ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಇಂದಿನಿಂದ 4 ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಭಾರೀ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೀದರ್, ವಿಜಯಪುರ, ಕಲಬುರಗಿ, ಮಂಡ್ಯ, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಚಳಿ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ…
Author: main-admin
ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದ ಒಂದನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಅಬ್ರಾರ್ ಎನ್.ಎ. (6) ರಕ್ತ ಸಂಬಂಧಿ ಕಾಯಿಲೆಯಿಂದ ಶನಿವಾರ ಮೃತಪಟ್ಟಿದ್ದಾನೆ. ಅಬೂಬಕ್ಕರ್ ಮತ್ತು ಸಂಶಾದ್ ಕರುವೇಲು ದಂಪತಿ ಪುತ್ರನಾದ ಆತ ರಕ್ತ ಸಂಬಂಧಿ ಕಾಯಿಲೆಯಿಂದ ಉಂಟಾದ ಅನಾರೋಗ್ಯಕ್ಕೆ ಸಿಲುಕಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ವಿದ್ಯಾರ್ಥಿಯ ಅಕಾಲಿಕ ಮರಣದ ಕಾರಣಕ್ಕೆ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿ ವಿದ್ಯಾಲಯಕ್ಕೆ ಶನಿವಾರ ರಜೆ ಸಾರಲಾಯಿತು. ಸಾಲಬಾಧೆ: ವಿಷ ಸೇವಿಸಿ ಆತ್ಮಹತ್ಯೆಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಕೆವಾrಜೆ ಎನ್ನುವಲ್ಲಿ ಸಾಲಬಾಧೆಯಿಂದ ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ನ. 4ರಂದು ಮೃತಪಟ್ಟಿದ್ದಾರೆ. ಚಾರ್ಮಾಡಿ ಗ್ರಾಮದ ಕೆವಾrಜೆ ನಿವಾಸಿ ಯಶೋಧರ (39) ಮೃತಪಟ್ಟವರು. ಅವರು ಸ್ವ ಸಹಾಯ ಸಂಘ ಹಾಗೂ ಬ್ಯಾಂಕಿನಲ್ಲಿ ಸಾಲ ಮಾಡಿಕೊಂಡಿದ್ದರು. ಸಾಲಬಾಧೆ ತಾಳಲಾರದೆ ಅ. 31ರಂದು ಮನೆಯ ಅಂಗಳದಲ್ಲಿ ವಿಷ ಸೇವಿಸಿದ್ದರು. ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮೃತಪಟ್ಟಿದ್ದಾನೆ. ಪತ್ನಿ ನೀಡಿದ ದೂರಿನಂತೆ ಧರ್ಮಸ್ಥಳ…
ಪುತ್ತೂರು: ಚಲಿಸುತ್ತಿದ್ದ ಬಸ್ಸಿನಿಂದ ವ್ಯಕ್ತಿಯೋರ್ವ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿರುವ ಘಟನೆ ನ. 5 ರಂದು ಪುತ್ತೂರು ತಾಲೂಕಿನ ಕುಂಬ್ರದಲ್ಲಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಬೆಳ್ಳಾರೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಸುಲೈಮಾನ್(60)ಎಂದು ಗುರುತಿಸಲಾಗಿದೆ.ಸುಲೈಮಾನ್ ಅವರು ಮಾಡಾವಿನಿಂದ ಕುಂಬ್ರಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದು, ಕುಂಬ್ರ ತಲುಪುತ್ತಿದ್ದಂತೆ ಬಸ್‌ನಿಂದ ಇಳಿಯಲು ಬಸ್ಸಿನೊಳಗಡೆ ನಿಂತುಕೊಂಡಿದ್ದ ವೇಳೆ ಬಸ್ ಚಾಲಕ ಹಠಾತ್ತನೆ ಬ್ರೇಕ್ ಹಾಕಿದ ಪರಿಣಾಮ ಸುಲೈಮಾನ್‌ರವರು ಬಸ್ಸಿನಿಂದ ಹೊರಗೆಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.ಇನ್ನು ಗಾಯಾಳುವನ್ನು ತಕ್ಷಣ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ಗ್ರಾಮಾಂತರ ಪೊಲೀಸರು ಬಸ್ ಚಾಲಕ ಮತ್ತು ನಿರ್ವಾಹನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆಂದು ಎಂದು ವರದಿಯಾಗಿದೆ.
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕರ ಏಟಿಗೆ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ ನಿಶಿತಾ ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದ್ದು, ಶಿಕ್ಷಕನ ಹೊಡೆತಕ್ಕೆ ವಿದ್ಯಾರ್ಥಿನಿ ತರಗತಿಯಲ್ಲೇ ಎಚ್ಚರ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಸಂಬಂಧ ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ, ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಮಂಗಳೂರು: ಇತ್ತಿಚೇಗಷ್ಟೆ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ವಿವಾದ ಸೃಷ್ಟಿಯಾಗಿದೆ. ಸರ್ಕಾರ ಧ್ವನಿವರ್ಧಕ ಬಳಕೆಗೆ ಮಾರ್ಗಸೂಚಿ ಹೊರಡಿಸಿತ್ತು. ಇದೀಗ ಈ ಆದೇಶವನ್ನು ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಗಳಿಗೂ ಅನ್ವಯಿಸಲು ಹೊರಟಿರುವುದು ವಿವಾದಕ್ಕೆ ಕಾರಣವಾಗಿದೆ. ರಾತ್ರಿಯಿಂದ ಬೆಳಗ್ಗಿನವರೆಗೆ ನಡೆಯುತ್ತಿದ್ದ ಯಕ್ಷಗಾನ ದೇವರ ಸೇವೆಯನ್ನು ರಾತ್ರಿ 10ರ ಒಳಗೆ ಮುಗಿಸಬೇಕೆನ್ನುವ ಆಡಳಿತ ಮಂಡಳಿಯ ನಿರ್ಧಾರಕ್ಕೆ ದೇವಿ ಭಕ್ತರಿಂದ ವಿರೋಧ ವ್ಯಕ್ತವಾಗಿದೆ.ದಕ್ಷಿಣಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 6 ಯಕ್ಷಗಾನ ಮೇಳಗಳಿಂದ ಯಕ್ಷಗಾನ ಪ್ರದರ್ಶನ ನಡೆಯುತ್ತದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಗೆ 2 ಶತಮಾನಗಳ ಇತಿಹಾಸವಿದೆ. ಕಷ್ಟ ಕಾರ್ಪಣ್ಯಗಳ ನಿವಾರಿಸಿದ ಸಲುವಾಗಿ ದೇವಿಗೆ ಹರಕೆಯಾಗಿ ಭಕ್ತರು ಈ ಯಕ್ಷಗಾನ ಪ್ರದರ್ಶನವನ್ನು ಹಮ್ಮಿಕೊಳ್ಳುತ್ತಾರೆ. ಅಜಾನ್ ವಿವಾದ ಶುರುವಾದ ಬಳಿಕ ಸರ್ಕಾರ ರಾತ್ರಿ 10:30ರ ನಂತರ 50 ಡೆಸಿಬಲ್‌ಗಿಂತ ಹೆಚ್ಚಿನ ಧ್ವನಿವರ್ಧಕ ಬಳಸದಂತೆ ಆದೇಶ ಹೊರಡಿಸಿತ್ತು. ಈ ಆದೇಶದನ್ವಯ ರಾತ್ರಿಯಿಡಿ ನಡೆಯುತ್ತಿದ್ದ ಯಕ್ಷಗಾನವನ್ನೂ ಸಂಜೆ 5 ಗಂಟೆಗೆ ಆರಂಭಿಸಿ ರಾತ್ರಿ 10ರ ಒಳಗೆ…
ನವದೆಹಲಿ : ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ಪೊಲೀಸ್, ಬಿ.ಎ. ಉಮೇಶ್ ಅಲಿಯಾಸ್ ಉಮೇಶ್ ರೆಡ್ಡಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ ಉಮೇಶ್ ರೆಡ್ಡಿಗೆ ಮರಣದಂಡನೆ ಖಾಯಂಗೊಳಿಸಿತ್ತು, ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಉಮೇಶ್ ರೆಡ್ಡಿಗೆ ರಿಲೀಫ್ ಸಿಕ್ಕಿದ್ದು, ಸುಪ್ರೀಂಕೋರ್ಟ್ ಸಿಜೆಐ ಅವರಿದ್ದ ಪೀಠ ಆದೇಶ ಹೊರಡಿಸಿದೆ. ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಕ್ರೂರ ಶಿಕ್ಷೆಯಾಗಬೇಕು, ಆತನನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ನೊಂತ ಸಂತ್ರಸ್ತ ಕುಟುಂಬದವರು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. 1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 2007ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ನಂತರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿದ್ದವು. ನಂತರ ಉಮೇಶ್ ರೆಡ್ಡಿ ತಾಯಿ ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದು ಅದು…
ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ.ಮೂವರನ್ನು ಬಂಧಿಸಿದ್ದಾರೆ. ಎನ್ ಐಎ ಅಧಿಕಾರಿಗಳು ರಾಜ್ಯದ ಹಲವಡೆ ಮತ್ತೆ ದಾಳಿ ನಡೆಸಿದ್ದು, ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಡೆ ನಿಷೇಧಿತ ಪಿಎಫ್ ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್ ಐ ಎ ಅಧಿಕಾರಿಗಳು ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಳ್ಳಾರೆ ಗ್ರಾಮಪಂಚಾಯಿತಿ ಸದಸ್ಯ ಇಕ್ಬಾಲ್, ಸುಳ್ಯದ ಇಬ್ರಾಹಿಂ, ಎಸ್ ಡಿ ಪಿಐ ರಾಜ್ಯ ಕಾರ್ಯದರ್ಶಿ ಶೆಫಿ ಬೆಳ್ಳಾರೆಯನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಬೆಂಗಳೂರು: ಕ್ರೇನ್ ಡಿಕ್ಕಿ ಹೊಡೆದು ಸ್ಥಳದಲ್ಲೇ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ವೈಟ್ ಫೀಲ್ಡ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಕೊನೆಯ ಪರೀಕ್ಷೆ ಮುಗಿಸಿ ರಸ್ತೆ ಬದಿಯಿಂದ ಮನೆಗೆ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಕ್ರೇನ್ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿದೆ. ಚಾಲಕನ ಅತಿವೇಗ ಮತ್ತು ಅಜಾಗರೂಕತೆ ಚಾಲನೆಯಿಂದ ಈ ಘಟನೆಗೆ ನಡೆದಿದೆ. ವಿದ್ಯಾರ್ಥಿನಿಗೆ ಕ್ರೇನ್ ಡಿಕ್ಕಿ ಹೊಡೆಯುತ್ತಿರೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ಕುರಿತಂತೆ ವೈಟ್ ಫೀಲ್ಡ್ ಸಂಚಾರಿ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಕ್ರೇನ್ ಚಾಲಕ ಪೆರಿಯಸ್ವಾಮಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಕಾಸರಗೋಡು: ಜಿಲ್ಲೆಯ ಹೊಸದುರ್ಗ ಅಲಾಮಿಪಳ್ಳಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಂದ ವಿನೋದಿನಿ(20) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಹೊಸದುರ್ಗ ಕಲ್ಲೂರಾವಿ ಮೌಲಕರಿಯತ್ ಹೌಸ್‌ನ ಎ.ಕೆ.ಅಬ್ದುಲ್ ಸುಹೈಬ್(20) ಬಂಧಿತ ಆರೋಪಿಯಾಗಿದ್ದು ಹೊಸದುರ್ಗ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಆತ್ಮಹತ್ಯೆಗೆ ಪ್ರೇರಣೆ ನೀಡಿದ ಸೆಕ್ಷನ್ ಪ್ರಕಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪಡನ್ನಕ್ಕಾಡ್ ಇ.ಕೆ.ನಾಯನಾರ್ ಆರ್ಟ್ಸ್ ಆ್ಯಂಡ್ ಸಯನ್ಸ್ ಕಾಲೇಜು ವಿದ್ಯಾರ್ಥಿನಿಯಾಗಿದ್ದ ನಂದ ವಿನೋದಿನಿ ಅಕ್ಟೋಬರ್ 31 ರಂದು ಸಂಜೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನೇಣು ಬಿಗಿಯುವ ಮುನ್ನ ವೀಡಿಯೋ ಕಾಲ್ ಮಾಡಿ ಅಬ್ದುಲ್ ಸುಹೈಬ್‌ಗ ತಿಳಿಸಿದ್ದಳೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಸೆಕ್ಷನ್ ಪ್ರಕಾರ ಪೊಲೀಸರು ಕೇಸು ದಾಖಲಿಸಿದ್ದರು. ಈತನನ್ನು ಸಮಗ್ರ ವಿಚಾರಣೆಗೊಳಪಡಿಸಿದ ಬಳಿಕ ಸುಹೈಬ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನಂದ ವಿನೋದಿನಿ ಮತ್ತು ಅಬ್ದುಲ್ ಸುಹೈಬ್‌ನ ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು ಸಮಗ್ರವಾಗಿ ಪರಿಶೀಲಿಸುತ್ತಿದ್ದಾರೆ.
ಹೊಸೂರು;ಹೆರಿಗೆ ಮಾಡಿಸುವ ವೇಳೆ ನವಜಾತ ಶಿಶುವಿನ ಕೈ ಮುರಿದ ಘಟನೆ ಕೃಷ್ಣಗಿರಿ ಜಿಲ್ಲೆ ಉದ್ದನಪಲ್ಲಿಯಲ್ಲಿ ನಡೆದಿದೆ. ಹೊಸೂರು ನಗರದ ಕೊತ್ತೂರಿನ ಕೂಲಿಕಾರ್ಮಿಕ ಶಿವಕುಮಾರ್ ಎಂಬುವರ ಪತ್ನಿ ವಸಂತಿ ಅವರಿಗೆ ಬುಧವಾರ ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು ತಕ್ಷಣ ಅವರನ್ನು ಹತ್ತಿರದ ಉದ್ಧನಪಲ್ಲಿ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.ಈ ವೇಳೆ ಆಸ್ಪತ್ರೆ ವೈದ್ಯೆ ಗೈರಾಗಿದ್ದರು. ದಾದಿಯರೇ ರಿಸ್ಕ್ ತೆಗೆದುಕೊಂಡು ಹೆರಿಗೆ ಮಾಡಿಸಿದ್ದರು. ಈ ವೇಳೆ ಮಗುವಿನ ಕೈ ಮುರಿದಿದ್ದು, ಮಗುವಿನ ಆರೋಗ್ಯ ಸ್ಥಿತಿ ಬಿಗಡಾಯಿಸಿದೆ. ತಕ್ಷಣ ಆಂಬುಲೆನ್ಸ್ ಮೂಲಕ ಹೊಸೂರು ಸರ್ಕಾರಿ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಮಗುವಿನ ಕೈ ಮುರಿದಿರುವ ಸುದ್ದಿ ತಿಳಿದು ಆಸ್ಪತ್ರೆ ಆವರಣದಲ್ಲಿ ಪೋಷಕರು ಗಲಾಟೆ ಮಾಡಿದರು.ಈ ವೇಳೆ ಮಧ್ಯೆ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿ ಕೇಸ್ ದಾಖಲಿಸಿಕೊಂಡಿದ್ದಾರೆ.