ಧರ್ಮಸ್ಥಳ : ಪವಿತ್ರ ತೀರ್ಥ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳ ಕಾರ್ತಿಕ ಮಾಸದ ದೀಪೋತ್ಸವಕ್ಕೆ ಸಜ್ಜಾಗಿದೆ. ನವೆಂಬರ್ 19 ರಿಂದ ನವೆಂಬರ್ 23ರವರೆಗೆ ಧರ್ಮಸ್ಥಳ ದಲ್ಲಿ ಲಕ್ಷದೀಪೋತ್ಸವ ವೈಭವ ನಡೆಯಲಿದ್ದು, ಲಕ್ಷಾಂತರ ಭಕ್ತರ ಸಮಾಗಮದ ಜೊತೆಗೆ ಅದ್ಭುತ ಕಾರ್ಯಕ್ರಮಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಾಕ್ಷಿಯಾಗಲಿದೆ. ನವೆಂಬರ್ 22ರಂದು 90ನೇ ವರುಷದ ಸರ್ವಧರ್ಮ ಸಮ್ಮೇಳನ ನವೆಂಬರ್ 23 ರಂದು ಸಾಹಿತ್ಯ ಸಮ್ಮೇಳನ ಲಕ್ಷದೀಪೋತ್ಸವದ ಅಂಗವಾಗಿ ನಡೆಯಲಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ನಾಡಿನ ವಿದ್ವಾಂಸರು ಈ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲಿದ್ದಾರೆ.. ನವೆಂಬರ್22 ರಂದು ನಡೆಯುವ ಸರ್ವ ಧರ್ಮ ಸಮ್ಮೇಳನವನ್ನು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಉದ್ಘಾಟನೆ ನಡೆಸಲಿದ್ದಾರೆ. ಸಾಹಿತ್ಯ ಸಮ್ಮೇಳನವನ್ನು ಖ್ಯಾತ ಚಲನಚಿತ್ರ ನಿರ್ದೇಶಕ ಪಿ ಶೇಷಾದ್ರಿ ಉದ್ಘಾಟನೆ ಮಾಡಲಿದ್ದಾರೆ.. ಲಕ್ಷದೀಪೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು,ವಸ್ತು ಪ್ರದರ್ಶನ, ಮನೋರಂಜನಾ ಕಾರ್ಯಕ್ರಮಗಳು ರಾತ್ರಿಯಿಡಿ ಧರ್ಮಸ್ಥಳ ದಲ್ಲಿ ನಡೆಯಲಿದೆ. ನವೆಂಬರ್19 ರಂದು ಮಂಜುನಾಥ ಸ್ವಾಮಿಯ ಹೊಸಕಟ್ಟೆ ಉತ್ಸವ, ನವೆಂಬರ್20ರಂದು…
Author: main-admin
ನವದೆಹಲಿ: ಮತಾಂತರವಾದವರಿಗೆ ಪರಿಶಿಷ್ಟ ಜಾತಿ ಸ್ಥಾನ ನೀಡುವ ಕುರಿತಂತೆ ಕೇಂದ್ರದಿಂದ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಾಗಿದೆ. ಕ್ರಿಶ್ಚಿಯನ್, ಮುಸ್ಲಿಂ ಮೊದಲಾದ ಧರ್ಮಗಳಿಗೆ ಮತಾಂತರವಾದ ಹಿಂದುಳಿದ ಜಾತಿ ವ್ಯಕ್ತಿಗಳಿಗೆ ಮೀಸಲಾತಿ ನೀಡಿಕೆ ಕುರಿತ ಪ್ರಕರಣದಲ್ಲಿ ಕೇಂದ್ರ ಸರ್ಕಾರದಿಂದ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಲಾಗಿದ್ದು, ಮತಾಂತರ ಹೊಂದಿದವರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡುವುದು ಸರಿಯಲ್ಲ ಎಂದು ಕೇಂದ್ರ ಸರ್ಕಾರ ಪರೋಕ್ಷವಾಗಿ ಹೇಳಿದೆ. ಪರಿಶಿಷ್ಟ ಜಾತಿ ವ್ಯಕ್ತಿಗಳು ಬೌದ್ಧ, ಸಿಖ್ ಧರ್ಮಗಳಿಗೆ ಮತಾಂತರ ಆಗುವುದಕ್ಕೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಧರ್ಮಗಳಿಗೆ ಮತಾಂತರ ಹೊಂದುವುದಕ್ಕೂ ವ್ಯತ್ಯಾಸವಿದೆ. ಬೌದ್ಧ ಮತ್ತು ಸಿಖ್ ಧರ್ಮಗಳು ಭಾರತದಲ್ಲಿಯೇ ಹುಟ್ಟಿವೆ. ಆದರೆ, ಕ್ರಿಶ್ಚಿಯನ್ ಮತ್ತು ಮುಸ್ಲಿಂ ಧರ್ಮಗಳು ವಿದೇಶಗಳಿಂದ ಬಂದಿವೆ. ಭಾರತದ ಧರ್ಮ ಮತ್ತು ಕ್ರಿಶ್ಚಿಯನ್, ಮುಸ್ಲಿಂ ಧರ್ಮದ ಆಚರಣೆಗಳು ವಿಭಿನ್ನವಾಗಿವೆ. ಅಂಬೇಡ್ಕರ್ ಮತ್ತು ಅವರ ಅನುಯಾಯಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದರು. ಇದನ್ನೇ ಕ್ರಿಶ್ಚಿಯನ್, ಮುಸ್ಲಿಂ ಧರ್ಮಕ್ಕೆ ಮತಾಂತರ ಹೊಂದಿದವರಿಗೆ ಸಮಾನವಾಗಿ ಪರಿಗಣಿಸಲು ಸಾಧ್ಯವಿಲ್ಲವೆಂದು ಹೇಳಲಾಗಿದೆ.
ಬೆಂಗಳೂರು: ಹಿಂದೂ ಪದದ ಬಗ್ಗೆ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಂತ ಹೇಳಿಕೆ ಬಗ್ಗೆ ಬಿಜೆಪಿ ಸೇರಿದಂತೆ ಜೆಡಿಎಸ್ ನಿಂದಲೂ ವ್ಯಾಪಕ ವಿರೋಧ, ಆಕ್ಷೇಪ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ. ಜೊತೆಗೆ ಜನತೆಯಲ್ಲಿ ವಿಷಾದವನ್ನು ವ್ಯಕ್ತ ಪಡಿಸಿದ್ದಾರೆ. ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ಹಿಂದೂ ಪದದ ಬಗ್ಗೆ ತಾವು ಹೇಳಿದ್ದಂತ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಈ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೇ ವಿಷಾಧಿಸುತ್ತೇನೆ ಎಂದಿದ್ದಾರೆ. ಇನ್ನೂ ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ಪತ್ರವನ್ನು ಬರೆದಿದ್ದಾರೆ. ಆ ಪತ್ರದಲ್ಲಿ ತಮ್ಮ ಹೇಳಿಕೆಯಲ್ಲಿ ತಪ್ಪು ಇದೆಯಾ ಎನ್ನುವ ಬಗ್ಗೆ ತನಿಖೆ ನಡೆಸುವಂತೆಯೂ ಕೋರಿದ್ದಾರೆ. ಅಂದಹಾಗೇ ನವೆಂಬರ್ 6ರಂದು ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆಯಲ್ಲಿ ನಡೆದಂತ ಕಾರ್ಯಕ್ರಮದಲ್ಲಿ ಹಿಂದೂ ಪದದ ಬಗ್ಗೆ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಂತ ಹೇಳಿಕೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇದೀಗ ಇಂತಹ ಹೇಳಿಕೆಯನ್ನು ವಾಪಾಸ್ ಪಡೆದಿದ್ದಾರೆ.
ವಿಟ್ಲ: ಆಟೋ ರಿಕ್ಷಾ ಚಾಲಕರೋರ್ವರು ಹಠಾತ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ನ.9 ರಂದು ಬಂಟ್ವಾಳ ತಾಲೂಕಿನ ಮಾಣಿ ಸಮೀಪ ನಡೆದಿದೆ.ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ (45) ಮೃತರು. ಜಯಕರ ಪೂಜಾರಿ ರವರು ಆಟೋ ರಿಕ್ಷಾ ಚಾಲಕರಾಗಿದ್ದು, ಪ್ರತಿದಿನ ಬೆಳಗ್ಗೆ ಕೆಲ ಮಕ್ಕಳನ್ನು ಶಾಲೆಗೆ ಬಿಡುತ್ತಿದ್ದರು. ಎಂದಿನಂತೆ ಇಂದು ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಶಾಲೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಕ್ಕಳು ಜೆರಾಕ್ಸ್ ಶಾಪ್ ಹತ್ತಿರ ಆಟೋ ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ಆಟೋ ರಿಕ್ಷಾ ನಿಲ್ಲಿಸಿದ್ದು, ಮಕ್ಕಳು ಜೆರಾಕ್ಸ್ ತೆಗೆದು ಹಿಂದಿರುಗಿದ ವೇಳೆ ಅವರು ಕುಸಿದು ಬಿದ್ದಿದ್ದರು ಎನ್ನಲಾಗಿದೆ. ತಕ್ಷಣ ಅವರನ್ನು ಹತ್ತಿರದ ಕ್ಲಿನಿಕ್ ಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು: ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂದಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಇದರೊಂದಿಗೆ ಈ ಕೇಸ್ ನಲ್ಲಿ ಹಿಂದೂ ಸಂಘಟನೆಗಳಿಗೆ ಮೊದಲ ಗೆಲವು ದೊರೆತಂತಾಗಿದೆ. ಮಸೀದಿ ಕಾಮಗಾರಿಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು ಮತ್ತು ವಿಎಚ್ಪಿ ಅರ್ಜಿ ವಜಾ ಮಾಡಬೇಕು ಎನ್ನುವ ಮಸೀದಿ ಆಡಳಿತ ಮಂಡಳಿಯ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲಿಯೇ ಅರ್ಜಿಯ ವಿಚಾರಣೆ ನಡೆಯಲಿದೆ. ಕೋರ್ಟ್ ಕಮಿಷನರ್ ನೇಮಿಸಿ, ಮಸೀದಿ ಸರ್ವೇ ನಡೆಸಬೇಕು ಎಂದು ವಿಎಚ್ಪಿ ತನ್ನ ಅರ್ಜಿಯಲ್ಲಿ ಮನವಿ ಮಾಡಿತ್ತು. ವಿಎಚ್ಪಿ ಅರ್ಜಿಯನ್ನು ಅಂಗೀಕರಿಸಿರುವ ನ್ಯಾಯಾಲಯವು ವಿಚಾರಣೆಯನ್ನು ಜನವರಿ 8, 2023ಕ್ಕೆ ಮುಂದೂಡಿದೆ.
ಮಂಗಳೂರು: ನಗರದ ಹೊರವಲಯದಲ್ಲಿರುವ ಗುರುಪುರ ಬಳಿಯ ಮಳಲಿ ಮಸೀದಿ ವಿವಾದ ಪ್ರಕರಣದಲ್ಲಿ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಿಂದ ಇಂದು ತೀರ್ಪು ಹೊರ ಬರುವ ಸಾಧ್ಯತೆಯಿದೆ. ಮಳಲಿ ಮಸೀದಿ ನವೀಕರಣದ ವೇಳೆ ಹಿಂದೂ ದೇವಾಲಯ ಶೈಲಿಯ ಪಾರಂಪರಿಕ ಕಟ್ಟಡ ಪತ್ತರಯಾಗಿತ್ತು. ಆ ಬಳಿಕ ಹಿಂದೂ ಸಂಘಟನೆಗಳು ಮಳಲಿ ಭಜನಾಮಂದಿರದಲ್ಲಿ ತಾಂಬೂಲ ಪ್ರಶ್ನೆ ಇಟ್ಟಿತ್ತು. ಈ ತಾಂಬೂಲ ಪ್ರಶ್ನೆಯಲ್ಲಿ ಆ ಜಾಗದಲ್ಲಿ ಹಿಂದೆ ಶಿವನಿಗೆ ಸಂಬಂಧಿಸಿದ ಗುರು ಪೀಠವಿತ್ತು ಎಂಬ ಅಂಶ ಉಲ್ಲೇಖವಾಗಿತ್ತು. ಈ ಹಿನ್ನಲೆಯಲ್ಲಿ ಮಸೀದಿ ಇರುವ ಸ್ಥಳದ ಕೋರ್ಟ್ ಕಮೀಷನರ್ ಮೂಲಕ ವಿಎಚ್ ಪಿ ಸರ್ವೇಗೆ ನ್ಯಾಯಾಲಯಕ್ಕೆ ಅರ್ಜಿ ಹಾಕಿತ್ತು. ಮಸೀದಿ ನವೀಕರಣಕ್ಕೆ ತಡೆಕೋರಿಯೂ ವಿಎಚ್ ಪಿ ಅರ್ಜಿ ಹಾಕಿತ್ತು. ಈ ಅರ್ಜಿಯ ಕುರಿತಾಗಿ ಇಂದು ನ್ಯಾಯಾಲಯದಿಂದ ತೀರ್ಪು ಹೊರಬರುವ ಸಾಧ್ಯತೆಯಿದೆ.
ಬೆಳ್ತಂಗಡಿ: ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನ.7ರಂದು ರಾತ್ರಿ ನಡೆದಿದೆ. ಭಾರತೀಯ ಮಜ್ದೂರ್ ಸಂಘದ ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದ ಬ್ಯಾನರ್ ಅನ್ನು ಅಳವಡಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಖಾಸಗಿ ಪ್ರಿಂಟರ್ಸ್ ನವರು ಬ್ಯಾನರ್ ಸಿದ್ಧಪಡಿಸಿ ಅಳವಡಿಸುತ್ತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ಲೈನಿಗೆ ತಾಗಿದ್ದು, ಈ ವೇಳೆ ಕೆಲಸ ಮಾಡುತ್ತಿದ್ದ ಇಬ್ಬರೂ ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಓರ್ವ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದಿದೆ.
ವಿಟ್ಲ: ಪೆಟ್ರೋಲ್ ಸುರಿದು ಯುವಕನ ಕೊಲೆ ಮಾಡಿರುವ ಬಗ್ಗೆ ಭಾರೀ ವದಂತಿ ಬೆನ್ನಲ್ಲೇ ಆರೋಪಿಯನ್ನು ವಶಕ್ಕೆ ಪಡೆದು ವಿಟ್ಲ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬೋಳಂತೂರು ನಿವಾಸಿ ಆಟೋ ಚಾಲಕ ಅದ್ರಾಮ ಎಂಬಾತ 19 ವರ್ಷದ ಸಮದ್ ಎಂಬ ಯುವಕನಿಗೆ ಕೊಲೆ ಮಾಡಿರುವ ಬಗ್ಗೆ ವದಂತಿ ಇದೆ. ಆರೋಪಿ ಎನ್ನಲಾದ ಅದ್ರಾಮ ಸಲಿಂಗ ಕಾಮಿಯಾಗಿದ್ದು, ಈತನ ತೀಟೆಗೆ ಯುವಕನಿಗೆ ಬಲಿಕೊಟ್ಟಿದ್ದಾನೆ ಎಂದು ವರದಿಯಾಗಿದೆ.ಆದಿತ್ಯವಾರ ರಾತ್ರಿ ಸಮದ್ ಗೆ ಕಿಡ್ನಾಪ್ ಮಾಡಿ ಅದ್ರಾಮ ಮಂಚಿ, ಇರಾ ಭಾಗದಲ್ಲಿ ಪೆಟ್ರೋಲ್ ಸುರಿದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕಡಬ : ಫಾರ್ಚ್ಯೂನರ್ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಮಂಗಳವಾರದಂದು ನಡೆದಿದೆ.ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಟೊಯೋಟಾ ಫಾರ್ಚ್ಯೂನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ಐವರಿಗೆ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ.
ಮಂಗಳೂರು: ಬಿಗ್‌ಬಾಸ್ ಸ್ಪರ್ಧಿಯಾಗಿರುವ ರೂಪೇಶ್ ಶೆಟ್ಟಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಅವರ ಕುಟುಂಬ ಸದಸ್ಯರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ರೂಪೇಶ್ ಶೆಟ್ಟಿ ಅವರು ಬಿಗ್‌ಬಾಸ್‌ನಲ್ಲಿ ನೀಡಿರುವ ಹೇಳಿಕೆಗಳನ್ನಿಟ್ಟುಕೊಂಡು ಕೆಲವರು ಬೆದರಿಕೆ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್ ಅವರ ಕುಟುಂಬ ಸದಸ್ಯರು ದೂರು ನೀಡಿದ್ದು, ಸೆನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.