ಬೆಳ್ತಂಗಡಿ ಸಮೀಪ ಬೆಳಾಲು ಗ್ರಾಮದ ನಿವಾಸಿಯಾಗಿದ್ದ ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಭಟ್ (83) ಅವರ ಕೊಲೆ ಪ್ರಕರಣದ ಆರೋಪಿಗಳನ್ನು ಆ. 27 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆ. 31ರ ವರೆಗೆ ಪೊಲೀಸ್ ವಶಕ್ಕೆ ಒಪ್ಪಿಸಿತ್ತು. ಇದೀಗ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಯಲಾಗಿದೆ. ಬೆಳಾಲು ನಿವಾಸಿ ಬಾಲಕೃಷ್ಣ ಭಟ್ ಅವರನ್ನು ಆ. 20ರಂದು ಅವರ ಮನೆಯಲ್ಲಿ ಕೊಲೆ ಮಾಡಿರುವ ಆರೋಪದಲ್ಲಿ ಆ. 24ರಂದು ಧರ್ಮಸ್ಥಳ ಠಾಣೆ ಪೊಲೀಸರು ಕಾಸರಗೋಡು ಮುಳ್ಳೇರಿಯಾದ ರಾಘವೇಂದ್ರ ಕೆದಿಲಾಯ (54) ಮತ್ತು ಆತನ ಪುತ್ರ ಮುರಳಿಕೃಷ್ಣ(21)ನನ್ನು ಆ. 27ರಂದು ಬಂಧಿಸಿದ್ದರು. ನ್ಯಾಯಾಧೀಶರು ಆರೋಪಿಗಳನ್ನು ಆ. 31ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದರು. ಅದರಂತೆ ಪೊಲೀಸರು ಸ್ಥಳ ಮಹಜರು ಮಾಡಿದ ಬಳಿಕ ಆರೋಪಿಗಳ ಕಾಸರಗೋಡಿನ ಕುಂಬ್ಡಾಜೆಯ ವಡಂಬಳೆಯ ಮನೆಗೆ ಕರೆತಂದು ಸಾಕ್ಷ್ಯ ಸಂಗ್ರಹಿಸಿದ್ದಾರೆ. ಅದರಲ್ಲಿ ಕೊಲೆ ಕೃತ್ಯಕ್ಕೆ ಬಳಸಿದ್ದ ಬೈಕ್, ಬಟ್ಟೆ, ಕತ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳನ್ನು ಮಂಗಳೂರು ಸಬ್‌ಜೈಲ್‌ಗೆ ಕರೆದೊಯ್ಯಲಾಗಿದೆ. ಇಬ್ಬರು…
Author: main-admin
ಮಂಗಳೂರು : ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ವಿಮಾನದಲ್ಲಿ ಸಿಗರೇಟ್ ಸೇದಿದ ಆರೋಪದ ಮೇಲೆ ಮಂಜೇಶ್ವರ ನಿವಾಸಿ ಮುಶಾದಿಕ್ ಹುಸೇನ್ (24) ಎಂಬಾತನ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್ 31 ರ ಸಂಜೆ ಅಬುದಾಬಿಯಿಂದ ಇಂಡಿಗೋ ವಿಮಾನದ ಮೂಲಕ ಮುಶಾದಿಕ್ ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುವ ಮುನ್ನವೇ ಮುಷಾದಿಕ್ ವಿಮಾನದ ವಾಶ್ ರೂಂನಲ್ಲಿ ಸಿಗರೇಟ್ ಸೇದಿದ್ದಾರೆ ಎನ್ನಲಾಗಿದೆ. ಬಳಿಕ ವಿಮಾನದ ಅಧಿಕಾರಿಗಳು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರು: ನಗರದ ಪಡೀಲ್ ಅಳಪೆ ಬಳಿ ನಡೆದ ಹೆಣ್ಣುಮಗು ಅಪಹರಣ ಪ್ರಕರಣವನ್ನು ದೂರು ಬಂದ ಕೇವಲ 2ಗಂಟೆಯೊಳಗೆ ಭೇದಿಸಿದ ಕಂಕನಾಡಿ ನಗರ ಠಾಣಾ ಪೊಲೀಸರು ಕಿಡ್ನ್ಯಾಪರ್‌ನನ್ನು ಬಂಧಿಸಿ ಮಗುವನ್ನು ಮತ್ತೆ ಹೆತ್ತವರ ಮಡಿಲಿಗೊಪ್ಪಿಸಿದ ಘಟನೆ ನಡೆದಿದೆ. ಕೇರಳ ರಾಜ್ಯದ ಎರ್ನಾಕುಲಂ ತಾತಾಪಿಲ್ಲಿ, ಪರವೂರ್, ಜಿಲ್ಲೆಯ ಅನೀಶ್ ಕುಮಾರ್(49) ಬಂಧಿತ ಕಿಡ್ನ್ಯಾಪರ್ ಅಳಪೆ ಪಡೀಲ್ ಅರಣ್ಯ ಇಲಾಖೆಯ ಸಸ್ಯವನದಲ್ಲಿ ಕೆಲಸ ಮಾಡಿಕೊಂಡಿದ್ದ ಕೆಲಸಗಾರರ ಎರಡುವರೆ ವರ್ಷದ ಹೆಣ್ಣು ಮಗು ಶನಿವಾರ ಸಂಜೆ 4.30ಗಂಟೆಗೆ ನಾಪತ್ತೆಯಾಗಿತ್ತು. ಹೆತ್ತವರು ಮಗುವನ್ನು ಹುಡುಕಾಡಿ ಕಾಣದಿದ್ದಾಗ ಸಂಜೆ 7.30ಗಂಟೆಗೆ ಕಂಕನಾಡಿ ಠಾಣೆಗೆ ದೂರು ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಕಂಕನಾಡಿ ನಗರ ಪೊಲೀಸರು ಎಲ್ಲ ಕಡೆ ಮಾಹಿತಿ ನೀಡಿದ್ದಾರೆ. ರೈಲ್ವೆ ಜಂಕ್ಷನ್‌ಗೆ ಭೇಟಿ ನೀಡಿ ಅಲ್ಲಿನ ಸಿಸಿಟಿವಿ ಫೂಟೇಜ್ ಪರಿಶೀಲಿಸಿದ್ದಾರೆ. ಆಗ ಓರ್ವ ಮಗುವನ್ನು ಕರೆದುಕೊಂಡು ಹೋಗುತ್ತಿರುವುದು ಕಂಡು ಬಂದಿದೆ. ಆತ ಕೇರಳದ ಕಡೆಗೆ ಹೋಗುತ್ತಿದ್ದ ರೈಲಿನಲ್ಲಿ ಮಗುವನ್ನು ಕರೆದುಕೊಂಡು ಹೋಗುತ್ತಿರುವುದನ್ನು ಗಮನಿಸಿ ತಕ್ಷಣ ಕಂಕನಾಡಿ ಪೊಲೀಸರು ಕಾಸರಗೋಡು ರೈಲ್ವೆ…
ಪುತ್ತೂರು: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಪುತ್ತೂರು ವಿಧಾನಸಭಾ ಚುನಾವಣೆಗೆ ಹಿಂದುತ್ವದ ಹೆಸರಿನಲ್ಲಿ ಬಿಜೆಪಿಗೆ ಠಕ್ಕರ ಕೊಟ್ಟು ಬಂಡಾಯ ಸ್ಪರ್ಧೆ ಮಾಡಿ ಪ್ರಖ್ಯಾತಿ ಪಡೆದಿದ್ದರು. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಮಹಿಳೆ ಫಿದಾ ಆಗಿದ್ದರು. ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ನೇಜಾರು ತಾಯಿ ಮತ್ತು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ವಿಚಾರಣೆ ಸಂಬಂಧ ನೀಡಿದ ತಡೆಯಾಜ್ಞೆಯನ್ನು ತೆರವುಗೊಳಿಸಿ ಆ.30ರಂದು ಆದೇಶ ಹೊರಡಿಸಿರುವ ಹೈಕೋರ್ಟ್ ನ್ಯಾಯಮೂರ್ತಿ ಮುಹಮ್ಮದ್ ನವಾಜ್, ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆಯನ್ನು ಮುಂದುವರೆಸುವಂತೆ ನಿರ್ದೇಶನ ನೀಡಿದ್ದಾರೆ. ಬೆದರಿಕೆಯ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾ ಯಿಸುವಂತೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ (praveen chougalel ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಉಡುಪಿ ನ್ಯಾಯಾ ಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಪ್ರಕರಣದ ದೂರುದಾರೆ ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ.ಮುಹಮ್ಮದ್ ನವಾಜ್, ತಡೆಯಾಜ್ಞೆಯನ್ನು ತೆರವುಗೊಳಿಸಿ ವಿಚಾರಣೆಯನ್ನು ಮುಂದುವರೆಸಲು ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಅನುಮತಿ ನೀಡಿ ಆದೇಶ ನೀಡಿದ್ದಾರೆ. ಜೀವ ಬೆದರಿಕೆಯ ಹಿನ್ನೆಲೆಯಲ್ಲಿ ಆರೋಪಿಯನ್ನು ಉಡುಪಿಯ ಹಿರಿಯಡ್ಕ ಜೈಲಿನಿಂದ ಬೆಂಗಳೂರು ಸೆಂಟ್ರಲ್ ಜೈಲಿಗೆ ಈಗಾಗಲೇ…
ಆನ್ ಲೈನ್ ವಂಚನೆಯನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿದೆ. ಹೀಗಿದ್ದರೂ ವಂಚಕರು ಮಾತ್ರ ದಿನಕ್ಕೊಂದು ದಾರಿ ಹಿಡಿದು, ಸೈಬರ್ ವಂಚನೆ ಎಸಗುತ್ತಿದ್ದಾರೆ. ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಎಚ್ಚರಿಕೆ ನೀಡಿದೆ. ಒಂದು ವೇಳೆ ಆ ನಿಯಮವನ್ನು ಮೀರಿದ್ರೆ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಈ ಕುರಿತು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸೈಬರ್ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಬ್ಯಾಂಕ್ ಖಾತೆಗಳನ್ನು “ಡ್ಯೂಲ್” ಅಕೌಂಟ್‌ಗಳೆಂದು ಪರಿಗಣಿಸಿ ಖಾತೆದಾರರು ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿರುವುದಾಗಿ ಭಾವಿಸಿ ಕಠಿಣ ಕ್ರಮ ಜರುಗಿಸಲು ಕೇಂದ್ರ ಸರ್ಕಾರದ “ಪೈನಾನ್ಸಿಯಲ್ ಇಂಟೆಲಿಜೆನ್ಸ್ ಯುನಿಟ್” ರವರು ಆದೇಶಿಸಿರುತ್ತಾರೆ ಎಂದಿದ್ದಾರೆ. ಕೆಲವರು ಅಲ್ಪ ಹಣದ ಆಸೆಯಿಂದ ಅಥವಾ ಅತಿಯಾದ ನಂಬಿಕೆಯಿಂದ ಅಥವಾ ತಿಳುವಳಿಕೆ ಕೊರತೆಯಿಂದ ತಮ್ಮ ಹೆಸರಿನಲ್ಲಿ ಬ್ಯಾಂಕ್ ಖಾತೆಯನ್ನು ತೆರೆದು ತಮ್ಮದಲ್ಲದ ಮೊಬೈಲ್ ನಂಬರ್‌ಗಳನ್ನು ಲಿಂಕ್ ಮಾಡಿಸಿ, ಅಪರಿಚಿತ…
ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಮಾದರಿಯನ್ನು ಭಾನುವಾರ ಬೆಂಗಳೂರಿನ ಬಿಇಎಂಎಲ್ ಸ್ಥಾವರದಲ್ಲಿ ಅನಾವರಣಗೊಳಿಸಲಾಯಿತು ಎಂದು ಮನಿ ಕಂಟ್ರೋಲ್ ವರದಿ ಮಾಡಿದೆ. ರೈಲು ಅಟೆಂಡೆಂಟ್‌ಗಳಿಗೆ ಪ್ರತ್ಯೇಕ ಬರ್ತ್‌ಗಳನ್ನು ಹೊಂದಿದೆ ಮತ್ತು ರಾತ್ರಿಯಲ್ಲಿ ವಾಶ್‌ರೂಮ್‌ಗೆ ಹೋಗುವ ಪ್ರಯಾಣಿಕರಿಗೆ ಏಣಿಯ ಕೆಳಗೆ ನೆಲದ ಎಲ್‌ಇಡಿ ಪಟ್ಟಿಗಳನ್ನು ಹೊಂದಿದೆ. ರೈಲು ಗರಿಷ್ಠ 160 kmph ಕಾರ್ಯಾಚರಣೆಯ ವೇಗವನ್ನು ಹೊಂದಿರುತ್ತದೆ (ಪರೀಕ್ಷೆಯ ಸಮಯದಲ್ಲಿ 180 kmph). ಹೊಸದಾಗಿ ಪರಿಚಯಿಸಲಾದ ಕೋಚ್ ಸುಮಾರು 10 ದಿನಗಳ ಕಾಲ ಪರೀಕ್ಷಾರ್ಥ ಚಾಲನೆಯನ್ನು ನಡೆಸಲಿದೆ. ನಂತರ ಟ್ರ್ಯಾಕ್‌ನಲ್ಲಿ ಸಹ ಪರೀಕ್ಷೆ ನಡೆಸಲಾಗುತ್ತದೆ. ಮುಂದಿನ ಮೂರು ತಿಂಗಳಲ್ಲಿ ರೈಲು ಸಾರ್ವಜನಿಕರಿಗೆ ಕಾರ್ಯಾಚರಣೆಯನ್ನು ಪ್ರಾರಂಭಿಸುವ ನಿರೀಕ್ಷೆಯಿದೆ.
ಪುತ್ತೂರು: ಹಾರ್ಡ್ ವೇರ್ ಅಂಗಡಿಯೊಂದಕ್ಕೆ ಬೆಂಕಿ ತಗಲಿ ಸಂಪೂರ್ಣ ಹಾನಿಯುಂಟಾದ ಘಟನೆ ಇಲ್ಲಿನ ಪುರುಷರಕಟ್ಟೆ ನಿನ್ನೆ ರಾತ್ರಿ ವೇಳೆ ಸಂಭವಿಸಿದೆ ಪುರುಷರಕಟ್ಟೆಯ ವಿಶ್ವಾಸ್ ಹಾರ್ಡ್ ವೇರ್ ಅಂಗಡಿಗೆ ಬೆಂಕಿ ತಗುಲಿದ್ದು, ಅಪಾರ ನಷ್ಟ ಉಂಟಾಗಿದೆ ಎನ್ನುವ ಮಾಹಿತಿ ದೊರಕಿದೆ. ವಿದ್ಯುತ್ ಶಾರ್ಟ್ ಸಕ್ಯೂರ್ಟ್ ಅಥವಾ ಬೇರೆ ಕಾರಣದಿಂದ ಬೆಂಕಿ ತಗಲಿದೆಯೇ ಅನ್ನುವ ಬಗ್ಗೆ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು ಕಾರ್ಯಾಚರಣೆ ನಡೆಸಿದ್ದಾರೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಉಡುಪಿ: ಖಾಸಗಿ ಫೈನಾನ್ಸ್ ಸಂಸ್ಥೆಯೊಂದಕ್ಕೆ ಮ್ಯಾನೇಜರ್ ಹಾಗೂ ಲೋನ್ ಆಫೀಸರ್ ಗಳು ಸೇರಿ 4 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿರುವ ಘಟನೆ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಖಾಸಗಿ ಫೈನಾನ್ಸ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಕಳೆದ ಒಂದು ವರ್ಷದಿಂದ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಬ್ದುಲ್ ಲತೀಫ್ ಖಾಸಿಂ ಮುಲ್ಲಾ ಸಂಘದ ಸದಸ್ಯರಿಂದ ಕಂತಿನ ಪ್ರಕಾರ ಸಾಲದ ಹಣವನ್ನು ವಸೂಲಿ ಮಾಡುತ್ತಿದ್ದು , ಸಾಲದ ಹಣದಲ್ಲಿ 1,25,787 ರೂಪಾಯಿ ಹಣವನ್ನು ಫೈನಾನ್ಸಿಯಲ್ ಲಿಮಿಟೆಡ್ ಸಂಸ್ಥೆಗೆ ಪಾವತಿಸದೇ ತನ್ನ ಸ್ವಂತಕ್ಕೆ ಉಪಯೋಗಿಸಿಕೊಂಡಿದ್ದಾನೆ.ಅದೇ ರೀತಿ ಲೋನ್ ಆಫೀಸರ್ ಗಳಾದ ಅಕ್ಷಯ್ 49,000 ರೂಪಾಯಿ ಹಾಗೂ ದೀಕ್ಷಿತ್ 3 ಲಕ್ಷ ರೂಪಾಯಿ ಹಣವನ್ನು ತಮ್ಮ ಸ್ವಂತಕ್ಕೆ ಉಪಯೋಗಿಸಿಕೊಂಡು ಸಂಸ್ಥೆಯ ಮ್ಯಾನೇಜರ್ ಜತೆ ಸೇರಿ ಈ ಮೂವರು ಒಟ್ಟು 4,74,787 ರೂಪಾಯಿ ಹಣವನ್ನು ಸಂಸ್ಥೆಗೆ ಕಟ್ಟದೇ ವಂಚಿಸಿರುವುದಾಗಿ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೂಡುಬಿದಿರೆ: ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಮೂಡುಬಿದಿರೆ ಪೊಲೀಸರ ತಂಡವು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಮಂಗಳೂರು ತಾಲೂಕು ಕೊಳವೂರಿನ ಅಯ್ಯನ ಮನೆ ನಿವಾಸಿ ರಮೇಶ (38) ಬಂಧಿತ ಆರೋಪಿ. ಮೂಡುಬಿದಿರೆಯ ಗಾಂಧಿನಗರದ ನ್ಯೂ ಕಿರಣ್ ಫ್ಯಾಕ್ಟರಿಗೆ ಬ್ಯಾಂಕೊಂದರಿಂದ 2010ರಲ್ಲಿ ಸಾಲ ಪಡೆದುಕೊಳ್ಳಲಾಗಿತ್ತು. ಅದನ್ನು ಹಿಂದಿರುಗಿ ಪಾವತಿಸಿಲ್ಲ ಎಂದು ಆರೋಪಿಸಿ ಬ್ಯಾಂಕ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ಆದೇಶದ ಅನ್ವಯ ಬ್ಯಾಂಕ್ ನ ವ್ಯವಸ್ಥಾಪಕರಾದ ಎಲ್.ಸಿ. ಸಿಂದಗೇರಿ ಅವರು ಫ್ಯಾಕ್ಟರಿಯ ಸ್ಥಿರಾಸ್ತಿ ಹಾಗೂ ಸೊತ್ತುಗಳನ್ನು 2010 ಸೆಪ್ಟೆಂಬರ್ 6ರಂದು ಜಪ್ತಿ ಮಾಡಿ ಸೀಲ್ ಮಾಡಿಸಿದ್ದರು. ಅಲ್ಲದೆ, ಕಾವಲುಗಾರನನ್ನು ನೇಮಿಸಿದ್ದರು. ಆದರೆ, ಆರೋಪಿ ರಮೇಶ ಸಹಿತ ಫ್ಯಾಕ್ಟರಿಯ ಮೆನೇಜಿಂಗ್ ಡೈರೆಕ್ಟರ್ ಎಂ.ಎಂ. ಮಹದೇವಪ್ಪ, ಹರೀಶ ಶೆಟ್ಟಿ, ಹರೀಶ, ನಾಗೇಶ, ರಾಮಚಂದ್ರ ಮೊದಲಾದವರು 2010ರ ಸೆ.18ರಂದು ರಾತ್ರಿ ಮಾರಕಾಸ್ತ್ರಗಳೊಂದಿಗೆ ಸೀಲ್ ಮಾಡಿದ್ದ ಫ್ಯಾಕ್ಟರಿಯ ಬೀಗ ಮುರಿದು ಗಾವಲುಗಾರನಿಗೆ ಬೆದರಿಕೆ ಹಾಕಿದ್ದರು. ಈ ಸಂಬಂಧ ಬ್ಯಾಂಕ್ ನ ವ್ಯವಸ್ಥಾಪಕರಾದ ಎಲ್.ಸಿ. ಸಿಂದಗೇರಿ…