ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಘೋಷಿಸಿದೆ. ಕಳೆದ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದರು. ಅವರ ಪತ್ತೆಗಾಗಿ ಈಗ ಎನ್‌ಐಎ ಬಹುಮಾನವಾಗಿ ನಗದು ಘೋಷಿಸಿದೆ. ಪ್ರಮುಖ ಆರೋಪಿಗಳಾದ ಬೆಳ್ಳಾರೆಯ ಮಹಮ್ಮದ್ ಮುಸ್ತಾಫಾ ಮತ್ತು ಮಡಿಕೇರಿಯ ತುಫೈಲ್ ಬಗ್ಗೆ ಸುಳಿವು ನೀಡಿದರೆ ತಲಾ 5 ಲಕ್ಷ ರೂ. ಬಹುಮಾನ, ಜೊತೆಗೆ ಕೊಲೆಗೆ ಸಹಕಾರ ನೀಡಿದ ಸುಳ್ಯದ ಉಮ್ಮರ್ ಫಾರೂಕ್ ಹಾಗೂ ಬೆಳ್ಳಾರೆಯ ಅಬೂಬಕ್ಕರ್ ಸಿದ್ದಿಕ್ ಬಗ್ಗೆ ಮಾಹಿತಿ ನೀಡಿದರೆ ತಲಾ 2 ಲಕ್ಷ ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿದೆ. ಮಾಹಿತಿದಾರರು info.blr.nia@gov.in ಅಥವಾ ದೂರವಾಣಿ ಸಂಖ್ಯೆ 080-29510900/8904241100 ಅಥವಾ ಪೊಲೀಸ್ ಅಧೀಕ್ಷಕರು, ರಾಷ್ಟ್ರೀಯ ತನಿಖಾ ದಳ (ಎನ್‌ಐಎ), 8ನೇ ಮಹಡಿ, ಸರ್. ಎಂ ವಿಶ್ವೇಶ್ವರಯ್ಯ ಕೇಂದ್ರೀಯ…
Author: main-admin
ಮಂಗಳೂರು; ಪದ್ಮಶ್ರೀ ಹರೇಕಳ ಹಾಜಬ್ಬ ಅವರ ಕನಸು ಕೊನೆಗೂ ನನಸಾಗಿದೆ. ಹರೇಕಳ ಹಾಜಬ್ಬ ಅವರಿಗೆ ರಾಜ್ಯ ಸರಕಾರ ಪಿಯು ಕಾಲೇಜು ಮಂಜೂರುಗೊಳಿಸಿ ಆದೇಶ ಹೊರಡಿಸಿದೆ. ಹಾಜಬ್ಬ ಪಿಯು ಕಾಲೇಜಿಗಾಗಿ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದರು.ಪದ್ಮಶ್ರೀ ಪುರಸ್ಕಾರದ ಬಳಿಕ ಅವರ ಬೇಡಿಕೆಗೆ ಹೆಚ್ಚಿನ ಬೆಂಬಲ ಸಿಕ್ಕಿತ್ತು.ಇದೀಗ ರಾಜ್ಯ ಸರಕಾರ ಹಾಜಬ್ಬ ಕನಸನ್ನು ನನಸುಗೊಳಿಸಿದೆ. ಹರೇಕಳ ಹಾಜಬ್ಬ ಮಂಗಳೂರು ನಗರದ ಬೀದಿಬದಿಗಳಲ್ಲಿ ಕಿತ್ತಳೆ ಹಣ್ಣು ಮಾರಾಟ ಮಾಡಿ ತನ್ನೂರು ನ್ಯೂಪಡ್ಪುಗೆ ಸರಕಾರಿ ಶಾಲೆ ಮಂಜೂರುಗೊಳಿಸುವಲ್ಲಿ ಯಶಸ್ವಿಯಾಗಿದ್ದರು.ಬಳಿಕ ಪ್ರೌಢಶಾಲೆ ಈಗ ಪಿಯು ಕಾಲೇಜು ಸ್ಥಾಪನೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಬೆಳ್ತಂಗಡಿ: ಕಾರ್ಯಾತಡ್ಕದಿಂದ ಅಣಿಯೂರು ಗೆ (ನೆರಿಯ)ಅಕ್ರಮ ಗೋವುಗಳನ್ನು ಸಾಗಾಟದ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಪುದುವೆಟ್ಟು ಬಾಯಿತರು ಎಂಬಲ್ಲಿ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ 6ಗೋವುಗಳು ಪತ್ತೆಯಾಗಿದ್ದು ಅವುಗಳನ್ನು ರಕ್ಷಣೆ ಮಾಡಲಾಗಿದೆ. ಹಾಗೆಯೇ ಇಬ್ಬರು ಆರೋಪಿಗಳಾದ ಆಜೀದ್ ಕಕ್ಕಿಂಜೆ, ರಫೀಕ್ ನೆರಿಯ ಹಾಗೆಯೇ ಪಿಕಪ್ ವಾಹನವನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡು ಕೇಸ್ ದಾಖಲಿಸಿಕೊಂಡಿದ್ದಾರೆ…
ಬೆಳ್ತಂಗಡಿ: ನ.8 ರಂದು ಮಂಗಳವಾರ ಗ್ರಸ್ತೋದಯ ಖಗ್ರಾಸ ಚಂದ್ರಗ್ರಹಣ ಸಂಭವಿಸಲಿರುವ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮಧ್ಯಾಹ್ನ 01.30 ರಿಂದ ರಾತ್ರಿ 7 ಗಂಟೆಯವರೆಗೆ ಭಕ್ತಾದಿಗಳಿಗೆ ದೇವರ ದರ್ಶನ ಮತ್ತು ಯಾವುದೇ ಪೂಜೆಗೆ ಅವಕಾಶ ಇರುವುದಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ದೇವರ ದರ್ಶನದ ಸಮಯ ಬದಲಾವಣೆಯನ್ನು ಮನಗಂಡು ದೂರದೂರಿನ ಭಕ್ತರು ಯಾತ್ರೆಗೆ ಹೊರಡಬೇಕಿದೆ.ಮಧ್ಯಾಹ್ನ 1.30 ರವರೆಗೆ ಭೋಜನಾ ವ್ಯವಸ್ಥೆ ಇರಲಿದ್ದು ಬಳಿಕ ಸಂಜೆ 7 ರ ಬಳಿಕ ಅನ್ನಪೂರ್ಣ ಅನ್ನಛತ್ರದಲ್ಲಿ ಭೋಜನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ದೇವಳದ ಪ್ರಕಟನೆಯಲ್ಲಿ ತಿಳಿಸಿದೆ.
ಮೂಡಬಿದ್ರಿ: ಹುಡ್ಕೊ ಕಾಲನಿಯ ಪರಿಶಿಷ್ಟ ಜಾತಿ ಮೀಸಲು ವಾರ್ಡ್‌ಗೆ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ ಪುರಸಭೆ ಸದಸ್ಯ ಕೊರಗಪ್ಪ, ಸಾಮಾನ್ಯ ಸಭೆಯಲ್ಲಿ ಅಂಗಿ ಕಳಚಿ ಪ್ರತಿಭಟನೆ ನಡೆಸಿದರು. ಅಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು. ನನ್ನ ವಾರ್ಡ್‌ನಲ್ಲಿ ಚರಂಡಿ ನಿರ್ಮಾಣಕ್ಕೆ ಮನವಿ ನೀಡಿದ್ದೆ. ವಿಷಯವೇ ಅಜೆಂಡಾದಲ್ಲಿ ಇಲ್ಲ. ಅನುದಾನವು ಬಿಡುಗಡೆಯಾಗಿಲ್ಲ. ನನ್ನ ಕ್ಷೇತ್ರವನ್ನು ಕಡೆಗಣಿಸಿದ್ದೀರಿ. ಇದನ್ನು ನಾನು ಖಂಡಿಸುತ್ತೇನೆ ಎಂದು ಅಂಗಿ ಬಿಚ್ಚಿ ಪ್ರತಿಭಟನೆ ನಡೆಸಿದರು. ನಾನು ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಅಂದಾಜುಪಟ್ಟಿ ತಯಾರಿಸಲು ಎಂಜಿನಿಯರ್‌ಗೆ ಸೂಚಿಸಿದ್ದೆವು. ಪುರಸಭೆ ಸದಸ್ಯರಾಗಿ ಈ ರೀತಿ ವರ್ತಿಸಿರುವುದು ಖಂಡನಾರ್ಹ ಎಂದು ಅಧ್ಯಕ್ಷರು ಹೇಳಿದರು. ಮಹಿಳಾ ಸದಸ್ಯರೂ ಇರುವ ಈ ಸಭೆಯಲ್ಲಿ ನೀವು ಅಂಗಿ ಬಿಚ್ಚಿದ್ದು ಸರಿ ಅಲ್ಲ ಎಂದು ಉಪಾಧ್ಯಕ್ಷೆ ಸುಜಾತಾ ಶಶಿಧರ್ ಹೇಳಿದರು. ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ್ ಪೂಜಾರಿ ಸೇರಿಂತೆ ಬಿಜೆಪಿಯ ಸದಸ್ಯರು ಆಕ್ಷೇಪಿಸಿದರು. ಇಬ್ಬರ ಮಧ್ಯೆ ಸ್ವಲ್ಪ ಹೊತ್ತು…
ನಟಿ ರಂಭಾ ಅವರು ದಕ್ಷಿಣ ಭಾರತದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ರಂಭಾ ಅವರು ಚಲಾಯಿಸುತ್ತಿದ್ದ ಕಾರು ಅಪಘಾತ ಆಗಿದೆ. ಈ ವೇಳೆ ನಟಿ ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಮಗಳು ಸಶಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವಳಿಗೆ ಚಿಕಿತ್ಸೆ ಮುಂದುವರಿದಿದೆ. ಅಪಘಾತದ ಬಗ್ಗೆ ರಂಭಾ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ. ಮಕ್ಕಳನ್ನು ಶಾಲೆಯಿಂದ ಕರೆತರುವಾಗ ಈ ಅಪಘಾತ ಸಂಭವಿಸಿದೆ. ಕಾರಿನ ಏರ್ಬ್ಯಾಗ್ ತೆಗೆದುಕೊಂಡಿದ್ದರಿಂದ ದೊಡ್ಡ ಮಟ್ಟದ ತೊಂದರೆ ಉಂಟಾಗಿಲ್ಲ. ಕಾರು ಜಖಂಗೊಂಡಿದ್ದು, ಸಶಾಗೆ ಗಾಯಗಳಾಗಿವೆ ಎಂದು ಹೇಳಿದ್ದಾರೆ
ಮಂಗಳೂರು:ಸಾಮಾಜಿಕ ಜಾಲತಾಣದಲ್ಲಿ ತುಳುವರು , ಮತ್ತು ತುಳು ಕಲಾವಿದರ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್ ಹಾಕಿರುವ ಆರೋಪದಲ್ಲಿ ವ್ಯಕ್ತಿಯೋರ್ವನ ಮೇಲೆ ಕೇಸ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಶಿವರಾಜ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ತುಳುವರು ಮತ್ತು ತುಳು ಕಲಾವಿದರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು,ಆತನ ವಿರುದ್ದ ಕ್ರಮ ಕೈಗೊಳ್ಳುವಂತೆ ತುಳುನಾಡು ದೈವಾರಾಧನೆ ಸಂರಕ್ಷಣ ಯುವ ವೇದಿಕೆ ಪೊಲೀಸರಿಗೆ ದೂರು ನೀಡಿದೆ. ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಸೇರಿದಂತೆ ತುಳುವರ ವೇದಿಕೆ ವತಿಯಿಂದ ಪೊಲೀಸ್ ಆಯುಕ್ತ ಶಶಿ ಕುಮಾರ್ ಅವರಿಗೆ ದೂರುನೀಡಲಾಗಿದೆ ಎಂದು ತಿಳಿದು ಬಂದಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಹೊಸ ಜಿಲ್ಲಾಧಿಕಾರಿಯನ್ನು ನೇಮಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ರವಿಕುಮಾರ್ ಅವರು ನೂತನ ಡಿಸಿಯಾಗಲಿದ್ದಾರೆ. ಹಿಂದಿನ ಡಿಸಿ ಕೆವಿ ರಾಜೇಂದ್ರ ಅವರ ವರ್ಗಾವಣೆ ನಂತರ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದ ಡಾ. ಕುಮಾರ್ ಅವರಿಂದ ನೂತನ ಡಿಸಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಎಂ ಆರ್ ರವಿಕುಮಾರ್ ಅವರು 2012ರ ಬ್ಯಾಚಿನ ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿಯಾಗಿದ್ದು ಪ್ರಸ್ತುತ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪುತ್ತೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿ ಕೊಂಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಸಂದೇಶ್ ಕೆ.ಎಸ್, ಬಂಧಿತ ಆರೋಪಿ. ಈ ವ್ಯಕ್ತಿ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ವಿದೇಶದಿಂದ ಬಂದ ಆರೋಪಿಯನ್ನು ಮುಂಬೈಯ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದವ್ರು ವಶಕ್ಕೆ ಪಡೆದುಕೊಂಡು ಪುತ್ತೂರು ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿ ಮುಂಬೈಯ ಸಹರ್ ಪೊಲೀಸ್ ಠಾಣೆಯಿಂದ ವಾರಂಟ್ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರ ಮಾಡಲಾಗಿದೆ. ಕೋರ್ಟ್ ಗೆ ಆರೋಪಿಯನ್ನು ಹಾಜರುಪಡಿಸಲಾಗಿದೆ.
ಮಲ್ಪೆ: ಮಲ್ಪೆ ಸಮೀಪದ ಕಲ್ಮಾಡಿಯಲ್ಲಿ ಇಂದು ನಡೆದ ಬಸ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ದಂಪತಿ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ರಮಾನಂದ ( 35 ) ಮತ್ತು ಅವರ ಪತ್ನಿ ರೀಮ ( 33) ಗಾಯಗೊಂಡ ದಂಪತಿಯಾಗಿದ್ದಾರೆ.ಕಲ್ಮಾಡಿ ಸಮೀಪ ಇವರು ಬೈಕ್ ನಲ್ಲಿ ತಮ್ಮ ಮಗನ ಸಮೇತ ಹೋಗುತ್ತಿದ್ದಾಗ ಖಾಸಗಿ ಬಸ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ರಕ್ತದ ಮಡುವಿನಲ್ಲಿ ರಸ್ತೆಗೆ ಬಿದ್ದಿದ್ದ ಇವರನ್ನು ಆಪದ್ಭಾಂಧವ ಈಶ್ವರ್ ಮಲ್ಪೆ ಉಡುಪಿ ನಗರದ ಆದರ್ಶ್ ಅಶ್ಪತ್ರೆಗೆ ಆಂಬುಲೆನ್ಸ್ ಮೂಲಕ ಸಾಗಿಸಿ ಮಾನವೀಯತೆ ಮೆರೆದರು.ಇವರ ಸಕಾಲಿಕ ನೆರವಿನಿಂದ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೈಕ್ ನಲ್ಲಿದ್ದ ದಂಪತಿ ಪುತ್ರ ಸಣ್ಣ ಪುಟ್ಟ ತರಚುಗಾಯಗಳಿಂದ ಪಾರಾಗಿದ್ದು ಮಲ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.