ಮಂಗಳೂರು : ಮಂಗಳೂರು ನಗರದ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರದಲ್ಲಿನ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ತಿಳಿಸಿದ್ದಾರೆ. ಈ ಹಂದಿ ಸಾಕಣೆ ಕೇಂದ್ರದಿಂದ ಒಂದು ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು ಹತ್ತು ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಘೋಷಿಸಲಾಗಿದೆ. ರೋಗಪೀಡಿತ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಆ ಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಲು ಹಾಗೂ ಅಲ್ಲಿಗೆ ಸಾರ್ವಜನಿಕರು ಭೇಟಿ ನೀಡದಂತೆ ನಾಮಫಲಕ ಅಳವಡಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸೂಕ್ತ ಕೈಗೊಳ್ಳಲು ಸೂಚನೆ : ಇನ್ನು ಆಫ್ರಿಕನ್ ಹಂದಿ ಜ್ವರವು ಮನುಷ್ಯರಿಗೆ ಯಾವುದೇ ರೀತಿಯ ರೋಗವುಂಟು ಮಾಡುವುದಿಲ್ಲ. ಹಂದಿ ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಲು ಸಲಹೆ ನೀಡಲಾಗಿದೆ. ಜಾಗೃತ ವಲಯದಲ್ಲಿರುವ ಹಂದಿ ಸಾಕಾಣಿಕೆದಾರರು ಮತ್ತು ಇತರರು ಸದ್ಯಕ್ಕೆ…
Author: main-admin
ಉಪ್ಪಿನಂಗಡಿ: ಸರ್ಕಾರಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿಯ ಹಳೇ ಅರಣ್ಯ ತಪಾಸಣಾ ಕೇಂದ್ರದ ಬಳಿ ನಡೆದಿದೆ. ಗಾಯಗೊಂಡ ಸವಾರ ಭರತ್ ಕುಮಾರ್ ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿಯಾಗಿದ್ದು, ಕಾರ್ಯನಿಮಿತ್ತ ಉಪ್ಪಿನಂಗಡಿಗೆ ಬೈಕ್‍ನಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಬಸ್ಸಿನಡಿಗೆ ಸಿಲುಕಿ ನಜ್ಜುಗುಜ್ಜಾಗಿದೆ. ಬೈಕ್ ಸವಾರ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.
ದಾವಣಗೆರೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅವರ ಕಾರು ತುಂಗಾ ಕಾಲುವೆಯಲ್ಲಿ ಪತ್ತೆಯಾಗಿದೆ. ಈ ಕಾರನ್ನು ಅಗ್ನಿಶಾಮಕ ಸಿಬ್ಬಂದಿಗಳು ಮೇಲಿತ್ತಿದಾಗ ಅದರಲ್ಲಿ ಶಾಸಕರ ಸಹೋದರನ ಪುತ್ರ ಚಂದ್ರಶೇಖರ್ ಮೃತದೇಹ ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆ ಸಮೀಪ ಚಂದ್ರಶೇಖರ್ ಕಾರು ಸಂಚರಿಸಿದೆ ಎಂಬ ಸುಳಿವು ಸಿಕ್ಕಿತ್ತು. ಈ ಕಾರಣದಿಂದಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದು, ಕ್ರೇನ್ ಮೂಲಕ ಕಾರನ್ನು ಮೇಲಕ್ಕೆ ಎತ್ತಲಾಗಿದೆ. ಈ ಕಾರಿನಲ್ಲಿ ಚಂದ್ರಶೇಖರ ಮೃತದೇಹ ಪತ್ತೆಯಾಗಿದೆ. ಈ ಹಿನ್ನೆಲೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ರೇಣುಕಾಚಾರ್ಯ ಗೋಳಿಡುತ್ತಿದ್ದಾರೆ.
ಬಂಟ್ವಾಳ: ಶಾಲೆಗೆಂದು ಹೋದ ಬಾಲಕಿ ಶಾಲೆಗೆ ಹೋಗದೆ ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಸದ್ಯ ನಾಪತ್ತೆಯಾಗಿದ್ದ ಬಾಲಕಿ ಪತ್ತೆಯಾಗಿದ್ದಾಳೆ ಎಂದು ತಿಳಿದುಬಂದಿದೆ. ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿಪುಟ್ಟರಾಜ್ ಅವರ ಮಗಳು ಕಲ್ಲಡ್ಕದ ಅಮ್ಟೂರಿನ ಸಂಬಂಧಿಕರ ಮನೆಯಲ್ಲಿ ವಾಸವಾಗಿರುವ ಪೃಥ್ವಿ (12) ಕಾಣೆಯಾಗಿದ್ದಳು. ಪುಟ್ಟರಾಜ್ ಅವರ ಮಗಳು ಪೃಥ್ವಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸಿತ್ತಿದ್ದು, ಕಲ್ಲಡ್ಕ ದ ಅಮ್ಟೂರು ನಿವಾಸಿ ಸಂಬಂಧಿಕ ರಾಜಪ್ಪ ಅವರ ಮನೆಯಲ್ಲಿ ಬಾಲಕಿ ವಾಸವಾಗಿದ್ದು ಅಲ್ಲಿಂದ ಶಾಲೆಗೆ ಹೋಗಿ ಬರುತ್ತಿದ್ದಳು. ಮನೆಯಿಂದ ರಿಕ್ಷಾದಲ್ಲಿ ಶಾಲೆಗೆ ಹೋಗಿದ್ದ ಬಾಲಕಿ ಶಾಲೆಗೆ ಬಾರದೆ ಇದ್ದುದರಿಂದ ಶಾಲಾ ಶಿಕ್ಷಕಿ ಮನೆಯವರಿಗೆ ಪೋನ್ ಮಾಡಿ ತಿಳಿಸಿದಾಗ ನಾಪತ್ತೆಯಾದ ಬಗ್ಗೆ ತಿಳಿದುಬಂದಿತ್ತು. ಶಾಲೆಗೆಂದು ಹೋದವಳು ಶಾಲೆಗೆ ಹೋಗದೆ ಕಾಣೆಯಾದ ಬಗ್ಗೆ ಗಾಬರಿಗೊಂಡ ಪೋಷಕರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಸದ್ಯ ಈ ಪ್ರಕರಣ ಸುಖಾಂತ್ಯ ಕಂಡಿದ್ದು, ಬಾಲಕಿಯು ಚಿಕ್ಕಮಗಳೂರಿನಲ್ಲಿ…
ಬಂಟ್ವಾಳ: ಆರೋಪಿಯೋರ್ವನನ್ನು ಜಿಲ್ಲಾ ಕಾರಾಗೃಹಕ್ಕೆ ಬಸ್‌ನಲ್ಲಿ ಪೊಲೀಸರು ಕರೆದುಕೊಂಡು ಹೋಗುವ ವೇಳೆ ಪರಾರಿಯಾಗಲು ಯತ್ನಿಸಿದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ. 2003 ರಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಕಳ್ಳಿಗೆ ನಿವಾಸಿ ಗಿರೀಶ್ ಯಾನೆ ಗಿರಿಧರ್ ಆರೋಪಿ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ತಲೆಮರೆಸಿಕೊಳ್ಳಲು ಯತ್ನಿಸಿದ ಕಾರಣಕ್ಕಾಗಿ ಈತನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. 2003ರಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಿರಿಧರ್ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯದ ಅದೇಶದಂತೆ ಪೋಲೀಸರು ಈತನನ್ನು ಪತ್ತೆ ಹಚ್ಚಿ ನ್ಯಾಯಾಲಯ ಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಈತನಿಗೆ ಶಿಕ್ಷೆ ಪ್ರಕಟಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸುವ ಸಲುವಾಗಿ ಕೈದಿಯನ್ನು ಸರ್ಕಾರಿ ಬಸ್ ನಲ್ಲಿ ಇಬ್ಬರು ಪೋಲೀಸರು ಬಿಸಿರೋಡಿನಿಂದ ಮಂಗಳೂರಿಗೆ ಸುಮಾರು 6.30 ಗಂಟೆಗೆ ಕರೆದುಕೊಂಡು ಹೋಗುವ ವೇಳೆ ಬ್ರಹ್ಮರಕೋಟ್ಲು ಟೋಲ್ ಗೇಟ್ ನಲ್ಲಿ ಬಸ್ ನಿಧಾನವಾಗುತ್ತಿದ್ದಂತೆ, ನಿರ್ವಾಹಕನಿಗೆ ವಾರೆಂಟ್ ನೀಡುತ್ತಿರುವ ಸಮಯವನ್ನು ಉಪಯೋಗಿಸಿ ಆರೋಪಿ ಪೋಲೀಸರನ್ನು…
ಬಂಟ್ವಾಳ:ಶಾಲೆಗೆಂದು ಹೋಗಿದ್ದ ಬಾಲಕಿ ಶಾಲೆಗೂ ಹೋಗದೆ ಮನೆಗೂ ಬಾರದೆ ನಾಪತ್ತೆಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಪೃಥ್ವಿ (12) ಕಾಣೆಯಾದ ಬಾಲಕಿ.ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿ ಪುಟ್ಟರಾಜ್ ಅವರ ಮಗಳು ಪೃಥ್ವಿ ಕಲ್ಲಡ್ಕದ ಅಮ್ಟೂರಿನ ಸಂಬಂಧಿಕರ ಮನೆಯಿಂದ ಶಾಲೆಗೆ ಹೋಗುತ್ತಿದ್ದರು. ಕಲ್ಲಡ್ಕದ ಅಮ್ಟೂರು ನಿವಾಸಿ ಸಂಬಂಧಿಕ ರಾಜಪ್ಪ ಅವರ ಮನೆಯಿಂದ ಬಾಲಕಿ ಶಾಲೆಗೆ ಹೋಗಲು ರಿಕ್ಷಾ ಮೂಲಕ ತೆರಳಿದ್ದಳು.ಬಾಲಕಿ ಶಾಲೆಗೆ ಬಾರದೆ ಇದ್ದುದರಿಂದ ಶಾಲಾ ಶಿಕ್ಷಕಿ ಮನೆಯವರಿಗೆ ಪೋನ್ ಮಾಡಿ ತಿಳಿಸಿದ್ದಾರೆ. ಶಾಲೆಗೆಂದು ಹೋದವಳು ಶಾಲೆಗೆ ಹೋಗದೆ ಕಾಣೆಯಾದ ಬಗ್ಗೆ ಪೋಷಕರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಸಿಐಡಿ ತಂಡ ಬಂಧಿಸಿದೆ. ಬಂಧಿತ ಆರೋಪಿ ಕಲ್ಯಾಣ ಕರ್ನಾಟಕ ಮಹಿಳಾ ಖೋಟಾದಲ್ಲಿ ಮೊದಲ ಸ್ಥಾನ ಪಡೆದಿದ್ದಳು. ಬಂಧಿತರನ್ನು ಸುಪ್ರಿಯಾ ಮಲ್ಲಿಕಾರ್ಜುನ ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಿಪ್ಪರಗಾ ಎಸ್ ಎನ್ ಗ್ರಾಮ ನಿವಾಸಿಯಾದ ಸುಪ್ರಿಯಾ ಬ್ಲೂಟೂತ್ ಬಳಸಿ ಅಕ್ರಮವಾಗಿ ಪಿಎಸ್ ಐ ಪರೀಕ್ಷೆ ಬರೆದಿದ್ದರು. ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸುಪ್ರಿಯಾ ಹೆಸರಿತ್ತು, ಈ ಹಿನ್ನೆಲೆ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಸಿಐಡಿ ಪೊಲೀಸರು ಹಲವರನ್ನು ಇದುವರೆಗೆ ಬಂಧಿಸಿ ಜೈಲಿಗಟ್ಟಿದ್ದಾರೆ, ಪ್ರಕರಣ ಸಂಬಂಧ ಕಾರ್ಯಾಚರಣೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಒಬ್ಬೊಬ್ಬರನ್ನಾಗಿ ಬಲೆಗೆ ಬೀಳಿಸುತ್ತಿದ್ದಾರೆ.
ಮೂಡುಬಿದಿರೆ : ಶಾಲಾ ವಾಹನಕ್ಕೆ ಢಿಕ್ಕಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನ ಚಾಲಕ ಗಂಭೀರ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಮೂಡುಬಿದಿರೆಯ ಆಲಂಗಾರಿನಲ್ಲಿ ಸಂಜೆ 4 ಗಂಟೆಯ ವೇಳೆಗೆ ನಡೆದಿದೆ. ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಮೂಡುಬಿದಿರೆ ಆಲಂಗಾರಿನ ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆಯ ಬಸ್ ಮಕ್ಕಳನ್ನು ಮನೆಗೆ ಬಿಡಲು ಬೆಳುವಾಯಿ ಕಡೆಗೆ ಹೋಗುತ್ತಿದ್ದಾಗ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಅತೀ ವೇಗದಿಂದ ಬರುತ್ತಿದ್ದ ಕೆಎ09 z 7481 ನಂಬರಿನ ಕಾರು ಆಲಂಗಾರು ಬಳಿ ಬ್ರೇಕ್ ಹಾಕಿದ್ದು ಆಗ ತಕ್ಷಣ ಕಾರು ಬಲಕ್ಕೆ ತಿರುಗಿ ಶಾಲಾ ವಾಹನದ ಕಡೆಗೆ ಬಂದಿದೆ ಆಗ ಶಾಲಾ ವಾಹನದ ಚಾಲಕ ಎಡ ಕಡೆಗೆ ವಾಹನವನ್ನು ತಿರುಗಿಸಿದ್ದು ಆಗ ಅಲ್ಲಿಯೇ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಲ್ಲಿಯೇ ನಿಂತಾಗ ಕಾರು ಅಲ್ಲಿಗೆ ಬಂದು ಗುದ್ದಿದೆ.ಕಾರಿನ ಚಾಲಕನ ಮೂಗು ಮತ್ತು ಕಿವಿಯಿಂದ ರಕ್ತ ಹರಿಯುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು,…
ಅಡಿಲೇಡ್ :ಭಾರತದ ಸ್ಟಾರ್ ಬ್ಯಾಟ್ಸ್ ಮ್ಯಾನ್ ವಿರಾಟ್ ಕೊಹ್ಲಿ ಮತ್ತೊಂದು ಮೈಲಿಗಲ್ಲನ್ನು ತಲುಪಿದ್ದು, ಟಿ 20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಅಡಿಲೇಡ್‌ನಲ್ಲಿ ನಡೆದ ಭಾರತದ ಗ್ರೂಪ್ 2 ಮುಖಾಮುಖಿಯಲ್ಲಿ ಬಾಂಗ್ಲಾದೇಶ ವಿರುದ್ಧ ವೈಯಕ್ತಿಕ ಸ್ಕೋರ್ 16 ತಲುಪಿದಾಗ ಕೊಹ್ಲಿ ಇನ್ನೊಂದು ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಬುಧವಾರ ಬಾಂಗ್ಲಾದೇಶ ವಿರುದ್ಧ ಕೊಹ್ಲಿ 64(44 ಎಸೆತ) ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ. ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ಅವರ ಅತಿ ಹೆಚ್ಚು ರನ್‌ಗಳ ದಾಖಲೆಯನ್ನು ಕೊಹ್ಲಿ ಹಿಂದಿಕ್ಕಿದ್ದಾರೆ. ಮಹೇಲಾ 31 ಇನ್ನಿಂಗ್ಸ್‌ಗಳಲ್ಲಿ 1016 ರನ್ ಗಳಿಸಿದ್ದರು. ಕೊಹ್ಲಿ ತಮ್ಮ 23ನೇ ಇನ್ನಿಂಗ್ಸ್‌ನಲ್ಲಿ 1017 ರನ್‌ಗಳ ಗಡಿ ದಾಟಿದರು. ಕೊಹ್ಲಿ 2014 ರಲ್ಲಿ ಪ್ರಮುಖ ರನ್ ಗಳಿಸಿದ ಆಟಗಾರರಾಗಿದ್ದರು, ಅವರ 319 ರನ್ ಗಳು ಭಾರತವನ್ನು ಫೈನಲ್‌ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವು.ಫೈನಲ್ ನಲ್ಲಿ ಶ್ರೀಲಂಕಾ ವಿರುದ್ಧ ಸೋಲು ಅನುಭವಿಸಿತ್ತು. 2016ರ ಆವೃತ್ತಿಯ ಟೂರ್ನಿಯಲ್ಲಿ ಭಾರತ ಸೆಮಿಫೈನಲ್…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ದ.ಕ. ಜಿಪಂ ಸಿಇಒ ಡಾ.ಕುಮಾರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಆಗಿದ್ದ ಎಂ.ಆರ್.ರವಿಕುಮಾರ್ ಅವರನ್ನು ದ.ಕ. ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಅ.31ರಂದು ಆದೇಶ ಹೊರಡಿಸಿತ್ತು. ಈ ಹಿಂದೆ ದ.ಕ. ಜಿಲ್ಲಾಧಿಕಾರಿಯಾಗಿದ್ದ ಡಾ.ರಾಜೇಂದ್ರ ಕೆ.ವಿ. ಅವರು ಮೈಸೂರಿಗೆ ವರ್ಗಾವಣೆಗೊಂಡಿದ್ದಾರೆ.