ಮಂಗಳೂರು: ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ’ ಸದ್ಯ ಸಿನಿ ಜಗತ್ತಿನಲ್ಲಿ ಹವಾ ಸೃಷ್ಟಿಸಿದ್ದು ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಸೋಷಿಯಲ್ ಮೀಡಿಯಾಗಳಲ್ಲಿ ಕಾಂತಾರ ಕುರಿತ ಪೋಸ್ಟ್, ರೀಲ್ಸ್ ಹಾಗೂ ವಿಡಿಯೋಗಳು ಸಾಕಷ್ಟು ಸದ್ದು ಮಾಡುತ್ತಿವೆ. ಆದರೆ ಯುವತಿಯೋರ್ವಳು ಇನ್ಸ್ಟಾಗ್ರಾಮ್‌ನಲ್ಲಿ ಮಾಡಿರುವ ರೀಲ್ಸ್ ಈಗ ವಿವಾದಕ್ಕೆ ಕಾರಣವಾಗಿದೆ. ಕಾಂತಾರ ಸಿನಿಮಾದ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾಳೆ. ಪಂಜುರ್ಲಿ ದೈವದಂತೆ ಬಣ್ಣ ಹಚ್ಚಿ, ವೇಷ ಧರಿಸಿ ಯುವತಿ ರೀಲ್ಸ್ ಮಾಡಿದ್ದು, ಸಾಮಾಜಿಕ ತಾಣಗಳಲ್ಲಿ ಯುವತಿ ವಿರುದ್ದ ಆಕ್ರೋಶ ಕೇಳಿಬಂದಿದೆ. ಮೇಕಪ್ ಅರ್ಟಿಸ್ಟ್ ಆಗಿರೋ ಶ್ವೇತಾ ರೆಡ್ಡಿಇನ್ಸ್ಟಾಗ್ರಾಮ್ ಖಾತೆಯಲ್ಲಿ ರೀಲ್ಸ್ ಮಾಡಿ ಅಪ್‌ಲೋಡ್ ಮಾಡಿದ್ದಾರೆ. ಸಿನಿಮಾದ ವರಹಾ ರೂಪಂ ಹಾಡಿಗೆ ರೀಲ್ಸ್ ಮಾಡಲು ದೈವಾರಾಧನೆ ಅಣಕ ಮಾಡಿರುವ ಯುವತಿ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ. ದೈವಾರಾಧನೆಯು ತುಳುನಾಡಿನ ಧಾರ್ಮಿಕ ನಂಬಿಕೆಯ ಭಾಗವಗಿದೆ. ಹೀಗಾಗಿ ತುಳುನಾಡಿನ ನಂಬಿಕೆಗೆ ಇದರಿಂದ ಧಕ್ಕೆಯಾಗಿದೆ, ರೀಲ್ಸ್‌ನ್ನು ತಕ್ಷಣ ಡಿಲೀಟ್ ಮಾಡಿ ಕ್ಷಮೆ ಕೇಳುವಂತೆ…
Author: main-admin
ಬಾರ್ಕೂರು: ಒಂಬತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ 44 ವರ್ಷದ ಮೃತದೇಹ ಗುರುವಾರ ಅಕ್ಟೋಬರ್ 27 ರಂದು ಬಾರ್ಕೂರಿನ ಕಂಬಳ ಗದ್ದೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಪ್ರವೀಣ್ ಬೆಳ್ಚಡ ಎಂದು ಗುರುತಿಸಲಾಗಿದೆ. ಅವರು ಅಕ್ಟೋಬರ್ 18 ರಂದು ನೇಜಾರ್‌ನಲ್ಲಿರುವ ತಮ್ಮ ಮನೆಯಿಂದ ನಾಪತ್ತೆಯಾಗಿದ್ದರು.ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ನಾಪತ್ತೆಯಾದ ಎರಡು ದಿನಗಳ ನಂತರ ಅವರ ವಾಹನ ಬಾರ್ಕೂರು ಸೇತುವೆ ಬಳಿ ಪತ್ತೆಯಾಗಿತ್ತು.
ಬೆಂಗಳೂರು:ನವೆಂಬರ್ 1 ಕನ್ನಡ ರಾಜ್ಯೋತ್ಸವ ನಿಮಿತ್ತ, ಅಕ್ಟೋಬರ್ 28ರಂದು ಕೋಟಿ ಕಂಠ ಗಾಯನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ಕ್ಯೂಆರ್ ಕೋಡ್ ಮೂಲಕ 1.10 ಕೋಟಿ ಜನ ನೋಂದಣಿ ಮಾಡಿಕೊಂಡಿದ್ದು, ನನ್ನ ನಾಡು ನನ್ನ ಹಾಡು ಘೋಷಣೆಯೊಂದಿಗೆ ಗಾಯನ ನಡೆಯಲಿದೆ ಎಂದರು. ರಾಜ್ಯ ಸರ್ಕಾರದಿಂದ ಅಕ್ಟೋಬರ್ 28, 2022ರಂದು ನನ್ನ ನಾಡು, ನನ್ನ ಹಾಡು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಾಧಿಯಾಗಿ ಎಲ್ಲಿರಿಗೂ ಭಾಗವಹಿಸೋದಕ್ಕೆ ಅವಕಾಶ ನೀಡಲಾಗಿತ್ತು. ಇದಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. 46 ದೇಶ, 26 ರಾಜ್ಯಗಳಿಂದ 1.10 ಕೋಟಿ ಜನರು ಕಾರ್ಯಕ್ರಮದಲ್ಲಿ ಹಾಡೋದಕ್ಕಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಅವರು, ನನ್ನ ನಾಡು, ನನ್ನ ಹಾಡು ಕಾರ್ಯಕ್ರಮವನ್ನು ಅಕ್ಟೋಬರ್ 28ರಂದು ಆಯೋಜಿಸಲಾಗಿದೆ. ಕೋಠಿ ಕಂಠ ಗಾಯನ ಕಾರ್ಯಕ್ರಮಕ್ಕೆ ಕ್ಯೂ ಆರ್ ಕೋಡ್ ಮೂಲಕ 1.10…
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಲಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಇಂದು ಪ್ರಾತ್ಯಕ್ಷಿತೆ ಕಾರ್ಯ ನಡೆಯಲಿದೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಪ್ರಾತ್ಯಕ್ಷಿತೆ ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಸ್ ರೆನ್ಸ್ ಮೂಲಕ ಪ್ರಧಾನಿ ಮೋದಿ ಜೊತೆ ಸಿಎಂ ಬೊಮ್ಮಾಯಿ ಚರ್ಚೆ ನಡೆಸಲಿದ್ದಾರೆ. ನವೆಂಬರ್ 11 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2 ನೇ ಟರ್ಮಿನಲ್ ನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಅಲ್ಲದೇ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ರಾಜ್ಯ ಬಿಜೆಪಿ ಈಗಾಗಲೇ ಭರ್ಜರಿ ಸಿದ್ದತೆ ನಡೆಸಿದೆ.
ಮಂಗಳೂರು : ಅಪಾರ್ಟ್‌ಮೆಂಟ್‌ವೊಂದರಲ್ಲಿ ದೀಪಾವಳಿ ಹಬ್ಬಕ್ಕೆ ಬಿಡಿಸಿದ ರಂಗೋಲಿಯನ್ನು ಕುಡಿದ ಅಮಲಿನಲ್ಲಿದ್ದ ವಿದ್ಯಾರ್ಥಿಗಳು ವಿರೂಪಗೊಳಿಸಿದ ಘಟನೆ ನಗರದ ಬಿಜೈನಲ್ಲಿ ನಡೆದಿದೆ. ದೀಪಾವಳಿ ಹಬ್ಬಕ್ಕೆ ಶುಭಾಶಯ ಕೋರಿ ಅಪಾರ್ಟ್‌ಮೆಂಟ್ ನಿವಾಸಿಗಳು ರಂಗೋಲಿ ಹಾಕಿದ್ದರು. ಆದರೆ ಕೇರಳ ಮೂಲದವರೆನ್ನಲಾದ ಕೆಲವು ವಿದ್ಯಾರ್ಥಿಗಳು ಈ ರಂಗೋಲಿಯನ್ನು ಮೆಟ್ಟಿ ಅದನ್ನು ವಿರೂಪಗೊಳಿಸಿ ದುರ್ವರ್ತನೆ ತೋರಿದ್ದಾರೆ.ಕೈಯಲ್ಲಿ ಮದ್ಯದ ಬಾಟಲಿ ಹಿಡಿದುಕೊಂಡು ಒಬ್ಬ ವಿದ್ಯಾರ್ಥಿ ರಂಗೋಲಿ ಬಳಿ ನಿಂತಿದ್ದು, ಇನ್ನೊಬ್ಬ ರಂಗೋಲಿಯನ್ನು ಮೆಟ್ಟುತ್ತಿದ್ದಾನೆ. ಅಪಾರ್ಟ್‌ಮೆಂಟ್ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇನ್ನು ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಘಟನೆಯ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವಿದ್ಯಾರ್ಥಿಗಳ ದುರ್ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪೊಲೀಸರು ಇಂತಹ ವರ್ತನೆ ತೋರಿದವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ನವದೆಹಲಿ : ಒಂದು ವೇಳೆ ನೋಟುಗಳಲ್ಲಿ ದೇವರ ಚಿತ್ರ ಇದ್ದರೆ, ಇಡೀ ದೇಶವೇ ಆಶೀರ್ವದಿಸಲಿದೆ. ಲಕ್ಷ್ಮೀ ದೇವಿ ಸಮೃದ್ಧಿಯ ಸಂಕೇತ, ಗಣೇಶ ವಿಘ್ನ ನಿವಾರಕನಾಗಿದ್ದಾನೆ” ಎಂಬುದಾಗಿ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. “ಇಂಡೋನೇಷ್ಯಾ ನೋಟುಗಳ ಮೇಲೆ ಲಕ್ಷ್ಮಿ ದೇವಿ ಮತ್ತು ಗಣೇಶನ ಚಿತ್ರಗಳನ್ನು ಮುದ್ರಿಸಲು ಸಾಧ್ಯವಾದರೆ ನಮಗ್ಯಾಕೆ ಸಾಧ್ಯವಾಗುವುದಿಲ್ಲ . ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಪಣ ತೊಡುವುದರ ಹೊರತಾಗಿ ಪರಮಾತ್ಮನ ಆಶೀರ್ವಾದ ಬೇಕು ಹೀಗಾಗಿ ಕೇಂದ್ರ ಕ್ಕೆಪತ್ರ ಬರೆದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಪ್ರಯತ್ನಗಳನ್ನು ಮಾಡಿದರೂ, ಕೆಲವೊಮ್ಮೆ ದೇವರು ಮತ್ತು ದೇವತೆಗಳು ನಮ್ಮನ್ನು ಆಶೀರ್ವದಿಸದಿದ್ದರೆ ನಮ್ಮ ಪ್ರಯತ್ನಗಳು ಫಲ ನೀಡುವುದಿಲ್ಲ. ಹೀಗಾಗಿ ನಮ್ಮ ಕರೆನ್ಸಿ ನೋಟುಗಳಲ್ಲಿ ಗಣೇಶ ಮತ್ತು ಲಕ್ಷ್ಮಿ ದೇವಿಯ ಫೋಟೋಗಳನ್ನು ಸೇರಿಸುವಂತೆ ನಾನು ಪ್ರಧಾನಿ ಮೋದಿಗೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.: ಭಾರತೀಯ ರಿವರ್ಸ್ ಬ್ಯಾಂಕ್ ಮುದ್ರಿಸುವ ಹೊಸ ನೋಟುಗಳ ಮೇಲೆ ಇನ್ಮುಂದೆ ಲಕ್ಷ್ಮಿ ದೇವಿ ಮತ್ತು ಗಣೇಶನ ಫೋಟೋಗಳನ್ನು ಮುದ್ರಿಸಬೇಕು, ಇದರಿಂದ ದೇಶದ ಏಳಿಗೆಗೆ ಸಹಾಯವಾಗುತ್ತದೆ…
ಕನ್ನಡದ ‘ಕಾಂತಾರ’ (Kantara) ಸಿನಿಮಾ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ಸಿನಿಮಾ ನೋಡಿ ಪರಭಾಷೆಯ ಸ್ಟಾರ್ ಕಲಾವಿದರು ಮತ್ತು ತಂತ್ರಜ್ಞರು ಭೇಷ್ ಎನ್ನುತ್ತಿದ್ದಾರೆ. ರಿಷಬ್ ಶೆಟ್ಟಿ (Rishab Shetty) ಅವರ ನಟನೆ, ನಿರ್ದೇಶನಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿಬರುತ್ತಿದೆ. ಈಗಾಗಲೇ ಪ್ರಭಾಸ್, ಕಂಗನಾ ರಣಾವತ್, ಅನುಷ್ಕಾ ಶೆಟ್ಟಿ ಸೇರಿದಂತೆ ಅನೇಕ ಘಟಾನುಘಟಿಗಳು ಈ ಚಿತ್ರದ ಕುರಿತು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಈಗಿನದ್ದು ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಸರದಿ. ಹೌದು, ರಜನಿಕಾಂತ್ ಅವರು ‘ಕಾಂತಾರ’ ಚಿತ್ರ ವೀಕ್ಷಿಸಿದ್ದಾರೆ. ಬಳಿಕ ಟ್ವಿಟರ್ ಮೂಲಕ ತಮ್ಮ ವಿಮರ್ಶೆ ತಿಳಿಸಿದ್ದಾರೆ. ಅವರಿಗೆ ಈ ಚಿತ್ರ ತುಂಬ ಇಷ್ಟ ಆಗಿದೆ. ಇಂಥ ಸಿನಿಮಾವನ್ನು ನಿರ್ಮಾಣ ಮಾಡಿದ ‘ಹೊಂಬಾಳೆ ಫಿಲ್ಮ್ಸ್’ ಮತ್ತು ನಿರ್ದೇಶನ ಮಾಡಿದ ರಿಷಬ್ ಶೆಟ್ಟಿ ಅವರನ್ನು ತಲೈವಾ ಮನಸಾರೆ ಹೊಗಳಿದ್ದಾರೆ. ರಜನಿಕಾಂತ್ ಅವರು ‘ಕಾಂತಾರ’ ಸಿನಿಮಾ ಬಗ್ಗೆ ಮಾಡಿದ ಟ್ವೀಟ್ ವೈರಲ್ ಆಗಿದೆ. ಇದನ್ನು ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆ ರೀಟ್ವೀಟ್ ಮಾಡಿಕೊಂಡಿದ್ದು, ತಲೈವಾಗೆ ಧನ್ಯವಾದ ತಿಳಿಸಿದೆ.…
ಪುತ್ತೂರು: ಆಟೋ ಚಾಲಕನೊಬ್ಬ ಕಂಠಪೂರ್ತಿ ಕುಡಿದು ಆಟೋದಲ್ಲೇ ಮಲಗಿ ಮುಖ್ಯ ರಸ್ತೆ ಬದಿ ಪಾರ್ಕ್ ಮಾಡಿದ್ದ ಕಾರಣಕ್ಕಾಗಿ ಸಾರ್ವಜನಿಕರು ಚಾಲಕನನ್ನು ಪೊಲೀಸರಿಗೊಪ್ಪಿಸಿದ ಘಟನೆ ಪುತ್ತೂರು-ದರ್ಬೆ ರಸ್ತೆಯ ಕಲ್ಲಾರೆಯಲ್ಲಿ ನಡೆದಿದೆ. ಕಲ್ಲಾರೆ ಧನ್ವಂತರಿ ಆಸ್ಪತ್ರೆಯ ಮುಂಭಾಗದಲ್ಲಿರುವ ಮುಖ್ಯ ರಸ್ತೆ ಬದಿಯ ಪಾರ್ಕಿಂಗ್ ನಲ್ಲಿ ಆಟೋ ಚಾಲಕನೋರ್ವ ಕಂಠಪೂರ್ತಿ ಕುಡಿದು ಆಟೋ ರಿಕ್ಷಾದಲ್ಲಿ ಮಲಗಿದ್ದು, ಸುಮಾರು ಒಂದು ಗಂಟೆಯ ವರೆಗೂ ವ್ಯಕ್ತಿ ಮಲಗಿದಾಗೆಯೇ ಇದ್ದ ಹಿನ್ನೆಲೆ ಇದನ್ನು ಗಮನಿಸಿದ ಸಾರ್ವಜನಿಕರು ವ್ಯಕ್ತಿಗೆ ಏನೋ ಅಪಾಯ ಸಂಭವಿಸಿದೆ ಎಂದು ಯೋಚಿಸಿ, ಸಂಚಾರಿ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಚಾಲಕ ಕುಡಿದು ಆಟೋ ರಿಕ್ಷಾ ಚಾಲನೆ ಮಾಡಿದ ಹಿನ್ನೆಲೆ ಸಂಚಾರಿ ಠಾಣಾ ಪೊಲೀಸರು ಡ್ರಿಂಕ್ ಅಂಡ್ ಡ್ರೈವ್ ಪ್ರಕರಣ ದಾಖಲಿಸಿದ್ದು, ಆಟೋ ರಿಕ್ಷಾವನ್ನು ಸೀಜ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ನವದೆಹಲಿ: ಕನ್ನಡಿಗ ʻಮಲ್ಲಿಕಾರ್ಜುನ ಖರ್ಗೆʼ(Mallikarjun Kharge)ಅವರು ಇಂದು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕೇಂದ್ರ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಸಮಾರಂಭದಲ್ಲಿ ಸೋನಿಯಾ ಗಾಂಧಿ ಅವರು ಚುನಾವಣಾ ಪ್ರಮಾಣಪತ್ರವನ್ನು ಹಸ್ತಾಂತರಿಸಿದ್ದಾರೆ. 24 ವರ್ಷಗಳ ನಂತ್ರ ಮೊದಲ ಬಾರಿಗೆ ಗಾಂಧಿಯೇತರರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಬಾರಿ ಗಾಂಧಿ ಕುಟುಂಬದವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆಯಿಂದ ಹೊರಗುಳಿಸಿದ್ದಾರೆ. ಅಧಿಕಾರ ವಹಿಸಿಕೊಳ್ಳುವ ಮುನ್ನ ಖರ್ಗೆ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಅವರ ನಿವಾಸಕ್ಕೆ ಭೇಟಿ ಮಾಡಿ ನೀಡಿದ್ದರು. ನಂತ್ರ, ಇಂದು ಬೆಳಗ್ಗೆ ಖರ್ಗೆ ಅವರು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು ಮತ್ತು ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ, ಮಾಜಿ ಉಪ ಪ್ರಧಾನಿ ಜಗಜೀವನ್…
ಬೆಂಗಳೂರು : ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ನ ಒಮಿಕ್ರೋನ್ ತಳಿಯ ಹೊಸ ರೂಪಾಂತರಿ ಬಿಕ್ಯು.1 (Omicron BQ.1 ) ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹೈ ಅಲರ್ಟ್(High alert in Karnataka) ಘೋಷಿಸಲಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಿದ್ದಾರೆ. ನೆರೆಯ ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಹೊಸ ಉಪ ರೂಪಾಂತರಿ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಸಾರ್ವಜನಕಿರು ಗುಂಪು ಸೇರುವ ಸಾಧ್ಯತೆಗಳು ಅಧಿಕವಾಗಿರುವುದರಿಂದ, ಈ ಕೆಳಕಂಡ ಮಾರ್ಗಸೂಚಿ ಕ್ರಮಗಳನ್ನು ಪಾಲಿಸುವಂತೆ ತಿಳಿಸಿದ್ದಾರೆ. ಮಾಸ್ಕ್ ಧಾರಣೆ, ಗುಂಪು ಸೇರುವಿಕೆಯಿಂದ ದೂರ ಇರುವುದು ಹಾಗೂ ಮೂರನೇ ಡೋಸ್ ಲಸಿಕೆ ಪಡೆಯುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಸೂಚನೆ ನೀಡಿದೆ, ಕೋವಿಡ್-19ರ ಬಿಎ.2.75 ಹಾಗೂ ಬಿಜೆ.1ನ ಓಮಿಕ್ರಾನ್ ಹೊಸ ಉಪ ರೂಪಾಂತರ ತಳಿ ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ರಾಜ್ಯದಲ್ಲಿ ದೀಪಾವಳಿ ಹಬ್ಬ ಹಾಗೂ ನವೆಂಬರ್ 1ರ ಕನ್ನಡ ರಾಜ್ಯೋತ್ಸವಕ್ಕೆ ಮುನ್ನೆಚ್ಚರಿಕೆ…