ಬೆಳ್ತಂಗಡಿ: ಕಿಡಿಗೇಡಿಗಳು ವಿಷವಿಕ್ಕಿದ ಪರಿಣಾಮ ಸಾಕು ನಾಯಿಗಳು ಸೇರಿದಂತೆ 10ಕ್ಕಿಂತ ಅಧಿಕ ನಾಯಿಗಳು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ನಡೆದಿದೆ. ಮಾ. 30 ರ ರಾತ್ರಿ ಕಿಡಿಗೇಡಿಗಳು ರಸ್ತೆಯುದ್ದಕ್ಕೂ ಆಹಾರದಲ್ಲಿ ವಿಷ ಬೆರೆಸಿ ಅಲ್ಲಲ್ಲಿ ಎಸೆದು ಹೋಗಿದ್ದಾರೆ. ಈ ಆಹಾರವನ್ನು ಸೇವಿಸಿರುವ 10ಕ್ಕೂ ಅಧಿಕ ಸಾಕು ನಾಯಿಗಳು ಹಾಗೂ ಬೀದಿಬದಿ ನಾಯಿಗಳು ಸಾವನ್ನಪ್ಪಿದೆ. ತಡರಾತ್ರಿ ಈಸ್ಟರ್ ಹಬ್ಬ ಮುಗಿಸಿ ಮನೆಗೆ ತೆರಳುತ್ತಿದ್ದ ಮಂದಿ ಇದನ್ನು ಗಮನಿಸಿದ್ದು, ತಕ್ಷಣ ಪಂಚಾಯಿತಿ ಅಧ್ಯಕ್ಷ ಗಣೇಶ್ ಬಂಗೇರ ಅವರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿದಾಗ ಕೆಲ ಮನೆಗಳ ಅಂಗಳದಲ್ಲೂ ನಾಯಿಗಳು ಸತ್ತು ಬಿದ್ದಿರುವುದು ಕಂಡು ಬಂದಿದೆ. ಇನ್ನು ಸಾವನ್ನಪ್ಪಿದ ನಾಯಿಗಳನ್ನು ಪಂಚಾಯತ್ ವತಿಯಿಂದ ಹೂಳುವ ವ್ಯವಸ್ಥೆ ಮಾಡಲಾಯಿತು.
Author: main-admin
ಬ್ರಹ್ಮಾವರ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮೂಡು ತೋನ್ಸೆ ಗ್ರಾಮದ ಮುಹಮ್ಮದ್ ಫೈಝಲ್(36) ಎಂಬವರ ಮೃತದೇಹವು ಮಾಯಾಡಿ ಎಂಬಲ್ಲಿರುವ ಸ್ವರ್ಣ ನದಿಯಲ್ಲಿ ಪತ್ತೆಯಾಗಿದೆ. ರಿಕ್ಷಾ ಚಾಲಕ ವೃತ್ತಿ ಹಾಗೂ ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಇವರು ಮಾ.27ರಂದು ರಾತ್ರಿ ಮನೆಯಿಂದ ರಿಕ್ಷಾದಲ್ಲಿ ಹೋಗಿದ್ದರು. ಬಳಿಕ ಹುಡುಕಾಡಿದಾಗ ಮನೆ ಬಳಿಯ ಮೈದಾನದ ಸಮೀಪ ಇವರ ರಿಕ್ಷಾ ಪತ್ತೆಯಾಗಿತ್ತು. ಆದರೆ ಮುಹಮ್ಮದ್ ಫೈಝಲ್ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಇವರ ಮೃತದೇಹವು ನದಿಯಲ್ಲಿ ಪತ್ತೆಯಾಗಿದ್ದು, ಅವರ ಸಾವಿನಲ್ಲಿ ಸಂಶಯವಿರುವುದಾಗಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು : ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಘಟನೆ ಕಡಬದ ಮರ್ಧಾಳ ಎಂಬಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಪಾದಚಾರಿ ಸಾವನಪ್ಪಿದ್ದಾರೆ. ಮೃತರನ್ನು ಮರ್ಧಾಳ ನಿವಾಸಿ ವಿಠಲ ರೈ ಎಂದು ಗುರುತಿಸಲಾಗಿದೆ. ಮರ್ದಾಳ ಪೇಟೆಯಲ್ಲಿ ವಿಠಲ ರೈ ಯವರು ತನ್ನ ಕಾರನ್ನು ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಬಳಿಕ ಕಾರನ್ನು ಮರ್ಧಾಳದ ಮನೆಯೊಂದರ ಮುಂದೆ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಈ ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳ ಕಡಬ ಸರಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಇದೀಗ ಸ್ಥಳದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗಮಿಸುತ್ತಿದ್ದು, ಪ್ರತಿಭಟನೆ ಜೋರಾಗುವ ಸಾಧ್ಯತೆ
ಬಂಟ್ವಾಳ : ಆಕಸ್ಮಿಕ ಅಗ್ನಿ ಅವಘಡದಲ್ಲಿ ಕೂಲಿ ಕಾರ್ಮಿಕಯೊಬ್ಬರ ಮನೆ ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಕುಕ್ಕಿಪಾಡಿ ಗ್ರಾಪಂ ವ್ಯಾಪ್ತಿಯ ಎಲಿಯನಡುಗೋಡು ಎಂಬಲ್ಲಿ ನಡೆದಿದೆ. ಎಲಿಯನಡುಗೋಡು ಗ್ರಾಮದ ಉಪ್ಪಿರ ನಿವಾಸಿ ಮೋನಮ್ಮ ಅವರು ತಮ್ಮಿಬ್ಬರು ಮಕ್ಕಳೊಂದಿಗೆ ಪೂಂಜಾ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರೆಗೆ ತೆರಳಿದ್ದರು. ಜಾತ್ರೆಯಿಂದ ವಾಪಸ್ ಬಂದಾಗ ಮನೆ ಸಂಪೂರ್ಣ ಭಸ್ಮವಾಗಿತ್ತು. ಮನೆಯೊಳಗಿನಿಂದ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ಬೆಂಕಿಯನ್ನು ನಂದಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಅದಾಗಲೇ ಬೆಂಕಿ ಮನೆಯನ್ನು ಆವರಿಸಿ ಸಂಪೂರ್ಣ ಭಸ್ಮವಾಗಿತ್ತು. ಮೋನಮ್ಮ ಅವರು ಬಡವರಾಗಿದ್ದು, ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು ತಗಡು ಶೀಟಿನ ಮನೆಯಲ್ಲಿ ವಾಸವಾಗಿದ್ದರು. ಇವರಿಗೆ ಇಬ್ಬರು ಪುತ್ರಿಯರಿದ್ದು, ಓರ್ವಳು ಪದವಿ ವ್ಯಾಸಂಗ ಮಾಡುತ್ತಿದ್ದರೆ, ಇನ್ನೊಬ್ಬಳು ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ. ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾದ ಪರಿಣಾಮ ಮನೆಯೊಳಗಿನ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿದೆ. ಪದವಿ ವಿದ್ಯಾರ್ಥಿನಿಯ ಪರೀಕ್ಷೆಯ ಪ್ರವೇಶ ಪತ್ರ ಕೂಡ ಬೆಂಕಿಗೆ ಭಸ್ಮವಾಗಿದೆ ಎಂದು ತಿಳಿದು ಬಂದಿದೆ.
ಮಂಗಳೂರು: 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್‌ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಬಸ್ ಮಾಲಿಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಮಾತನಾಡಿದರು. 2017ರಿಂದ ನೋಂದಣಿಯಾಗುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನಿನಲ್ಲಿಯೇ ಇದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಬಸ್ಸುಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಂದಿನ ಒಂದು ತಿಂಗಳೊಳಗೆ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಬಸ್ಸು ಮಾಲೀಕರು ಅಫಿಧಾವಿತ್ ಸಲ್ಲಿಸಬೇಕು ಎಂದು ಅವರು ಆರ್‌ಟಿಓಗೆ ನಿರ್ದೇಶಿಸಿದರು.ಸಾರ್ವಜನಿಕರ ಜೀವರಕ್ಷಣೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲಾಗದು. ಇದರಲ್ಲಿ ನಿರ್ಲಕ್ಷವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಬಸ್‌ಗಳಲ್ಲಿ ಬಾಗಿಲನ್ನು ಅಳವಡಿಸಬೇಕೆಂದು ಸಾರ್ವಜನಿಕರಿಂದಲೂ ತೀವ್ರ ಒತ್ತಡ ಬರುತ್ತಿವೆೆ. ಜನಸಂಪರ್ಕ ಸಭೆಗಳಲ್ಲಿಯೂ ಮನವಿಗಳು ಬಂದಿವೆ. ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಮತ್ತಿತರ ರಾಜ್ಯಗಳಲ್ಲೂ ಬಸ್‌ಗಳಲ್ಲಿ ಬಾಗಿಲು ಅಳವಡಿಸಿ ಸಂಚರಿಸುತ್ತಿವೆ. ಬೆಂಗಳೂರಿನಲ್ಲಿಯೂ ಸಿಟಿ ಬಸ್‌ಗಳಲ್ಲಿ ಬಾಗಿಲು…
ಉಡುಪಿ: ಕಳೆದ ವರ್ಷ ಉಡುಪಿಯ ನೇಜಾರು ಎಂಬಲ್ಲಿ ತಾಯಿ ಹಾಗೂ ಮೂವರು ಮಕ್ಕಳನ್ನು ಬರ್ಬರವಾಗಿ ಕೊಲೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಎರಡನೇ ಬಾರಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿ ಇಂದು ಆದೇಶ ನೀಡಿದೆ. ಆರೋಪಿ ಮೇಲಿನ ಆರೋಪಗಳು ಎಫ್ ಎಸ್ ಎಲ್ ವರದಿ ಸೇರಿದಂತೆ ಇನ್ನಿತರ ಸಾಕ್ಷಿಗಳಿಂದ ಮೇಲ್ನೋಟಕ್ಕೆ ಕಂಡು ಬಂದಿದ್ದು ಜಾಮೀನು ನೀಡಿದರೆ ಸಾಕ್ಷಿಗಳಿಗೆ ಹೆದರಿಸುವ ಸಾಧ್ಯತೆ ಇದೆ. ನ್ಯಾಯಾಂಗ ಬಂಧನದಲ್ಲೂ ಆರೋಪಿಗೆ ಚಿಕಿತ್ಸೆ ಪಡೆಯುವ ಅವಕಾಶ ಇರುವುದರಿಂದ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವುದಾಗಿ ನ್ಯಾಯಾಧೀಶರು ಆದೇ ತಿಳಿಸಿದ್ದಾರೆ. ಚೌಗುಲೆ ಮಾ.13ರಂದು ಎರಡನೇ ಬಾರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗೆ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಮಾ.27ರಂದು ಆಕ್ಷೇಪಣೆ ಸಲ್ಲಿಸಿದ್ದರು. ಈ ಕುರಿತು ಆರೋಪಿ ಪರ ವಕೀಲ ರಾಜೇಶ್ ಹಾಗೂ ವಿಶೇಷ ಸರಕಾರಿ ಅಭಿಯೋಜಕರ ಮಧ್ಯೆ ವಾದ ಪ್ರತಿವಾದಗಳು ನಡೆದವು. ಎರಡು ಕಡೆಯ…
ಕಾಪು : ಕಾಪು ಪೊಲೀಸ್ ಠಾಣೆಯ ಮಹಿಳಾ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 29 ವರ್ಷದ ಜ್ಯೋತಿ ಆತ್ಮಹತ್ಯೆ ಮಾಡಿಕೊಂಡವರು. ಜ್ಯೋತಿ ಬಾಗಲಕೋಟೆ ಮೂಲದವರು.ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಜ್ಯೋತಿ ಪೊಲೀಸ್ ಕ್ವಾಟ್ರಸ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಪೊಲೀಸ್ ಸಿಬಂದಿಯ ಪತಿ ಕೆ.ಎಸ್.ಆರ್.ಟಿ.ಸಿ ಸಿಬಂದಿಯಾಗಿದ್ದು ಪತಿ ಬೆಳಿಗ್ಗೆ ಕರ್ತವ್ಯಕ್ಕೆ ಹೋಗಿದ್ದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು: ನಗರ ಹೊರವಲಯದ ಅಡ್ಯಾರ್ ಪದವು ಸಮೀಪದ 30 ವರ್ಷ ಪ್ರಾಯದ ಮಹಿಳೆಯೊಬ್ಬರು ಒಂದು ವರ್ಷ ಪ್ರಾಯದ ತನ್ನ ಹೆಣ್ಣು ಮಗುವನ್ನು ಸೊಂಟಕ್ಕೆ ಕಟ್ಟಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಸಂಜೆ ಹರೇಕಳ- ಪಾವೂರು ಕಡವಿನ ಬಳಿ ನಡೆದಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಚೈತ್ರಾ ಎಂದು ಗುರುತಿಸಲಾಗಿದೆ. ಈಕೆ ಶುಕ್ರವಾರ ಮಧ್ಯಾಹ್ನದ ಬಳಿಕ ತನ್ನ ಮಗುವಿನೊಂದಿಗೆ ನಾಪತ್ತೆಯಾಗಿದ್ದರು ಎಂದು ಹೇಳಲಾಗಿದೆ. ಶುಕ್ರವಾರ ಸಂಜೆ ಈಕೆ ರಿಕ್ಷಾವೊಂದರಲ್ಲಿ ಅಡ್ಯಾರ್-ಹರೇಕಳ ಸೇತುವೆ ದಾಟಿ ಹರೇಕಳ-ಪಾವೂರು ಕಡವಿನ ಬಳಿ ಜಂಕ್ಷನ್‌ನಲ್ಲಿ ಇಳಿದಿದ್ದರು ಎನ್ನಲಾಗಿದೆ. ನಂತರ ಈಕೆ ನದಿ ತೀರದ ಕಾಲುದಾರಿಯಾಗಿ ಪಾವೂರು ಗಾಡಿಗದ್ದೆ ಕಡೆ ನಡೆದುಕೊಂಡು ಹೋಗಿರುವುದನ್ನು ಸ್ಥಳೀಯರು ಕಂಡಿದ್ದರು ಎಂದು ತಿಳಿದು ಬಂದಿದೆ ಚೈತ್ರಾ ತನ್ನ ಮಗುವಿನೊಂದಿಗೆ ಕಾಣೆಯಾದ ಸುದ್ದಿ ಪರಿಸರದಲ್ಲಿ ಹಬ್ಬಿದ್ದು ಹುಡುಕಾಡಿದರೂ ಪ್ರಯೋಜನವಾಗಲಿಲ್ಲ. ಈ ಮಧ್ಯೆ ಚೈತ್ರಾ ಅವರ ಮೃತದೇಹ ಹರೇಕಳ ಪಾವೂರು ನದಿ ತೀರದಲ್ಲಿ ಪತ್ತೆಯಾಗಿದೆ. ಚೈತ್ರಾ ಅವರ ಸೊಂಟಕ್ಕೆ ಮಗುವನ್ನು ಕಟ್ಟಿ ಹಾಕಿರುವುದು ಕಂಡು…
ಕುಂದಾಪುರ: ಅಡಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕರನಾರಾಯಣ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಅಮೀರ್ ಝನುದ್ದೀನ್ (23), ಗುಲ ಮ್ಮದ್ ಮುನಾವರ್ (21), ನಿಸಾರ್ @ ಆಸೀಫ್ ಅನ್ನಾರ್ (24) ಎಂದು ತಿಳಿದು ಬಂದಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿ, ಅವರ ಬಳಿ ಇದ್ದ ಸೊತ್ತುಗಳನ್ನು ವಶಪಡಿಸಿಕೊಂಡು, ವಿಚಾರಣೆ ನಡೆಸಿದ್ದಾರೆ. ಪ್ರಕರಣ ಸಾರಾಂಶ: ಶಂಕರನಾರಾಯಣ ಠಾಣಾ ಪೊಲೀಸ್ ಉಪನಿರೀಕ್ಷಕರಾದ(ಕಾ.ಸು) ನಾಸೀರ್ ಹುಸೇನ್ ಮತ್ತು ಶಂಭುಲಿಂಗಯ್ಯ ಎಮ್.ಇ.(ತನಿಖೆ) ಮತ್ತು ಸಿಬ್ಬಂದಿಯವರು ಶಂಕರನಾರಾಯಣ ವ್ಯಾಪ್ತಿಯ ಹಾಲಾಡಿ ಮತ್ತು ಕ್ರೂಡ ಬೈಲೂರು, ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ನೂಜಾಡಿಯಲ್ಲಿ ನಡೆದ ಅಡಿಕೆ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಾದ 1) ಅಮೀರ್ ಝನುದ್ದೀನ್, (23), ಗುಲ್ವಾಡಿ ಗ್ರಾಮ, ಕುಂದಾಪುರ, 2) ಮೊಹಮ್ಮದ್ ಮುನಾವರ್ (21),ಬಿಳಲಖಂಡ ಗ್ರಾಮ, ಭಟ್ಕಳ ತಾಲೂಕು, 3) ನಿಸಾರ್ @ ಆಸೀಫ್ ಅನ್ನಾರ್ ಪ್ರಾಯ (24), ಉಸ್ಮಾನ್ ನಗರ, , ಭಟ್ಕಳ ತಾಲೂಕು ಇವರನ್ನು ದಿನಾಂಕ: 28/03/2024…
ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಈಗಾಗಲೇ ಎನ್‌ಐಎ ಅಧಿಕಾರಿಗಳು ಓರ್ವ ಸಂಚುಕೋರನನ್ನು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಇಬ್ಬರು ಆರೋಪಿಗಳ ಪೋಟೋ ಬಿಡುಗಡೆ ಮಾಡಿದ್ದು, ಅವರ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್‌ಐಎ ಘೋಷಣೆ ಮಾಡಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ರಾಷ್ಟ್ರೀಯ ತನಿಖಾ ದಳವು, ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿಗಳಾದಂತ ಅಬ್ದುಲ್ ಮತೀನ್ ಅಹ್ಮದ್ ತಾಹಾ ಹಾಗೂ ಮುಸಾವೀರ್ ಹುಸೇನ್ ಶಾಜಿಬ್ ಎಂಬುವರ ಪೋಟೋ ಬಿಡುಗಡೆ ಮಾಡಿದೆ. ಈ ಇಬ್ಬರು ಆರೋಪಿಗಳು ಬೆಂಗಳೂರಿನ ಕೆಫೆ ಸ್ಪೋಟದ ಪ್ರಮುಖ ಆರೋಪಿಗಳಾಗಿದ್ದಾರೆ. ಇವರ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.










