ದಕ್ಷಿಣ ಕನ್ನಡ : ಕಡಬ ತಾಲೂಕಿನ ಯೇನೆಕಲ್ಲಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಇಬ್ಬರು ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಯೇನೆಕಲ್ಲಿನ ಮುಖ್ಯರಸ್ತೆಯ ಸೇತುವೆಯ ಕೆಳಭಾಗದಲ್ಲಿ ಹೊಳೆ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಧರ್ಮಪಾಲ (46) ಹಾಗೂ ಚೊಕ್ಕಾಡಿಯ ಬೆಳ್ಳಪ್ಪ (49) ಎಂದು ಗುರುತಿಸಲಾಗಿದೆ. ಹೊಳೆಯಲ್ಲಿದ್ದ ಪಂಪಿನ ಪೂಟ್ ವಾಲ್ ತೆಗೆಯಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದಾರೆಂದು ಶಂಕಿಸಲಾಗಿದ್ದು, ಸದ್ಯ ಮೃತದೇಹಗಳನ್ನು ಮೇಲಕ್ಕೆತ್ತಲಾಗಿದೆ. ಘಟನೆ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: main-admin
ತಿರುವನಂತಪುರ: ಶಬರಿಮಲೆಯ ಅಯ್ಯಪ್ಪ ದೇಗುಲವು ಬುಧವಾರದಿಂದ (ನ 16) ತೆರೆಯಲಿದ್ದು, ಗುರುವಾರದಿಂದ (ನ 17) ಎರಡು ತಿಂಗಳ ಅವಧಿಗೆ ಭಕ್ತರ ದರ್ಶನಕ್ಕೆ ಅವಕಾಶ ಇರಲಿದೆ. ವಾರ್ಷಿಕ ಮಂಡಲಂ-ಮಕರವಿಳುಕ್ಕು ಯಾತ್ರೆಗೂ ನಾಳೆಯಿಂದಲೇ ಚಾಲನೆ ಸಿಗಲಿದೆ. ದೇಗುಲದ ಹಾಲಿ ಪ್ರಧಾನ ಅರ್ಚಕರಾದ (ತಂತ್ರಿ) ಕಂಡರಾರು ರಾಜೀವರು ಮತ್ತು ಹಿಂದ ಪ್ರಧಾನ ಅರ್ಚಕರಾದ ಎನ್.ಪರಮೇಶ್ವರನ್ ನಂಬೂದಿರಿ ಅವರ ಸಮಕ್ಷಮದಲ್ಲಿ ದೇಗುಲದ ಗರ್ಭಗೃಹವನ್ನು ಇಂದು ಸಂಜೆ 5 ಗಂಟೆಗೆ ತೆರೆಯಲಾಗುವುದು. ನಂತರ ಅಯ್ಯಪ್ಪ ಮತ್ತು ಮಲಿಕಾಪುರಮ್ ದೇಗುಲಗಳ ಮುಖ್ಯ ಅರ್ಚಕರು ಪೂಜಾ ವಿಧಿಗಳನ್ನು ಆರಂಭಿಸುವ ಮೂಲಕ ಜವಾಬ್ದಾರಿಯನ್ನು ಸ್ವೀಕರಿಸಲಿದ್ದಾರೆ. 41 ದಿನಗಳ ಮಂಡಲ ಪೂಜಾ ವಿಧಿಗಳು ಡಿ 27ಕ್ಕೆ ಮುಕ್ತಾಯವಾಗಲಿದೆ. ನಂತರ ಮೂರು ದಿನಗಳ ಕಾಲ ದೇಗುಲದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಡಿ 30ರಿಂದ ಮಕರವಿಳುಕ್ಕು ಯಾತ್ರೆಗಾಗಿ ದೇಗುಲವನ್ನು ಮತ್ತೆ ತೆರೆಯಲಾಗುವುದು. ಜನವರಿ 14ರಂದು ಮಕರವಿಳಕ್ಕು ಕಾರ್ಯಕ್ರಮವಿದೆ. ಸಂಕ್ರಾಂತಿ ಜ್ಯೋತಿಯ ದರ್ಶನ ಮತ್ತಿತರರ ಪೂಜಾ ವಿಧಿಗಳ ನಂತರ ಜನವರಿ 20ರಂದು ದೇಗುಲವನ್ನು ಮುಚ್ಚಲಾಗುವುದು. ಅಲ್ಲಿಗೆ ಈ…
ಕಲಬುರಗಿ: ಹಾಡಹಗಲೇ ಗ್ಯಾಂಗ್ ವಾರ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಮಂಗಳವಾರ ತಡರಾತ್ರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಲೆಯಾದ ವಿದ್ಯಾರ್ಥಿ ಇಲ್ಲಿನ ಶರಣಬಸಪ್ಪ ಅಪ್ಪಾ ಮಹಾವಿದ್ಯಾಲಯದಲ್ಲಿ ಓದುತ್ತಿದ್ದ ಮೊಹಮ್ಮದ್ ಮುದ್ದಸೀರ್(19) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಛೋಟಾ ರೋಜಾ ಬಡಾವಣೆಯ ಬೌವುಲಿಗಲ್ಲಿಯ ಅಮಿರ್ ಗುಲಶನ್ ಫಂಕ್ಷನ್ ಹಾಲ್ ಹತ್ತಿರ ಆರೋಪಿಗಳು ಮಾರಾಕಾಸ್ತ್ರದಿಂದ ದಾಳಿ ನಡೆಸಿ ಕೊಚ್ಚಿ ಪರಾರಿಯಾಗಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮುದ್ದಸೀರ್ ನನ್ನು ನಗರದ ಮಣೂರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸತತ ಚಿಕಿತ್ಸೆಯ ಬಳಿಕವೂ ತಡ ರಾತ್ರಿ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆ ಮಾಡಿರುವ ಘಟನೆ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿತ್ತು. ನಗರದಲ್ಲಿ ಹಗಲಿನಲ್ಲಿ ಹತ್ಯೆಗಳು ನಡೆಯುತ್ತಿದ್ದು, ಪೊಲೀಸ್ ಇಲಾಖೆಯ ವೈಫಲ್ಯ ಕಾರಣ,ತಕ್ಷಣ ಕೊಲೆ ಮಾಡಿರುವ ಆರೋಪಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಿಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ನಗರದಲ್ಲಿ ಘಟನೆ ಮರುಕಳಿಸದ ರೀತಿಯಲ್ಲಿ ಕಾನೂನು ವ್ಯವಸ್ಥೆ ಕಾಪಾಡಬೇಕೆಂದು ಮುದ್ದಸೀರ್ ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಸುಳ್ಯ:ಲಾರಿ ಮತ್ತು ಬಸ್ ನಡುವೆ ಢಿಕ್ಕಿ ಸಂಭವಿಸಿ ಹಲವರು ಗಾಯಗೊಂಡ ಘಟನೆ ಸಂಜೆ ಕಲ್ಲುಗುಂಡಿಯ ಕಡಪಾಲದಲ್ಲಿ ನಡೆದಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಬಸ್‌ಗೆ ಕಡಪಾಲ ಸೇತುವೆ ಬಳಿ ಲಾರಿ ಢಿಕ್ಕಿ ಹೊಡೆದಿದೆ.ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದೆ. ಬಸ್-ಲಾರಿ ನಡುವೆ ಸಿಕ್ಕಿ ಹಾಕಿಕೊಂಡ ಲಾರಿ ಚಾಲಕನನ್ನು ಸ್ಥಳೀಯರು ರಾಡ್ ಕತ್ತರಿಸಿ ಹೊರತೆಗೆದಿದ್ದಾರೆ.ಆತನಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಮತ್ತು ಕೊಡಗು, ಸಂಪಾಜೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಳೆಯಿಂದಾಗಿ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.
ಕಾರ್ಕಳ: ಕುಕ್ಕುಂದೂರು ಗ್ರಾಮದ ಅಯ್ಯಪ್ಪ ನಗರಪಾದೆ ಬಳಿ ಹಾಡಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಮೂವರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಕುಕ್ಕುಂದೂರು ನಿವಾಸಿ ಉಮೇಶ (32), ಶಾಂತಿಪಲ್ಕೆಯ ಸುರೇಶ (24), ಶಂಕರಬೆಟ್ಟುವಿನ ಪ್ರಜ್ವಲ್ (25) ಬಂಧಿತ ಆರೋಪಿಗಳು. ಉಳಿದ 4 ಮಂದಿ ಸ್ಥಳದಿಂದ ಪರಾರಿಯಾಗಿದ್ದಾರೆ. ಬಂಧಿತರಿಂದ ಪೊಲೀಸರು 3600ರೂ. ನಗದು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮಂಗಳೂರು : ಅವಿಭಜಿತ ಕರಾವಳಿ ಜಿಲ್ಲೆಯಲ್ಲಿ ಕಣ್ಣು ನೋವು ( ಕೆಂಗಣ್ಣು) ಸಮಸ್ಯೆ ಹೆಚ್ಚಾಗಿದ್ದು, ಕಣ್ಣು ಆಸ್ಪತ್ರೆಗಳಲ್ಲಿ ದಿನದಿಂದ ದಿನಕ್ಕೆ ಇಂತಹ ಸಮಸ್ಯೆಗಳ ಸರತಿ ಸಾಲು ಉದ್ದವಾಗುತ್ತಿದೆ. ಮಕ್ಕಳಾದರೆ ಶಾಲೆಗೆ ಬರಬೇಡಿ ದೊಡ್ಡವರಾದರೆ ಕಚೇರಿಗೆ ಬರಬೇಡಿ ಎಂದು ಬೇಡುವ ಸ್ಥಿತಿ ಉದ್ಭವಾಗಿದೆ. ಎಲ್ಲಕ್ಕೂ ಹವಾಮಾನ ವೈಪರೀತ್ಯವೇ ಕಾರಣ ಎನ್ನುವುದು ಆರೋಗ್ಯ ತಜ್ಞರ ಮಾತು. ಇದು ಕಣ್ಣು ನೋವು (ಮದ್ರಾಸ್ ಐ) ಬರುವ ಸಮಯವಲ್ಲ. ಹೆಚ್ಚಾಗಿ ಮಾನ್ಸೂನ್ ಸಮಯದಲ್ಲಿ ಕಾಣಿಸಿಕೊಳ್ಳುವುದು ಸಾಮಾನ್ಯ. ಆದರೆ ಈಗ ಬಿಟ್ಟು ಬರುವ ಮಳೆಯ ಜತೆಗೆ ಚಳಿಯ ಪ್ರವೇಶ ಎರಡು ಜತೆಗೂಡಿದಾಗ ಈ ವಿಶೇಷ ವೈರಸ್ ಯಾವುದೇ ವಯಸ್ಸು ನೋಡದೇ ಕಣ್ಣುಗಳ ಮೇಲೆ ದಾಳಿ ಇಡುತ್ತಾ ಕಣ್ಣು ನೋವು ತರಿಸುತ್ತಿದೆ. ಬೇಸಿಗೆ ಬಿಟ್ಟು ಚಳಿಯಲ್ಲಿ ಕಾಣಿಸಿತು: ಐ ಕಾಂಜಂಕ್ಟಿವಿಟಿಸ್ ಅಥವಾ ಮದ್ರಾಸ್ ಐ ಸಮಸ್ಯೆಯು ಸಾಮಾನ್ಯವಾಗಿ ಬೇಸಿಗೆಯಲ್ಲಿ ಕಾಣಿಸಿಕೊಳ್ಳುತ್ತದೆ. ಆದರೆ ಈ ಬಾರಿ ಮಳೆಗಾಲ ಮುಗಿದು ಚಳಿಗಾಲದ ಆರಂಭದಲ್ಲೇ ವಕ್ಕರಿಸಿದೆ. ಇದಕ್ಕೆ ಬಹುಮುಖ್ಯವಾದ ಕಾರಣ ಇತ್ತೀಚೆಗೆ ಕಾಣಿಸಿಕೊಂಡ ಆಗಾಗಿನ ಮಳೆ. ಇದರ…
ಮಂಗಳೂರು: ಹಾಲು, ಮೊಸರು ದರ ಏರಿಕೆ ಆದೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಡೆ ಹಿಡಿದಿದ್ದಾರೆ. ಹಾಲು ಮತ್ತು ಮೊಸರಿನ ದರವನ್ನು 3ರೂಗೆ ಏರಿಕೆ ಮಾಡಿದ್ದ ಕೆಎಂಎಫ್ನ ಆದೇಶವನ್ನು ಬೊಮ್ಮಾಯಿ ತಡೆ ಹಿಡಿದಿದ್ದಾರೆ. ಬೆಲೆ ಏರಿಕೆ ಬಗ್ಗೆ ನ.20ರಂದು ನಡೆಯುವ ಸಭೆ ಬಳಿಕ ನಿರ್ಧಾರ ಮಾಡಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ಹಾಲು, ಮೊಸರು ಎರಡೂ ಉತ್ಪನ್ನಗಳ ದರ ಹೆಚ್ಚಿಸಿ ಸೋಮವಾರ ಬೆಳಗ್ಗೆ ಆದೇಶಿಸಿದ್ದರು. ಸೋಮವಾರ ಮಧ್ಯ ರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದೂ ಆದೇಶದಲ್ಲಿ ಉಲ್ಲೇಖವಿತ್ತು. ಹೀಗಾಗಿ ಮಂಗಳವಾರ ಮುಂಜಾನೆ ಹಾಲು, ಮೊಸರು, ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ ಇನ್ನಿತರ ಉತ್ಪನ್ನಗಳ ಖರೀದಿಗೆ ಹೆಚ್ಚಿನ ಹಣ ಹೊಂದಿಸಿಕೊಳ್ಳುವ ಪರಿಸ್ಥಿತಿ ಸೃಷ್ಟಿಯಾಗಿತ್ತು.
ಮಂಗಳೂರು: ಭಾರತೀಯ ವಾಯುಪಡೆಯು ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್‍ಗಳಿಗೆ ಅಗ್ನಿಪಥ್ ಯೋಜನೆಯಡಿ ವಾಯು ಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆ ಸಲ್ಲಿಸಲು 2023ನೇ ಜನವರಿಯಲ್ಲಿ ನಡೆಯುವ ಆನ್‍ಲೈನ್ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. ಪಿಯುಸಿ ಯಲ್ಲಿ(ವಿಜ್ಞಾನ, ವಾಣಿಜ್ಯ, ಕಲೆ ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ) ಕನಿಷ್ಠ ಶೇ.50% ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ.50% ಅಂಕಗಳೊಂದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ ಯುವತಿಯರು 2002ನೇ ಜೂನ್ 27ರಿಂದ 25ರ ಡಿಸೆಂಬರ್ 27ರ ನಡುವೆ ಜನಿಸಿರುವವರು ವೆಬ್‍ಸೈಟ್https://agnipathvayu.cdac.in ಮೂಲಕ 2022ರ ನವೆಂಬರ್ 23ರೊಳಗೆ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ https://careerindianairforce.cdac.in ಪರಿಶೀಲಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಪ್ರಕಟಣೆ ತಿಳಿಸಿದೆ.
ವಿಟ್ಲ:ಆಟೋ ಚಾಲಕನಿಗೆ ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಬೋಳಂತೂರು ಸಮೀಪದ ನಾಡಾಜೆ ಬಳಿ ನಡೆದಿದೆ. ಬೋಳಂತೂರು ಅಬುಬಕ್ಕರ್ ಅವರ ಪುತ್ರ ಶಾಕೀರ್ (30) ಹಲ್ಲೆಗೊಳಗಾದವರು.ಕಬಡ್ಡಿ ಮ್ಯಾಚ್ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ರಾತ್ರಿ 2 ಗಂಟೆ ಸುಮಾರಿಗೆ ತಂಡವೊಂದು ಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ದಾಳಿಯ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.ಕೃತ್ಯ ನಡೆಸಿರುವವರ ಬಗ್ಗೆ ಮಾಹಿತಿ ಇಲ್ಲ. ಯುವಕನಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಯುವಕನಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಂಗಳೂರು : ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸ್ಪಂದಿಸಿದ ಪ್ರಧಾನಿ ಮೋದಿಯವರಿಗೆ ಧನ್ಯವಾದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ. ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ಮೋದಿಗೆ ನಾಗರಿಕರ ಪರವಾಗಿ ಧನ್ಯವಾದಗಳು. ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಇನ್ನೊಂದು ಟ್ವೀಟ್ ನಲ್ಲಿ ‘ಬ್ರಹ್ಮಾಂಡ ಭ್ರಷ್ಟಾಚಾರದ ಜನಕರಾದ ಕಾಂಗ್ರೆಸ್ಸಿಗರು ಮತ್ತು ಭ್ರಷ್ಟಾಚಾರದ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿದ್ದ ಡಿಕೆಶಿಗೆ ಜೀವನವನ್ನೇ ಸಮಾಜ, ದೇಶಕ್ಕಾಗಿ ಮುಡುಪಾಗಿಟ್ಟ ಶ್ರೇಷ್ಠ ಮಹನೀಯರನ್ನು ಮೋದಿ ಸ್ಮರಿಸುವಾಗ ಸಹಿಸಲು ಸಾಧ್ಯವಾಗದೇ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಜನರಿಗೆ ಗೊತ್ತಾಗಿದೆ’ ಎಂದು ನಳೀನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.