Author: main-admin

ಮಂಗಳೂರು,: ಚಿತ್ರಕಲೆಯನ್ನು ಯುವಜನಾಂಗಕ್ಕೆ ಧಾರೆಯೆರೆದ ಶ್ರೇಷ್ಠ ಕಲಾವಿದರಲ್ಲಿ ಒಬ್ಬರಾಗಿರುವ ಬಿ.ಜಿ. ಮೊಹಮ್ಮದ್‌ ಅವರು ಈ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅನನ್ಯವಾದುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ನಗರದ ಕುದ್ಮುಲ್ ರಂಗರಾವ್‌ ಪುರಭವನದಲ್ಲಿ ಶುಕ್ರವಾರ ಬಿ.ಜಿ. ಮೊಹಮ್ಮದ್‌ ಅವರ ಜನ್ಮ ಶತಮಾನೋತ್ಸವ ಸಮಾರಂಭ ಮತ್ತು ಚಿತ್ರಕಲಾ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶ್ರೇಷ್ಠ ಚಿತ್ರಕಲಾವಿದ ಬಿ.ಜಿ.ಮೊಹಮ್ಮದ್‌ ಅವರ ಜನ್ಮ ಶತಮಾನೋತ್ಸವದಲ್ಲಿ ಭಾಗವಹಿಸುತ್ತಿರುವುದು ನನಗೆ ಸಂತಸ ತಂದಿದೆ. ಅವರ ಗೌರ ವಾರ್ಥ ಅಂಚೆ ಇಲಾಖೆ ವಿಶೇಷ ಲಕೋಟೆ ಬಿಡುಗಡೆ ಮಾಡುತ್ತಿರು ವುದು ಹೆಮ್ಮೆಯ ಸಂಗತಿ ಎಂದರು.ಸ್ಮರಣಸಂಚಿಕೆಯನ್ನು ಬಿಡುಗಡೆಗೊಳಿಸಿದ ಮಾತನಾಡಿದ ಮಂಗಳೂರು ವಿ.ವಿ. ಕುಲಪತಿ ಪ್ರೊ| ಪಿ.ಎಸ್‌. ಯಡಪಡಿತ್ತಾಯ, ಚಿತ್ರಕಲಾವಿದರಾಗಿ ಅಪೂರ್ವ ಕಲಾಕೃತಿಗಳನ್ನು ನೀಡಿರುವ, ಅಸಂಖ್ಯಾಕ ಚಿತ್ರ ಕಲಾ ವಿದರನ್ನು ರೂಪಿಸಿದ ಮೊಹಮ್ಮದ್‌ ಉನ್ನತ ಸಾಧಕ ಎಂದಿದ್ದಾರೆ. ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್‌ ಮಾಸ್ಟರ್‌ ಜನರಲ್‌ ಎಸ್‌.ರಾಜೇಂದ್ರ ಕುಮಾರ್‌ ವಿಶೇಷ ಅಂಚೆ ಲಕೋಟೆ ಬಿಡುಗಡೆ ಮಾಡಿದ್ದು, ಶಾಸಕ ವೇದವ್ಯಾಸ ಕಾಮತ್‌, ವಿಧಾನ ಪರಿಷತ್‌ ಸದಸ್ಯರಾದ…

Read More

ಬೆಂಗಳೂರು: ಆರೋಗ್ಯ ಸೇವೆಯಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದಂತ ರಾಜ್ಯ ಸರ್ಕಾರದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ನಮ್ಮ ಕ್ಲಿನಿಕ್ ( Namma Clinic ) ಆರಂಭಿಸಲಾಗಿತ್ತು. ಈ ನಮ್ಮ ಕ್ಲಿನಿಕ್ ಗಳನ್ನು ರಾಜ್ಯಾಧ್ಯಂತ ವಿಸ್ತರಣೆ ಮಾಡಲಾಗುತ್ತಿದೆ. ಈ ಮೂಲಕ ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ( Minister Dr K Sudhakar ), ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾರಂಭಿಸಲಾಗಿರುವಂತ ನಮ್ಮ ಕ್ಲಿನಿಕ್ ಕೇಂದ್ರಗಳನ್ನು ರಾಜ್ಯಾಧ್ಯಂತ ಶೀಘ್ರದಲ್ಲೇ ಪ್ರಾರಂಭ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 438 ನನ್ನೂರ ನಮ್ಮ ಕ್ಲಿನಿಕ್ ಯೋಜನೆಗೆ ಮುಂದಿನ ತಿಂಗಳು ಚಾಲನೆ ನೀಡಲಾಗುವುದು. ನಗರಸಭೆ ಹಾಗೂ ನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆರ್ಥಿಕವಾಗಿ ಹಿಂದುಳಿದ, ಬಡತನ ರೇಖೆಗಿಂತ ಕೆಳಗಿರುವ ಹಾಗೂ ಕೊಳಚೆ ಪ್ರದೇಶದಲ್ಲಿ ವಾಸಿಸುವ ಜನರ ಆರೋಗ್ಯದ ಹಿತರಕ್ಷಣೆ ದೃಷ್ಟಿಯಿಂದ ಈ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ಹೇಳಿದ್ದಾರೆ. ಇನ್ನು ಮಹಿಳೆಯರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ನಗರ ಆರೋಗ್ಯ ಕೇಂದ್ರಗಳಲ್ಲಿ…

Read More

ಮಂಗಳೂರು: ಏರ್ ಪೋರ್ಟ್ ಗೆ ತೆರಳಲು ಬಸ್ ಇಲ್ಲದ ಕಾರಣ ಪ್ರಯಾಣಿಕರು ಇತರರ ವಾಹನ, ಅಥವಾ ಖಾಸಗಿ ವಾಹನಗಳಿಗೆ ಮೊರೆ ಹೋಗುವಂತಾಗಿತ್ತು. ಆದರೆ ಇನ್ಮುಂದೆ ಈ ಸಮಸ್ಯೆ ನಿವಾರಣೆಯಾಗಲಿದ್ದು, ಮಂಗಳೂರು ಮತ್ತು ಮಣಿಪಾಲದಿಂದ ವಿಮಾನ ನಿಲ್ದಾಣಕ್ಕೆ ಕೆಎಸ್ಸಾರ್ಟಿಸಿ ಬಸ್‌ ಸಂಚಾರ ಅ. 31ರಂದು ಆರಂಭಗೊಳ್ಳಲಿದೆ. ಸೇವೆಗಳನ್ನು ಪರಿಚಯಿಸಲು ಮೈಸೂರಿನಿಂದ ನಾಲ್ಕು ವೋಲ್ವೋ ಬಸ್‌ಗಳನ್ನು ಇಲ್ಲಿಗೆ ತರಲಾಗಿದ್ದು ,ನಿಗದಿಯಂತೆ ಅ. 27ರಂದು ಸಂಚಾರ ಆರಂಭಗೊಳ್ಳಬೇಕಿತ್ತು. ಆದರೆ ಕೆಲವು ತಾಂತ್ರಿಕ ಕಾರಣದಿಂದ ವಿಳಂಬವಾಗಿದ್ದು ಅ. 31ರಿಂದ ಈ ಸೇವೆ ಆರಂಭಗೊಳ್ಳಲಿದೆ.ಈಗಾಗಲೇ ಬಸ್ ತಾತ್ಕಾಲಿಕ ವೇಳಾಪಟ್ಟಿ ತಯಾರಿಸಲಾಗಿದೆ. ಮಂಗಳೂರು ರೈಲು ನಿಲ್ದಾಣ ದಿಂದ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 6.30, 8.45, 11.10, ಮಧ್ಯಾಹ್ನ 3, ಸಂಜೆ 5.15, 7.30ಕ್ಕೆ ಹೊರಡಲಿದೆ. ದರವನ್ನು ರೂ. 100ಕ್ಕೆ ನಿಗದಿಪಡಿಸಲಾಗಿದೆ.ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ ಬೆಳಗ್ಗೆ 7.40, 10, ಮಧ್ಯಾಹ್ನ 12.20, ಸಂಜೆ 4.05, 6.25, ರಾತ್ರಿ 08.45ಕ್ಕೆ ಹೊರಡಲಿದೆ. ಜ್ಯೋತಿ, ಲಾಲ್‌ಬಾಗ್‌, ಕುಂಟಿಕಾನ, ಕಾವೂರು ಮೂಲಕ ವಿಮಾನ ನಿಲ್ದಾಣಕ್ಕೆ…

Read More

ಮೈಸೂರು : ರಾಜ್ಯ ಸರ್ಕಾರವು ಸರ್ಕಾರಿ ವೈದ್ಯರಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಲು ಮುಂದಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ವೈದ್ಯರ ಹಾಜರಾತಿ ಮೇಲೆ ನಿಗಾ ಇಡಲು ಮತ್ತು ಸರ್ಕಾರಿ ವೈದ್ಯರು ಖಾಸಗಿಯಾಗಿ ಕಾರ್ಯ ನಿರ್ವಹಿಸುವುದಕ್ಕೆ ಕಡಿವಾಣ ಹಾಕಲು ಬಯೋಮೆಟ್ರಿಕ್ ಹಾಜರಾತಿ ಪದ್ಧತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಚಿಂತಿಸಲಾಗಿದೆ ಎಂದು ಹೇಳಿದ್ದಾರೆ. ಸರ್ಕಾರಿ ವೈದ್ಯರು ಖಾಸಗಿಯಾಗಿ ಪ್ರಾಕ್ಟೀಸ್ ಮಾಡುವುದಕ್ಕೆ ಕಡಿವಾಣ ಹಾಕಲಾಗುವುದು, ಇದಕ್ಕಾಗಿ ಬಯೋಮೆಟ್ರಿಕ್ ಪದ್ಧತಿ ಜಾರಿಗೆ ತರಲಾಗುವುದು. ಆಗ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆ ವೈದ್ಯರು ಬಯೋಮೆಟ್ರಿಕ್ ಮಾಡಬೇಕು ಎಂದು ಹೇಳಿದ್ದಾರೆ.

Read More

ಉಡುಪಿ:ಉಡುಪಿ ಜಿಲ್ಲೆಯಲ್ಲಿ ಇಂದು ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿ ಭಾಗಿಯಾದರು. ಮಲ್ಪೆಯ ಸಮುದ್ರ ಮಧ್ಯದಲ್ಲಿ ಸುಮಾರು 145 ಬೋಟು ಗಳಲ್ಲಿ 4000 ಕ್ಕೂ ಅಧಿಕ ಮೀನುಗಾರರು ಪರ್ಸಿನ್ ಬೋಟುಗಳ ತೆರಳಿ ಕನ್ನಡ ಗೀತೆಗಳ ಗಾಯನ ಕಾಯಕ್ರಮದಲ್ಲಿ ಭಾಗಿಯದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಉಡುಪಿ ಮತ್ತು ದ.ಕನ್ನಡ ಮೀನು ಮಾರಾಟ ಫೆಡರೇಷನ್ ಆಧ್ಯಕ್ಷ ಯಶ್ ಪಾಲ್ ಸುವರ್ಣ, ಕನ್ನಡ ಮತ್ತು ಸಂಸ್ಕೃತಿ ಇಲಖೇ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು , ಮೀನುಗಾರಿಕಾ ಸಂಘಟನೆಗಳ ಪ್ರತಿನಿಧಿಗಳು ಕನ್ನಡ ಬಾವುಟದಿಂದ ಅಲಂಕರಿಸಿದ ಬೋಟ್ ನಲ್ಲಿ ಸಂಗೀತ ಕಲಾವಿದರೊಂದಿಗೆ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಿಲ್ಲಾಧಿಕಾರಿಗಳು ಕನ್ನಡ ಗೀತೆಗಳಿಗೆ ನೃತ್ಯ ಮಾಡಿ ಸಂಭ್ರಮಿಸಿದರು.ಮಣಿಪಾಲ ಗ್ರೀನ್ಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ 5000 ಕ್ಕೂ ಮಂದಿ ಡಾಕ್ಟರ್‌ಗಳು ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಬಿಳಿ ಕೋಟ್ ಹಾಗೂ ಸ್ಕೆತೋಸ್ಕೋಪ್ ಧರಿಸಿ ಭಾಗವಹಿಸಿದ್ದು, ಶಾಸಕ ರಘುಪತಿ ಭಟ್ ಭಾಗವಹಿಸಿದ್ದರು. ಜಿಲ್ಲಾ ಪೊಲೀಸ್…

Read More

ಕುಂದಾಪುರ: ತಲ್ಲೂರಿನಲ್ಲಿ ಅಕ್ಟೋಬರ್ 27 ರ ಗುರುವಾರದಂದು 13 ವರ್ಷದ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಬಾಲಕಿಯನ್ನು ಅನುಶ್ರೀ ಎಂದು ಗುರುತಿಸಲಾಗಿದ್ದು, ಅರುಣ್ ಕುಮಾರ್ ಶೆಟ್ಟಿ ಮತ್ತು ಭಾರತಿ ದಂಪತಿಯ ಪುತ್ರಿ. ತಂದೆ ಅರುಣ್ ಕುಮಾರ್ ಶೆಟ್ಟಿ ಕುಂದಾಪುರದಲ್ಲಿ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರೆ, ತಾಯಿ ಭಾರತಿ ಹಕ್ಲಾಡಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಯಾರಾದರೂ ತನ್ನನ್ನು ಕರೆದಿದ್ದಾರೆಯೇ ಎಂದು ನೋಡಲು ಎದ್ದಾಗ ಅನುಶ್ರೀ ಇದ್ದಕ್ಕಿದ್ದಂತೆ ಕುಸಿದು ಪ್ರಜ್ಞೆ ಕಳೆದುಕೊಂಡಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಮಣಿಪಾಲ ಆಸ್ಪತ್ರೆಯಲ್ಲಿ ಅನುಶ್ರೀ ಅವರ ಮರಣೋತ್ತರ ಪರೀಕ್ಷೆ ಕೂಡ ನಡೆಸಲಾಯಿತು. ಆದರೆ, ವರದಿಯ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಅನುಶ್ರೀ ಹಟ್ಟಿಅಂಗಡಿ ಸಿದ್ದಿವಿನಾಯಕ ವಸತಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದು, ಪಠ್ಯೇತರ ಚಟುವಟಿಕೆಗಳಲ್ಲೂ ಮುಂಚೂಣಿಯಲ್ಲಿದ್ದರು. ಅನುಶ್ರೀ ಅವರ ಕಣ್ಣುಗಳನ್ನು ದಾನ ಮಾಡಲಾಗಿದ್ದು, ಗುರುವಾರ ರಾತ್ರಿ ಭಾರತಿ ಅವರ ತಾಯಿಯ ಮನೆಯಲ್ಲಿ ಅವರ ಅಂತ್ಯಕ್ರಿಯೆ ನಡೆಸಲಾಯಿತು. ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಹಾಗೂ ಮಾಜಿ ಶಾಸಕ ಗೋಪಾಲ ಪೂಜಾರಿ ಮೃತರ…

Read More

ಮಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಬಸ್ಸೊಂದು ನಿಲ್ಲಿಸಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಇಂದು ಬೆಳಗ್ಗೆ ನಗರದ ವೆಲೆನ್ಸಿಯಾದಲ್ಲಿ ನಡೆದಿದೆ. ಬಸ್ ಢಿಕ್ಕಿ ಹೊಡೆದ ರಭಸಕ್ಕೆ ಮೊಟ್ಟೆ ಸಾಗಾಟದ ವಾಹನ ಸುಮಾರು 15 ಅಡಿಗಳಷ್ಟು ದೂರ ತಳ್ಳಲ್ಪಟ್ಟಿದ್ದು, ಮೊಟ್ಟೆಗಳೆಲ್ಲ ಒಡೆದು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಮಂಗಳಾದೇವಿ ಕಡೆಯಿಂದ ಬರುತ್ತಿದ್ದ ಎರಡು ಖಾಸಗಿ ಬಸ್ ಗಳು ಒಟ್ಟೊಟ್ಟಿಗೆ ಬಂದಿದ್ದು, ವೆಲೆನ್ಸಿಯಾದ ಸರ್ಕಲ್ ಬಳಿ ತಲುಪಿದಾಗ ಸಿಟಿ ಬಸ್ ಓವರ್ ಟೇಕ್ ಮಾಡಲು ಮುಂದಾಗಿದೆ. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಯಲ್ಲಿ ನಿಲ್ಲಿಸಿ ಅಂಗಡಿಗೆ ಮೊಟ್ಟೆ ಪೂರೈಕೆ ಮಾಡುತ್ತಿದ್ದ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ಆ ವಾಹನದಲ್ಲಿದ್ದ ಮೊಟ್ಟೆಗಳಲ್ಲೇ ಒಡೆದು ಹೋಗಿದ್ದು, ರಸ್ತೆಯಲ್ಲಿ ಮೊಟ್ಟೆಯ ರಸ ನೀರಿನಂತೆ ಹರಿದಿದೆ. ಬಸ್ ಢಿಕ್ಕಿ ಹೊಡೆದ ರಭಸಕ್ಕೆ ಮೊಟ್ಟೆ ಸಾಗಾಟದ ವಾಹನ ಎದುರಿದ್ದ ಗೂಡ್ಸ್ ಟೆಂಪೊ ಹಾಗೂ ಬೈಕೊಂದಕ್ಕೂ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಸ್ಥಳಕ್ಕೆ ಟ್ರಾಫಿಕ್…

Read More

ಮಂಗಳೂರು: ಕಾಂಗ್ರೆಸ್‌ ಮಾಜಿ ಕಾರ್ಪೋರೇಟರ್‌ ಪ್ರತಿಭಾ ಕುಳಾಯಿ ಅವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕಾರಕ ಪೋಸ್ಟ್ ಹಾಕಿದ್ದ ಪ್ರಕರಣದ ಆರೋಪಿಗಳಲ್ಲಿ ಓರ್ವನಾಗಿರುವ ಕೆ. ಆರ್. ಶೆಟ್ಟಿ ಅಡ್ಯಾರ್ ಪದವು ಗುರುವಾರ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ಸುರತ್ಕಲ್‌ನಲ್ಲಿರುವ ಟೋಲ್‌ಗೇಟ್‌ನಲ್ಲಿ ಅಕ್ರಮವಾಗಿ ಟೋಲ್‌ ವಸೂಲಿ ಮಾಡಲಾಗುತ್ತಿದೆ. ಟೋಲ್‌ಗೇಟ್‌ ಅನ್ನು ತೆರವುಗೊಳಿಸಬೇಕೆಂದು ಅಕ್ಟೋಬರ್ 18ರಂದು ಬೃಹತ್ ಹೋರಾಟ ನಡೆದಿತ್ತು. ಈ ವೇಳೆ, ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟ ಸಮಿತಿ ಸದಸ್ಯರೂ ಆದ ಪ್ರತಿಭಾ ಕುಳಾಯಿ ವಿರುದ್ಧ ಹೋರಾಟದ ದೃಶ್ಯಾವಳಿ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕಾರಕ ಪೋಸ್ಟ್ ಮಾಡಿರುವ ಆರೋಪ ಇವರ ಮೇಲಿದೆ.ವಕೀಲರ ಮೂಲಕ ಕೋರ್ಟ್ ಗೆ ಹಾಜರಾಗಿದ್ದ ಆತನನ್ನು ನ್ಯಾಯಾಲಯ ಒಂದು ದಿನದ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಕೆ. ಆರ್. ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಪೋಸ್ಟ್ ಗೆ ಮತ್ತೋರ್ವ ಆರೋಪಿ ಶ್ಯಾಮ ಸುದರ್ಶನ ಭಟ್ ಹೊಸಮೂಲೆ ಅಶ್ಲೀಲ ಕಮೆಂಟ್ ಹಾಕಿದ್ದು, ಸದ್ಯ ತಲೆಮರೆಸಿಕೊಂಡಿದ್ದಾನೆ.ಮಾನಹಾನಿಕಾರಕ ಪೋಸ್ಟ್ ವಿರುದ್ದ ಪ್ರತಿಭಾ ಕುಳಾಯಿ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌…

Read More

ಮಂಗಳೂರು: ಇಂದಿನಿಂದ (ಅಕ್ಟೋಬರ್ 28) ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಮುಷ್ಕರವನ್ನು ನಡೆಸುವುದಾಗಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಈ ಹಿಂದೆ ಕರೆನೀಡಿದ್ದು, ಆದರೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸುರತ್ಕಲ್ ಠಾಣಾ ವ್ಯಾಪ್ತಿಯ ಟೋಲ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಇಂದು ಬೆಳಿಗ್ಗೆ 6ರಿಂದ ನವಂಬರ್ 3ರ ಸಂಜೆ 6 ಗಂಟೆಯ ತನಕ ಸುರತ್ಕಲ್ ಪೊಲೀಸ್ ಠಾಣೆಯ ಟೋಲ್ ಗೇಟ್ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಸುರಕ್ಷತೆಯ ದೃಷ್ಠಿಯಿಂದ ಹಾಗೂ ಟೋಲ್ ಗೇಟ್ ಗೆ ರಕ್ಷಣೆ ನೀಡುವ ದೃಷ್ಟಿಯಿಂದ ಈ ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.ಅ.25 ರಂದು ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಪತ್ರಿಕಾಗೋಷ್ಠಿಯಲ್ಲಿ ಕರೆದು, ಟೋಲ್ ಗೇಟ್ ತೆರವಿಗೆ ಅಕ್ಟೋಬರ್ 18 ರಂದು ನಡೆದ ಹೋರಾಟಕ್ಕೆ ಜನರು ಬೆಂಬಲಿಸಿದ್ದಾರೆ.. ಅಂದು ನಾವು ಟೋಲ್…

Read More

ಬೆಳ್ತಂಗಡಿ: ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ, ಜನಪ್ರತಿನಿಧಿಗಳ ಕಾರ್ಯವನ್ನು ಖಂಡಿಸಿ ಸಮಾನ ಮನಸ್ಕ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಿ ವಿನೂತನ ಪ್ರತಿಭಟನೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬುಧವಾರ ಸಂಜೆ ಬೆಳ್ತಂಗಡಿ ಸಮೀಪದ ಲಾಯಿಲ ಗ್ರಾಮದ ರಾಘವೇಂದ್ರ ಮಠದ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಲಾಯಿತು. ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ, ಸಿಪಿಐ(ಎಂ) ನಾಯಕ ಶೇಖರ್ ಲಾಯಿಲ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗುಂಡಿಗಳಲ್ಲಿ ದಿನನಿತ್ಯ ಪ್ರಯಾಣಿಸುವ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಕಣ್ಣು ಕಾಣದಿದ್ದು ದೀಪ ಹಚ್ಚಿ ಗುಂಡಿ ಕಾಣುವಂತೆ ಮಾಡುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ ಎಂದರು. ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ನಾಯಕ ಸಂದೀಪ್ ಎಸ್ ಅಳದಂಗಡಿ ಮಾತನಾಡಿ ನಮ್ಮ ತಾಲೂಕಿನ ಅವ್ಯವಸ್ಥೆ ಇಡೀ ರಾಜ್ಯದಲ್ಲಿಯೇ ಕುಖ್ಯಾತಿ ಪಡೆದಿದೆ. ರಾಜ್ಯ ಸಂಪುಟ ಸಚಿವ ಸುನೀಲ್ ಕುಮಾರ್ ಇತ್ತೀಚಿಗೆ ರಸ್ತೆ ಬದಲಿಸಿ ಪ್ರಯಾಣಿಸಿರುವುದು ಶಾಸಕ,…

Read More