ಕಾರ್ಕಳ: ಕಾರ್ಕಳ ತಾಲೂಕಿನ ಕೈಯಾರ್ಲದ ಶ್ರೀಮಹಾಕಾಳಿ ದೇವಾಲಯದ ಸಮೀಪದ ನಾಗಬನದಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆಯಾಗಿದೆ ಎಂದು ಶಿರ್ವದ ಎಂ.ಎಸ್.ಆರ್.ಎಸ್. ಕಾಲೇಜಿನ ಇತಿಹಾಸ ಮತ್ತು ಪುರಾತತ್ತ್ವ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿ ತಿಳಿಸಿದ್ದಾರೆ. ಆಯತಾಕಾರದ ಬಳಪದ ಶಿಲೆಯ ಕೆಳಭಾಗದಲ್ಲಿ ಕಾಲುಮಂಡಲದ ನಾಲ್ಕು ಪತ್ರ ಗಂಟುಗಳನ್ನು ಒಳಗೊಂಡ ಒಂದು ನಾಗರಾಜನ ಶಿಲ್ಪವನ್ನು ರಚಿಸಲಾಗಿದ್ದು, ನಾಗನ ಹೆಡೆಯ ಮೇಲೆ ಚರ್ತುಬಾಹು ನಾಗಭೈರನ ಶಿಲ್ಪವನ್ನು ನಿಂತಂತೆ ರಚಿಸಲಾಗಿದೆ. ಹಿಂದಿನ ಎರಡು ಕೈಗಳಲ್ಲಿ ಎರಡು ಹೆಡೆಬಿಚ್ಚಿದ ನಾಗಗಳನ್ನು ಹಿಡಿದಂತೆ ಚಿತ್ರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮುಂದಿನ ಬಲಗೈಯಲ್ಲಿ ನಾಗ ದಂಡವಿದೆ. ಎಡಗೈಯಲ್ಲಿ ರುಂಡವಿದೆ. ನಾಗಭೈರವ ಶಿಲ್ಪದ ಎಡ-ಬಲಗಳಲ್ಲಿ ಹೆಡೆಬಿಚ್ಚಿದ ನಾಗಗಳನ್ನು ಕೈಯಲ್ಲಿ ಹಿಡಿದ ನಾಗ ಕನ್ನಿಕೆಯರ ಶಿಲ್ಪಗಳಿವೆ. ನಾಗಭೈರವನ ತಲೆಯ ಮೇಲೆ ಐದು ಹೆಡೆಗಳ ನಾಗಕೊಡೆಯಿದೆ. ಜನಿವಾರ ಮತ್ತು ಸೊಂಟದ ಕೆಳಗೆ ಅರೆಪಂಚೆಯ ಅಲಂಕಾರವಿದೆ ಎಂದವರು ವಿವರಿಸಿದ್ದಾರೆ. ಶುದ್ಧ ಜನಪದ ಶೈಲಿಯಲ್ಲಿ ರಚಿತವಾಗಿರುವ ಈ ಶಿಲ್ಪ ಸುಮಾರು 14-15ನೇ ಶತಮಾನದ ಜೈನ ನಾಗಶಿಲ್ಪವಾಗಿದೆ. ಈ ಶಿಲ್ಪದ…
Author: main-admin
ಬಂಟ್ವಾಳ : ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರ ತಾಯಿ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಪೊಳಲಿ ದೇವಸ್ಥಾನದ ಆಡಳಿತದ ಒಂದು ಮನೆತನವಾದ ಉಳಿಪ್ಪಾಡಿಗುತ್ತು ದಿ| ರಮೇಶ್ ನಾಯ್ಕ್ ಅವರ ಪತ್ನಿ ಸರೋಜಿನಿ ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದು ಸೋಮವಾರ ರಾತ್ರಿ ಸುಮಾರು 10 ಗಂಟೆ ವೇಳೆ ಒಡ್ಡೂರು ಫಾರ್ಮ್ಸ್ ನ ಪುತ್ರನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಇವರು ಪುತ್ರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ , ಓರ್ವ ಪುತ್ರಿಯನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಇಂದು10 ಗಂಟೆಗೆ ಒಡ್ಡೂರು ಫಾರ್ಮ್ಸ್ ನಲ್ಲಿ ನಡೆಯಲಿದೆ.
ಬಂಟ್ವಾಳ: ನಾಪತ್ತೆಯಾದ ಬಾಲಕಿಯರನ್ನು ಹುಡುಕಿಕೊಂಡು ಬಂದ ಯುವಕರು ಬಸ್ ನಿಲ್ದಾಣದಲ್ಲಿ ನಿಂತಿದ್ದ ಬುರ್ಖಾ ಧರಿಸಿದ್ದ ಯುವತಿಯರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೇಟೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ವಿಟ್ಲ ಬಸ್ ನಿಲ್ದಾಣದಲ್ಲಿ ಕುದ್ದುಪದವು ಮೂಲದ ಇಬ್ಬರು ಯುವತಿಯರು ಹಲ್ಲೆಗೊಳಗಾಗಿದ್ದಾರೆ. ಗಾಯಗೊಂಡ ಇಬ್ಬರು ಯುವತಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೆ, ಹಲ್ಲೆ ನಡೆಸಿದವರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸೋಮವಾರ ರಾತ್ರಿ ಘಟನೆ ನಡೆದಿದ್ದು, ಎಲ್ಲರೂ ಒಂದೇ ಸಮುದಾಯಕ್ಕೆ ಸೇರಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ವಿವರ: ಮುಸ್ಲಿಂ ಸಮುದಾಯದ ಇಬ್ಬರು ಬಾಲಕಿಯರು ಇತ್ತೀಚೆಗೆ ಮನೆ ಬಿಟ್ಟು ತೆರಳಿದ್ದರು. ಅವರನ್ನು ಹುಡುಕಿಕೊಂಡು ಅವರ ಊರಿನ ಯುವಕರು ಹೊರಟಿದ್ದಾರೆ. ಆದರೆ ನಾಪತ್ತೆಯಾದವರೇ ಎಂದು ಭಾವಿಸಿ ಬಸ್ ನಿಲ್ದಾಣದಲ್ಲಿ ಸಿಕ್ಕ ಬೇರೆ ಅಮಾಯಕ ಯುವತಿಯರ ಮೇಲೆ ಹಲ್ಲೆ ನಡೆಸಿದ್ದಾರೆ. ಮನೆಯಲ್ಲಿ ಯಾರಿಗೂ ಹೇಳದೆ ಕೇಳದೆ ಸಾಲೆತ್ತೂರು ಮೂಲದ ಬಾಲಕಿಯೊಬ್ಬಳು ಮನೆಯಿಂದ ಸ್ನೇಹಿತೆಯೊಂದಿಗೆ ತೆರಳಿದ್ದಳು. ಆಕೆಯನ್ನು ಹುಡುಕುತ್ತ ವಿಟ್ಲಕ್ಕೆ ಬಂದಿದ್ದ ಯುವಕರು ಬಸ್ ನಿಲ್ದಾಣದಲ್ಲಿ…
ಪಾವಂಜೆ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ಜಂಕ್ಷನ್ ಬಳಿ ಮೂಡಬಿದ್ರೆ ಪುತ್ತಿಗೆ ಬಳಿಯ ಅನ್ಯಕೋಮಿನ ಯುವಕನ ಜೊತೆಗೆ ಅಪ್ರಾಪ್ತೆ ಶಾಲಾ ವಿದ್ಯಾರ್ಥಿನಿ ಪತ್ತೆಯಾಗಿದ್ದು, ಸಂಶಯ ಬಂದ ಹಿಂದೂ ಸಂಘಟನೆಯ ಯುವಕರು ಇಬ್ಬರನ್ನೂ ಮುಲ್ಕಿ ಪೊಲೀಸರಿಗೆ ಒಪ್ಪಿಸಿದ್ದು, ಯುವಕನ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹಳೆಯಂಗಡಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಅನ್ಯಕೋಮಿನ ಯುವಕ ಮೂಡಬಿದ್ರೆ ಪುತ್ತಿಗೆ ನಿವಾಸಿ ತೌಫೀಕ್ (26) ಎಂಬಾತ ಮೂಡಬಿದ್ರೆಯ ಶಾಲೆಯಲ್ಲಿ ಕಲಿಯುತ್ತಿದ್ದ ಅಪ್ರಾಪ್ತೆ ಶಾಲಾ ವಿದ್ಯಾರ್ಥಿನಿಯನ್ನು ತನ್ನ ದ್ವಿಚಕ್ರವಾಹನದಲ್ಲಿ ಕುಳ್ಳಿರಿಸಿ ಹೋಗುತ್ತಿದ್ದಾಗ ಪಾವಂಜೆ ಜಂಕ್ಷನ್ ಬಳಿ ತಪಾಸಣೆ ನಡೆಸುತ್ತಿದ್ದ, ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಸಂಶಯದಿಂದ ನಿಲ್ಲಿಸಿ ದಾಖಲೆಗಳನ್ನು ಪರಿಶೀಲಿಸಿದಾಗ ನಂಬರ್ ಪ್ಲೇಟ್ ಇಲ್ಲದೆ ದ್ವಿಚಕ್ರವಾಹನ ಓಡಿಸುತ್ತಿರುವ ಬಗ್ಗೆ ಯುವಕನಿಗೆ ದಂಡ ವಿಧಿಸಿದ್ದಾರೆ. ಈ ಸಂದರ್ಭ ಯುವಕ ತೌಫಿಕ್ ತನ್ನ ಹತ್ತಿರ ಹಣ ಇಲ್ಲ ಎಂದು ಪೊಲೀಸರಲ್ಲಿ ಹೇಳಿ ಪಾವಂಜೆ ಹೆದ್ದಾರಿ ಬದಿಯ ಎಟಿಎಂ ಕಡೆಗೆ ಹೋಗಿದ್ದಾನೆ. ಆಗ ಸ್ಥಳದಲ್ಲಿದ್ದ…
ಕಾಪು: ಕಾಪು ತಾಲೂಕಿನ ಬೆಳಪು ಗ್ರಾಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಗೆ ಶಿರ್ವ ಠಾಣಾಧಿಕಾರಿ ರಾಘವೇಂದ್ರ ಅವರ ತಂಡ ದಾಳಿ ನಡೆಸಿ, ಒಂದು ಗಂಡು ಕರುವನ್ನು ರಕ್ಷಿಸಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಬೆಳಪು ಗ್ರಾಮದ ಬಳಿಯ ದಿ. ಸುಲ್ತಾನ್ ಅಹಮ್ಮದ್ ಅವರ ಮಗ ತಬ್ರೇಸ್ (30), ಮಲ್ಲಾರು ಗ್ರಾಮದ ಅಮಾನುಲ್ಲಾ ಅಸೈನ್ ಅವರ ಮಗ ಮೊಹಮ್ಮದ್ ಅಜೀಮ್ (39), ಬೆಳಪು ಗ್ರಾಮದ ಮಧುರಾ ಸ್ಟೋರ್ ಬಳಿಯ ನಿವಾಸಿ ಮಕ್ಬೂಲ್ ಹುಸೇನ್ ಅವರ ಮಗ ಮೊಹಮ್ಮದ್ ವಲೀದ್ (20) ಪೊಲೀಸರು ವಶಕ್ಕೆ ಪಡೆದ ಆರೋಪಿಗಳು. ಕಾರ್ಯಚರಣೆಯಲ್ಲಿ 30,000 ರೂ. ಮೌಲ್ಯದ 3 ಬೈಕ್, 10 ಕೆಜಿ ಮಾಂಸ, ಚರ್ಮ, ಎರಡು ಕತ್ತಿಗಳು, ಮೂರು ಚಾಕುಗಳು, 1,000 ರೂ. ಮೌಲ್ಯದ ತೂಕದ ಇಲೆಕ್ಟ್ರಾನಿಕ್ ಯಂತ್ರ ಮತ್ತು 5 ಹಗ್ಗಗಳನ್ನು ವಶಕ್ಕೆ ಪಡೆಯಲಾಗಿದೆ.
ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮರೋಳಿ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ದಂಪತಿಯ ಮೃತದೇಹಗಳು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿವೆ. ಮೃತರನ್ನು ಮಲ್ಲಿಕಾರ್ಜುನ್ ಬಸವರಾಜ್(35) ಮತ್ತು ಸೌಮ್ಯಾ ನಾಯಕ್(34) ಎಂದು ಗುರುತಿಸಲಾಗಿದೆ. ಈ ದಂಪತಿಯ ಮೃತದೇಹ ಅವರು ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ನ ಕೋಣೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿವೆ.ಇವರು ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಾಸರಗೋಡು: ಸರೋವರ ಕ್ಷೇತ್ರವೆಂದೇ ಪ್ರಸಿದ್ದಿ ಪಡೆದ ಕುಂಬಳೆ ಸಮೀಪದ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರದ ಮೊಸಳೆ ಬಬಿಯಾʼ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ. ಈ ಕ್ಷೇತ್ರ ಕೆರೆ ನೀರಿನ ಮಧ್ಯೆ ಇದ್ದು ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು. ಈ ದೇವಾಲಯದ ಕೆರೆಯ ನಡುವಿನಲ್ಲಿ ನೆಲೆಸಿರುವ ‘ಅನಂತಪದ್ಮನಾಭನಿಗೆ ಮೊಸಳೆ-ಬಬಿಯಾ’ ‘ಕಾವಲು ಕಾಯುವ ಕೆಲಸ’ ಮಾಡುತ್ತದೆ ಎನ್ನುವ ನಂಬಿಕೆ ಇತ್ತು. ವರ್ಷದ ಎಲ್ಲಾ ದಿನವೂ ಶುದ್ಧ ನೀರಿನಿಂದ ತುಂಬಿರುವ ಈ ಕೆರೆಯೇ ಮೊಸಳೆಯ ವಾಸಸ್ಥಾನ. ದೇವರ ನೈವೇದ್ಯವೇ ಇದಕ್ಕೆ ನಿತ್ಯ ಆಹಾರ. ಬಬಿಯಾ ಈ ಕೆರೆಯಿಂದ ದೇವಾಲಯದಲ್ಲಿರುವ ದೊಡ್ಡ ಕೆರೆಗೆ ಮನುಷ್ಯರು ನಡೆದಾಡುವ ದಾರಿಯಲ್ಲೇ ಸಾಗುತ್ತಾ ಸ್ವಚ್ಚಂದವಾಗಿ ಜೀವನ ನಡೆಸುತ್ತಿತ್ತು.ಕ್ಷೇತ್ರದಲ್ಲೊಂದು ನಿರುಪದ್ರವಿ…
ಉಳ್ಳಾಲ: ಕಳೆದ ತಿಂಗಳ 26ರಂದು ಉಳ್ಳಾಲ ಸೋಮೇಶ್ವರ ಕಡಲ ಕಿನಾರೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕಾಸರಗೋಡು ಜಿಲ್ಲೆಯ ಕುಂಬ್ಳೆ ಸಮುದ್ರದಲ್ಲಿ ಪತ್ತೆಯಾಗಿದೆ. ಆದರೆ ಮೂರು ದಿನಗಳ ಬಳಿಕ ಶವದ ಗುರುತು ಪತ್ತೆಯಾಗದೆ ಕೋಸ್ಟ್ ಗಾರ್ಡ್ ಪೊಲೀಸರು ಮೃತದೇಹವನ್ನ ಹೂತು ದಫನ ಮಾಡಿದ್ದು, ಮತ್ತೆ ಮೃತದೇಹವನ್ನ ಕುಟುಂಬಸ್ಥರು ವಶಕ್ಕೆ ಪಡೆಯೋ ಸಾಧ್ಯತೆಗಳಿವೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಿಲಾರು ದಾರಂದ ಬಾಗಿಲು ನಿವಾಸಿ ಝಾಕಿರ್ (36) ಯಾನೆ ಜಾಕಿ ಮೃತ ದುರ್ದೈವಿ. ಝಾಕಿರ್ ವಿವಾಹಿತನಾಗಿದ್ದು, ಈ ಹಿಂದೆ ಮಂಗಳೂರಿನ ಧಕ್ಕೆಯಲ್ಲಿ ಸಹೋದರರ ಜೊತೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದು, ವ್ಯವಹಾರದಲ್ಲಿ ಕೈ ಸುಟ್ಟು ಕೊಂಡಿದ್ದನೆನ್ನಲಾಗಿದೆ. ಝಾಕಿರ್ ಇತ್ತೀಚಿಗೆ ಖಿನ್ನತೆಗೊಳಗಾಗಿದ್ದು ಕಳೆದ ಸೆ.26 ರಂದು ಮನೆಯಿಂದ ಹೊರ ಹೋಗಿದ್ದವ ನಾಪತ್ತೆಯಾಗಿದ್ದ.ಝಾಕಿರ್ ಚಲಾಯಿಸುತ್ತಿದ್ದ ಮೋಟಾರ್ ಬೈಕ್ ಮೊನ್ನೆ ಶುಕ್ರವಾರ ಸೋಮೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರು ನಿನ್ನೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸುವಾಗ ಝಾಕಿರ್ ಮೃತ ದೇಹ ಕುಂಬ್ಳೆಯಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಕಳೆದ ಸೆ.28…
ಉತ್ತರಾಖಂಡದ ಗಡಿ ಜಿಲ್ಲೆ ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ವಿಕ್ರಮ್. ರಶ್ಮಿತ್ ಎಂಬ ಯುವಕರ ಶವ ಪತ್ತೆಯಾಗಿದೆ. ಅಕ್ಟೋಬರ್ 08 ನಡೆದ ಕಾರ್ಯಾಚರಣೆಯಲ್ಲಿ ಇಬ್ಬರ ಶವ ಹೊರಕ್ಕೆ ತೆಗೆಯಲಾಗಿದೆ.. ಕಳೆದ ಮಂಗಳವಾರ ಹಿಮಪಾತ ಸಂಭವಿಸಿದ ಬಳಿಕ ಯುವಕರು ನಾಪತ್ತೆಯಾಗಿದ್ದರು. ರಕ್ಷಣಾ ಕಾರ್ಯಚರಣೆ ವೇಳೆ ಮೃತ ದೇಹಗಳು ಪತ್ತೆಯಾಗಿವೆ. ಉತ್ತರಕಾಶಿ ಹಿಮಪಾತದಲ್ಲಿ ಒಟ್ಟು 29 ಮಂದಿ ಮೃತಪಟ್ಟಿದ್ದು, ವಿಪತ್ತು ನಿರ್ವಹಣಾ ತಂಡಗಳು ಸ್ಥಳದಲ್ಲಿ ನಿರಂತರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಉತ್ತರಕಾಶಿ ಜಿಲ್ಲೆಯ ದ್ರೌಪದಿಯ ದಂಡ-2 ಪ್ರದೇಶಕ್ಕೆ ಅಕ್ಟೋಬರ್ 4ರಂದು ನೆಹರೂ ಪರ್ವತಾರೋಹಣ ಸಂಸ್ಥೆಯ 40 ಜನ ಪರ್ವತಾರೋಹಿಗಳ ತಂಡ ತೆರಳಿತ್ತು. ಈ ವೇಳೆ, ಹಿಮಕುಸಿತ ಉಂಟಾಗಿ ಪರ್ವತಾರೋಹಿಗಳು ಸಿಲುಕಿದ್ದರು. ಮೊದಲ ದಿನವೇ 10 ಜನರ ಮೃತಪಟ್ಟಿದ್ದರು. ಆದರೆ, ಪ್ರತಿಕೂಲ ಹವಾಮಾನ ಕಾರಣ ರಕ್ಷಣಾ ಕಾರ್ಯಕ್ಕೆ ತೊಂದರೆ ಉಂಟಾಗಿತ್ತು. ರಕ್ಷಣಾ ಕಾರ್ಯಕ್ಕೆ 30 ಜನರ ತಂಡವನ್ನು ನಿಯೋಜಿಸಲಾಗಿದ್ದು, ಐಟಿಬಿಪಿ, ನೆಹರು ಪರ್ವತಾರೋಹಣ ಸಂಸ್ಥೆ, ವಾಯುಸೇನೆ, ಸೇನೆ, ಎಸ್‌ಡಿಆರ್‌ಎಫ್…
ಮಂಗಳೂರು: ಮಂಗಳೂರಿನ ಸುರತ್ಕಲ್ ಸರ್ಕಲ್ ಹೆಸರಿಡೋ ವಿಚಾರದಲ್ಲಿ ಮುಸ್ಲಿಮರು ಅಚ್ಚರಿ ನಡೆ ಇಟ್ಟಿದ್ದಾರೆ. ವೀರ ಸಾವರ್ಕರ್ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿ ಮುಸ್ಲಿಮರು ಬಹಳ ‘ಜಾಣ’ ನಡೆ ತೋರಿಸಿದ್ದಾರೆ. ಈ ಮೂಲಕ ಮಂಗಳೂರು ಉತ್ತರ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಮುಸ್ಲಿಂ ಐಕ್ಯತಾ ವೇದಿಕೆ ಕೌಂಟರ್ ನೀಡಿದೆ. ಸುರತ್ಕಲ್ ವೃತ್ತಕ್ಕೆ ಕೋಟಿ ಚೆನ್ನಯ್ಯ ಹೆಸರಿಡಿ ಎಂದು ಮುಸ್ಲಿಂ ಐಕ್ಯತಾ ವೇದಿಕೆಯು ಮಂಗಳೂರು ಮಹಾನಗರ ಪಾಲಿಕೆ ಕಮಿಷನರ್ ಮತ್ತು ಮೇಯರ್ ಗೆ ಮನವಿ ಸಲ್ಲಿಸಿದೆ. ತುಳುನಾಡಿನ ದೈವಿಕ ಶಕ್ತಿಗಳಾದ ಕೋಟಿ ಚೆನ್ನಯರ ಹೆಸರಿಡಲು ಮುಸ್ಲಿಮರು ಈ ಮೂಲಕ ಮನವಿ ಮಾಡಿದ್ದಾರೆ. ಕೋಟಿ ಚೆನ್ನಯ್ಯರ ಹೆಸರಿನ ಜೊತೆ ಶ್ರೀನಿವಾಸ ಮಲ್ಯ ಮತ್ತು ಎಂ.ಲೋಕಯ್ಯ ಶೆಟ್ಟಿ ಹೆಸರನ್ನು ಕೂಡಾ ಅವರು ಪ್ರಸ್ತಾಪ ಮಾಡಿದ್ದಾರೆ. ಅಲ್ಲದೇ ನವ ಮಂಗಳೂರು ನಿರ್ಮಾತೃ ಶ್ರೀನಿವಾಸ ಮಲ್ಯ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಎಂ.ಲೋಕಯ್ಯ ಶೆಟ್ಟಿ ಹೆಸರನ್ನು ಕೂಡಾ ಇಡಬೇಕೆಂದು ಒತ್ತಾಯಿಸಿದ್ದಾರೆ. ಸದ್ಯ ಮಂಗಳೂರು ಮಹಾನಗರ ಪಾಲಿಕೆ ಸಭೆಯಲ್ಲೂ ಶಾಸಕ ಭರತ್ ಶೆಟ್ಟಿ ಪ್ರಸ್ತಾಪ…