ಬೆಂಗಳೂರು: ಹಿರಿಯ ನಟ ದ್ವಾರಕೀಶ್ (81) ವಿಧೀವಶರಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ. ದ್ವಾರಕೀಶ್ 1942ರ ಆಗಸ್ಟ್ 19ರಂದು ಜನಿಸಿದರು. ಅವರು ಮೈಸೂರಿನ ಇಟ್ಟಿಗೆಗೂಡಿನಲ್ಲಿ ಬೆಳೆದರು. ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಶಾರದಾ ವಿಲಾಸ್ ಮತ್ತು ಬನುಮಯ್ಯ ಅವರ ಶಾಲೆಯಲ್ಲಿ ಪಡೆದರು ಮತ್ತು ಅವರು ಸಿಪಿಸಿ ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಪಡೆದರುಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ, ದ್ವಾರಕೀಶ್ ಮತ್ತು ಅವರ ಸಹೋದರ ಮೈಸೂರಿನ ಗಾಂಧಿ ಚೌಕದಲ್ಲಿ “ಭಾರತ್ ಆಟೋ ಸ್ಪೇರ್ಸ್” ಎಂಬ ಆಟೋಮೋಟಿವ್ ಬಿಡಿಭಾಗಗಳ ವ್ಯವಹಾರವನ್ನು ಪ್ರಾರಂಭಿಸಿದರು. ಅವರು ನಟನೆಯತ್ತ ಬಲವಾಗಿ ಆಕರ್ಷಿತರಾದರು ಮತ್ತು ಆಗಾಗ್ಗೆ ತಮ್ಮ ಸೋದರಮಾವ, ಪ್ರಸಿದ್ಧ ಚಲನಚಿತ್ರ ನಿರ್ದೇಶಕ ಹುಣಸೂರು ಕೃಷ್ಣಮೂರ್ತಿ ಅವರನ್ನು ಚಲನಚಿತ್ರಗಳಲ್ಲಿ ನಟಿಸಲು ಅವಕಾಶ ನೀಡುವಂತೆ ಕೇಳಿಕೊಳ್ಳುತ್ತಿದ್ದರು ಎನ್ನಲಾಗಿದೆ. 1963 ರಲ್ಲಿ, ಅವರು ವ್ಯವಹಾರವನ್ನು ತೊರೆದು ಚಲನಚಿತ್ರಗಳಲ್ಲಿ ನಟಿಸಲು ನಿರ್ಧರಿಸಿದರು.
Author: main-admin
ಮೂಡುಬಿದಿರೆ: ಮೆದುಳು ಜ್ವರ ಉಲ್ಪಣಗೊಂಡ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೂಡುಬಿದಿರೆ ನಿವಾಸಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮೃತ್ಯು.ಸ್ವಸ್ತಿ ಶೆಟ್ಟಿ ಅವರು ಶಿರ್ತಾಡಿ ಮೌಂಟ್ ಕಾರ್ಮೆಲ್ ಹೈಸ್ಕೂಲ್ ನಲ್ಲಿ ನ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು.ಸ್ವಸ್ತಿ ಅವರು ತ್ರೋಬಾಲ್ ಆಟಗಾರ್ತಿಯಾಗಿದ್ದು, ಉತ್ತಮ ನೃತ್ಯಪಟುವೂ ಆಗಿದ್ದರು. ತಂದೆ ಸತೀಶ್ ಶೆಟ್ಟಿ ಗೋವಾದಲ್ಲಿ ಉದ್ಯೋಗದಲ್ಲಿದ್ದು ತಾಯಿ ಸರಿತಾ ಶೆಟ್ಟಿ ಶಿರ್ತಾಡಿ ನವಮೈತ್ರಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಉದ್ಯೋಗಿಯಾಗಿದ್ದಾರೆ. ಮೂಲತಃ ವಾಲ್ಪಾಡಿಯವರಾದ ಇವರು ಸದ್ಯ ಮೂಡುಬಿದಿರೆಯಲ್ಲಿ ವಾಸಿಸುತ್ತಿದ್ದಾರೆ.
ಬಂಟ್ವಾಳ : ಅಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಸಂಭವಿಸಿದೆ. ಗಾಯಾಳು ಸ್ಕೂಟರ್ ಸವಾರನನ್ನು ಸಫ್ಘಾನ್ ಎಂದು ಗುರುತಿಸಲಾಗಿದೆ. ಸಫ್ಘಾನ್ ಸ್ಕೂಟರಿನಲ್ಲಿ ಸಹಸವಾರನಾಗಿ ತನ್ನ ಸ್ನೇಹಿತ ಮುಝಮಿಲ್ ಎಂಬಾತನನ್ನು ಕುಳ್ಳಿರಿಸಿಕೊಂಡು ತೆರಳುತ್ತಿದ್ದಾಗ ಮಾರಿಪಳ್ಳ ಎಂಬಲ್ಲಿ ಅಬ್ದುಲ್ ಲತೀಫ್ ಎಂಬವರು ಚಲಾಯಿಸಿಕೊಂಡು ಬಂದ ಅಟೋ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಿಂದ ಸ್ಕೂಟರ್ ಸಮೇತ ಸವಾರರು ರಸ್ತೆಗೆ ಬಿದ್ದಿದ್ದು, ಸವಾರ ಸಫ್ಘಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಸಫ್ಘಾನ್ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಯುನಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸಹಸವಾರ ಮುಝಮಿಲ್ ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು:ದ.ಕ. ಲೋಕಸಭಾ ಕ್ಷೇತ್ರದಲ್ಲಿ 6,053 ಹಿರಿಯ ನಾಗರಿಕರು ಹಾಗೂ 1,957 ವಿಶೇಷ ಚೇತನರಿಗೆ ಅಂಚೆ ಮತ ಪತ್ರದ ಮೂಲಕ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಚುನಾವಣಾಧಿಕಾರಿಗಳೂ ಆಗಿರುವ ದ.ಕ. ಜಿಲ್ಲಾಧಿಕಾರಿ ಮುಟ್ಟೆ ಮುಗಿಲನ್ ಎಂ.ಪಿ. ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತ ಪತ್ರದ ಮೂಲಕ ಮತದಾನ ಮಾಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಮಾಹಿತಿ ನೀಡುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಭಾರತೀಯ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯಲ್ಲಿ 85 ವರ್ಷ ಮೇಲ್ಪಟ್ಟ 6,053 ಮತದಾರರಿಗೆ ಹಾಗೂ ಶೇ.40ಕ್ಕಿಂತ ಮೇಲ್ಪಟ್ಟು ಅಂಗವೈಕಲ್ಯ ಹೊಂದಿರುವ 1,957 ಮತದಾರರಿಗೆ ಮನೆಮನೆ ಭೇಟಿ ಮಾಡಿ ಅಂಚೆ ಮತ ಪತ್ರದ ಮೂಲಕ ಮತದಾನ ಸೌಲಭ್ಯ ಒದಗಿಸಿದೆ ಎಂದರು. ಅಂಚೆ ಮತಪತ್ರಗಳ ವಿತರಣೆಗಾಗಿ ಈಗಾಗಲೇ ಪೋಲಿಂಗ್ ಅಧಿಕಾರಿಗಳ ತಂಡ ರಚಿಸಲಾಗಿದ್ದು ಈ ತಂಡಗಳು ಕಾರ್ಯನಿವಹಿಸುವ ಬಗ್ಗೆ ನಿಗದಿಪಡಿಸಲಾದ ದಿನಾಂಕ, ಸಮಯದ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ…
ವಿಟ್ಲ: ಪುಣಚ ಗ್ರಾಮದ ಬರೆಂಜ – ಕುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 7ಮಂದಿಗೆ ಗಾಯವಾಗಿದೆ.ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದ ಸಮಯ ತಳಭಾಗದಿಂದ ನೀಡಿದ ರಾಡ್ ಜಾರಿದ ಹಿನ್ನಲೆಯಲ್ಲಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಕುಸಿದು ಬಿದ್ದಿದೆ.ಸೇತುವೆ ಸಾಮಾಗ್ರಿಯ ನಡುವಿನಲ್ಲಿ ಓರ್ವ ವ್ಯಕ್ತಿ ಸಿಕ್ಕಿ ಹಾಕಿಕೊಂಡಿದ್ದು, ಆರು ಮಂದಿಯನ್ನು ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. . ಸ್ಥಳದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಕಾರ್ಯಾಚರಣೆಯ ಮೂಲಕ ರಕ್ಷಣೆ ಮಾಡಲಾಗಿದೆ.
ಮಂಗಳೂರು: ಪೊಲೀಸರು ಹಿಂಬಾಲಿಸುತ್ತಿದ್ದವೇಳೆ ಕಾರು ಮಗುಚಿ ಬಿದ್ದು ವಿದ್ಯಾರ್ಥಿ ಸಾವಿಗೀಡಾದ ಘಟನೆ ಬಗ್ಗೆ ಹೈಕೋರ್ಟ್ ಗಡಿ ರಾಜ್ಯ ಕೇರಳ ಸರಕಾರದಿಂದ ಸ್ಪಷ್ಟಿಕರಣ ಕೇಳಿದೆ. ಕಳೆದ ವರ್ಷ ಆ.25ರಂದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಂಗಡಿಮೊಗರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿ ಕುಂಬಳೆ ಪೇರಾಲ್ ಕಣ್ಣೂರು ನಿವಾಸಿ (17) ಶಾಲೆಯಲ್ಲಿ ನಡೆದ ಓಣಂ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ನೇಹಿತರ ಜತೆ ಕಾರಿನಲ್ಲಿಮರಳುತ್ತಿದ್ದರು. ಆಗ ಆ ದಾರಿಯಾಗಿ ಬಂದ ಪೊಲೀಸರು ಯಾವುದೋ ಅನುಮಾನದಿಂದ ಆ ಕಾರನ್ನು ತಮ್ಮ ವಾಹನದಲ್ಲಿ ಹಿಂಬಾಲಿಸಿರುವುದಾಗಿ ಆರೋಪಿಸಲಾಗಿತ್ತು. ಆ ವೇಳೆ ಆ ಕಾರು ಅಪಘಾತಕ್ಕೀಡಾಗಿ ಅದರಲ್ಲಿದ್ದ ಫರ್ಹಾಸ್ ಗಂಭೀರ ಗಾಯಗೊಂಡು ಬಳಿಕ ಮಂಗಳೂರಿನ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವು ಸಂಭವಿಸಿತ್ತು. ಆಸ್ಪತ್ರೆಗೆ ಚಿಕಿತ್ಸೆ ಆ.29ರಂದು ಆ ಘಟನೆಗೆ ಸಂಬಂಧಿಸಿ ಕಾರನ್ನು ಹಿಂಬಾಲಿಸಿದ ಪೊಲೀಸರ ವಿರುದ್ಧ ಇಲಾಖಾ ಮಟ್ಟದ ತನಿಖೆ ನಡೆಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮಾತ್ರವಲ್ಲದೆ, ನಷ್ಟ ಪರಿಹಾರವನ್ನೂ ನೀಡಬೇಕೆಂದು ಕೋರಿ ಮೃತ ಫರ್ಹಾಸ್‌ನ…
ಬ್ರಹ್ಮಾವರ : ಕಾರ್ಮಿಕರಿಬ್ಬರ ನಡುವೆ ಶುರುವಾದ ಜಗಳ ಸಾವಿನಲ್ಲಿ ಅಂತ್ಯವಾಗಿದೆ. ಕಾರ್ಮಿಕರಿಬ್ಬರೂ ಹೊಡೆದಾಡಿಕೊಂಡು ಬಳಿಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆಯೇ ಮೃತಪಟ್ಟಿರುವ ಘಟನೆ ಬ್ರಹ್ಮಾವರದಲ್ಲಿ ಸಂಭವಿಸಿದೆ. ನೆಲ್ಯಾಡಿ ಕೌಕ್ರಾಡಿ ಗ್ರಾಮದ ಆಲಂಪಾಡಿ ನಿವಾಸಿ ಜಿ.ಎ.ಸಿದ್ದೀಕ್(40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಈ ಬಗ್ಗೆ ಸಿದ್ದಿಕ್ ಅವರ ಪತ್ನಿ ಮೈಮುನ ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿದ್ದೀಕ್ ಮೂಲತಃ ಸಕಲೇಶಪುರ ಆನೆಮಹಲ್ ನಿವಾಸಿ. ಹಲವು ವರ್ಷಗಳಿಂದ ನೆಲ್ಯಾಡಿಯಲ್ಲಿ ದ್ವಿಚಕ್ರ ವಾಹನಗಳ ಮೆಕ್ಯಾನಿಕ್ ಆಗಿ ಕೆಲಸ ಮಾಡಿಕೊಂಡಿದ್ದು ಪತ್ನಿ, ಮಕ್ಕಳೊಂದಿಗೆ ಆಲಂಪಾಡಿಯಲ್ಲಿ ವಾಸವಾಗಿದ್ದರು. ಇತ್ತೀಚಿನ ಕೆಲ ಸಮಯದಿಂದ ಮೆಕ್ಯಾನಿಕ್ ವೃತ್ತಿ ಬಿಟ್ಟು ಬೇರೆ ಕೆಲಸ ನಿರ್ವಹಿಸುತ್ತಿದ್ದರು. ಜಿ.ಎ.ಸಿದ್ದೀಕ್ ಹಾಗೂ ನೆಲ್ಯಾಡಿಯ ಪ್ರಶಾಂತ ಎಂಬವರನ್ನು ಬೋಪಣ್ಣ ಎಂಬವರು ಇಂಟರ್‌ಲಾಕ್ ಅಳವಡಿಕೆ ಕೆಲಸಕ್ಕೆಂದು ಬ್ರಹ್ಮಾವರಕ್ಕೆ ಕರೆದೊಯ್ದಿದ್ದರು. ಬ್ರಹ್ಮಾವರದ ಹಾರಾಡಿ ನಿವಾಸಿ ಅರುಣ್ ಆಲ್ಪ್ರೇಡ್ ಎಂಬವರ ಅಂಗಳದಲ್ಲಿ ಬೆಳಗ್ಗೆ ಕೆಲಸ ಮಾಡುತ್ತಿದ್ದಾಗ ಸಿದ್ದಿಕ್ ಸಹ ಕಾರ್ಮಿಕರೊಂದಿಗೆ ಜಗಳ ಮಾಡಿ, ಹೊಡೆದಾಡಿಕೊಂಡು ಸುಸ್ತಾಗಿದ್ದರು. ಬಳಿಕ ಸಹ ಕಾರ್ಮಿಕರು…
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದೆ. ನೀತಿ ಸಂಹಿತೆ ಜಾರಿಯಾದ ದಿನದಿಂದ ಈವರೆಗೆ ಜಿಲ್ಲೆಯಲ್ಲಿ 5,64,80,734 . ರೂ. ಮೌಲ್ಯದ 1,42,160 ಲೀ. ಮದ್ಯ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಇದುವರೆಗೆ ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ 816 ಎಫ್‌ಐಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ನಡೆದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಎಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಟ್ಕಳ ಮೂಲದ ಗಿರಿಜಾ (30) ಮೃತ ದುರ್ದೈವಿ. ಆರೋಪಿ ನವೀನ್ ಸದ್ಯ ಪೊಲೀಸರ ವಶದಲ್ಲಿದ್ದಾನೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್ 8 ತಿಂಗಳ ಹಿಂದಷ್ಟೇ ಗಿರಿಜಾ ಜೊತೆ ಮದುವೆಯಾಗಿದ್ದ. ಕೆಲ ದಿನಗಳ ಹಿಂದಷ್ಟೇ ಗಿರಿಜಾಗೆ ಗರ್ಭಪಾತವಾಗಿತ್ತು. ಹೀಗಾಗಿ ಆಕೆ ಸದ್ಯಕ್ಕೆ ಮಗು ಬೇಡ ಎಂದು ಹೇಳಿದ್ದರು. ಈ ವಿಚಾರಕ್ಕೆ ಸದಾ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಏಪ್ರಿಲ್ 12ರಂದು ಈ ಜಗಳ ತಾರಕಕ್ಕೇರಿದಾಗ ನವೀನ್, ಗಿರಿಜಾರನ್ನು ಹತ್ಯೆಗೈದಿದ್ದ. ಈ ಸಂಬಂಧ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಮತ್ತು ಜರಟ್ ಲ್ಯಾಗ್ ಪಬ್ ಮಾಲೀಕ ಸೌಂದರ್ಯ ಜಗದೀಶ್ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣಿನ ಕುಣಿಯಲ್ಲಿ ನೇತಾಡುತ್ತಿದ್ದ ಜಗದೀಶರನ್ನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿತ್ತು. ಆದ್ರೆ ಆಸ್ಪತ್ರೆ ಸೇರಿಸೋ ಮೊದಲೆ ಜಗದೀಶ್ ಉಸಿರು ಚೆಲ್ಲಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಕ್ಲಬ್ ರಸ್ತೆಯಲ್ಲಿರೋ ನಿವಾಸದಲ್ಲಿ ಸೌಂದರ್ಯ ಜಗದೀಶ್ ಸೂಸೈಡ್ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬೇರೆ ಬೇರೆ ಉದ್ಯಮಗಳಲ್ಲಿ ತೊಡಗಿಸಿಕೊಂಡಿದ್ದ ಸೌಂದರ್ಯ ಜಗದೀಶ್ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ರು ಎಂದು ಹೇಳಲಾಗ್ತಿದೆ. ಅಪ್ಪು ಪಪ್ಪು ಸಿನಿಮಾದಲ್ಲಿ ತಮ್ಮ ಮಗನನ್ನೇ ಪರಿಚಯಿಸಿದ್ದ ಸೌಂದರ್ಯ ಜಗದೀಶ್ ರಾಮ್ ಲೀಲಾ, ಸ್ನೇಹಿತರು ಸಿನಿಮಾಗಳನ್ನ ನಿರ್ಮಾಣ ಮಾಡಿದ್ರು. ಇನ್ನೂ ಕಳೆದ ತಿಂಗಳು ಜಗದೀಶ್ ಬಾಡಿಗಾರ್ಡ್ ಸಾವನ್ನಿಪ್ಪಿದ್ರೆ. ಎರಡು ವಾರದ ಹಿಂದಷ್ಟೇ ಜಗದೀಶ್ ಅತ್ತೆ ಸಾವನ್ನಪ್ಪಿದ್ರು. ಸದ್ಯ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










