Author: main-admin

ಬೆಂಗಳೂರು: ಮಾದಕ ದ್ರವ್ಯ ಜಾಲದ ವಿರುದ್ಧ ಬೆಂಗಳೂರು ಪೊಲೀಸರು ಮತ್ತು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 5.67 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಕೊಕೇನ್ ಜಪ್ತಿಯಾಗಿದೆ. ಈ ಸಂಬಂಧ ಉಗಾಂಡಾ ಮೂಲದ ಮಹಿಳಾ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.ನಗರದ ವಿವಿಧ ಭಾಗಗಳಲ್ಲಿ ನಡೆದ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಡ್ರಗ್ಸ್ ಸಾಗಾಟ ಮತ್ತು ಮಾರಾಟ ಜಾಲವನ್ನು ಪತ್ತೆಹಚ್ಚಿರುವ ಅಧಿಕಾರಿಗಳು, ಅಂತರರಾಜ್ಯ ಹಾಗೂ ಅಂತರರಾಷ್ಟ್ರೀಯ ಸಂಪರ್ಕಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಹೈಡ್ರೋ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಮ್ರಾನ್ ಪಾಷಾ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ 3 ಕೆಜಿ 180 ಗ್ರಾಂ ತೂಕದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು 2.20 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಈ ಮಾದಕ ವಸ್ತುವನ್ನು ಮಹಾರಾಷ್ಟ್ರದ ನಾಸಿಕ್‌ನಿಂದ ಬೆಂಗಳೂರಿಗೆ ತರಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಇಮ್ರಾನ್…

Read More

ನವದೆಹಲಿ: ಮೆಡಿಕಲ್ ಶಾಪ್‌ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿಸುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ನಿರ್ದೇಶಿಸಿದೆ.ವೈದ್ಯರ ಶಿಫಾರಸು ಇಲ್ಲದೇ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ. ಎಲ್ಲಾ ಸಿರಪ್‌ಗಳಿಗೆ ವೈದ್ಯರ ಪ್ರಿಸ್ಕ್ರಿಪ್ಷನ್ ಕಡ್ಡಾಯ. ಕೆಮ್ಮಿನ ಸಿರಪ್‌ಗೂ ವೈದ್ಯರ ಶಿಫಾರಸು ಅಗತ್ಯ ಎಂದು ಇಲಾಖೆ ಆದೇಶಿಸಿದೆ.ಕೇಂದ್ರವು 1945 ರ ಔಷಧ ನಿಯಮಗಳನ್ನು ತಿದ್ದುಪಡಿ ಮಾಡಿದೆ. ವೇಳಾಪಟ್ಟಿ ಏ ಅಡಿಯಲ್ಲಿ ಪಟ್ಟಿ ಮಾಡಲಾದ ವಿನಾಯಿತಿ ಪಡೆದ ಔಷಧಿಗಳ ವರ್ಗದಿಂದ ಸಿರಪ್‌ಗಳು ಎಂಬ ಪದವನ್ನು ತೆಗೆದುಹಾಕಿದೆ. ಹೀಗಾಗಿ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮು ಸಿರಪ್‌ಗಳು ಸೇರಿದಂತೆ ಯಾವುದೇ ಸಿರಪ್‌ಗಳ ಓವರ್-ದಿ-ಕೌಂಟರ್ ಮಾರಾಟವನ್ನು ಈಗ ನಿಷೇಧಿಸಲಾಗುವುದು.

Read More

ಮಂಗಳೂರು : 16 ವರ್ಷದ ಪ್ರಥಮ ವರ್ಷದ ಪಿಯುಸಿ (ಪಿಯುಸಿ) ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸೋಮೇಶ್ವರ ಬಸ್ ನಿಲ್ದಾಣದ ಬಳಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮೃತ ಸಮನ್ವಿ ಸ್ಥಳೀಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಸೋಮೇಶ್ವರ ನಿವಾಸಿ ಶಾಂತಿ ಅವರ ಮಗಳಾಗಿದ್ದಳು. ಪೊಲೀಸ್ ಮೂಲಗಳ ಪ್ರಕಾರ, ಸಮನ್ವಿಯ ತಾಯಿ ಮತ್ತು ಅಕ್ಕ ಮನೆಯಲ್ಲಿದ್ದಾಗ ಈ ದುರಂತ ಸಂಭವಿಸಿದೆ. ಆಕೆ ಸ್ನಾನ ಮಾಡುವ ನೆಪದಲ್ಲಿ ಕೋಣೆಗೆ ಹೋಗಿದ್ದಳು ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ. ಹೋದವಳು ವಾಪಾಸು ಹೊರಗಡೆ ಬಾರದೇ ಇದ್ದಾಗ ಏನೋ ತಪ್ಪಾಗಿದೆ ಎಂದು ಭಾವಿಸಿ ಆತಂಕಗೊಂಡ ಕುಟುಂಬ ಸದಸ್ಯರು ಬಾಗಿಲು ಒಡೆದು ಒಳಗೆ ಹೋದಾಗ, ಆಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡುಬಂದಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಸ್ಥಳಕ್ಕೆ ಧಾವಿಸಿ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಿ, ಅಸ್ವಾಭಾವಿಕ ಮರಣ ವರದಿ (ಯುಡಿಆರ್) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳದಿಂದ ಯಾವುದೇ…

Read More

ಬೀದರ್: ಅನುಮಾನಾಸ್ಪದ ರೀತಿಯಲ್ಲಿ `ಮಜಾಭಾರತ ಕಾಮಿಡಿ ರಿಯಾಲಿಟಿ ಶೋ ಕಲಾವಿದ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಣಕುಣಿ ರಸ್ತೆಯ ಪಕ್ಕದ ಅರಣ್ಯ ಪ್ರದೇಶದಲ್ಲಿ ಘಟನೆಯಾಗಿದೆ.ಹುಮ್ನಾಬಾದ್ ನಗರದ ಟೀಚರ್ಸ್ ಕಾಲೊನಿ‌ಯಲ್ಲಿ ವಾಸವಿದ್ದ ಸಿದ್ದಾರ್ಥ ಪರಶನೂರ (36) ಜೂನ್ 13 ರಂದು ಸ್ನೇಹಿತರೊಂದಿಗೆ ಮನೆಯಿಂದ ಹೋಗಿದ್ದು, ಇಂದು ಶವವಾಗಿ ಪತ್ತೆಯಾಗಿದ್ದಾನೆ.3 ದಿನವಾದರೂ ಮನೆಗೆ ಬಾರದ ಸಿದ್ದಾರ್ಥ, ಸೋಮವಾರ ಮಧ್ಯಾಹ್ನ ಶವವಾಗಿ ಪತ್ತೆಯಾಗಿದೆ. ಸೋಮವಾರ ಬೆಳಗ್ಗೆಯಷ್ಟೇ ಹುಮ್ನಾಬಾದ್ ಪೊಲೀಸ್ ಠಾಣೆಗೆ ಕುಟುಂಬಸ್ಥರು ಮಿಸ್ಸಿಂಗ್‌ ದೂರು ದಾಖಲಿಸಲು ಹೋಗಿದ್ದರು.ಮೊಬೈಲ್ ಟವರ್ ಲೊಕೆಶನ್‌ ಆಧರಿಸಿ ಪೊಲೀಸರು ಮಾಹಿತಿ ಕಲೆ ಹಾಕಿದ್ದು, ಬಳಿಕ ಶವ ಪರೀಕ್ಷೆಗಾಗಿ ಬ್ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹ ರವಾನೆ ಮಾಡಿದ್ದಾರೆ. ಸಾವಿಗೆ ನಿಖರ ಕಾರಣ‌ ಇನ್ನೂ ತಿಳಿದುಬಂದಿಲ್ಲ ಹುಮ್ನಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆಯಾಗಿದೆ.

Read More

ಎಂಸಿಸಿ ಬ್ಯಾಂಕ್‌ನ 2025–26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು 2026ರ ಜೂನ್ 13ರಂದು ಮಂಗಳೂರು ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಾಲ್ದಾನ್ಹಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಧರ್ಮಪ್ರಾಂತ್ಯದ ಎಸ್ಟೇಟ್ ಮ್ಯಾನೇಜರ್‌ಗಳಾದ ವಂ. ಫಾ. ಮ್ಯಾಕ್ಸಿಂ ರೊಸಾರಿಯೊ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು ಎಂಸಿಸಿ ಬ್ಯಾಂಕ್ ಅನ್ನು ಕ್ಯಾಥೋಲಿಕ್ ಸಮುದಾಯದ ಹೆಮ್ಮೆ ಮತ್ತು ಅಮೂಲ್ಯ ರತ್ನವೆಂದು ಬಣ್ಣಿಸಿ, ಬ್ಯಾಂಕ್ ವರ್ಷದಿಂದ ವರ್ಷಕ್ಕೆ ಸಾಧಿಸಿರುವ ಗಮನಾರ್ಹ ಪ್ರಗತಿಯನ್ನು ಶ್ಲಾಘಿಸಿದರು. ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರ ದೂರದೃಷ್ಟಿಯ ನಾಯಕತ್ವ, ನಿರ್ದೇಶಕರ ಮಂಡಳಿಯ ಮಾರ್ಗದರ್ಶನ ಹಾಗೂ ಸಿಬ್ಬಂದಿಯ ಸಮರ್ಪಿತ ಸೇವೆಯನ್ನು ಪ್ರಶಂಸಿಸಿದ ಅವರು, ಗ್ರಾಹಕ ಸ್ನೇಹಿ ಸೇವೆ, ವೃತ್ತಿಪರತೆ ಮತ್ತು ಬದ್ಧತೆಯೇ ಬ್ಯಾಂಕ್‌ಗೆ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಟ್ಟಿದೆ ಎಂದು ಹೇಳಿದರು. ಬ್ಯಾಂಕ್‌ನ ನಿರಂತರ ಬೆಳವಣಿಗೆಗೆ ನವೀನತೆ, ತಂಡದ ಕಾರ್ಯಪಟುತ್ವ, ನಿರಂತರ ಕಲಿಕೆ ಹಾಗೂ ಗ್ರಾಹಕ ಕೇಂದ್ರಿತ ಸೇವೆ…

Read More

ಕಡಬ: ಪಿಕಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಪ್ರಕರಣವೊಂದು ದಾಖಲಾಗಿದೆ.ಅರಕಲಗೂಡಿನ ನಿವಾಸಿಗಳಾದ ಚಂದ್ರಶೇಖರ್ ಮತ್ತು ಮೋಹನ್ ಎಂಬುವವರನ್ನು ಪ್ರಕರಣದ ಆರೋಪಿಗಳು ಎಂದು ಗುರುತಿಸಲಾಗಿದೆ.ಜೂನ್ 13 ರ ರಾತ್ರಿಯ ವೇಳೆ ಪಿಕಪ್ ವಾಹನದಲ್ಲಿ ಎರಡು ಹೋರಿಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ವಾಹನವು ಕುಲ್ಕುಂದದ ಕಡೆಗೆ ಸಾಗುತ್ತಿದ್ದಾಗ, ತಿರುವಿನಲ್ಲಿ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ನಿಯಂತ್ರಣ ತಪ್ಪಿ ವಾಹನ ಮಗುಚಿ ಬಿದ್ದಿದೆ ಎಂದು ವರದಿಯಾಗಿದೆ.ಪಿಕಪ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಎರಡು ಹೋರಿಗಳ ಕಾಲುಗಳನ್ನು ಕಟ್ಟಿ ಹಾಕಲಾಗಿತ್ತು ಎಂದು ತಿಳಿದುಬಂದಿದೆ. ವಾಹನ ಪಲ್ಟಿಯಾದ ನಂತರ, ಜಾನುವಾರುಗಳನ್ನು ಬಿಚ್ಚಿ ಬಿಡಲಾಗಿದೆ ಎಂದು ಹೇಳಲಾಗಿದೆ.ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆಯೂ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಮಠದ ಆವರಣದ ಸುತ್ತಮುತ್ತ ಜಾನುವಾರು ಕಳ್ಳತನಕ್ಕೆ ಸಂಬಂಧಿಸಿದ ಪ್ರಕರಣಗಳು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದವು.

Read More

ಉಡುಪಿ: ಉಡುಪಿಯ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಅಸಹಾಯಕ ಸ್ಥಿತಿಯಲ್ಲಿದ್ದ ಯುವಕನೊಬ್ಬ 9 ತಿಂಗಳ ನಂತರ ತನ್ನ ಕುಟುಂಬವನ್ನು ಸೇರಿಕೊಂಡಿದ್ದಾನೆ. ಸಮಾಜ ಸೇವಕ ನಿತ್ಯಾನಂದ ಒಳಕಾಡು, ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಸುರೇಶ್ ನಾವೂರು ಮತ್ತು ರೈಲ್ವೆ ಪೊಲೀಸರ ನಿರಂತರ ಪ್ರಯತ್ನದಿಂದ ಈ ಕಾರ್ಯ ಸಾಧ್ಯವಾಗಿದೆ.ಕೆಲವು ತಿಂಗಳ ಹಿಂದೆ, ಉಡುಪಿ ರೈಲ್ವೆ ನಿಲ್ದಾಣದಲ್ಲಿ ಗಸ್ತು ತಿರುಗುತ್ತಿದ್ದ ರೈಲ್ವೆ ರಕ್ಷಣಾ ಪಡೆಯ ಸಿಬ್ಬಂದಿ ವಿಶ್ರಾಂ ದೇಸಾಯಿ ಅವರು, ಪ್ಲಾಟ್‌ಫಾರ್ಮ್‌ನಲ್ಲಿ ಅಲೆದಾಡುತ್ತಿದ್ದ ಯುವಕನನ್ನು ಗಮನಿಸಿದರು. ಆತ ಮಾನಸಿಕ ಅಸ್ವಸ್ಥನಾಗಿರುವುದನ್ನು ಅರಿತ ಅವರು, ತಕ್ಷಣವೇ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ಸಹಾಯ ಪಡೆದರು. ಬಳಿಕ ಆತನನ್ನು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು.ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ. ವಾಸುದೇವ ಅವರ ವಿಶೇಷ ಕಾಳಜಿ ಮತ್ತು ಚಿಕಿತ್ಸೆಯಿಂದ ಯುವಕನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತು. ಗುಣಮುಖನಾಗುತ್ತಿದ್ದಂತೆಯೇ, ಆತ ತನ್ನ ಹೆಸರು ದಿಲೀಪ್ ಎಂದು ಮತ್ತು ತಾನು ಆಂಧ್ರಪ್ರದೇಶದವನು ಎಂದು ತಿಳಿಸಿದನು. ಈ ಸುಳಿವಿನ…

Read More

ಬೆಂಗಳೂರು: ವರದಕ್ಷಿಣೆ ಪ್ರಕರಣದಲ್ಲಿ ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಹೆಚ್ಎಎಲ್‌ ಪೊಲೀಸರು ಜೈಪುರದಲ್ಲಿ ಟ್ರ್ಯಾಪ್‌ ಆಗಿರುವ ಘಟನೆ ನಡೆದಿದೆ.ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರು, ಆತನ ಬಳಿ ಹಣಕ್ಕೆ ಬೇಡಿಕೆಯಿಟ್ಟು ರಾಜಸ್ಥಾನದ ಎಸಿಬಿ ಅಧಿಕಾರಿಗಳಿಗೆ ಲಾಕ್‌ ಆಗಿದ್ದಾರೆ.ಪಿಎಸ್‌ಐ ಅನಿತಾ, ಹೆಡ್ ಕಾನ್ಸ್‌ಟೇಬಲ್‌ ಉಳುವಪ್ಪ, ಕಾನ್ಸ್ಟೇಬಲ್ ಯತೀಶ್ ಟ್ರ‍್ಯಾಪ್ ಆದ ಪೊಲೀಸರು.ವರದಕ್ಷಿಣೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಶುಕ್ರವಾರ ಆರೋಪಿ ಬಂಧನಕ್ಕೆ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದರು. ಈ ವೇಳೆ ಸಿಕ್ಕ ಆರೋಪಿ ಬಳಿ 2 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಆದ್ರೆ ಆರೋಪಿ ಸಾಧ್ಯವಾದಷ್ಟು ಹಣ ಕೊಡುವುದಾಗಿ ಹೇಳಿದ್ದ. ಜೈಪುರದ ಗಂಗೌರ್‌ನ ಹೋಟೆಲ್‌ವೊಂದರಲ್ಲಿ 40,000 ರೂ. ಹಣ ಪಡೆಯುವಾಗ ಎಸಿಬಿ ಅಧಿಕಾರಿಗಳಿಗೆ ಲಾಕ್‌ ಆಗಿದ್ದಾರೆ.ಸದ್ಯ ಹೆಚ್‌ಎಎಲ್ ಪೊಲೀಸರನ್ನೇ ಬಂಧಿಸಿರುವ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Read More

ಮಂಗಳೂರು: ರೈಲ್ವೆ ಕ್ರಾಸಿಂಗ್ ಗೇಟ್‌ಗಳಲ್ಲಿ ಪದೇ ಪದೇ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವವರ ವಿರುದ್ಧ ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗವು ಕಠಿಣ ಕ್ರಮ ಕೈಗೊಂಡಿದೆ.ರಸ್ತೆ ಬಳಕೆದಾರರ ನಿರ್ಲಕ್ಷ್ಯದಿಂದಾಗಿ ರೈಲ್ವೆ ಕ್ರಾಸಿಂಗ್‌ಗಳಲ್ಲಿ ಅಪಘಾತಗಳು ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. 2025 ಮತ್ತು 2026ನೇ ಸಾಲಿನಲ್ಲಿ ಒಟ್ಟು 79 ರೈಲ್ವೆ ಗೇಟ್ ಅಪಘಾತಗಳು ವರದಿಯಾಗಿವೆ (2025ರಲ್ಲಿ 55 ಪ್ರಕರಣಗಳು ಮತ್ತು 2026ರಲ್ಲಿ 24 ಪ್ರಕರಣಗಳು) ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.ಎಚ್ಚರಿಕೆ ಸಂಕೇತಗಳಿದ್ದರೂ ಅಥವಾ ಗೇಟ್‌ಗಳನ್ನು ಮುಚ್ಚಿದ್ದರೂ ವಾಹನ ಸವಾರರು ರೈಲ್ವೆ ಹಳಿಗಳನ್ನು ದಾಟಲು ಪ್ರಯತ್ನಿಸುತ್ತಿರುವುದು ಹೆಚ್ಚಿನ ಅಪಘಾತಗಳು ಸಂಭವಿಸಲು ಮುಖ್ಯ ಕಾರಣವಾಗಿದೆ. ಇಂತಹ ಬೇಜವಾಬ್ದಾರಿಯುತ ನಡವಳಿಕೆಯು ರಸ್ತೆ ಬಳಕೆದಾರರ ಜೀವಕ್ಕೆ ಅಪಾಯವನ್ನುಂಟು ಮಾಡುವುದಲ್ಲದೆ, ರೈಲ್ವೆ ಕಾರ್ಯಾಚರಣೆಯ ಸುರಕ್ಷತೆಗೂ ಗಂಭೀರ ಬೆದರಿಕೆಯೊಡ್ಡುತ್ತದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.ಪದೇ ಪದೇ ನಡೆಯುತ್ತಿರುವ ಈ ಉಲ್ಲಂಘನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಸಂಬಂಧಪಟ್ಟ ಅಧಿಕಾರಿಗಳು, ಆರು ಮಂದಿ ವಾಹನ ಚಾಲಕರ ಚಾಲನಾ ಪರವಾನಗಿಯನ್ನು ಮೂರು ತಿಂಗಳ ಅವಧಿಗೆ ಅಮಾನತುಗೊಳಿಸಿದ್ದಾರೆ. ಇನ್ನೂ ಹಲವು ಪ್ರಕರಣಗಳು ವಿಚಾರಣೆ ಮತ್ತು…

Read More

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಜಮಲಾಬಾದ್ ಕೋಟೆ ಗಡಾಯಿಕಲ್ಲು ಚಾರಣಕ್ಕೆ ಅರಣ್ಯ ಇಲಾಖೆ ಮತ್ತೆ ನಿರ್ಬಂಧ ಹೇರಿದೆ. ಮಳೆಯ ಕಾರಣ ಕಲ್ಲುಗಳು ಜಾರುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಜೂನ್ 14ರಿಂದ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಈ ಕುರಿತು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗ ಪ್ರಕಟಣೆ ಹೊರಡಿಸಿದ್ದು, ಸುರಕ್ಷತಾ ದೃಷ್ಟಿಯಿಂದ ಮುಂದಿನ ಆದೇಶದವರೆಗೆ ಗಡಾಯಿಕಲ್ಲು ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದೆ.ಈ ಹಿಂದೆ ಬೇಸಿಗೆ ಅವಧಿಯಲ್ಲಿ ಕಾಡ್ಗಿಚ್ಚು ಹಾಗೂ ಇತರ ಅನಾಹುತಗಳನ್ನು ತಡೆಗಟ್ಟುವ ಉದ್ದೇಶದಿಂದ ಗಡಾಯಿಕಲ್ಲಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಅಲ್ಲದೆ ಹುಲಿ ಗಣತಿ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಸಹ ಪ್ರವೇಶ ನಿಷೇಧ ಜಾರಿಯಲ್ಲಿತ್ತು. ಬಳಿಕ ಜೂನ್ 1ರಿಂದ ಗಡಾಯಿಕಲ್ಲು ಪ್ರವಾಸಿಗರ ವೀಕ್ಷಣೆಗೆ ಮತ್ತೆ ತೆರೆಯಲಾಗಿತ್ತು. ಪುನರಾರಂಭಗೊಂಡ ಮೊದಲ ವಾರಾಂತ್ಯದಲ್ಲೇ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದ್ದರು. ಜೂನ್ 7ರಂದು ಮಾತ್ರವೇ ಸಾವಿರಕ್ಕೂ ಹೆಚ್ಚು ಮಂದಿ ಗಡಾಯಿಕಲ್ಲಿಗೆ ಭೇಟಿ ನೀಡಿ ಹೊಸ ದಾಖಲೆ ನಿರ್ಮಿಸಿದ್ದರು.ಆದರೆ ಮುಂಗಾರು ಮಳೆ ತೀವ್ರಗೊಂಡ…

Read More