Author: main-admin

ಮಂಗಳೂರು: ಇಂದು ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಲು ಬಂಟ್ಸ್ ಹಾಸ್ಟೆಲ್ ಪಕ್ಕದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಕಚೇರಿಯಿಂದ ಮೆರವಣಿಗೆಯಲ್ಲಿ ದ.ಕ ಜಿಲ್ಲಾಧಿಕಾರಿ ಕಚೇರಿಗೆ ಬ್ರಿಜೇಶ್ ಚೌಟ ಆಗಮಿಸಿದರು. ಇನ್ನು ನಾಮಪತ್ರವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ಸ್ವೀಕರಿಸಿದರು. ಚೌಟ ಅವರು ನಾಮಪತ್ರ ಸಲ್ಲಿಸುವ ವೇಳೆ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕಿ ಭಾಗೀರಥಿ ಮುರುಳ್ಯ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೇ ಮಾಧವ ಗೌಡ ಮತ್ತಿತರರು ಜೊತೆಗಿದ್ದರು.

Read More

 ಶ್ರೀ ಕ್ಷೇತ್ರ ಧರ್ಮಸ್ಥಳದ 2024ರ ಕಾಲಾವಧಿ ಜಾತ್ರೆಯು ಏಪ್ರಿಲ್‌ 12 ಶುಕ್ರವಾರದಿಂದ ಏಪ್ರಿಲ್‌ 24 ಬುಧವಾರದವರೆಗೆ ಅದ್ಧೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಈಗಾಗಲೇ ಸಕಲ ಸಿದ್ಧತೆ ನಡೆಯುತ್ತಿದ್ದು, ರಾಜ್ಯದ ಮೂಲೆ ಮೂಲೆಯಿಂದ ಆಗಮಿಸುವ ಲಕ್ಷಾಂತರ ಭಕ್ತರು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಜಾತ್ರೆಯ ಸೊಬಗನ್ನು ಕಣ್ತುಂಬಿಕೊಳ್ಳಲಿದ್ದಾರೆ. 2024ರ ಕಾಲಾವಧಿ ಜಾತ್ರೆಯ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಆಡಳಿತ ಮಂಡಳಿ ಧಾರ್ಮಿಕ ಕಾರ್ಯಕ್ರಮಗಳ ವಿವರ ಸೇರಿದಂತೆ ಇತರ ಮಾಹಿತಿಯೊಳಗೊಂಡ ಪ್ರಕಟಣೆ ಹೊರಡಿಸಿದ್ದು, ಭಕ್ತರಿಗಾಗಿ ಕೆಲವು ಮುಖ್ಯವಾದ ಮಾಹಿತಿಯನ್ನು ನೀಡಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಕಾಲಾವಧಿ ಜಾತ್ರೆಯ ಸಮಯದಲ್ಲಿ ಕ್ಷೇತ್ರಕ್ಕೆ ತೆರಳುವವರು ಈ ವಿಚಾರವನ್ನು ತಿಳಿದಿರಬೇಕಾಗಿದೆ. ಏಪ್ರಿಲ್‌ 18ರಿಂದ ಏಪ್ರಿಲ್‌ 23ರವರೆಗೆ ಬೆಳಗ್ಗೆ 8:30ರವರೆಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಸಾಯಂಕಾಲ 5 ಗಂಟೆಯಿಂದ 8:30ರವರೆಗೆ ಮಾತ್ರ ಭಕ್ತರನ್ನು ಗರ್ಭಗುಡಿಯ ಆವರಣಕ್ಕೆ ಬಿಡಲಾಗುವುದು ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಹೀಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್‌ 18ರಿಂದ ಏಪ್ರಿಲ್‌ 23ರವರೆಗೆ ಮುಂಜಾನೆಯ…

Read More

ವಿಟ್ಲ: ಮಹಿಳೆಯೋರ್ವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡ್ ಎಂಬಲ್ಲಿ ನಡೆದಿದೆ. ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡ್ ನಿವಾಸಿ ಸುಶೀಲಾ(60) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸುಶೀಲಾ ಅವರ ಪತಿ ಮೂರು ತಿಂಗಳ ಹಿಂದಷ್ಟೇ ಹೃದಯಾಘಾತದಿಂದ ಮೃತಪಟ್ಟಿದ್ದರು‌. ಬಳಿಕ ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ಅವರು ಇಂದು ತನ್ನ ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಡಬ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ಖಾಸಗಿ ಬಸ್ ಹಾಗೂ ಕಂಟೆನರ್ ನಡುವೆ ಭೀಕರ ಅಪಘಾತ ಸಂಭವಿದೆ. ಅಪಘಾತದಲ್ಲಿ ಹಲವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ. ಮೈಸೂರು ಪಿರಿಯಾಪಟ್ಟಣ ದಿಂದ ಧರ್ಮಸ್ಥಳಕ್ಕೆ ಮದುವೆ ಕಾರ್ಯಕ್ಕೆ ಹೊರಟ ಬಸ್ ಇದಾಗಿದ್ದು ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ. ವರನ ಕಡೆಯವರ ಬಸ್ ಎಂದು ಹೇಳಲಾಗುತ್ತಿದ್ದು ಸ್ಥಳದಲ್ಲಿ ಹಲವು ಮಂದಿ ಸೇರಿದ್ದಾರೆ.ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ ಎಂಬ ಮಾಹಿತಿ ಲಭಿಸಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ಸ್ಥಳಿಯರೊಂದಿಗೆ ರಕ್ಷಣಾ ಕಾರ್ಯ ನಡೆಯುತ್ತಿದ್ದು ಹೆಚ್ಚಿ ಮಾಹಿತಿ ನೀರೀಕ್ಷಿಸಲಾಗುತ್ತಿದೆ.

Read More

ಉಡುಪಿ: ರೌಡಿ ದಿವಾಕರ್ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿ ಸಜೀವ ಗುಂಡುಗಳು ಸೇರಿದಂತೆ ಅಕ್ರಮ ವಸ್ತುಗಳನ್ನು ವಶಕ್ಕೆ ಪಡೆದ ಘಟನೆ ಉಡುಪಿಯ ಹಿರಿಯಡ್ಕದಲ್ಲಿ ನಡೆದಿದೆ. ಬ್ರಹ್ಮಾವರ ಪೊಲೀಸ್‌ ಠಾಣೆಯ ಉಪನಿರೀಕ್ಷಕರಾದ ಮಧು ಬಿ.ಇ ಅವರಿಗೆ ಹಿರಿಯಡ್ಕ ಠಾಣಾ ವ್ಯಾಪ್ತಿಯ ರೌಡಿ ದಿವಾಕರ ಎಂಬಾತನು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಈ ಹಿನ್ನೆಲೆ ಮಂಗಳವಾರ ಸಿಬ್ಬಂದಿಯವರೊಂದಿಗೆ ಆತನ ಮನೆಗೆ ತೆರಳಿ ಪರಿಶೀಲಿಸಿದಾಗ ಕಪ್ಪು ಬಣ್ಣದ ಬಟ್ಟೆ ಪೌಚ್‌, ಸಜೀವ ಮದ್ದು ಗುಂಡುಗಳು, ಮಸಿ ಕೋವಿಗೆ ಬಳಸುವ ಮದ್ದುಗುಂಡುಗಳು, ಪ್ಲಾಸ್ಟಿಕ್‌ ಪೌಚ್‌ ನಲ್ಲಿ ಇರಿಸಲಾದ ಡೆಟೋನೇಟರ್ ಗಳು, ಪ್ಲಾಸ್ಟಿಕ್‌ ಪೌಚ್‌ನಲ್ಲಿ ಇರಿಸಲಾದ ಯಾವುದೋ ಪ್ರಾಣಿಯ ಹಲ್ಲಿನ ಆಕಾರದ ಸ್ವತ್ತುಗಳು ಹಾಗೂ ಯಾವುದೋ ಪ್ರಾಣಿಯ ಉಗುರಿನ ಆಕಾರದ ಸ್ವತ್ತುಗಳು, ಪಾಸ್ಟಿಕ್ ಪೌಚ್‌ನಲ್ಲಿ ಇರಿಸಿದ ಪಿಸ್ತೂಲ್ ಗೆ ಬಳಸುವ 7.65 ಎಂಎಂ ಸಜೀವ ಗುಂಡುಗಳು, 15 ಇಂಚು ಉದ್ದದ ಹಳೆಯ ಕೋವಿಯ ಮರದ ಬಟ್, ಹಾಕಿ ಸ್ಟಿಕ್, ಸ್ಟೀಲ್ ಚಾಕುಗಳು, ಸ್ಟೀಲಿನ ದೊಡ್ಡ…

Read More

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಇಂದು ಬೆಳಿಗ್ಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ಮೆರವಣಿಗೆಯಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಅಭ್ಯರ್ಥಿ ಪದ್ಮರಾಜ್ ಆರ್. ಅವರ ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಹಮ್ಮಿಕೊಂಡ ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು. ಬುಧವಾರ ಬೆಳಿಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಂಕನಾಡಿ ಶ್ರೀ ಬ್ತಹ್ಮಬೈದರ್ಕಳ ಗರೋಡಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಅರ್ಚನೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಗೊಂಬೆ ಬಳಗ, ಚೆಂಡೆ, ಕೊಂಬು ಸಹಿತ ಮೆರವಣಿಗೆಯಲ್ಲಿ ಕಾರ್ಯಕರ್ತರು ಹೆಜ್ಜೆ ಹಾಕಿದರು. ತೆರೆದ ವಾಹನದಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್., ಕಾಂಗ್ರೆಸ್ ಧ್ವಜದೊಂದಿಗೆ ಕಾರ್ಯಕರ್ತರ ಘೋಷಣೆ, ನಡಿಗೆಗೆ ವೇಗ ತುಂಬುವಂತಿತ್ತು.

Read More

ವಿಟ್ಲ : ವ್ಯಕ್ತಿಯೋರ್ವರಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ನೆಟ್ಲ ಮುಡ್ನೂರು ಗ್ರಾಮದ ಜನತಾಗೃಹ ಎಂಬಲ್ಲಿ ನಡೆದಿದೆ. ನೆಟ್ಲಮುಡ್ನೂರು ಗ್ರಾಮ ಬಂಟ್ವಾಳ ನಿವಾಸಿ ನವೀನ ಶೆಟ್ಟಿ (61) ಎಂಬವರು, ದಿನಾಂಕ 1-04-2024 ರಂದು ರಾತ್ರಿ, ಬಂಟ್ವಾಳ ತಾಲೂಕು ನೆಟ್ಲ ಮುಡ್ನೂರು ಗ್ರಾಮದ ಜನತಾಗೃಹ ಸಾರ್ವಜನಿಕ ರಸ್ತೆಯಲ್ಲಿ ನವೀನ ಶೆಟ್ಟಿಯವರು, ಕೊರಗಪ್ಪ ಮತ್ತು ಸುಂದರ ಎಂಬವರೊಂದಿಗೆ ಮಾತನಾಡುತ್ತಿರುವಾಗ ಆರೋಪಿ ವಸಂತ ಎಂಬಾತನು ಬಂದು ನವೀನ ಶೆಟ್ಟಿಯವರಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ನವೀನ ಶೆಟ್ಟಿಯವರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 57/2024, ಕಲಂ: 504,324,506 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Read More

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 01 ರಿಂದ ಮಾರ್ಚ್ 23 ರವರೆಗು ನಡೆಸಲಾಗಿತ್ತು. ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯ, ತಕ್ಷಣ ಶುರುವಾಗಿತ್ತು. ಕರ್ನಾಟಕದ 1,124 ಕೇಂದ್ರಗಳಲ್ಲಿ ಸುಮಾರು 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಮಾರ್ಚ್ 25ರಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿತ್ತು. ಹೀಗಾಗಿ ಇಂದು ಫಲಿತಾಂಶವು ಹೊರ ಬೀಳಲಿದೆ, ಎಂಬ ಸುದ್ದಿ ಹರಡಿತ್ತು. ಅಲ್ಲದೆ ಇದಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಕಲ ಸಿದ್ಧತೆನ ನಡೆಸಿದೆ ಎಂಬ ಸುಳ್ಳು ಸುದ್ದಿ ಹಬ್ಬಿದ್ದು. ಅದು ಸುಳ್ಳು ಎಂದು ಈಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿಯನ್ನ ನೀಡಿದೆ. ಹಾಗಾದ್ರೆ ಫಲಿತಾಂಶ ಯಾವಾಗ ಹೊರಬೀಳುತ್ತದೆ? ಬನ್ನಿ ತಿಳಿಯೋಣ. ಸುಳ್ಳು ಸುದ್ದಿಯನ್ನು ನಂಬಬೇಡಿ!ದ್ವಿತೀಯ ಪಿಯುಸಿ ಫಲಿತಾಂಶ ನೋಡಲು ಲಕ್ಷ ಲಕ್ಷ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಈ ಹಿನ್ನೆಲೆ ಆದಷ್ಟು ಬೇಗ ರಿಸಲ್ಟ್ ನೀಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕೂಡ ಪ್ರಯತ್ನ…

Read More

ಗೃಹಲಕ್ಷ್ಮಿ ಯೋಜನೆಯ ಫೆಬ್ರುವರಿ ತಿಂಗಳ ಹಣ ಈಗಾಗಲೇ ಮಹಿಳೆಯರ ಖಾತೆಗೆ ಜಮೆ ಆಗಿದೆ. ಇನ್ನೂ ಕೆಲವರ ಖಾತೆಗೆ ಹಣ ಜಮೆ ಆಗಲು ಬಾಕಿ ಇದ್ದು, ಶೀಘ್ರದಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಜಮಾ ಆಗುವ ಸಾಧ್ಯತೆ ಇದೆ. ಏಪ್ರಿಲ್‌ ಮೊದಲ ಅಥವಾ ಎರಡನೇ ವಾರ 8ನೇ ಕಂತಿನ ಹಣವು ಸಹ ಬಿಡುಗಡೆಯಾಗಲಿದ್ದು, ಮಹಿಳೆಯರ ಖಾತೆಯಲ್ಲಿ ಒಟ್ಟು 16,000ರೂ. ಉಳಿಯಲಿದೆ.

Read More

ಮಂಗಳೂರು: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ನಗರದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು(ಎ.2). ಬೆಳಗ್ಗೆ ನಡೆದಿದೆ. ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು. ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಅವರು ಇಂದು ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ತಕ್ಷಣ ಅವರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ. 2019ರಿಂದ ಬೆಳ್ತಂಗಡಿಯ ಕಡಿರು ಉದ್ಯಾವರ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನೆಲೆಯಲ್ಲಿ ಕಳೆದ ಫೆಬ್ರವರಿ ಹಾಗೂ ಮಾರ್ಚ್ ನಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು. ಜಿಪಂ ಸಿಇಒ ಡಾ.ಆನಂದ್, ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಮ್ಮಯ್ಯ, ಜಿಲ್ಲಾ ಪಂಚಾಯತ ನ ಲೆಕ್ಕಾಧೀಕ್ಷ ಬಾಲು ಡಿ.ಎಂ. ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು, ಶ್ರೀಧರ್ ರ ಚಿಕಿತ್ಸೆಗೆ ನೆರವಾಗಿದ್ದಾರೆ.…

Read More