ಕರಾವಳಿಯಲ್ಲಿ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೇಸ್ ನ ಪದ್ಮರಾಜ್ ಅವರಿಗಂತ 138288 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಭಾರೀ ಪೈಪೋಟಿ ಕ್ಷೇತ್ರವಾಗಿದ್ದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೇಸ್ ಬಿಜೆಪಿಗೆ ಪ್ರಬಲ ಪೈಪೋಟಿ ಕೊಟ್ಟಿತ್ತು, ಆದರೆ ತಮ್ಮ ಭದ್ರಕೋಟೆಯಲ್ಲಿ ಮತ್ತೆ ಬಿಜೆಪಿ ಗೆಲುವನ್ನು ಸಾಧಿಸುವ ಮೂಲಕ ಮತ್ತೆ ಸೀಟ್ ನ್ನು ಉಳಿಸಿಕೊಂಡಿದೆ
Author: main-admin
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ್ದು, ಘೋಷಣೆಯೋಂದೇ ಬಾಕಿಯಿದೆ. ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಭರ್ಜರಿ ಮುನ್ನಡೆ ಸಾಧಿಸಿ ಕೋಟಾ ಗೆಲುವು ಸಾಧಿಸಿದ್ದಾರೆ. ಇನ್ನು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ಆಚರಿಸಿದ್ದಾರೆ.
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಗೆಲುವು ಸಾಧಿಸಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಮಣ್ಣ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಸೋಲು ಕಂಡಿದ್ದಾರೆ. ಭಾರಿ ಕುತೂಹಲ ಮೂಡಿಸಿದ್ದ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮೊದಲ ಗೆಲುವು ಕಂಡಿದ್ದು, ವಿ ಸೋಮಣ್ಣ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.
ಮಂಗಳೂರು: ಎನ್ ಐ ಟಿಕೆ ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದ ಘಟನೆ ಮಂಗಳವಾರ ಮತ ಎಣಿಕೆ ವೇಳೆ ನಡೆದಿದ್ದು ಮಧ್ಯ ಪ್ರವೇಶಿಸಿದ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಅಂಚೆ ಮತದಾನದಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ 20708 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸಾರ್ವಜನಿಕರಿಗೆ ಪೊಲೀಸರಿಂದ ಅನಗತ್ಯ ಕಿರಿಕಿರಿ ಆರೋಪ ಸುರತ್ಕಲ್ ಎನ್‌ಐಟಿಕೆ ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಸಾರ್ವಜನಿಕರು ನಿಲ್ಲಲು ಅವಕಾಶ ನೀಡಿದ್ದರೂ ಗೇಟ್ ನಲ್ಲಿ ಪ್ರವೇಶಿಸುವಾಗ ಪೊಲೀಸರು ಅನಗತ್ಯವಾಗಿ ವಿಚಾರಿಸಿ ಗುರುತು ಚೀಟಿ ಕೇಳಿ ಕಿರಿಕಿರಿಯನ್ನುಂಟು ಮಾಡಿದ್ದಾರೆ ಎಂದು ಕೆಲವು ಮಂದಿ ಕಾರ್ಯಕರ್ತರು ದೂರಿದ್ದಾರೆ. ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ ಕಾರ್ಯಕರ್ತರು ಜಮಾವಣೆಯಾಗುತ್ತಿದ್ದು ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ಮುನ್ಮಡೆ ಹಿನ್ನೆಲೆಯಲ್ಲಿ ಕಾರ್ಯಕರ್ತರು ಘೋಷಣೆ ಹಾಕಿ ಸಂಭ್ರಮಾಚರಣೆ ಆರಂಭಿಸಿದ್ದಾರೆ. ಪದ್ಮರಾಜ್ ನಿರ್ಗಮನ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮತದಾನ ಕೇಂದ್ರಕ್ಕೆ ಆಗಮಿಸಿ ನಿರ್ಗಮಿಸಿದರು. ಜಯಗಳಿಸುವ…
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ 20 ಸಾವಿರ ಮತಗಳ ಮುನ್ನಡೆಯಲ್ಲಿದ್ದಾರೆ.
ಮಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವಿಎಂ ಮತ ಎಣಿಕೆಯು ಅಧಿಕಾರಿಗಳ ನೇತೃತ್ವದಲ್ಲಿ ಆರಂಭಗೊಂಡಿದ್ದು, ಉಭಯ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಇವಿಎಂ ಮತ ಎಣಿಕೆಯಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿಯ ಕ್ಯಾ.ಬ್ರಿಜೇಶ್ ಚೌಟ ಅವರು, 9,000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.ಇನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ 23,378 ಮತಗಳನ್ನು ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ಡೆ 12,560 ಗಳಿಸಿದ್ದಾರೆ. ಈ ಮೂಲಕ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರು ೯೮೧೮ ಮತಗಳ ಮುನ್ನಡೆ ಸಾಧಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14,09,653 ಇವಿಎಂ ಮತಗಳ ಎಣಿಕೆ ಮಾಡಲಾಗುತ್ತದೆ. ಎಂಟು ವಿಧಾನ ಸಭಾ ಕ್ಷೇತ್ರದ 136 ಸುತ್ತಿನಲ್ಲಿ ಮತ ಎಣಿಕೆ ನಡೆಯಲಿದ್ದು, ಪ್ರತಿ ವಿಧಾನ ಸಭಾ ಕ್ಷೇತ್ರದ 18 ರಿಂದ 19 ಸುತ್ತಿನಲ್ಲಿ ಮತ…
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ 10 ಸಾವಿರ ಮತಗಳ ಮುನ್ನಡೆಯಲ್ಲಿದ್ದಾರೆ.
ಮಂಗಳೂರು: 2007 ರಲ್ಲಿ ಪ್ರಾರಂಭವಾದ ಆಳ್ವಾಸ್ ಪ್ರಗತಿ-ಬೃಹತ್ ಉದ್ಯೋಗ ಮೇಳವು ವೃತ್ತಿ ಆಕಾಂಕ್ಷಿಗಳಿಗೆ ವಿವಿಧ ರೀತಿಯ ಉದ್ಯೋಗಾವಕಾಶಗಳನ್ನು ನೀಡುತ್ತಾ ಬಂದಿದೆ. ಈ ಮೇಳವು ವಿಶೇಷವಾಗಿ ಗ್ರಾಮೀಣ ಮತ್ತು ಸವಲತ್ತುಗಳಿಲ್ಲದ ವರ್ಗಗಳ ಪ್ರತಿಭೆಗಳಿಗೆ ಅವಕಾಶ ಕೊಡಿಸುವ ಮಹತ್ಕಾರ್ಯವನ್ನು ಸಾಂಗವಾಗಿ ನಡೆಸುತ್ತಿದೆ. ಎರಡು ದಶಕಗಳಿಂದ ಪ್ರಗತಿ ಮೇಳವು ತನ್ನ ನಿಖರವಾದ ಯೋಜನೆ, ಉತ್ತಮ ಆತಿಥ್ಯ ಮತ್ತು ಉನ್ನತ ಮಟ್ಟದ ವೃತ್ತಿ ಅವಕಾಶಗಳೊಂದಿಗೆ ಪ್ರತಿಷ್ಠಿತ ಉದ್ಯೋಗ ಮೇಳವಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ಕಳೆದ 13 ಆಳ್ವಾಸ್ ಪ್ರಗತಿ ಹಾಗೂ 7 ಉದ್ಯೋಗ ಮೇಳಗಳಲ್ಲಿ ಒಟ್ಟು 31, 896 ಉದ್ಯೋಗಾವಕಾಶವನ್ನು ನೀಡಿದ ಕೀರ್ತಿ ಈ ಕಾರ್ಯಕ್ರಮಕ್ಕೆ ಸಲ್ಲುತ್ತದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ತನ್ನ ಸಿಎಸ್‍ಆರ್ ಚಟುವಟಿಕೆಯ ಅಡಿಯಲ್ಲಿ ಉದ್ಯೋಗ ಮೇಳದ ಸಂಪೂರ್ಣ ವೆಚ್ಚವನ್ನು ಭರಿಸುತ್ತದೆ. ಈ ಮೇಳವು, ಭಾಗವಹಿಸುವವರಿಗೆ ಮತ್ತು ನೇಮಕಾತಿ ನಡೆಸುವ ಕಂಪನಿಗಳಿಗೆ ಸಂಪೂರ್ಣವಾಗಿ ಉಚಿತವಾಗಿದೆ. ಈ ವರ್ಷ, ನೇಮಕಾತಿ ಕಂಪನಿಗಳ ಪ್ರತಿಕ್ರಿಯೆ ಅಭೂತಪೂರ್ವವಾಗಿದ್ದು, ಇಲ್ಲಿಯವರೆಗೆ 300 ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಲ್ಪಟ್ಟಿವೆ ಮತ್ತು ಉದ್ಯೋಗ ಮೇಳದ ಸಂಘಟನಾ…
ಉಳ್ಳಾಲ: ರೂಟ್ ಬಸ್ ಮತ್ತು ಮೆಡಿಕಲ್ ಕಾಲೇಜು ಬಸ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಗಾಯಗೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಬಳಿ ನಡೆದಿದೆ. ಪುತ್ತೂರಿನಿಂದ ಮಂಜನಾಡಿ ರಸ್ತೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ಶಿವಶಂಕರ್ ಬಸ್ ಮತ್ತು ಯೇನಪೋಯ ಮೆಡಿಕಲ್ ಕಾಲೇಜಿನ ಬಸ್ ಪರಸ್ಪರ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಎರಡು ವಾಹನಗಳಿಗೂ ಹಾನಿಯಾಗಿದೆ. ಘಟನೆಯಿಂದ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಘಟನಾ ಸ್ಥಳಕ್ಕೆ ದಕ್ಷಿಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪುತ್ತೂರು: ನೀರು ತುಂಬಿಸುವ ಡ್ರಮ್‌ಗಳನ್ನು ಸರಬರಾಜು ಮಾಡುವುದಾಗಿ ನಂಬಿಸಿ ಕೃಷಿ ಉತ್ಪನ್ನ ಮಾರಾಟ ಸಂಸ್ಥೆಗೆ ಅಪರಿಚಿತರು ಲಕ್ಷಾಂತರ ರೂ. ವಂಚಿಸಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಪುರುಷರಕಟ್ಟೆಯಲ್ಲಿರುವ ಅಗ್ರೋ ಉತ್ಪನ್ನಗಳನ್ನು ಮಾರಾಟ ಮಾಡುವ ಗಣೇಶ್ ಭಟ್ ವಂಚನೆಗೊಳಗಾದವರು, ಗಣೇಶ್ ಭಟ್ ಅವರನ್ನು Unity Poly Barrels PVT Ltd Ashoka Nagar Shivaji Nagar Pune Maharsasthra ಎಂಬ ಹೆಸರಿನಿಂದ ಸಂಪರ್ಕಿಸಿದ ಅಪರಿಚಿತರು ಆನ್ ಲೈನ್ ಮೂಲಕ ಡ್ರಮ್ ಗಳನ್ನು ಮಾರಾಟ ಮಾಡುವುದಾಗಿ ಹೇಳಿದ್ದರು. ಇದನ್ನು ನಂಬಿದ ಗಣೇಶ್ ಭಟ್ ಅವರು ಮೇ 8ರಿಂದ ಮೇ 10ರ ಒಳಗಡೆ 1,30,500 ರೂ. ಅನ್ನು ಮೂರು ಹಂತಗಳಲ್ಲಿ ಫೋನ್ ಪೇ ಮೂಲಕ ಅಪರಿಚಿತರ ಖಾತೆಗೆ ಕಳುಹಿಸಿದ್ದಾರೆ. ಹಣ ಪಾವತಿಸಿ 20 ದಿನ ಕಳೆದರೂ ಡ್ರಮ್ ಸರಬರಾಜು ಮಾಡಿಲ್ಲ ಎಂದು ಗಣೇಶ್ ಭಟ್ ಪುತ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.









