ಕಾಪು: ಗೂಡ್ಸ್ ಟೆಂಪೋವೊAದು ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ 66ರಲ್ಲಿ ರವಿವಾರ ನಡೆದಿದೆ. ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಸಂಬAಧಿಸಿದ ಸಲಕರಣೆ ಗಳನ್ನು ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಹತ್ತಿ ರಸ್ತೆಯಲ್ಲಿ ಪಲ್ಟಿಯಾಗಿ ಬಿತ್ತೆನ್ನಲಾಗಿದೆ. ವಾಹನದಲ್ಲಿ ಒಟ್ಟು ಒಂಭತ್ತು ಮಂದಿ ಕೆಲಸಗಾರರು ಇದ್ದು, ಅವರಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆನ್ನಲಾಗಿದೆ. ಇವರ ಪೈಕಿ ನಾಲ್ವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ವೇಳೆ ಮೃತಪಟ್ಟರೆಂದು ತಿಳಿದು ಬಂದಿದೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Author: main-admin
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಎಂ.ಎಸ್. ಉಮೇಶ್ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 80 ವರ್ಷ ವಯಸ್ಸಿನ ಅವರು ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರು ಎಳೆದಿದ್ದಾರೆ. ನೂರಾರು ಸಿನಿಮಾಗಳಲ್ಲಿ ನಟಿಸಿ ಎಂ.ಎಸ್. ಉಮೇಶ್ ಅವರು ಜನಪ್ರಿಯತೆ ಪಡೆದಿದ್ದರು. ಕಳೆದ ಕೆಲವು ದಿನಗಳಿಂದ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ಉಮೇಶ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾಗ ಅನೇಕ ಕಲಾವಿದರು ಹೋಗಿ ಮಾತನಾಡಿಸಿದ್ದರು. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದರು. ಆದರೆ ಪ್ರಾರ್ಥನೆ ಫಲಿಸಿಲ್ಲ. ತನ್ನ ವಿಶಿಷ್ಟವಾದ ಸ್ವರ, ಮ್ಯಾನರಿಸಂ ಮತ್ತು ನಟನೆಯಿಂದ ಉಮೇಶ್ ಅಪಾರ ಅಭಿಮಾನಿಗಳನ್ನು ಗಳಿಸಿದ್ದರು. 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಅವರು ಬಹುತೇಕ ಎಲ್ಲ ನಾಯಕ ನಟರ ಚಿತ್ರಗಳಲ್ಲಿ ಹಾಸ್ಯ ಪಾತ್ರಗಳಿಗೆ ಜೀವ ತುಂಬಿದ್ದರು. ಇತ್ತೀಚೆಗೆ ಉಮೇಶ್ ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ವೇಳೆ…
ಮಂಗಳೂರು : ಆದಿತ್ಯ ಬಿರ್ಲಾ ಜ್ಯುವೆಲ್ಲರಿಯ ಇಂದ್ರಿಯಾ, ಮಂಗಳೂರಿನಲ್ಲಿ ತನ್ನ ಹೊಸ ಮಳಿಗೆಯನ್ನು ಪ್ರಾರಂಭಿಸುವುದರೊಂದಿಗೆ ಕರ್ನಾಟಕದಲ್ಲಿ ತನ್ನ ಹೆಜ್ಜೆಗುರುತನ್ನು ಬಲಪಡಿಸಿದೆ. ಇದು ಭಾರತದಲ್ಲಿ ಚಿಲ್ಲರೆ ಆಭರಣ ವ್ಯಾಪಾರಕ್ಕೆ ಹೊಸ ವ್ಯಾಖ್ಯಾನ ನೀಡುವ ಸಂಸ್ಥೆಯ ಪ್ರಯಾಣದಲ್ಲಿ ಮಹತ್ವದ ಹೆಜ್ಜೆಯಾಗಿದೆ. ಮಂಗಳೂರಿನ ಬೆಂದೂರ್‌ವೆಲ್‌ನಲ್ಲಿ ನೆಲೆಗೊಂಡಿರುವ ಈ ಹೊಸದಾಗಿ ಪ್ರಾರಂಭಿಸಲಾದ ಇಂದ್ರಿಯಾ ಮಳಿಗೆಯಲ್ಲಿ ಭಾರತೀಯ ಕರಕುಶಲತೆಗೆ ಹೊಸ ರೂಪ ಸಿಗುತ್ತದೆ. ಸಂಸ್ಕೃತಿಯಲ್ಲಿ ಆಧುನಿಕ ಸೊಬಗಿನೊಂದಿಗೆ ಬೆಸೆಯುತ್ತದೆ. ಮಳಿಗೆಯಲ್ಲಿ ಗ್ರಾಹಕರು ಕ್ಯುರೇಟೆಡ್ ವಲಯಗಳನ್ನು ಕಾಣಬಹುದು. ಇದರಲ್ಲಿ ಮೀಸಲಾದ ಕಾರೀಗರಿ (ಕುಶಲಕರ್ಮಿಗಳ) ಸ್ಥಳ ಮತ್ತು 28,೦೦೦ ಕ್ಕೂ ಹೆಚ್ಚು ವಿನ್ಯಾಸಗಳ ಪ್ರದರ್ಶನವಿದೆ. ಈ ಉದ್ಘಾಟನೆಯ ಮೂಲಕ, ಇಂದ್ರಿಯಾ ಮಂಗಳೂರಿನ ಶ್ರೀಮಂತ ಕರಾವಳಿ ಸಂಸ್ಕೃತಿ ಮತ್ತು ಆಭರಣಗಳೊಂದಿಗೆ ತಾನು ಎಷ್ಟು ಆಳವಾಗಿ ಸಂಬಂಧ ಹೊಂದಿದ್ದೇನೆ ಎಂಬುದನ್ನು ಸೂಚಿಸುತ್ತದೆ. ಇಂದ್ರಿಯಾದ ಸಿಇಒ ಸಂದೀಪ್ ಕೋಹ್ಲಿ ಅವರು ಮಾತನಾಡುತ್ತಾ, “ಕರ್ನಾಟಕದಲ್ಲಿ ಇಂದ್ರಿಯಾ ಹೆಜ್ಜೆಗುರುತು ವಿಸ್ತರಿಸುತ್ತಿದ್ದು, ಮಂಗಳೂರಿಗೆ ಕಾಲಿಟ್ಟಿದ್ದು ಮಹತ್ವದ ಸೇರ್ಪಡೆಯಾಗಿದೆ. ಕರಾವಳಿ ನಗರದ ಉತ್ಸಾಹಭರಿತ ಸಂಸ್ಕೃತಿ ಮತ್ತು ಸನಾತನ ಸೌಂದರ್ಯದಿಂದ ಪ್ರೇರಿತವಾದ ನಮ್ಮ…
ಪುತ್ತೂರು ಸರ್ವೆ ಗಡಿಪಿಲದಲ್ಲಿ ಆಕ್ರಮ ಗೋಸಾಗಾಟ – ಗೋವುಗಳನ್ನು ರಸ್ತೆಬದಿ ಬಿಟ್ಟು ಪರಾರಿ- ವಿಶ್ವ ಹಿಂದೂ ಪರಿಷದ್ ಬಜರಂಗದಳದ ಕಾರ್ಯಕರ್ತರ ಸಹಕಾರದಿಂದ ಸುರಕ್ಷಿತವಾಗಿ ಪೋಲಿಸ್ ಠಾಣೆಗೆ ಗೋವುಗಳು – ಘಟನೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಆಗ್ರಹ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಸರ್ವೆ ಸಮೀಪದ ಗಡಿಪಿಲ ಎಂಬಲ್ಲಿ ಇಂದು ಮುಂಜಾನೆ ಆಕ್ರಮ ಗೋಸಾಗಾಟ ನಡೆದಿದ್ದು ಗೋಕಳ್ಳರು ಅವರ ಗೋಸಾಗಾಟದ ವಾಹನ ಹಾಳಾದುದರಿಂದ ಗೋವುಗಳನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾದ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ 5 ಗೋವುಗಳು ಪತ್ತೆಯಾಗಿವೆ. ತಕ್ಷಣ ಕಾರ್ಯಪ್ರವೃತರಾದ ಸ್ಥಳೀಯ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಕಾರ್ಯಕರ್ತರು ಮತ್ತು ಸ್ಥಳೀಯರು ಪುತ್ತೂರು ಪೋಲಿಸ್ ಇಲಾಖೆಯ ಸಿಬ್ಬಂದಿಗಳ ಜೋತೆ ಸೇರಿ ಗೋವುಗಳನ್ನು ಸುರಕ್ಷಿತವಾಗಿ ಪುತ್ತೂರು ನಗರ ಫೋಲಿಸ್ ಠಾಣೆಗೆ ಸಾಗಿಸಿ ರಕ್ಷಿಸಲಾಗಿದೆ. ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರ ಸಹಕಾರದಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಗೋಶಾಲೆಯಿಂದ ಗೋವುಗಳಿಗೆ ಬೈಹುಲ್ಲು ವ್ಯವಸ್ಥೆ ಮಾಡಲಾಗಿದೆ. ಈ ಆಕ್ರಮ…
ಮಂಗಳೂರು : ಮಂಗಳೂರಿನ ಸ್ವರ್ಣ ಜುವೆಲರ್ಸ್ ಅಂಗಡಿಗೆ ಗ್ರಾಹಕರಂತೆ ಭೇಟಿ ನೀಡಿ, ತನ್ನ ಹೆಸರನ್ನು ಬದಲಿಸಿ 31 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕಿಟ್‌ಗಳನ್ನು ಮೂಲಕ ಪಡೆದು ಪರಾರಿಯಾಗಿದ್ದ ಅಂತರ್‌ರಾಜ್ಯ ವಂಚನೆ ಆರೋಪಿಯನ್ನು ಉರ್ವಾ ಪೊಲೀಸರು ಕೊಯಂಬತ್ತೂರಿನ ಪುಲಿಯಕುಲಂ ಎಂಬಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಆರೋಪಿಯಿಂದ 240 ಗ್ರಾಂ 24 ಕ್ಯಾರೆಟ್ ಶುದ್ಧತೆಯ ಚಿನ್ನದ ಬಿಸ್ಕಿಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ತಮಿಳುನಾಡು ಕೊಯಂಬತ್ತೂರಿನ ಸಿಂಗನಲ್ಲೂರಿನಲ್ಲಿ ಪದ್ಮ ಕಿರಣ್ ಎನ್‌ಕ್ಲೇವ್ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ವಾಸವಾಗಿದ್ದ ಪುಗಲ್ ವಾಸನ್ @ ಪುಗಲ್ ಹಸನ್ @ ಅರುಣ್ (50) ಬಂಧಿತ ಆರೋಪಿ. ಘಟನೆಯ ವಿವರ: 21-11-2025ರಂದು ಸಂಜೆ, ಉರ್ವಾಸ್ಟೋರ್–ಚಿಲಿಂಬಿ ಪ್ರದೇಶದ ಗುಜ್ಜಾಡಿ ಚೆಂಬರ್‌ಸ್‌ನಲ್ಲಿರುವ ಸ್ವರ್ಣ ಜುವೆಲರ್ಸ್ ಗೆ ಬಂದಿದ್ದ ‘ಅರುಣ್’ ಎಂಬ ನಕಲಿ ಹೆಸರಿನಲ್ಲಿ ಬಂದಿದ್ದ ವ್ಯಕ್ತಿ, ಬಿಜೈ–ಕಾಫಿಕಾಡ್‌ನಲ್ಲಿರುವ ಅಜಂತ್ ಬಿಸಿನೆಸ್ ಸೆಂಟರ್‌ನಲ್ಲಿ ತಾನು ಹೊಸದಾಗಿ ಕಚೇರಿ ತೆರೆಯುತ್ತಿರುವುದಾಗಿ ಅಂಗಡಿ ಮಾಲಕರಿಗೆ ಪರಿಚಯ ಮಾಡಿಕೊಂಡಿದ್ದ. ಅಲ್ಲಿಗೆ ಬರುವ ಅತಿಥಿಗಳಿಗೆ ಉಡುಗೊರೆಯಾಗಿ ನೀಡುವುದಕ್ಕಾಗಿ ತಲಾ 10 ಗ್ರಾಂ ತೂಕದ 24…
ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕನಿಗೆ ವ್ಯಕ್ತಿಯೋರ್ವ ಗದರಿಸಿ ಕೋಲಿನಿಂದ ಹೊಡೆದ ಘಟನೆ ನಡೆದಿದ್ದು, ಈ ಬಗ್ಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯ ಅಪ್ರಾಪ್ತ ಪ್ರಾಯದ ಮಗ ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದು, ನ.24ರಂದು ಆರೋಪಿ ಚೇತನ್ ಎಂಬಾತ ಬಾಲಕನಿಗೆ ಗದರಿಸಿ ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಮೊಬೈಲ್‌ನಲ್ಲಿ ಪ್ರಸಾರವಾಗಿರುವುದು ಮಹಿಳೆಯ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಬಾಲಕನ ತಾಯಿ ಆರೋಪಿ ಚೇತನ್ ವಿರುದ್ಧ ನೀಡಿದ ದೂರಿನ ಮೇರೆಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ :60/2025, ಕಲಂ:118(1)BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಮಂಗಳೂರು: ನಗರ ಹೊರವಲಯದ ಮೂಡುಶೆಡ್ಡೆ ಗ್ರಾ.ಪಂ. ಆವರಣದಲ್ಲಿ ಮಗಳು ತನ್ನ ತಾಯಿಗೆ ಅಮಾನವೀಯವಾಗಿ ಹಲ್ಲೆ ನಡೆಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಡುಶೆಡ್ಡೆಯ ಶಿವನಗರ ಎಂಬಲ್ಲಿ ತಾಯಿ ಮತ್ತು ಮಗಳು ವಾಸಿಸುತ್ತಿದ್ದು, ಇವರ ಮಧ್ಯೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಈ ಬಗ್ಗೆ ತಾಯಿ ಕಾವೂರು ಠಾಣೆಗೆ ತೆರಳಿ ದೂರುತ್ತಿದ್ದರು ಎಂದು ತಿಳಿದು ಬಂದಿದೆ. ಪೊಲೀಸರು ತಾಯಿ ಮತ್ತು ಮಗಳಿಗೆ ಬುದ್ಧಿ ಹೇಳಿ ಕಳುಹಿಸಿಕೊಡುತ್ತಿದ್ದರು ಎನ್ನಲಾಗಿದೆ. ಇತ್ತೀಚೆಗೆ ತಾಯಿಯು ಮೂಡುಶೆಡ್ಡೆ ಗ್ರಾ.ಪಂ.ಗೆ ತೆರಳಿ ಮಗಳ ವಿರುದ್ಧ ದೂರು ನೀಡತೊಡಗಿದ್ದಾರೆ. ಮೂರು ದಿನದ ಹಿಂದೆ ತಾಯಿ ಗ್ರಾ.ಪಂ. ಕಚೇರಿಗೆ ತೆರಳಿ ದೂರು ನೀಡುತ್ತಿದ್ದಾಗ ಮಗಳು ತಾಯಿಯನ್ನು ತಳ್ಳಿದ್ದಾಳೆ. ತಾಯಿ ಕೂಡ ಮಗಳಿಗೆ ತಿರುಗೇಟು ನೀಡಿದ್ದರೂ ಕೂಡ ಆಕ್ರೋಶಗೊಂಡ ಮಗಳು ಚಪ್ಪಲಿಯಿಂದ ತಾಯಿಯ ಮುಖಕ್ಕೆ ಅಮಾನವೀಯವಾಗಿ ಹಲ್ಲೆ ನಡೆಸಿರುವುದು ವೀಡಿಯೋದಲ್ಲಿ ಕಂಡು ಬಂದಿದೆ. ಇದನ್ನು ಗ್ರಾ.ಪಂ. ಕಚೇರಿಯಲ್ಲಿದ್ದವರು ವೀಡಿಯೋ ಮಾಡಿದ್ದು, ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಗಳ ಅಮಾನವೀಯ ಕೃತ್ಯಕ್ಕೆ…
ಮಂಗಳೂರು ಸಿಟಿ ಪೊಲೀಸ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದಿದ್ದು, ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್‌ಐ ಶಿವಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಪರಿಶೀಲಿಸುತ್ತಿದ್ದಾಗ ಮಂಗಳೂರು ಸಿಟಿ ಪೊಲೀಸ್ ಎಂಬ ಹೆಸರಿನ ಫೇಸ್‌ಬುಕ್ ಖಾತೆ ಕಂಡು ಬಂದಿತು. ಅದರಲ್ಲಿ ಪೊಲೀಸ್ ಆಯುಕ್ತರ ಭಾವಚಿತ್ರ ಮತ್ತು ಸರಕಾರದ ಲಾಂಛನವನ್ನು ಬಳಸಲಾಗಿತ್ತು. ಖಾತೆಯ ಬಗ್ಗೆ ಸಂಶಯಗೊAಡು ಆಯುಕ್ತರ ಕಚೇರಿಯಲ್ಲಿ ವಿಚಾರಿಸಿದಾಗ ನಕಲಿ ಖಾತೆ ಎಂದು ದೃಢಪಟ್ಟಿದೆ. ಈ ಬಗ್ಗೆ ಕಂಕನಾಡಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮಂಗಳೂರು: ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಪ್ರಧಾನಿ ಮೋದಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಸಲ್ಲಿಸಿದರು. ಈ ಕುರಿತು ಸಚಿವ ದಿನೇಶ್ ಗುಂಡರಾವ್ ಪೋಸ್ಟ್ ಹಂಚಿಕೊಂಡಿದ್ದು, ರೈತರ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಬೆಂಬಲ ಬೆಲೆಯಂತೆ ಬೆಳೆ ಖರೀದಿ ವ್ಯವಸ್ಥೆ ನಿರ್ಮಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಚ್ಛಾಶಕ್ತಿ ತೋರಿಸಬೇಕೆಂದು ಮನವಿ ಮಾಡಿಕೊಂಡಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಕೇಂದ್ರ ಸರ್ಕಾರವು ಮೆಕ್ಕೆಜೋಳಕ್ಕೆ ಪ್ರತಿ ಮೆಟ್ರಿಕ್ ಟನ್‌ಗೆ 2,400 ರೂ. ಮತ್ತು ಹೆಸರು ಕಾಳಿಗೆ ಪ್ರತಿ ಮೆಟ್ರಿಕ್ ಟನ್‌ಗೆ 8,768 ರೂ.ರಂತೆ ಒSP ಘೋಷಿಸಿದ್ದರೂ, ಕರ್ನಾಟಕದಲ್ಲಿ ಪ್ರಸ್ತುತ ಬೆಲೆ ಮೆಕ್ಕೆಜೋಳಕ್ಕೆ ಪ್ರತಿ ಮೆಟ್ರಿಕ್ ಟನ್‌ಗೆ 1,600-1,800 ರೂ. ಮತ್ತು ಹೆಸರು ಕಾಳಿಗೆ ಪ್ರತಿ ಮೆಟ್ರಿಕ್ ಟನ್‌ಗೆ 5,400 ರೂ. ಆಗಿದ್ದು, ಇದು ತೀವ್ರ ಮತ್ತು ಆಘಾತಕಾರಿ ಕುಸಿತವಾಗಿದೆ. ಕರ್ನಾಟಕದಲ್ಲಿ ಪ್ರಸ್ತುತ ಮಾರಾಟವಾಗಲು ಅಂದಾಜು 32 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಮೆಕ್ಕೆಜೋಳ ಲಭ್ಯವಿದೆ. ಆದ್ದರಿಂದ,…
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್, ಮಲೇರಿಯಾ ಪತ್ತೆ ಹಾಗೂ ತಡೆ ಕಾರ್ಯಗಳಲ್ಲಿ ಆರೋಗ್ಯ ಇಲಾಖೆಗೆ ಬೆಂಬಲ ನೀಡುವ ಉದ್ದೇಶದಿಂದ 100 ಟಾರ್ಚ್‌ಗಳನ್ನು ವಿತರಿಸುವ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಈ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಜಸಿಂತ ಡಿಸೋಜಾ ಉಪಸ್ಥಿತರಿದ್ದು, ರೋಹನ್ ಕಾರ್ಪೊರೇಶನ್‌ನ ಸೇಲ್ಸ್ ಮ್ಯಾನೇಜರ್ ಶ್ರೀ ಸವಿಲ್ ಅವರು ಆರೋಗ್ಯ ಇಲಾಖೆಗೆ ಟಾರ್ಚ್‌ಗಳನ್ನು ಹಸ್ತಾಂತರಿಸಿದರು. ರಾತ್ರಿ ಸಮಯದಲ್ಲಿ ನಡೆಯುವ ಕ್ಷೇತ್ರ ಪರಿಶೀಲನೆ, ಕೀಟಜನ್ಯ ಉತ್ಪತ್ತಿ ತಾಣಗಳ ಪತ್ತೆ ಹಾಗೂ ಮಲೇರಿಯಾ ನಿಯಂತ್ರಣ ಕಾರ್ಯಗಳಿಗೆ ಈ ಟಾರ್ಚ್‌ಗಳು ಆರೋಗ್ಯ ಸಿಬ್ಬಂದಿಗಳಿಗೆ ಮಹತ್ವದ ಸಹಕಾರ ನೀಡಲಿವೆ. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಜಸಿಂತ ಡಿಸೋಜಾ, “ಮಲೇರಿಯಾ ಪತ್ತೆ ಮತ್ತು ತಡೆ ಕಾರ್ಯಗಳಲ್ಲಿ ಕ್ಷೇತ್ರ ಮಟ್ಟದ ಪರಿಶೀಲನೆ ಅತ್ಯಂತ ಪ್ರಮುಖವಾಗಿದೆ. ಇಂತಹ ಸಂದರ್ಭಗಳಲ್ಲಿ…










