Author: main-admin

ಬಂಟ್ವಾಳ: ಬಂಟ್ವಾಳ-ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಇಳಿದಿದ್ದು, ಯಾರಿಗೂ ಗಾಯಗಳಾಗಿಲ್ಲ. ಆದರೆ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಘಟನೆ ಸುಮಾರು ಒಂದು ತಾಸುಗಳ ಕಾಲ ಬಂಟ್ವಾಳ- ಮೂಡುಬಿದಿರೆ ರಸ್ತೆ ಬ್ಲಾಕ್ ಆಗಿತ್ತು ಎನ್ನಲಾಗಿದೆ. ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಅವರಿಗೆ ಸೇರಿದ ಕಾರು ಅದಾಗಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ವೇಳೆ ಕಾರು ಬ್ರೇಕ್ ಹಾಕಿದರೂ ನಿಲ್ಲದೇ ಇದ್ದು, ಬಳಿಕ ಚಾಲಕನ ಸಮಯ ಪ್ರಜ್ಞೆಯಿಂದ ಕಾರು ನಿಂತಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದು, ಯಾರಿಗೂ ಯಾವುದೇ ಹಾನಿಯಾಗಿಲ್ಲ.

Read More

ಸುಳ್ಯ: ವಿದ್ಯುತ್ ಕಂಬವೊಂದಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದು, ರಸ್ತೆಗೆ ಅಡ್ಡಲಾಗಿ ಪಲ್ಟಿಯಾದ ಘಟನೆ ಮಡಿಕೇರಿ ಸಮೀಪದ ಜೋಡುಪಾಲದಲ್ಲಿ ಸೋಮವಾರ ಸಂಭವಿಸಿದೆ.ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, ಪಲ್ಟಿಯಾದ ಪರಿಣಾಮ ರಸ್ತೆ ಬ್ಲಾಕ್ ಆಗಿತ್ತು. ಹೀಗಾಗಿ ಸುಳ್ಯದಿಂದ ಮಡಿಕೇರಿ ಕಡೆ ಹೋಗುವ ಪ್ರಯಾಣಿಕರು ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುವ ಪ್ರಯಾಣಿಕರು ಪರದಾಡುವಂತಾಯಿತು. ಇನ್ನು ಸ್ಥಳಕ್ಕೆ ಮಡಿಕೇರಿ ಪೊಲೀಸ್ ಠಾಣಾ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಪುತ್ತೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬಂದ ಷೇರು ಮಾರುಕಟ್ಟೆ ಹೂಡಿಕೆ ಕುರಿತ ಜಾಹೀರಾತು ನಂಬಿ ವ್ಯಕ್ತಿಯೋರ್ವರು 46.1 ಲಕ್ಷ ರೂ. ಹಣ ಕಳೆದುಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮುಹಮ್ಮದ್ ಅನ್ಸಾಫ್ ಎಂ. (40) ಹಣ ಕಳೆದುಕೊಂಡಿದ್ದು, ಈ ಬಗ್ಗೆ ಅವರು ಸೆನ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿರುತ್ತಾರೆ. ದೂರುದಾರರು ಫೆ. 2 ರಂದು ಫೇಸ್‌ಬುಕ್‌ನಲ್ಲಿ ಷೇರು ಮಾರುಕಟ್ಟೆ ಹೂಡಿಕೆ ಬಗ್ಗೆ ಬಂದ ಜಾಹೀರಾತು ನೋಡಿದ್ದು, ಅದರಲ್ಲಿ “ಗುಡ್‌ ಇನ್‌ಕಂ ರಿಸಲ್ಟ್’ ಎಂಬುದಾಗಿ ಇತ್ತು. ಬಳಿಕ ಅದರ ಲಿಂಕ್ ಒಪನ್ ಮಾಡಿದಾಗ ವಾಟ್ಸಪ್ ಆಪ್ ಪೇಜ್ ಒಂದು ಕಾಣಿಸಿದೆ. ಈ ಪೇಜ್ ನಲ್ಲಿ ಅಪರಿಚಿತ ವ್ಯಕ್ತಿಯು ಕಂಪೆನಿಯಲ್ಲಿರುವ ಸ್ಟಾಕ್‌ನ ಕುರಿತು ಮಾಹಿತಿ ನೀಡಿದ್ದಾನೆ. ನಂತರ ಬೇರೊಂದು ವಾಟ್ಸಪ್ ಗ್ರೂಪ್‌ಗೆ ದೂರುದಾರರನ್ನು ಸೇರಿಸಿದ್ದಾನೆ. ಬಳಿಕ ಹಣ ಹೂಡಿಕೆ ಮಾಡಲು ಬೇರೊಂದು ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗುವಂತೆ ತಿಳಿಸಿ, ಅಪರಿಚಿತ ವ್ಯಕ್ತಿ ನೀಡಿದ ಲಿಂಕ್ ಒಪನ್ ಮಾಡಿದಾಗ ವಿಕಿಂಗ್ ಗ್ಲೋಬಲ್‌ ಇನ್ವೆಸ್ಟರ್ಸ್ ಎಂಬ ವಾಟ್ಸಪ್ ಗ್ರೂಪ್ ಒಂದು…

Read More

ಕಾಸರಗೋಡು: ಇಡುಕ್ಕಿ ತೊಡುಪುಳ ನಿವಾಸಿ ಶರತ್‌ ಅವರ ಪತ್ನಿ ಬಿಂದು (28) ಆತ್ಮಹತ್ಯೆ ಮಾಡಿಕೊಂಡವರು ಅವರ ನಾಲ್ಕು ತಿಂಗಳ ಹೆಣ್ಣು ಮಗುವಿನ ಹೆಸರು ಶ್ರೀನಂದಾ. ಶರತ್‌ ಇಸ್ರೇಲ್‌ನಲ್ಲಿ ಉದ್ಯೋಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಬಿಂದು ತೊಡುಪುಳದಲ್ಲಿರುವ ಪತಿಯ ಮನೆಯಿಂದ ಪುತ್ರಿ ಶ್ರೀನಂದ ಮತ್ತು ಪುತ್ರ ಶ್ರೀಹರಿಯೊಂದಿಗೆ ಕಳೆದ ಆದಿತ್ಯವಾರ ಮುಳಿಯಾರು ಬಳಿಯ ಕೋಪಾಳಕೊಚ್ಚಿಗೆ ಬಂದಿ ದ್ದರು. ಎ. 5ರಂದು ಮಧ್ಯಾಹ್ನ ಬಿಂದು ಮನೆ ಪಕ್ಕದ ಮರದಲ್ಲಿ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿ ಯಲ್ಲಿ ಪತ್ತೆಯಾಗಿದ್ದು, ಅವರ ಕೈಯ ನರ ಕತ್ತರಿಸಲ್ಪಟ್ಟು ರಕ್ತ ಒಸ ರುತ್ತಿತ್ತು. ಇದೇ ವೇಳೆ ಮಗು ಶ್ರೀನಂದ ಮನೆಯ ಮಲಗುವ ಕೊಠಡಿಯಲ್ಲಿ ಗಂಭೀರಾವಸೆœಯಲ್ಲಿ ಕಂಡು ಬಂದಿದ್ದು, ಅದನ್ನು ಕಂಡ ಮನೆಯವರು ಮಗುವನ್ನು ಚೆಂಗಳ ಸಹಕಾರಿ ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಬಿಂದು ಮತ್ತು ಶರತ್‌ ಅವರ ವಿವಾಹ ಆರು ವರ್ಷಗಳ ಹಿಂದೆ ನಡೆದಿತ್ತು. ವಿಷಯ ತಿಳಿದ ಕಾಸರಗೋಡು ತಹಶೀಲ್ದಾರ್‌ ಪಿ.ಎಂ.ಅಬೂಬಕ್ಕರ್‌ ಸಿದ್ದಿಕ್‌, ಕಾಸರಗೋಡು ಡಿವೈಎಸ್‌ಪಿ ಜಯನ್‌ ಡೊಮಿನಿಕ್‌ ಹಾಗೂ…

Read More

ಮಂಗಳೂರು: ನಗರ ಮೋರ್ಗನ್ ಗೇಟ್ ಬಳಿಯ ರೈಲ್ವೇ ಟ್ರಾಕ್ ಪಕ್ಕದಲ್ಲಿ ವಾಕಿಂಗ್ ತೆರಳಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಮಂಗಳೂರು ನಡೆದಿದೆ. ನಾಪತ್ತೆಯಾದ ಯುವಕ ವೈದ್ಯನಾಥ ನಗರದ ನಿವಾಸಿ ವಿಕಾಸ್(26 ಎಂದು ಗುರುತಿಸಲಾಗಿದೆ. ಇವರು ತಮ್ಮ ಸಂಬಂಧಿಯೊಂದಿಗೆ ಮನೆಯಿಂದ ಶುಕ್ರವಾರ ಸಂಜೆ ವಾಕಿಂಗ್ ತೆರಳಿದವರು ವಾಪಸ್ ಬಂದಿಲ್ಲ. ಈ ಬಗ್ಗೆ ಆತನ ತಾಯಿ ಸೀತಾ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬಂಟ್ವಾಳ: ಅಕ್ರಮ ಮರಳುಗಾರಿಕೆಯನ್ನು ತಡೆಗಟ್ಟುವ ಸಲುವಾಗಿ ದ.ಕ ಜಿಲ್ಲೆಯ 30 ಕಡೆಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸೋಲಾರ್ ವಿದ್ಯುತ್‌ ಆಧಾರಿತ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದೆ. ಇಲಾಖೆಯು ಅತಿ ಹೆಚ್ಚು ಅಕ್ರಮ ಮರಳುಗಾರಿಕೆ ಕುರಿತು ದೂರು ಬರುತ್ತಿದ್ದ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದೆ. ಈ ಮೂಲಕ ಅಕ್ರಮ ಮರಳುಗಾರಿಕೆ ಮೇಲೆ ಕಣ್ಣಿಡಲು ಇಲಾಖೆ ನಿರ್ಧರಿಸಿದೆ.ದ.ಕ. ಜಿಲ್ಲಾ ಪೊಲೀಸ್‌ ವ್ಯಾಪ್ತಿಯ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯ 4 ಕಡೆ ಮತ್ತು ಮಂಗಳೂರು ಕಮಿಷನರೆಟ್ ವ್ಯಾಪ್ತಿಯ 26 ಕಡೆಗಳಲ್ಲಿ ಇಲಾಖೆ ಸಿಸಿ ಕ್ಯಾಮೆರಾವನ್ನು ಅಳವಡಿಸಿದೆ. ಕ್ಯಾಮೆರಾಗಳ ದೃಶ್ಯದ ಮೇಲೆ ಇಲಾಖೆ ನಿರಂತರವಾಗಿ ನಿಗಾ ವಹಿಸಲಿದೆ. ಅಕ್ರಮ ಸಾಗಾಟಕ್ಕೆ ಸಂಬಂಧಿಸಿ ಲಾರಿಯ ನಂಬರ್‌ ಆಧಾರದಲ್ಲಿ ಇಲಾಖೆ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿದುಬಂದಿದೆ. 

Read More

ಮಂಗಳೂರು : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯಲ್ಲಿ 23 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ 23 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿರುವ ಜಿಲ್ಲಾಡಳಿತ ಜಿಲ್ಲೆಯಲ್ಲಿನ ಹಣ ಸಾಗಾಟದ ಮೇಲೆ ತೀವ್ರ ನಿಗಾ ವಹಿಸಿದೆ. ಇನ್ನು ಕೇರಳದ ಕಾಸರಗೋಡಿನಲ್ಲೂ ಏ. 26 ರಂದೇ ಚುನಾವಣೆ ನಡೆಯುತ್ತಿದೆ. ಹೀಗಾಗಿ ಗಡಿಯಲ್ಲಿ ಎರಡೂ ರಾಜ್ಯಗಳ ಪೊಲೀಸರು ಮತ್ತು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.ಇನ್ನು ಜಿಲ್ಲೆಯಲ್ಲಿನ 23 ಚೆಕ್ ಪೋಸ್ಟ್ ಗಳಲ್ಲಿ ಅಂತರ್ ರಾಜ್ಯ 9, ಅಂತರ್ ರಾಜ್ಯ 7 ಹಾಗೂ ಸ್ಥಳೀಯ 7 ಚೆಕ್ ಪೋಸ್ಟ್ ಗಳಿವೆ.

Read More

ಉಳ್ಳಾಲ: ಗುಜರಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳ್ಳಾಲ ಠಾಣಾ ವ್ಯಾಪ್ತಿಯ ಮಹಾತ್ಮ ಗಾಂಧಿ ರಂಗ ಮಂದಿರ ಬಳಿ ಈ ಘಟನೆ ನಡೆದಿದ್ದು ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರಕ್ಕೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಲಾಗಿದೆ ಎನ್ನಲಾಗಿದೆ.ಮೂಲತಃ ತಣ್ಣೀರು ಬಾವಿ ನಿವಾಸಿ ಇದೀಗ ಉಳ್ಳಾಲದಲ್ಲಿರುವ ಮೊಹಮ್ಮದ್ ಜಾವೇದ್ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಪಂಜಿಮೊಗೊರು ನಿವಾಸಿ ಗುಜರಿ ವ್ಯಾಪಾರಿ ಹಮೀದ್ ಎಂಬಾತನನ್ನು ಮನೆಗೆ ಕರೆದುಕೊಂಡು ಕೊಲೆ ಯತ್ನ ನಡೆಸಿದ್ದು, ಇದರಿಂದ ಗಂಭೀರ ಗಾಯಗೊಂಡ ಹಮೀದ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪಿ ಜಾವೇದ್ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.ಈ ಬಗ್ಗೆ ಹಮೀದ್ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ

Read More

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳದ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ಪವನ್ (17) ಮೃತಪಟ್ಟ ಬಾಲಕ.ಮನೆಯಿಂದ ಬಿಸಿರೋಡು ಕಡೆಗೆ ಸ್ಕೂಟರ್ ನಲ್ಲಿ ಸಹಸವಾರನಾಗಿ ಸಂಚಾರ ಮಾಡುತ್ತಿದ್ದ ವೇಳೆ ನರಿಕೊಂಬು ದಿಂಡಿಗೆ ಎಂಬಲ್ಲಿ ಸ್ಕೂಟರ್ ಗೆ ರಿಕ್ಷಾ ಢಿಕ್ಕಿಯಾಗಿದೆ. ಪರಿಣಾಮ ಪವನ್ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಘಟನೆಯಿಂದ ರಿಕ್ಷಾ ಚಾಲಕ ಸಜೀಪ ನಿವಾಸಿ ಜಾಬೀರ್ ಕೂಡ ಗಾಯಗೊಂಡಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪವನ್ ಪ್ರಥಮ ಪಿಯುಸಿ ವ್ಯಾಸಂಗ ‌ಮಾಡುತ್ತಿದ್ದು, ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಯಾಗಿ ಗುರುತಿಸಿಕೊಂಡಿದ್ದ. ರಜಾ ದಿನಗಳಲ್ಲಿ ಅಜ್ಜನ ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

Read More

ಮಂಗಳೂರು : ಸುಬ್ರಹ್ಮಣ್ಯ, ಕೂಜುಮಲೆ ಪರಿಸರದಲ್ಲಿ ನಕ್ಸಲ್ ತಂಡ ಕಾಣಿಸಿಕೊಂಡ ಬೆನ್ನಲ್ಲೇ ಇದೀಗ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಕ್ಸಲ್ ತಂಡ ಪ್ರತ್ಯಕ್ಷವಾಗಿದೆ. ಈ ಮೂಲಕ ಸುಬ್ರಹ್ಮಣ್ಯ – ಕೊಡಗು ಗಡಿಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡ ಶಂಕೆ ವ್ಯಕ್ತವಾಗಿದೆ. ಶುಕ್ರವಾರ ರಾತ್ರಿ 7ಗಂಟೆಗೆ ಬಿಳಿನೆಲೆಯ ಚೇರು ಎಂಬಲ್ಲಿ ನಕ್ಸಲರ ತಂಡ ಕಾಣಿಸಿಕೊಂಡಿದೆ. 6 ಮಂದಿಯಿದ್ದ ಶಸ್ತ್ರಸಜ್ಜಿತ ನಕ್ಸಲರ ತಂಡ ಮನೆಯೊಂದಕ್ಕೆ ಭೇಟಿ ನೀಡಿ ನೀಡಿದೆ. ಮನೆಗೆ ಬಂದವರು ಊಟ ಕೇಳಿ ಅಲ್ಲಿಯೇ ಊಟ ಮಾಡಿದೆ. ಬಳಿಕ ಮೊಬೈಲ್ ಚಾರ್ಜ್ ಮಾಡಿ ತಂಡ ಅಲ್ಲಿಂದ ತೆರಳಿದೆ. ಈ ವೇಳೆ ಮನೆಯಿಂದ ಅಕ್ಕಿ ಕೇಳಿ ಪಡೆದುಕೊಂಡು ಹೋಗಿದ್ದಾರೆ. ಕೆಲ ದಿನಗಳ ಇಂದೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮಕ್ಕೆ ನಕ್ಸಲ್ ತಂಡ ಭೇಟಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಎಎನ್‌ಎಫ್ ಕೂಂಬಿಂಗ್ ಕಾರ್ಯಚರಣೆ ನಡೆಸಿತ್ತು. ಈ ನಡುವೆ ಮತ್ತೆ ನಕ್ಸಲರು ಪ್ರತ್ಯಕ್ಷವಾಗಿದ್ದು, ಪೊಲೀಸರಿಗೆ ತಲೆನೋವಾಗಿದೆ.

Read More