ಕಾಸರಗೋಡು: ಅಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಉಂಟಾದ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕಾರಿನಲ್ಲಿದ್ದ ತೃಶ್ಯೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಅಂಬ್ಯುಲೆನ್ಸ್ ನಲ್ಲಿದ್ದ ರೋಗಿಯೂ ಗಾಯಗೊಂಡಿದ್ದಾರೆ. ಕಾಸರಗೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಅಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಅಪಘಾತ ನಡೆದಿದೆ. ಇಬ್ಬರು ಸ್ಥಳದಲ್ಲೇ, ಇನ್ನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
Author: main-admin
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಹಲವು ವಾಹನಗಳು ಜಖಂಗೊಂಡಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ನೇತ್ರಾವತಿಯಿಂದ ಧರ್ಮಸ್ಥಳಕ್ಕೆ ಬರುವ ರಸ್ತೆಯಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದಿತು. ಅದರ ಹಿಂದೆ ಇದ್ದ ರಿಕ್ಷಾವೊಂದು ಅಪಘಾತ ಸಂಭವಿಸಿದ ರಿಕ್ಷಾಕ್ಷೆ ತಾಗಿ ಜಖಂಗೊಂಡಿತು. ವೇಗವಾಗಿ ಬರುತ್ತಿದ್ದ ಕಾರು ಮಗುಚಿ ಬಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆಯಿತು. ಅದರ ಹಿಂದಿನಿಂದ ಬರುತ್ತಿದ್ದ ಎರಡು ಕಾರುಗಳು ಒಂದರ ಹಿಂದೆ ಒಂದರಂತೆ ಢಿಕ್ಕಿ ಹೊಡೆದಿವೆ. ಹೀಗೆ ಒಟ್ಟು 2 ರಿಕ್ಷಾಗಳು ಹಾಗೂ 3 ಕಾರುಗಳು ಜಖಂಗೊಂಡಿವೆ. ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಎಲ್ಲ ಕಾರುಗಳು ಜಖಂಗೊಂಡಿವೆ.
ಬೆಂಗಳೂರು : ಅಶ್ಲೀಲ ವಿಡಿಯೋ, ಫೋಟೊ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಳ್ಳುವುದು ಸಹ ಅಪರಾಧ. ಕಂಪ್ಯೂಟರ್, ಲ್ಯಾಪ್‍ಟಾಪ್, ಮೊಬೈಲ್ ಹಾಗೂ ಇತರೆ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದು ಪತ್ತೆಯಾದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್‍ಐಟಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಸೋಮವಾರ ಪತ್ರಿಕಾ ಪ್ರಕಟನೆ ನೀಡಿರುವ ಎಸ್‍ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್, ಅಶ್ಲೀಲ ವಿಡಿಯೋ, ಫೋಟೊ ಹಾಗೂ ಧ್ವನಿವರ್ಧಕ ಹಂಚಿಕೊಳ್ಳುವುದಷ್ಟೇ ಅಲ್ಲದೇ ಇಟ್ಟುಕೊಳ್ಳುವುದು ಸಹ ಅಪರಾಧ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಕ್ರಮ ಜರುಗಿಸಲು ಅವಕಾಶವಿದೆ ಎಂದಿದ್ದಾರೆ. ಅಶ್ಲೀಲ ವಿಡಿಯೋ ಹಾಗೂ ಫೋಟೊಗಳನ್ನು ಇಟ್ಟುಕೊಳ್ಳುವವರನ್ನು ಪತ್ತೆ ಮಾಡುವುದು ಸುಲಭ. ಯಾರಾದರೂ ಅಂತಹ ವಿಡಿಯೋ ಹಾಗೂ ಫೋಟೊಗಳನ್ನು ಇಟ್ಟುಕೊಂಡಿದ್ದರೆ ಅಳಿಸಿ(ಡಿಲೀಟ್) ಹಾಕುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದ್ದಾರೆ.
ಮಂಗಳೂರು : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿಚಾರಣಾಧೀನ ಕೈದಿ ವೆನ್ಲಾಕ್ ಆಸ್ಪತ್ರೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಕಾಸರಗೋಡಿನ ಮಂಜೇಶ್ವರ ಬಂದ್ಯೋಡು ನಿವಾಸಿ ಮಹಮ್ಮದ್ ನೌಫಾಲ್ (24) ಮೃತಪಟ್ಟ ಕೈದಿ. 2022ರ ಡಿಸೆಂಬರ್ ಸಂದರ್ಭ ನೌಫಾಲ್ ಎನ್ ಡಿಪಿಎಸ್ ಕಾಯ್ದೆಯಡಿ ಕೊಣಾಜೆ ಪೊಲೀಸರಿಂದ ಅರೆಸ್ಟ್ ಆಗಿದ್ದ. ಆ ಬಳಿಕದಿಂದ ಆತ ಮಂಗಳೂರು ಜೈಲಿನಲ್ಲೇ ಇದ್ದನು. ಆತನಿಗೆ ಜಾಮೀನು ಕೊಡಿಸುವುದಕ್ಕೂ ಯಾರೂ ಬಂದಿರಲಿಲ್ಲ. ಜೈಲಿನಲ್ಲಿ ಈತ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ಹಿನ್ನೆಲೆಯಲ್ಲಿ ನೌಫಾಲ್ ನನ್ನು ಚಿಕಿತ್ಸೆಗೆಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಎಪ್ರಿಲ್ 25ರಂದು ದಾಖಲಿಸಲಾಗಿತ್ತು. ಮೇ 6ರಂದು ನಸುಕಿನ ವೇಳೆ 4ಗಂಟೆಗೆ ಬೆಡ್ ಶೀಟನ್ನೇ ಕಿಟಕಿಗೆ ಕಟ್ಟಿ ಅದನ್ನು ಕುಣಿಕೆಯಾಗಿಸಿ ಕೊರಳೊಡ್ಡಿದ್ದಾನೆ. ಅದೇ ಕೊಠಡಿಯಲ್ಲಿ ಇತರ ನಾಲ್ವರು ಕೈದಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಹೊರಗಡೆ ಕಾವಲಿಗೆ ಪೊಲೀಸರಿದ್ದರು. ಅದರ ನಡುವೆಯೂ ಈತ ಸಾವಿಗೆ ಶರಣಾಗಿದ್ದಾನೆ.
ಬೆಂಗಳೂರು: ಮೂರು ತಿಂಗಳ ವೇತನ ಬಾಕಿ ಬಿಡುಗಡೆಗೆ ಆಗ್ರಹಿಸಿ ಆ್ಯಂಬುಲೆನ್ಸ್ ನೌಕರರು ಮೇ 6 ರ ರಾತ್ರಿ 8 ರಿಂದ ರಾಜ್ಯಾದ್ಯಂತ ಆ್ಯಂಬುಲೆನ್ಸ್ ಸೇವೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. 108 ಆ್ಯಂಬುಲೆನ್ಸ್ ಸೇವೆಯ ಉಸ್ತುವಾರಿ ವಹಿಸಿಕೊಂಡ ಜಿವಿಕೆ ಸಂಸ್ಥೆಯು 2023ರ ಡಿಸೆಂಬರ್‌ನಿಂದ ಎಪ್ರಿಲ್ ವರೆಗಿನ ವೇತನವನ್ನು ಬಾಕಿ ಇರಿಸಿಕೊಂಡಿದೆ. ಈ ನಡುವೆ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿದಾಗ ಡಿಸೆಂಬರ್ ಹಾಗೂ ಜನವರಿ ತಿಂಗಳಿನ ಒಟ್ಟು ಮೊತ್ತದ ಅರ್ಧದಷ್ಟು ವೇತನ ಪಾವತಿಸಿದೆ. ಇನ್ನೂ 3 ತಿಂಗಳ ಪೂರ್ಣ ವೇತನ ಬಾಕಿಯಿದೆ ಎಂದು 108 ಆ್ಯಂಬುಲೆನ್ಸ್ ನೌಕರ ಸಂಘದ ಉಪಾಧ್ಯಕ್ಷ ಪರಮಶಿವಯ್ಯ ತಿಳಿಸಿದರು. ವೇತನವನ್ನು ನಂಬಿರುವ ನೌಕರರು ಸಂಕಷ್ಟಕ್ಕೀಡಾಗಿದ್ದಾರೆ. ಸಾಕಷ್ಟು ಬಾರಿ ವೇತನ ಬಿಡುಗಡೆ ಮಾಡಲು ಸಂಸ್ಥೆಗೆ ಮನವಿ ಮಾಡಿದ್ದೇವೆ. ಆದರೂ ಮನವಿಗೆ ಸ್ಪಂದಿಸಿಲ್ಲ. ವೇತನ ಪಾವತಿಯಾಗದ ಹಿನ್ನಲೆಯಲ್ಲಿ ಎರಡು ದಿನಗಳ ಹಿಂದೆ ಆ್ಯಂಬುಲೆನ್ಸ್ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಪ್ರಯತ್ನಿಸಿದ್ದರು. ಇಂಥ ಘಟನೆ ರಾಜ್ಯಾದ್ಯಂತ ಸಂಭವಿಸುತ್ತಿದೆ ಎಂದು ಆಂತಕ ವ್ಯಕ್ತಪಡಿಸಿದರು. ಸೋಮವಾರ ರಾತ್ರಿ 8…
ಮಂಗಳೂರು: ಮೂಡುಬಿದಿರೆಯ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಮೃತರನ್ನು ಮೈಸೂರಿನ ಸಿಎಂ ದಿವ್ಯಾ (18) ಎಂದು ಗುರುತಿಸಲಾಗಿದೆ. ಬಾಲಕಿಯ ಪೋಷಕರು ಮೂಡುಬಿದಿರೆ ಪೊಲೀಸ್ ಠಾಣೆಗೆ ನೀಡಿರುವ ದೂರಿನ ಪ್ರಕಾರ, ದಿವ್ಯಾ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಮತ್ತು ನೀಟ್ ಪರೀಕ್ಷೆಯಲ್ಲಿ ಅಂಕ ಬರುವುದಿಲ್ಲ ಎಂಬ ಭಯದಲ್ಲಿದ್ದಳು ಎಂದಿದ್ದಾರೆ. ದಿವ್ಯಾ ಭಾನುವಾರ ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ, ಶನಿವಾರ ತಡರಾತ್ರಿಯೇ ಹಾಸ್ಟೆಲ್ ಕೋಣೆಯಲ್ಲಿ ವಿದ್ಯಾರ್ಥಿನಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ಠಾಣಾ ವ್ಯಾಪ್ತಿಯ ನಾವೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ(14 )ಮೃತ ದುರ್ದೈವಿ ಬಾಲಕಿಯರು.ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿದ್ದರು. ಇವತ್ತು ನಾವೂರ ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸಂಜೆ ವೇಳೆ ಮನೆಯವರ ಜೊತೆಗೆ ನಾವೂರದ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು. ಈ ವೇಳೆ ಮನೆಯವರ ಮುಂದೆ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದು, ಮನೆಯವರ ಮುಂದೆಯೇ ಈ ಎರಡು ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ. ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು ಬರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎಂಬ ಕೂಗು ಕೇಳಿ ಬಂದಿದೆ.ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ತಂದೆ ಎಚ್.ಡಿ.ರೇವಣ್ಣ ಮತ್ತು ಅವರ ವಕೀಲರು ಲೈಂಗಿಕ ದೌರ್ಜನ್ಯದ ವಿಡಿಯೋ ತುಣುಕುಗಳ ತನಿಖೆಗಾಗಿ ಕರ್ನಾಟಕ ಪೊಲೀಸರ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಶರಣಾಗುವಂತೆ ಪ್ರಜ್ವಲ್ ಗೆ ಸಲಹೆ ನೀಡಿದ್ದರು ಎಂದು ವರದಿಯಾಗಿದೆ.
ಉಡುಪಿ: ನಿವೃತ್ತ ಬ್ಯಾಂಕ್ ಅಧಿಕಾರಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ಹಣವನ್ನು ಆರೋಪಿಗಳು ಎಗರಿಸಿದ ಘಟನೆ ನಡೆದಿದೆ. ನಿವೃತ್ತ ಬ್ಯಾಂಕ್ ಅಧಿಕಾರಿ ಅಂಬಲಪಾಡಿಯ ರಾಮಚಂದ್ರ ಜೆ. ಅವರ ವಾಟ್ಸ್ ಆ್ಯಪ್‌ಗೆ ಅನಾಮಧೇಯ ನಂಬರ್‌ನಿಂದ ಲಿಂಕ್ ವೊಂದು ಬಂದಿತ್ತು. ಅದನ್ನು ಕ್ಲಿಕ್ ಮಾಡಿದಾಗ ಅವರ ಗಮನಕ್ಕೆ ಬಾರದೆ ಅವರ ಬ್ಯಾಂಕ್ ಖಾತೆಯಿಂದ ಹಂತಹಂತವಾಗಿ ಒಟ್ಟು 1,08,646 ರೂ.ಗಳನ್ನು ಆರೋಪಿಯು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾನೆ.ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾವು ಏನು ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ ಬಡ ಕುಟುಂಬದ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಕೊಡುತ್ತೇವೆ ಎಂ ಎಸ್ ಪಿ ಕಾನೂನು ಜಾರಿಗೊಳಿಸುವುದಾಗಿ ನಾವು ಭರವಸೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿಯನ್ನು ನಡೆಸುತ್ತಿದ್ದು, ಈ ವೇಳೆ ಸಿದ್ದರಾಮಯ್ಯ ಮಾತನಾಡಿ,ಮೋದಿ ಉದ್ಯಮಿಗಳ ಸಾಲ ಮನ್ನಾ ಮಾಡಿದ್ದಾರೆ.ಆದರೆ ರೈತರ ಸಾಲ ಮನ್ನಾ ಮಾಡಿಲ್ಲ ರೈತರ ಸಾಲ ಮನ್ನಾ ಮಾಡಿ ಅಂದರೆ ನೋಟ್ ಪ್ರಿಂಟ್ ಮಷೀನ್ ಇಲ್ಲ ಅಂದಿದ್ದರು. ವಿಧಾನಮಂಡಲದಲ್ಲಿ ಅಂದಿನ ಸಿಎಂ ಬಿಎಸ್ ಯಡಿಯೂರಪ್ಪ ಈ ರೀತಿ ಹೇಳಿಕೆ ನೀಡಿದ್ದರು. ಇದು ರೈತರ ಬಗ್ಗೆ ಬಿಜೆಪಿಗಿರುವ ಮನಸ್ಥಿತಿ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು. ದೇಶದ ಪ್ರಧಾನಿಯಾಗಿ ಮೋದಿ ಈ ರೀತಿ ಹೇಳಿಕೆ ನೀಡಬಾರದು. ಸೋಲಿನ ಹತಾಶೆಯಿಂದ ಪ್ರಧಾನಿ ನರೇಂದ್ರ ಮೋದಿ ಈ ರೀತಿ ಮಾತನಾಡುತ್ತಿದ್ದಾರೆ. ಬಿಜೆಪಿಯವರಿಗೆ ಸಂವಿಧಾನದ ಮೇಲೆ ಯಾವಾಗಲೂ…










