ಮಂಗಳೂರು : ಮಂಗಳೂರಿನಲ್ಲಿ ಆಟೋದಲ್ಲಿ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಪೋಟಕ ಮಾಹಿತಿ ಲಭ್ಯವಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿರುವಾಗಲೇ ಬಸ್ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಲು ಉಗ್ರರು ಸಂಚು ರೂಪಿಸಿದ್ದರು ಎಂದು ಹೇಳಲಾಗುತ್ತಿದೆ. ಪಂಪ್‌ವೆಲ್ ವೃತ್ತದ ಬಳಿ ಈ ಕುಕ್ಕರ್ ಬಾಂಬ್ ಸ್ಫೋಟಿಸಲು ಸಂಚು ರೂಪಿಸಲಾಗಿತ್ತು ಎಂಬ ಅನುಮಾನ ವ್ಯಕ್ತವಾಗಿದ್ದು, ಶನಿವಾರ ಸಂಜೆ ನಾಗುರಿ ಸಮೀಪ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ವಸ್ತುವೊಂದು ಸ್ಪೋಟಗೊಂಡು ರಿಕ್ಷಾ ಚಾಲಕ ಪುರುಷೋತ್ತಮ ಹಾಗೂ ಅಪರಿಚಿತ ವ್ಯಕ್ತಿಯೊಬ್ಬರು ಗಾಯಗೊಂಡಿದ್ದರು. ಸದ್ಯ ಸ್ಪೋಟಕ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು, ಬೋಲ್ಟ್ ಪತ್ತೆ ಹಚ್ಚಿದ್ದಾರೆ. ಸರ್ಕ್ಯೂಟ್ ರೀತಿಯ ವೈರಿಂಗ್ ಮಾಡಿರುವ ವಸ್ತುಗಳು ಪತ್ತೆಯಾಗಿದ್ದು, ಲಘು ತೀವ್ರ ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದ್ದು, ವಸ್ತುಗಳನ್ನು ಪರೀಕ್ಷೆಗಾಗಿ ಎಫ್ ಎಸ್ ಎಲ್ ತಂಡಕ್ಕೆ ಕಳುಹಿಸಲಾಗಿದೆ.
Author: main-admin
ಮಂಗಳೂರು: ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿ-ಐಜಿಪಿ ಪ್ರವೀಣ್ ಸೂದ್ ಆಘಾತಕಾರಿ ಮಾಹಿತಿ ಬಹಿರಂಗಗೊಳಿಸಿದ್ದು, ಇದು ಅನಿರೀಕ್ಷಿತ ಸ್ಫೋಟವಲ್ಲ ಉಗ್ರರ ಕೃತ್ಯ ಎಂದು ತಿಳಿಸಿದ್ದಾರೆ. ಮಂಗಳೂರಿನ ನಾಗರಿ ಬಳಿ ನಿನ್ನೆ ಸಂಜೆ ಚಲಿಸುತ್ತಿದ್ದ ಆಟೋದಲ್ಲಿ ಸಂಭವಿಸಿದ್ದ ನಿಗೂಢ ಸ್ಫೋಟ ಪ್ರಕರಣ ಸಂಬಂಧ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಡಿಜಿಪಿ, ಇದು ಉಗ್ರರ ಕೃತ್ಯವಾಗಿದ್ದು, ಉದ್ದೇಶಪೂರ್ವಕವಾಗಿ ಹಾನಿ ಉಂಟು ಮಾಡಲು ಪ್ಲಾನ್ ಮಾಡಲಾಗಿತ್ತು. ಸಾವು, ನೋವು ಹಾನಿ ಉಂಟು ಮಾಡಲು ದುಷ್ಕರ್ಮಿಗಳು ಯೋಜನೆ ರೂಪಿಸಿದ್ದರು ಎಂದು ತಿಳಿಸಿದ್ದಾರೆ. ಕರ್ನಾಟಕ ಪೊಲೀಸರಿಂದ ಸೂಕ್ಷ್ಮ ಹಾಗೂ ಆಳವಾದ ತನಿಖೆ ನಡೆಯುತ್ತಿದೆ. ಕೇಂದ್ರ ತನಿಖಾ ತಂಡದಿಂದಲೂ ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಮಂಗಳೂರು: ನಗರದ ಆಟೋದಲ್ಲಿ ಕುಕ್ಕರ್ ಸ್ಫೋಟ ಪ್ರಕರಣ ತನಿಖೆಯ ಚುರುಕುಗೊಂಡಿದ್ದು ಪರಿಶೀಲನೆ ವೇಳೆ ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿದ್ದು ಹೈ ಅಲರ್ಟ್ ಘೋಷಣೆಯಾಗಿದೆ. ನಟ್, ಬೋಲ್ಟ್, ಬ್ಯಾಟರಿ, ಸರ್ಕಿಟ್ ರೀತಿಯ ವೈರಿಂಗ್ ಇರುವ ವಸ್ತುಗಳು ಪತ್ತೆಯಾಗಿದೆ. ಲಘು ತೀವ್ರತೆ ಇರುವ ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯ(FSL), ಬಾಂಬ್ ನಿಷ್ಕ್ರೀಯ ದಳದಿಂದ ತೀವ್ರ ಪರಿಶೀಲನೆ ನಡೆಯುತ್ತಿದೆ. ಬಾಕ್ಸ್ ಮತ್ತು ಬ್ಯಾಗ್‌ನಿಂದಲೇ ನಿಗೂಢ ಸ್ಪೋಟ ಸಂಭವಿಸಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸ್ಪೋಟದ ತೀವ್ರತೆಗೆ ಪ್ರಯಾಣಿಕನ ದೇಹ ಶೇ.50ರಷ್ಟು ಸುಟ್ಟು ಹೋಗಿದ್ದು ಚಿಕಿತ್ಸೆ ಮುಂದುವರಿದಿದೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಬರುತ್ತಿದ್ದ ಆಟೋವವನ್ನು ನಾಗುರಿ ಬಳಿ ಪ್ರಯಾಣಿಕ ಹತ್ತಿದ್ದ. ಆಟೋ ಒಂದು ಕಿ.ಮೀ ಕ್ರಮಿಸುವಷ್ಟರಲ್ಲಿ ನಿಗೂಢ ಸ್ಫೋಟಗೊಂಡಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ. ಪರಿಶೀಲನೆ ವೇಳೆ ಪ್ರೇಮ್ ರಾಜ್ ಕನೋಗಿ ಎಂಬ ಹೆಸರಿನ ಐಡಿ ದಾಖಲೆ ಪತ್ತೆಯಾಗಿದೆ. ದಾಖಲೆಯಲ್ಲಿ ಮೈಸೂರಿನ ವಿಳಾದ ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸ್ ತಂಡ ಮೈಸೂರಿಗೆ ತೆರಳಿದೆ. ಪ್ರಯಾಣಿಕನ ಬಳಿ 30…
ನವದೆಹಲಿ : ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಮಾಹಿತಿ ಹೊರಬೀಳುತ್ತಿದೆ. ಸಧ್ಯ ಶ್ರದ್ಧಾಳ ತಂದೆ, ಈ ಹತ್ಯೆಯಲ್ಲಿ ಅಫ್ತಾಬ್ ಮಾತ್ರವಲ್ಲ ಆತನ ಕುಟುಂಬದ ಸದಸ್ಯರೂ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಶ್ರದ್ಧಾಳ ತಂದೆ, ‘ತಾನೊಮ್ಮೆ ಮದುವೆಯ ಪ್ರಸ್ತಾಪದೊಂದಿಗೆ ಅಫ್ತಾಬ್ ಮನೆಗೆ ಹೋಗಿದ್ದ. ಆದ್ರೆ, ಅಫ್ತಾಬ್ ಮದುವೆಗೆ ನಿರಾಕರಿಸಿದ್ದ. ಅಷ್ಟೇ ಅಲ್ಲ ಅಫ್ತಾಬ್ ಮನೆಯವರೂ ಈ ಮದುವೆಗೆ ಸಿದ್ಧರಿರಲಿಲ್ಲ. ಶ್ರದ್ಧಾ ಕೊಲೆಯಲ್ಲಿ ಅಫ್ತಾಬ್ ಮತ್ತು ಆತನ ಕುಟುಂಬದವರೂ ಭಾಗಿಯಾಗಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಂದ್ಹಾಗೆ, ಶ್ರದ್ಧಾ ಹತ್ಯೆಯ ಸುದ್ದಿಯ ನಂತ್ರ ಅಫ್ತಾಬ್ ಕುಟುಂಬವೂ ಇನ್ನೂ ನಾಪತ್ತೆಯಾಗಿದೆ. ಅವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದು, ಅವರ ವಿರುದ್ಧ ಸಾಕ್ಷ್ಯ ಸಂಗ್ರಹಿಸುವ ಕಾರ್ಯ ಮುಂದುವರಿದಿದೆ.
ಮಂಗಳೂರು: ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಲೋಕಾರ್ಪಣೆ ಮಾಡಿದರು. ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿದ್ಯ ವಹಿಸಿದ್ದರು. ಸಚಿವರಾದ ಎಸ್. ಅಂಗಾರ, ಡಾ. ಅಶ್ವತ್ಥ್ ನಾರಾಯಣ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾದ ಡಿ.ವಿ. ಸದಾನಂದ ಗೌಡ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಸಂಜೀವ ಮಠಂದೂರು, ಯಿ.ಟಿ. ಖಾದರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಇತರೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.
ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯ ಪ್ರಮುಖ ವೃತ್ತಗಳಿಗೆ ಮಹಾಪುರುಷರ, ಗಣ್ಯವ್ಯಕ್ತಿಗಳ ಹೆಸರಿಡುವ ಪ್ರಸ್ತಾವನೆಗೆ ರಾಜ್ಯ ಸರಕಾರ ಅನುಮತಿ ನೀಡಿದೆ. ಸಾರ್ವಜನಿಕರು, ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಯಂತೆ ಉಡುಪಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ, ನಿರ್ಣಯ ಕೈಗೊಂಡು ಸಾರ್ವಜನಿಕರ ಆಕ್ಷೇಪಣೆ, ಶಾಂತಿ ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧೀಕ್ಷಕರ ವರದಿಯನ್ನೂ ಕೇಳಲಾಗಿತ್ತು. ಎಲ್ಲಾ ವೃತ್ತ/ಜಂಕ್ಷನ್‌ಗಳಿಗೆ ನಗರಸಭೆ ನಿರ್ಣಯಕ್ಕೆ ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆಯಿಲ್ಲದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಿದ್ದರು. ಯಾವ ವೃತ್ತ/ಜಂಕ್ಷನಿಗೆ ಯಾರ ಹೆಸರು? ಬನ್ನಂಜೆ ವೃತ್ತ : ನಾರಾಯಣಗುರು ವೃತ್ತ ,ಕಲ್ಸಂಕ ವೃತ್ತ:ಮಧ್ವಾಚಾರ್ಯ ವೃತ್ತ ,ಡಯಾನಾ ಸರ್ಕಲ್: ವಾದಿರಾಜ ವೃತ್ತ , ಸಂತೆಕಟ್ಟೆ ಕಲ್ಯಾಣಪುರ ರಸ್ತೆ ಜಂಕ್ಷನ್: ಕೋಟಿ ಚೆನ್ನಯ ವೃತ್ತ , ಬ್ರಹ್ಮಗಿರಿ ದೊಡ್ಡ ಸರ್ಕಲ್: ಆಸ್ಕರ್ ಫರ್ನಾಂಡಿಸ್ ವೃತ್ತ , ಪರ್ಕಳದಿಂದ ಕೋಡಂಗೆ, ಕೋಡಂಗೆ ಯಿಂದ ಸರಳೇಬೆಟ್ಟು ನಡುವಿನ ವೃತ್ತ: ಶ್ರೀರಾಮ ವೃತ್ತ.
ಕಡಬ: ಅಪ್ರಾಪ್ತ ಬಾಲಕನಿಗೆ ವಾಹನ ಚಲಾಯಿಸಲು ನೀಡಿದ ವಾಹನ ಮಾಲಕನಿಗೆ ಪುತ್ತೂರು ಎ.ಸಿ.ಜೆ. ಜೆ.ಎಮ್.ಎಫ್.ಸಿ ನ್ಯಾಯಾಲಯ 20 ಸಾವಿರ ದಂಡ ವಿಧಿಸಿದೆ. ಕೊಯಿಲ ಗ್ರಾಮದ ಕೆ.ಸಿ.ಫಾರ್ಮ್ ನಿವಾಸಿ ಅಬ್ದುಲ್ ರಹಿಮಾನ್ ದಂಡ ಪಾವತಿಸಿದವರು. 2020ರಲ್ಲಿ ಅಬ್ದುಲ್ ರಹಿಮಾನ್ ಅವರು ತಮ್ಮ ಅಪ್ರಾಪ್ತ ಪುತ್ರನಿಗೆ ಬೈಕ್ ಚಲಾಯಿಸಲು ನೀಡಿದ್ದರು. ಈ ಬೈಕ್ ಅಪಘಾತವಾದ ಹಿನ್ನೆಲೆಯಲ್ಲಿ ಬಾಲಕನ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದೀಗ ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರು ಎ.ಸಿ.ಜೆ. ಜೆ.ಎಮ್.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಯೋಗೀಂದ್ರ ಶೆಟ್ಟಿ ಅವರು, ಅಪ್ರಾಪ್ತನಿಗೆ ಬೈಕ್ ನೀಡಿದ್ದಕ್ಕಾಗಿ ಬಾಲಕನ ತಂದೆ, ಬೈಕ್ ಮಾಲಕ ಅಬ್ದುಲ್ ರಹಿಮಾನ್ ಅವರಿಗೆ 20 ಸಾವಿರ ದಂಡ ಪಾವತಿಸುವಂತೆ ಆದೇಶಿಸಿದ್ದಾರೆ. ಸರಕಾರದ ಪರವಾಗಿ ಎ.ಪಿ.ಪಿ. ಕವಿತಾ ಅವರು ವಾದಿಸಿದ್ದರು.
ಮಂಗಳೂರು: ಸ್ವಾತಂತ್ರ್ಯ ಸಮರ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಇಂದು ಮಂಗಳೂರಿನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಸಿಎಂ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದು ಸ್ವಾಮೀಜಿಗಳು, ಕೇಂದ್ರ, ರಾಜ್ಯದ ಸಚಿವರುಗಳೂ ಭಾಗಿಯಾಗಲಿದ್ದಾರೆ. ಭಾರತದ ಬಾವುಟವನ್ನು ಹಾರಿಸಿದ ಇಂದಿನ ಬಾವುಟಗುಡ್ಡೆಯ ಟಾಗೋರ್ ಪಾರ್ಕ್‍ಲ್ಲೇ ಪ್ರತಿಮೆ ನಿರ್ಮಿಸಲಾಗಿದ್ದು ಪಾಳು ಬಿದ್ದಿದ್ದ ಪಾರ್ಕ್‍ಗೂ ಮರು ಜೀವಬಂದಿದೆ. ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರಿಗೆ ಗೌರವ ಸಲ್ಲಿಸುವ ಹಿನ್ನಲೆಯಲ್ಲಿ ಸ್ವಾತಂತ್ರ್ಯದ 75 ನೇ ವರ್ಷದ ಸಂಭ್ರಮಾಚರಣೆಯಲ್ಲಿ ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಸುಳ್ಯದಿಂದ ರೈತರ ಸೈನ್ಯ ಕಟ್ಟಿಕೊಂಡು ಮಂಗಳೂರುವರೆಗೂ ಬ್ರಿಟಿಷರನ್ನು ಹಿಮ್ಮೆಟ್ಟಿಸಿದ ರಾಮಯ್ಯಗೌಡರ ಪ್ರತಿಮೆಯನ್ನ ಇಂದು ಸಿಎಂ ಬೊಮ್ಮಾಯಿ ಅನಾವರಣ ಮಾಡಲಿದ್ದಾರೆ. ಮಂಗಳೂರಿನ ಹೃದಯ ಭಾಗದಲ್ಲಿರುವ ಬಾವುಟ ಗುಡ್ಡೆಯ ಟಾಗೋರ್ ಪಾರ್ಕ್ (Tagore Park) ನಲ್ಲಿ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಸ್ವಾತಂತ್ರ್ಯದ 75 ನೇ ವರ್ಷಾಚರಣೆ ಹಿನ್ನಲೆಯಲ್ಲಿ ಪ್ರತಿಮೆ ಲೋಕಾರ್ಪಣೆ ಮಾಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿಯ ಡಾ.ನಿರ್ಮಲಾನಂದ ಶ್ರೀಗಳು, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ…
ಉಳ್ಳಾಲ: ಯಕ್ಷಗಾನದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರ್ವರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ನಡೆದಿದೆ. ಹೆಸರಾಂತ ಯಕ್ಷಗಾನ ಕಲಾವಿದರಾಗಿದ್ದ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇವರಿಂದು ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ. ಹಿಂದೆ ಬಪ್ಪನಾಡು ಹಾಗೂ ಇತರ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕೀರ್ತನ್, ಕೊರೊನ ಸಂಧರ್ಭ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು. ದಂಪತಿ ಕಲಹ ಹಾಗೂ ಕುಡಿತದ ಚಟ ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ.
ಮಂಗಳೂರು : ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ, ಬೆಂಗಳೂರಿಗೆ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ XUV 500 ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 132 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಧಿತ ಆರೋಪಿಗಳನ್ನು ರಮೀಝ್ ರಾಝ್ (ಪ್ರಾಯ 30 ), ವಾಸ : ಡೋರ್ ನಂಬ್ರ : 2-392 , ತೌಡುಗೋಳಿ ಕ್ರಾಸ್ , ನರಿಂಗಾನ ಗ್ರಾಮ, ಬಂಟ್ವಾಳ ತಾಲೂಕು ಮತ್ತು ಅಬ್ದುಲ್ ಖಾದರ್ ಹ್ಯಾರಿನ್ , (ಪ್ರಾಯ31 ) , ವಾಸ ಜೀಲಾನಿ ಮಂಝಿಲ್ , ಮದಂಗಳ ಕಟ್ಟ ಮೀಯಪದವು , ಮಂಜೇಶ್ವರ , ಕಾಸರಗೋಡು ಜಿಲ್ಲೆ , ಕೇರಳ ರಾಜ್ಯ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಗಾಂಜಾವನ್ನು ಕಾರಿನಲ್ಲಿರಿಸಿ ಸಾಗಾಟ ಮಾಡುತ್ತಿದ್ದರು. ಈ ಅಕ್ರಮ ಗಾಂಜಾ ಸಾಗಾಟದ ಸಮಯದಲ್ಲಿ ಪೊಲೀಸರು ಅಥವಾ ಸಾರ್ವಜನಿಕರು ನಿಲ್ಲಿಸಿದ್ದಲ್ಲಿ ಅವರಿಗೆ ತೊಂದರೆ ನೀಡುವ ಉದ್ದೇಶದಿಂದ…