Author: main-admin

ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಮೊಬೈಲ್ ನಲ್ಲಿ ಮತ್ತಷ್ಟು ಸ್ಪೋಟಕ ಜಿಹಾದಿ ವಿಡಿಯೋಗಳನ್ನು ಪೊಲೀಸರು ಪತ್ತೆ ಹೆಚ್ಚಿದ್ದಾರೆ. ಮತಾಂಧ ಮನಃಸ್ಥಿತಿಯನ್ನು ಹೊಂದಿದ್ದ ಮಹಮ್ಮದ್‌ ಶಾರೀಕ್‌ನ ಮೊಬೈಲ್‌ನಲ್ಲಿ 1 ಸಾವಿರಕ್ಕೂ ಹೆಚ್ಚು ಜೆಹಾದಿ ವೀಡಿಯೋಗಳು ಪತ್ತೆಯಾಗಿವೆ.ಐಸಿಸ್‌ ಉಗ್ರರ ವಿಧ್ವಂಸಕ ಕೃತ್ಯಗಳ ವೀಡಿಯೋ ಸೇರಿದಂತೆ 55 ಜಿಬಿಗೂ ಅಧಿಕ ವೀಡಿಯೋ, ಪೊಟೋಗಳು ಆತನ ಮೊಬೈಲ್‌ ಮತ್ತು ಪೆನ್‌ಡ್ರೈವ್‌ನಲ್ಲಿ ಪತ್ತೆಯಾಗಿವೆ ಎನ್ನಲಾಗಿದೆ. ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಬಾಂಬ್ ಸ್ಫೋಟದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಗ್ರ ಶಾರೀಕ್‍ನನ್ನೂ ಹತ್ಯೆಗೆ ಸಂಚಿನ ಬಗ್ಗೆ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಶಾರೀಕ್ ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಶಾರೀಕ್ ಕೊಠಡಿ ಪ್ರವೇಶದ ಬಳಿ ಮೆಟಲ್ ಡಿಟೆಕ್ಟರ್ ಅಳವಡಿಸಿಸಲಾಗಿದೆ.

Read More

ಸುಳ್ಯ : ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ ಅವರಿಗೆ ಡೆಂಗ್ಯೂ ಜ್ವರ ದೃಢಪಟ್ಟಿದ್ದು, ನಿನ್ನೆ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಎರಡು ದಿನಗಳಿಂದ ಸಚಿವರಿಗೆ ಜ್ವರ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಪರೀಕ್ಷೆ ನಡೆಸಿದ್ದು ಸಚಿವರಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಎರಡು ದಿನ ಸಚಿವರು ಸಾರ್ವಜನಿಕ ಸಂಪರ್ಕಕ್ಕೆ ಲಭ್ಯರಿರುವುದಿಲ್ಲ ಎಂದು ಮೂಲಗಳು ತಿಳಿಸಿವೆ.

Read More

ಕಡಬ: ಅನ್ಯಕೋಮಿನ‌ ಜೋಡಿಯೊಂದು ರೂಂ‌ನಲ್ಲಿ ಇದೆ ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದು ಪೊಲೀಸರ ಮದ್ಯ ಪ್ರವೇಶದಿಂದ ವಿಚಾರ ತಿಳಿಗೊಳಿಸಿದ ಘಟನೆ ಪೆರಾಬೆ ಗ್ರಾಮದ ಕುಂತೂರಿನಲ್ಲಿ ನಡೆದಿದೆ. ಮುಡಿಪಿನ ಯುವಕ ಮಂಜೇಶ್ವರ ಮೂಲದ ಅನ್ಯ ಕೋಮಿನ ಯುತಿಯನ್ನು ಪೆರಾಬೆ ಬಳಿ ಬಾಡಿಗೆ ಕೋಣೆಗೆ ಕರೆತಂದಿದ್ದಾನೆ.ವಿಷಯ ತಿಳಿದು ಹಿಂದೂ ಸಂಘಟನೆಯ ಕಾರ್ಯಕರ್ತರು ಸೇರಿದ್ದರು. ಕಟ್ಟಡದ ಮಾಲಕ ಸ್ಥಳಕ್ಕೆ ಬರುವಂತೆಯೂ ಆಗ್ರಹಿಸಿದ್ದರು. ಈ ಬಗ್ಗೆ ಮಾಹಿತಿ ತಿಳಿದು ಕಡಬ ಠಾಣಾ ಎಸ್‌ .ಐ ಆಂಜನೇಯ ರೆಡ್ಡಿ ನೇತೃತ್ವದ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕಿದ್ದು,ನೆರೆದವರನ್ನು ತೆರಳುವಂತೆ ಸೂಚಿಸಿದ್ದಾರೆ. ಯುವತಿಯನ್ನು ಪೊಲೀಸರು ಆಕೆಯ ಮನೆಗೆ ಕಳುಹಿಸಿರುವುದಾಗಿ ತಿಳಿದು ಬಂದಿದೆ.ಆದರೆ ಯುವಕ ಪರಾರಿಯಾಗಿದ್ದಾನೆ. ಈ ಕುರಿತು ಹೆಚ್ಚಿನ‌ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಮಂಗಳೂರು: ತುಳುನಾಡಿನ ದೈವಾರಾಧನೆ ಹೆಸರಿನಲ್ಲಿ ಮತ್ತಷ್ಟು ಸಿನಿಮಾ ತೆಗೆಯುವಂತ ಇಂಗಿತವನ್ನು ಅನೇಕರು ಕಾಂತಾರ ಚಿತ್ರದ ನಂತ್ರ ವ್ಯಕ್ತ ಪಡಿಸಿದ್ದಾರೆ ಎನ್ನಲಾಗುತ್ತದೆ. ಈ ಹಿನ್ನಲೆಯಲ್ಲಿ ದೈವಾರಾಧನೆ ಹೆಸರಿನಲ್ಲಿ ದುಡ್ಡು ಮಾಡುವವರ ವಿರುದ್ಧ ದೈವಾರಾಧಕರು ತೊಡೆತಟ್ಟಿ ನಿಂತಿದ್ದಾರೆ. ಅದೇ ದೈವಾರಾಧನೆ ಸಿನಿಮಾ ಮಾಡಿದ್ರೇ, ಮುಲಾಜಿಲ್ಲದೇ ವಿರೋಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇನ್ಮುಂದೆ ವ್ಯಾಪಾರದ ಹೆಸರಿನಲ್ಲಿ ದೈವಾರಾಧನೆಯನ್ನು ನಡೆಸಿದ್ರೇ ಕಾನೂನು ಕ್ರಮ ಹಾಗೂ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂಬುದಾಗಿ ದೇವಾರಾಧಕರು ಹೇಳಿದ್ದಾರೆ. ಅಲ್ಲದೇ ದೈವಾರಾಧನೆ ಸಿನಿಮಾ ಮಾಡಿದ್ರೇ ವಿರೋಧಿಸುವುದಾಗಿ ಹೇಳಿದ್ದಾರೆ. ದೈವದ ಕೋಲಾ ಸೇವೆಯ ಹೆಸರಿನಲ್ಲಿ ಲಕ್ಷಾಂತರ ಲೂಟಿ ಮಾಡಿರೋದಾಗಿಯೂ ತುಳುನಾಡ ದೈವಾರಾಧನ ಸಂರಕ್ಷಣಾ ಯುವವೇದಿಕೆ, ದೈವಾರಾಧನಾ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿಗಳು ಆರೋಪಿಸಲಾಗಿವೆ. ಇಂದು ಮಂಗಳೂರಿನ ಕುತ್ತಾರು ಬಳಿಯ ಕೊರಗಜ್ಜನ ಆದಿಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಸಮಿತಿಗಳು ಸಲ್ಲಿಸಿದವು. ಈ ಸಂದರ್ಭದಲ್ಲಿಯೇ ದೈವಾರಾಧಕರು ತುಳುನಾಡ ದೈವಾರಾಧನೆ ಹೆಸರಿನಲ್ಲಿ ದುಡ್ಡು ಮಾಡುವುದು ಸರಿಯಲ್ಲ ಎಂಬುದಾಗಿ ಕಿಡಿಕಾರಿದ್ದಾರೆ.

Read More

ಮಂಗಳೂರು: ಸಹಪಾಠಿ ವಿದ್ಯಾರ್ಥಿನಿಯೊಂದಿಗೆ ಬಸ್ಸಿನಲ್ಲಿ ಸಂಚರಿಸುತ್ತಿದ್ದ ಎಂದು ಆರೋಪಿಸಿ ಕಾಲೇಜು ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಮುತ್ತು(18), ಪ್ರಕಾಶ್‌(21) ಮತ್ತು ರಾಕೇಶ್‌(23) ಎಂಬವರು ಬಂಧಿತ (Arrest) ಆರೋಪಿಗಳಾಗಿದ್ದಾರೆ. ಕಾರ್ಕಳದ ಖಾಸಗಿ ಕಾಲೇಜು ವಿದ್ಯಾರ್ಥಿ ಸೈಯದ್ ರಶೀಮ್ ಉಮರ್(20) ಎಂಬವರ ಮೇಲೆ ನ.24ರಂದು ಬಸ್ಸಿನಲ್ಲಿ ಹಲ್ಲೆ ನಡೆದಿತ್ತು. ಕಾರ್ಕಳ-ನಿಟ್ಟೆ ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸೈಯದ್ ರಶೀಮ್ ಉಮರ್‌ಗೆ ಅಂದು ಸಂಜೆ ನಗರದ ನಂತೂರು ಜಂಕ್ಷನ್ ಬಳಿ ತಂಡವೊಂದು ಹಲ್ಲೆ ನಡೆಸಿತ್ತು. ಬಸ್ಸಿನೊಳಗೆ ನುಗ್ಗಿದ ತಂಡ ಅವಾಚ್ಯ ಶಬ್ದಗಳಿಂದ ಬೈದು, ದೊಣ್ಣೆ ಮತ್ತು ಬೆತ್ತದಿಂದ ಹಲ್ಲೆ ನಡೆಸಿರುವುದಾಗಿ ರಶೀಮ್ ಉಮರ್ ಕದ್ರಿ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದರು. ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಲ್ಲದೆ ಬಸ್ಸಿನಿಂದ ಕೆಳಗೆ ಇಳಿಸಿ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂಬುದಾಗಿ ಜೀವ ಬೆದರಿಕೆಯೊಡ್ಡಿದೆ ಎಂದು ಸೈಯದ್ ರಶೀಮ್ ಉಮರ್ ದೂರಿನಲ್ಲಿ ಆರೋಪಿಸಿದ್ದರು. ಈ…

Read More

ಉಡುಪಿ : ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡ ಘಟನೆ ಉಡುಪಿಯ ಹೊಟೇಲ್ ಒಂದರಲ್ಲಿ ನಡೆದಿದೆ. ಬೆಳಗ್ಗೆ ಏಳು ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್ ಹೋಟೆಲ್ ನಲ್ಲಿನ ಗ್ಯಾಸ್ ಸಿಲಿಂಡರ್ ನಲ್ಲಿ ಸೋರಿಕೆ ಉಂಟಾಗಿತ್ತು ಇದರಿಂದ ಬೆಂಕಿ ಕಾಣಿಸಿಕೊಂಡು ಕೆಲವು ಸುತ್ತುಗಳಿಗೆ ಹಾನಿಯಾಗಿತ್ತು. ಕೂಡಲೆ ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ, ಸಂಭವಿಸಬಹುದ ಅನಾಹುತವನ್ನು ತಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

Read More

ಉಡುಪಿ : ಮಂಗಳೂರಿನ ಕುಕ್ಕರ್ ಬಾಂಬರ್ ಶಾರೀಕ್‍ ನ ಕುರಿತು ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗಗೊಂಡಿದ್ದು, ಶಾರಿಕ್ ಮೈಸೂರು, ಮಂಗಳೂರು ಅಷ್ಟೇ ಅಲ್ಲದೇ ಉಡುಪಿಯ ಶ್ರೀ ಕೃಷ್ಣ ಮಠಕ್ಕೂ ಭೇಟಿ ನೀಡಿದ್ದ ಎಂದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಶಂಕಿತ ಉಗ್ರ ಶಾರಿಕ್ ಉಡುಪಿಯ ಶ್ರೀಕೃಷ್ಣ ಮಠ, ರಥಬೀದಿಯಲ್ಲಿ, ನಗರದ ಬಸ್ ನಿಲ್ದಾಣದಲ್ಲೆಲ್ಲಾ ಓಡಾಡಿದ್ದ, 2022ರ ಅಕ್ಟೋಬರ್ 11ರಂದು ಶ್ರೀಕೃಷ್ಣ ಮಠ ಹಾಗೂ ಉಡುಪಿಯ ರಥಬೀದಿಯಲ್ಲಿ ಸುತ್ತಾಡಿರೋ ಬಗ್ಗೆ ಬಗ್ಗೆ ಮಾಹಿತಿ ಸಿಕ್ಕಿದೆ. ಸದ್ಯ ಮಂಗಳೂರು ಪೋಲಿಸರ ತಂಡ ಉಡುಪಿ ಶ್ರೀ ಕೃಷ್ಣ ಮಠ, ರಥಬೀದಿ ಪರಿಸರದಲ್ಲಿ ತಪಾಸಣೆ ನಡೆಸಿದ್ದಾರೆ. ಉಡುಪಿ ರಥಬೀದಿಯಲ್ಲಿ ಶಾರೀಕ್ ಸುತ್ತಾಡುತ್ತಿದ್ದ ವೇಳೆ ಇಲ್ಲಿಂದಲೇ ಕೆಲವರಿಗೆ ಫೋನ್ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.

Read More

ಬೆಳ್ತಂಗಡಿ: ಮಂಗಳೂರಿನಲ್ಲಿ ಶಂಕಿತ ಉಗ್ರ ಶಾರೀಕ್ ನಿಂದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ನಡೆಸಿದ ಹಿಂದಿನ ದಿನ ಬೆಳ್ತಂಗಡಿಯ ಬೆಂದ್ರಾಳದಲ್ಲಿ ನಿಷೇಧಿತ ಸ್ಯಾಟ್ ಲೈಟ್ ಫೋನ್ ಕರೆ ಹೋಗಿರುವುದು ಬೆಳಕಿಗೆ ಬಂದಿದೆ.‌ ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರಿಂದ ಶನಿವಾರ ಬೆಂದ್ರಾಳ ಪ್ರದೇಶದಲ್ಲಿ ತನಿಖೆ ಮತ್ತಷ್ಟು ಚುರುಕುಗೊಳಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ಅರಣ್ಯ ಪ್ರದೇಶದಿಂದ ನವೆಂಬರ್ 18 ರಂದು ಸಂಜೆ 5 ಗಂಟೆಗೆ ನಿಷೇಧಿತ ಸ್ಯಾಟ್ ಲೈಟ್ ಫೋನ್ ಕರೆ ಹೋಗಿರುವ ಬಗ್ಗೆ ಕೇಂದ್ರ ಅಧಿಕಾರಿಗಳಿಗೆ ಮಾಹಿತಿ ಲಭಿಸಿದ್ದು ಅದರಂತೆ ಆಂತರಿಕ ಭದ್ರತಾ ಇಲಾಖೆ ಹಾಗೂ ಸ್ಥಳೀಯ ಪೊಲೀಸರಿಗೆ ತನಿಖೆ ಮಾಡಲು ಮಾಹಿತಿ ರವಾನಿಸಿದ್ದಾರೆ. ಧರ್ಮಸ್ಥಳ ಪೊಲೀಸರು ಹಾಗೂ ಮಂಗಳೂರು ಆಂತರಿಕ ಭದ್ರತಾ ಇಲಾಖೆಯ ಇನ್ಸ್ಪೆಕ್ಟರ್ ಚಿದಾನಂದ್ ಮತ್ತು ತಂಡ ಶುಕ್ರವಾರ ಬೆಂದ್ರಾಳ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಶನಿವಾರ ಮತ್ತೆ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ ಐ ಅನಿಲ್ ಕುಮಾರ್ ಡಿ. ಮತ್ತು ತಂಡ ತೋಟತ್ತಾಡಿ ಗ್ರಾಮದ…

Read More

15 ವರ್ಷ ಹಳೆಯದಾದ ಸರ್ಕಾರಿ ವಾಹನಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಈ ವಾಹನಗಳನ್ನು ಗುಜರಿಗೆ ಹಾಕಲಿದ್ದು, ಬದಲಾಗಿ ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ಹೊಸ ವಾಹನಗಳಿಗೆ ಹೋಲಿಸಿದರೆ ಈ ವಾಹನಗಳು ಶೇಕಡಾ 10 ರಿಂದ 12 ರಷ್ಟು ಹೆಚ್ಚು ವಾಯುಮಾಲಿನ್ಯ ಉಂಟು ಮಾಡುತ್ತಿರುವ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಈ ಯೋಜನೆಯ ಕಡತಕ್ಕೆ ಗುರವಾರದಂದು ಸಹಿ ಹಾಕಿದ್ದಾರೆ. ರಾಜ್ಯಗಳಿಗೂ ಈ ಯೋಜನೆಯ ಮಾಹಿತಿಯನ್ನು ಕಳುಹಿಸಿಕೊಡಲಾಗಿದ್ದು, ಇದನ್ನು ತಮ್ಮ ತಮ್ಮ ರಾಜ್ಯಗಳಲ್ಲಿಯೂ ಅನುಷ್ಠಾನಗೊಳಿಸುವಂತೆ ಸಲಹೆ ನೀಡಲಾಗಿದೆ. ಅಲ್ಲದೆ 20 ವರ್ಷ ಪೂರೈಸಿದ ಖಾಸಗಿ ವಾಹನಗಳನ್ನು ಕಡ್ಡಾಯವಾಗಿ ಗುಜರಿಗೆ ಹಾಕುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದಿದ್ದು, ಆದರೆ ಈ ಕುರಿತು ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ.

Read More

ಮಂಗಳೂರು : ಪಾರ್ಕಿಂಗ್ ಮಾಡಿದ್ದ ಕಾರೊಂದು ಬೆಂಕಿಗಾಹುತಿಯಾಧ ಘಟನೆ ಮಂಗಳೂರು ಜ್ಯೋತಿ ಜ್ಯೂಸ್‌ ಜಂಕ್ಷನ್‌ ಮುಂಭಾಗದಲ್ಲಿ ನಡೆದಿದೆ. ಪಾರ್ಕಿಂಗ್ ಮಾಡಿದ್ದ ಫೋರ್ಡ್‌ ಕಂಪೆನಿಯ ಕಾರಿನಲ್ಲಿ ಇದ್ದಕ್ಕಿದ್ದ ಹಾಗೆ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಬಹುತೇಕ ಸುಟ್ಟು ಹೋಗಿದೆ. ಕಾರಿನ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ. ಬೆಂಕಿ ಹಿಡಿದ ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ನೀರು ಹಾಕಿ ಪ್ರಯತ್ನಿಸಿದ್ದಾರೆ. ಸ್ಥಳದಲ್ಲಿ ದಟ್ಟವಾದ ಹೊಗೆ ಕೂಡಾ ಆವರಿಸಿದ್ದು, ಆತಂಕದ ವಾತಾವರಣ ಉಂಟಾಗಿತ್ತು. ಟ್ರಾಫಿಕ್‌ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭ ರಸ್ತೆ ಸಂಚಾರ ಕೊಂಚ ಹೊತ್ತು ಅಸ್ತವ್ಯಸ್ಥಗೊಂಡಿತು.

Read More