Author: main-admin

ನವದೆಹಲಿ: ಕರ್ನಾಟಕದ ಶಾಲಾ ಕಾಲೇಜುಗಳ ತರಗತಿಯೊಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್​ ನಿಷೇಧಿಸಿ ಹೈಕೋರ್ಟ್​ ನೀಡಿದ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಸುಪ್ರೀಂಕೋರ್ಟ್​ ಇಂದು ಪ್ರಕಟಿಸಿದೆ. ಇಬ್ಬರು ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ಹೊರಬಿದ್ದಿದೆ. ಹೀಗಾಗಿ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಅವರ ಪೀಠದಿಂದ ಅಂತಿಮ ತೀರ್ಪು ಹೊರಬೀಳಲಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು, ಮೇಲ್ಮನವಿ ಅರ್ಜಿಯ ವಜಾ ಪರ ತೀರ್ಪು ನೀಡಿದ್ದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಕರ್ನಾಟಕ ಹೈಕೋರ್ಟ್​ ಆದೇಶವನ್ನು ರದ್ದು ಮಾಡುವ ಪರವಾಗಿ ತೀರ್ಪು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವು ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರ ಮುಂದೆ ಬರಲಿದೆ. ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾವಣೆಯಾಗಿದೆ. ಅಲ್ಲಿಯವರೆಗೆ ಹಿಜಾಬ್​ ವಿಚಾರದಲ್ಲಿ ಯಥಾಸ್ಥಿತಿ ಮುಂದುವರಿಯಲಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಬ್ಯಾನ್ ಕುರಿತ ಕರ್ನಾಟಕ ಹೈಕೋಟ್​​ನ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ವಜಾಗೊಳಿಗೊಳಿಸಿ ತೀರ್ಪು ನೀಡಿದರು. ಇನ್ನು…

Read More

ನವದೆಹಲಿ: ಕರ್ನಾಟಕದ ಶಾಲಾ ಕಾಲೇಜುಗಳ ತರಗತಿಯೊಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್​ ನಿಷೇಧಿಸಿ ಹೈಕೋರ್ಟ್​ ನೀಡಿದ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಸುಪ್ರೀಂಕೋರ್ಟ್​ ಇಂದು ಪ್ರಕಟಿಸುವ ಸಾಧ್ಯತೆಯಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ ಪೀಠ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರೊಂದಿಗೆ ಅಂತಿಮ ತೀರ್ಪು ಪ್ರಕಟಿಸಲಿದೆ. ಪೀಠದ ನೇತೃತ್ವ ವಹಿಸಿದ್ದ ನ್ಯಾ. ಗುಪ್ತಾ ಅವರು ಅಕ್ಟೋಬರ್ 16 ರಂದು ನಿವೃತ್ತರಾಗಲಿರುವ ಕಾರಣ ಇಂದು ತೀರ್ಪು ಪ್ರಕಟವಾಗುವ ನಿರೀಕ್ಷೆಯಿದೆ. ಸೆಪ್ಟೆಂಬರ್ 22 ರಂದು ಪ್ರಕರಣದ ಕೊನೆಯ ದಿನದ ವಿಚಾರಣೆ ನಡೆದು, ವಾದ – ಪ್ರತಿವಾದ ಪೂರ್ಣಗೊಂಡ ಬಳಿಕ ದ್ವಿಸದಸ್ಯ ಪೀಠ ತನ್ನ ತೀರ್ಪು ಕಾಯ್ದಿರಿಸಿತ್ತು. ಸುಪ್ರೀಂಕೋರ್ಟ್‌ನಲ್ಲಿ ನಡೆದ ವಿಚಾರಣೆಯ ವೇಳೆ ಕರ್ನಾಟಕ ಹೈಕೋರ್ಟ್​ ನೀಡಿದ ತೀರ್ಪನ್ನು ತಡೆ ಹಿಡಿಯುವಂತೆ ಕೋರಲಾಗಿತ್ತು. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದಿದ್ದರೆ ಅವರು ಶಾಲೆಗೆ ತೆರಳದೇ ಶಿಕ್ಷಣದಿಂದ ವಂಚಿತರಾಗಲಿದ್ದಾರೆ. ಹೀಗಾಗಿ ಶಾಲೆಯಲ್ಲೂ ಹಿಜಾಬ್​ ಧರಿಸಲು ಅವಕಾಶ ನೀಡಬೇಕು ಎಂದು ಫಿರ್ಯಾದುದಾರರ ಪರ ವಕೀಲರು…

Read More

ಮಂಗಳೂರು: ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ಐಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಮಂಗಳೂರಿನಲ್ಲಿ SDPI, ನಿಷೇಧಿತ PFI ಮುಖಂಡರ ಮನೆಗಳ ಮೇಲೆ ಮತ್ತೆ ದಾಳಿ ನಡೆಸಲಾಗಿದೆ. ಪೊಲೀಸ್ ಕಮಿಷನರ್ N.ಶಶಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಐವರು ಪಿಎಫ್​​ಐ ಮುಖಂಡರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಣಂಬೂರು, ಸುರತ್ಕಲ್, ಮಂಗಳೂರು ಗ್ರಾಮಾಂತರ, ಉಳ್ಳಾಲ ಸೇರಿ ಏಳೆಂಟು ಕಡೆ ದಾಳಿ ಮಾಡಿರುವ ಪೊಲೀಸರು ಮನೆಗಳ ಸಂಪೂರ್ಣ ಪರಿಶೀಲನೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದ ಪಿಎಫ್​​ಐ ಮುಂಡರ ವಿರುದ್ಧ UAPA ಕಾಯ್ದೆ ಸೇರಿ ವಿವಿಧ ಸೆಕ್ಷನ್​​​ಗಳಡಿ ಕೇಸ್​ ದಾಖಲಿಸಲಾಗಿದೆ.

Read More

ಮಂಗಳೂರು: ನಗರದ ಪಂಪ್‌ವೆಲ್‌ ಪ್ರದೇಶದಲ್ಲಿ ನೂತನವಾಗಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಸ್‌ ತಂಗುದಾನಕ್ಕೆ ಭೂ ಸ್ವಾಧೀನ ಮಾಡಿರುವ ಜಮೀನಿಗೆ ಪರಿಹಾರದ ಹಣ ನೀಡದ ಹಿನ್ನೆಲೆಯಲ್ಲಿ ಮಂಗಳೂರು ಮನಪಾ ಚರಾಸ್ತಿ ಜಪ್ತಿಗೆ ಮಂಗಳೂರು ಜಿಲ್ಲಾ ನ್ಯಾಯಾಲಯವು ಆದೇಶ ಮಾಡಿದೆ. ನ್ಯಾಯಾಲಯದ ಅಮೀನ್‌ ನ್ಯಾಯಾಲಯದ ಜಪ್ತಿ ಆದೇಶವನ್ನು ಜಾರಿಗೊಳಿಸಲು ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಬುಧವಾರ ತೆರಳಿದ್ದಾರೆ. ಆದರೆ ಪಾಲಿಕೆಯ ವಿನಂತಿಯ ಮೇರೆಗೆ ಪರಿಹಾರ ಪಾವತಿಗೆ ಅಕ್ಟೋಬರ್ 25ರವರೆಗೆ ಕಾಲಾವಕಾಶ ನೀಡಲಾಗಿದೆ. ಪಂಪ್‌ವೆಲ್‌ ನಲ್ಲಿ ಬಸ್‌ನಿಲ್ದಾಣ ನಿರ್ಮಾಣಕ್ಕೆ ಪಾಲಿಕೆಯು 7 ಎಕರೆ 23.5 ಸೆಂಟ್ಸ್‌ ಭೂಮಿಯನ್ನು 2008ರಲ್ಲಿ ಸ್ವಾಧೀನಪಡಿಸಿತ್ತು. 33 ಕುಟುಂಬಗಳು ಈ ಯೋಜನೆಗೆ ಜಮೀನು ನೀಡಿತ್ತು. ಆದರೆ ಸರಕಾರ ನಿಗದಿಪಡಿಸಿದ ಭೂ ಪರಿಹಾರದ ಮೊತ್ತಕ್ಕೆ 16 ಕುಟುಂಬಗಳು ತಕರಾರು ಎತ್ತಿ ಹೆಚ್ಚಿನ ಪರಿಹಾರಕ್ಕಾಗಿ ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ಸಂಬಂಧ 16 ವ್ಯಾಜ್ಯಗಳ ವಿಚಾರಣೆ ನಡೆಯುತ್ತಿದ್ದು ಈ ಪ್ರಕರಣಗಳಿಗೆ ಪಾಲಿಕೆ ತಡೆಯಾಜ್ಞೆಯನ್ನು ತಂದಿತ್ತು. ಆದರೆ, ತಡೆಯಾಜ್ಞೆಯ ಅವಧಿ ಮುಗಿದ 1 ಪ್ರಕರಣದಲ್ಲಿ ನ್ಯಾಯಾಲಯವು…

Read More

ಉಡುಪಿ: ಗೂಡ್ಸ್ ವಾಹನವೊಂದು ಎರಡು ಆಟೊ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಮಗುಚಿಬಿದ್ದ ಘಟನೆ ಕೋಟ ಸರ್ಕಲ್ ನಲ್ಲಿ ಇಂದು ನಡೆದಿದೆ. ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ 66 ಅನ್ನು ದಾಟುತ್ತಿದ್ದ ರಿಕ್ಷಾಕ್ಕೆ ಕುಂದಾಪುರ ಕಡೆಗೆ ಸಾಗುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು, ಆ ಬಳಿಕ ಎಡಬದಿಯ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಸಾಗುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಗೂಡ್ಸ್ ವಾಹನದಲ್ಲಿದ್ದ ಬಾಕ್ಸ್ ಗಳು ರಸ್ತೆಗೆ ಬಿದ್ದು ಚೆಲ್ಲಾಪಿಲ್ಲಿಯಾಗಿವೆ. ಎರಡು ರಿಕ್ಷಾಗಳು ಜಖಂಗೊಂಡಿವೆ. ಅಪಘಾತದ ರಭಸಕ್ಕೆ ರಿಕ್ಷಾ ಚಾಲಕ ರಿಕ್ಷಾದಿಂದ ಎಸೆಯಲ್ಪಟ್ಟು ರಸ್ತೆಗೆ ಬಿದ್ದು ಗಾಯಗೊಂಡಿದ್ದಾನೆ ಎನ್ನಲಾಗಿದೆ. ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಾಗಿದೆ‌.

Read More

ಮಂಗಳೂರು: ಸಿಐಎಸ್ಎಫ್ ಮಹಿಳಾ ಪಿಎಸ್ಐ ಒಬ್ಬರು ಬೆಳ್ಳಂಬೆಳಗ್ಗೆ ಎನ್ಎಂಪಿಎ ಮುಖ್ಯದ್ವಾರದ ಬಳಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಸ್ತಾನ ರಾಜ್ಯದ ಭರತ್ ಪುರ ಜಿಲ್ಲೆ ಮೂಲದ ಜ್ಯೋತಿ ಬಾಯಿ ಆತ್ಮಹತ್ಯೆಗೆ ಯತ್ನಿಸಿದವರು. ಎನ್ಎಂಪಿಎ ಮುಖ್ಯ ದ್ವಾರದ ಬಳಿ ಕರ್ತವ್ಯದಲ್ಲಿದ್ದಾಗಲೇ ಜ್ಯೋತಿ ಬಾಯಿ ಬೆಳ್ಳಂಬೆಳಗ್ಗೆ 6 – 6.15ರ ನಡುವಿನ ವೇಳೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದೆ. ಜ್ಯೋತಿ ಬಾಯಿಯವರ ಪತಿ ಓಂಬೀರ್ ಸಿಂಗ್ ಪಾರ್ಮರ್ ಅವರು ಮಂಗಳೂರಿನ ಎಂಆರ್ ಪಿಎಲ್ ನಲ್ಲಿ ಅಸಿಸ್ಟೆಂಟ್ ಕಮಾಂಡರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರಾಥಮಿಕ ವರದಿಯ ಪ್ರಕಾರ ಅದರಲ್ಲಿ ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ‌. ಆತ್ಮಹತ್ಯೆಗೆ ಯತ್ನಿಸುವ ಮೊದಲು ಜ್ಯೋತಿ ಬಾಯಿಯವರು ತಮ್ಮ ತಾಯಿಯನ್ನು ಉಲ್ಲೇಖಿಸಿ ಹಿಂದಿ ಭಾಷೆಯಲ್ಲಿ ಡೆತ್ ನೋಟ್ ಕೂಡಾ ಬರೆದಿದ್ದಾರೆ. ‘ ಈ ಜಗತ್ತಿನಲ್ಲಿ ತನಗೆ ಬದುಕಲು ಸಾಧ್ಯವಿಲ್ಲ. ಅದಕ್ಕಾಗಿ ನನ್ನ ಇಚ್ಛೆಯಿಂದಲೇ ನಾನು…

Read More

ಗೋವಾ: ನೌಕಾಪಡೆಯ ಮಿಗ್-29ಕೆ(MiG-29K) ತರಬೇತುದಾರ ವಿಮಾನ ಇಂದು ‌ಗೋವಾ ಕರಾವಳಿಯ ಸಮುದ್ರದಲ್ಲಿ ಪತನಗೊಂಡಿದೆ ಎಂಧು ವರದಿಯಾಗಿದೆ. ವರದಿಯ ಪ್ರಕಾರ, MiG 29K ಫೈಟರ್ ಎಂದಿನಂತೆ ಗಸ್ತು ತಿರುಗುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಅದೃಷ್ಟವಶಾತ್‌ ಪೈಲಟ್‌ಗಳು ಸೇಫ್‌ ಆಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ. ಸುದ್ದಿ ತಿಳಿಯುತ್ತಿದ್ದಂತೇ ನೌಕಾಪಡೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ತ್ವರಿತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಅಪಘಾತದ ಕಾರಣವನ್ನು ತನಿಖೆ ಮಾಡಲು ತನಿಖಾ ಮಂಡಳಿಗೆ (BoI) ಆದೇಶಿಸಲಾಗಿದೆ.

Read More

ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಹರಿಪದವು ಎಂಬಲ್ಲಿ ಹುಲಿವೇಷಧಾರಿ ಜಯಾನಂದ ಆಚಾರ್ಯ (65) ಎಂಬವರನ್ನು ಯುವಕನೋರ್ವ ಕೊಲೆಗೈದ ಘಟನೆ ತಡವಾಗಿ ಬೆಳಕಿಗೆ ಬಂದಿದೆ‌.‌ಕೊಲೆ ಆರೋಪಿ‌ ಕುಂಜತ್‌ಬೈಲ್ ದೇವಿನಗರದ ರಾಜೇಶ್ ಪೂಜಾರಿ‌ (31) ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿ‌ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ‌.ಹುಲಿವೇಷಧಾರಿಯಾಗಿದ್ದ ಜಯಾನಂದ ಆಚಾರ್ಯರ ಮೃತದೇಹ ಕುತ್ತಿಗೆಗೆ ದಾರ ಬಿಗಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿತ್ತು. ಈ ಬಗ್ಗೆ ಜಯಾನಂದರ ಸಹೋದರ ಅಚ್ಚುತ ಆಚಾರ್ಯ ಎಂಬವರು ಕೊಲೆ ಶಂಕೆ ವ್ಯಕ್ತಪಡಿಸಿ ಕಾವೂರು ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ ಕಾವೂರು ಪೊಲೀಸರು ತನಿಖೆ ನಡೆಸಿದಾಗ ಆರೋಪಿ ರಾಜೇಶ್ ಪೂಜಾರಿ ಕೊಲೆ ನಡೆಸಿರುವುದಾಗಿ ತಿಳಿದುಬಂದಿದ್ದು, ಅದರಂತೆ ಆತನನ್ನು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More

ಮಂಗಳೂರು : ಅ.8 ರಂದು ಮಧ್ಯರಾತ್ರಿ ಸಮಯ ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಶಾರದೋತ್ಸವ ಬಗ್ಗೆ ವಾಮಂಜೂರು ಫ್ರೆಂಡ್ಸ್ ಎಂಬ ಸಂಘಟನೆಯು ಸಾರ್ವಜನಿಕ ಸ್ಥಳದಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಗಳನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿ ಧಾರ್ಮಿಕ ಭಾವನೆಗಳಿಗೆ ಅನುಮಾನಗೊಳಿಸುವ ಉದ್ದೇಶದಿಂದ ಕೃತ್ಯವನ್ನು ಎಸಗಿರುವವರ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಂದು ಆರೋಪಿತರಾದ ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಎಂಬವರುಗಳನ್ನು ವಶಕ್ಕೆ ಪಡೆದು ಕೊಂಡಿದ್ದು, ಕೃತ್ಯಕ್ಕೆ ಬಳಸಲಾಗಿದ್ದ ಸ್ವಿಪ್ಟ್ ಕಾರನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

Read More

ಕೇರಳ : ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಮಹಿಳೆಯರು ಕೇರಳದ ತಿರುವಲ್ಲಾದಲ್ಲಿ ನರಬಲಿ ಶಂಕಿತ ಪ್ರಕರಣದಲ್ಲಿ ಹತ್ಯೆಗೀಡಾಗಿದ್ದಾರೆ. ಪೊಲೀಸರ ಪ್ರಕಾರ, ಮಹಿಳೆಯರನ್ನು ಎರ್ನಾಕುಲಂನಿಂದ ಅಪಹರಿಸಿ ತಿರುವಲ್ಲಾದಲ್ಲಿ ಕೊಲೆ ಮಾಡಲಾಗಿದೆ. ಬಲಿಪಶುಗಳನ್ನು ಪದ್ಮ ಮತ್ತು ರೋಸ್ಲಿನ್ ಎಂದು ಗುರುತಿಸಲಾಗಿದೆ. ಭಗವಲ್ ಸಿಂಗ್ ಮತ್ತು ಆತನ ಪತ್ನಿ ಲೀಲಾ ಮತ್ತು ಏಜೆಂಟ್ ಶಿಹಾಬ್ ಕೊಲೆಗೈವರಾಗಿದ್ದಾರೆ. ಎರ್ನಾಕುಲಂನಿಂದ ಇಬ್ಬರು ಮಹಿಳೆಯರನ್ನು ಅಪಹರಿಸಿ ದಂಪತಿಯ ಮನೆಗೆ ಕರೆತಂದಿರುವ ಶಂಕೆ ವ್ಯಕ್ತವಾಗಿದೆ. ಪದ್ಮಾ ನಾಪತ್ತೆಯಾಗಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾಗ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ. ಮಹಿಳೆಯರ ಫೋನ್ ಗಳನ್ನು ಮುಹಮ್ಮದ್ ಶಫಿ ಎಂಬಾತನ ಬಳಿ ಪತ್ತೆ ಮಾಡಲಾಗಿದ್ದು, ಆತ ಒಡೆದು ಹಾಕಿದ್ದು, ಅಪಹರಣ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಎರ್ನಾಕುಲಂ ಕಾಣೆಯಾದ ಮಹಿಳೆಗೆ ಸಂಬಂಧಿಸಿದಂತೆ ನಾವು ತನಿಖೆ ನಡೆಸಿದಾಗ, ಆಕೆಯನ್ನು ತಿರುವಲ್ಲಾದ ಆ ದಂಪತಿ ಮನೆಯಲ್ಲಿ ಕೊಂದು ಅವಳ ದೇಹವನ್ನು ತುಂಡುಗಳಾಗಿ ಕತ್ತರಿಸಿ ನಂತರ ಹೂಳಲಾಗಿದೆ. ಇದು ಆರ್ಥಿಕ ಲಾಭಕ್ಕಾಗಿ ದಂಪತಿ ನರಬಲಿ ನೀಡಿದ್ದಾರೆ ಎಂದು ಕೊಚ್ಚಿ ನಗರ…

Read More