ಮಂಗಳೂರು : ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರದ ಅಂಬೇಡ್ಕರ್ ಸರ್ಕಲ್ (ಜ್ಯೋತಿ ಸರ್ಕಲ್) ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಎರಡು ಬಸ್ಸುಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಠಾಣೆ ಪೊಲೀಸರು ಬಸ್ಸುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
Author: main-admin
ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್ ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್ ಐಎ ತನಿಖೆಯಲ್ಲಿ ಬಯಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಏಜೆನ್ಸಿ, ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ವಿಚಾರಣೆಯಲ್ಲಿ ಮಸೂದ್ ಹತ್ಯೆ ಬಳಿಕ ಅದಕ್ಕೆ ಪ್ರತೀಕಾರವಾಗಿ ಮತ್ತೊಂದು ಕೊಲೆ ನಡೆಸಿ ಸಮಾಜದಲ್ಲಿ ಭಯ ಹುಟ್ಟಿಸುವ ಉದ್ದೇಶವನ್ನು ಪಿಎಫ್ ಐ ಹೊಂದಿತ್ತು. ಕೆಲವೇ ದಿನಗಳಲ್ಲಿ ಪಿಎಫ್ ಐ ನಾಯಕರು ಮತ್ತು ಕಾರ್ಯಕರ್ತರು ಸಂಚು ರೂಪಿಸಿ ಪ್ರವೀಣ್ ನೆಟ್ಟಾರು ಟಾರ್ಗೆಟ್ ಮಾಡಿದ್ದರು ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರವೀಣ್ ನೆಟ್ಟಾರು ಪ್ರಕರಣ ಸಂಬಂಧ ಎನ್ ಐಎ ಶಹೀದ್ ಬೆಳ್ಳಾರೆಯನ್ನು ಬಂಧಿಸಿದೆ. ಈ ಮೂಲಕ ಬಂಧಿತರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಹನ್ನೊಂದನೇ ತಿರುವಿನಲ್ಲಿ ಪೊಲೀಸ್ ಡಿಆರ್ ವಾಹನ ಕೆಟ್ಟು ನಿಂತ ಪರಿಣಾಮ ಗಂಟೆ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ಚಿಕ್ಕಮಗಳೂರಿನ ಪೊಲೀಸ್ ಡಿಆರ್ ವಾಹನ ರಸ್ತೆಗೆ ಕೆಟ್ಟು ನಿಂತಿದ್ದರಿಂದ ಪ್ರವಾಸಿಗರು ಪರದಾಡುವಂತಾಯಿತು. ಎರಡು ಬದಿಯಿಂದ ವಾಹನಗಳು ಏಕಕಾಲದಲ್ಲಿ ಸಂಚರಿಸಲಾಗದೇ ಕಿ.ಮೀ. ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಾಹನ ಕೆಟ್ಟು ನಿಂತಿದ್ದರಿಂದ ಒಂದು ಬದಿ ವಾಹನ ಸಾಗಲು ಹರಸಾಹಸ ಪಡಬೇಕಾಯಿತು. ವಾರಾಂತ್ಯವಾಗಿರುವುದರಿಂದ ವಾಹನಗಳ ಸಂಖ್ಯೆ ಕೂಡ ಹೆಚ್ಚಾಗಿತ್ತು. ಸಂಜೆ ಏಳು ಗಂಟೆ ವರೆಗೂ ವಾಹನ ರಿಪೇರಿ ಮಾಡಲಾಗುತ್ತಿತ್ತು. ಅಷ್ಟೊತ್ತಿನವರೆಗೂ ಟ್ರಾಫಿಕ್ ಜಾಮ್ ನಿಂದ ಜನರು ತೊಂದರೆ ಅನುಭವಿಸಬೇಕಾಯಿತು ಎಂದು ಪ್ರಯಾಣಿಕ ಸತೀಶ್ ಎಂಬವರು ತಿಳಿಸಿದರು.
ತರಕಾರಿ ಇಷ್ಟ ಪಡುವವರಲ್ಲಿ ಹೆಚ್ಚಿನ ಮಂದಿ ತೊಂಡೆಕಾಯಿ ಸೇವಿಸುತ್ತಾರೆ. ಇದರಲ್ಲಿ ಹೆಚ್ಚು ಫೈಬರ್ ಅಂಶವಿದೆ. ಜೊತೆಗೆ ವಿಟಮಿನ್ ಎ, ಬಿ1, ಸಿ ಮತ್ತು ಕ್ಯಾಲ್ಸಿಯಂ ಇದ್ದು, ಕೊಲೆಸ್ಟ್ರಾಲ್ ನಿಯಂತ್ರಣ ಮಾಡುವುದರಲ್ಲಿ ಇದು ಉಪಯೋಗಕ್ಕೆ ಬರುತ್ತದೆ. ಕಿಡ್ನಿ ಸ್ಟೋನ್ ಸಮಸ್ಯೆಯೂ ಪರಿಹಾರವಾಗುತ್ತದೆ. ಕಫ ಸಮಸ್ಯೆ ದೂರವಾಗುತ್ತದೆ. ಮಲಬದ್ಧತೆ ನಿವಾರಣೆಯಾಗಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ತೊಂಡೆಕಾಯಿ ಎಲೆ ರಸವನ್ನು ನೀರಿನಲ್ಲಿ ಬೆರೆಸಿ ದಿನಕ್ಕೆ 3 ಬಾರಿ ಸೇವಿಸಿದರೆ ದೇಹದ ಉಷ್ಣತೆ ಕಡಿಮೆ ಆಗುತ್ತದೆ. ಎರಡು ಚಮಚ ತೊಂಡೆಕಾಯಿ ಎಲೆ ರಸಕ್ಕೆ ಅರ್ಧ ಬಟ್ಟಲು ಮೊಸರು ಬೆರೆಸಿ ಕುಡಿದರೆ ಬೇಧಿ ನಿಲ್ಲುತ್ತದೆ. ತೊಂಡೆಕಾಯಿ ಹಸಿ ಹಣ್ಣನ್ನು ದಿನಕ್ಕೆ ಎರಡರಂತೆ ಸೇವಿಸಿದರೆ ಒಣಗಿರುವ ಚರ್ಮ ಮೃದು ಆಗುತ್ತದೆ. ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ. ದೇಹದ ಯಾವುದೇ ಭಾಗದಲ್ಲಿ ಹುಳು ಕಚ್ಚಿ ಗಾಯ, ಗುಳ್ಳೆಗಳಿದ್ದರೆ ತೊಂಡೆಕಾಯಿ ಎಲೆಯನ್ನು ಚಚ್ಚಿ ಹಚ್ಚುವುದರಿಂದ ಅದು ನಿವಾರಣೆ ಆಗುತ್ತದೆ. ಪೊಟ್ಯಾಷಿಯಂ ಹೆಚ್ಚಿರುವ ತೊಂಡೆಕಾಯಿ ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ವೇಣೂರು: ಒಂಟಿ ಮಹಿಳೆ ಇರುವ ಮನೆಗೆ ಬಂದ ನಾಲ್ವರು ಮುಸುಕುದಾರಿಗಳು ಮಹಿಳೆಯ ಕೈಕಾಲು ಕಟ್ಟಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನ.12 ರಂದು ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪದ ಅರಸಿಕಟ್ಟೆಯ ಪ್ರಭಾವತಿ ನಾಯ್ಕ ಎಂಬವರ ಮನೆಯಲ್ಲಿ ಈ ದರೋಡೆ ಪ್ರಕರಣ ನಡೆದಿದೆ. ಪ್ರಭಾವತಿ ನಾಯ್ಕರ ಮನೆಗೆ ಏಕಾಏಕಿ ಬಂದ ಮುಸುಕುದಾರಿಗಳು ಅವರ ಬಾಯಿಗೆ ಬಟ್ಟೆ ತುರುಕಿಸಿ, ಹಗ್ಗದಿಂದ ಕೈಕಾಲನ್ನು ಕಟ್ಟಿ ಹಾಕಿ, ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಕಿವಿಯಲ್ಲಿದ್ದ ಬೆಂಡೋಲೆಯನ್ನು ಬಲಾತ್ಕಾರವಾಗಿ ತೆಗೆದು ಬಳಿಕ ಮನೆಯೊಳಗಿದ್ದ 3 ಚಿನ್ನದ ಬಳೆಗಳು, 3 ಚಿನ್ನದ ಉಂಗುರಗಳು, ಚಿನ್ನದ ಚೈನ್ ಹಾಗೂ ಒಂದು ಮೊಬೈಲ್‌ನ್ನು ದೋಚಿ ʼಎಂಕ್ಲು ಬತ್ತಿನಾ ಕೆಲಸ ಆಂಡ್ʼ ಎಂದು ತುಳುವಿನಲ್ಲಿ ಹೇಳುತ್ತಲೇ ದರೋಡೆಕೋರರು ಪರಾರಿಯಾಗಿದ್ದಾರೆ. ಆರೋಪಿತರು ದೋಚಿದ ಚಿನ್ನದ ಅಂದಾಜು ಮೌಲ್ಯ ಒಟ್ಟು ರೂ. 4,60,000 ಆಗಬಹುದೆಂದು ಅಂದಾಜಿಸಲಾಗಿದೆ. ವೇಣೂರು ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸೌಮ್ಯ ಜೆ. ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,…
ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ 3 ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಜಿಲ್ಲೆಗಳು, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನರ ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮಂಗಳೂರು: ಬದಿಯಡ್ಕದ ಹೆಸರಾಂತ ದಂತ ವೈದ್ಯ ಡಾ.ಕೃಷ್ಣಮೂರ್ತಿಯವರ ನಿಗೂಢ ಸಾವಿನ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರರಿಗೆ ಮನವಿ ಸಲ್ಲಿಸಲಾಯಿತು. ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ ಅವರ ಮುಂದಾಳತ್ವದಲ್ಲಿ ವಿಶ್ವ ಹಿಂದು ಪರಿಷತ್ ಸಚಿವರಿಗೆ ಮನವಿ ಸಲ್ಲಿಸಿದೆ. ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ಕಳೆದ 30 ವರ್ಷಗಳಿಂದ ದಂತ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಕೃಷ್ಣಮೂರ್ತಿಯವರು ನವೆಂಬರ್ 8ರಂದು ನಾಪತ್ತೆಯಾಗಿದ್ದರು. ಆದರೆ ನವೆಂಬರ್ 9ರಂದು ಅವರ ಮೃತದೇಹ ಕುಂದಾಪುರದ ತಲ್ಲೂರಿನ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಮೃತದೇಹ ನೋಡಿದಾಗ ಇದೊಂದು ಕೊಲೆ ಕೃತ್ಯದ ರೀತಿಯಲ್ಲಿ ಸಂಶಯ ಮೂಡುತ್ತಿದೆ. ಈಗಾಗಲೇ ಈ ಪ್ರಕರಣದ ಬಗ್ಗೆ ಬದಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಕೇರಳ ಪೊಲೀಸರ ತನಿಖೆಯ ಮೇಲೆ ಭರವಸೆ ಇಲ್ಲದ ಹಿನ್ನಲೆಯಲ್ಲಿ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ಮನವಿ ಮಾಡಲಾಗಿದೆ.
ಬೆಳ್ಳಾರೆ:ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನಿಗೆ ರಾಷ್ಟ್ರೀಯ ತನಿಖಾದಳ ಬಂಧಿಸಿದೆ. ನ.12ರಂದು ಕಾರ್ಯಾಚರಣೆ ನಡೆಸಿದ ಎನ್‌ಐಎ ತಂಡ, ಪ್ರಕರಣಕ್ಕೆ ಸಂಬಂಧಿಸಿ ಎಸ್‌ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ಅವರ ಬಾವ ಸಾಹಿದ್ ಬೆಳ್ಳಾರೆ(34)ಎಂಬವರನ್ನು ಬಂಧಿಸಿ ವಿಚಾರಣೆಗೊಳಪಡಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸಾಹಿದ್ ಬೆಳ್ಳಾರೆ ಬಂಧನದೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 14 ಮಂದಿ ಬಂಧನವಾಗಿದೆ. ಪ್ರವೀಣ್ ಕೊಲೆಗೆ ಸಂಬಂಧಿಸಿ ಇತ್ತೀಚೆಗೆ ಪೊಲೀಸರು ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ನಗದು ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ. ಇಬ್ಬರ ಆರೋಪಿ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ರೂಪಾಯಿ ಹಾಗೂ ಇನ್ನಿಬ್ಬರ ಆರೋಪಗಳ ಬಗ್ಗೆ ಮಾಹಿತಿ ತಿಳಿಸಿದರೆ 2 ಲಕ್ಷ ಬಹುಮಾನ ರೂ. ನಗದು ಬಹುಮಾನ ನೀಡುವವುದಾಗಿ ಎನ್‌ಐಎ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ಮೊಹಮ್ಮದ್ ಮುಸ್ತಫಾ ಮತ್ತು ತುಫೈಲ್ ಬಗ್ಗೆ ಮಾಹಿತಿ ನೀಡಿದ್ರೆ 5 ಲಕ್ಷ ರೂ.ಬಹುಮಾನ. ಇನ್ನು ಇಬ್ಬರು ಆರೋಪಿಗಳಾದ ಉಮರ್ ಫಾರೂಕ್ ಹಾಗೂ ಅಬೂಬಕರ್ ಸಿದ್ದಿಕ್ ಬಗ್ಗೆ…
ವೆಲ್ಲೂರು : ಸುಪ್ರೀಂಕೋರ್ಟ್ ಆದೇಶದ ಒಂದು ದಿನದ ಬಳಿಕ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿ ಶ್ರೀಹರನ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳನ್ನ 31 ವರ್ಷಗಳ ಜೈಲುವಾಸದ ನಂತರ ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿ ಆದೇಶದ ಬಳಿಕ ನಳಿನಿ ಶ್ರೀಹರನ್ ಶನಿವಾರ ಸಂಜೆ ಬಿಡುಗಡೆಯಾಗಿದ್ದಾರೆ. ಪೆರೋಲ್ ಷರತ್ತುಗಳ ಭಾಗವಾಗಿ ತನ್ನ ಉಪಸ್ಥಿತಿಯನ್ನ ಗುರುತಿಸಲು ಆಕೆ ಇಂದು ಬೆಳಿಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಳು. ಅಂದ್ಹಾಗೆ, ಮೇ ತಿಂಗಳಲ್ಲಿ, ಸರ್ವೋಚ್ಚ ನ್ಯಾಯಾಲಯವು ತನ್ನ ಅಸಾಧಾರಣ ಅಧಿಕಾರವನ್ನು ಬಳಸಿಕೊಂಡು ಪೆರಾರಿವಾಲನ್ ಎಂಬ ಏಳನೇ ಅಪರಾಧಿಯನ್ನ ಬಿಡುಗಡೆ ಮಾಡಿತ್ತು. ಇದೇ ಆದೇಶವು ಉಳಿದ ಅಪರಾಧಿಗಳಿಗೆ ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.
ಬೆಂಗಳೂರು: ಪೋಸ್ಕೋ ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿರುವ ಮುರುಘ ಶ್ರೀಗಳ ಲೈಂಗಿಕ ಕಿರುಕುಳದ ಬಗ್ಗೆ ಸಂತ್ರಸ್ಥ ಮಕ್ಕಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ತಮ್ಮ ನೋವನ್ನು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಮುರುಘ ಮಠದ ಅಡುಗೆ ಸಹಾಯಕಿಯರ ಪುತ್ರಿಯರಿಂದ ಪತ್ರದಿಂದ ಬರೆದಿದ್ದು, ವಾರ್ಡನ್ ರಶ್ಮಿಯವರು ನಮ್ಮನ್ನು ಶ್ರೀಗಳ ಬಳಿಗೆ ಕರೆದುಕೊಂಡು ಹೋಗಿದ್ದು, ಶ್ರೀಗಳು ನಮ್ಮ ಬಳಿ ಕೆಟ್ಟದಾಗಿ ನಡೆದುಕೊಂಡಿದ್ದರು, ನಮ್ಮ ಅಮ್ಮ ಈ ಮಾಹಿತಿ ಕೇಳಿ ರಶ್ಮಿಯವರಿಗೆ ಬೈದು ಇದ್ದರು, ಅಲ್ಲಿಗೆ ನನ್ನ ಮಕ್ಕಳನ್ನು ಕರೆದುಕೊಂಡು ಹೋಗಬೇಡ ಅಂತ ಹೇಳಿದ್ದರು. ನಾನು ನನ್ನ ಅಕ್ಕ ಶ್ರೀಗಳನ್ನು ಭೇಟಿಯಾಗಿದ್ದ ವೇಳೆಯನ್ನು ನನ್ನ ತೊಡೆ ಮೇಲೆ ಕೂರಿಸಿಕೊಂಡು ನನ್ನ ಮೇಲ್ಭಾಗವನ್ನು ಮುಟ್ಟಿದ್ದರು. ಇದರಿಂದ ನಾನು ಗಾಬರಿಗೊಂಡು ನಾನು ಎದ್ದು ಬಂದೇ, ಇದನ್ನು ನಾನು ನನ್ನ ತಾಯಿ ಬಳಿ ಹೇಳಿಕೊಂಡಿದ್ದೇ. ಇದಾದ ಬಳಿಕ ಮತ್ತೆ ಹೋಗಿದ್ದ ವೇಳೇಯಲ್ಲಿ, ನನಗೆ ಚಾಕ್‌ಲೇಟ್ ನೀಡಿದ್ದು, ಚಾಕಲೇಟ್ ತಿಂದ ಬಳಿಕ ನಾನು ನಿದ್ದೆಗೆ ಜಾರಿಗೆ ಜಾರಿದ್ದ ಬಳಿಕ ನನ್ನ ಮೇಲೆ ದೌರ್ಜನ್ಯವಾಗಿದೆ ಅಂತ…