ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, ರಾಜ್ಯ ಸರ್ಕಾರ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರೈಲ್ವೆ ಪೊಲೀಸ್ ಎಸ್ಪಿ ಹುದ್ದೆಗೆ ಡಾ.ಎಸ್.ಕೆ.ಸೌಮ್ಯಲತಾ ಅವರನ್ನು ವರ್ಗಾವಣೆ ಮಾಡಲಾಗಿದೆ. ರೈಲ್ವೆ ಎಸ್ಪಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಡಿ.ಆರ್.ಸಿರಿಗೌರಿ ಅವರನ್ನು ವರ್ಗಾವಣೆ ಮಾಡಲಾಗಿದೆ.ಬೆಂಗಳೂರು ನಗರದ ಸಂಚಾರ ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರ ಹುದ್ದೆಗೆ ಸಚ್ಚಿನ್ ಘೋರ್ಪಡೆ ಅವರನ್ನು , ಅಪರಾಧ ತನಿಖಾ ವಿಭಾಗದ ಎಸ್ಪಿ ಹುದ್ದೆಗೆ ಎಸ್.ಸವಿತಾ, ಕಲಬುರಗಿಯ ಪೊಲೀಸ್ ತರಬೇತಿ ಶಾಲೆಯ ಉಪ ಪ್ರಾಂಶುಪಾಲ ಹುದ್ದೆಗೆ ಡಾ.ಕೆ.ಅರುಣ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
Author: main-admin
ಮಂಗಳೂರು: ನಗರದ ಕೆ.ಎಸ್. ರಾವ್ ರಸ್ತೆಯ ನಲಪಾಡ್ ಅಪ್ಸರಾ ಚೇಂಬರ್ಸ್ ಕಟ್ಟಡದ ನೆಲ ಮಹಡಿಯಲ್ಲಿರುವ ಹೂವಿನ ಅಂಗಡಿಯಿಂದ 9 ಲಕ್ಷ ರೂ. ಕಳವಾಗಿದೆ. ಕಂಕನಾಡಿ ನಿವಾಸಿ ಉಮರಬ್ಬ ಅವರಿಗೆ ಸೇರಿದ ಅಂಗಡಿಯಾಗಿದ್ದು, ಕಳೆದ 12 ವರ್ಷಗಳಿಂದ ಹೋಲ್‌ಸೇಲ್ ಹೂವಿನ ವ್ಯಾಪಾರ ಮಾಡಿಕೊಂಡಿದ್ದರು. ಅವರು ಪ್ರತಿನಿತ್ಯ ವ್ಯಾಪಾರದ ಹಣ ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಆದರೆ ಬುಧವಾರ ಹೂವಿನ ರೈತರಿಗೆ ಕೊಡಬೇಕಾದ ಸುಮಾರು 9 ಲಕ್ಷ ರೂ. ಹಣವನ್ನು ಅಂಗಡಿಯ ಟೇಬಲ್‌ನ ಡ್ರಾವರ್‌ನಲ್ಲಿ ಇಟ್ಟು ಲಾಕ್ ಮಾಡಿ ಸಂಜೆ 6 ಗಂಟೆಗೆ ಆಂಗಡಿ ಮುಚ್ಚಿ ತೆರೆಳಿದ್ದರು. ಗುರುವಾರ ಬೆಳಗ್ಗೆ 6 ಗಂಟೆಗೆ ಅವರ ಮಗ ರಿಯಾಜ್ ಅಂಗಡಿ ತೆರೆಯಲು ಬಂದಾಗ ಅಂಗಡಿಯ ಮುಖ್ಯ ದ್ವಾರದ ಶಟರ್‌ನ ಸೆಂಟರ್ ಲಾಕ್ ಮುುರಿದಿರುವುದು ಕಂಡುಬಂದಿತ್ತು. ತತ್‌ಕ್ಷಣ ಅವರು ಉಮರಬ್ಬ ಅವರಿಗೆ ಕರೆ ಮಾಡಿ ತಿಳಿಸಿದ್ದು, ಅವರು ಬಂದು ಅಂಗಡಿಯ ಶಟರ್ ಬಾಗಿಲನ್ನು ಮೇಲಕ್ಕೆತ್ತಿ ಒಳಗಡೆ ನೋಡಿದಾಗ ಟೇಬಲ್‌ನ ಡ್ರಾವರ್ ಲಾಕ್ ಮುರಿದು ಅದರಲ್ಲಿದ್ದ 9 ಲಕ್ಷ ರೂ.…
ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇಂದು ಇರಿಸಲಾಗಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶ್ರೀಗಂಧ ನೀತಿ-2022ಕ್ಕೆ ( Sandalwood Policy-2022 ) ಅನುಮೋದನೆ ನೀಡಲಾಗಿದೆ. ಇದರಿಂದಾಗಿ ರೈತರು ಶ್ರೀಗಂಧ ಬೆಳೆದು, ಮುಕ್ತ ಮಾರುಕಟ್ಟೆಯಲ್ಲಿ ಶ್ರೀಗಂಧ ಮಾರಾಟ ಮಾಡೋದಕ್ಕೆ ಅವಕಾಶ ನೀಡಲಾಗಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ( Karnataka Cabinet Meeting ) ನಡೆಯಿತು. ಈ ಸಭೆಯ ಬಳಿಕ ಸಂಪುಟ ಸಭೆಯ ನಿರ್ಧಾರಗಳನ್ನು ಸುದ್ದಿಗಾರರೊಂದಿಗೆ ಸಚಿವ ಡಾ.ಕೆ ಸುಧಾಕರ್ ಹಂಚಿಕೊಂಡರು. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಶ್ರೀಗಂಧ ನೀತಿ-2022ಕ್ಕೆ ಅನುಮೋದನೆ ನೀಡಲಾಗಿದೆ ಎಂದರು. ರಾಜ್ಯ ಸರ್ಕಾರದಿಂದ ಶ್ರೀಗಂಧ ನೀತಿ-2022ಕ್ಕೆ ಅನುಮೋದನೆ ನೀಡಿದ್ದರಿಂದಾಗಿ ಇನ್ಮುಂದೆ ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧ ಬೆಳೆಯಬಹುದಾಗಿದೆ. ಮುಕ್ತ…
ಮಂಗಳೂರು: ಭಾರತೀಯ ತಟರಕ್ಷಣ ಪಡೆಗೆ ಸೇರ್ಪಡೆಗೊಳ್ಳಲಿರುವ ಬೆಂಗಳೂರಿನ ಎಚ್‌ಎಎಲ್ ನಿರ್ಮಿತ “ಅತ್ಯಾಧುನಿಕ ಹಗುರ ಹೆಲಿಕಾಪ್ಟರ್(ಎಎಲ್‌ಎಚ್) ಸಿಜಿ 870′ ಸ್ವೀಕಾರ ಸಮಾರಂಭ ಬೆಂಗಳೂರಿನ ಎಚ್‌ಎಎಲ್‌ನಲ್ಲಿ ಮಂಗಳವಾರ ಜರಗಿತು. ಈ ಹೆಲಿಕಾಪ್ಟರ್ ಚೆನ್ನೈಯಲ್ಲಿ ಸೇವೆಗೆ ಸೇರ್ಪಡೆಗೊಳ್ಳಲಿದೆ. ಇದರೊಂದಿಗೆ ಎಚ್‌ಎಎಲ್‌ನೊಂದಿಗೆ ತಟರಕ್ಷಣ ಪಡೆ 2017ರ ಮಾ. 29ರಲ್ಲಿ ನಡೆಸಿದ ಒಪ್ಪಂದ ಮುಕ್ತಾಯಗೊಳ್ಳಲಿದ್ದು ಮುಂದೆ 9 ಸುಸಜ್ಜಿತ ಎಎಲ್‌ಎಚ್ ಎಂಕೆ-3 ಹೆಲಿಕಾಪ್ಟರ್‌ಗಳ ಉತ್ಪಾದನೆಗೆ ಎಚ್‌ಎಎಲ್‌ನೊಂದಿಗೆ ಒಡಂಬಡಿಕೆ ನಡೆಸಲು ಮುಂದಾಗಿದೆ. ಸಮಾರಂಭದಲ್ಲಿ ಭಾರತೀಯ ತಟರಕ್ಷಣ ಪಡೆ (ಪೂರ್ವ ವಿಭಾಗ) ಯ ಮಹಾನಿರ್ದೇಶಕ ವಿ.ಎಸ್. ಪಠಾನಿಯಾ ಮಾತನಾಡಿ, ಕಳೆದೆರಡು ದಶಕಗಳಲ್ಲಿ ಭಾರತೀಯ ಸಮುದ್ರ ತಟರಕ್ಷಣೆಯಲ್ಲಿ ಮಹತ್ವದ ಬೆಳವಣಿಗೆಗಳಾಗಿವೆ. ಕಣ್ಗಾವಲು, ಗುಪ್ತಚರ ಮಾಹಿತಿ ಸಂಗ್ರ ಮತ್ತು ಸಂಬಂಧಿಸಿದ ಭದ್ರತಾ ಸಂಸ್ಥೆಗಳೊಂದಿಗೆ ಮಾಹಿತಿ ವಿನಿಮಯ, ತುರ್ತು ಸಂದರ್ಭದಲ್ಲಿ ಪರಿಣಾಮಕಾರಿ ಸ್ಪಂದನೆ ಮಾಡಲಾಗುತ್ತಿದೆ. ತಟರಕ್ಷಣ ಪಡೆಯ ಜವಾಬ್ದಾರಿಗಳು ಹೆಚ್ಚಿರುವುದರಿಂದ ನಾಲ್ಕು ಎಎಲ್‌ಎಚ್ ಎಂಕೆ -3 ಹೆಲಿಕಾಪ್ಟರ್‌ಗಳ ಸೇರ್ಪಡೆ ಮಿಷನ್ ಆರಂಭಿಸಲಾಗಿದ್ದು ಇದು “ಎಎಲ್‌ಎಚ್ ಸಿಜಿ 870′ ಸೇರ್ಪಡೆಯೊಂದಿಗೆ ಪೂರ್ಣಗೊಳ್ಳುತ್ತಿದೆ’ ಎಂದರು. ತಟರಕ್ಷಣ ಪಡೆಯ ಹೆಚ್ಚುವರಿ…
ಮಂಗಳೂರು:- ಕ್ರಿಸ್ತ ಶಕ 1837 ರಲ್ಲಿಯೇ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ರಣಕಹಳೆ ಮೊಳಗಿಸಿದ ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಸಹಭಾಗಿತ್ವದಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಗುವುದು, ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ತಿಳಿಸಿದರು.ಅವರು ನ.15ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿಮ ಪ್ರತಿಮೆಯ ಲೋಕಾರ್ಪಣೆ ಕುರಿತಂತೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ನ.19ರ ಶನಿವಾರದಂದು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆಯಾಗಲಿದೆ, ಮುಖ್ಯಮಂತ್ರಿಗಳು ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಬೇಕು, ಕನಿಷ್ಠ 25,000 ಜನರು ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಗಳಿದ್ದು, ಸಂಬಂಧಿಸಿದ ಇಲಾಖೆಗಳು ಕೂಡಲೇ ಅಗತ್ಯ…
ಉಡುಪಿ: ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಈಗಾಗಲೇ ಶಸ್ತ್ರಚಿಕಿತ್ಸೆ ಮುಗಿದಿದ್ದು, ವಾರ್ಡ್‌ಗೆ ಸ್ಥಳಾಂತರ ಮಾಡಲಾಗಿದೆ. ವೈದ್ಯರ ಸಲಹೆಯಂತೆ 4-5 ದಿನ ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಯಾವುದೇ ಕೆಲಸಗಳಿಗೆ ನನ್ನ ಆಪ್ತ ಸಹಾಯಕರನ್ನು ಅಥವಾ ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಬಹುದು ಎಂದು ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ನಿಯಂತ್ರಣ ವಲಯದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಪುನಾರಂಭಿಸಲು ಜಿಲ್ಲಾಡಳಿತವು ಮತ್ತೆ ಗ್ರೀನ್ ಸಿಗ್ನಲ್ ನೀಡಿದೆ. ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಕರಾವಳಿ ನಿಯಂತ್ರಣ ವಲಯದಲ್ಲಿ ಮರಳುಗಾರಿಕೆ ಪುನಾರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ ಹೈಕೋರ್ಟ್ ತೀರ್ಪಿನಂತೆ ಸಿ ಆರ್ ಜೆಡ್ ವ್ಯಾಪ್ತಿಯಲ್ಲೂ ಸಾಂಪ್ರದಾಯಿಕ ಮರಳುಗಾರಿಕೆಗೆ ಅವಕಾಶ ಕಲ್ಪಿಸಲು ಏಳು ಮಂದಿ ಸದಸ್ಯರ ಸಮಿತಿಯಲ್ಲಿ ನಿರ್ಧಾರ ಕೈಗೊಳ್ಳಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ತಿಳಿಸಿದ್ದಾರೆ. ಸಿ ಆರ್ ಜೆಡ್ ವ್ಯಾಪ್ತಿಯಲ್ಲಿ ಪಾರಂಪರಿಕ ಕಾರ್ಮಿಕರಿಗೆ ಮಾತ್ರಅವಕಾಶ ನೀಡಲಾಗಿದೆ. ಯಾವುದೇ ಅಕ್ರಮ ನಡೆಸುವಂತಿಲ್ಲ, ಯಂತ್ರಗಳನ್ನು ಬಳಸುವಂತಿಲ್ಲ, ಮರಳು ದಿಬ್ಬಗಳ ಬಳಿ ಸಿಸಿಟಿವಿ ಅಳವಡಿಸಿ ನಿಗಾ ಇಡುತ್ತೇವೆ, ಆಯಪ್ ಮೂಲಕ ಮಾತ್ರ ಮರಳು ಹಂಚಿಕೆಗೆ ಅವಕಾಶ ನೀಡಿದ್ದೇವೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ.
ಉಡುಪಿ: ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಯುವತಿಯೋರ್ವಳು ಮೃತಪಟ್ಟು, ಬೈಕ್ ಸವಾರ ಯುವಕ ಗಾಯಗೊಂಡ ಘಟನೆ ಉಚ್ಚಿಲದಲ್ಲಿ ನಡೆದಿದೆ. ಕಾಟಿಪಳ್ಳ ನಿವಾಸಿ ನಿಹಾಳ (19) ಮೃತಪಟ್ಟ ಯುವತಿ. ಅಪಘಾತದಲ್ಲಿ ಬೈಕ್ ಸವಾರ ಬೆಳಪುವಿನ ಆಸೀಫ್ ಎಂಬವರು ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನ ಉಡುಪಿ ಕಡೆಯಿಂದ ಪಲ್ಸರ್ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಉಚ್ಚಿಲ ರಾ.ಹೆ ಸಮೀಪದ ರಿಕ್ಷಾ ನಿಲ್ದಾಣದ ಬಳಿ ಬೈಕ್ ಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ನಿಹಾಳ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.ಆಸೀಫ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ನಿಹಾಳ ಮತ್ತು ಆಸೀಫ್ ಇಬ್ಬರಿಗೆ ವಿವಾಹ ನಿಶ್ಚಯವಾಗಿತ್ತು. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೆನ್ನೈ: ಪ್ರತಿಭಾವಂತ ಫುಟ್ಬಾಲ್ ಆಟಗಾರ್ತಿಯೊಬ್ಬಳ ಕಾಲಿನಲ್ಲಿ ಆಗಿದ್ದ ಸಣ್ಣ ಗಾಯಕ್ಕೆ ವೈದ್ಯರು ನಡೆಸಿದ ಅರೆಬರೆ ಸರ್ಜರಿಗೆ ಆಕೆಯ ಬಹು ಅಂಗಾಂಗ ವೈಫಲ್ಯಕ್ಕೆ ಕಾರಣವಾಗಿ ಪ್ರಾಣವನ್ನೇ ಬಲಿಪಡೆದುಕೊಂಡ ಹೃದಯ ವಿದ್ರಾವಕ ಘಟನೆ ಚೆನ್ನೈಯಲ್ಲಿ ನಡೆದಿದೆ. ಪ್ರಿಯಾ ಆರ್ (17) ಅವರಿಗೆ ಬಲಗಾಲಿನ ಅಸ್ಥಿರಜ್ಜು (ಲಿಗಮೆಂಟ್) ನೋವು ಪ್ರಾರಂಭವಾಗಿತ್ತು. ತಮಿಳುನಾಡಿನ ಪೆರಿಯಾರ್ ನಗರದಲ್ಲಿನ ಸರ್ಕಾರಿ ಪೆರಿಫೆರಲ್ ಆಸ್ಪತ್ರೆಯಲ್ಲಿ ನವೆಂಬರ್ 7ರಂದು ಪ್ರಿಯಾ, ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಳು. ಅದು ಮೊಣಕಾಲಿನ ಕೆಳಗಿನ ಆಕೆಯ ಬಲಗಾಲನ್ನು ಕತ್ತರಿಸುವುದು ಸೇರಿದಂತೆ ಮತ್ತೆರಡು ಆಘಾತಕಾರಿ ಆಪರೇಷನ್‌ಗಳಿಗೆ ಎಡೆಮಾಡಿಕೊಟ್ಟಿತ್ತು. ವೈದ್ಯರು ಮಾಡಿದ್ದ ಎಡವಟ್ಟಿನಿಂದಾಗಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಪ್ರಿಯಾ ಸಾವನ್ನಪ್ಪಿದ್ದಾಳೆ. ಆರ್ಥ್ರೋಸ್ಕೋಪಿಕ್ ಲಿಗಮೆಂಟ್ ಸರಿಪಡಿಸುವ ಶಸ್ತ್ರಚಿಕಿತ್ಸೆ ನಡೆಸಿದ್ದ ಸರ್ಕಾರಿ ಆಸ್ಪತ್ರೆಯ ಇಬ್ಬರು ವೈದ್ಯರನ್ನು, ವೈದ್ಯಕೀಯ ನಿರ್ಲಕ್ಷ್ಯದ ಆರೋಪದಡಿ ಅಮಾನತು ಮಾಡಲಾಗಿದೆ. ಇವಳ ಸಾವಿನ ಬಗ್ಗೆ ಸಂತಾಪ ವ್ಯಕ್ತಪಡಿಸಿ ಮಾತನಾಡಿದ ಕ್ವೀನ್ ಮೇರಿಸ್ ಕಾಲೇಜಿನ ದೈಹಿಕ ತರಬೇತಿ ಶಿಕ್ಷಕಿ ವಸಂತ ಕುಮಾರಿ ‘ಕ್ರೀಡಾ ಕೋಟಾದಡಿ ಪ್ರಿಯಾ ಕಾಲೇಜು ಪ್ರವೇಶಾತಿಗೆ ಅರ್ಜಿ…
ದಾವಣಗೆರೆ: ಹೊನ್ನಾಳಿ BJP ಶಾಸಕ ರೇಣುಕಾಚಾರ್ಯ ( Renukacharya) ಅವರ ತಮ್ಮನ ಮಗ ಚಂದ್ರಶೇಖರ್ ಮೃತದೇಹವು ತುಂಗಾ ಕಾಲುವೆಯಲ್ಲಿ ಪತ್ತೆಯಾದ ಪ್ರಕರಣ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಇನ್ನೂ ಪ್ರಕರಣ ತಾರ್ಕಿಕ ಅಂತ್ಯ ಕಂಡುಕೊಂಡಿಲ್ಲ. ಇದರ ನಡುವೆ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಚಂದ್ರಶೇಖರ್ ಸಾವಿನ ಬಗ್ಗೆ ಉಲ್ಲೇಖಿಸಲಾಗಿದೆ.ಚಂದ್ರಶೇಖರ್ ದೇಹದ ಮೇಲೆ ಯಾವುದೇ ಹಲ್ಲೆಯ ಕಲೆಗಳಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ರೇಣುಕಾಚಾರ್ಯ ಕುಟುಂಬ ಆರೋಪಿಸಿದಂತೆ ಹಲ್ಲೆ ನಡೆದಿಲ್ಲ, ಚಂದ್ರು ದೇಹದ ಮೇಲೆ ಯಾವುದೇ ಆಯುಧದ ಕಲೆಗಳಿಲ್ಲ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಚಂದ್ರು ಕೈಗೆ ಹಗ್ಗದಿಂದ ಕಟ್ಟಿದ ಯಾವುದೇ ಗುರುತು ಇಲ್ಲ, ತಲೆಗೆ ಹಿಂದಿನಿಂದ ಹಲ್ಲೆ ಮಾಡಿದ ಯಾವುದೇ ಗುರುತು ಇಲ್ಲ, ದೇಹದ ಮೇಲೆ ಯಾವುದೇ ಆಯುಧಗಳಿಂದ ಹಲ್ಲೆ ಮಾಡಿಲ್ಲ ಎಂದು ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಇನ್ನೂ, ಚಂದ್ರಶೇಖರ್ ಗೆ ಏನಾದರೂ ಇಂಜೆಕ್ಟ್ ಮಾಡಿದ್ದಾರಾ ಎಂಬುದರ ಬಗ್ಗೆ ಪರೀಕ್ಷೆ ನಡೆಸಲಾಗುತ್ತದೆ. ಇನ್ನೂ, ಎಫ್‌ಎಸ್‌ಎಲ್ ವರದಿ ಪ್ರಕಾರ ಕಾರು ವೇಗವಾದ…