ಮಂಗಳೂರು : ಬರೋಬ್ಬರಿ 25 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಆಯುಕ್ತ ಮನ್ಸೂರ್ ಅಲಿಗೆ ನ್ಯಾಯಾಲಯ ಜಾಮೀನು ನಿರಾಕರಣೆ ಮಾಡಿದೆ. ಮಾರ್ಚ್ 23ರಂದು ಮುಡಾ ಆಯುಕ್ತ ಮನ್ಸೂರ್ ಅಲಿಯ ನಿರ್ದೇಶನದಂತೆ ಬ್ರೋಕರ್ ಮಹಮ್ಮದ್ ಸಲಿಂ ಎಂಬಾತ 25 ಲಕ್ಷ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 03/2024 ಕಲಂ 7(ಎ) ಭ್ರಷ್ಟಾಚಾರ ನಿರ್ಬಂಧಕ ಕಾಯ್ದೆ, 1988 (ತಿದ್ದುಪಡಿ ಕಾಯ್ದೆ, 2018) ರಡಿ ಪ್ರಕರಣ ದಾಖಲಾಗಿದೆ. ಇಬ್ಬರನ್ನು ದಸ್ತಗಿರಿ ಮಾಡಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಎಪ್ರಿಲ್ 8ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಬಳಿಕ ಮುಡಾ ಆಯುಕ್ತ ಮನ್ಸೂರ್ ಅಲಿ ಮತ್ತು ಬ್ರೋಕರ್ ಮಹಮ್ಮದ್ ಸಲಿಂ ನ್ಯಾಯಾಲಯಕ್ಕೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಎಪ್ರಿಲ್ 5ರಂದು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ…
Author: main-admin
ಬಜಪೆ : ಮನೆಯ ಬೀಗ ಒಡೆದು ಒಳನುಗ್ಗಿ ಮನೆಯೊಳಗಿದ್ದ ಲಕ್ಷಾಂತರ ರೂ ಬೆಲೆಬಾಳುವ ವಸ್ತುಗಳನ್ನು ಕಳವು ಗೈದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಬಡಗ ಎಡಪದವಿನ ಬೆಟ್ಟು ಜ್ಞಾರ ಮನೆ ಉರ್ಕಿ ನಿವಾಸಿ ರವಿ ಶೆಟ್ಟಿ(55) ಹಾಗೂ ಮೂಡಬಿದಿರೆಯ ತೋಡಾರು ಗ್ರಾಮದ ಕಲ್ಯ ಸಂಕ ನಿವಾಸಿ ಶಿವ ಪ್ರಸಾದ್ ಶೆಟ್ಟಿ (29) ಬಂಧಿತ ಆರೋಪಿಗಳು ಬಂಧಿತ ಆರೋಪಿಗಳು ಬಡಗ ಎಡಪದವಿನಲ್ಲಿರುವ ಯುವರಾಜ್ ಆಚಾರ್ಯ ರವರ ಮನೆಯ ಬೀಗವನ್ನು ಒಡೆದು ಮನೆಯಲ್ಲಿದ್ದ ಸುಮಾರು 1,40,000 ರೂಪಾಯಿ ಬೆಲೆ ಬಾಳುವ ಕೇಬಲ್, ಪ್ಯಾನ್, ಬಾಗಿಲು, ಕಿಟಿಕಿ ಹಾಗೂ ಇನ್ನಿತರ ವಸ್ತುಗಳನ್ನು ಕಳವು ಮಾಡಿದ್ದು,ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಜಪೆ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ನಂದೇಶ್ ಬಿ ಕುಂಬಾರ ರವರು ತಂಡವು ಆರೋಪಿಗಳನ್ನು ಶುಕ್ರವಾರದಂದು ಮೂಡಬಿದ್ರೆ ಸ್ವರಾಜ್ ಮೈದಾನ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಕಳವು ಮಾಡಿದ ಎಲ್ಲಾ ಸೊತ್ತುಗಳನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ. ಸ್ವಾಧೀನ ಪಡಿಸಿಕೊಂಡ ಸೊತ್ತುಗಳ…
ಮಂಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 112 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಂ.ಸಿ.ಸಿ. ಬ್ಯಾಂಕ್ ಮಾರ್ಚ್ 2024ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಲೆಕ್ಕ ಪರಿಶೋಧನಾ ಪೂರ್ವ 13.12 ಕೋಟಿ ರೂ. ವ್ಯವಹಾರಿಕ ಲಾಭ ಗಳಿಕೆ ದಾಖಲಿಸಿದೆ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದ್ದಾರೆ. ಮಿಲಾಗ್ರಿಸ್‌ನ ಸೆನೆಟ್ ಹಾಲ್‌ನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಸಿಸಿ ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆಗೊಳಿಸಲು ಶ್ರಮಿಸುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಪ್ರಥಮ ಬಾರಿಗೆ 1.07% ಎನ್.ಪಿ.ಎ. ದಾಖಲಿಸಿದೆ ಎಂದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯ ಕ್ಷೇತ್ರವನ್ನು ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಹೀಗೆ 5 ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ. ಪ್ರಸಕ್ತ ವರ್ಷ ಬ್ಯಾಂಕ್ ಕಾರ್ಯವ್ಯಾಪ್ತಿಯನ್ನು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಲು ಭಾರತೀಯ ರಿಸರ್ವ್ ಬ್ಯಾಂಕಿನಿಂದ ಅನುಮತಿ ದೊರಕಿದ್ದು, ಇದೊಂದು ಮಹತ್ವದ ಸಾಧನೆಯಾಗಿದೆ. ಈಗಾಗಲೇ ಬ್ರಹ್ಮಾವರದಲ್ಲಿ ಬ್ಯಾಂಕ್‌ನ 17ನೇ ಶಾಖೆಯನ್ನು ತೆರೆಯಲಾಗಿದ್ದು, ಕಾವೂರು, ಬೆಳ್ತಂಗಡಿ…
ಬಜ್ಪೆ: ಇಲ್ಲಿನ ಬಡಗ ಎಡಪದವು ತಿಪ್ಪಬೆಟ್ಟುವ ಯುವರಾಜ್ ಆಚಾರ್ಯ ಎಂಬವರ ಮನೆಯ ಬೀಗ ಮುರಿದು ಗೃಹೋಪಯೋಗಿ ವಸ್ತುಗಳನ್ನು ಕಳವುಗೈದಿದ್ದ ಇಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಡಗ ಎಡಪದವು ಗ್ರಾಮದ ನಿವಾಸಿ ರವಿ ಶೆಟ್ಟಿ (55), ಮೂಡುಬಿದಿರೆ ತೋಡಾರು ಗ್ರಾಮದ ನಿವಾಸಿ ಶಿವಪ್ರಸಾದ್ ಶೆಟ್ಟಿ (29) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತರಿಂದ ಗೃಹಪಯೋಗಿ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಇದರ ಒಟ್ಟು ಮೌಲ್ಯ 1.40 ಲಕ್ಷ ರೂ. ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳ ಪತ್ತೆ ಕಾರ್ಯದಲ್ಲಿ ಬಜ್ಪೆ ಪೊಲೀಸ್ ಠಾಣಾ ನಿರೀಕ್ಷಕರಾದ ನಂದೀಶ್ವರ ಬಿ ಕುಂಬಾರ ಪಿಎಸ್ಐಗಳಾದ ಗುರಪ್ಪ ಕಾಂತಿ, ರೇವಣಸಿದ್ದಪ್ಪ, ರವಿ ಎನ್.ಎನ್., ಶೋಭಾ ಆರ್, ಎಎಸ್ಐ ರಾಮ ಪೂಜಾರಿ ಮತ್ತು ಸಿಬ್ಬಂದಿಗಳಾದ ಸುಜನ್, ಪುರುಷೋತ್ತಮ, ರಶೀದ್, ದೇವಪ್ಪ ಹೊಸಮನಿ, ಬಸವರಾಜ ಪಾಟೀಲ್, ಪ್ರಕಾಶ್, ಚಿದಾನಂದ ಮೊದಲಾದವರು ಭಾಗವಹಿಸಿದ್ದರು.
ಮಂಗಳೂರು: ಅತ್ಯಾಚಾರ ಮತ್ತು ಹತ್ಯೆಗೊಳಗಾದ ಸೌಜನ್ಯಾ ಪ್ರಕರಣದಲ್ಲಿ ನ್ಯಾಯಕ್ಕೆ ಆಗ್ರಹಿಸಿ ಸೌಜನ್ಯಾಪರ ಹೋರಾಟಗಾರರು ನೋಟಾ ಜಾಗೃತಿ ಅಭಿಯಾನಕ್ಕೆ ಮುಂದಾಗಿದ್ದಾರೆ. ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 11 ವರ್ಷಗಳಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯುತ್ತಿದೆ. ಆದರೂ ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳು ಈ ಬಗ್ಗೆ ಯಾವುದೇ ಸಹಕಾರ ನೀಡಿಲ್ಲ. ಅಲ್ಲದೆ ಧರ್ಮಸ್ಥಳದಲ್ಲಿ ಈ ಹಿಂದೆ ನಡೆದ ಪದ್ಮಲತಾ, ಆನೆ ಮಾವುತ, ವೇದವಲ್ಲಿ ಕೊಲೆ ಪ್ರಕರಣಗಳಿಗೂ ನ್ಯಾಯ ದೊರಕಬೇಕೆಂದು ಚುನಾವಣಾ ಆಯೋಗದ ನಿರ್ದೇಶನದಂತೆ ನೋಟಾ ಜನಜಾಗೃತಿ ಸಭೆಗಳನ್ನು ನಡೆಸಿ ಅತೀ ಹೆಚ್ಚು ನೋಟಾಕ್ಕೆ ಮತ ಬೀಳುವಂತೆ ಕರೆ ನೀಡಲಾಗುತ್ತದೆ. ಇದಕ್ಕಾಗಿ ಸೌಜನ್ಯಾಪರ ಹೋರಾಟದ ರೂವಾರಿ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ರಾಜ್ಯ ವ್ಯಾಪಿ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ನೋಟಾ ಅಭಿಯಾನ ನಡೆಸಲಾಗುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ನೋಟಾ ಮತ ಬೀಳವಂತೆ ಕರೆ ನೀಡಲಾಗುತ್ತದೆ. ಇದಕ್ಕಾಗಿ ಮನೆಮನೆಗಳಿಗೆ ತೆರಳಿ ನೋಟಾಕ್ಕೆ ಮತ ಹಾಕುವಂತೆ ವಿನಂತಿಸಲಾಗುತ್ತದೆ. ಅಲ್ಲಲ್ಲಿ ಸಭೆಗಳನ್ನು ನಡೆಸಲಾಗುತ್ತದೆ. ಎಪ್ರಿಲ್…
ಕಣ್ಣೂರು: ಕಣ್ಣೂರು ಜಿಲ್ಲೆಯ ನಿವಾಸಿಗಳಾದ ವಿನೀಶ್ ಮತ್ತು ಶೆರಿನ್ ಎಂಬ ಇಬ್ಬರು ವ್ಯಕ್ತಿಗಳು ಪಾನೂರಿನಲ್ಲಿ ಬಾಂಬ್ ತಯಾರಿಸುವಾಗ ಸಂಭವಿಸಿದ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಶೆರಿನ್ ತೀವ್ರ ಗಾಯಗಳಿಗೆ ಬಲಿಯಾಗಿದ್ದರೆ, ವಿನೀಶ್ ಪ್ರಸ್ತುತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ (ಏಪ್ರಿಲ್ 05) ಮುಂಜಾನೆ 1 ಗಂಟೆ ಸುಮಾರಿಗೆ ಪಾನೂರಿನ ಮುಲಿಯತೋಡ್ನಲ್ಲಿ ಮನೆಯ ಟೆರೇಸ್ನಲ್ಲಿ ಸ್ಫೋಟ ಸಂಭವಿಸಿದಾಗ ಈ ಘಟನೆ ಸಂಭವಿಸಿದೆ. ಸ್ಫೋಟದಲ್ಲಿ ಒಬ್ಬ ವ್ಯಕ್ತಿಯ ಅಂಗೈಗೆ ತೀವ್ರ ಗಾಯವಾಗಿದ್ದರೆ, ಇನ್ನೊಬ್ಬರ ಮುಖಕ್ಕೆ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ತಕ್ಷಣ ಸ್ಪಂದಿಸಿದ ಪೊಲೀಸರು ಗಾಯಾಳುಗಳನ್ನು ಪರಿಯಾರಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಿದ್ದಾರೆ. ಇವರಿಬ್ಬರು ಸಿಪಿಎಂ ಕಾರ್ಯಕರ್ತರು ಎಂದು ವರದಿಯಾಗಿದೆ. ವಿನೀಶ್ ಪಾನೂರಿನ ಸ್ಥಳೀಯ ಸಿಪಿಎಂ ನಾಯಕನ ಮಗನಾಗಿದ್ದಾರೆ ಎನ್ನಲಾಗಿದೆ. ಸ್ಫೋಟದಲ್ಲಿ ಶೆರಿನ್ ಅವರ ಕೈ, ಮುಖ ಮತ್ತು ದೇಹಕ್ಕೆ ಗಾಯಗಳಾಗಿವೆ. ಅವರನ್ನು ತಜ್ಞರ ಚಿಕಿತ್ಸೆಗಾಗಿ ಕೋಝಿಕೋಡ್ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಆದರೆ ಅವರು ಅಲ್ಲಿ ಚಿಕಿತ್ಸೆ ನಿಧನರಾದರು.
ಪಡುಬಿದ್ರಿ: ಟೈಮಿಂಗ್ ವಿಚಾರಕ್ಕೆ ಗಲಾಟೆ ನಡೆದ ಬಳಿಕ ಬಸ್ಸನ್ನೇ ರೋಡ್ ಮದ್ಯೆ ಅಡ್ಡವಾಗಿ ನಿಲ್ಲಿಸಿ ಬಸ್ ಸ್ಟಾಂಡ್ ನಲ್ಲಿ ಡ್ರೈವರ್ ‘ವಿಶ್ರಾಂತಿ’ ಪಡೆದ ವಿಚಿತ್ರ ಘಟನೆ ಗುರುವಾರ ಅಪರಾಹ್ನ ಪಡುಬಿದ್ರಿಯಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ. ಕಾಪುವಿನ ಟೈಂ ಕೀಪರ್ ಶರತ್ ಹಾಗೂ ಖಾಸಗಿ ಬಸ್ ಚಾಲಕ ಅಜೀಜ್ ಮಧ್ಯೆ ಟೈಮಿಂಗ್ ಕುರಿತಾಗಿ ನಡೆದಿದ್ದ ವಾಗ್ವಾದ ನಡೆದಿತ್ತು. ಬಳಿಕ ಪಡುಬಿದ್ರಿ ತಲುಪಿದ ಸರ್ವಿಸ್ ಬಸ್ ಎಂಎಂಎಸ್‌ಗೆ ಟೈಂ ಕೀಪರ್ ಶರತ್ ಅಡ್ಡ ನಿಂತಾಗ ಕುಪಿತಗೊಂಡ ಚಾಲಕ ಅಜೀಜ್ ತನ್ನ ಮಾಲಕರಿಗೆ ಕರೆ ಮಾಡಿ, ಬಳಿಕ ಬಸ್ಸನ್ನೇ ಹೆದ್ದಾರಿಗೆ ಅಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ‘ವಿಶ್ರಾಂತಿ’ ಪಡೆದಿದ್ದಾನೆ. ಈ ಕುರಿತಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರುಗಳು ದಾಖಲಾಗಿವೆ. ಸುಮಾರು 5 ನಿಮಿಷಗಳ ಕಾಲ ನಡೆದಿದ್ದ ಈ ಪ್ರಹಸನದಲ್ಲಿ ಪಡುಬಿದ್ರಿ ಪೊಲೀಸರ ಮಧ್ಯಪ್ರವೇಶದವರೆಗೂ ಉಡುಪಿ – ಮಂಗಳೂರು ಏಕಮುಖ ರಸ್ತೆಯಲ್ಲಿ ಹೆದ್ದಾರಿ ವಾಹನ ಸಂಚಾರಕ್ಕೆ ಬಹಳ ಅಡಚಣೆ ಆಗಿತ್ತು.
ತಿರುವನಂತಪುರ: ದೇಶದಾದ್ಯಂತ ಸಂಚಲನ ಮೂಡಿಸಿದ್ದ ಮಲಯಾಳಂನ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ದೂರದರ್ಶನದಲ್ಲಿ ಪ್ರಸಾರ ಮಾಡದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೂಚಿಸಿದ್ದಾರೆ. ‘ಲೋಕಸಭೆ ಚುನಾವಣೆ ಸನ್ನಿಹಿತವಾಗಿರುವ ಕಾರಣ ಈ ಸಿನಿಮಾ ಪ್ರಸಾರದಿಂದ ಜನರಲ್ಲಿ ಕೋಮು ಉದ್ವಿಗ್ನತೆ ಉಲ್ಬಣಗೊಳ್ಳಬಹುದು, ಅಲ್ಲದೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಪ್ರಚಾರ ಯಂತ್ರ ಆಗಬೇಡಿ, ಈ ಸಿನಿಮಾ ಪ್ರಸಾರ ಮಾಡುವ ನಿರ್ಧಾರವನ್ನು ಹಿಂತೆಗೆದುಕೊಳ್ಳಿ’ ಎಂದು ಡಿಡಿ ನ್ಯಾಷನಲ್ ಬಳಿ ಕೇಳಿದ್ದಾರೆ. ‘ಜನರ ಮನಸ್ಸಿನಲ್ಲಿ ದ್ವೇಷ ತುಂಬುವ ಇಂತಹ ಚಲನಚಿತ್ರಗಳ ಪ್ರದರ್ಶನ ಖಂಡನೀಯ, ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರಸಾರದ ನಿರ್ಧಾರದಿಂದ ಹಿಂದೆ ಸರಿಯಿರಿ. ದ್ವೇಷ ಬಿತ್ತುವ ಇಂತಹ ದುರುದ್ದೇಶಪೂರಿತ ಪ್ರಯತ್ನಗಳನ್ನು ವಿರೋಧಿಸುವಲ್ಲಿ ಕೇರಳ ದೃಢವಾಗಿ ನಿಲ್ಲುತ್ತದೆ’ ಎಂದು ಸಿಎಂ ಪಿಣರಾಯಿ ವಿಜಯನ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಏಪ್ರಿಲ್ 5 ರಂದು ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ಪ್ರಸಾರ ಮಾಡುವುದಾಗಿ ದೂರದರ್ಶನ ಘೋಷಣೆ ಮಾಡಿತ್ತು.
ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್ ಬುಕ್ ಆಪ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ ನಡೆಸಿದ ಘಟನೆ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ನೆಬಿಸಾ (38) ಎಂಬವರು ವಂಚನೆಗೊಳಗಾದ ಮಹಿಳೆ. ನೆಬಿಸಾರವರು ಮಾ. 21 ರಂದು ಫೇಸ್ ಬುಕ್ ನಲ್ಲಿ Money View Personal Loan (LTD) ಆಪ್ ಮೂಲಕ, ಅಪರಿಚಿತ ಆರೋಪಿಗಳು ಪರಿಚಯಿಸಿಕೊಂಡಿದ್ದರು. ನೆಬಿಸಾ ಅವರು ಸಾಲದ ಬಗ್ಗೆ ಅಪರಿಚಿತರಿಂದ ಮಾಹಿತಿ ಪಡೆದು 5 ಲಕ್ಷ ರೂ.ಸಾಲ ಪಡೆಯಲು ದಾಖಲೆಗಳನ್ನು ಕಳುಹಿಸಿದ್ದರು. ಬಳಿಕ ಪೋನ್ ಮೂಲಕ ನೆಬಿಸಾ ಅವರನ್ನು ಸಂಪರ್ಕಿಸಿ, ಮಾ.28ರ ತನಕ ವಿವಿಧ ಹಂತದಲ್ಲಿ ಒಟ್ಟು 96,743ರೂ. ಗಳನ್ನು ಹಣವನ್ನು ಆನ್ ಲೈನ್ ಮೂಲಕ ವರ್ಗಾಯಿಸಿಕೊಂಡಿದ್ದಾರೆ. ಬಳಿಕ ಸಾಲವನ್ನು ನೀಡದೇ, ವರ್ಗಾಯಿಸಿಕೊಂಡ ಹಣವನ್ನು ಹಿಂತಿರುಗಿಸದೇ ವಂಚಿಸಿದ್ದಾರೆ. ನೆಬಿಸಾರವರು ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣಾ ಅ.ಕ್ರ 35/2024 ಕಲಂ: 66 (C), (D) IT Act & ಕಲಂ: 417,420 IPC ACT ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಮಂಗಳೂರು : ಬಜರಂಗದಳದ ಪುತ್ತೂರು ವಿಭಾಗದ ನಾಯಕ ಭರತ್ ಕುಮ್ಡೇಲುಗೆ ಗಡಿಪಾರು ಆದೇಶ ಜಾರಿಯಾಗಿದೆ. ಬಜರಂಗದಳ ಪುತ್ತೂರು ವಿಭಾಗದ ಸಂಯೋಜಕ ಭರತ್ ಕುಮ್ಡೇಲು ಮೇಲೆ ಕೊಲೆ, ಕೊಲೆ ಯತ್ನ, ದೊಂಬಿ, ಹಲ್ಲೆ ಮೊದಲಾದ ಪ್ರಕರಣಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಭರತ್ ಕುಮ್ಡೇಲುಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ನೋಟಿಸ್ ಜಾರಿಯಾಗಿದೆ. ಭರತ್ ಕುಮ್ಡೇಲುಗೆ ಗಡಿಪಾರು ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಸಂಯೋಜಕ್ ಪುನೀತ್ ಅತ್ತಾವರ ಹೇಳಿಕೆ ನೀಡಿ, ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲ್ ಸುಮಾರು ವರ್ಷಗಳಿಂದ ಸಂಘಟನೆಯಲ್ಲಿ ಜೋಡಿಸಿಕೊಂಡು ಧರ್ಮ ರಕ್ಷಣೆ, ಗೋಸಂರಕ್ಷಣೆ, ಮಾತೆಯರ ರಕ್ಷಣೆ ಅಲ್ಲದೆ ಮಾದಕ ದ್ರವ್ಯ, ಡ್ರಗ್ಸ್ ವಿರುದ್ಧ ಕೆಲಸ ಮಾಡುತ್ತಿದ್ದರು. ಆದರೆ, ರಾಜಕೀಯ ದ್ವೇಷದಿಂದ ಚುನಾವಣೆಯ ಸಂದರ್ಭ ಯಾವುದೇ ಕೆಲಸದಲ್ಲಿ ತೊಡಗಿಸಿಕೊಳ್ಳದಂತೆ ಕಾಂಗ್ರೆಸ್ ಸರಕಾರದ ಷಡ್ಯಂತ್ರ ರೂಪಿಸಿ ಭರತ್ ಕುಮ್ಡೇಲ್ ಅವರಿಗೆ ಗಡಿಪಾರು ನೋಟಿಸ್ ಜಾರಿಗೊಳಿಸಿದೆ. ರಾಜ್ಯಸರ್ಕಾರದ ಈ ಹಿಂದೂ ವಿರೋಧಿ ನೀತಿಯನ್ನು ಬಲವಾಗಿ ಖಂಡಿಸುತ್ತೇವೆ. ಗಡಿಪಾರು ಮೂಲಕ ಬಜರಂಗದಳ…










