವ ಸ್ಟಾಕ್ ಒಂದು ಲೀಟರ್ ಒಂದು ಪ್ಯಾಕೆಟ್ ತಗೊಂಡ್ರೆ 2 ರೂಪಾಯಿ ಜಾಸ್ತಿ ಆಗುತ್ತದೆ ಅರ್ಧ ಲೀಟರ್ 2 ಪ್ಯಾಕೆಟ್ ತಗೊಂಡ್ರೆ 4 ರೂಪಾಯಿ ಜಾಸ್ತಿ ಆಗುತ್ತದೆ. ಪ್ಯಾಕೆಟ್ ಮೇಲೆ 2 ರೂಪಾಯಿ ಜಾಸ್ತಿ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ…

Read More

ಮಂಗಳೂರು: ಜೋರು ಮಳೆಯಿಂದಾಗಿ ಮಂಗಳೂರಿನ ಕುತ್ತಾರಿನ ಮದನಿ ನಗರದಲ್ಲಿ ಸಮೀಪದ ಮನೆಯ ಗೋಡೆ ಇನ್ನೊಂದು ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬುಧವಾರ ಮುಂಜಾನೆಸಂಭವಿಸಿದೆ. ಮೃತಪಟ್ಟವರನ್ನು ಯಾಸಿರ್‌(45), ಅವರ ಪತ್ನಿ ಮರಿಯಮ್ಮ(40) ಹಾಗೂ ಮಕ್ಕಳಾದ ರಿಯಾನ & ರಿಫಾನ್‌ ಎಂದು ಗುರುತಿಸಲಾಗಿದೆ. ಅಬೂಬಕ್ಕರ್‌ ಅವರ ಮನೆ ಗೋಡೆ ಯಾಸಿರ್‌ ಮನೆ ಮೇಲೆ ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಆಗಮಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈಗಾಗಲೇ ಮೂವರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ.

Read More

ಮಂಗಳೂರು: ನಗರದ ಜೆಪ್ಪಿನಮೊಗರು ಎಂಬಲ್ಲಿ ರಸ್ತೆಯನ್ನು ಅಗೆದು ಹಾಕಿರುವ ವಿಚಾರದಲ್ಲಿ ಗಲಾಟೆ ನಡೆದು ವಕೀಲ ದಂಪತಿಗೆ ಹಲ್ಲೆ ನಡೆಸಿ, ಮಾನಭಂಗಕ್ಕೆ ಯತ್ನಿಸಿದ್ದಾರೆಂದು ಸ್ಥಳೀಯ ವ್ಯಕ್ತಿಯೊಬ್ಬರ ಮೇಲೆ ದೂರು ದಾಖಲಾಗಿದೆ. ವಕೀಲ ದಂಪತಿಯೂ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ವ್ಯಕ್ತಿ ಪ್ರತಿದೂರು ದಾಖಲಿಸಿದ್ದಾರೆ. ನ್ಯಾಯವಾದಿ ಜಯಪ್ರಕಾಶ್ ಅವರ ಮನೆಗೆ ಹೋಗುವ ದಾರಿಯ ವಿಚಾರದಲ್ಲಿ ಸ್ಥಳೀಯ ರಾಬರ್ಟ್ ವೆಲೆರಿಯನ್ ಮೆಂಡೋನ್ಸಾ ಅವರ ನಡುವೆ ತಕಾರಾರು ಎದ್ದಿತ್ತು. ಈ ಬಗ್ಗೆ ಎರಡೂ ಕಡೆಯವರ ನಡುವೆ ಈ ಹಿಂದೆಯೇ ಜಗಳ ನಡೆದಿತ್ತು‌. ಈ ನಡುವೆ ಜಾಗದ ಮಾಲಕ ರಾಬರ್ಟ್ ವೆಲೆರಿಯನ್ ಮೆಂಡೋನ್ಸಾ ಅವರು ಜಯಪ್ರಕಾಶ್ ಅವರ ಮನೆಗೆ ಹೋಗುವ ದಾರಿಯನ್ನು ಅಗೆದು ಹಾಕಿದ್ದರು. ಪರಿಣಾಮ ರಸ್ತೆ ತುಂಬಾ ನೀರು ನಿಂತು ಮೊಣಕಾಲು ಮುಳುಗುವಷ್ಟು ನೀರಿನಲ್ಲಿಯೇ ಜನ ಸಂಚಾರ ಮಾಡಬೇಕಿತ್ತು. ಈ ಬಗ್ಗೆ ವೀಡಿಯೋ ಮಾಡಿ ವಕೀಲ ಜಯಪ್ರಕಾಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ವೀಡಿಯೋದಲ್ಲಿ ಸ್ಥಳೀಯ ಕಾರ್ಪೊರೇಟರ್ ವೀಣಾ ಮಂಗಳ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಆದ್ದರಿಂದ…

Read More

ಬೆಂಗಳೂರು :ನಂದಿನಿ ಹಾಲಿನ ದರ ಹೆಚ್ಚಿಸಲಾಗಿದೆ ಎಂದು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ.ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್‌ ಹಾಲಿನ ದರವನ್ನ 2.10 ರೂ. ಹಾಗೂ ಅರ್ಧ ಲೀಟರ್‌ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿದೆ. ಆದ್ರೆ ಗ್ರಾಹಕರಿಗೆ ಸಿಗುತ್ತಿದ್ದ 1,000 ಎಂಎಲ್‌ (1 ಲೀಟರ್)‌ ಪ್ಯಾಕೆಟ್‌ ಹಾಲು ಇನ್ಮುಂದೆ 1,050 ಎಂಎಲ್‌ ಹಾಗೂ ಅರ್ಧ ಲೀಟರ್‌ ಪ್ಯಾಕೆಟ್‌ ಹಾಲು 550 ಎಂಎಲ್‌ ಹೆಚ್ಚುವರಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ. ನಾಳೆಯಿಂದ ಈ ದರ ನಾಳೆಯಿಂದ ಅನ್ವಯವಾಗಲಿದೆ ಎಂದು ತಿಳಿಸಿದರು.ಮೊಸರು ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಲ್ಲ. ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರುಪಾಯಿ ಇದೆ. ಗುಜರಾತ್​​​​ನಲ್ಲಿ ಅಮುಲ್ ಒಂದು ಲೀಟರ್​ಗೆ 56 ರೂ. ಮಹಾರಾಷ್ಟ್ರದಲ್ಲಿ 56 ರೂ. ದೆಹಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದರು.

Read More

ಉಡುಪಿ ಜಿಲ್ಲೆಯಲ್ಲಿ ಅತಂಕ‌ ಸೃಷ್ಟಿಸಿದ್ದ ಗ್ಯಾಂಗ್ ವಾರ್ ಅರೋಪಿಗಳು ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಸಂಭವಿಸಿದೆ. ಕಾರಾಗೃಹದಲ್ಲಿರುವ ಈ ಖತರ್ ನಾಕ್ ಗ್ಯಾಂಗ್ ಕುರ್ಚಿ ಅಡುಗೆ ಮನೆಯಲ್ಲಿದ್ದ ಚಾಹಾ ಸೌಟು ಪಾತ್ರೆಗಳಿಂದ ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದೆ ಎಂದು ಮಾಹಿತಿ ತಿಳಿದು ಬಂದಿದೆ. ವಿಚಾರಣಾ ಕೈದಿಗಳಾದ ಮುಹಮ್ಮದ್ ಆಶಿಕ್ ಮತ್ತು ಮಹಮ್ಮದ್ ಸಕ್ಲೇನ್ ಪಿಜನ್ ಕಾಲ್ ಸಿಸ್ಟಮ್ ಕರೆ ಮಾಡಲು ತಡವಾಯಿತೆಂದು ಹೇಳಿ ಕರ್ತವ್ಯದಲ್ಲಿದ್ದ ಜೈಲರ್ ಎಸ್.ಎ.ಶಿರೋಳ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿ ಜೋರಾಗಿ ಕೂಗಾಡಿದ್ದಾರೆ. ಮಾತ್ರವಲ್ಲದೇ ಅಧೀಕ್ಷಕರ ಕಚೇರಿಯಿಂದ ಕರೆದುಕೊಂಡು ಹೋಗುವಾಗ ಸಿಬ್ಬಂದಿಯೊಂದಿಗೆ ಮತ್ತೆ ಗಲಾಟೆ ಆರಂಭಿಸಿ ಸಿಬ್ಬಂದಿಯನ್ನು ದೂಡಿ ಕೊಠಡಿಯಲ್ಲಿದ್ದ ಬೆಂಕಿ ನಂದಿಸುವ ಯಂತ್ರವನ್ನು ತೆಗೆಯಲು ಪ್ರಯತ್ನಿಸಿದರೆನ್ನಲಾಗಿದೆ. ಬಳಿಕ ಅಡುಗೆ ಕೋಣೆಯಲ್ಲಿರುವ ದೊಡ್ಡ ಸೌಟನ್ನು ಮತ್ತು ಚಹಾ ಮಾಡುವ ಸೌಟನ್ನು ತಂದು, ಮುಹಮ್ಮದ್ ಸಕ್ಲೇನ್ ತನ್ನ ಕೊಠಡಿಯ ಮರದ ಕುರ್ಚಿಯನ್ನು ತೆಗೆದುಕೊಂಡು…

Read More

ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕೃತಕ ಬಣ್ಣದ ಬೆರೆಸುವಿಕೆಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಕಬಾಬ್‌, ಫಿಶ್‌, ಚಿಕನ್‌ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬೆರೆಸುವುದನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಬಂಧಿಸಿದೆ. ಬಾಯಿ ಚಪ್ಪರಿಸಿಕೊಂಡು ತಿನ್ನುವ ಗೋಬಿ ಮಂಚೂರಿ, ಬಾಂಬೆ ಮಿಠಾಯಿಗೆ ಕಲರ್‌ ಹಾಕುವುದನ್ನು ಬ್ಯಾನ್ ಮಾಡಿದ ಬೆನ್ನಲ್ಲೇ ಇದೀಗ ಕಬಾಬ್‌ ಸರದಿಯಾಗಿದೆ. ಕೃತಕ ಬಣ್ಣದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಹೀಗಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಿತ್ತು. ರಾಜ್ಯಾದ್ಯಂತ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಿದಾಗ, ಅದರಲ್ಲಿ 8 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ – 7 ಮಾದರಿಗಳು ಹಾಗೂ ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 1) ಕೂಡಿರುವುದರಿಂದ ಅಸುರಕ್ಷಿತ ಎಂದು…

Read More

ಉಳ್ಳಾಲ: ಬೈಕ್ ಕಳವು ನಡೆಸಿದ ಆರೋಪಿಗಳಿಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ತೊಕ್ಕೊಟ್ಟುವಿನಿಂದ ಕಳವು ನಡೆಸಿದ ಆಕ್ಟಿವಾ ಸ್ಕೂಟರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಮುಕ್ಕಚ್ಚೇರಿ ಕಡಪ್ಪುರ ನಿವಾಸಿ ಅಬ್ದುಲ್ ಸವಾದ್ (26) ಮತ್ತು ಧರ್ಮನಗರ ನಿವಾಸಿ ಯಶ್ಬಿತ್ (22) ಬಂಧಿತರು.ಬಂಧಿತರಿಬ್ಬರು ಕೆಲ ದಿನಗಳ ಹಿಂದೆ ತೊಕ್ಕೊಟ್ಟು ಕೀರ್ತಿ ಹೊಟೇಲ್ ಎದುರುಗಡೆ ನಿಲ್ಲಿಸಿದ್ದ ಆಕ್ಟಿವಾ ಸ್ಕೂಟರನ್ನು ಕಳವು ನಡೆಸಿದ್ದರು. ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಆರೋಪಿಗಳಿಬ್ಬರನ್ನು ಉಳ್ಳಾಲದಿಂದ ಬಂಧಿಸಿದ್ದಾರೆ.ಆರೋಪಿಗಳಲ್ಲಿ ಅಬ್ದುಲ್ ಸವಾದ್ ವಿರುದ್ಧ ಗಾಂಜಾ ಹಾಗೂ ಕಳವು ಪ್ರಕರಣಗಳು ಮಂಗಳೂರಿನ ವಿವಿಧ ಠಾಣೆಗಳಲ್ಲಿದೆ. ಯಶ್ಬಿತ್ ಉಳ್ಳಾಲ – ಸ್ಟೇಟ್ ಬ್ಯಾಂಕ್ ಬಸ್ಸಿನಲ್ಲಿ ನಿರ್ವಾಹಕನಾಗಿದ್ದಾನೆ.ಠಾಣಾಧಿಕಾರಿ ಬಾಲಕೃಷ್ಣ ಹೆಚ್.ಎನ್ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ರೂ. 80,000 ಬೆಲೆ ಬಾಳುವ ಆಕ್ಟಿವಾ ಸ್ಕೂಟರನ್ನು ವಶಕ್ಕೆ ಪಡೆಯಲಾಗಿದೆ.

Read More

ವಿಟ್ಲ: ಉಡುಪಿ-ಕಾಸರಗೊಡು ವಿದ್ಯುತ್ ಮಾರ್ಗ ಜಿಲ್ಲೆಯ ರೈತರ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಕೃಷಿ ಜಮೀನುಗಳನ್ನು ಉಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಶಾಸಕರಿಗೆ, ಸಂಸದರಿಗೆ ಹಲವು ಬಾರಿ ಮನವಿಗಳನ್ನು ಸಲ್ಲಿಸಲಾಗಿದೆ. ಆದರೆ ಅವರು ಅದನ್ನು ಕಸದ ಬುಟ್ಟಿಗೆ ಎಸೆದು ಕಂಪನಿಯ ಏಜೆಂಟರಂತೆ ವರ್ತಿಸುತ್ತಿರುವುದು ಖಂಡನಾರ್ಹ. ಕೃಷಿ ಜಮೀನುಗಳನ್ನು ಹಾಳು ಮಾಡುವ ಈ ಯೋಜನೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು. ಇದರ ವಿರುದ್ಧ ಹೋರಾಟಕ್ಕಿಳಿದಿರುವ ರೈತರ ಮೇಲೆ ಸುಳ್ಳು ಪ್ರಕರಣ ದಾಖಲಿಸುವ ಹುನ್ನಾರ ನಡೆಯುತ್ತಿದೆ. ಇದು ಮುಂದುವರಿದರೆ ಮುಂದಿನ ದಿನ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳಗುತ್ತು ಎಚ್ಚರಿಸಿದ್ದಾರೆ. ವಿಟ್ಲದಲ್ಲಿ ಕರೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು. ಯೋಜನೆಗಾಗಿ ಪಡುಬಿದ್ರೆಯ ಇನ್ನಾದಲ್ಲಿ ಭತ್ತದ ಗದ್ದೆಯನ್ನು ಹಾಳುಗೆಡುವುದನ್ನು ವಿರೋಧಿಸಿ ತೀವ್ರ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಧ್ಯ ಪ್ರವೇಶಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳರ್ ಯೋಜನೆಯ ಕಾಮಗಾರಿ ತಕ್ಷಣ ನಿಲ್ಲಿಸುವಂತೆ ಆದೇಶ ಹೊರಡಿಸಿದ್ದು, ಇದು ಉಭಯ ಜಿಲ್ಲೆಗಳಿಗೆ ಅನ್ವಯವಾಗಿದೆ. ಆದರೆ…

Read More

ಬೆಂಗಳೂರು: ಶೀಘ್ರದಲ್ಲಿ ಹೊಸದಾಗಿ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅವರು ಕಲಬುರಗಿ ನಗರದಲ್ಲಿವಿಭಾಗ ಮಟ್ಟದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡುತ್ತ, ಸರ್ವೆ ಕೆಲಸಗಳು ವಿಳಂಬವಾಗುವುದನ್ನು ತಪ್ಪಿಸಲು ಸರ್ವೆಯರ್‌ಗಳ ಹುದ್ದೆಗಳನ್ನೂ ಕೂಡ ಭರ್ತಿ ಮಾಡಲಾಗುವುದು ಅಂತ ತಿಳಿಸಿದರು. ಇನ್ನೂ ‘ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗುವ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಅಂತ ತಿಳಿಸಿದರು.

Read More