ಮುಂಬೈ : ನಗರದಲ್ಲಿ ಅನುಮಾನಾಸ್ಪ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆ ನವೆಂಬರ್ 1 ರಿಂದ ನವೆಂಬರ್ 15 ರವರೆಗೆ 15 ದಿನಗಳ ಕಾಲ ಮುಂಬೈನಲ್ಲಿ ಸೆಕ್ಷನ್ 144 ಅನ್ನು ವಿಧಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಹಾರಾಷ್ಟ್ರ ಪೊಲೀಸ್ ಕಾಯ್ದೆಯ ಸೆಕ್ಷನ್ 37 ರ ಅಡಿಯಲ್ಲಿ 144 ಸೆಕ್ಷನ್ ಜಾರಿಗೆ ಮಾಡಲಾಗಿದೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 144 ಜಾರಿ ಇರುವ ಸಾರ್ವಜನಿಕ ಸ್ಥಳಗಳಲ್ಲಿ ಐದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿರ್ಬಂಧಿಸಲಾಗಿದೆ. ಇನ್ನಷ್ಟು ನಿರ್ಬಂಧಗಳ ಸಂಪೂರ್ಣ ಪಟ್ಟಿಇಲ್ಲಿದೆ ಓದಿ ಮುಂಬೈನಲ್ಲಿ ಸೆಕ್ಷನ್ 144: ನಿರ್ಬಂಧಗಳ ಸಂಪೂರ್ಣ ಪಟ್ಟಿಯನ್ನು ಪರಿಶೀಲಿಸಿ 5 ಕ್ಕಿಂತ ಹೆಚ್ಚು ಜನರು ಸಾರ್ವಜನಿಕವಾಗಿ ಸೇರುವುದನ್ನು ನಿಷೇಧಿಸಲಾಗಿದೆ. ಮೆರವಣಿಗೆಗಳ ಮೇಲೆ ನಿಷೇಧ ಹೇರಲಾಗುವುದು. ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಲಾಗಿದೆ. ಮೆರವಣಿಗೆಯಲ್ಲಿ ಸಂಗೀತ ಬ್ಯಾಂಡ್ ಗಳನ್ನು ನಿಷೇಧಿಸಲಾಗಿದೆ. ಅನುಮತಿಯಿಲ್ಲದೆ ಸಾಮಾಜಿಕ ಕೂಟಗಳನ್ನು ನಿಷೇಧಿಸಲಾಗಿದೆ. ಪ್ರತಿಭಟನೆ/ಉಪವಾಸ ಸತ್ಯಾಗ್ರಹವನ್ನು ನಿಷೇಧಿಸಲಾಗಿದೆ. ಆದಾಗ್ಯೂ, ಮದುವೆ ಸಮಾರಂಭಗಳು ಮತ್ತು ಅಂತ್ಯಕ್ರಿಯೆಗಳಿಗೆ…
Author: main-admin
ಬಂಟ್ವಾಳ: ಕೆ.ಎಸ್. ಆರ್. ಟಿ. ಸಿ ಬಸ್ ಮತ್ತು ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿಟ್ಲ ಮೆಸ್ಕಾಂ ವಲಯದ ಎಇ ಪ್ರವೀಣ್ ಜೋಶಿ ರವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬಂಟ್ವಾಳ ಹೊರವಲಯದ ಮಣಿಹಳ್ಳದಲ್ಲಿ ಇಂದು ಬೆಳಿಗ್ಗೆ ನಡೆದ ಸರಣಿ ಅಪಘಾತದಲ್ಲಿ ಪ್ರವೀಣ್ ರವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರವೀಣ್ ರವರು ವಗ್ಗದ ಮನೆಯಿಂದ ಕರ್ತವ್ಯಕ್ಕೆ ಕಾರಿನಲ್ಲಿ ಬರುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಕಾರಿನೊಳಗಡೆ ಸಿಲುಕಿದ್ದ ಪ್ರವೀಣ್ ರನ್ನು ಹೊರ ತೆಗೆಯಲು ಹರಸಾಹಸ ಪಟ್ಟಿದ್ದು, ಕ್ರೇನ್ ಮೂಲಕ ಗಾಯಾಳುಗಳನ್ನು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರ ಗಾಯಗೊಂಡಿದ್ದ ಹಿನ್ನೆಲೆ ಪ್ರವೀಣ್ ರವರು ಚಿಕಿತ್ಸೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ
ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದಲ್ಲಿ ಆರ್ಮಿ ಹೆಲಿಕಾಕಾಪ್ಟರ್ ಪತನಗೊಂಡಿದ್ದು, ಸಿಯಾಂಗ್ ಜಿಲ್ಲೆ ಸಿಂಗಿಂಗ್ ಬಳಿ ಪತನಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಪ್ಪರ್ ಸಿಯಾಂಗ್ ಜಿಲ್ಲೆಯ ಟ್ಯುಟಿಂಗ್ ಮುಖ್ಯಕಚೇರಿಯಿಂದ 25 ಕಿ.ಮೀ ದೂರದಲ್ಲಿರುವ ಸಿಂಗ್ಗಿಂಗ್ ಗ್ರಾಮದ ಬಳಿ ಮಿಲಿಟರಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಅಪಘಾತದ ಸ್ಥಳಕ್ಕೆ ರಸ್ತೆ ಸಂಪರ್ಕವಿಲ್ಲ, ರಕ್ಷಣಾ ತಂಡವನ್ನು ಕಳುಹಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆಈ ತಿಂಗಳ ಆರಂಭದಲ್ಲಿ ಅರುಣಾಚಲ ಪ್ರದೇಶದ ತಮಾಂಗ್ ಬಳಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿತ್ತು. ಅಪಘಾತದಲ್ಲಿ ‘ಚೀತಾ’ ಹೆಲಿಕಾಪ್ಟರ್‌ನಲ್ಲಿದ್ದ ಪೈಲಟ್ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ
ಮಂಗಳೂರು: ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ.ಈ ರೋಗದಿಂದ ಜಾನುವಾರು ಮಾಲೀಕರುಗಳಿಗೆ ಆರ್ಥಿಕ ನಷ್ಟವುಂಟಾಗುವುದನ್ನು ಗಮನದಲ್ಲಿರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಅ.20 ರಿಂದ ನವೆಂಬರ್ 30ರವರೆಗೆ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ. ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೊಣ, ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಂಗಿಗ್ ಮಾಡುವಂತೆ ಅವರು ಸಂಬಂಧಿಸಿದವರಿಗೆ ಸೂಚಿಸಿರುತ್ತಾರೆ.
ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆ ಮಾಡಿಕೊಳ್ಳಲು ದುಷ್ಪ್ರೇರಣೆ ನೀಡಿದ ಪ್ರಕರಣದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸ್ ಕಾನ್‌ಸ್ಟೆಬಲ್ ಪ್ರವೀಣ್ ಸಾಲ್ಯಾನ್ (35) ಮೇಲಿದ್ದ ಆರೋಪವು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಪೋಕೊ)ದಲ್ಲಿ ಸಾಬೀತಾಗಿದ್ದು, ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ವಿವರ: ಬಜಪೆ ಸಿದ್ಧಾರ್ಥ ನಗರ ನಿವಾಸಿ ಪ್ರವೀಣ್ ಸಾಲ್ಯಾನ್ 2015ರ ಫೆ. 16ರಂದು ಅಪ್ರಾಪ್ತ ವಯಸ್ಕ ಬಾಲಕಿಯನ್ನು ಫೇಸ್‌ಬುಕ್‌ನಲ್ಲಿ ಪರಿಚಯ ಮಾಡಿಕೊಂಡಿದ್ದ. ಅನಂತರ ತಾನು ಪ್ರೀತಿಸುತ್ತಿರುವುದಾಗಿ ನಾಟಕವಾಡಿದ ಆತ ನಿರಂತರ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣ ಮೂಲಕ ಆಕೆಯನ್ನು ಸಂಪರ್ಕಿಸುತ್ತಿದ್ದ. ತನ್ನ ಗುಪ್ತಾಂಗದ ಚಿತ್ರಗಳನ್ನು ಆಕೆಗೆ ಕಳುಹಿಸಿ, ಅಶ್ಲೀಲ ಸಂಭಾಷಣೆಯನ್ನೂ ನಡೆಸುತ್ತಿದ್ದ. ಬಳಿಕ ಅಕೆಯಲ್ಲಿ ಒಂದು ಲಕ್ಷ ರೂ. ಹಣ ಅಥವಾ ಚಿನ್ನ ನೀಡಬೇಕು ಎಂದು ಬೇಡಿಕೆಯಿಟ್ಟು ಬೆದರಿಸಿದ್ದ. ಇದರಿಂದ ಆತಂಕಗೊಂಡ ಆಕೆ 2015ರ ಜೂ. 10ರಂದು ಬೆಳಗ್ಗೆ 5ರಿಂದ 6.15ರ ನಡುವೆ ತನ್ನ ಮನೆಯ ಬೆಡ್‌ರೂಮ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ…
ಮಂಗಳೂರು: ನಗರದ ಎನ್ಐಟಿಕೆ ಬಳಿಯಿರುವ ಸುರತ್ಕಲ್ ಟೋಲ್ ಗೇಟ್ ತೆರವಿಗೆ ಅ.18 ರಂದು ಮುತ್ತಿಗೆ ಹಾಕಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಅ.28 ರಿಂದ ಅಹೋರಾತ್ರಿ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದೆ. ಸುರತ್ಕಲ್ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟವನ್ನು ಟೋಲ್ ಸಂಗ್ರಹ ಸ್ಥಗಿತಗೊಳ್ಳುವವರೆಗೂ ರಾಜಿಯಿಲ್ಲದೆ ಮುಂದುವರಿಸಲಾಗುತ್ತದೆ. ಅವಿಭಜಿತ ದ.ಕ. ಜಿಲ್ಲೆಯ ಜನತೆ ಟೋಲ್ ಗೇಟ್ ಮುತ್ತಿಗೆ ಹೋರಾಟದಲ್ಲಿ ಭಾಗವಹಿಸಿ ಒಕ್ಕೊರಲಿನಿಂದ ಆಗ್ರಹಿಸಿದರೂ ಬಿಜೆಪಿ ಸರಕಾರ ಟೋಲ್ ಸಂಗ್ರಹ ಸ್ಥಗಿತಗೊಳಿಸದೆ ಭಂಡತನ ಪ್ರದರ್ಶಿಸಿದೆ. ಪೊಲೀಸ್ ಬಲ ಪ್ರಯೋಗಿಸಿ ಪ್ರತಿಭಟನಾಕಾರರನ್ನು ಚದುರಿಸಿ, ಮುಖಂಡರನ್ನು ವಶಕ್ಕೆ ತೆಗೆದುಕೊಂಡಿದೆ. ಇದು ಬಿಜೆಪಿ ಸರಕಾರ, ಸಂಸದ, ಶಾಸಕರುಗಳ ಜನವಿರೋಧಿತನವನ್ನು ಎತ್ತಿತೋರಿಸಿದೆ ಎಂದು ಸಮಿತಿ ಆರೋಪಿಸಿದೆ. ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆಗೆ ವ್ಯಾಪಕ ಜನಬೆಂಬಲದಿಂದ ಕಂಗೆಟ್ಟ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರು ಟೋಲ್ ಗೇಟ್ ಮುಚ್ಚಲು 15, 20 ದಿನಗಳ ಕಾಲಾವಕಾಶವನ್ನು ಕೋರಿದ್ದರು. ಆದರೆ ಟೋಲ್ ತೆರವಿಗೆ ಸಂಬಂಧಿಸಿ…
ಬೆಂಗಳೂರು : ದೈವ ನರ್ತನ ಮಾಡುವವರಿಗೆ ಸಚಿವ ಸುನೀಲ್ ಕುಮಾರ್ ( Sunil Kumar) ಗುಡ್ ನ್ಯೂಸ್ ನೀಡಿದ್ದು, 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ಎರಡು ಸಾವಿರ ಮಾಸಾಶನ ನೀಡಲು ತೀರ್ಮಾನಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಮಾಹಿತಿ ನೀಡಿದ್ದು, 60 ವರ್ಷ ಮೇಲ್ಪಟ್ಟ ದೈವ ನರ್ತನ ಮಾಡುವವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 2000 ಮಾಸಾಶನ ನೀಡಲಿದೆ ಎಂದರು. ನಂತರ ಈ ಬಗ್ಗೆ ಮಾತನಾಡಿದ ಸಚಿವರು ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬಕ್ಕೆ ಹಿಡಿದ ಕನ್ನಡಿಯಾಗಿದೆ. ಇಂತಹ ಆಚರಣೆಗಳ ಬಗ್ಗೆ ಯಾರೂ ಮಾತನಾಡಬಾರದು ಎಂದು ಹೇಳಿದ್ದಾರೆ. ಭೂತಾರಾಧನೆ ಹಿಂದೂ ಸಂಸ್ಕೃತಿಯ ಭಾಗ, ಯಾರೋ ಒಬ್ಬರು ಹೇಳಿದ ಮಾತ್ರಕ್ಕೆ ಆ ಸಂಸ್ಕೃತಿ ನಮ್ಮಿಂದ ದೂರವಾಗಲ್ಲ, ಕಾಂತಾರ ಸಿನಿಮಾ ವಿವಾದದ ಭುಗಿಲೆದ್ದ ಬೆನ್ನಲ್ಲೇ ಈ ತೀರ್ಮಾನ ಕೈಗೊಳ್ಳಲಾಗಿದೆ.
ದಾಮೋಹ್(ಮಧ್ಯಪ್ರದೇಶ): ಯುವಕನೊಬ್ಬ ನಗ್ನವಾಗಿ ವಿದ್ಯುತ್ ತಂತಿಗಳ ಮೇಲೆ ಸ್ಟಂಟ್ ಮಾಡಿರುವ ಘಟನೆ ಮಧ್ಯಪ್ರದೇಶದ ಶಹಜಾದ್‌ಪುರ ಗ್ರಾಮದಲ್ಲಿ ನಡೆದಿದೆ. ಇದರ ವಿಡಿಯೋ ಕೂಡ ವೈರಲ್ ಆಗುತ್ತಿದೆ. ಈ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಯುವಕನನ್ನು ಬರ್ಖೇಡಾ ಗ್ರಾಮದ ನಿವಾಸಿ ಹರನಾಥ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಮಾನಸಿಕ ಅಸ್ವಸ್ಥ ಎಂದು ಕುಟುಂಬ ತಿಳಿಸಿದೆ. ಹರನಾಥ್ ಅನ್ನು ಕುಟುಂಬವು ಕುಟುಂಬವು ಛತ್ತರ್‌ಪುರದ ಬಾಗೇಶ್ವರ ಧಾಮಕ್ಕೆ ಕರೆದೊಯ್ದು ಮನೆಗೆ ಹಿಂದಿರುಗುತ್ತಿದ್ದಾಗ ದಾರಿಯಲ್ಲಿ ವಿದ್ಯುತ್ ಕಂಬವೇರಿ ವಿದ್ಯುತ್ ತಂತಿಗಳ ಮೇಲೆ ಸ್ಟಂಟ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ.ಅದೃಷ್ಟವಶಾತ್ ಘಟನೆ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಯುವಕನ ಕೃತ್ಯದಿಂದ ವಿಚಲಿತರಾದ ಕುಟುಂಬಸ್ಥರು ಘಟನೆಯ ಬಗ್ಗೆ ವಿದ್ಯುತ್ ಇಲಾಖೆ ಹಾಗೂ ಬಟಿಯಾಗಢ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕರನ್ನು ವಿದ್ಯುತ್ ತಂತಿಯಿಂದ ಕೆಳಗಿಳಿಸಿದ್ದಾರೆ.
ಬಂಟ್ವಾಳ: ಕಳೆದ ಕೆಲವು ದಿನಗಳಿಂದ ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಸತ್ತಿಕಲ್ಲು ನಿವಾಸಿ ಅಬ್ದುಲ್ ಸತ್ತಾರ್ ಎಂದು ಗುರುತಿಸಲಾಗಿದೆ. ಕಲ್ಲಡ್ಕದ ಪೊರ್ಲಿಪ್ಪಾಡಿ ಎಂಬಲ್ಲಿ ಅಬ್ದುಲ್ ಸತ್ತಾರ್ ಮತ್ತು ಮಹಮ್ಮದ್ ಇಸ್ಮಾಯಿಲ್ ಎಂಬುವರು ಕಳ್ಳತನ ಮಾಡಿದ್ದ ಎರಡು ಜಾನುವಾರುಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂದ್ದು, ಗೋಳ್ತಮಜಲು ಗ್ರಾಮದ ಮದಕ ನಿವಾಸಿ ಮೊಹಮ್ಮದ್ ಇಸ್ಮಾಯಿಲ್ ಎಂಬಾತನನ್ನು ಬಂಧಿಸಿದ್ದರು.ಇನ್ನು ಈ ಪ್ರಕರಣ ಸಂಬಂಧ ಇಬ್ಬರು ತಲೆಮರೆಸಿಕೊಂಡಿದ್ದಾರೆ.
ಮಂಗಳೂರು: ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಮನೆಯಿಂದ ಸೋಮವಾರ ನಾಪತ್ತೆಯಾಗಿದ್ದ ಬಾಲಕಿ ಬುಧವಾರ ಗೋವಾದಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಆಕೆ ಮಂಗಳವಾರ ಮುಂಜಾವ 3ಕ್ಕೆ ನಗರದ ಬಿಜೈ ಸರಕಾರಿ ಬಸ್ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಳು. ಅಲ್ಲಿಂದ ರಿಕ್ಷಾವೊಂದನ್ನು ಬಾಡಿಗೆಗೆ ಗೊತ್ತುಪಡಿಸಿ ಮುಕ್ಕ ಬೀಚ್‌ಗೆ ಹೋಗಿ ಸಂಜೆ 5.55ಕ್ಕೆ ಮರಳಿ ಬಿಜೈ ಸರಕಾರಿ ಬಸ್ ನಿಲ್ದಾಣಕ್ಕೆ ಬಂದಿದ್ದಳು. ಬಿಜೈ ಸರಕಾರಿ ಬಸ್ ನಿಲ್ದಾಣದ ಸಿಸಿ ಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಆ ಬಳಿಕ ಈಕೆ ಎಲ್ಲಿಗೆ ತೆರಳಿದ್ದಾಳೆ ಎನ್ನುವ ಮಾಹಿತಿ ಸಿಕ್ಕಿರಲಿಲ್ಲ. ಬೆಂಗಳೂರು ಪೊಲೀಸರು ಮಂಗಳೂರು ಹಾಗೂ ಧರ್ಮಸ್ಥಳಕ್ಕೆ ಆಗಮಿಸಿ ಹುಡುಕಾಟ ನಡೆಸಿದ್ದರು. ಅಲ್ಲದೆ ಈಕೆ ನಾಪತ್ತೆಯಾಗಿರುವ ಬಗ್ಗೆ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿತ್ತು. ಈಕೆ ಗೋವಾಕ್ಕೆ ತೆರಳಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಬಳಿಕ ಅಲ್ಲಿ ಆಕೆಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.