ಕಡಬ: ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಹಾಗೂ ಬ್ಯಾಗೊಂದು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ಪತ್ತೆಯಾಗಿದೆ. ಬಿಳಿನೆಲೆ ಗ್ರಾಮ ನಿವಾಸಿ ಚಂದ್ರಶೇಖರ್, (39) ಎಂಬವರು ದಿನಾಂಕ:19.04.2024ರಂದು ಬೆಳಿಗ್ಗೆ ನೆರೆ-ಕೆರೆಯ ನಿವಾಸಿಗಳೊಂದಿಗೆ, ಕಾಡಿನಲ್ಲಿ ಕಟ್ಟಿಗೆ ಸೌದೆಯನ್ನು ತರಲು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ತೆರಳುತ್ತಿದ್ದಾಗ, ದಾರಿಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಹಾಗು ಬ್ಯಾಗ್ ಕಂಡುಬಂದಿದ್ದು, ಸ್ವಲ್ಪ ದೂರದಲ್ಲಿ ಮರವೊಂದರಲ್ಲಿ ಬಟ್ಟೆಯೊಂದು ಮರದ ಕೊಂಬೆಯಿಂದ ನೇತಾಡುತ್ತಿರುವುದು ಕಂಡುಬಂದಿದೆ. ಕಾಡು ಪ್ರದೇಶದಲ್ಲಿ ಕೊಳೆತ ಮೃತದೇಹ ದೊರಕಿರುವ ಬಗ್ಗೆ ಸಂಶಯವಿರುವುದಾಗಿ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸು ಠಾಣೆಯಲ್ಲಿ ಯು ಡಿ ಆರ್ : 12/2024 ಕಲಂ:174 (3),(iv) CrPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Author: main-admin
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನಲೆ 17- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಜಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.24 ಬುಧವಾರ ಸಂಜೆ 6 ಗಂಟೆಯಿಂದ ಏ.26 ಶುಕ್ರವಾರ ರಾತ್ರಿ 10 ಗಂಟೆಯವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ/ಬೆಂಬಲಿಗರು ಸೇರಿ 5 ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು, ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿ ನಿರ್ಬಂಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್ಸ್ ಸ್ಟಾಲ್, ಸೈಬರ್ ಕೆಫೆಗಳನ್ನು ನಿಬರ್ಂಧಿಸಿದೆ. ಮತದಾನದ ದಿನದಂದು ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ.ಕಲ್ಲುಗಳನ್ನು, ಕ್ಷಾರ ಪದಾರ್ಥ ಇಲ್ಲವೇ…
ಬಜ್ಪೆ: ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ಗುದ್ದಿ ಬಳಿಕ ಸರಣಿಯಾಗಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಎಡಪದವು ಪೇಟೆಯಲ್ಲಿ ನಡೆದಿದೆ. ಎಡಪದವು ರಾಮಮಂದಿರ ಬಳಿ ಮಣ್ಣಿನ ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತವಾಗಿದ್ದು, ಮಂಗಳೂರು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿ ಈ ಘಟನೆ ಸಂಭವಿಸಿದೆ.ಲಾರಿ ನಿಲ್ಲಿಸಲು ಆಗದೆ ಚಾಲಕ, ಸುಮಾರು 500 ಮೀಟರ್ ದೂರದ ವರೆಗೂ ಲಾರಿಯನ್ನು ನಿಯಂತ್ರಿಸುವ ಪ್ರಯತ್ನ ಮಾಡಿದ್ದಾನೆ. ಆದರೆ,ರಸ್ತೆಯಲ್ಲಿ ಸರಣಿ ಅಪಘಾತ ನಡೆದಿದ್ದು, ಮೊದಲಿಗೆ ಎದುರಿಗೆ ಸಿಕ್ಕ ಸ್ವಿಫ್ಟ್ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸಂಪೂರ್ಣ ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದವರಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಳಿಕ ಮುಂದೆ ಚಲಿಸಿದ ಲಾರಿ, ಎಣ್ಣೆ ಪೂರೈಕೆ ಮಾಡುತ್ತಿದ್ದ ಪಿಕ್ಅಫ್ ವಾಹನಕ್ಕೆ ಡಿಕ್ಕಿಯಾಗಿದ್ದು, ರಸ್ತೆಗೆ ಪಿಕ್ ಅಪ್ ಉರುಳಿ ಬಿದ್ದ ಕಾರಣ ಎಣ್ಣೆ ಪ್ಯಾಕೆಟ್ಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದಿವೆ. ನಂತರ ಎದುರಿನಿಂದ ಬಂದ ಟ್ಯಾಂಕರ್ವೊಂದು, ಲಾರಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ…
ಮಂಗಳೂರು:ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಏ.19 ರ ಗುರುವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎನ್ನಲಾಗಿದೆ. ಯಾದವ್ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದಿದೆ ಪರಿಣಾಮ ಯಾದವ್ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಅದೇ ಮಾರ್ಗದಲ್ಲಿ ಬಂದ ಟ್ಯಾಂಕರ್ ಅವರ ಮೇಲೆ ಹರಿದು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಉಡುಪಿ: ನಗರದಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಉಡುಪಿ-ಅಂಬಾಗಿಲು ಮುಖ್ಯ ರಸ್ತೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಟಿಪ್ಪರ್ ನ ಅಡಿಯಲ್ಲಿ ಬೈಕ್ ಸಿಲುಕಿಕೊಂಡಿದ್ದು, ಅಪಘಾತದ ರಭಸಕ್ಕೆ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತ ಬೈಕ್ ಸವಾರ ಬ್ರಹ್ಮಾವರ ಮಟಪಾಡಿ ಮೂಲದ ಪ್ರಭಾಕರ ಆಚಾರಿ ಎಂದು ಗುರುತಿಸಲಾಗಿದೆ. ಅವರು ಪೆರಂಪಳ್ಳಿಯಿಂದ ಅಂಬಾಗಿಲು ಮುಖ್ಯರಸ್ತೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಸಹಸವಾರ ಗಂಭೀರ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮತದಾನಕ್ಕೆ ಕೆಲ ದಿನಗಳು ಮಾತ್ರ ಬಾಕಿ ಇರುವಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹತ್ತಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಉದ್ಯಮಿಗಳ ಮನೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಚುನಾವಣೆ ಅಕ್ರಮದ ಅನುಮಾನ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆ ಮೇಳೆ ದಾಳಿ ನಡೆಸಿದ್ದರು. ಧಾರವಾಡದಲ್ಲಿ ಉದ್ಯಮಿಯೊಬ್ಬರ ಅಕೌಂಟೆಂಟ್ ಮನೆಯಲ್ಲಿ 18 ಕೋಟಿ ಹಣ ಪತ್ತೆಯಾಗಿತ್ತು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಉದ್ಯಮಿಗಳ ಮನೆಯನ್ನೇ ಗುರಿಯಾಗಿಸಿ ಬೆಂಗಳೂರಿನಲ್ಲಿಯೂ ದಾಳಿ ನಡೆದಿದೆ ಎನ್ನಲಾಗಿದೆ.
ಗದಗ: ನಗರಸಭೆ ಉಪಾಧ್ಯಕ್ಷೆಯ ಪುತ್ರ ಸಹಿತ ನಾಲ್ವರನ್ನು ಹತ್ಯೆಗೈದ ಘಟನೆ ನಗರದ ದಾಸರ ಓಣಿಯಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ. ಹತ್ಯೆಗೀಡಾದವರನ್ನು ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27) ಹಾಗೂ ಕೊಪ್ಪಳ ಮೂಲದ ಸಂಬಂಧಿಕರಾದ ಪರಶುರಾಮ (55) ಪತ್ನಿ ಲಕ್ಷ್ಮೀ (45) ಪುತ್ರಿ ಆಕಾಂಕ್ಷಾ (16) ಎಂದು ಗುರುತಿಸಲಾಗಿದೆ. ಇವರು ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದರು. ರಾತ್ರಿ ವೇಳೆ ಮನೆಯ ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಈ ಮೂವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಮನೆ ಮಂದಿ ಪೊಲೀಸರಿಗೆ ಫೋನಾಯಿಸುತ್ತಿರುವಾಗಲೇ ತಪ್ಪಿಸಿಕೊಂಡಿದ್ದಾರೆನ್ನಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಬಿ ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿದ್ದು, ಶ್ವಾನದಳ, ಫಾರೆನ್ಸಿಕ್ ತಂಡಗಳಿಂದ ಪರಿಶೀಲನೆ ನಡೆಯುತ್ತಿದೆ.
ಉಡುಪಿ ಮತ್ತು ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್‌ಎಚ್) ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ಹೇರೂರು ನಿವಾಸಿ ಕೃಷ್ಣ ಗಾಣಿಗ ಎಂದು ಗುರುತಿಸಲಾಗಿದ್ದು, ಸಂತೆಕಟ್ಟೆಯಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ದುರಸ್ತಿ ಕಾಮಗಾರಿಯಿಂದಾಗಿ ಸಂಚಾರ ವ್ಯತ್ಯಯ ಉಂಟಾಗಿ ರಸ್ತೆಯನ್ನು ಏಕ ಪಥಕ್ಕೆ ಇಳಿಸಿದ ಘಟನೆ ನಡೆದಿದೆ. ದುರದೃಷ್ಟವಶಾತ್ ಎದುರಿನಿಂದ ಬರುತ್ತಿದ್ದ ಲಾರಿಗೆ ಕೃಷ್ಣ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೃಷ್ಣ ಅವರು ಉಡುಪಿ ನಗರ ಪಾಲಿಕೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ಪರದಾಡಿದರು. ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಹಾಡು ಹಗಲೇ ಕಾರ್ಪೊರೇಟರ್ ಪುತ್ರಿ ಯನ್ನು ಭೀಕರವಾಗಿ ಕೊಲೆ ಮಾಡಿದ್ದು,ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿ ನೇಹ ಹಿರೇಮಠ ಎನ್ನುವ ಯುವತಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈಯಲಾಗಿದೆ.ಹುಬ್ಬಳ್ಳಿ ಧಾರವಾಡ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಪುತ್ರಿ ನೇಹ ಎಂದು ಹೇಳಲಾಗುತ್ತಿದೆ.ಇದರಿಂದ ಹುಬ್ಬಳ್ಳಿ ಜನತೆ ಬೆಚ್ಚಿಬಿದ್ದಿದ್ದಾರೆ ಹಾಡು ಹಗಲೇ ಕಾಲೇಜಿನಲ್ಲಿ ಈ ಒಂದು ಭೀಕರ ಹತ್ಯೆ ನಡೆದಿದೆ. ಚಾಕುವಿನಿಂದ ಇರಿದು ನೇಹಾ ಹಿರೇಮಠ ಎನ್ನುವ ಯುವತಿಯನ್ನು ಕೊಲೆ ಮಾಡಲಾಗಿದೆ.ಪಾಲಿಕೆಯ ಸದಸ್ಯರಾಗಿರುವ ನಿರಂಜನ ಹಿರೇಮಠ ಪುತ್ರಿ ನೇಹಾ ಎಂದು ಹೇಳಲಾಗುತ್ತಿದ್ದು ಹಾಡು ಹಗಲೇ ಕಾಲೇಜಿನಲ್ಲಿ ಘೋರ ದುರಂತ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿಕೆಯ ನೀಡಿದರು.
ಕಾರ್ಕಳ: ಕ್ರೆಡಿಟ್ ಕಾರ್ಡ್ ಅಕ್ಟಿವ್ ಮಾಡುವ ಹೆಸರಿನಲ್ಲಿ ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳದ ಮೂರ್ತಿ ಕೆ.ಆರ್ (34) ಎಂಬವರಿಗೆ ಕ್ರೆಡಿಟ್ ಕಾರ್ಡ್ ಅಕ್ಟಿವ್ ಮಾಡುವ ಬಗ್ಗೆ ಲಿಂಕ್ ಬಂದಿದ್ದು, ಅದನ್ನು ನಂಬಿದ ಮೂರ್ತಿ, ಲಿಂಕ್ ಒತ್ತಿದ್ದರು. ಅಗ ಒಟಿಪಿ ಬಂದಿದ್ದು ಕ್ರೆಡಿಟ್ ಕಾರ್ಡ್‌ನಿಂದ 1,67,657ರೂ ಹಣ ಕಡಿತವಾಯಿತು. ಈ ಮೂಲಕ ಮೂರ್ತಿ ಅವರಿಗೆ ವಂಚನೆ ಎಸಗಿರುವ ಬಗ್ಗೆ ದೂರಲಾಗಿದೆ.










