Author: main-admin

ಶಿವಮೊಗ್ಗ: ತಾಲೂಕಿನ ಹೊಳೆಬೆನವಳ್ಳಿ ಸಮೀಪದ ರಿಂಗ್ ರೋಡ್‌ನಲ್ಲಿ ಮಹಜರಿಗೆ ಕರೆದೊಯ್ಯುವ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ನರಸಿಂಹ ಕೊಲೆ ಕೇಸ್ ಆರೋಪಿ ಮಧು ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿರುವ ಘಟನೆ ನಡೆದಿದೆ.ಶಿವಮೊಗ್ಗದಲ್ಲಿ ರೌಡಿಶೀಟರ್ ನರಸಿಂಹ ಕೊಲೆ ಕೇಸ್ ಸಂಬಂಧ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಕೋಟೆ ಠಾಣೆ ಕ್ರೈಮ್ ಸಿಬ್ಬಂದಿ ಅಂಜನಪ್ಪ ಮೇಲೆ ಆರೋಪಿ ಮಧು ಹಲ್ಲೆ ಮಾಡಿದ್ದಾನೆ. ಏರ್ ಫೈರ್ ಮಾಡಿ ವಾರ್ನ್ ಮಾಡಿದರೂ ಮಾತು ಕೇಳದ ಹಿನ್ನೆಲೆ ಕೋಟೆ ಠಾಣೆ ಇನ್ಸ್‌ಪೆಕ್ಟರ್ ಹರೀಶ್ ಪಟೇಲ್ ಕಾಲಿಗೆ ಫೈರ್ ಮಾಡಿದ್ದಾರೆ.ಗಾಯಾಳು ಮಧು ಹಾಗೂ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಸ್ಪಿ ಬಿ. ನಿಖಿಲ್ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನೆಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಶಿವಮೊಗ್ಗದ ಗಾಂಧಿ ಬಜಾರ್‌ನ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್, ಇಸ್ಪಿಟ್ ಗ್ಯಾಂಬ್ಲರ್ ನರಸಿಂಹ ಹತ್ಯೆಯಾಗಿದ್ದಾನೆ. ಗೋವಿಂದಾಪುರ ಆಶ್ರಯ ಬಡಾವಣೆ…

Read More

ಪಾಲ್ಘರ್: ಅಪ್ರಾಪ್ತ ಫುಟ್ಬಾಲ್ ಆಟಗಾರ್ತಿ ಮೇಲೆ ಮೂರು ವರ್ಷಗಳ ಕಾಲ ಅತ್ಯಾಚಾರ ಎಸಗಿರುವ, ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಿರುವ ಆರೋಪದ ಮೇರೆಗೆ ಫುಟ್ಬಾಲ್ ತರಬೇತುದಾರನ್ನು ಪೊಲೀಸರು ಬಂಧಿಸಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ.ಖಾಸಗಿ ಫುಟ್‌ಬಾಲ್ ತರಬೇತುದಾರ ಅಭಿಜಿತ್ ಮೆಂಡಲ್ (36) ಬಂಧಿತ ಆರೋಪ.ಅಪ್ರಾಪ್ತ ಫುಟ್ಬಾಲ್ ಆಟಗಾರ್ತಿ ಮೇಲೆ ಅತ್ಯಾಚಾರ ಮತ್ತು ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಆತನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆಪೊಲೀಸರ ಪ್ರಕಾರ, 2023 ರಲ್ಲಿ ವಸಾಯಿಯಲ್ಲಿರುವ ತನ್ನ ಫುಟ್‌ಬಾಲ್ ತರಬೇತಿ ಅಕಾಡೆಮಿಗೆ ಸೇರಿದ್ದ 17 ವರ್ಷದ ಬಾಲಕಿಯ ಮೇಲೆ ಮೆಂಡಲ್ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿಯ ಆಕ್ಷೇಪಾರ್ಹ ವಿಡಿಯೋಗಳನ್ನು ಸಹ ಮಾಡಿದ ಕೋಚ್, ನಂತರ ಅವುಗಳನ್ನು ಬಳಸಿಕೊಂಡು ಬಾಲಕಿಗೆ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.ಕೋಚ್ ಮೆಂಡಲ್ ಮೊದಲು ತನ್ನ ನಂಬಿಕೆ ಗಳಿಸಿದನು ಮತ್ತು ನಂತರ ಫುಟ್‌ಬಾಲ್‌ನಲ್ಲಿ ದೊಡ್ಡ ದೊಡ್ಡ ಅವಕಾಶಗಳ ಭರವಸೆ ನೀಡುವ ಭರವಸೆ ನೀಡಿ ಅತ್ಯಾಚಾರ…

Read More

ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಚಾಂತಾರು ಗ್ರಾಮದ ಬಳಿ ಶನಿವಾರ ಬೆಳಿಗ್ಗೆ ರೈಲು ಡಿಕ್ಕಿ ಹೊಡೆದು 65 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ತಮಿಳುನಾಡು ಮೂಲದ ದೊರೆಸ್ವಾಮಿ ಎಂದು ಗುರುತಿಸಲಾಗಿದೆ.ಪೊಲೀಸ್ ಮೂಲಗಳ ಪ್ರಕಾರ, ಚಾಂತಾರು ಗ್ರಾಮದ ಕುಂಜಾಲು ರಸ್ತೆಯಲ್ಲಿರುವ ರೈಲ್ವೆ ಕೆಳಸೇತುವೆಯ ಬಳಿ ಈ ಘಟನೆ ಸಂಭವಿಸಿದೆ. ರಾಜಧಾನಿ ಎಕ್ಸ್‌ಪ್ರೆಸ್ ಬೆಳಿಗ್ಗೆ 7 ಗಂಟೆ ಸುಮಾರಿಗೆ ಆ ವ್ಯಕ್ತಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ಅಪಘಾತ ಸಂಭವಿಸಿದಾಗ ರೈಲು ಅತಿ ವೇಗದಲ್ಲಿ ಚಲಿಸುತ್ತಿತ್ತು ಎಂದು ಪ್ರಾಥಮಿಕ ಮಾಹಿತಿ ಸೂಚಿಸುತ್ತದೆ. ಮೃತರು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ದೊರೆಸ್ವಾಮಿ ಮೂವರು ಮಕ್ಕಳನ್ನು ಅಗಲಿದ್ದಾರೆ.ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Read More

ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಅರಿಕೆರೆ ಪ್ರದೇಶದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರವನ್ನು ಪಣಂಬೂರು ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಜೂನ್‌ 10 ರಂದು ಬೆಳಗ್ಗೆ ಜೋಕಟ್ಟೆ ಅರಿಕೆರೆ ಸಮೀಪದ ಎಂಎಸ್‌ಇಝಡ್‌ಗೆ ಸೇರಿದ ನೀರು ಹರಿಯುವ ತೋಡಿನಲ್ಲಿ ಸುಮಾರು 35-40 ವರ್ಷದ ಅಪರಿಚಿತ ಗಂಡಸಿನ ಮೃತದೇಹವು ಕುತ್ತಿಗೆಯನ್ನು ಕೊಯ್ದು ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಈ ಕುರಿತು ಕಿಶೋರ್ ಎಂಬವರು ನೀಡಿದ ದೂರಿನ ಮೇರೆಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿತ್ತು. ತನಿಖೆಯ ವೇಳೆ ಮೃತನನ್ನು ಚಂದನ್‌ ಚೌಹಾನ್‌ (36) ಬಿಹಾರ ಮೂಲದ ನಿವಾಸಿ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಪ್ರಶಾಂತ್ ಕುಮಾರ್ ರನ್ನು ಜೂನ್‌13 ರಂದು ಬೆಳಗಿನ ಜಾವ 1.30 ಗಂಟೆಗೆ ಗೋವಾ ರಾಜ್ಯದ ಮಡಗಾಂವ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾದ ಇನ್ನೊಬ್ಬ ಆರೋಪಿ ಪಿಂಕೂ ಮಹ್ತೋ ನನ್ನು ವಿಜಯ ವಿಠಲ ಭಜನಾ ಮಂದಿರದ ಬಳಿಯ ಜೋಕಟ್ಟೆ ಪ್ರದೇಶದಲ್ಲಿ ವಶಕ್ಕೆ…

Read More

ಸಾಮಾಜಿಕ ಜಾಲತಾಣಗಳಲ್ಲಿ ತಾವು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಹಾಗೂ ಊಹಾಪೋಹಗಳು ಸಂಪೂರ್ಣ ಆಧಾರರಹಿತವಾಗಿದ್ದು, ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ತಾವು ಅಧಿಕಾರ ಅಥವಾ ಹುದ್ದೆಗಳಿಗಾಗಿ ರಾಜಕೀಯಕ್ಕೆ ಬಂದವರಲ್ಲ ಎಂದು ಹೇಳಿದ್ದಾರೆ. “ನಾನು ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕಾಗಿ ಸೇರಿಲ್ಲ. ಜನಸೇವೆಯ ಉದ್ದೇಶದಿಂದ ಪಕ್ಷಕ್ಕೆ ಸೇರಿದ್ದೇನೆ. ಅಧಿಕಾರ ಅಥವಾ ಹುದ್ದೆಗಳು ಬಂದರೆ ಅದು ಹೆಚ್ಚುವರಿ ಜವಾಬ್ದಾರಿಯಷ್ಟೇ. ನನ್ನ ರಾಜಕೀಯ ಜೀವನದ ಮೂಲ ಉದ್ದೇಶ ಜನರ ಸೇವೆ ಹಾಗೂ ಕರ್ನಾಟಕದ ಸಮಗ್ರ ಅಭಿವೃದ್ಧಿಯಾಗಿದೆ” ಎಂದು ತಿಳಿಸಿದ್ದಾರೆ. ಅಧಿಕಾರ ಅಥವಾ ಹುದ್ದೆಗಾಗಿ ತಾವು ಪರಿತಪಿಸುತ್ತಿಲ್ಲ ಎಂದು ಹೇಳಿರುವ ಅವರು, “ಹುದ್ದೆಗಳು ವ್ಯಕ್ತಿಯನ್ನು ದೊಡ್ಡವನನ್ನಾಗಿಸುವುದಿಲ್ಲ. ಜನರ ವಿಶ್ವಾಸ ಮತ್ತು ಸೇವೆಯೇ ವ್ಯಕ್ತಿಯ ನಿಜವಾದ ಶಕ್ತಿಯಾಗಿದೆ. ನನಗೆ ಅಧಿಕಾರ ಸಿಕ್ಕರೆ ಅದು ಜನರ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಮಾತ್ರ. ಅಧಿಕಾರ ಎನ್ನುವುದು ಗೌರವ ಅಥವಾ ಸ್ಥಾನಮಾನವಲ್ಲ, ಜನರ ಸಮಸ್ಯೆಗಳಿಗೆ ಪರಿಹಾರ…

Read More

ಬಜಪೆ : ಗಂಜಿಮಠ ನಾರ್ಲಪದವು ಎಂಬಲ್ಲಿ ಹತ್ತನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಬಾಲಕಿ ಮೇಲೆ ನಿರಂತರ ಅತ್ಯಾಚಾರಗೈದ ನೆರೆಮನೆಯ ಆರೋಪಿ ಜಲೀಲ್ ಎಂಬಾತನ ಮೇಲೆ ಪೋಸ್ಕೋ ಪ್ರಕರಣ ದಾಖಲಾಗಿದೆ.ತಂದೆ ತಾಯಿ ಇಲ್ಲದ ಅಪ್ರಾಪ್ತ ಬಾಲಕಿ ಚಿಕ್ಕಮ್ಮ ಯೊಂದಿಗೆ ಗಂಜಿಮಠ ಸಮೀಪದ ನಾರ್ಲಪದವು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಅಪ್ರಾಪ್ತ ಬಾಲಕಿ ಒಂಭತ್ತನೇ ತರಗತಿಯಲ್ಲಿ ಕಲಿಯುತ್ತಿರುವ ಸಂದರ್ಭದಲ್ಲಿ ಬೆಳಿಗ್ಗಿನ ಹೊತ್ತು ತನ್ನ ಚಿಕ್ಕಮ್ಮಳ ಮಕ್ಕಳನ್ನು ಮದರಸಕ್ಕೆ ಕರೆದುಕೊಂಡು ಹೋಗುತ್ತಿದ್ದು, ಆ ಸಂದರ್ಭದಲ್ಲಿ ನೆರೆಮನೆಯ ಜಲೀಲ್ ಎಂಬಾತ ಬಾಲಕಿಯನ್ನು ಪುಸಲಾಯಿಸಿ ಪ್ರತಿದಿನ ಮಾತನಾಡಿಸುತ್ತಿದ್ದು, ತಿನ್ನಲು ಚಾಕಲೇಟ್ ನೀಡುತ್ತಿದ್ದನು. ಈ ವಿಷಯವನ್ನು ಬಾಲಕಿ ತನ್ನ ಚಿಕ್ಕಮ್ಮಳೊಂದಿಗೆ ಹೇಳಿದ್ದು ಜಲೀಲ್ ನಿಗೆ ಎಚ್ಚರಿಕೆ ಕೂಡ ನೀಡಿದ್ದರು. ಜಲೀಲ್ ನಿಗೆ ಈಗಾಗಲೇ ಮದುವೆಯಾಗಿದ್ದು, ಒಂದು ಮಗು ಇದೆ. 2025 ಅಗಸ್ಟ್ 5 ರಂದು ಎಂದಿನಂತೆ ಚಿಕ್ಕಮ್ಮಳ ಮಕ್ಕಳನ್ನು ಮದರಸಕ್ಕೆ ಬಿಟ್ಟು ಬರುವ ಸಂದರ್ಭದಲ್ಲಿ ಬಾಲಕಿಯನ್ನು ತಡೆದು…

Read More

ಬಂಟ್ವಾಳ : ಬಿ.ಸಿ.ರೋಡ್ ಬಳಿಯ ಗೂಡಿನಬೈಲ್‌ನಲ್ಲಿರುವ ತನ್ನ ಮನೆಯಲ್ಲಿ ಹಠಾತ್ತನೆ ಅಸ್ವಸ್ಥಗೊಂಡ ವ್ಯಕ್ತಿಯ ಜೀವವನ್ನು ಗಸ್ತಿನಲ್ಲಿದ್ದ ಇಬ್ಬರು ರಾತ್ರಿ ಬೀಟ್ ಸಿಬ್ಬಂದಿ ಉಳಿಸಿದ್ದಾರೆ. ತಡರಾತ್ರಿ ಅಶ್ರಫ್‌ಗೆ ತೀವ್ರ ಎದೆ ನೋವು ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿತು. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ, ಕುಟುಂಬ ಸದಸ್ಯರು ಸಹಾಯಕ್ಕಾಗಿ ಕೂಗಿದರು. ಸಹಾಯಕ್ಕಾಗಿ ಕೂಗುತ್ತಿದ್ದ ಶಬ್ದ ರಾತ್ರಿ ಗಸ್ತು ತಂಡದ ಗಮನ ಸೆಳೆಯಿತು, ಅವರು ತಕ್ಷಣ ಸ್ಥಳಕ್ಕೆ ಧಾವಿಸಿದರು. ಅಶ್ರಫ್ ಅವರಿಗೆ ಸಣ್ಣ ಹೃದಯಾಘಾತವಾಗಿತ್ತು. ಬೀಟ್ ಸಿಬ್ಬಂದಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದರು. ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ವಿನೋದ್ ಮತ್ತು ಗೃಹರಕ್ಷಕ ದಳದ ಸಿಬ್ಬಂದಿ ಜಯಗಣೇಶ್ ಅವರ ಸಮಯೋಚಿತ ಮನಸ್ಸು ಮತ್ತು ತ್ವರಿತ ಪ್ರತಿಕ್ರಿಯೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

Read More

ಬೆಳ್ತಂಗಡಿ: ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿ ಪ್ರಸ್ತುತ ಅರಸಿಮಕ್ಕಿ ಗ್ರಾಮೀಣ ಅಂಚೆ ವಿತರಕ ಸುರೇಶ್ (35) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯನ್ನು 2023ರ ಡಿಸೆಂಬರ್ ನಲ್ಲಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.7 ರಂದು ದೂರು ನೀಡಿದ್ದರು. ಪ್ರಕರಣದ ಬಗ್ಗೆ ತನಿಖೆ ನಡೆಸಿದ ಧರ್ಮಸ್ಥಳ ಪೊಲೀಸರು ಆರೋಪಿ, ಅಂಚೆ ವಿತರಕ ಸುರೇಶ್ ನನ್ನು ಕಳೆಂಜದಲ್ಲಿ ಜೂ.8ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸಿ ಜೂ.9 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಧರ್ಮಸ್ಥಳ ಪ್ರಭಾರ ಸಬ್ ಇನ್ಸೆಕ್ಟರ್ ಕಿಶೋರ್.ಪಿ, ಸಬ್ ಇನ್ಸೆಕ್ಟರ್ ಸಮರ್ಥ ಆರ್ ಗಾಣಿಗೇರ ತಂಡದ…

Read More

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಇಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಧ್ಯಾಹ್ನ ಸುಮಾರು 1:40ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಿದ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದರು.ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆಯೇ ಅಭಿಮಾನಿಗಳು ಶಿಳ್ಳೆ, ಚಪ್ಪಾಳೆ ಹಾಗೂ ಘೋಷಣೆಗಳ ಮೂಲಕ ತಮ್ಮ ನೆಚ್ಚಿನ ನಾಯಕನಿಗೆ ಭರ್ಜರಿ ಸ್ವಾಗತ ಕೋರಿದರು. ‘ದಳಪತಿ’ ವಿಜಯ್ ಅವರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು.ಅಭಿಮಾನಿಗಳ ಪ್ರೀತಿಗೆ ಪ್ರತಿಕ್ರಿಯಿಸಿದ ವಿಜಯ್, ನಗುಮುಖದೊಂದಿಗೆ ಕೈಬೀಸಿ ಶುಭಾಶಯ ಕೋರಿದರು. ಬಳಿಕ ಅವರು ರಸ್ತೆ ಮಾರ್ಗವಾಗಿ ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದತ್ತ ಪ್ರಯಾಣ ಬೆಳೆಸಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿರುವ ವಿಜಯ್ ಅವರ ಭೇಟಿ ರಾಜಕೀಯ ಹಾಗೂ ಅಭಿಮಾನಿ ವಲಯಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

Read More

ರಾಜಸ್ಥಾನ: ಮದುವೆಯ ಸಂಭ್ರಮದಲ್ಲಿದ್ದ ಕುಟುಂಬವೊಂದರಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ ದುರಂತಕ್ಕೆ ಕಾರಣವಾಗಿದೆ. . ರಾಜ್‌ಸಮಂದ್ ಜಿಲ್ಲೆಯ ಅರಾವಳಿ ಬೆಟ್ಟಗಳ ಸಾಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣವಾದ ಗೌರಿಧಾಮದಲ್ಲಿ ಫೋಟೋಶೂಟ್ ನಡೆಸುತ್ತಿದ್ದಾಗ ಯುವಕನೊಬ್ಬ ಸರೋವರದಲ್ಲಿ ಕಾಲು ಜಾರಿ ಬಿದ್ದು, ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಎಸ್‌ಡಿಆರ್‌ಎಫ್ (SDRF) ತಂಡ ನಡೆಸಿದ ಸುದೀರ್ಘ ಕಾರ್ಯಾಚರಣೆಯ ನಂತರ ಬುಧವಾರ ಯುವಕನ ಶವ ಪತ್ತೆಯಾಗಿದೆ.ಚಿತ್ತೋರ್‌ಗಢ ನಿವಾಸಿ ಅರ್ಜುನ್ ದಮಾಮಿ ಮೃತಪಟ್ಟ ದುರ್ದೈವಿ ಯುವಕ.ಪೊಲೀಸರ ಮಾಹಿತಿಯ ಪ್ರಕಾರ, ಅರ್ಜುನ್ ದಮಾಮಿ ಶೀಘ್ರದಲ್ಲೇ ಮದುವೆಯಾಗಲಿದ್ದ ತನ್ನ ಭಾವಿ ವಧು ಮತ್ತು ಆಕೆಯ ಚಿಕ್ಕಪ್ಪನೊಂದಿಗೆ ಗೌರಿಧಾಮ ದೇವಸ್ಥಾನಕ್ಕೆ ಭೇಟಿ ನೀಡಲು ಹಾಗೂ ವಿವಾಹ ಪೂರ್ವ ಫೋಟೋಶೂಟ್‌ಗಾಗಿ ಬಂದಿದ್ದ. ಚಿಕ್ಕಪ್ಪ ದೇವಾಲಯ ಸಂಕೀರ್ಣದ ಬಳಿಯೇ ಉಳಿದುಕೊಂಡಿದ್ದರು. ಆದರೆ ಅರ್ಜುನ್ ಮತ್ತು ಆತನ ಭಾವಿ ವಧು ಫೋಟೋಶೂಟ್‌ಗಾಗಿ ನದಿಯ ತಳಭಾಗಕ್ಕೆ ಇಳಿದಿದ್ದರು. ಈ ನಡುವೆ ಅರ್ಜುನ್ ಸರೋವರದ ಬಳಿ ಸ್ನಾನ ಮಾಡಲು ತೆರಳಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಆಳವಾದ ನೀರಿಗೆ ಬಿದ್ದಿದ್ದಾನೆ. ಆತ ನೀರಿನಲ್ಲಿ…

Read More