Author: main-admin

ನವದೆಹಲಿ: ಪಾಕಿಸ್ಥಾನ ವಿರುದ್ದ ಭಾನುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ರೋಚಕ ಹಣಾಹಣಿಯಲ್ಲಿ ಭಾರತ ಗೆಲುವು ಸಾಧಿಸುತ್ತಿದ್ದಂತೆಯೇ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸಂಭ್ರಮಿಸಲಾಗುತ್ತಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ಥಾನ 20 ಓವರ್ ಗಳಲ್ಲಿ ಎಂಟು ವಿಕೆಟ್ ಕಳೆದುಕೊಂಡು 159 ರನ್ ಗಳಿಸಿದರೆ, ಭಾರತವು 6 ವಿಕೆಟ್ ಕಳೆದುಕೊಂಡು ಅಂತಿಮ ಎಸೆತದಲ್ಲಿ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿದ ಪಾಕಿಸ್ತಾನಕ್ಕೆ ಉತ್ತಮ ಆರಂಭವೇನು ಸಿಗಲಿಲ್ಲ. 15 ರನ್ ಆಗುವಷ್ಟರಲ್ಲಿ ನಾಯಕ ಬಾಬರ್ ಅಜಂ ಮತ್ತು ಕೀಪರ್ ರಿಜ್ವಾನ್ ಪೆವಿಲಿಯನ್ ಸೇರಿದ್ದರು. ನಂತರ ಜೊತೆಯಾದ ಮಸೂದ್ ಮತ್ತು ಇಫ್ತಿಕಾರ್ ಅಹಮದ್ 76 ರನ್ ಜೊತೆಯಾಟವಾಡಿದರು. ತಲಾ ಅರ್ಧಶತಕ ಸಿಡಿಸಿದ ಇಬ್ಬರು ಪಾಕ್ ತಂಡವನ್ನು ಆಧರಿಸಿದರು. ಕೊನೆಯಲ್ಲಿ ಶಹೀನ್ ಶಾ ಅಫ್ರಿದಿ 8 ಎಸೆತಗಳಲ್ಲಿ 16 ರನ್ ಗಳಿಸಿದರು. ಭಾರತದ ಪರ ಅರ್ಶದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ತಲಾ ಮೂರು ವಿಕೆಟ್ ಕಿತ್ತರು. ಭುವನೇಶ್ವರ್ ಮತ್ತು ಶಮಿ ತಲಾ ಒಂದು…

Read More

ಪಾಟ್ನಾ: ರಾಜಧಾನಿ ಪಾಟ್ನಾದ ದಿಘಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ ಗಂಗಾನದಿಯಲ್ಲಿ ದೋಣಿಯೊಂದು ಮಗುಚಿದ್ದು, ಅದರಲ್ಲಿದ್ದ 11 ಮಂದಿಯನ್ನು ರಕ್ಷಿಸಲಾಗಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಹುಡುಕಾಟ ನಡೆಯುತ್ತಿದೆ. ದೋಣಿ ಮುಳುಗುತ್ತಿದ್ದನ್ನು ಗಮನಿಸಿದ ಗಂಗಾ ಘಾಟ್ ಅನ್ನು ಸ್ವಚ್ಛಗೊಳಿಸುವ ಸಿಬ್ಬಂದಿ, ಸ್ಥಳೀಯರ ಸಹಾಯದಿಂದ ದೋಣಿಯಲ್ಲಿದ್ದ ಜನರನ್ನು ರಕ್ಷಿಸಿದ್ದಾರೆ. ಘಟನಾ ಸ್ಥಳಕ್ಕೆ SDRF ತಂಡ ಆಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಎನ್ನಲಾಗುತ್ತಿದೆ. 13 ಜನರಿದ್ದ ದೋಣಿಯೊಂದು ಜೆಪಿ ಸೇತುವಿನ ಪಾಯಾ ಸಂಖ್ಯೆ 10 ರ ಬಳಿ ಇದ್ದಕ್ಕಿದ್ದಂತೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಅದರಲ್ಲಿದ್ದ 11 ಜನರನ್ನು ರಕ್ಷಿಸಲಾಗಿದೆ. ಇನ್ನೂ ಇಬ್ಬರು ನಾಪತ್ತೆಯಾಗಿದ್ದಾರೆ. ಗಂಗಾನದಿಯ ನೀರಿನ ಮಟ್ಟ ಹೆಚ್ಚಿದ್ದು, ನಾಪತ್ತೆಯಾಗಿರುವ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಎಸ್ಪಿ ತಿಳಿಸಿದ್ದಾರೆ.

Read More

ಮಕ್ಕಳ ಚರ್ಮ ತುಂಬ ಮೃದವಾಗಿರುತ್ತದೆ. ಅವರನ್ನು ಎಷ್ಟು ಜಾಗ್ರತೆಯಿಂದ ನೋಡಿಕೊಳ್ಳುತ್ತೇವೋ ಅಷ್ಟು ಒಳ್ಳೆಯದು. ಅದರಲ್ಲೂ ಚಳಿಗಾಲದಲ್ಲಿ ಮಕ್ಕಳ ಚರ್ಮ ತೇವಾಂಶ ಕಳೆದುಕೊಳ್ಳುತ್ತದೆ. ಹವಾಮಾನದಲ್ಲಿ ಸಣ್ಣ ಬದಲಾವಣೆ ಆದರೂ ಕೂಡಾ ಅದು ಮಕ್ಕಳ ಆರೋಗ್ಯದ ಮೇಲೆ ತಕ್ಷಣ ಪರಿಣಾಮ ಬೀರುತ್ತದೆ. ಹಾಗೆಯೇ ಅವರ ಚರ್ಮವೂ ಒಣಗುತ್ತದೆ.ಚಳಿಗಾಲದಲ್ಲಿ ನಿಮ್ಮ ಮಗುವಿನ ಚರ್ಮವು ಬಹಳ ಒಣಗಿದ್ದರೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ನಿಮ್ಮ ಮಗುವಿನ ಕೋಮಲ ತ್ವಚೆಯನ್ನು ನೋಡಿಕೊಳ್ಳಲು ಇಲ್ಲಿ ತಿಳಿಸಿರುವ ಕೆಲವೊಂದು ಸಲಹೆಗಳು ನಿಮಗೆ ಅನುಕೂಲವಾಗಬಹುದು. ಮಕ್ಕಳ ಉಡುಪುಗಳ ಬಗ್ಗೆ ಇರಲಿ ಗಮನಯಾವುದೇ ಹವಾಮಾನವಾದರೂ ಮಕ್ಕಳ ಬಟ್ಟೆಗಳ ಫ್ಯಾಬ್ರಿಕ್ ಬಹಳ ಮೃದುವಾಗಿರಬೇಕು. ಚಳಿಗಾಲದಲ್ಲಿ ಮಕ್ಕಳ ಚರ್ಮವು ಹೆಚ್ಚು ಸೂಕ್ಷ್ಮವಾಗುತ್ತದೆ. ಆದ್ದರಿಂದ ದದ್ದುಗಳು ಅಥವಾ ಕಿರಿಕಿರಿಯನ್ನು ತಡೆಯುವ ಬಟ್ಟೆಗಳನ್ನು ತೊಡಿಸಿ. ಅವರಿಗೆ ಮೃದುವಾದ, ಸರಳವಾದ ಬಟ್ಟೆಗಳನ್ನು ಆರಿಸಿ. ಈ ಬಟ್ಟೆಗಳನ್ನು ಮಾರುಕಟ್ಟೆಯಿಂದ ತಂದ ಕೂಡಲೇ ಮಕ್ಕಳಿಗೆ ತೊಡಿಸಬೇಡಿ. ಅವುಗಳನ್ನು ಮೊದಲು ಬೇಬಿ ಡಿಟರ್ಜೆಂಟ್‌ನಲ್ಲಿ ತೊಳೆಯಿರಿ.ಮಕ್ಕಳ ಉತ್ಪನ್ನಗಳನ್ನು ಎಚ್ಚರಿಕೆಯಿಂದ ಆರಿಸಿಮಕ್ಕಳಿಗೆ…

Read More

ಬೆಳಗಾವಿ : ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಅನಾರೋಒಗ್ಯದಿಂದ ಬಳಲುತ್ತಿದ್ದ ಶಾಸಕ ಆನಂದ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ. ಆನಂದ್ (ವಿಶ್ವನಾಥ್) ಚಂದ್ರಶೇಖರ್ ಮಾಮನಿ ಅವರು ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಜನವರಿ 18, 1966 ಜನಿಸಿದರು. ತಂದೆ ಚಂದ್ರಶೇಖರ ಮಲ್ಲಿಕಾರ್ಜುನ ಮಾಮನಿ, ತಾಯಿ ಶ್ರೀಮತಿ ಗಂಗಮ್ಮ ಮಾಮನಿ. ಹಿಂದೂ ಲಿಂಗಾಯತ (ಪಂಚಮಸಾಲಿ) ಸಮುದಾಯಕ್ಕೆ ಸೇರಿದ ಇವರು ಸವದತ್ತಿಯ ಗೌರವಕುಟುಂಬಕ್ಕೆ ಸೇರಿದವರು. 2008 ರಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಸವದತ್ತಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಅವರು ಮತ್ತೆ 2013-2018 ರಲ್ಲಿ ಎರಡನೇ ಬಾರಿಗೆ ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧಿಸಿ ಜಯಗಳಿಸಿದರು. ಮತ್ತೆ 2018 ರಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್​ ವಿಜಯ ಸಾಧಿಸಿದರು. ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ವಿಧಾನಸಭಾ ಡೆಪ್ಯುಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

Read More

ನವದೆಹಲಿ: 2022 ಅಕ್ಟೋಬರ್ 25ರಂದು ಭಾಗಶಃ ಸೂರ್ಯಗ್ರಹಣ ಸಂಭವಿಸಲಿದೆ(3 ಕಾರ್ತಿಕ, 1944 ಶಕ ಯುಗ). ಭಾರತದಲ್ಲಿ ಗ್ರಹಣವು ಮಧ್ಯಾಹ್ನದ ನಂತರ ಸೂರ್ಯಾಸ್ತದ ಮೊದಲು ಕಾಣಿಸಿಕೊಳ್ಳಲಿದ್ದು, ಇದು ಹೆಚ್ಚಿನ ಸ್ಥಳಗಳಲ್ಲಿ ಗೋಚರಿಸುತ್ತದೆ. ಆದಾಗ್ಯೂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ (ಐಜ್ವಾಲ್, ದಿಬ್ರುಗಢ್, ಇಂಫಾಲ್, ಇಟಾನಗರ, ಕೊಹಿಮಾ, ಸಿಬ್ಸಾಗರ್, ಸಿಲ್ಚಾರ್, ತಮೆಲಾಂಗ್ ಇತ್ಯಾದಿ) ಇದನ್ನು ನೋಡಲು ಸಾಧ್ಯವಿಲ್ಲ. ದೇಶದ ವಾಯವ್ಯ ಭಾಗಗಳಲ್ಲಿ ಗರಿಷ್ಠ ಗ್ರಹಣದ ಸಮಯದಲ್ಲಿ ಚಂದ್ರನು ಸೂರ್ಯನನ್ನು ಆವರಿಸಿದ ಪ್ರಮಾಣವು ಸರಿಸುಮಾರು ಶೇಕಡ 40 ಮತ್ತು 50ರ ನಡುವೆ ಇರುತ್ತದೆ. ದೇಶದ ಇತರ ಭಾಗಗಳಲ್ಲಿ, ಶೇಕಡಾವಾರು ವ್ಯಾಪ್ತಿಯು ಮೇಲಿನ ಮೌಲ್ಯಗಳಿಗಿಂತ ಕಡಿಮೆ ಇರುತ್ತದೆ. ದೆಹಲಿ ಮತ್ತು ಮುಂಬೈನಲ್ಲಿ, ಗ್ರಹಣದ ಪರ್ವ(ಉತ್ತುಂಗ) ಸಮಯದಲ್ಲಿ ಚಂದ್ರನು ಸೂರ್ಯನನ್ನು ಆವರಿಸಿಕೊಳ್ಳುವ ಶೇಕಡಾವಾರು ಪ್ರಮಾಣ ಕ್ರಮವಾಗಿ 44% ಮತ್ತು 24% ಇರುತ್ತದೆ. ಗ್ರಹಣ ಆರಂಭದಿಂದ ಸೂರ್ಯಾಸ್ತಮಾನದವರೆಗೆ ದೆಹಲಿ ಮತ್ತು ಮುಂಬೈನಲ್ಲಿ ಕ್ರಮವಾಗಿ 1 ಗಂಟೆ 13 ನಿಮಿಷ ಮತ್ತು 1 ಗಂಟೆ…

Read More

ಮಂಗಳೂರು: ಕ್ಯಾನ್ಸರ್ ಪೀಡಿತರಿಗೆ ಕೂದಲು ದಾನ ಮಾಡುವ ಮೂಲಕ ಎರಡು ವರ್ಷದ ಕೂಸೊಂದು ಎಲ್ಲರಿಗೂ ಮಾದರಿಯಾಗಿದ್ದಾಳೆ.ಮರೋಳಿಯ ಭರತ್ ಕುಲಾಲ್ ಹಾಗೂ ಸುಮಲತಾ ದಂಪತಿಯ ಪುತ್ರಿ ಆದ್ಯ ಕುಲಾಲ್ ಕ್ಯಾನ್ಸರ್ ಪೀಡಿತರಿಗೆ ವಿಗ್ ಮಾಡಲು ತಮ್ಮ ಕೂದಲನ್ನು ದಾನ ಮಾಡಿದ್ದಾಳೆ. ಇಷ್ಟೊಂದು ಸಣ್ಣ ವಯಸ್ಸಿಗೆ ಈ ರೀತಿಯ ಕಾರ್ಯವನ್ನು ಮಾಡಿರೋದು ಎಲ್ಲರ ಶ್ಲಾಘನೆಗೆ ಪಾತ್ರವಾಗಿದೆ. ಈಕೆಯ ಸಾಧನೆಯ ಬಗ್ಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿ ಈ ರೀತಿ ಬರೆದುಕೊಂಡಿದ್ದಾರೆ. “ನಮಸ್ತೇ ಕುಡ್ಲ, ಆದ್ಯ ಕುಲಾಲ್ ಎಂಬ ಮರೋಳಿಯ ಈ ಮಗುವಿನ ಧೈರ್ಯ ಮತ್ತು ಆಸಕ್ತಿಯನ್ನು ಗಮನಿಸಿ ನಿಜಕ್ಕೂ ನಾನು ಭಾವುಕನಾದೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ (2.4 ವರ್ಷ) ಆಕೆ ತನ್ನ ಕೂದಲನ್ನು ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿದ್ದಾಳೆ. ಸಮಾಜಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಸೇವೆ ಸಲ್ಲಿಸಲು ನಮ್ಮಲ್ಲಿ ಅನೇಕರನ್ನು ಪ್ರೇರೇಪಿಸಿದ್ದಾಳೆ. ಮರೋಳಿಯ ಸುಮಲತಾ ಹಾಗೂ ಭರತ್ ಕುಲಾಲ್ ದಂಪತಿ ಅವಳನ್ನು ಸರಿಯಾಗಿ ಬೆಳೆಸುತ್ತಿದ್ದಾರೆ. ಅವಳು…

Read More

ಮಂಗಳೂರು: ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕರಿಂದ ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ. ಅಕ್ರಮವಾಗಿ ದುಬೈನಿಂದ ಚಿನ್ನವನ್ನು ಒಳ ಉಡುಪಿನಲ್ಲಿರಿಸಿ ತರುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ. ಅಕ್ಟೋಬರ್ 18 ರಿಂದ ಅಕ್ಟೋಬರ್ 21 ರ ಮಧ್ಯೆ ಆಗಮಿಸಿದ ಐವರು ಪ್ರಯಾಣಿಕರಲ್ಲಿ ಬರೋಬ್ಬರಿ 1.59 ಕೋಟಿ ಮೌಲ್ಯದ 3124.540 ಗ್ರಾಂ ನ ಚಿನ್ನವನ್ನು ಪತ್ತೆ ಹಚ್ಚಲಾಗಿದ್ದು. ಇವರೆಲ್ಲರೂ ಅಕ್ರಮ ಚಿನ್ನ ಸಾಗಾಟ ನಡೆಸು ಉದ್ದೇಶದಿಂದ ಅದನ್ನು ಬೇರೆ ಬೇರೆ ರೂಪಕ್ಕೆ ಪರಿವರ್ತಿಸಿದ್ದಾಗಿ ವಿಮಾನ‌ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳು ಚಿನ್ನವನ್ನು ಪೇಸ್ಟ್ ಹಾಗೂ ಪೌಡರ್ ರೂಪಕ್ಕೆ ಬದಲಾಯಿಸಿ, ಒಳ ಉಡುಪಿನಲ್ಲಿ ಇರಿಸಿಕೊಂಡು ಸಾಗಿಸಲು ಯತ್ನಿಸಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ‌. ತಪಾಸಣೆ ವೇಳೆ ಅಕ್ರಮ ಚಿನ್ನ ಸಾಗಾಟ ನಡೆಸುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು, ಪ್ರಯಾಣಿಕರ ಸಹಿತ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.‌

Read More

ಮಂಜೇಶ್ವರ ಉಪ ಜಿಲ್ಲಾ ವಿಜ್ಞಾನ ಮೇಳ ನಡೆಯುತ್ತಿದ್ದ ಸಂದರ್ಭದಲ್ಲಿ ಚಪ್ಪರ ಕುಸಿದು 59 ಮಂದಿ ಗಾಯ ಗೊಂದ ಘಟನೆಗೆ ಸಂಬಂಧ ಪಟ್ಟಂತೆ ಆರು ಮಂದಿ ಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ . ಚಪ್ಪರದ ಗುತ್ತಿಗೆ ದಾರ ಗೋಕುಲ್ ದಾಸ್, ಅಹಮ್ಮದಾಲಿ ಎ. ಪಿ , ಅಬ್ದುಲ್ ಬಶೀರ್, ಅಬ್ದುಲ್ ಶಾಮಿಲ್, ಇಲ್ಯಾಸ್ ಮುಹಮ್ಮದ್ ಮತ್ತು ಅಶ್ರಫ್ ಬಂಧಿತರು. ಇವರ ವಿರುದ್ಧ ಜುವೈನಲ್ ಕಾಯ್ದೆ ಸೇರಿದಂತೆ ಹಲವು ಮೊಕದ್ದಮೆ ದಾಖಲಿಸಲಾಗಿದೆ .ಶುಕ್ರವಾರ ಮಧ್ಯಾಹ್ನ ಬೇಕೂರು ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಘಟನೆ ನಡೆದಿತ್ತು. ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಕೇರಳ ಶಿಕ್ಷಣ ಸಚಿವ ಶಿವನ್ ಕುಟ್ಟಿ ಆದೇಶ ನೀಡಿದ್ದಾರೆ.ಗಾಯಗೊಂಡು ಮಂಗಳೂರು ಹಾಗೂ ಕಾಸರಗೋಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ 15 ಮಂದಿ ಚೇತರಿಸಿಕೊಳ್ಳುತ್ತಿದ್ದಾರೆ. ಉಳಿದವರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ

Read More

ಬೆಂಗಳೂರು : ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹೆಚ್ಚಳವಾಗುತ್ತಿದ್ದು, ಹೆಣ್ಣು ಮಕ್ಕಳ ಸಂಖ್ಯೆ ಕುಸಿತವಾಗುತ್ತಿದೆ ಎಂದು ಕೇಂದ್ರ ಸರ್ಕಾರ ನಡೆಸಿದ ಸ್ಯಾಂಪಲ್ ರಿಜಿಸ್ಟ್ರೇಷನ್ ಸಿಸ್ಟಂ (SRS)-2022 ರ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಸ್ಯಾಂಪಲ್ ರಿಜಿಸ್ಟ್ರೇಷನ್ ಸಿಸ್ಟಂ-2022 ರ ವರದಿಯಲ್ಲಿ ಪ್ರಸ್ತುತ ರಾಜ್ಯದಲ್ಲಿ 1 ಸಾವಿರ ಗಂಡು ಮಕ್ಕಳಿಗೆ ಕೇವಲ 916 ಹೆಣ್ಣು ಮಕ್ಕಳಿದ್ದಾರೆ. ಗ್ರಾಮೀಣ ಭಾಗದಲ್ಲಿ 1 ಸಾವಿರ ಗಂಡು ಮಕ್ಕಳಿಗೆ 942 ಹೆಣ್ಣು ಮಕ್ಕಳಿದ್ದರೆ, ನಗರ ಪ್ರದೇಶದಲ್ಲಿ 1 ಸಾವಿರ ಗಂಡು ಮಕ್ಕಳಿಗೆ 871 ಹೆಣ್ಣು ಮಕ್ಕಳಿದ್ದಾರೆ ಎಂಬ ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕಠಿಣ ಕಾನೂನು ಜಾರಿಗೊಳಿಸಿದೆ. ಈ ನಡುವೆ ಆರೋಗ್ಯ ಇಲಾಖೆಯೂ ಸಭೆ ನಡೆಸಿ, ಭ್ರೂಣ ಪರೀಕ್ಷೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲು ಹಾಗೂ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ಕಾಯಿದೆಯಡಿ ಅಕ್ರಮವಾಗಿ ಭ್ರೂಣ ಪತ್ತೆ ಮಾಡುವ ಸ್ಕ್ಯಾನ್ ಸೆಂಟರ್ ಗಳ ವಿರುದ್ಧ ಕಠಿಣ…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಡಾ.ಕೆ.ವಿ.ರಾಜೇಂದ್ರ ಅವರನ್ನು ಮೈಸೂರಿನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಡಾ. ಕೆ.ವಿ.ರಾಜೇಂದ್ರ ಅವರಿಂದ ತೆರವಾದ ಸ್ಥಾನಕ್ಕೆ ದ.ಕ.ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರನ್ನು ಪ್ರಭಾರ ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ. ಕೋವಿಡ್ ಸಂಕಷ್ಟದ ವೇಳೆ ಹಾಗೂ ಅತಿವೃಷ್ಟಿಯಿಂದ ಉಂಟಾದ ಹಾನಿಯಾದ ಸಂದರ್ಭ ದ.ಕ.ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಡಾ.ಕೆ.ವಿ.ರಾಜೇಂದ್ರ ಕಾರ್ಯನಿರ್ವಹಿಸಿದ್ದರು. ಡಾ. ಕುಮಾರ್ ಅವರು ಕಳೆದ ವರ್ಷವಷ್ಟೇ ಕೆಎಎಸ್‌ನಿಂದ ಐಎಎಸ್‌ಗೆ ಪದೋನ್ನತಿಯಾಗಿದ್ದರು. ಈ ಹಿಂದೆ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಆಗಿ ಸೇವೆ ಸಲ್ಲಿಸಿದ್ದರು.

Read More