ಕುಂದಾಪುರ:ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಸಂಗಮ ಜಂಕ್ಷನ್ ಬಳಿ ಭಾನುವಾರ ಬೆಳಗ್ಗೆ ಟ್ರಕ್‌ನ ಕೆಳಗೆ ಸ್ಕೂಟರ್ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಮತ್ತು ಮಗಳಿಗೆ ಬಿದ್ದು ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ರೋಸಿ ಮತ್ತು ಆಕೆಯ ಮಗಳು ರೆನಿಸ್ ಎಂದು ಗುರುತಿಸಲಾಗಿದೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಟ್ರಕ್ ಹರಿಯಾಣದಿಂದ ಕೊಝಿಕೋಗೆ ತೆರಳುತ್ತಿತ್ತು. ಡಿಕ್ಕಿಯ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಈ ಸಂಬಂಧ ಕುಂದಾಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
Author: main-admin
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾತ್ಯತೀತ ಜನತಾದಳ (ಜೆಡಿಎಸ್) ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಭಾನುವಾರದಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಸೂರಜ್ ರೇವಣ್ಣ ಪರ ಸೋಮವಾರ (ಜೂನ್. 24) ಜಾಮೀನು ಅರ್ಜಿ ಸಲ್ಲಿಸಲಾಗುತ್ತದೆ. ಮುಂದಿನ ವಿಚಾರಣೆ ಜುಲೈ 6 ರಂದು ನಡೆಯಲಿದೆ. ಈ ಬಗ್ಗೆ ಸೂರಜ್ ರೇವಣ್ಣ ಪರ ವಕೀಲ ನಿಖಿಲ್ ಕಾಮತ್ ಮಾಹಿತಿ ನೀಡಿದ್ದಾರೆ. ಅಪರಾಧ ತನಿಖಾ ಇಲಾಖೆ (ಸಿಐಡಿ) ಕಸ್ಟಡಿಗಾಗಿ ನ್ಯಾಯಾಲಯವನ್ನು ಸಂಪರ್ಕಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಸಿಐಡಿ ಮುಂದಿನ ನಡೆ ನೋಡಿಕೊಂಡು ಜಾಮೀನು ಅರ್ಜಿ ಸಲ್ಲಿಸುವುದಾಗಿ ನಿಖಿಲ್ ಕಾಮತ್ ಮಾಹಿತಿ ನೀಡಿದ್ದಾರೆ. ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿತ್ತು. ಸೂರಜ್ ರೇವಣ್ಣ ಅವರನ್ನು 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಶಿವಕುಮಾರ್ ಅವರ ಮುಂದೆ ಹಾಜರುಪಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು 14 ದಿನಗಳ…
ಜಗತ್ತಿನ ಬಹುತೇಕ ಜನರ ದಿನ ಆರಂಭವಾಗುವುದೇ ಟೀ ಅಥವಾ ಕಾಫಿಯಿಂದ. ದಿನಕ್ಕೆ ಒಂದು ಕಪ್ ಕಾಫಿ-ಟೀ ಕುಡಿಯಲಿಲ್ಲ ಅಂದ್ರೆ ಆ ದಿನ ಏನೋ ಮಿಸ್ ಮಾಡಿಕೊಂಡಂತೆ ಜನರು ಚಡಪಡಿಸುತ್ತಾರೆ. ಒಂದು ಹೊತ್ತು ಊಟ ಬೇಕಾದರೂ ಬಿಡುತ್ತೇನೆ ಆದರೆ, ಟೀ-ಕಾಫಿ ಬಿಡುವುದಿಲ್ಲ ಎಂದು ಹೇಳುವ ಜನರು ಕೂಡ ನಮ್ಮ ನಡುವೆ ಇದ್ದಾರೆ. ದಿನಕ್ಕೊಂದು ಟೀ ಕುಡಿಯದಿದ್ದರೂ ಸುಸ್ತು, ಚಡಪಡಿಕೆ ಹಾಗೂ ತಲೆ ನೋವು ಅನುಭವಿಸುವವರೂ ಇದ್ದಾರೆ. ಅಷ್ಟೊಂದು ಜನಪ್ರಿಯವಾಗಿದೆ ಈ ಪಾನೀಯ. ಅವರವರ ರುಚಿ ಮತ್ತು ಆರೋಗ್ಯಕ್ಕೆ ತಕ್ಕಂತೆ ಗ್ರೀನ್ ಟೀ, ಬ್ಲಾಕ್ ಟೀ, ಲೆಮನ್ ಟೀ, ಹಾಲಿನ ಟೀ ಕುಡಿಯುತ್ತಾರೆ. ಹೆಚ್ಚಿನವರು ಹಾಲಿನ ಚಹಾವನ್ನು ಇಷ್ಟಪಡುತ್ತಾರೆ. ಹಾಲಿಗೆ ಹೆಚ್ಚು ಚಹಾ ಎಲೆಗಳನ್ನು ಸೇರಿಸಿ ಮತ್ತು ದೀರ್ಘಕಾಲದವರೆಗೆ ಕುದಿಸಿ ತಯಾರಿಸಿದ ಚಹಾವನ್ನು ಇಷ್ಟಪಡುವ ಇದ್ದಾರೆ. ಆದಾಗ್ಯೂ, ದೀರ್ಘಕಾಲದವರೆಗೆ ಚಹಾವನ್ನು ಕುದಿಸುವುದು ಅನೇಕ ಹಾನಿಕಾರಕ ಸಂಯುಕ್ತಗಳನ್ನು ಉಂಟುಮಾಡುತ್ತದೆ. ಅತಿಯಾಗಿ ಕುದಿಸಿದ ಚಹಾವು ಸ್ಲೋ ಪಾಯಿಸನ್ ಆಗಿ ಪರಿವರ್ತನೆಯಾಗಬಹುದು ಎಂದು ಪೌಷ್ಟಿಕತಜ್ಞರು ಎಚ್ಚರಿಸಿದ್ದಾರೆ. ಚಹಾವನ್ನು ಎಷ್ಟು ಹೊತ್ತು…
ಉಡುಪಿ: ಕೆಲ ದಿನಗಳ ಹಿಂದೆ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ನಡೆದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿದ ದೂರುದಾರನ ಮನೆಯಿಂದಲೇ ಪೊಲೀಸರು ತಲವಾರು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸೆಲೂನಿನಲ್ಲಿ ಕೆಲಸ ಮಾಡಿಕೊಂಡಿದ್ದ ಪುತ್ತೂರು ಗ್ರಾಮದ ಚರಣ್ ರಾಜ್(18) ಎಂಬಾತನ ಮನೆಯಲ್ಲಿ ತಲವಾರು ಇರುವ ಬಗ್ಗೆ ಉಡುಪಿ ನಗರ ಠಾಣಾ ಎಸ್ಸೈ ಪುನೀತ್ ಕುಮಾರ್ ರಿಗೆ ಮಾಹಿತಿ ಬಂದಿದ್ದು, ಅದರಂತೆ ಜೂ.21ರಂದು ನ್ಯಾಯಾಲಯದಿಂದ ಶೋಧನಾ ವಾರೆಂಟನ್ನು ಪಡೆದುಕೊಂಡು ಆತನ ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಆತನ ಮನೆಯಲ್ಲಿ ತಲವಾರು ದೊರೆತಿದ್ದು, ಅದರಂತೆ ಆತನ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜೂ.15ರಂದು ಪ್ರವೀಣ್, ಅಭಿಷೇಕ್, ದೇಶರಾಜ್ ಮತ್ತು ಇತರರು ಕೈಯಲ್ಲಿ ತಲವಾರಗಳನ್ನು ಹಿಡಿದುಕೊಂಡು ದಾಳಿ ಮಾಡಿ ದ್ವಿಚಕ್ರ ವಾಹನಗಳಿಗೆ ಹಾನಿ ಮಾಡಿದ್ದರೆಂದು ಚರಣ್‌ರಾಜ್ ಉಡುಪಿ ನಗರ ಠಾಣೆಗೆ ದೂರು ನೀಡಿದ್ದನು.
ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿದ ಘಟನೆ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ರಸ್ತೆಯಲ್ಲಿ ನಡೆದಿದೆ. ನಂದಳಿಕೆ ನಿವಾಸಿ ಪ್ರಣಮ್ಯ ಶೆಟ್ಟಿ 14 (ವ). ಮೃತ ಬಾಲಕಿ.ನಂದಳಿಕೆಯ ಲಕ್ಷ್ಮೀ ಜನಾರ್ದನ ದೇವಾಲಯದ ಪೂಜೆಗೆಂದು ಹೆದ್ದಾರಿ ಬದಿಯಲ್ಲಿ ಸಂಜೆಯ ವೇಳೆಯಲ್ಲಿ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಅಜಾಗರೂಕತೆ ಹಾಗೂ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಪಾದಚಾರಿ ಬಾಲಕಿ ಗಂಭೀರ ಗಾಯಗೊಂಡಿದ್ದು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಮುಲ್ಲಡ್ಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೆ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ. ಘಟನೆಯ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ: ಭೀಕರ ಕಾರು ಅಪಘಾತ ಸಂಭವಿಸಿ ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಾಯಣಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಸುಳ್ಯ ಸಂಪಾಜೆ ಬಳಿ ನಡೆದಿದೆ. ಕಾರಿನಲದಲಿದ್ದವರು ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರದಲ್ಲಿ ತಮ್ಮ ಕೆಲಸ ಮುಗಿಸಿ ವಾಪಸ್ ಮಂಡ್ಯಕ್ಕೆ ಹೊರಟಿದ್ದರು. ಈ ವೇಳೆ ರಾತ್ರಿ 3 ಗಂಟೆಯ ವೇಳೆಗೆ ಸಂಪಾಜೆ ಗೇಟಿನಿಂದ ಸ್ವಲ್ಪ ದೂರದಲ್ಲಿ ನಿಯಂತ್ರಣ ತಪ್ಪಿದ ವೋಕ್ಸ್‌ವ್ಯಾಗನ್ ಕಾರು ರಸ್ತೆಯ ರಕ್ಷಣಾ ಗೋಡೆಗೆ ಢಿಕ್ಕಿಯಾಗಿದೆ. ರಸ್ತೆಯ ಬದಿಯ ಕಬ್ಬಿಣದ ತಡೆಗೋಡೆಗೆ ಢಿಕ್ಕಿ ಹೊಡೆದ ಕಾರಿನೊಳಗೆ ಕಬ್ಬಿಣದ ತಡೆಗೋಡೆ ನುಗ್ಗಿದೆ. ಢಿಕ್ಕಿಯ ರಭಸಕ್ಕೆ ಕಾರು ಛಿದ್ರ ವಾಗಿದೆ. ಅಪಘಾತದ ತೀವ್ರತೆಗೆ ಓರ್ವನಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಮತ್ತೊಬ್ಬರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಉಳಿದಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.
ಮಂಗಳೂರು: ಮನೆಯೊಂದರಿಂದ 13 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾದ ಘಟನೆ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಹೆಲೆನ್ ಲೋಬೊ ಎಂಬವರ ಮನೆಯಿಂದ ಚಿನ್ನಾಭರಣ ಕಳ್ಳತನವಾಗಿದ್ದು, ಇವರು ಮಗಳ ಮಗುವಿನ ನಾಮಕರಣ ಕಾರ್ಯಕ್ರಮಕ್ಕಾಗಿ 2023, ಜನವರಿ 4ರಂದು ಬೆಂಗಳೂರಿಗೆ ಹೋಗಿದ್ದರು. ಈ ವೇಳೆ ತಮ್ಮ ಬಳಿಯಿದ್ದ ಚಿನ್ನಾಭರಣಗಳನ್ನು ಪಕ್ಕದ ಮನೆಯ ಮೇಬಲ್ ಫಾಂಟೆಸ್ ಎಂಬವರಿಗೆ ನೀಡಿ ತೆರಳಿದ್ದರೆನ್ನಲಾಗಿದೆ.ಬಳಿಕ ಚಿನ್ನಾಭರಣವನ್ನು ಹೆಲೆನ್ ಲೋಬೊ ಪಡೆದು ಮನೆಯಲ್ಲಿರಿಸಿದ್ದರು. 2024 ಜೂನ್ 16ರಂದು ಚಿನ್ನಾಭರಣಗಳನ್ನು ಪರಿಶೀಲಿಸಿದಾಗ ನೆಕ್ಲೆಸ್, ಚೈನ್ , ಕರಿಮಣಿ ಸರ , ಕೈಬಳೆ, ಕಿವಿಯ ಓಲೆ ಸೇರಿದಂತೆ ಸುಮಾರು 13 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವುದು ಅವರ ಗಮನಕ್ಕೆ ಬಂದಿದೆ. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಪರಶುರಾಮನ ನಕಲಿ ಮೂರ್ತಿಯನ್ನು ಸರಬರಾಜು ಮಾಡಿದ ಆರೋಪದ ಮೇಲೆ ಕೃಷ್ಣ ಕಲಾಲೋಕದ ಮಾಲೀಕ ಎನ್ನಲಾದ ಕೃಷ್ಣ ಎಂಬಾತನ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಾರ್ಕಳದ ನಲ್ಲೂರು ಗ್ರಾಮದ ನಿವಾಸಿ ಕೃಷ್ಣ (30) ಎಂಬವರು ನೀಡಿದ ದೂರಿನಂತೆ ಆರೋಪಿಗಳು ಉಡುಪಿ ನಿರ್ಮಿತಿ ಕೇಂದ್ರದಿಂದ ಪ್ರತಿಮೆ ರಚನೆ ಮತ್ತು ಪ್ರತಿಷ್ಠಾಪನೆಗಾಗಿ 1,25,50,000 ರೂ. ಆದರೆ, ಆರೋಪಿಗಳು ಅಸಲಿ ಕಂಚಿನ ಪರಶುರಾಮ ಪ್ರತಿಮೆ ನೀಡುವ ಬದಲು ನಕಲಿ ಪ್ರತಿಮೆ ನಿರ್ಮಿಸಿ ಸರ್ಕಾರಕ್ಕೆ ವಂಚಿಸಿದ್ದಾರೆ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲುಪಾಲಾಗಿದ್ದಾರೆ. ಇಂದು ಕೋರ್ಟ್ ಅವರಿಗೆ ಜುಲೈ.4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಹೀಗಾಗಿ 2011ರ ಬಳಿಕ ನಟ ದರ್ಶನ್ ಮತ್ತೆ ಜೈಲುಪಾಲಾಗಿದ್ದಾರೆ. ಇಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಆರೋಪಿಗಳಾದಂತ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ವಿಚಾರಣೆಯನ್ನು ನಡೆಸಲಾಯಿತು. ಈ ವಿಚಾರಣೆಯ ಬಳಿಕ ನಟ ದರ್ಶನ್, ವಿನಯ್, ಪ್ರದೋಷ್ ಹಾಗೂ ಧನರಾಜ್ ಅವರಿಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಜುಲೈ.4ರವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶಿಸಿದೆ. ಈ ಮೂಲಕ ನಟ ದರ್ಶನ್ ಕೂಡ ಪವಿತ್ರಾ ಗೌಡ ಬಳಿಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ.
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ದಿನದಂದು ಬೋಳಿಯಾರ್‌ನಲ್ಲಿ ಮಸೀದಿ ಎದುರು ಬಿಜೆಪಿ ವಿಜಯೋತ್ಸವ ಮೆರವಣಿಗೆ ವೇಳೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿ ಬಂಧಿತ ಹಿಂದೂ ಸಂಘಟನೆಗೆ ಸೇರಿದ ಆರೋಪಿಗಳ ವಿರುದ್ಧ ಯಾವುದೇ ಬಲವಂತದ ಹಾಗೂ ಒತ್ತಡದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಶುಕ್ರವಾರ ಹೈಕೋರ್ಟ್ ನಿರ್ದೇಶನ ನೀಡಿದೆ. ಕಳೆದ ಜೂ.9ರಂದು ಬೋಳಿಯಾರ್‌ನಲ್ಲಿ ವಿಜಯೋತ್ಸವದಲ್ಲಿ ಘೋಷಣೆ ಕೂಗಿದ ವೇಳೆ ಹಲ್ಲೆ ಘಟನೆ ನಡೆದಿದೆ. ಘಟನೆಯಲ್ಲಿ ಐದು ಮಂದಿ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದರು. ಘಟನೆ ಬಗ್ಗೆ ಗಾಯಾಳುಗಳು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದರು. ಇದೇ ವೇಳೆ ಬೈಕ್‌ನಲ್ಲಿ ಬಂದವರು ಪಾಕಿಸ್ಥಾನ ಕುನ್ನಿಗಳೇ ಎಂದು ನಿಂದಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಮಸೀದಿ ಅಧ್ಯಕ್ಷರು ಮಾರನೇ ದಿನ ಕೊಣಾಜೆ ಪೊಲೀಸರಿಗೆ ಪ್ರತಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸುರೇಶ್,ವಿನಯ, ಸುಭಾಸ್, ರಂಜಿತ್, ಧನಂಜಯ್ ಮತ್ತಿತರರ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದರು. ಅಲ್ಲದೆ ಇವರನ್ನು ಬಂಧಿಸಿದ್ದರು.ಪೊಲೀಸರು ಈ ಕ್ರಮದ ವಿರುದ್ಧ ಈ ಐದು ಮಂದಿ ಹೈಕೋರ್ಟ್ ಮೆಟ್ಟಿಲೇರಿದ್ದು,…










