ಅಂಗಡಿ ಹೋಟೆಲ್ ಗಳಲ್ಲಿ ಕುರುಕಲು ತಿಂಡಿಗಳನ್ನು ತಿಂದು ಆರೋಗ್ಯ ಕೆಡಿಸಿಕೊಳ್ಳುವ ಇಂದಿನ ದಿನದಲ್ಲಿ ಮನೆಯಲ್ಲಿಯೇ ಆರೋಗ್ಯಕರ ಅಡುಗೆ ತಯಾರಿಸುವುದು ಸೂಕ್ತ. ಅದರಲ್ಲಿಯೂ ದೇಹಕ್ಕೆ ತಂಪು ಹಾಗೂ ಶಕ್ತಿ ನೀಡುವಂತಹ ಅಡುಗೆ ಮಾಡುವುದು ಅರೋಗ್ಯಕ್ಕೂ ಹಿತಕರ. ಅಂತಹ ರುಚಿಕರ ಹಾಗೂ ಶಕ್ತಿಯುತ ತಿಂಡಿಯೆಂದರೆ ಹೆಸರುಕಾಳು ಚಪಾತಿ. ಬೇಕಾಗುವ ಸಾಮಗ್ರಿ: ಹೆಸರುಕಾಳು – 1 ಕಪ್, ಗೋಧಿಹಿಟ್ಟು – 2 ಕಪ್, ಎಣ್ಣೆ ಬೇಕಾಗುವಷ್ಟು, ರುಚಿಗೆ ತಕ್ಕಷ್ಟು ಉಪ್ಪು, ಜೀರಿಗೆ ಪುಡಿ – ಅರ್ಧ ಚಮಚ ತಯಾರಿಸುವ ಬಗೆ: ಚಪಾತಿ ತಯಾರಿಸುವ 24 ಗಂಟೆ ಮೊದಲು ಹೆಸರುಕಾಳನ್ನು ನೀರಿನಲ್ಲಿ ನೆನೆಸಿಡಬೇಕು. ನಂತರ ಮೃದುವಾದ ಈ ಹೆಸರುಕಾಳನ್ನು ಕುಕ್ಕರ್ ನಲ್ಲಿ ಚೆನ್ನಾಗಿ ಬೇಯಿಸಿಕೊಂಡು ಮಿಕ್ಸಿಗೆ ಹಾಕಿ ರುಬ್ಬಬೇಕು. ನಂತರ ಗೋಧಿಹಿಟ್ಟು, ಉಪ್ಪು ಮತ್ತು ಜೀರಿಗೆ ಪುಡಿಯೊಂದಿಗೆ ಚಪಾತಿ ಹಿಟ್ಟಿನಂತೆ ಕಲಸಿ, ಚಪಾತಿ ಮಾಡಿ ಸರಿಯಾಗಿ ಬೇಯಿಸಿದರೆ ಹೆಸರುಕಾಳಿನ ಚಪಾತಿ ತಿನ್ನಲು ಸಿದ್ದ.
Author: main-admin
ಪ್ರತಿನಿತ್ಯ ಸಾವಿರಾರು ಭಕ್ತರು ಯಾವುದೇ ನೂಕು ನುಗ್ಗಲು ಇಲ್ಲದೇ ಸಾವಕಾಶವಾಗಿ ಪಡೆಯುತ್ತಿದ್ದ ದುರ್ಗೆಯ ದರ್ಶನಕ್ಕೆ ಈಗ ಮೊತ್ತ ವಿಧಿಸಲಾಗಿದೆ. ಕ್ಷೇತ್ರದಲ್ಲಿ ಇದೀಗ ಶೀಘ್ರ ದರ್ಶನ ವ್ಯವಸ್ಥೆಯನ್ನು ಜಾರಿ ಮಾಡಲಾಗಿದ್ದು, ಶೀಘ್ರ ದರ್ಶನ ಪಡೆಯುವ ಪ್ರತಿಯೋರ್ವ ಭಕ್ತನು ನೂರು ರೂಪಾಯಿ ಪಾವತಿಸಿ ದೇವಸ್ಥಾನದ ಒಳಗೆ ಪ್ರವೇಶ ಮಾಡಬಹುದಾಗಿದೆ. ನವರಾತ್ರಿ ಯ ಬಳಿಕ ಈ ಹೊಸ ನಿಯಮವನ್ನು ಕ್ಷೇತ್ರದಲ್ಲಿ ತರಲಾಗಿದೆ. ಸಾವಿರಾರು ಭಕ್ತರು ಸೇರಿದರೂ ಯಾವುದೇ ಗೊಂದಲ, ನೂಕು ನುಗ್ಗಲು ಆಗದಂತೆ ನಡೆಯುತ್ತಿದ್ದ ವ್ಯವಸ್ಥೆಗೆ ಈಗ ಶೀಘ್ರ ದರ್ಶನ ಎಂಬುದನ್ನು ಸೇರಿಸಿ ನೂರು ರೂಪಾಯಿ ಮೊತ್ತ ಹಾಕಲಾಗುತ್ತಿದೆ. ಈ ಹಿಂದೆ ಪಾರ್ಕಿಂಗ್ ಮೊತ್ತವನ್ನು ಹಾಕಲು ದೇವಸ್ಥಾನದ ಆಡಳಿತ ಮಂಡಳಿ ತೀರ್ಮಾನ ಮಾಡಿತ್ತು. ಈ ನಿಯಮಕ್ಕೆ ಕ್ಷೇತ್ರದ ಭಕ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಭಕ್ತರ ವಿರೋಧ ಹಿನ್ನಲೆಯಲ್ಲಿ ಕ್ಷೇತ್ರದ ಆಡಳಿತ ಮಂಡಳಿ ಈ ನಿರ್ಧಾರವನ್ನು ಹಿಂಪಡೆದಿತ್ತು. ಈಗ ಶೀಘ್ರ ದರ್ಶನದ ಹೆಸರಿನಲ್ಲಿ ಮತ್ತೆ ಹಣ ಮಾಡುವ ದಂಧೆಗೆ ಎಗ್ಗಿಲ್ಲದೇ ನಡೆಯುತ್ತಿದೆ ಎನ್ನುವುದು ಕ್ಷೇತ್ರದ ಭಕ್ತರ ಅಸಮಾಧಾನವಾಗಿದೆ.…
ಉಡುಪಿ: ವಿದೇಶದಲ್ಲಿ ಡಾಕ್ಟರ್ ಎಂದು ಪರಿಚಯಿಸಿಕೊಂಡು ಗಿಫ್ಟ್ ಕಳಿಸುವುದಾಗಿ ನಂಬಿಸಿ ಚಾಂತಾರುವಿನ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬ ಬರೋಬ್ಬರಿ 16.89 ಲಕ್ಷ ರೂ.ವಂಚಿಸಿದ್ದು, ಈ ಬಗ್ಗೆ ಸೆನ್ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದೆ. ಚಾಂತಾರು ನಿವಾಸಿ ಲವೀನಾ ಜೆನಿಫರ್ ಮೊರಾಸ್ ಎಂಬವರಿಗೆ ಇನ್ ಸ್ಟಾಗ್ರಾಮ್ ನಲ್ಲಿ ಜೋವನ್ ಎಂಬ ವ್ಯಕ್ತಿಯ ಪರಿಚಯವಾಗಿದ್ದು ಆತ ತಾನು ಕೆನಡಾದಲ್ಲಿ ಡಾಕ್ಟರ್ ಎಂಬುದಾಗಿ ಹೇಳಿಕೊಂಡಿದ್ದಾನೆ. ಬಳಿಕ ಇಬ್ಬರು ವಾಟ್ಸಾಪ್ ಮೂಲಕ ಮಾತುಕತೆ ನಡೆಸಿ ಸ್ನೇಹಿತರಾಗಿದ್ದು, ಅ.2 ರಂದು ಆತನು ಐಫೋನ್, ಚಿನ್ನ ಹಾಗೂ ಯುಎಸ್ ಡಾಲರ್ ನ್ನು ಪಾರ್ಸೆಲ್ ಕಳುಹಿಸುವುದಾಗಿ ನಂಬಿಸಿದ್ದಾನೆ. ಆ ಬಳಿಕ ಕಸ್ಟಮ್ಸ್ ಅಧಿಕಾರಿ ಎಂದು ಮೊ. 9233013312 ನೇ ನಂಬರ್ ನಿಂದ ಅಪರಿಚಿತ ವ್ಯಕ್ತಿ ಕರೆ ಮಾಡಿ ಕೆನಡಾದಿಂದ ಬಂದಿರುವ ಪಾರ್ಸೆಲ್ ಗೆ ಪಾರ್ಸೆಲ್ ಚಾರ್ಜ್, ಮನಿ ಲ್ಯಾಂಡಿಂಗ್ ಸರ್ಟಿಫಿಕೇಟ್ ಪಡೆಯಲು ಹಣ ಪಾವತಿಸಬೇಕು ಎಂದು ತಿಳಿಸಿದ್ದು, ಇದನ್ನು ನಂಬಿದ ಲವೀನಾ ಅವರು ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು ರೂ.16,89,862…
ಬೆಂಗಳೂರು : ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ ಆರೋಪಿಯನ್ನು ಕೇಂದ್ರ ವಿಭಾಗ ಪೊಲೀಸರು ಇಂದು ಬಂಧಿಸಿದ್ದಾರೆ. ವಿಧಾನಸೌಧಕ್ಕೆ ಬಾಂಬ್ ಇಡಲಾಗಿದೆ ಎಂದು ನಿನ್ನೆ ಸಂಜೆ ಮೂರು ಬಾರಿ ಬಾಂಬ್ ಬೆದರಿಕೆ ಕರೆ ಮಾಡಲಾಗಿತ್ತು. ನೇರವಾಗಿ ರಾಜ್ಯ ಮುಖ್ಯ ಕಾರ್ಯದರ್ಶಿ ಕಚೇರಿಯ ಲ್ಯಾಂಡ್ ಲೈನ್ ನಂಬರ್ ಗೆ ಕರೆ ಮಾಡಿದ ಭೂಪ ಬಾಂಬ್ ಇಟ್ಟಿದ್ದೇವೆ, ಅದು ಕೆಲವೇ ಕ್ಷಣದಲ್ಲಿ ಸ್ಪೋಟಗೊಳ್ಳುತ್ತದೆ ಎಂದು ಬೆದರಿಕೆಯೊಡ್ಡಿ ಫೋನ್ ಕಟ್ ಮಾಡಿದ್ದನಂತೆ. ಫೋನ್ ಕಾಲ್ ಮಾಹಿತಿ ಆಧರಿಸಿ ಕೇಂದ್ರ ವಿಭಾಗ ಡಿಸಿಪಿ ಸೇರಿದಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಆದರೆ ಬಾಂಬ್ ಇರುವ ಬಗ್ಗೆ ಸಾಕ್ಷ್ಯ ಸಿಕ್ಕಿರಲಿಲ್ಲ, ಆದರೆ ಕೊನೆಗೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಪ್ರಶಾಂತ್ ನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಈತ ವೃತ್ತಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಎಂಬುದು ತಿಳಿದು ಬಂದಿದೆ.
ಪುತ್ತೂರು: ವೀರ ಯೋಧನ ಹೆಸರಿನಲ್ಲಿ ನಿರ್ಮಾಣಗೊಂಡಿದ್ದ ವೃತ್ತಕ್ಕೆ ಹಸಿರು ಬಟ್ಟೆ ಸುತ್ತಿದ ಹಿನ್ನಲೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣಗೊಂಡ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಈಶ್ವರಮಂಗಲ ಎಂಬಲ್ಲಿ ಅಕ್ಟೋಬರ್ 8 ರಂದು ನಡೆದಿದೆ. 26/11 ಮುಂಬೈ ಉಗ್ರರ ದಾಳಿಯಲ್ಲಿ ಮೃತಪಟ್ಟ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಸವಿ ನೆನಪಿಗಾಗಿ ಈಶ್ವರಮಂಗಲ ಸರ್ಕಲ್ ನಲ್ಲಿ ಈ ವೃತ್ತವನ್ನು ನಿರ್ಮಿಸಲಾಗಿತ್ತು. ಆದರೆ ಇಂದು ಮುಂಜಾನೆ ವೃತ್ತದ ಸುತ್ತ ಹಸಿರು ಬಟ್ಟೆ ಸುತ್ತಿ, ಹಸಿರು ಧ್ವಜಗಳನ್ನು ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಇದರಿಂದ ಆಕ್ರೋಶಿತಗೊಂಡಿರುವ ಹಿಂದೂ ಸಂಘಟನೆ ಕಾರ್ಯಕರ್ತರು ತಕ್ಷಣ ಹಸಿರು ಹೊದಿಕೆಯನ್ನು ತೆಗೆಯುವಂತೆ ಒತ್ತಾಯಿಸಿದ ಹಿನ್ನಲೆಯಲ್ಲಿ ಇದೀಗ ಹಸಿರು ಹೊದಿಕೆಯನ್ನು ತೆರವು ಮಾಡುವ ಮೂಲಕ ಗೊಂದಲಕ್ಕೆ ತೆರೆ ಎಳೆಯಲಾಗಿದೆ.
ಉಡುಪಿ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯ ಕುಚ್ಚಲಕ್ಕಿ ಖರೀದಿಸಿ, ಪಡಿತರ ವ್ಯವಸ್ಥೆಯಡಿ ವಿತರಿಸಲು ಕೇಂದ್ರ ಸರಕಾರ ಅನುಮತಿ ಕಲ್ಪಿಸಿದೆ. ಕಳೆದ ವರ್ಷ ಕೇಂದ್ರ ಸರಕಾರ ಸ್ಥಳೀಯ ಕುಚ್ಚಲಕ್ಕಿ ಖರೀದಿಸಿ, ವಿತರಿಸಲು ಅನುಮತಿ ನೀಡುವಾಗ ವಿಳಂಬವಾಗಿದ್ದರಿಂದ ಸ್ಥಳೀಯ ಕುಚ್ಚಲಕ್ಕಿ ಲಭ್ಯವಿರಲಿಲ್ಲ. ಆಂಧ್ರ ಸಹಿತ ಹೊರ ರಾಜ್ಯದ ಕುಚ್ಚಲಕ್ಕಿಯನ್ನೇ ವಿತರಿಸಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ಖರೀದಿಗೆ ಈಗಾಗಲೇ ಅನುಮೋದನೆ ನೀಡಿರುವುದರಿಂದ ಸ್ಥಳೀಯ ಕುಚ್ಚಲಕ್ಕಿ ಹೆಚ್ಚು ಸಿಗಬಹುದು. ಈ ತಿಂಗಳಿನಲ್ಲಿ ಕಟಾವು ಪ್ರಕ್ರಿಯೆ ಶುರುವಾಗಲಿದೆ. ಆದಷ್ಟು ಬೇಗ ಭತ್ತ ಖರೀದಿ ಕೇಂದ್ರವನ್ನು ಆರಂಭಿಸಿ, ರೈತರಿಗೆ ಸೂಕ್ತ ಮಾಹಿತಿ ನೀಡುವ ಕಾರ್ಯ ರಾಜ್ಯ ಸರಕಾರ ಹಾಗೂ ಕೃಷಿ ಇಲಾಖೆ, ಜಿಲ್ಲಾಡಳಿತ ಮಾಡಬೇಕಿದೆ. ಪ್ರತಿ ತಿಂಗಳು ಉಭಯ ಜಿಲ್ಲೆಗಳಿಗೆ ಸರಾಸರಿ 1 ಲಕ್ಷ ಕ್ವಿಂಟಾಲ್ ಅಕ್ಕಿ ಪಡಿತರ ವ್ಯವಸ್ಥೆಯಡಿ ವಿತರಿಸಲು ಬೇಕಾಗುತ್ತದೆ. ಈ ಹಿಂದೆ ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ಸಾಮಾನ್ಯ ಭತ್ತಕ್ಕೆ ಕ್ವಿಂಟಲ್‌ಗೆ 1,940 ರೂ. ಹಾಗೂ ಗ್ರೇಡ್-ಎ ಭತ್ತಕ್ಕೆ 1,960 ರೂ. ನೀಡಿ ಖರೀದಿಸಲಾಗುತಿತ್ತು.…
ಬೆಂಗಳೂರು: 5G ಸೇವೆಯನ್ನು ದೇಶದಲ್ಲಿ ಕೆಲ ನೆಟ್‌ವರ್ಕ್‌ಗಳು ಆಯ್ದ ಪ್ರದೇಶಗಳಲ್ಲಿ ಶುರುವಾಗಿದೆ. ಈ ನಡುವೆ ಇದೇ ಅವಕಾಶವನ್ನು ಮಿಸ್ ಮಾಡಿಕೊಳ್ಳುತ್ತಿರುವ ಸೈಬರ್ ಕಿರಾತಕರು, 5G ಅಪ್‌ಡೇಟ್ ಲಿಂಕ್ ಗಳನ್ನು ಮೊಬೈಲ್ ಗ್ರಾಹಕರಿಗೆ ಕಳುಹಿಸಿ ಬ್ಯಾಂಕ್‌ಗಳಲ್ಲಿ ಇರುವ ಹಣವನ್ನು ಕದಿಯಲು ಶುರುಮಾಡಲು ಮಾಡಿದ್ದಾರೆ. ಈ ನಡುವೆ ಈ ಬಗ್ಗೆ ರಾಜ್ಯ ಪೋಲಿಸ್ ಇಲಾಖೆ ಜನತೆಗೆ ಮಹತ್ವದ ಸಂದೇಶವನ್ನು ಕಳುಹಿಸುತ್ತಿದ್ದು, ಆ ಸಂದೇಶದಲ್ಲಿ ಎಲ್ಲ ನಾಗರಿಕರಿಗೆ ಈ ಮೂಲಕ ತಿಳಿಯಪಡಿಸುವ ವಿಷಯ ಏನೆಂದರೆ Mobile Sim Card 5G ಸರ್ವಿಸ್ ಪ್ರಾರಂಭವಾಗಿರುವುದು ನಿಮಗೆ ಗೊತ್ತಿರುವ ವಿಷಯವಾಗಿದೆ ಇದನ್ನೆ ನೇಪವಾಗಿಟ್ಟುಕೊಂಡು ಸೈಬರ್ ಕ್ರೈಮ್ ನ ಕೇಲವು ಕಿಡಿಗೇಡಿಗಳು ನಿಮ್ಮ ಮೊಬೈಲ್ ಗೆ ಕಾಲ್ ಮಾಡಿ ನಿಮ್ಮ Sim card ನ್ನು 4G ದಿಂದ 5G ಗೆ Update ಮಾಡ್ತಿವಿ ನಿಮಗೆ ಒಂದು OTP ಬರುತ್ತೆ ಹೇಳಿ ಅಂತ ಕಾಲ್ ಬಂದರೆ ಖಂಡಿತವಾಗಿ ಯಾರು ನಿಮಗೆ ಬಂದ OTP ತಿಳಿಸಬೇಡಿ ನೀವು ಒಂದು ವೇಳೆಗೆ ಅವರು ಕಳುಹಿಸಿದ…
ಮಂಗಳೂರು: ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಅವರ ಮನೆಗೆ ತೆರಳಿ ಮಧ್ಯರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಫೇಸ್ ಬುಕ್ ಪೋಸ್ಟ್ ಒಂದಕ್ಕೆ ಸಂಬಂಧಿಸಿ ಸುನೀಲ್ ಬಜಿಲಕೇರಿ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದೆನ್ನಲಾಗಿದ್ದು, ಸದ್ಯ ಅವರನ್ನು ಉರ್ವ ಪೊಲೀಸ್ ಠಾಣೆಯಲ್ಲಿರಿಸಲಾಗಿದೆ ಎಂದು ತಿಳಿದು ಬಂದಿದೆ. ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಸುನೀಲ್ ಬಜಿಲಕೇರಿ ಅವರ ಮನೆಗೆ ತೆರಳಿ ಪೊಲೀಸರು ವಶಕ್ಕೆ ಪಡೆದಿದ್ದು, ಈ ವೇಳೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಳಿಕ ಅವರನ್ನು ಊರ್ವ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಹೇಳಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಸ್ಥಳೀಯರು ಠಾಣೆ ಗೆ ತೆರಳಿದ್ದಾರೆ. ಸಂಘ ಪರಿವಾರದ ಮಾಜಿ ಕಾರ್ಯಕರ್ತ ಸುನೀಲ್ ಬಜೀಲಕೆರಿ ಅವರು ಸದ್ಯ ಬಿಜೆಪಿ ನಾಯಕರ ಕಾರ್ಯವೈಖರಿಯ ಕಟುಟೀಕಾಕಾರರಾಗಿದ್ದಾರೆ.
ಉಳ್ಳಾಲ: ಮನೆ ಮುಂದೆ ನಿಲ್ಲಿಸಲಾಗಿದ್ದ ಕಾರೊಂದರ ಕೆಳಗಡೆ ನವಜಾತ ಗಂಡು ಶಿಶುವೊಂದು ಪತ್ತೆಯಾಗಿದ್ದು ಅಸ್ವಸ್ಥಗೊಂಡಿರುವ ಮಗುವಿಗೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೊಕ್ಕೊಟ್ಟು ಕಾಪಿಕಾಡುವಿನ ಗೇರು ಕೃಷಿ ಸಂಶೋಧನಾ ಕೇಂದ್ರ ರಸ್ತೆಯ ಅಂಬಿಕಾರೋಡ್ ನಿವಾಸಿ ಅಮರ್ ಎಂಬವರ ಮನೆ ಮುಂದಿನ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಸಂಬಂಧಿಕರ ಕಾರಿನ ಕೆಳಗಡೆ ನವಜಾತ ಶಿಶು ಪತ್ತೆಯಾಗಿದೆ. ನಿನ್ನೆ ಬೆಳಿಗ್ಗೆ ಅಮರ್ ಅವರು ಉಳ್ಳಾಲ ಶಾರದಾ ವಿಸರ್ಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಅಮರ್ ಅವರು ತೀವ್ರ ಅಸ್ವಸ್ಥಗೊಂಡಿದ್ದ ಮಗುವನ್ನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಳ್ಳಾಲ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿದ್ದು ಮಗುವನ್ನ ಬಿಟ್ಟು ಹೋದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ಲಕ್ನೋ: ಅಯೋಧ್ಯೆರಾಮ ಮಂದಿರ ನಿರ್ಮಾಣ ಕಾಮಗಾರಿ ಶೇ. 50 ರಷ್ಟು ಪೂರ್ಣಗೊಂಡಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ದೇವಾಲಯದ ಟ್ರಸ್ಟ್ ಪ್ರಕಾರ, 2024 ರಲ್ಲಿ ಮಂಕರ ಸಂಕ್ರಾಂತಿ ದಿನದಂದು ದೇವಾಲಯದ ಗರ್ಭಗುಡಿಯಲ್ಲಿ ರಾಮನ ವಿಗ್ರಹವನ್ನು ಇರಿಸುವ ಸಾಧ್ಯತೆಯಿದೆ. 2020 ರಲ್ಲಿ ಪ್ರಾರಂಭವಾದ ದೇವಾಲಯದ ನಿರ್ಮಾಣವು 2024ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ. 1949ರಿಂದ ಆಂದೋಲನ ಆರಂಭವಾಗಿದ್ದು, ರಾಮಮಂದಿರದ ಕನಸನ್ನು ನನಸಾಗಿಸಲು ಸಮರ್ಪಣಾ ಪ್ರಯತ್ನಗಳು ನಡೆದಿವೆ. ಈಗ ಈ ಪ್ರಯತ್ನಗಳಿಂದಾಗಿ ದೇವಾಲಯದ ಶೇ.50ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ. ಶ್ರೀಕೃಷ್ಣ ದೇವರ ʻಕರ್ಮಣ್ಯೇ ವಾಧಿಕಾರಸ್ತೇ ಮಾಫಲೇಶು ಕದಾಚನʼ ಉಪದೇಶದಂತೆ ನಾವು ರಾಮ ಮಂದಿರ ನಿರ್ಮಾಣ ಕಾರ್ಯ ನಡೆಸುತ್ತಿದ್ದೇವೆ ಎಂದಿದ್ದಾರೆ.