ಉಪ್ಪಿನಂಗಡಿ: ಇಲ್ಲಿನ ಬ್ಯಾಂಕ್ ರಸ್ತೆಯ ಬಹುಮಹಡಿ ಕಟ್ಟಡಕ್ಕೆ ಶುಕ್ರವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗಲಿದ್ದು, 5ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಹೋಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಇಲ್ಲಿನ ಅಂಚೆ ಕಚೇರಿ ಸಮೀಪದ ಪೃಥ್ವೀ ಮಹಲ್ ಕಟ್ಟಡಕ್ಕೆ ಅಗ್ನಿ ಸ್ಪರ್ಶವಾಗಿದ್ದು, ದುರಂತಕ್ಕೆ ಕಾರಣ ತಿಳಿದುಬಂದಿಲ್ಲ. ಕಟ್ಟಡದ ತಳ ಅಂತಸ್ತಿನಲ್ಲಿರುವ ಬೇಕರಿ, ಮೊಬೈಲ್ ಅಂಗಡಿ, ಚಪ್ಪಲಿ ಅಂಗಡಿ, ಫ್ಯಾನ್ಸಿ ಸಹಿತ ಹಲವು ಅಂಗಡಿಗಳು ಬೆಂಕಿ ಹಬ್ಬಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸಲು ಶ್ರಮಿಸಿದ್ದಾರೆ. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆಯಿಂದ ಹೆಚ್ಚಿನ ಅನಾಹುತವನ್ನು ತಪ್ಪಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳದಲ್ಲಿದ್ದು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
Author: main-admin
ಮಣಿಪಾಲ: ವ್ಯಕ್ತಿಯೊಬ್ಬರನ್ನು ಅಪಹರಿಸಿ, ಚಾಕು ತೋರಿಸಿ ಬೆದರಿಸಿ ಅವರಲ್ಲಿದ್ದ 1 ಲಕ್ಷ ರೂ. ಹಣವನ್ನು ಕಸಿದು ಪರಾರಿಯಾದ ಘಟನೆ ಉಡುಪಿ ನಗರದಲ್ಲಿ ಸಂಭವಿಸಿದೆ. ಆತ್ರಾಡಿಯ ಮಹಮ್ಮದ್ ನಿಹಾಲ್ ಅವರು ಬಸ್‌ನ ಕಲೆಕ್ಷನ್ ವ್ಯವಹಾರ ಮಾಡಿಕೊಂಡಿದ್ದು, ಬಸ್‌ನ ಕಲೆಕ್ಷನ್ ಹಣವನ್ನು ತೆಗೆದುಕೊಂಡು ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬೇಕರಿ ಬಳಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಬಲವಂತವಾಗಿ ಅವರನ್ನು ಕಾರಿನಲ್ಲಿ ಕರೆದೊಯ್ದಿದ್ದಾರೆ. ಕಾರಿನಲ್ಲಿ ಚಾಕು ತೋರಿಸಿ, ಕೈಯಿಂದ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಣವನ್ನು ಕಸಿದು ಜೀವ ಬೆದರಿಕೆ ಹಾಕಿದ್ದಾರೆ. ಆರೋಪಿಗಳನ್ನು ಶಾರೀಕ್, ಇರ್ಫಾನ್ ಎಂದು ಗುರುತಿಸಲಾಗಿದೆ. ಇವರ ಜತೆಗೆ ಇನ್ನೂ ಇಬ್ಬರು ಅಪರಿಚಿತರು ಇದ್ದರು ಎಂದು ಮಹಮ್ಮದ್ ನಿಹಾಲ್ ಉಡುಪಿ ನಗರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು : ನಗರದ ಹೊರವಲಯದಲ್ಲಿರುವ ಉಳಾಯಿಬೆಟ್ಟು ಎಂಬಲ್ಲಿ ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರ ಮನೆಗೆ ನುಗ್ಗಿದ್ದ ಡಕಾಯಿತಿ ಗ್ಯಾಂಗ್ ಮನೆಯವರನ್ನು ಕಟ್ಟಿ ಹಾಕಿ ಚೂರಿ ತೋರಿಸಿ ನಗ – ನಗದು ದರೋಡೆ ಮಾಡಿದೆ. ಪಿಡಬ್ಲ್ಯುಡಿ ಗುತ್ತಿಗೆದಾರ ಉಳಾಯಿಬೆಟ್ಟುವಿನ ಪದ್ಮನಾಭ ಕೋಟ್ಯಾನ್ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿದೆ. ಮುಖಕ್ಕೆ ಮಾಸ್ಕ್ ಧರಿಸಿದ್ದ 8-9 ಮಂದಿಯಿದ್ದ ತಂಡವೊಂದು ಶುಕ್ರವಾರ ರಾತ್ರಿ 8ಗಂಟೆಗೆ ಮನೆಗೆ ನುಗ್ಗಿದೆ. ಬಳಿಕ ಮನೆಯವರಿಗೆ ಚೂರಿ ತೋರಿಸಿ ಬೆದರಿಸಿದೆ. ಬಳಿಕ ಮನೆಯವರನ್ನೆಲ್ಲ ಬೆಡ್‌ಶೀಟ್ ನಲ್ಲಿ ಕಟ್ಟಿಹಾಕಿದೆ. ಈ ವೇಳೆ ಪದ್ಮನಾಭ ಕೋಟ್ಯಾನ್ ಅವರ ಬಲಗೈಗೆ ಚೂರಿಯಿಂದ ಇರಿಯಲಾಗಿದೆ. ನಮ್ಮೊಂದಿಗೆ ಎಲ್ಲರೂ ಸಹರಿಸಬೇಕು. ಮನೆಯಲ್ಲಿ ಹಣವಿದೆಯೇ ಎಂದು ನೋಡುತ್ತೇವೆ ಎಂದು ದರೋಡೆಕೋರ ತಂಡ ಮನೆಯೆಲ್ಲ ಜಾಲಾಡಿ ಕೈಗೆ ಸಿಕ್ಕಿದ ಹಣ, ಒಡವೆಗಳನ್ನು ದೋಚಿ ಅಲ್ಲಿಂದ ಕಾಲ್ಕಿತ್ತಿದೆ. ಹೋಗುವಾಗ ಮನೆಯ ಮಾಲೀಕ ಪದ್ಮನಾಭ ಕೋಟ್ಯಾನ್ ಅವರ ವಾಹನವನ್ನು ತೆಗೆದುಕೊಂಡು ಹೋಗಿದ್ದಾರೆ. ಆದರೆ, ಮನೆಯಿಂದ ಸ್ವಲ್ಪ ದೂರದಲ್ಲಿ ವಾಹನವನ್ನು ಇಟ್ಟು ತಂಡ ಪರಾರಿಯಾಗಿದೆ. ಈ ಬಗ್ಗೆ ಕಂಕನಾಡಿ…
ಮಂಗಳೂರು: ಇಲ್ಲಿನ ಪಿವಿಎಸ್ ವೃತ್ತದ ಬಳಿ ಗುರುವಾರ ನಡೆದಿದ್ದ ಬಿಜೆಪಿ ಪ್ರತಿಭಟನೆಯ ವೇಳೆ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರ ಪರ್ಸ್‌ಅನ್ನು ಕಳ್ಳನೋರ್ವನು ಎಗರಿಸಿರುವ ಘಟನೆ ನಡೆದಿದೆ. ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ನೂಕಾಟ-ತಳ್ಳಾಟ ನಡೆದಿದೆ. ಈ ಸಂದರ್ಭಕ್ಕಾಗಿ ಹೊಂಚು ಹಾಕುತ್ತಿದ್ದ ಖದೀಮನೋರ್ವನು ಈ ಗುಂಪಿನ ನಡುವೆ ತನ್ನ ಕೈಚಳಕ ತೋರಿಸಿದ್ದಾನೆ. ಈತ ಸಿವಿಲ್ ಡ್ರೆಸ್‌ನಲ್ಲಿದ್ದ ಪೊಲೀಸ್ ಸಿಬ್ಬಂದಿಯ ಪರ್ಸ್ ಎಗರಿಸಿದ್ದಾನೆ. ಈ ದೃಶ್ಯ ಮಾಧ್ಯಮದ ವೀಡಿಯೋದಲ್ಲಿ ಸೆರೆಯಾಗಿದೆ. ಪರ್ಸ್ ಎಗರಿಸಿದ ಬಳಿಕ ಆತ ಮೆತ್ತಗೆ ಅಲ್ಲಿಂದ ಕಾಲ್ಕಿತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಆರೋಪಿಯ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಮುಲ್ಕಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮುಲ್ಕಿ ಪೊಲೀಸರು ಇದೀಗ ಯಶಸ್ವಿಯಾಗಿದ್ದಾರೆ. ಮಂಗಳೂರು ಉಳಾಯಿಬೆಟ್ಟುಸಾಲೆ ಮಜಲು ಮನೆ ನಿವಾಸಿ ಪ್ರದೀಪ ಪೂಜಾರಿ ಬಂಧಿತ ಆರೋಪಿ ಆರೋಪಿ ಪ್ರದೀಪ ಪೂಜಾರಿ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆನರೆಸಿಕೊಂಡಿದ್ದನು. ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಈತನ ಮೇಲೆ ಈ ಹಿಂದೆ ಬರ್ಕೆ ಪೊಲೀಸ್ ಠಾಣೆ, ಪಣಂಬೂರು ಪೊಲೀಸ್ ಠಾಣೆ, ಬಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿಯಲ್ಲಿ ನಡೆಯುತ್ತಿದ್ದ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆಗೆ ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಕಲ್ಲು ಸಾಗಾಟಕ್ಕೆ ಉಪಯೋಗಿಸುತ್ತಿದ್ದ ಮೂರು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಕಲ್ಲಿನ ಕೋರೆಯಿಂದ ಎರಡು ಲಾರಿ ಹಾಗೂ ಒಂದು ವಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಪುತ್ತೂರು: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಆರಕ್ಷಕ ಉಪನಿರೀಕ್ಷಕರನ್ನು ಲೋಕಸಭಾ ಚುನಾವಣೆಯ ಸಂದರ್ಭ ವರ್ಗಾವಣೆ ಮಾಡಿದ್ದು ಇದೀಗ ಚುನಾವಣಾ ಪೂರ್ವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಗಳಿಗೆ ಮರು ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ. ಆಂಜನೇಯ ರೆಡ್ಡಿ ಪುತ್ತೂರು ನಗರ ಠಾಣೆಗೆ, ಉದಯರವಿ ಎಂ.ವಿ.ಪುತ್ತೂರು ಸಂಚಾರ ಠಾಣೆಗೆ, ಪುತ್ತೂರಿನಿಂದ ನಂದಕುಮಾರ್ ಎಂ.ಪುಂಜಾಲಕಟ್ಟೆ ಠಾಣೆಗೆ, ಸಂಜೀವ ಜೆ.ಬಂಟ್ವಾಳ ಸಂಚಾರ ಠಾಣೆಗೆ, ಸೇಸು ಕೆ.ಎಸ್. ಪುತ್ತೂರು ನಗರ ಠಾಣೆಗೆ, ಕುಟ್ಟಿ ಮೇರ ಪುತ್ತೂರು ಸಂಚಾರ ಠಾಣೆಗೆ, ರುಕ್ಕ ನಾಯ್ಕ ಉಪ್ಪಿನಂಗಡಿ ಠಾಣೆಗೆ, ರತ್ನ ಕುಮಾರ್ ಎಂ.ವಿಟ್ಲ ಠಾಣೆಗೆ ಮರು ನಿಯುಕ್ತಿ ಹೊಂದಿದ್ದಾರೆ.ಉಳಿದಂತೆ.ಎನ್.ಕೆ.ಓಮನ ಪುಂಜಾಲಕಟ್ಟೆಠಾಣೆಗೆ, ಭಾರತಿ ಬಂಟ್ವಾಳ ಗ್ರಾಮಾಂತರ ಠಾಣೆಗೆ, ಲೋಲಾಕ್ಷ ಕೆ, ಬಂಟ್ವಾಳ ಗ್ರಾಮಾಂತರ ಠಾಣೆಗೆ, ಹಬೈಮಾರ್ ಬಂಟ್ವಾಳ ನಗರ ಠಾಣೆಗೆ ಕೃಷ್ಣ ಬಿ, ಸಿಇಎನ್ ಠಾಣೆಗೆ, ಧನರಾಜ್ ಉಳ್ಳಾಲ ಸಂಚಾರ ಉತ್ತರ ಠಾಣೆಗೆ, ನರೇಂದ್ರ ಸಿಸಿಬಿಗೆ, ಕುಮಾರೇಶನ್ ಬಟ್ಟೆಗೆ, ಶೋಭಾ ಸಿಇಎನ್ ಮಂಗಳೂರು ನಗರ, ಹರೀಶ್ ಎಚ್.ವಿ. ಉರ್ಪ ಠಾಣೆಗೆ, ಯೋಗೇಶ್ವರನ್ ಪಿ. ಪೂರ್ವ ಠಾಣೆ ಮಂಗಳೂರು, ಜ್ಞಾನಶೇಖರ್ ಹಣಂಬೂರಿಗೆ,…
ಮಂಗಳೂರು: ನಗರದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ. ಜೂ.18ರಂದು ಮಧ್ಯಾಹ್ನ 12:43ಕ್ಕೆ ವಿಮಾನ ನಿಲ್ದಾಣದ ಇ- ಮೇಲ್‌ಗೆ ಬೆದರಿಕೆ ಸಂದೇಶ ರವಾನೆಯಾಗಿದೆ. ಕೆಲವೇ ಕ್ಷಣಗಳಲ್ಲಿ ಬಾಂಬ್ ಸ್ಪೋಟಗೊಳ್ಳಲಿದೆ ಎಂದು ಸಂದೇಶ ರವಾನೆಯಾಗಿತ್ತು. ಆದ್ದರಿಂದ ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಭದ್ರತಾ ಅಧಿಕಾರಿಗಳು ವಿಮಾನ ನಿಲ್ದಾಣದ ಆವರಣದಲ್ಲಿ ತಪಾಸಣೆ ನಡೆಸಿ, ಯಾವುದೇ ಆತಂಕವಿಲ್ಲ ಎಂದು ದೃಢಪಡಿಸಿದ್ದಾರೆ. ದೇಶದ ಇತರ 41 ವಿಮಾನ ನಿಲ್ದಾಣಗಳಿಗೂ ಇದೇ ರೀತಿಯ ಬೆದರಿಕೆ ಇ-ಮೇಲ್ ಮೂಲಕ ಬಂದಿವೆ ಎಂದು ತಿಳಿದು ಬಂದಿದೆ. ಈ ಹಿಂದೆ ಮಂಗಳೂರು ವಿಮಾನ ನಿಲ್ದಾಣಕ್ಕೆ 2024ರ ಎ. 29 ರಂದು ಮತ್ತು 2023ರ ಡಿ.26 ರಂದು ಬಾಂಬ್ ಬೆದರಿಕೆಯ ಇಮೇಲ್ ಬಂದಿತ್ತು.
ಚಿತ್ರದುರ್ಗ ಜಿಲ್ಲೆಯ 1647 ಬಾಲಕಿಯರು, ಹದಿನೆಂಟು ವರ್ಷದ ಹಿಂದೆ ರಾಜ್ಯದಲ್ಲಿ ಆರಂಭಗೊಂಡಿದ್ದ ಭಾಗ್ಯಲಕ್ಷ್ಮೀ ಯೋಜನೆಯ ತಲಾ ಒಂದು ಲಕ್ಷ ರೂ. ಲಾಭವನ್ನು ಪಡೆಯಲಿದ್ದಾರೆ. ಜಿಲ್ಲೆಯಲ್ಲಿಈ ಯೋಜನೆಯಡಿ ನೋಂದಾಯಿಸಿದ ಹದಿನೆಂಟು ವರ್ಷ ಪೂರ್ಣಗೊಂಡ ಏಪ್ರಿಲ್ ಮತ್ತು ಮೇ ತಿಂಗಳ ಅಂತ್ಯಕ್ಕೆ ಈ ಬಾಲಕಿಯರು ಯೋಜನೆಯ ಮೆಚ್ಯೂರಿಟಿ ಬೆನಿಫಿಷರ್‌ಗೆ ಅರ್ಹರಾಗಿದ್ದು, ಈ ಹಣ ಇನ್ನೆರಡು ತಿಂಗಳಲ್ಲಿಅರ್ಹ ಫಲಾನುಭವಿಗಳ ಖಾತೆಗೆ ಆದ್ಯತೆ ಮೇರೆಗೆ ಜಮೆ ಆಗಲಿದೆ. ಈಗಾಗಲೇ ಅಗತ್ಯ ದಾಖಲೆಗಳನ್ನು ಇಲಾಖೆಯು ಪಡೆಯಲು ಮುಂದಾಗಿದೆ. ಲಿಂಗಾನುಪಾತ ಉತ್ತಮ ಪಡಿಸಲು, ಹೆಣ್ಣು ಭ್ರೂಣ ಹತ್ಯೆ ತಡೆಯಲು, ಬಾಲ್ಯ ವಿವಾಹ ಪದ್ಧತಿಗೆ ಬ್ರೇಕ್ ಹಾಕಲು, ಹೆಣ್ಣು ಮಗುವಿನ ಶಿಕ್ಷಣ, ಆರೋಗ್ಯ ಮಟ್ಟ ಉತ್ತಮ ಪಡಿಸಿ ಸರ್ವಾಂಗೀಣ ಅಭಿವೃದ್ಧಿಯತ್ತ ಕೊಂಡೊಯ್ಯಲು ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಿಸಿದ ಎರಡು ಹೆಣ್ಣು ಮಕ್ಕಳಿಗೆ ಸರಕಾರವು ನಿಶ್ಚಿತ ಠೇವಣಿ ಹೂಡಿ, ಈ ಮಗುವಿಗೆ ಹದಿನೆಂಟು ವರ್ಷ ಪೂರ್ಣಗೊಂಡ ನಂತರ ಬಡ್ಡಿ ಸಹಿತ ಪರಿಪಕ್ವ ಹಣ ನೀಡುವ ಸದುದ್ದೇಶದಿಂದ 2006-07 ರಲ್ಲಿ ಆರಂಭಗೊಂಡಿದ್ದ ಭಾಗ್ಯಲಕ್ಷ್ಮೀ…
ಮಡಿಕೇರಿ : ಹಳೆಯ ಕಟ್ಟಡವೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪ ಪಟ್ಟಣದಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಕಟ್ಟಡ ನೆಲಸಮಗೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೂವರನ್ನು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಒಬ್ಬರನ್ನು ಮೈಸೂರು ಆಸ್ಪತೆಗೆ ಸ್ಥಳಾಂತರಿಸಲಾಗಿದೆ. ಇನ್ನೂ ಮೂವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರೆದಿದೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕಟ್ಟಡದಲ್ಲಿದ್ದ ಮಳಿಗೆಯಲ್ಲಿ ಬಿರಿಯಾನಿ ಸೆಂಟರ್ ನಡೆಯುತ್ತಿತ್ತು.










